Tag: ತೆರಿಗೆ ವಿನಾಯಿತಿ

  • ಡೇರ್ ಡೆವಿಲ್ ಮುಸ್ತಾಫಾಗೆ ತೆರಿಗೆ ವಿನಾಯಿತಿ ನೀಡಿದ ಸಿಎಂ ಸಿದ್ದರಾಮಯ್ಯ

    ಡೇರ್ ಡೆವಿಲ್ ಮುಸ್ತಾಫಾಗೆ ತೆರಿಗೆ ವಿನಾಯಿತಿ ನೀಡಿದ ಸಿಎಂ ಸಿದ್ದರಾಮಯ್ಯ

    ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ‘ಡೇರ್ ಡೆವಿಲ್ ಮುಸ್ತಾಫಾ’ ಕೃತಿ ಆಧರಿಸಿದ ಶಶಾಂಕ್ ನಿರ್ದೇಶನದ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಚಿತ್ರತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಈ ಹಿಂದೆ ಮನವಿ ಸಲ್ಲಿಸಿತ್ತು. ಚಿತ್ರತಂಡದ ಮನವಿಯನ್ನು ಪುರಸ್ಕರಿಸಿರುವ ಸರಕಾರ, ಚಿತ್ರಕ್ಕೆ ರಿಯಾಯಿತಿ ನೀಡಿದೆ.

    ತೆರಿಗೆ ವಿನಾಯಿತಿ (Tax Exemption) ನೀಡಿದರೆ, ಸಿನಿಮಾ ಮತ್ತಷ್ಟು ಜನರಿಗೆ ತಲುಪಲು ಸಾಧ್ಯವಾಗಬಹುದು ಹಾಗೂ ಕಡಿಮೆ ದರದಲ್ಲಿ ಚಿತ್ರ ತೋರಿಸಲು ಉತ್ಸಾಹ ಬರಬಹುದು ಎಂದು ಈ ಸಂದರ್ಭದಲ್ಲಿ ಚಿತ್ರತಂಡ ಹೇಳಿಕೊಂಡಿತ್ತು.  ಚಿತ್ರಕಥಾ ಲೇಖಕ ಅನಂತ್, ನಿರ್ದೇಶಕ ಶಶಾಂಕ್ ಹಾಗೂ ಚಿಂತಕ ಪ್ರೊ.ನಟರಾಜ್ ಹುಳಿಯಾರ್ ಸೇರಿದಂತೆ ಹಲವರು ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಈ ಎಲ್ಲರ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ಇದನ್ನೂ ಓದಿ:ಮಾಡ್ರನ್ ಅವತಾರ ಬದಿಗಿಟ್ಟು ಲೆಹೆಂಗಾದಲ್ಲಿ ಮಿಂಚಿದ ‘ಪುಟ್ಟಗೌರಿ’- ಸೊಂಟ ಸೂಪರ್ ಎಂದ ನೆಟ್ಟಿಗರು

    ಚಿತ್ರದ ಗೆಲುವಿಗೆ ಚಿತ್ರತಂಡ ಹೇಳಿದ್ದೇನು?

    ಕಂಟೆಂಟ್ ಆಧಾರಿತ ಒಳ್ಳೆಯ ಸಿನಿಮಾಗಳನ್ನು ಕನ್ನಡ ಪ್ರೇಕ್ಷಕಪ್ರಭು ಯಾವತ್ತೂ ಕೈ ಬಿಡೋದಿಲ್ಲ ಎಂಬ ನಂಬಿಕೆ ಗಾಂಧಿನಗರದಲ್ಲಿದೆ. ಇದು ಡೇರ್ ಡೆವಿಲ್ ಮುಸ್ತಾಫಾ (Dare devil Mustafa) ಸಿನಿಮಾ ವಿಚಾರದಲ್ಲಿ ಪ್ರೂವ್ ಆಗಿದೆ. ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ (Poorchandra Tejaswi) ಕಥೆಯಾಧಾರಿತ ಸಿನಿಮಾವಾಗಿರುವ ಡೇರ್ ಡೆವಿಲ್ ಮುಸ್ತಾಫಾ ಭರಪೂರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಸಿನಿಮಾ ಪ್ರೇಮಿಗಳಿಂದ ಹಾಗೂ ವಿಮರ್ಶಕರಿಂದಲೂ ಅಪ್ಪುಗೆ ಪಡೆದಿರುವ ಹೃದಯ ಬೆಸೆಯುವ ಕಥೆ ಯಶಸ್ವಿಯಾಗಿ ಹಲವು  ವಾರಗಳ ಪ್ರದರ್ಶನ ಕಂಡಿದೆ. ಇದೇ ಖುಷಿಯಲ್ಲಿ ಚಿತ್ರತಂಡ ಯಶಸ್ವಿ ಕಾರ್ಯಕ್ರಮ ಆಯೋಜಿಸಿತ್ತು. ಕೇಕ್ ಕಟ್ ಮಾಡಿ ಸಕ್ಸಸ್ ಖುಷಿಯನ್ನು ಮಾಧ್ಯಮದವರ ಜೊತೆ ಹಂಚಿಕೊಂಡರು.

