Tag: ತುಳುನಾಡು

  • ಮರುನಾಮಕರಣ ಮಾಡೋದಾದ್ರೆ ತುಳುನಾಡು ಎಂದು ಹೆಸರಿಡಲಿ: ಪುರುಷೋತ್ತಮ ಬಿಳಿಮಲೆ

    ಮರುನಾಮಕರಣ ಮಾಡೋದಾದ್ರೆ ತುಳುನಾಡು ಎಂದು ಹೆಸರಿಡಲಿ: ಪುರುಷೋತ್ತಮ ಬಿಳಿಮಲೆ

    – ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಹೆಸರು ಯಾಕೆ ಇಡಬೇಕು?

    ಕಾರವಾರ : ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯನ್ನು ಮಂಗಳೂರು (Mangaluru) ಎಂದು ಯಾಕೆ ಇಡಬೇಕು, ಬದಲಿಸುವುದಾದರೇ ತುಳುನಾಡು (Tulunadu) ಎಂದು ಬದಲಿಸಲಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ (Purushottama Bilimale) ಹೇಳಿದ್ದಾರೆ.

    ಕಾರವಾರದಲ್ಲಿ ಮಾತನಾಡಿದ ಅವರು, ಐತಿಹಾಸಿಕ ಸ್ಥಳದ ಹೆಸರನ್ನು ಯಾರು ಕೂಡ ಬದಲಿಸಬಾರದು. ಹೊಸ ಜಿಲ್ಲೆಯನ್ನು ಮಾಡುವುದಾದರೇ ಯಾವ ಹೆಸರನ್ನಾದರೂ ಇಡಲಿ. ಕನ್ನಡ ಎಂದಿದ್ದಕ್ಕೆ ಕರ್ನಾಟಕ ಏಕೀಕರಣದ (Unification of Karnataka) ಸಂದರ್ಭದಲ್ಲಿ ಕಾಸರಗೋಡು ಕರ್ನಾಟಕದಿಂದ ಬೇರೆ ಆಯಿತು. ತುಳುನಾಡು ಎಂದು ಇಟ್ಟಿದ್ದರೆ ಕಾಸರಗೋಡು (Kasaragod) ಬೇರೆಯಾಗಿರುತ್ತಿರಲಿಲ್ಲ ಎಂದರು.

    ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಗಡಿ ನಾಡು ಉತ್ಸವ ಮಾಡಲಾಗುವುದು. ಕನ್ನಡ ಹೊರತು ಪಡಿಸಿ ಅನ್ಯ ಭಾಷಿಕರ ಸಂಖ್ಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದೆ. ಬೇರೆ ರಾಜ್ಯಗಳಿಂದ ಉತ್ತರ ಕನ್ನಡ ಜಿಲ್ಲೆಗೆ ಬರುವವರ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದರು.  ಇದನ್ನೂ ಓದಿ: ದರ್ಶನ್ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ ಸುಪ್ರೀಂ

     

    36 ಗಂಟೆಯಲ್ಲಿ ಕನ್ನಡ ಕಲಿಯುವ ಯೋಜನೆ ರೂಪಿಸಿದ್ದೇವೆ. ಈಗಾಗಲೇ ಬೆಂಗಳೂರಿನಲ್ಲಿ 22 ಕಡೆ ಕನ್ನಡ ಕಲಿಕಾ ಕೇಂದ್ರ ಆರಂಭಿಸಿದ್ದೇವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಕನ್ನಡದ ಐತಿಹಾಸಿಕ ಕುರುಹು ಇವೆ. ಐತಿಹಾಸಿಕ ಸ್ಥಳಗಳ ಕುರಿತು ಸಾರ್ವಜನಿಕರಿಗೆ ತಿಳಿಯುವಂತೆ ಮಾಡುವ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.

    ಉತ್ತರ ಕನ್ನಡ ಜಿಲ್ಲೆಯಲ್ಲಿ ಅಖಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವಾಗಿ ಬಹಳ ವರ್ಷ ಕಳೆದಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜಿಲ್ಲೆಯಲ್ಲಿ ಮಾಡಲು ನಾವು ಆಗ್ರಹ ಮಾಡುತ್ತೇವೆ ಎಂದರು.

    10ನೇ ತರಗತಿಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ಫೇಲಾದವರು ಮಂಡ್ಯ, ಮೈಸೂರು ಭಾಗದವರೇ ಹೆಚ್ಚು. ಉತ್ತರ ಕನ್ನಡ ಜಿಲ್ಲೆಯಲ್ಲಿ ಮನೆ ಮಾತು ಕನ್ನಡ ಇರದೆ ಇದ್ದರೂ ಕನ್ನಡ ಭಾಷೆಯಲ್ಲಿ ಮಕ್ಕಳ ಪಾಸ್ ಆಗಿರುವ ಸಂಖ್ಯೆ ಹೆಚ್ಚಿದೆ ಎಂದು ಹೇಳಿದರು. ಇದನ್ನೂ ಓದಿ: ನಕಲಿ ಬಿಲ್ ಪಾವತಿಗಾಗಿ ಹಿರಿಯ ಅಧಿಕಾರಿಗಳ ಕಿರುಕುಳ ಮಹಿಳಾ ಎಂಜಿನಿಯರ್ ಸೂಸೈಡ್

    ರಾಜ್ಯದಲ್ಲಿ ಕನ್ನಡ ಲಿಪಿಯ ಫಾಂಟ್ ಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ‌ .ಎ.ಐ ತಂತ್ರಜ್ಞಾನದ ಅನ್ಯ ಭಾಷೆಯಿಂದ ಕನ್ನಡಕ್ಕೆ ಭಾಷಾಂತರದ ಆಪ್ ಸಹ ಅಭಿವೃದ್ಧಿ ಮಾಡಲಾಗುತಿದ್ದು ನವೆಂಬರ್‌ನಲ್ಲಿ ಬಿಡುಗಡೆ ಮಾಡುತ್ತೇವೆ. ಬ್ಯಾಂಕ್ ಸಿಬ್ಬಂದಿ ಕನ್ನಡ ಮಾತನಾಡದಿರುವುದರಿಂದ ರಾಜ್ಯದಲ್ಲಿ 6 ಎಫ್‌ಐಆರ್‌ ದಾಖಲುಮಾಡಲಾಗಿದೆ ಎಂದು ಅವರು ಹೇಳಿದರು.

  • ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತುಳು ನಾಡಿದ ದೈವ ನರ್ತನ – ಕಾನೂನು ಸಮರಕ್ಕೆ ಮುಂದಾಗಿರುವ ಕೊಡಗು ದೈವ ನರ್ತಕರ ಸಂಘ

    ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತುಳು ನಾಡಿದ ದೈವ ನರ್ತನ – ಕಾನೂನು ಸಮರಕ್ಕೆ ಮುಂದಾಗಿರುವ ಕೊಡಗು ದೈವ ನರ್ತಕರ ಸಂಘ

    ಮಡಿಕೇರಿ: ಇಡೀ ಭಾರತೀಯ ಚಿತ್ರರಂಗವೇ ಕನ್ನಡ ಚಿತ್ರರಂಗದತ್ತ ನೋಡುವಂತೆ ಮಾಡಿರುವ ಸಿನಿಮಾ ಅಂದರೆ ಅದು ಕಾಂತಾರ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ಕನ್ನಡ ಒಂದೇ ಅಲ್ಲದೇ ಬೇರೆ ಬೇರೆ ಭಾಷೆಗಳಲ್ಲೂ ಬಾಕ್ಸ್‌ ಆಫೀಸ್ ಕೊಳ್ಳೆ ಹೊಡಿದಿದೆ. ಈ ಸಿನಿಮಾ ಮೂಡಿಸಿದ ಜಾಗೃತೆಯಿಂದಾಗಿಯೇ ಕರಾವಳಿ ಭಾಗದ ದೈವ ನರ್ತಕರನ್ನು ಪೂಜ್ಯ ಭಾವನೆಯಿಂದ ಕಾಣುವಂತೆ ಅಗಿದೆ. ಅದ್ರೆ ಇತ್ತೀಚಿನ ದಿನಗಳಲ್ಲಿ ತುಳು ನಾಡಿದ ದೈವ ನರ್ತಕರ ಹಾಗೆ ಕೆಲವರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನರ್ತನ ಮಾಡುತ್ತಿರುವುದರಿಂದ ಇದೀಗ ತುಳು ನಾಡಿದ ದೈವ ನರ್ತಕರು ಅಂತವರ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

    ನೂರಾರು ವರ್ಷಗಳ ಸಂಸ್ಕೃತಿ ಪರಂಪರೆಯನ್ನು ಹೊಂದಿರುವ ತುಳು ನಾಡಿನ ದೈವಗಳನ್ನು ತುಳು ನಾಡಿನ‌ ಜನರು ಅತ್ಯಂತ ಭಕ್ತಿ ಭಾವದಿಂದ ಪೂಜೆ ಮಾಡುತ್ತಿದ್ರು. ಅಲ್ಲದೇ ಈ ದೈವಗಳದ ಬಗ್ಗೆ ನಟ-ನಿರ್ದೇಶಕ ರಿಷಬ್ ಶೆಟ್ಟಿ ಕಾಂತರ ಅನ್ನೋ ಸಿನಿಮಾ ಮಾಡಿ ಇಡೀ ಭಾರತೀಯ ಚಿತ್ರರಂಗವೇ ಕನ್ನಡ ಚಿತ್ರರಂಗದತ್ತ ನೋಡುವಂತೆ ಮಾಡಿದ್ರು.‌ ಅಷ್ಟೇ ಅಲ್ಲದೇ ರಾಜ್ಯ ಸರ್ಕಾರದಿಂದ ದೈವ ನರ್ತಕರಿಗೆ ಮಾಸಾಶನ ಕೋಡುವಂತೆ ನಿರ್ಧಾರವು ಮಾಡಿತ್ತು. ಹೀಗಾಗಿ ದೈವ ನರ್ತಕರು ಖುಷಿಯಿಂದಲ್ಲೇ ಇದ್ರು. ಅದ್ರೆ ಇತ್ತೀಚಿನ ದಿನಗಳಲ್ಲಿ ಕಾರಂತ ಸಿನಿಮಾದ ಹಾಡುಗಳನ್ನು ಬಳಸಿಕೊಂಡು ಮಕ್ಕಳು ಯುವಕ ಯುವತಿಯರು ಸಾಂಸ್ಕೃತಿಕ ವೇದಿಕೆಗಳಲ್ಲಿ ದೈವ ನರ್ತನೆ ಮಾಡುತ್ತಿರುವುದು ದೈವ ನರ್ತನ ಮಾಡುವು ಅರಾಧಾಕರಿಗೆ ಸಾಕಷ್ಟು ನೋವು ಉಂಟು ಮಾಡುತ್ತಿದೆ ಎನ್ನಲಾಗಿದೆ.

    ಅಷ್ಟೇ ಅಲ್ಲದೇ ಇದೀಗಾ ದಸರಾ ಹಬ್ಬದ ಸಂಭ್ರಮ ಹೀಗಾಗಿ ಮಂಜಿನ ನಗರಿ ಮಡಿಕೇರಿಯಲ್ಲಿ ದಸರಾ ವೇದಿಕೆಯಲ್ಲಿ ದೈವ ನರ್ತನೆಯನ್ನು ಮಹಿಳೆಯರು ಮಾಡಿದ್ದಾರೆ. ಹೀಗಾಗಿ ತಮ್ಮ ದೇವರಿಗೆ ನಮ್ಮ ನಂಬಿಕೆಗೆ ಅವಮಾನ ಮಾಡಲಾಗುತ್ತಿದೆ ಎಂದು ಕೊಡಗು ಜಿಲ್ಲೆಯ ದೈವ ನರ್ತಕರ ಸಂಘದಿಂದ ಕಾನೂನು ಸಮರಕ್ಕೆ ಮುಂದಾಗುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Punjab | ಕಾರು ಅಡ್ಡಗಟ್ಟಿ ಆಪ್‌ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

    ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಕಾರಂತರ ಸಿನಿಮಾ ಹಾಡು ಹಾಕಿಕೊಂಡು ದೈವ ನರ್ತನೆ ಮಾಡಬರದು ಎಂದು ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾಕಷ್ಟು ಶಾಲೆ ಕಾಲೇಜುಗಳಲ್ಲಿ ದೈವ ನರ್ತನೆ ಮಾಡುವುದು ನಿಲ್ಲಿಸಲಾಗಿತ್ತು. ಆದರೀಗ ಮಡಿಕೇರಿ ಹಾಗೂ ಗೋಣಿಕೋಪ್ಪದಲ್ಲಿ ದಸರಾ ಕಾರ್ಯಕ್ರಮ ಅಗುತ್ತಿದೆ. ಈ ಕಾರ್ಯಕ್ರಮಗಳಲ್ಲಿ ಮಹಿಳೆಯರೇ ದೈವ ವೇಷಗಳನ್ನು ಹಾಕಿಕೊಂಡು ದೈವ ನರ್ತನೆ ಮಾಡುತ್ತಿದ್ದಾರೆ. ದೈವ ನರ್ತನೆ ಮಾಡಬೇಕಾದರೆ ಗಂಡಸರು ಮಾಡಬೇಕು ಅದರದ್ದೇ ಆದ ರೀತಿ ನೀತಿಗಳ ನಿಯಮಗಳು ಇದೆ. ಆದ್ರೆ ಕೆಲವರು ಜನರಿಗೆ ಮನರಂಜನೆ ಕೋಡುವ ದೃಷ್ಟಿಯಿಂದ ಈ ರೀತಿಯಲ್ಲಿ ತುಳು ನಾಡಿನ ದೈವಗಳಿಗೆ ಅವಮಾನ ಮಾಡುತ್ತಿದ್ದಾರೆ. ಇದರ ಬಗ್ಗೆ ದೈವಗಳೇ ಅವರಿಗೆ ಶಿಕ್ಷೆ ನೀಡುತ್ತದೆ. ಹಾಗೂ ತುಳು ನಾಡಿದ ಎಲ್ಲಾ ದೈವ ಅರಾಧಾಕರನ್ನು ಕರೆದುಕೊಂಡು ಬೃಹತ್ ಹೋರಾಟ ನಡೆಸಲಾಗುತ್ತದೆ ಎಂದು ದೈವ ನರ್ತಕರು ಎಚ್ಚರಿಕೆ ನೀಡಿದ್ದಾರೆ.

