Tag: ತೆಂಕುತಿಟ್ಟು

  • ತೆಂಕುತಿಟ್ಟು ಯಕ್ಷಗಾನದ ಮೊದಲ ಮಹಿಳಾ ಭಾಗವತೆ ಲೀಲಾವತಿ ಬೈಪಾಡಿತ್ತಾಯ ನಿಧನ

    ತೆಂಕುತಿಟ್ಟು ಯಕ್ಷಗಾನದ ಮೊದಲ ಮಹಿಳಾ ಭಾಗವತೆ ಲೀಲಾವತಿ ಬೈಪಾಡಿತ್ತಾಯ ನಿಧನ

    ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ತೆಂಕುತಿಟ್ಟು ಯಕ್ಷಗಾನದ (Yakashanga) ಮೊದಲ ವೃತ್ತಿಪರ ಮಹಿಳಾ ಭಾಗವತರಾಗಿದ್ದ ಲೀಲಾವತಿ ಬೈಪಾಡಿತ್ತಾಯ(77) ಶನಿವಾರ ವಿಧಿವಶರಾಗಿದ್ದಾರೆ.

    ಅವರು ಪತಿ, ಖ್ಯಾತ ಹಿಮ್ಮೇಳವಾದಕ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಪುತ್ರ ಪತ್ರಕರ್ತ, ಹವ್ಯಾಸಿ ಕಲಾವಿದ ಅವಿನಾಶ್‌ ಬೈಪಾಡಿತ್ತಾಯ ಸೇರಿದಂತೆ ಇಬ್ಬರು ಪುತ್ರರನ್ನು ಅಗಲಿದ್ದಾರೆ.

    ಕೇರಳದ ಕಾಸರಗೋಡಿನ ಮಧೂರಿನಲ್ಲಿ 1947 ನೇ ಮೇ 23 ರಂದು ಜನಿಸಿದ ಲೀಲಾವತಿ ಬೈಪಾಡಿತ್ತಾಯರು (Leelavathi Baipadithaya) ಸುಮಾರು ನಾಲ್ಕು ದಶಕಗಳ ಕಾಲ ತಮ್ಮ ಕಂಠಸಿರಿಯಿಂದ ಮನೆಮಾತಾಗಿದ್ದರು. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಸಂವಿಧಾನ ಶಿಕಾರಿ..75 ಬಾರಿ ಬದಲಾವಣೆ| ನೆಹರು ಟು ರಾಹುಲ್‌ – ಉದಾಹರಣೆಯೊಂದಿಗೆ ತಿವಿದ ಮೋದಿ

    ಬಡತನದಿಂದಾಗಿ ಶಾಲೆಗೆ ಹೋಗದ ಇವರು ಅಣ್ಣನಿಂದ, ಅಕ್ಕ ಪಕ್ಕದವರಿಂದಲೋ ಅಕ್ಷರಾಭ್ಯಾಸ ಮಾಡಿಸಿಕೊಂಡಿದ್ದರು. ಹಿಂದಿ ವಿಶಾರದ ಕೂಡ ಆಗಿದ್ದರು. ಸಂಗೀತ ಕಲಿತಿದ್ದ ಅವರನ್ನು ತೆಂಕುತಿಟ್ಟಿನ ಅಗ್ರಮಾನ್ಯ ಹಿಮ್ಮೇಳ ಗುರುಗಳಾದ ಹರಿನಾರಾಯಣ ಬೈಪಾಡಿತ್ತಾಯರು ಕೈಹಿಡಿದ ಬಳಿಕ ಯಕ್ಷಗಾನದ ಪಾಠ ಆರಂಭವಾಗಿತ್ತು.