    ಡಾಲಿ ಧನಂಜಯ್ (Dolly Dhananjay) ಮಾತನಾಡಿ, ನಾನು ಇಲ್ಲಿ ಕುಳಿತು ಈ ಗೆಲುವನ್ನು ಸಂಭ್ರಮವನ್ನು ನೋಡಲು ಬಂದೆ. ನಾನು ಮಾತನಾಡುವುದು ಏನು ಇಲ್ಲ. ಎಲ್ಲಾ ಸಿನಿಮಾಗಳಲ್ಲಿಯೂ ದುಡ್ಡು ಇರುವುದಿಲ್ಲ. ಕಷ್ಟಪಟ್ಟು ಸಿನಿಮಾ ಮಾಡಿರುತ್ತಾರೆ. ರಿಲೀಸ್ ಗೆ ಮಾತ್ರ ಸಿನಿಮಾಗಳು ಖರ್ಚು ಮಾಡಲು ಆಗುವುದಿಲ್ಲ. ಮಾಧ್ಯಮದವರು ಸಿನಿಮಾ ಜೊತೆಗೆ ನಿಂತಿದ್ದೀರಾ. contribution is the greatest philosophy ಎಂಬುದನ್ನು ನಾನು ನಂಬಿದ್ದೇನೆ. ಒಳ್ಳೆದು ಏನೂ ಆಗುತ್ತಿದೆ ಎಂದಾಗ ನಾವು ಅದರ ಭಾಗವಾಗುವುದು ತುಂಬಾ ಮುಖ್ಯ. ಪೂರ್ಣಚಂದ್ರ ತೇಜಸ್ವಿ ಅವರನ್ನು ಸೆಲೆಬ್ರೆಟ್ ಮಾಡಲು ಸಿಕ್ಕ ಅವಕಾಶ. ನನ್ನ ಕಟೌಟ್ ಮುಂದೆ ಕುಣಿದಾಗಲು ಇಷ್ಟು ಖುಷಿ ಕೊಟ್ಟಿರಲಿಲ್ಲ. ಅಷ್ಟೊಂದು ಖುಷಿ ಪೂರ್ಣಚಂದ್ರ ತೇಜಸ್ವಿ ಕಟೌಟ್ ಮುಂದೆ ಕುಣಿದಾಗ ಸಿಕ್ಕಿದೆ ಎಂದು ತಿಳಿಸಿದರು.

    ನಿರ್ದೇಶಕ ಶಶಾಂಕ್ ಸೋಗಲ್ (Shashank Sogal)  ಮಾತನಾಡಿ, ಒಳ್ಳೆ ಸಿನಿಮಾ ಮಾಡಬೇಕು ಅಂತ ಫೋಕಸ್ ಮಾಡಿದ್ದೆ. ಎಂಜಿನಿಯರಿಂಗ್ ಓದುವಾಗ ಕನ್ನಡ ಸಿನಿಮಾ ಹೋಗ್ತೀವೆ ಎಂದಾಗ ನಮ್ಮನ್ನು ಬೇರೆ ರೀತಿ ನೋಡುವವರು. ಆಗ ತುಂಬಾ ಕೋಪ ಬರುವುದು. ಒಳ್ಳೆ ಸಿನಿಮಾ ಮಾಡಬೇಕು ಎಂಬ ಒಂದೆ ಉದ್ದೇಶವಿತ್ತು. ಮಾಡಿದ್ದೇನೋ ಇಲ್ವೋ ಗೊತ್ತಿಲ್ಲ. ಜನ ಸ್ವೀಕರಿಸಿದ್ದಾರೆ ಎಂದರೆ ಅದು ಒಳ್ಳೆ ಕೃತಿಯಾಗಿದೆ ಎಂದು ತಿಳಿದುಕೊಳ್ಳುತ್ತೇನೆ. ಆ ಒಂದೊಳ್ಳೆ ಉದ್ದೇಶದಿಂದ ಎಷ್ಟು ಒಳ್ಳೆ ಸ್ನೇಹಿತರು ಸಿಕ್ಕಿದ್ದಾರೆ. ಸಿನಿಮಾಗೆ ಎಲ್ಲೆಡೆಯಿಂದ ರೆಸ್ಪಾನ್ಸ್ ಸಿಗುತ್ತಿದೆ. ಧನಂಜಯ್ ಸರ್ ನಮ್ಮ ಸಿನಿಮಾಗೆ ಸಪೋರ್ಟ್ ಮಾಡಿರುವುದು. ಜನಕ್ಕೆ ರೀಚ್ ಆಗುತ್ತಿರುವುದು ಖುಷಿಕೊಟ್ಟಿದೆ. ವೀಕೆಂಡ್ ನಲ್ಲಿ ಅದ್ಭುತ ರೆಸ್ಪಾನ್ಸ್ ಸಿಗುತ್ತಿದೆ. ಹೊರ ದೇಶದಲ್ಲಿಯೂ ಈ ಕಥೆಯನ್ನು ಮೆಚ್ಚಿಕೊಂಡಿದ್ದಾರೆ ಎಂದರು.