    ಒಟ್ಟಿನಲ್ಲಿ ಇತ್ತೀಚಿನ ದಿನಗಳಲ್ಲಿ ಸಿನಿಮಾಗಳಲ್ಲಿ ನಾಟಕಗಳಲ್ಲಿ ವೇದಿಕೆಯ ವಿವಿಧ ಕಾರ್ಯಕ್ರಮಗಳಲ್ಲಿ ದೈವ ನರ್ತಕರನ್ನೂ ಅವಮಾನ ಮಾಡುವಂತಹ ಕೆಲಸ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಕಾನೂನು ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವ ಅನಿವಾರ್ಯತೆ ಇದೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ಕಾಲದಲ್ಲಿ ಪಿಪಿಇ ಕಿಟ್ ಖರೀದಿ ಅಕ್ರಮ – ಕಿದ್ವಾಯಿ ಆಸ್ಪತ್ರೆಯ ಆರ್ಥಿಕ ಸಲಹೆಗಾರ ಅಮಾನತು

  • ಭೂಮಿ ತಾಯಿಯ ಋತುಸ್ರಾವವನ್ನು ಸಂಭ್ರಮಿಸುವ ಹಬ್ಬ ಕೆಡ್ಡಸ- ತುಳುನಾಡಿನಲ್ಲಿ ಆಚರಣೆ ಹೇಗೆ?

    ಭೂಮಿ ತಾಯಿಯ ಋತುಸ್ರಾವವನ್ನು ಸಂಭ್ರಮಿಸುವ ಹಬ್ಬ ಕೆಡ್ಡಸ- ತುಳುನಾಡಿನಲ್ಲಿ ಆಚರಣೆ ಹೇಗೆ?

    ತುಳುನಾಡು ಅಂದ ಕೂಡಲೇ ಅಲ್ಲಿನ ಆಚರಣೆ, ಕ್ರಮಗಳು ವಿಭಿನ್ನವಾಗಿರುತ್ತವೆ. ತುಳುವರು ಪ್ರಕೃತಿಯನ್ನು ಹೆಚ್ಚಾಗಿ ಆರಾಧನೆ ಮಾಡುತ್ತಾರೆ. ಮರ, ಕಲ್ಲು, ಕುಡಿಯುವ ನೀರು , ಕಾಡಿನ ಮೃಗಗಳಲ್ಲೂ ದೇವರನ್ನು ಕಾಣುವವರಾಗಿದ್ದಾರೆ. ಇಲ್ಲಿ ಭೂಮಿಯನ್ನು ಹೆಣ್ಣು ಎಂದು ಪೂಜಿಸುತ್ತಾರೆ. ಭೂಮಿ ತಾಯಿಯ ಋತುಸ್ರಾವವನ್ನು ಸಂಭ್ರಮಿಸುವುದು ಇಲ್ಲಿನ ವಿಶೇಷ ಆಚರಣೆಗಳಲ್ಲಿ ಒಂದಾಗಿದೆ. ಹೀಗೆ ಭೂಮಿತಾಯಿಯನ್ನು ಆರಾಧನೆ ಮಾಡುವ ಹಬ್ಬವನ್ನು ಕೆಡ್ಡಸ ಎಂದು ಕರೆಯುತ್ತಾರೆ.

    ಆಚರಣೆ ಯಾವಾಗ..?: ಇದು ತುಳು ಮಾಸದ ಪೊನ್ನಿ ತಿಂಗಳು ಅಂದರೆ ಮಕರ ಮಾಸದ 27ನೇ ದಿನ ಸಂಜೆಯಿಂದ ಕುಂಭ ಸಂಕ್ರಮಣದವರೆಗೆ ಕೆಡ್ಡಸವನ್ನು ಆಚರಿಸಲಾಗುತ್ತದೆ. ಮೂರು ದಿನ ನಡೆಯುವ ಈ ಹಬ್ಬದ ಆಚರಣೆಯಲ್ಲಿ ಭೂಮಿ ತಾಯಿ ಮದುವೆ ಆಗಿ ಹೊರಹೋಗಿ ಪ್ರಕೃತಿಗೆ ಫಲ ಕೊಡುತ್ತಾಳೆ ಎಂಬುದು ನಂಬಿಕೆ. ಆ ನಂಬಿಕೆಯ ಪ್ರಕಾರ ಇಂದಿಗೂ ಆಚರಣೆ ನಡೆಯುತ್ತಿದೆ. ಈ ದಿನ ಭೂಮಿಗೆ ಗಾಯವಾಗುವಂತಹ ಹಾರೆ, ಪಿಕಾಸಿಯಂತಹ ವಸ್ತುಗಳಿಂದ ಕೆಲಸ ಮಾಡಬಾರದು. ಹಿಂದೊಮ್ಮೆ ಯಾರೋ ಈ ದಿನ ಭೂಮಿಯಲ್ಲಿ ರಕ್ತವನ್ನು ಕಂಡಿದ್ದರು ಎನ್ನುವ ಮಾತು ಇದೆ. ಆದ್ದರಿಂದ ಇಂದು ಕೂಡ ಯಾರೂ ಈ ದಿನ ಇಂತಹ ಕೆಲಸ ಮಾಡುವುದಿಲ್ಲ.

    ಆಚರಣೆ ಹೇಗೆ..?: ಕೆಡ್ಡಸದ (Tulunadu Festival Keddsa) ಮೂರನೇ ದಿವಸದಂದು ಮುಂಜಾನೆ ಅಂಗಳ ಗುಡಿಸಿ, ತುಳಸಿಕಟ್ಟೆಯ ಮುಂದೆ ಸೆಗಣಿ ಸಾರಿಸಿ, ಮಸಿ ತುಂಡು, ಸರೋಳಿ ಎಲೆ, ಮಾವಿನ ಎಲೆ, ತೆಂಗಿನಕಾಯಿ, ನನ್ನೆರಿ, ಬಾಳೆಹಣ್ಣು ಜೊತೆಗೆ ಕತ್ತಿ ಹಾಗೂ ಒಂದು ಚೊಂಬು  ಇಟ್ಟು, ನೊರೆಕಾಯಿ, ಸೀಗೆಕಾಯಿ ಹಾಗೂ 5 ವೀಳ್ಯದೆಲೆ ಒಂದು ಅಡಿಕೆ, ಪೊರಕೆ ಇಡುವ ಕ್ರಮವಿದೆ. ಇದಾದ ನಂತರ ಮನೆಯ ಯಜಮಾನಿ ಒಂದು ಬೌಲ್‌ನಲ್ಲಿ ಸ್ವಲ್ಪ ಎಣ್ಣೆ ತಂದು ಭೂಮಿಗೆ ಬಿಟ್ಟು ಸಂಜೆಯವರೆಗೆ ಅದನ್ನು ಅಲ್ಲೇ ಬಿಡುವ ಕ್ರಮ ಹಿಂದಿನಿಂದಲೂ ಬಂದಿದೆ.