    ಪತಿಯೊಂದಿಗೆ ಸುಬ್ರಹ್ಮಣ್ಯ, ಪುತ್ತೂರು, ಕದ್ರಿ, ಕರ್ನಾಟಕ, ಅರುವ (ಅಳದಂಗಡಿ), ಕುಂಬಳೆ ಬಪ್ಪನಾಡು ಮೇಳ, ಕುಂಬಳೆ, ತಲಕಳ ಮುಂತಾದ ಡೇರೆ-ಬಯಲಾಟ ಮೇಳಗಳಲ್ಲಿ ನಿರಂತರ ಇಪ್ಪತ್ತು ವರ್ಷಗಳ ಕಾಲ ವೃತ್ತಿ ಕಲಾವಿದರಾಗಿಯೂ 17ಕ್ಕೂ ಹೆಚ್ಚು ವರ್ಷಗಳಿಂದ ಅತಿಥಿ ಕಲಾವಿದರಾಗಿಯೂ ಯಕ್ಷಗಾನಕ್ಕೆ ಸೇವೆ ಸಲ್ಲಿಸಿದ್ದಾರೆ.

     

    ಲೀಲಾವತಿಯವರ ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ 2010 ರಲ್ಲಿ ಕರ್ನಾಟಕದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು. 2012ರಲ್ಲಿ ಕರ್ನಾಟಕ ಸರ್ಕಾರ ನೀಡುವ ಹಿರಿಯ ನಾಗರಿಕರು ಪ್ರಶಸ್ತಿ, 2023ರಲ್ಲಿ ರಾಜ್ಯ ಸರಕಾರ ರಾಜ್ಯೋತ್ಸವ ಪ್ರಶಸ್ತಿ. ಆಳ್ವಾಸ್ ನುಡಿಸಿರಿ, ಉಳ್ಳಾಲ ಅಬ್ಬಕ್ಕ ಪ್ರಶಸ್ತಿ ಸೇರಿದಂತೆ ನೂರಾರು ಸನ್ಮಾನವನ್ನು ಪಡೆದಿದ್ದಾರೆ.

    ಕೊಳಂಬೆಯ ತಲಕಳದ ನಿವಾಸಿಯಾಗಿದ್ದ ಲೀಲಾವತಿ ಅವರು ಮನೆಯಲ್ಲೇ ಅನೇಕ ಶಿಷ್ಯರಿಗೆ ಯಕ್ಷಗಾನದ ಜ್ಞಾನ, ಭಾಗವತಿಕೆಯ ಪಾಠ ಮಾಡುತ್ತಿದ್ದರು.

     

  • ತೆಂಕುತಿಟ್ಟಿನ ಖ್ಯಾತ ಯಕ್ಷಗಾನ ಭಾಗವತ ಬಲಿಪ ನಾರಾಯಣ ಇನ್ನಿಲ್ಲ

    ತೆಂಕುತಿಟ್ಟಿನ ಖ್ಯಾತ ಯಕ್ಷಗಾನ ಭಾಗವತ ಬಲಿಪ ನಾರಾಯಣ ಇನ್ನಿಲ್ಲ

    ಮಂಗಳೂರು: ತೆಂಕುತಿಟ್ಟಿನ ಖ್ಯಾತ ಯಕ್ಷಗಾನ ಭಾಗವತ (Yakshagana Bhagavata) ಬಲಿಪ ನಾರಾಯಣ (Balipa Narayana) (86) ಗುರುವಾರ ವಿಧಿವಶರಾಗಿದ್ದಾರೆ.

    ವಯೋಸಹಜ ಅನಾರೋಗ್ಯದಿಂದ ಮೇರು ಭಾಗವತ ಬಳಲುತ್ತಿದ್ದರು. ಅವರು ಗುರುವಾರ ಮೂಡಬಿದಿರೆಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    ಯಕ್ಷಗಾನದಲ್ಲಿ ವಿಶೇಷ ಶೈಲಿಯ ಭಾಗವತಿಕೆಯಲ್ಲಿ ಬಲಿಪ ನಾರಾಯಣ ಹೆಸರುವಾಸಿಯಾಗಿದ್ದರು. ಅವರು ಬಲಿಪಜ್ಜ ಎಂದೇ ಖ್ಯಾತರಾಗಿದ್ದು, 1956ರಿಂದ 2003ರ ವರೆಗೆ ಯಕ್ಷಗಾನ ರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸಿನಿಮಾ ಪತ್ರಕರ್ತರಿಗೆ ಫಿಲ್ಮ್‌ ಚೇಂಬರ್ ಅಭಿನಂದನೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗಾನಗಂಧರ್ವ ಭಾಗವತ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ

    ಗಾನಗಂಧರ್ವ ಭಾಗವತ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ

    ಮಂಗಳೂರು: ತೆಂಕುತಿಟ್ಟು ಯಕ್ಷಗಾನ ರಂಗದ ಅಗ್ರಮಾನ್ಯ ಭಾಗವತರಾದ ಪದ್ಯಾಣ ಗಣಪತಿ ಭಟ್ ಅವರು ಇಂದು ಬೆಳಿಗ್ಗೆ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ಗಣಪತಿ ಭಟ್ ಅವರಿಗೆ 66 ವರ್ಷ ವಯಸ್ಸಾಗಿತ್ತು. ಇಂದು ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿರುವ ಸ್ವಗೃಹದಲ್ಲಿ ಬೆಳಗ್ಗೆ 7:45ಕ್ಕೆ ಹೃದಯಾಘಾತದಿಂದ ಸಾವನ್ನಪಿದ್ದಾರೆ. ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ತಮ್ಮದೇ ಶೈಲಿಯ ಮೂಲಕ ರಂಗದಲ್ಲಿ  ಹಾಡಿ ಕಲಾವಿದರನ್ನು ಹುರಿದುಂಬಿಸುತ್ತಿದ್ದ ಪದ್ಯಾಣರನ್ನು ಕಳೆದುಕೊಂಡ ಯಕ್ಷಗಾನ ರಂಗವು ಬಡವಾಗಿದೆ.

    ಹಿನ್ನೆಲೆ:
    ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಗೋಳ್ತಾಜೆಯಲ್ಲಿ ಜನಿಸಿದ ಗಣಪತಿ ಭಟ್ ಮೂಲತಃ ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಪದ್ಯಾಣ ಕುಟಂಬದವರಾಗಿದ್ದಾರೆ. ಯಕ್ಷಗಾನ ರಂಗಕ್ಕೆ ಪದ್ಯಾಣ ಮನೆತನದ ಕೊಡುಗೆ ಅಪಾರ. ಈ ಮನೆತನದ ಪದ್ಯಾಣ ತಿರುಮಲೇಶ್ವರ ಭಟ್ಟ ಮತ್ತು ಸಾವಿತ್ರಿ ದಂಪತಿಯ ಮೂರನೇ ಮಗನಾಗಿ 1955ರಲ್ಲಿ ಗಣಪತಿ ಭಟ್ ಜನಿಸಿದ್ದರು. ಆ ಕಾಲದಲ್ಲಿ ಭಾಗವತಿಕೆಗೆ ಹೆಸರಾಗಿದ್ದ ಅಜ್ಜ ಪುಟ್ಟು ನಾರಾಯಣ ಭಟ್ಟರಿಂದಲೇ ಭಾಗವತಿಕೆಯ ಪ್ರಾಥಮಿಕ ಪಾಠ ಪಡೆದಿದ್ದರು. ಇದನ್ನೂ ಓದಿ: ನವರಾತ್ರಿ ಸ್ಪೆಷಲ್ ತುಪ್ಪದ ಜಿಲೇಬಿ ಮಾಡೋದು ಹೇಗೆ?