    ರಾಮಾನುಜ ಅಯ್ಯಂಗಾರಿ ಪಾತ್ರಧಾರಿ ಆದಿತ್ಯ ಅಶ್ರೀ, ರಾಮಾನುಜ ಅಯ್ಯಂಗಾರಿ ಪಾತ್ರದ ಮೇಲೆ ಪ್ರೀತಿ ಸಿಟ್ಟು ಎಲ್ಲದನ್ನೂ ಮಾಡಿಕೊಂಡಿದ್ದಾರೆ. ಸಿನಿಮಾ ನೋಡಿದ ಮೇಲೆ ಎಲ್ಲರೂ ಎತ್ತಿ ಕೊಂಡಾಡುತ್ತಿದ್ದೀರಾ. 18 ವರ್ಷಕ್ಕೆ ಇಂಡಸ್ಟ್ರೀಗೆ ಬಂದೆ. ಎಷ್ಟೋ ಅವಮಾನ, ಕಾಯುವಿಕೆ ಬಳಿಕ ಒಂದೊಳ್ಳೆ ಪಾತ್ರ ಸಿಕ್ಕಿದೆ. ಜನ ಗುರುತಿಸುತ್ತಿದ್ದಾರೆ. ಈ ಸಿನಿಮಾದಿಂದ ಇನ್ನೊಂದು ಚಿತ್ರದಲ್ಲಿ ನಾಯಕ ನಟಿಸುವ ಅವಕಾಶ ಪಡೆದಿದ್ದೇನೆ ಎಂದು ಖುಷಿ ವ್ಯಕ್ತಪಡಿಸಿದರು.

     

    ಪೂರ್ಣಚಂದ್ರ ತೇಜಸ್ವಿಯವರ ಕಥೆಯಾಧಾರಿತ ಈ ಚಿತ್ರವನ್ನು ಶಶಾಂಕ್ ಸೋಗಾಲ್ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಅಂದಹಾಗೇ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾವನ್ನು ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳೇ ನಿರ್ಮಿಸಿದ್ದಾರೆ. ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ಅರ್ಪಿಸಿದ್ದು, ಕೆ ಆರ್ ಜಿ ಸ್ಟುಡಿಯೊಸ್ ರಾಜ್ಯದೆಲ್ಲೆಡೆ ಚಿತ್ರವನ್ನು ವಿತರಿಸಿದೆ. ರಾಹುಲ್‌ ರಾಯ್‌ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್‌ ಶ್ಯಾಮ್‌ ಸಂಗೀತವಿದೆ. ಶಿಶಿರ್‌ ಬೈಕಾಡಿ, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌, ಮಂಡ್ಯ ರಮೇಶ್‌, ಮೈಸೂರ್‌ ಆನಂದ್‌, ಸುಂದರ್‌ ವೀಣಾ, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು ಸೇರಿ ಅನೇಕ ಕಲಾವಿದರು ಈ ಸಿನಿಮಾದ ಭಾಗವಾಗಿದ್ದಾರೆ. ಸಿನಿಮಾಮರ ಬ್ಯಾನರ್‌ನಲ್ಲಿ ಡೇರ್ ಡೆವಿಲ್ ಮುಸ್ತಾಫಾ ನಿರ್ಮಾಣವಾಗಿದೆ.

  • ಬೆಂಗಳೂರು ಸೇರಿದಂತೆ 12 ಸ್ಥಳಗಳಲ್ಲಿ ವಿಶ್ವಕಪ್‌ ಟೂರ್ನಿ – ಮೋದಿ ಸ್ಟೇಡಿಯಂನಲ್ಲಿ ಫೈನಲ್‌

    ಬೆಂಗಳೂರು ಸೇರಿದಂತೆ 12 ಸ್ಥಳಗಳಲ್ಲಿ ವಿಶ್ವಕಪ್‌ ಟೂರ್ನಿ – ಮೋದಿ ಸ್ಟೇಡಿಯಂನಲ್ಲಿ ಫೈನಲ್‌

    ಮುಂಬೈ: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಕ್ರಿಕೆಟ್‌ಗೆ (2023 ODI World Cup Cricket) ಬಿಸಿಸಿಐ 12 ಕ್ರೀಡಾಂಗಣವನ್ನು ಅಂತಿಮಗೊಳಿಸಿದ್ದು, ಫೈನಲ್‌ ಪಂದ್ಯ ಅಹಮದಾಬಾದ್‌ನಲ್ಲಿರುವ ವಿಶ್ವದ ಅತಿ ದೊಡ್ಡ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

    2023ರ ವಿಶ್ವಕಪ್‌ ಕ್ರಿಕೆಟ್‌ ಅಕ್ಟೋಬರ್‌ 5 ರಿಂದ ನವೆಂಬರ್‌ 19ರವರೆಗೆ ಆಯೋಜಿಸಿಲು ಬಿಸಿಸಿಐ (BCCI) ಸಿದ್ಧತೆ ಮಾಡಿಕೊಂಡಿದೆ. ನಾಕೌಟ್‌ ಸೇರಿದಂತೆ ಒಟ್ಟು 48 ಪಂದ್ಯಗಳು 46 ದಿನಗಳಲ್ಲಿ ನಡೆಯಲಿದೆ. ಬಿಸಿಸಿಐ ಇನ್ನೂ ಅಧಿಕೃತವಾಗಿ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಈ ಅವಧಿಯಲ್ಲಿ ಕೆಲ ಭಾಗಗಳಲ್ಲಿ ಮಳೆ ಬರುವ ಸಾಧ್ಯತೆ ಇರುವ ಕಾರಣ ಬಿಸಿಸಿಐ ಸ್ಥಳ ನಿಗದಿ ಮಾಡುವ ಸಂಬಂಧ ಚರ್ಚೆ ನಡೆಸುತ್ತಿದೆ.