    ಕೆಡ್ಡಸದ ವಿಶೇಷ ಏನು..?: ಕೆಡ್ಡಸದ ವಿಶೇಷ ಅಂದ್ರೆ ನನ್ನೆರಿ. ಕುಚ್ಚಲಕ್ಕಿಯನ್ನು ಹುರಿದು ಹುಡಿಮಾಡಿ, ತುರಿದ ತೆಂಗಿನಕಾಯಿ, ಬೆಲ್ಲ, ಮೆಂತೆ ಹಾಗೂ ತುಪ್ಪ ಮಿಶ್ರಣ ಮಾಡುವುದೇ ನನ್ನೆರಿ. ಇದನ್ನು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಎಲ್ಲರೂ ತುಂಬಾ ಇಷ್ಟಪಟ್ಟು ತಿನ್ನುತ್ತಾರೆ. ಕೆಡ್ಡಸದ ನನ್ನೆರಿಯನ್ನು ವಾರಗಟ್ಟಲೆ ಇಟ್ಟು ಕೂಡ ತಿನ್ನಬಹುದು. ಇನ್ನೊಂದು ವಿಷಯ ಮನೆಯಲ್ಲಿ ನುಗ್ಗೆ, ಬದನೆ ಸಾಂಬಾರು ಮಾಡುವ ಪದ್ಧತಿ ಇಂದಿಗೂ ರೂಢಿಯಲ್ಲಿದೆ. 

    ಬೇಟೆಯಾಡುವ ಸಂಪ್ರದಾಯ: ನಡು ಕೆಡ್ಡಸದ ದಿನ ಬೇಟೆಯಾಡುವ ಸಂಪ್ರದಾಯವಿದೆ. ಹಾಗಾಗಿ ಊರಿನವರೆಲ್ಲಾ ಸೇರಿ ಕಾಡಿಗೆ ತೆರಳಿ ಪ್ರಾಣಿಗಳನ್ನು ಬೇಟೆಯಾಡುತ್ತಾರೆ. ಬೇಟೆಯಾಡಿ ಸಿಕ್ಕ ಪ್ರಾಣಿಗಳನ್ನು ಎಲ್ಲರೂ ಹಂಚಿ ತಿನ್ನುವುದು ವಾಡಿಕೆ. ಒಟ್ಟಿನಲ್ಲಿ ʼಕೆಡ್ಡಸದ ಬೋಂಟೆʼ ಎಂಬುದು ತುಳುನಾಡಿನಲ್ಲಿ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತದೆ.

  • ತುಳು ಸಂಸ್ಕೃತಿ, ದೈವಗಳನ್ನು ಟೀಕಿಸಿಲ್ಲ: ಆರಗ ಜ್ಞಾನೇಂದ್ರ ಸ್ಪಷ್ಟನೆ

    ತುಳು ಸಂಸ್ಕೃತಿ, ದೈವಗಳನ್ನು ಟೀಕಿಸಿಲ್ಲ: ಆರಗ ಜ್ಞಾನೇಂದ್ರ ಸ್ಪಷ್ಟನೆ

    ಬೆಂಗಳೂರು: ತುಳು ಸಂಸ್ಕೃತಿ (Tulu Culture), ದೈವಗಳನ್ನು (Daiva) ಟೀಕಿಸಿಲ್ಲ. ಬದಲಾಗಿ ಜನರ ವಿಶ್ವಾಸ ಕಳೆದುಕೊಂಡಿರುವ ತೀರ್ಥಹಳ್ಳಿಯ (Thirthahalli) ಸ್ಥಳೀಯ ಕಾಂಗ್ರೆಸ್ (Congress) ನಾಯಕರು ರಾಜಕೀಯ ದುರುದ್ದೇಶದಿಂದ ಶಿವದೂತೆ ಗುಳಿಗೆ ನಾಟಕ ಪ್ರದರ್ಶನ ಮಾಡಿಸುತ್ತಿದ್ದಾರೆ ಎಂದು ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra))ಸ್ಪಷ್ಟಪಡಿಸಿದ್ದಾರೆ.

    ನನ್ನ ಹೇಳಿಕೆಯಲ್ಲಿ ಕಾಂಗ್ರೆಸ್ ನಾಯಕರು ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಹತಾಶ ಪ್ರಯತ್ನದ ಬಗ್ಗೆ ಪ್ರಸ್ತಾಪಿಸಿದ್ದೇನೆ. ನಾಟಕದ ವಿರುದ್ಧ ಅಥವಾ ದೈವದ ವಿರುದ್ಧ ಮಾತನಾಡಿಲ್ಲ. ತುಳುನಾಡಿನಲ್ಲಿ ಶ್ರದ್ಧಾ ಭಕ್ತಿಯಿಂದ ಆರಾಧಿಸುವ ಗುಳಿಗ ದೈವದ ಕುರಿತು ರಚಿಸಿರುವ ಪೌರಾಣಿಕ ನಾಟಕದ ಬಗ್ಗೆ ಮೆಚ್ಚುಗೆ ಇದೆ. ಹಾಗೂ ದೈವದ ಬಗ್ಗೆ ಅಪಾರ ಭಕ್ತಿ ಗೌರವವನ್ನು ಹೊಂದಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಸಚಿವ ಹಾಲಪ್ಪ ಆಚಾರ್ ಸೀರೆ ಹಂಚಿಕೆ – ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್

    ರಂಗಭೂಮಿಯ ಮೇಲೆ, ಆಧುನಿಕ ತಂತ್ರಜ್ಞಾನ ವನ್ನು ಬಳಸಿಕೊಂಡು, ಯಶಸ್ವಿ ಪ್ರದರ್ಶನವನ್ನು ಕಲಾ ರಸಿಕರಿಗೆ ಪರಿಚಯಿಸುತ್ತಿರುವ ಕಲಾವಿದರು ಹಾಗೂ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‍ಬೈಲ್ ಅವರ ಸೃಜನಶೀಲತೆ ಬಗ್ಗೆ ಅಭಿಮಾನ ಇದೆ ಎಂದು ತಿಳಿಸಿದ್ದಾರೆ.