    ಬಾಲ್ಯದಲ್ಲೇ ಯಕ್ಷಗಾನದತ್ತ ಆಸಕ್ತರಾಗಿದ್ದ ಇವರು ಧರ್ಮಸ್ಥಳದಲ್ಲಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಗುರು ಮಾಂಬಾಡಿ ನಾರಾಯಣ ಭಾಗವತರ ಬಳಿ ಭಾಗವತಿಕೆ ಅಭ್ಯಾಸ ಮಾಡಿದರು. ಬಳಿಕ ಸುಮಾರು 35 ವರ್ಷಕ್ಕೂ ಅಧಿಕ ಕಾಲ ವಿವಿಧ ಯಕ್ಷಗಾನ ಮೇಳಗಳಲ್ಲಿ ವ್ಯವಸಾಯ ಮಾಡಿದರು.

    ಪ್ರಶಸ್ತಿ, ಪ್ರಸಂಗಗಳ ಜನಪ್ರಿಯತೆ:
    ಸುರತ್ಕಲ್ ಮೇಳದಲ್ಲಿದ್ದಾಗ ನಾಟ್ಯರಾಣಿ ಶಾಂತಲೆ, ಪಾಪಣ್ಣ ವಿಜಯ, ಕಡುಗಲಿ ಕುಮಾರರಾಮ, ರಾಜಾ ಯಯಾತಿ ಮೊದಲಾದ ಪ್ರಸಂಗಗಳು ಜನಪ್ರಿಯವಾಗಿದ್ದವು. ಮಂಗಳಾದೇವಿ, ಕರ್ನಾಟಕ, ಹೊಸನಗರ, ಹನುಮಗಿರಿ ಮೇಳಗಳಲ್ಲಿ ಪ್ರಧಾನ ಭಾಗವತರಾಗಿ ಬಹುಬೇಡಿಕೆಯ ಕಲಾವಿದರಾಗಿದ್ದರು. ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಸನ್ಮಾನಗಳು ಇವರಿಗೆ ಬಂದಿವೆ.

     ಕಲಾ ಸೇವೆ:
    ಯಕ್ಷರಂಗದ ಭೀಷ್ಮ ಎಂದು ಕರೆಸಿಕೊಂಡಿರುವ ಡಾ| ಶೇಣಿ ಗೋಪಾಲಕೃಷ್ಣ ಭಟ್ಟ, ಯಕ್ಷರಂಗದ ಮತ್ತೊಬ್ಬ ವಿದ್ವಾಂಸ ಶಂಕರನಾರಾಯಣ ಸಾಮಗ, ತೆಕ್ಕಟ್ಟೆ ಆನಂದ ಮಾಸ್ತರ್, ಕುಂಬ್ಳೆ ಸುಂದರ ರಾವ್ ಮೊದಲಾದ ಕಲಾವಿದರೊಂದಿಗೆ ಸುರತ್ಕಲ್ ಮೇಳದಲ್ಲಿ ಪದ್ಯಾಣರು ತಮ್ಮ ಇಂಪಾದ ಕಂಠ, ಏರು ಶ್ರುತಿ, ಭಾವನಾತ್ಮಕ ಗಾಯನದಿಂದ ಯಕ್ಷರಂಗಕ್ಕೆ ತಮ್ಮದೇ ಆದ ಶೈಲಿಯ ಕೊಡುಗೆ ನೀಡಿದರು. ನಾಲ್ಕು ದಶಕಗಳಿಂದ ಅವರ ಯಕ್ಷಗಾನ ಕಲಾಯಾನ ಮುಂದುವರಿದಿತ್ತು. ಸರ್ವಜನಮಾನ್ಯರಾದ, ಸಜ್ಜನ ಪದ್ಯಾಣರು ಗಾನಗಂಧರ್ವರೆಂದೇ ಖ್ಯಾತರಾದವರು. ಇಂದು ಇವರ ನಿಧನದಿಂದ ಯಕ್ಷಗಾನದ ಅಮೂಲ್ಯ ಕೊಂಡಿಯೊಂದು ಕಳಚಿಬಿದ್ದಂತಾಗಿದೆ.