    ಸಾಮಾನ್ಯವಾಗಿ ಐಸಿಸಿ ವಿಶ್ವಕಪ್ ವೇಳಾಪಟ್ಟಿಯನ್ನು ಕನಿಷ್ಠ ಒಂದು ವರ್ಷ ಮುಂಚಿತವಾಗಿ ಪ್ರಕಟಿಸುತ್ತದೆ. ಆದರೆ ಈ ಬಾರಿ ಪಂದ್ಯಾವಳಿಗೆ ತೆರಿಗೆ ವಿನಾಯಿತಿ ಪಡೆಯುವುದು ಮತ್ತು ಪಾಕಿಸ್ತಾನ ತಂಡಕ್ಕೆ ವೀಸಾ ಕ್ಲಿಯರೆನ್ಸ್ ಪಡೆಯುವ ಸಂಬಂಧ ಭಾರತ ಸರ್ಕಾರದಿಂದ ಅಗತ್ಯ ಅನುಮತಿಗಳನ್ನು ಪಡೆಯಲು ಬಿಸಿಸಿಐ ಕಾಯುತ್ತಿರುವುದರಿಂದ ಅಂತಿಮ ವೇಳಾಪಟ್ಟಿ ಪ್ರಕಟಿಸಲು ತಡವಾಗುತ್ತಿದೆ.

    ಯಾವ ಸ್ಥಳದಲ್ಲಿ ಆಯೋಜನೆ?
    ಅಹಮದಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕತ್ತಾ, ಲಕ್ನೋ, ಇಂದೋರ್, ರಾಜ್‌ಕೋಟ್ ಮತ್ತು ಮುಂಬೈನಲ್ಲಿ ಪಂದ್ಯ ನಡೆಯಲಿದೆ.

    ಏನಿದು ತೆರಿಗೆ ಕಿತ್ತಾಟ?
    ಐಸಿಸಿಯು (ICC) ತೆರಿಗೆ ವಿನಾಯಿತಿ (Tax Exemption) ಒಪ್ಪಂದಕ್ಕೆ ಬಿಸಿಸಿಐ 2014ರಲ್ಲಿ ಸಹಿ ಹಾಕಿದೆ. ಈ ಒಪ್ಪಂದದ ಪ್ರಕಾರ ಅಂತಾರಾಷ್ಟ್ರೀಯ ಟೂರ್ನಿಗಳ ಆತಿಥ್ಯ ವಹಿಸಿಕೊಳ್ಳುವ ದೇಶದ ಕ್ರಿಕೆಟ್ ಮಂಡಳಿ ಅಲ್ಲಿನ ಸರ್ಕಾರದಿಂದ ತೆರಿಗೆ ವಿನಾಯಿತಿ ಪಡೆದುಕೊಳ್ಳಬೇಕಾಗುತ್ತದೆ. ಈ ತೆರಿಗೆ ವಿನಾಯಿತಿಯಲ್ಲಿ ನೇರ ಪ್ರಸಾರದ ಹಕ್ಕು ಸೇರಿದಂತೆ ಟೂರ್ನಿಯ ಆದಾಯಕ್ಕೆ ತೆರಿಗೆ ಹಾಕಬಾರದೆಂಬ ಒಪ್ಪಂದವಿದೆ. ಬಿಸಿಸಿಐ ಸಹಿ ಹಾಕಿದ ಬಳಿಕ 2016 ಟಿ20 ವಿಶ್ವಕಪ್‌, 2018ರ ಚಾಂಪಿಯನ್ಸ್‌ ಟ್ರೋಫಿ( 2021ರಲ್ಲಿ ಇದನ್ನು ಟಿ20 ವಿಶ್ವಕಪ್‌ಗೆ ಬದಲಾಯಿಸಲಾಯಿತು. ಕೋವಿಡ್‌ ಹಿನ್ನೆಲೆಯಲ್ಲಿ ಯುಎಇಯಲ್ಲಿ ಟೂರ್ನಿ ನಡೆದಿತ್ತು), 2023ರ ಏಕದಿನ ವಿಶ್ವಕಪ್‌ ಆಯೋಜಿಸುವ ಹಕ್ಕನ್ನು ಪಡೆದುಕೊಂಡಿತ್ತು. ಇದನ್ನೂ ಓದಿ: ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು : ಮೋದಿ ಬಳಿ ಅಫ್ರಿದಿ ಮನವಿ