    ನನ್ನ ಮಾತುಗಳನ್ನು ಅಪಾರ್ಥ ಬರುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುತ್ತಿದ್ದಾರೆ. ಅವರ ಉದ್ದೇಶ ಈಡೇರುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ನನ್ನನ್ನು ಕ್ಷಮಿಸಿ ಬಿಡಿ ಯೋಗಿಜಿ ಫಲಕದೊಂದಿಗೆ ಠಾಣೆಗೆ ಶರಣಾದ ಬೈಕ್ ಕಳ್ಳ

  • ರೂಪೇಶ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಎಂದು ಸಂಭ್ರಮಿಸಿದ ಫ್ಯಾನ್ಸ್

    ರೂಪೇಶ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಎಂದು ಸಂಭ್ರಮಿಸಿದ ಫ್ಯಾನ್ಸ್

    ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಬಿಗ್ ಬಾಸ್ ಸೀಸನ್ 9ರ (Bigg Boss Kannada 9) ಆಟಕ್ಕೆ ಬ್ರೇಕ್ ಬಿದ್ದಿದೆ. ತುಳುನಾಡಿನ ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ (Roopesh Shetty) ಬಿಗ್ ಬಾಸ್ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ ಎಂದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

    ತುಳು ಮತ್ತು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ್ದರು. `ಗಿರಿಗಿಟ್’ (Girgit Film) ಚಿತ್ರದ ಮೂಲಕ ಸೂಪರ್ ಸಕ್ಸಸ್ ಕಂಡಿದ್ದರು. ಈ ಚಿತ್ರದ ನಟನೆ ನೋಡಿಯೇ, ಬಿಗ್ ಬಾಸ್‌ಗೆ ಬರಲು ರೂಪೇಶ್ ಶೆಟ್ಟಿಗೆ ಅವಕಾಶ ಸಿಕ್ಕಿತ್ತು. ಒಟಿಟಿ ಮತ್ತು ಟಿವಿ ಬಿಗ್ ಬಾಸ್ ಎರಡರಲ್ಲೂ ಗಟ್ಟಿ ಸ್ಪರ್ಧಿಯಾಗಿ ರೂಪೇಶ್ ಶೆಟ್ಟಿ ಗುರುತಿಸಿಕೊಂಡಿದ್ದರು. ಈಗ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿದ್ದಾರೆ ಎನ್ನಲಾಗುತ್ತಿದೆ.

    ಟಾಪ್ 5 ಫೈನಲಿಸ್ಟ್‌ಗಳಲ್ಲಿ ರೂಪೇಶ್ ಶೆಟ್ಟಿ ಕೂಡ ಒಬ್ಬರಾಗಿದ್ದರು. ರಾಕೇಶ್ ಅಡಿಗ, ದೀಪಿಕಾ ದಾಸ್, ರಾಜಣ್ಣಗೆ ಭಾರೀ ಪೈಪೋಟಿ ಕೊಟ್ಟು ರೂಪೇಶ್ ಜಯಭೇರಿ ಬಾರಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಎಂಬ ಪೋಸ್ಟ್‌ಗಳು ಹರಿದಾಡುತ್ತಿದೆ. ಇದನ್ನೂ ಓದಿ: ಬಿಗ್ ಬಾಸ್‌ನಿಂದ ಹೊರ ಬಂದ್ಮೇಲೆ ಸಾನ್ಯನ ತಬ್ಬಿಕೊಳ್ತೀನಿ: ರೂಪೇಶ್‌ ಶೆಟ್ಟಿ

    ಬಿಗ್ ಬಾಸ್ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಎಂದು ಹೇಳಲಾಗುತ್ತಿದ್ದು, ಇನ್ನೂ ಸೋಷಿಯಲ್ ಮೀಡಿಯಾದಲ್ಲಿ ರೂಪೇಶ್ ಶೆಟ್ಟಿ ಅವರೇ ವಿನ್ನರ್ ಎಂದು ಟ್ರೆಂಡ್ ಆಗುತ್ತಿದೆ. ಅಷ್ಟಕ್ಕೂ ಈ ಸುದ್ದಿ ನಿಜಾನಾ ಎಂಬುದನ್ನ ವಾಹಿನಿ ಅಧಿಕೃತವಾಗಿ ಹೇಳುವವರೆಗೂ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ರೂಪೇಶ್ ಶೆಟ್ಟಿಗೆ ಬಿಗ್ ಸರ್ಪ್ರೈಸ್ ನೀಡಿದ ಬಿಗ್ ಬಾಸ್

    ರೂಪೇಶ್ ಶೆಟ್ಟಿಗೆ ಬಿಗ್ ಸರ್ಪ್ರೈಸ್ ನೀಡಿದ ಬಿಗ್ ಬಾಸ್

    ಬಿಗ್ ಬಾಸ್ (Bigg Boss) ಫಿನಾಲೆಗೆ ನಾಲ್ಕೇ ನಾಲ್ಕು ದಿನ ಬಾಕಿಯಿದೆ. ಅಂತಿಮ ಹಂತದಲ್ಲಿರುವ ಬಿಗ್ ಬಾಸ್ ಮನೆಯ ಆಟ (Bigg Boss House) ಸಾಕಷ್ಟು ತಿರುವುಗಳನ್ನು ಪಡೆದು ಮುನ್ನುಗ್ಗುತ್ತಿದೆ. ಈ ವೇಳೆ ರೂಪೇಶ್ ಶೆಟ್ಟಿಗೆ (Roopesh Shetty) ಬಿಗ್ ಬಾಸ್ ಸರ್ಪ್ರೈಸ್ ನೀಡಿದ್ದಾರೆ. ಈ ಗಿಫ್ಟ್ ನೋಡಿ ರೂಪೇಶ್ ಕುಣಿದು ಕುಪ್ಪಳಿಸಿದ್ದಾರೆ.

    ತುಳುನಾಡಿನಲ್ಲಿ ರಾಕ್ ಸ್ಟಾರ್ ಗುರುತಿಸಿಕೊಂಡಿರುವ ರೂಪೇಶ್ ಶೆಟ್ಟಿ, ಸಾಕಷ್ಟು ತುಳು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಮೂಲತಃ ಕರಾವಳಿಗನಾಗಿರುವುದರಿಂದ ತುಳುವಿನ ಹಲವು ಬಗೆಯ ಪಾತ್ರಗಳಿಗೆ ಜೀವತುಂಬಿದ್ದಾರೆ. ರೂಪೇಶ್ ನಟನೆಯ 2019ರ ‘ಗಿರಿಗಿಟ್’ (Girgit) ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಚಿತ್ರದಿಂದ ರೂಪೇಶ್ ಶೆಟ್ಟಿ ವೃತ್ತಿಜೀವನಕ್ಕೆ ಟರ್ನಿಂಗ್ ಪಾಯಿಂಟ್ ಸಿಕ್ಕಿತ್ತು. ಈ ಚಿತ್ರದ ಹಾಡುಗಳು ಕೂಡ ತುಳುನಾಡಲ್ಲಿ ಹಿಟ್ ಆಗಿದೆ. ಈ ಸಿನಿಮಾ ಹಾಡನ್ನು ಸೋಮವಾರದ (ಡಿ.26) ಎಪಿಸೋಡ್‌ನಲ್ಲಿ ವೇಕಪ್ ಸಾಂಗ್ ಆಗಿ ಪ್ಲೇ ಮಾಡಲಾಗಿದೆ.

    ಮುಂಜಾನೆ ಈ ಹಾಡು ಕೇಳಿ ರೂಪೇಶ್ ಶೆಟ್ಟಿ ಸಖತ್ ಖುಷಿ ಆಗಿದ್ದಾರೆ. ಅವರು ಎದ್ದು ಈ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ರೂಪೇಶ್ ಜೊತೆ ಮನೆ ಮಂದಿ ಕೂಡ ಹೆಜ್ಜೆ ಹಾಕಿದ್ದಾರೆ. ಥ್ಯಾಂಕ್ಸ್ ಬಿಗ್ ಬಾಸ್. ನನ್ನ ವೃತ್ತಿ ಜೀವನ ಬದಲಿಸಿದ ಸಿನಿಮಾ ‘ಗಿರಿಗಿಟ್’. ಈ ಚಿತ್ರದ ಹಾಡನ್ನು ಹಾಕಿದ್ದಕ್ಕೆ ಧನ್ಯವಾದ ಎಂದು ಹೇಳಿದ್ದಾರೆ. ರೂಪೇಶ್ ಶೆಟ್ಟಿ ಅವರಿಗೆ ತುಳು ಸಿನಿಮಾ ಸಾಂಗ್ ದೊಡ್ಮನೆಯಲ್ಲಿ ಪ್ಲೇ ಆಗಬೇಕು ಎಂಬ ಆಸೆಯಿತ್ತು. ಈ ಬಗ್ಗೆ ಈ ಹಿಂದೆಯೇ ಮನವಿ ಮಾಡಿದ್ದರು. ಬಿಗ್ ಬಾಸ್ ಇತಿಹಾಸದಲ್ಲೇ ಪ್ಲೇ ಆಗಿರುವ ಗಿರಿಗಿಟ್ ಚಿತ್ರದ ಮೊದಲ ತುಳು ಸಾಂಗ್ ಇದಾಗಿದೆ. ಇದನ್ನೂ ಓದಿ: ನಡುರಾತ್ರಿಯಲ್ಲಿ ಎಲಿಮಿನೇಷನ್: ಬಿಗ್ ಬಾಸ್ ಮನೆಯಿಂದ ಆರ್ಯವರ್ಧನ್ ಔಟ್

    ಇನ್ನೂ ಇದೀಗ ಆರು ಜನ ಸ್ಪರ್ಧಿಗಳಿದ್ದ ಮನೆಯಲ್ಲಿ ಮಿಡ್‌ನೈಟ್ ಎಲಿಮಿನೇಷನ್ (Elimination) ಆಗಿದೆ. ಆರ್ಯವರ್ಧನ್ ಗುರೂಜಿ (Aryavardhan Guruji) ಮನೆಯಿಂದ ಹೊರಬಂದಿದ್ದಾರೆ. ಮಿಡ್‌ನೈಟ್ ಎಲಿಮಿನೇಷನ್ ಮೂಲಕ ಗುರೂಜಿ ಆಟಕ್ಕೆ ಬಿಗ್ ಬಾಸ್ ಬ್ರೇಕ್ ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತುಳುನಾಡಿನ ಜನರನ್ನು ಬೆಸೆಯುವ ಸಾಧನವಾಗಿ ಟೋಲ್ ತೆರವು ಹೋರಾಟ ಪರಿವರ್ತನೆಗೊಂಡಿದೆ: ಶಕುಂತಲಾ ಶೆಟ್ಟಿ

    ತುಳುನಾಡಿನ ಜನರನ್ನು ಬೆಸೆಯುವ ಸಾಧನವಾಗಿ ಟೋಲ್ ತೆರವು ಹೋರಾಟ ಪರಿವರ್ತನೆಗೊಂಡಿದೆ: ಶಕುಂತಲಾ ಶೆಟ್ಟಿ

    ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ (Surathkal Toll Gate) ತೆರವಿನ ವಿಚಾರದಲ್ಲಿ ಬಿಜೆಪಿ (BJP) ಸರ್ಕಾರದ ಭಂಡತನ ಅಚ್ಚರಿ ಮೂಡಿಸುತ್ತಿದೆ. ತುಳುನಾಡಿನ ಘಟ್ಟದ ತಪ್ಪಲು ಹಾಗೂ ಸಮುದ್ರ ದಂಡೆಯ ಜನರನ್ನು ಬೆಸೆಯುವ ಸಾಧನವಾಗಿ ಟೋಲ್ ಗೇಟ್ ವಿರೋಧಿ ಹೋರಾಟ ಪರಿವರ್ತನೆಗೊಂಡಿದೆ. ಬಿಜೆಪಿ ಸಂಸದ, ಶಾಸಕರುಗಳು ಇದನ್ನು ಅರ್ಥಮಾಡಿಕೊಳ್ಳಬೇಕು ಎಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ (Shakunthala Shetty) ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಸುರತ್ಕಲ್ ಟೋಲ್ ಗೇಟ್ ಸಮೀಪ ನಡೆಯುತ್ತಿರುವ ಅನಿರ್ದಿಷ್ಟಾವಧಿ ಹಗಲು ರಾತ್ರಿ ಧರಣಿಯ ನಾಲ್ಕನೇ ದಿನದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರಾವಳಿಯ (Karavalli) ಜನ ಸರ್ಕಾರದ ಟೋಲ್ ಸುಲಿಗೆ ನೀತಿಯ ವಿರುದ್ಧ ಆಕ್ರೋಶ ಭರಿತರಾಗಿದ್ದು, ಘಟ್ಟದ ಬದಿಯ ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕಿನ ಜನರೂ ಸಮುದ್ರ ದಂಡೆಯ ಸುರತ್ಕಲ್‌ನಲ್ಲಿರುವ ಟೋಲ್ ಗೇಟ್ ವಿರುದ್ಧದ ಹೋರಾಟದಲ್ಲಿ ಭಾಗವಹಿಸತೊಡಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯದ 11 ಐಪಿಎಸ್ ಅಧಿಕಾರಿಗಳ ವರ್ಗಾವಣೆ

    ಪ್ರತಿಭಟನೆಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಮಾಜಿ ಶಾಸಕರುಗಳಾದ ಅಭಯಚಂದ್ರ ಜೈನ್, ಮೊಯ್ದಿನ್ ಬಾವಾ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ.ಎಸ್ ಮಹಮ್ಮದ್, ಶಾಲೆಟ್ ಪಿಂಟೊ, ಬಿ.ಕೆ ಇಮ್ತಿಯಾಜ್, ಪುರುಷೋತ್ತಮ ಚಿತ್ರಾಪುರ, ಪ್ರಮೀಳಾ ಶಕ್ತಿನಗರ, ಆಶಾ ಬೋಳೂರು, ಶ್ರೀನಾಥ್ ಕುಲಾಲ್, ರಮೇಶ್ ಟಿ ಎನ್, ರಾಜೇಶ್ ಪೂಜಾರಿ, ಡಾ ರಾಜಾರಾಮ್ ಉಪ್ಪಿನಂಗಡಿ, ಮುಹಮ್ಮದ್ ಕುಂಜತ್ತಬೈಲ್, ಆನಂದ ಅಮೀನ್, ಅಕ್ಬರ್ ಅಲಿ ಮುಕ್ಕ, ಹರೀಶ್ ಪೇಜಾವರ, ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಕೋಲ್ಕತ್ತಾ ಫ್ಲೈಓವರ್ ಕುಸಿದಾಗ ಬ್ಯಾನರ್ಜಿಯನ್ನು ನಿಂದಿಸಿದ್ದ ನೀವು ಇದಕ್ಕೆ ಏನ್ ಹೇಳ್ತೀರಿ: ಮೋದಿ ವಿರುದ್ಧ ವಿಪಕ್ಷಗಳು ಕಿಡಿ