    ಬಿಸಿಸಿಐಗೆ ಭಾರೀ ನಷ್ಟ:
    ಭಾರತದಲ್ಲಿ ನೇರ ಪ್ರಸಾರ ಮತ್ತು ಟೂರ್ನಿಯ ಆದಾಯದ ಮೂಲಗಳಿಗೆ ತೆರಿಗೆ ಹಾಕುವ ಹಕ್ಕು ಸರ್ಕಾರಕ್ಕಿದೆ. 2023ರ ವಿಶ್ವಕಪ್‌ನ ಪ್ರಸಾರ ಆದಾಯದ ಮೇಲೆ ಶೇ.20 ರಷ್ಟು ತೆರಿಗೆ(ಹೆಚ್ಚುವರಿ ಶುಲ್ಕ ಹೊರತುಪಡಿಸಿ) ವಿಧಿಸಲಾಗುವುದು ಎಂದು ಕಳೆದ ವರ್ಷ ಐಸಿಸಿಗೆ ಭಾರತದ ತೆರಿಗೆ ಅಧಿಕಾರಿಗಳು ತಿಳಿಸಿದ್ದರು. ಈ ವಿಷಯದ ಬಗ್ಗೆ ಐಸಿಸಿ ಮತ್ತು ಬಿಸಿಸಿಐ ಜೊತೆ ಮಾತುಕತೆ ನಡೆಯುತ್ತಿದೆ. ಸರ್ಕಾರಗಳು ತೆರಿಗೆ ವಿನಾಯಿತಿ ನೀಡದೇ ಇದ್ದರೆ ಟೂರ್ನಿಯಿಂದ ಬರುವ ಆದಾಯದಲ್ಲಿ ಬೋರ್ಡ್‌ಗಳಿಗೆ ನೀಡುವ ಆದಾಯವನ್ನು ಕಡಿತಗೊಳಿಸಲಾಗುವುದು ಎಂದು ಐಸಿಸಿ ಈ ಹಿಂದೆ ತಿಳಿಸಿತ್ತು.

    ಬಿಸಿಸಿಐ 2023ರ ವಿಶ್ವಕಪ್‌ ಪ್ರಸಾರ ಹಕ್ಕಿನಿಂದ 533.29 ದಶಲಕ್ಷ ಡಾಲರ್‌ (ಅಂದಾಜು 4,400 ಕೋಟಿ ರೂ.) ಆದಾಯ ಬರಬಹುದು ಎಂದು ಅಂದಾಜಿಸಿದೆ. ಈ ಆದಾಯಕ್ಕೆ ಶೇ.20 ರಷ್ಟು ತೆರಿಗೆ ವಿಧಿಸಿದರೆ 116 ದಶಲಕ್ಷ ಡಾಲರ್‌( ಅಂದಾಜು 955 ಕೋಟಿ ರೂ.) ಹಣವನ್ನು ಸರ್ಕಾರಕ್ಕೆ ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರ ತೆರಿಗೆ ವಿನಾಯಿತಿ ನೀಡದೇ ಇದ್ದರೆ ಬಿಸಿಸಿಐ 955 ಕೋಟಿ ರೂ. ಆದಾಯವನ್ನು ಕಳೆದುಕೊಳ್ಳಲಿದೆ.

    ಭಾರತದ ತೆರಿಗೆ ನಿಯಮಗಳಲ್ಲಿ ಅಂತಹ ವಿನಾಯಿತಿಗಳಿಗೆ ಅವಕಾಶ ಇಲ್ಲದಿರುವುದರಿಂದ 2016ರ ಟಿ–20ವಿಶ್ವಕಪ್ ಆಯೋಜಿಸಿದ ಬಳಿಕ ಬಿಸಿಸಿಐ 193 ಕೋಟಿ ರೂ. ಕಳೆದುಕೊಂಡಿತ್ತು. ಈ ಸಂಬಂಧ ಬಿಸಿಸಿಐ ಈಗಲೂ ಐಸಿಸಿ ಟ್ರಿಬ್ಯೂನಲ್‌ನಲ್ಲಿ ಹೋರಾಡುತ್ತಿದೆ.

  • 777 ಚಾರ್ಲಿ ಸಿನಿಮಾಗೆ 6 ತಿಂಗಳ ತೆರಿಗೆ ವಿನಾಯಿತಿ

    777 ಚಾರ್ಲಿ ಸಿನಿಮಾಗೆ 6 ತಿಂಗಳ ತೆರಿಗೆ ವಿನಾಯಿತಿ

    ಬೆಂಗಳೂರು: ನಟ ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಸಿನಿಮಾಗೆ ಸರ್ಕಾರ 6 ತಿಂಗಳ ಸಂಪೂರ್ಣ ತೆರಿಗೆ ವಿನಾಯಿತಿ ನೀಡಿದೆ.

    ಶ್ವಾನ ಸ್ವಾಸ್ಥ್ಯದ ಕುರಿತು ಜಾಗೃತಿ ಮೂಡಿಸುವ, ಪ್ರಾಣಿ ಹಿಂಸೆಯ ಸೂಕ್ಷ್ಮತೆಯನ್ನು ಎತ್ತಿ ಹಿಡಿದಿರುವ ಹಾಗೂ ಬೀದಿ ನಾಯಿಗಳನ್ನು ದತ್ತು ಪಡೆಯುವುದರ ಬಗ್ಗೆ ಸಂದೇಶವಿರುವ ಹಿನ್ನೆಲೆ 777 ಚಾರ್ಲಿ ಸಿನಿಮಾಗೆ ಶೇ.100 ರಷ್ಟು ಸರ್ಕಾರ ತೆರಿಗೆ ವಿನಾಯಿತಿ ನೀಡಿದೆ. ಇದನ್ನೂ ಓದಿ: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನಿಗಾಗಿ ಒಂದಾದ ಸ್ಯಾಂಡಲ್ ವುಡ್ ಸ್ಟಾರ್ಸ್