    Live Tv
    [brid partner=56869869 player=32851 video=960834 autoplay=true]

  • ಪ್ರತ್ಯೇಕ ತುಳುನಾಡು ಬೇಡಿಕೆ ಕುಚೋದ್ಯ, ಸಾಂವಿಧಾನಿಕ ಮಾನ್ಯತೆಗೆ ನನ್ನ ಹೋರಾಟವಿದೆ: ಕರಂದ್ಲಾಜೆ

    ಪ್ರತ್ಯೇಕ ತುಳುನಾಡು ಬೇಡಿಕೆ ಕುಚೋದ್ಯ, ಸಾಂವಿಧಾನಿಕ ಮಾನ್ಯತೆಗೆ ನನ್ನ ಹೋರಾಟವಿದೆ: ಕರಂದ್ಲಾಜೆ

    ಉಡುಪಿ: ತುಳುವಿಗೆ ಸಂವಿಧಾನದ ಮಾನ್ಯತೆ ಸಿಗಬೇಕು. ಸಂಸತ್ತಿನಲ್ಲೂ ನಾನು ಈ ಬಗ್ಗೆ ಮಾತನಾಡಿದ್ದೇನೆ. ಆದರೆ ತುಳುರಾಜ್ಯ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

    ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ಮೋದಿಯನ್ನು ಭೇಟಿಯಾಗಿ ಮಾತನಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿ ನಾನು ಮನವಿ ಸಲ್ಲಿಸಿದ್ದೇನೆ. ಎರಡು ಬಾರಿ ಸಂಸತ್ ನಲ್ಲಿ ಪ್ರಸ್ತಾಪ ಮಾಡಿದ್ದೇನೆ. ತುಳುವನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಏನೆಲ್ಲ ಮಾಡಬೇಕು ಆ ಪ್ರಯತ್ನ ಮಾಡುತ್ತೇವೆ ಎಂದರು. ಇದನ್ನೂ ಓದಿ: 8ನೇ ಪರಿಚ್ಛೇದಕ್ಕೆ ತುಳು – ಸರ್ಕಾರದ ಜೊತೆ ಮಾತುಕತೆ ನಡೆಯುತ್ತಿದೆ ಎಂದ ಕಟೀಲ್

    ನಾವು ಕರ್ನಾಟಕದವರು. ತುಳುರಾಜ್ಯ ಎಂಬ ಕುಚೋದ್ಯದ ಬೇಡಿಕೆ ಮತ್ತು ಆಶಯಗಳಿಗೆ ನಮ್ಮ ಯಾವುದೇ ಬೆಂಬಲ ಇಲ್ಲ. ಕರ್ನಾಟಕ ಏಕೀಕರಣವಾದ ಮೇಲೆ ನಾವೆಲ್ಲ ಒಟ್ಟಾಗಿ ಇರಬೇಕಾದವರು. ಒಡಕಿನ ಮಾತುಗಳನ್ನು ಮಹಾರಾಷ್ಟ್ರ ದುರುಪಯೋಗ ಮಾಡುವ ಸಾಧ್ಯತೆಯಿದೆ. ತುಳುನಾಡು ಎಂಬ ಬೇಡಿಕೆ ಸರಿಯಲ್ಲ. ಯಾರೂ ಪ್ರತ್ಯೇಕತೆ ಬಗ್ಗೆ ಮಾತನಾಡಬಾರದು ಎಂದು ಹೇಳಿದರು.

    ಕರ್ನಾಟಕದಲ್ಲಿ ತುಳು ಭಾಷೆಗೆ ಗೌರವ ಸಿಗಬೇಕು. ತುಳು ಭಾಷೆಗಾಗಿ ನಮ್ಮ ಹೋರಾಟ ಇದೆ. ತುಳು ಭಾಷಾ ಅಭಿಮಾನಿಗಳು, ಹೋರಾಟಗಾರರು ಕವಿಗಳು ಕೃತಿಕಾರರ ಮನಸ್ಸಿನ ಭಾವನೆ ಏನೆಂದು ನನಗೆ ತಿಳಿದಿದೆ. ತುಳು ಭಾಷಿಗಳಾಗಿ ಏನೆಲ್ಲ ಮಾಡಬೇಕು ಖಂಡಿತಾ ಮಾಡುತ್ತೇನೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

  • ಕರಾವಳಿಯಲ್ಲಿ ಟ್ರೆಂಡ್ ಆಗ್ತಿದೆ #EducationInTulu ಅಭಿಯಾನ- ಏನಿದು ಕ್ಯಾಂಪೇನ್?

    ಕರಾವಳಿಯಲ್ಲಿ ಟ್ರೆಂಡ್ ಆಗ್ತಿದೆ #EducationInTulu ಅಭಿಯಾನ- ಏನಿದು ಕ್ಯಾಂಪೇನ್?

    ಮಂಗಳೂರು: ಲಕ್ಷಾಂತರ ಮಂದಿಯ ಮಾತೃಭಾಷೆಯಾಗಿಯಷ್ಟೇ ಉಳಿದಿರುವ ತುಳು ಭಾಷೆಗೆ ಇನ್ನೂ ಯಾವುದೇ ರೀತಿಯ ಸ್ಥಾನಮಾನ ದೊರೆತಿಲ್ಲ. ಇದೀಗ ತುಳುನಾಡಿನ ಮಕ್ಕಳಿಗೆ ತುಳುವಿನಲ್ಲಿಯೇ ಶಿಕ್ಷಣ ಸಿಗಬೇಕು ಎಂಬ ಅಭಿಯಾನವೊಂದನ್ನು ನಡೆಸಲು ತುಳುವರು ತೀರ್ಮಾನಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಈಗಾಗಲೇ ತುಳುಪರ ಕಾರ್ಯಕ್ರಮಗಳನ್ನು ಮಾಡಿ ಮೆಚ್ಚುಗೆ ಗಳಿಸಿರುವ ಜೈ ತುಳುನಾಡ್ ಸಂಘಟನೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಸುವ ಅಭಿಯಾನದ ನೇತೃತ್ವ ವಹಿಸಿಕೊಂಡಿದೆ. ಅಲ್ಲದೆ ಈಗಾಗಲೇ ಜನರಲ್ಲಿ ಈ ಬಗ್ಗೆ ಜಾಗೃತಿ ಕೂಡ ಮೂಡಿಸಲು ಆರಂಭಿಸಿದೆ.

    ಈ ಹಿಂದೆ ತುಳುಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು. ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಅಧಿಕೃತ ರಾಜ್ಯ ಭಾಷೆಯನ್ನಾಗಿ ಘೋಷಣೆ ಮಾಡಬೇಕು. ಹಾಗೂ ತುಳು ಲಿಪಿಯನ್ನು ಸಾರ್ವಜನಿಕರಿಗೆ ಕಲಿಸುವಂತಹ ದೊಡ್ಡ ಮಟ್ಟದ ಕಾರ್ಯಕ್ರಮಗಳನ್ನು ಇದೇ ಸಂಘಟನೆ ಹಮ್ಮಿಕೊಂಡಿತ್ತು. ಈ ಮೂಲಕ ತುಳುವರ ಪರ ಕಾರ್ಯಕ್ರಮಗಳನ್ನು ಮಾಡಿ ಜನಮನ್ನಣೆ ಗಳಿಸಿದೆ.

    ಏನಿದು ಕ್ಯಾಂಪೇನ್?:
    ಮಹಾಮಾರಿ ಕೊರೊನಾ ವೈರಸ್ ಎಂಬ ಸಾಂಕ್ರಾಮಿಕ ರೋಗದ ಬಳಿಕ ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ನಿರ್ಧರಿಸಿದೆ. ಈ ಹೊಸ ಶಿಕ್ಷಣ ನೀತಿಯಲ್ಲಿ 5ನೇ ತರಗತಿಯವರೆಗೆ ಆಯಾ ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ಕೊಡಬೇಕು ಎಂಬ ನಿಯಮವಿದೆ. ಇದರ ಅನ್ವಯ ತುಳುನಾಡಿನ ಮಕ್ಕಳಿಗೆ ತುಳು ಭಾಷೆಯಲ್ಲಿಯೇ ಶಿಕ್ಷಣ ನೀಡಬೇಕೆಂಬ ನಿಯಮ ಸೇರಿಸಬೇಕು ಎಂಬುದು ಕರಾವಳಿ ಜನರ ಮಹತ್ತರವಾದ ಆಶಯವಾಗಿದೆ.

    ತುಳುನಾಡಿನ ಮಕ್ಕಳಿಗೆ ಅವರದ್ದೇ ಭಾಷೆಯಲ್ಲಿ ಶಿಕ್ಷಣ ಸಿಗುವಂತಾದರೆ ತುಳು ಭಾಷೆ ಶೈಕ್ಷಣಿಕ ಭಾಷೆಯಾಗಿ ಹೊರಹೊಮ್ಮುವುದರಲ್ಲಿ ಎರಡು ಮಾತಿಲ್ಲ. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಬಳಿ ತುಳುವನ್ನು ಹೊಸ ಶಿಕ್ಷಣ ನೀತಿಯಲ್ಲಿ ಸೇರಿಸುವ ಬಗ್ಗೆ ಮನವಿ ಮಾಡಬೇಕಾಗಿದ್ದು, ಈ ಮೂಲಕ ಸರ್ಕಾರದ ಗಮನ ಸೆಳೆಯುವ ಅಗತ್ಯತೆ ಇದೆ. ಹೀಗಾಗಿ ತುಳು ಅಭಿಮಾನಿಗಳು ಪಾಲ್ಗೊಂಡು #EducationInTulu ಎಂಬ ಹ್ಯಾಶ್ ಟ್ಯಾಗ್ ನಲ್ಲಿ ಟ್ವೀಟ್ ಮಾಡಿ ಜನಪ್ರತಿನಿಧಿಗಳು ಹಾಗೂ ಸರ್ಕಾರವನ್ನು ಎಚ್ಚರಿಸಬೇಕಾಗಿದೆ ಎಂದು ಜೈ ತುಳುನಾಡ್ ಸಂಘಟನೆಯ ಅಧ್ಯಕ್ಷ ಸುದರ್ಶನ ಮೂಲ್ಯ ಹೇಳಿದ್ದಾರೆ.

  • ಬಿಜೆಪಿ ಹೆಸರಲ್ಲಿ ಕನ್ನಡ ವಿರೋಧಿ ಟ್ವೀಟ್!

    ಬಿಜೆಪಿ ಹೆಸರಲ್ಲಿ ಕನ್ನಡ ವಿರೋಧಿ ಟ್ವೀಟ್!

    ಬೆಂಗಳೂರು: ಬಿಜೆಪಿ ಹೆಸರಲ್ಲಿ ಕನ್ನಡ ವಿರೋಧಿ ಟ್ವೀಟ್ ಒಂದು ಸಾಮಾಜಿಕ ಜಾಲತಾಣದದಲ್ಲಿ ವೈರಲ್ ಆಗುತ್ತಿದೆ.

    ಕರ್ನಾಟಕ, ಕೇರಳ ನಡುವೆ ತುಳುನಾಡು ಹಂಚಿ ಹೋಗಿದ್ದು, ಕರ್ನಾಟಕ ರಾಜ್ಯೋತ್ಸವ ತುಳುನಾಡಿನ ಪಾಲಿಗೆ ಕರಾಳ ದಿನಾಚರಣೆ ಎಂದು `@Bjp4Tulunad ಹೆಸರಿನ ಟ್ವಿಟ್ಟರ್ ಖಾತೆಯೊಂದು ಟ್ವೀಟ್ ಮಾಡಿತ್ತು.

    ಆದರೆ ಈ ಖಾತೆ ಬಿಜೆಪಿಯ ದಕ್ಷಿಣ ಕನ್ನಡದ ಅಧಿಕೃತ ಟ್ವಿಟ್ಟರ್ ಖಾತೆ ಅಲ್ಲ. @BjpMangaluru ಹೆಸರಿನ ಖಾತೆ ದಕ್ಷಿಣ ಕನ್ನಡ ಬಿಜೆಪಿಯ ಅಧಿಕೃತ ಟ್ವಿಟ್ಟರ್ ಖಾತೆಯಾಗಿದೆ.

    ಈಗ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಟ್ವೀಟ್ ಟ್ರೋಲ್ ಆಗುತ್ತಿದ್ದು, ಬಿಜೆಪಿಯ ದಕ್ಷಿಣ ಕನ್ನಡ ಘಟಕವೇ ಈ ಟ್ವೀಟ್ ಮಾಡಿದೆ ಎಂದು ಭಾವಿಸಿ ಜನ ಬಿಜೆಪಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. @Bjp4Tulunad ಖಾತೆಯೇ ಇದು ಬಿಜೆಪಿಯ ಅನಧಿಕೃತ ಟ್ವಿಟ್ಟರ್ ಖಾತೆ ಎಂಬುದಾಗಿ ತನ್ನ ಪ್ರೊಪೈಲ್ ನಲ್ಲಿ ಬರದುಕೊಂಡಿದೆ.

    https://twitter.com/Bjp4Tulunad/status/925664954581106688