    ಕನ್ನಡದಲ್ಲಿ ನಿರ್ಮಾಣವಾದ ಸಿನಿಮಾ ಮಳಯಾಳಂ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲಿ ಡಬ್ ಆಗಿದ್ದು, ದೇಶಾದ್ಯಂತ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ವಿಭಿನ್ನ ಸಂದೇಶವಿರುವ ಸಿನಿಮಾವನ್ನು ಎಲ್ಲರೂ ವೀಕ್ಷಿಸಬೇಕೆಂಬ ಕಾರಣಕ್ಕೆ ಇದೀಗ ಸರ್ಕಾರ ಜೂನ್ 19ರಿಂದ ಟಿಕೆಟ್‌ಗೆ ತೆರಿಗೆ ವಿನಾಯಿತಿ ನೀಡಿದೆ. ಈಗಾಗಲೇ ಸಂಗ್ರಹವಾಗಿರುವ ಜಿಎಸ್‌ಟಿ ಪ್ರದರ್ಶಕರಿಗೆ ಮರುಪಾವತಿ ಮಾಡಲು ಸರ್ಕಾರ ಸೂಚಿಸಿದೆ. ಇದನ್ನೂ ಓದಿ: ಸೈನ್ ಲಾಂಗ್ವೇಜ್ ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ರಿಲೀಸ್

    Live Tv

  • ಬೇಕಿದ್ರೆ ʻದಿ ಕಾಶ್ಮೀರ್‌ ಫೈಲ್ಸ್‌ʼನ್ನು ಯೂಟ್ಯೂಬ್‌ಗೆ ಹಾಕಲಿ: ತೆರಿಗೆ ವಿನಾಯಿತಿ ಕೇಳಿದ ಬಿಜೆಪಿಗೆ ಕೇಜ್ರಿವಾಲ್‌ ಟಾಂಗ್

    ಬೇಕಿದ್ರೆ ʻದಿ ಕಾಶ್ಮೀರ್‌ ಫೈಲ್ಸ್‌ʼನ್ನು ಯೂಟ್ಯೂಬ್‌ಗೆ ಹಾಕಲಿ: ತೆರಿಗೆ ವಿನಾಯಿತಿ ಕೇಳಿದ ಬಿಜೆಪಿಗೆ ಕೇಜ್ರಿವಾಲ್‌ ಟಾಂಗ್

    ನವದೆಹಲಿ: ಕಾಶ್ಮೀರಿ ಪಂಡಿತರ ಮೇಲಿನ ದೌರ್ಜನ್ಯ ಕುರಿತ ಸಿನಿಮಾ ʼದಿ ಕಾಶ್ಮೀರ್‌ ಫೈಲ್ಸ್‌ʼಗೆ ರಾಷ್ಟ್ರ ರಾಜಧಾನಿಯಲ್ಲೂ ತೆರಿಗೆ ವಿನಾಯಿತಿ ಘೋಷಿಸಬೇಕು ಎಂಬ ಬಿಜೆಪಿ ಶಾಸಕರ ಒತ್ತಾಯಕ್ಕೆ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ತಿರುಗೇಟು ನೀಡಿದ್ದಾರೆ.

    ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್‌, ಬಿಜೆಪಿಯವರು ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಕೇಳುತ್ತಿದ್ದಾರೆ. ನಿರ್ದೇಶಕರು ಸಿನಿಮಾವನ್ನು ಯೂಟ್ಯೂಬ್‌ಗೆ ನೀಡಲಿ. ಉಚಿತವಾಗಿ ಸಿನಿಮಾ ನೋಡಬಹುದು ಎಂದು ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ನಿಂದ ಜೇಮ್ಸ್ ಚಿತ್ರಕ್ಕೆ ತೊಂದರೆ ಇಲ್ಲ : ಶಿವರಾಜ್ ಕುಮಾರ್

    ನಮ್ಮನ್ನು ತೆರಿಗೆ ಮುಕ್ತ ಮಾಡಿ ಎಂದು ಏಕೆ ಕೇಳುತ್ತಿದ್ದೀರಿ? ಅಷ್ಟು ಉತ್ಸುಕರಾಗಿದ್ದರೆ ವಿವೇಕ್ ಅಗ್ನಿಹೋತ್ರಿಯವರಿಗೆ ಯೂಟ್ಯೂಬ್‌ನಲ್ಲಿ ಹಾಕಲು ಹೇಳಿ, ಎಲ್ಲಾ ಉಚಿತವಾಗಿರುತ್ತದೆ. ಎಲ್ಲರೂ ಅದನ್ನು ಒಂದು ದಿನದಲ್ಲಿ ನೋಡಬಹುದು. ಆಗ ತೆರಿಗೆ ಮುಕ್ತ ಮಾಡುವ ಅಗತ್ಯವಾದರೂ ಏಕೆ ಬರುತ್ತದೆ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ‌

    ಈಗಾಗಲೇ ಕರ್ನಾಟಕ, ಉತ್ತರ ಪ್ರದೇಶ, ತ್ರಿಪುರ, ಹರಿಯಾಣ, ಗುಜರಾತ್‌, ಉತ್ತರಾಖಂಡ್‌ ಸೇರಿದಂತೆ ಬಿಜೆಪಿ ಆಡಳಿತವಿರುವ ಅನೇಕ ರಾಜ್ಯಗಳಲ್ಲಿ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಲಾಭವನ್ನು ದಾನಮಾಡಿ ಎಂದ ಐಎಎಸ್ ಆಫೀಸರ್: ನಿರ್ದೇಶಕರ ಉತ್ತರವೇನು?

    ಅರವಿಂದ್‌ ಕೇಜ್ರಿವಾಲ್‌ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ʻನೀಲ್ ಬಟ್ಟೆಯ್ ಸಣ್ಣಾಟʼ ಸಿನಿಮಾಗೆ ದೆಹಲಿ ಸರ್ಕಾರ ತೆರಿಗೆ ವಿನಾಯಿತಿ ನೀಡಿದೆ ಎಂದು ಕೇಜ್ರಿವಾಲ್‌ ಮಾಡಿದ್ದ ಟ್ವೀಟ್‌ ಹಂಚಿಕೊಂಡು ಸಂತೋಷ್‌ ಟೀಕೆ ವ್ಯಕ್ತಪಡಿಸಿದ್ದಾರೆ. ಆ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವವರು ಇದಕ್ಕೆ ಯಾಕೆ ನೀಡುತ್ತಿಲ್ಲ. ನಾಚಿಕೆಯಾಗಬೇಕು ಎಂದು ಟ್ವೀಟ್‌ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

  • ಹೆರಿಗೆ ರಜೆಯ ಸಂಬಳದಲ್ಲಿ ಸಿಗಲಿದೆ ತೆರಿಗೆ ವಿನಾಯಿತಿ

    ಹೆರಿಗೆ ರಜೆಯ ಸಂಬಳದಲ್ಲಿ ಸಿಗಲಿದೆ ತೆರಿಗೆ ವಿನಾಯಿತಿ

    ನವದೆಹಲಿ: ಕೇಂದ್ರ ಸರ್ಕಾರವು ಫೆ. 1ರಂದು ಮಂಡನೆ ಮಾಡಲಿರುವ ಮಧ್ಯಂತರ ಬಜೆಟ್‍ನಲ್ಲಿ ಹೆರಿಗೆ ರಜೆಯಲ್ಲಿ ಪಡೆಯುವ ಸಂಬಳಕ್ಕೆ ತೆರಿಗೆ ವಿನಾಯಿತಿ ಘೋಷಿಸುವ ಸಾಧ್ಯತೆ ಇದೆ.

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಹಲವು ಜನಪರ ಯೋಜನೆಗಳನ್ನು ಘೋಷಿಸಲಿದೆ. ಮಧ್ಯಂತರ ಬಜೆಟ್‍ನಲ್ಲಿ ಹೆರಿಗೆ ರಜೆಯಲ್ಲಿ ಪಡೆಯುವ ಸಂಬಳಕ್ಕೆ ತೆರಿಗೆ ವಿನಾಯಿತಿ ನೀಡುವ ಸಾಧ್ಯತೆ ಇದ್ದು, ಈ ಮೂಲಕ ಉದ್ಯೋಗಸ್ಥ ಮಹಿಳೆಯರ ಬೆಂಬಲ ಗಳಿಸಲು ಬಿಜೆಪಿ ಮುಂದಾಗಿದೆ. ಕಾರ್ವಿಕ ಸಚಿವಾಲಯ ಸಲ್ಲಿಸಿರುವ ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಪರಿಶೀಲಿಸುತ್ತಿದೆ ಎಂದು ಮಧ್ಯಮವೊಂದು ವರದಿ ಪ್ರಕಟಿಸಿದೆ.

    ಹೆರಿಗೆ ಸೌಲಭ್ಯ ಕಾಯ್ದೆಯನ್ನು 2017ರಲ್ಲಿ ಸರ್ಕಾರ ತಿದ್ದುಪಡಿ ಮಾಡಿತ್ತು. ಆಗ ಉದ್ಯೋಗಸ್ಥ ಮಹಿಳೆಯರಿಗೆ ಕೊಡುವ ಸಂಬಳ ಸಹಿತ ಹೆರಿಗೆ ರಜೆಯನ್ನು 12 ವಾರದಿಂದ 26 ವಾರಕ್ಕೆ ಏರಿಸಿತ್ತು. ಈ ಹಿಂದೆ ಕಾರ್ವಿಕ ಸಚಿವಾಲಯವು ಕಡಿಮೆ ಸಂಬಳ ಪಡೆಯುವ ಮಹಿಳೆಯರಿಗೂ ಕೂಡ 26 ವಾರಗಳ ಹೆರಿಗೆ ರಜೆ ಸಿಗುವಂತೆ ಮಾಡಲು ಕೆಲವು ಕ್ರಮಗಳ ಬಗ್ಗೆ ಸರ್ಕಾರದ ಬಳಿ ಪ್ರಸ್ತಾವನೆ ಇಟ್ಟಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಲೆಕ್ಟ್ರಿಕ್ ವಾಹನಗಳಿಗೆ ಯಾವುದೇ ಪರ್ಮಿಟ್ ಇಲ್ಲ: ನಿತಿನ್ ಗಡ್ಕರಿ

    ಎಲೆಕ್ಟ್ರಿಕ್ ವಾಹನಗಳಿಗೆ ಯಾವುದೇ ಪರ್ಮಿಟ್ ಇಲ್ಲ: ನಿತಿನ್ ಗಡ್ಕರಿ

    ನವದೆಹಲಿ: ಎಲೆಕ್ಟ್ರಿಕ್ ಮತ್ತು ಪರ್ಯಾಯ ಇಂಧನಗಳನ್ನು ಬಳಸಿ ಚಾಲನೆಯಾಗುವ ವಾಹನಗಳು ಯಾವುದೇ ಪರ್ಮಿಟ್ ಇಲ್ಲದೇ ರಸ್ತೆಗಿಳಿಯಬಹುದೆಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಪ್ರಾಧಿಕಾರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

    ಭಾರತೀಯ ವಾಹನ ತಯಾರಿಕಾ ಕಂಪನಿಗಳ ಒಕ್ಕೂಟ(ಎಸ್‍ಐಎಎಂ) ವಾರ್ಷಿಕ ಅಧಿವೇಶನದಲ್ಲಿ ಮಾತನಾಡಿದ ಅವರು ಎಲೆಕ್ಟ್ರಿಕ್ ಮತ್ತು ಪರ್ಯಾಯ ಇಂಧನ ಬಳಸಿ ಚಲಿಸುವ ವಾಹನಗಳಿಗೆ ಪ್ರೋತ್ಸಾಹ ನೀಡಲು ಎಲೆಕ್ಟ್ರಿಕಲ್ ವಾಹನ ಸೇರಿದಂತೆ, ಎಥೆನಾಲ್, ಬಯೋ ಡೀಸೆಲ್, ಸಿಎನ್‍ಜಿ ಹಾಗೂ ಬಯೋ ಇಂಧನಗಳ ಮೂಲಕ ಸಾಗುವ ವಾಹನಗಳಿಗೆ ರಸ್ತೆ ರಹದಾರಿಯನ್ನು ಸಂಪೂರ್ಣವಾಗಿ ತೆಗೆದು ಹಾಕಿದ್ದೇವೆ. ಇಂತಹ ವಾಹನಗಳಿಗೆ ಉಚಿತ ಪರ್ಮಿಟ್ ನೀಡುವ ಮೂಲಕ, ಸುಲಭವಾಗಿ ರಸ್ತೆಗಿಳಿಯುವಂತೆ ಮಾಡಲಾಗಿದೆ ಎಂದರು.

    ಆ್ಯಪ್ ಆಧಾರಿತಾ ಟ್ಯಾಕ್ಸಿ ಸೇವೆಗಳಾದ ಊಬರ್ ಹಾಗೂ ಓಲಾಗಳು ತಮ್ಮ ವಾಹನಗಳನ್ನು ಎಲೆಕ್ಟ್ರಿಕ್ ಮಾದರಿಗಳನ್ನು ಬಳಸುವ ಮೂಲಕ ರಸ್ತೆ ತೆರಿಗೆಗಳ ವಿನಾಯಿತಿ ಹೊಂದಬಹುದಾಗಿದೆ ಎಂದು ಈ ವೇಳೆ ಸಲಹೆ ನೀಡಿದರು. ಇದನ್ನೂ ಓದಿ:  2030ರ ವೇಳೆಗೆ ಭಾರತದಲ್ಲಿ ಒಂದೇ ಒಂದು ಪೆಟ್ರೋಲ್, ಡೀಸೆಲ್ ಕಾರು ಮಾರಾಟವಾಗಲ್ಲ

    ವಾಹನ ತಯಾರಿಕಾ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯಲ್ಲಿ ಮುಂದೆ ಬರುವುದಕ್ಕಾಗಿ ಈ ನಿರ್ಧಾರನ್ನು ತೆಗೆದುಕೊಳ್ಳಲಾಗಿದೆ. ಅಲ್ಲದೇ ಎಲೆಕ್ಟ್ರಿಕ್ ವಾಹನಗಳಿಗೆ ಮೇಲೆ 12% ಜಿಎಸ್‍ಟಿ ಇದೆ. ಹೀಗಾಗಿ ಮತ್ತೆ ಯಾವುದೇ ಸಬ್ಸಿಡಿ ಅವಶ್ಯಕತೆ ಇರುವುದಿಲ್ಲ ಎಂದು ಯೋಚಿಸಿದ್ದೇನೆ. ಉತ್ತಮ ವಾತಾವರಣವನ್ನು ಕಲ್ಪಿಸುವ ದೃಷ್ಟಿಯಿಂದ ಈಗಾಗಲೇ ನಮ್ಮ ಇಲಾಖೆಯು ಈ ಬಗ್ಗೆ ವರದಿ ಸಿದ್ದಪಡಿಸಿದ್ದು, ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಓಡಾಟ ಜಾಸ್ತಿಯಾಗುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇನ್ನು ಐದು ವರ್ಷದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 30 ರೂ. ಆಗುತ್ತೆ!

    ಕೇಂದ್ರ ಸರ್ಕಾರವು 2015ರಲ್ಲಿ ಜಾರಿಗೆ ತಂದ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿ ಯೋಜನೆಗೆ ಈ ನಿರ್ಧಾರವು ಸಹಾಯಕವಾಗುತ್ತದೆ. ವಾಹನಗಳ ಮೇಲಿನ ಪರ್ಮಿಟ್ ತೆಗೆದು ಹಾಕಿರುವುದರಿಂದ ವಾಹನ ತಯಾರಿಕಾ ಸಂಸ್ಥೆಗಳ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಒತ್ತು ನೀಡಬೇಕು ಎಂದು ಕೇಳಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv