Tag: ತೇಜಸ್ವಿನಿ ಅನಂತಕುಮಾರ್

  • ಜೀನ್ಸ್, ಡಿಎನ್‍ಎ ನೋಡಿ ಟಿಕೆಟ್ ಕೊಡ್ತಾ ಹೋದ್ರೆ ಹೇಗೆ: ಬಿ.ಎಲ್ ಸಂತೋಷ್ ಪ್ರಶ್ನೆ

    ಜೀನ್ಸ್, ಡಿಎನ್‍ಎ ನೋಡಿ ಟಿಕೆಟ್ ಕೊಡ್ತಾ ಹೋದ್ರೆ ಹೇಗೆ: ಬಿ.ಎಲ್ ಸಂತೋಷ್ ಪ್ರಶ್ನೆ

    ಚಾಮರಾಜನಗರ: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ತಪ್ಪಿದ್ದರ ಹಿಂದೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹಸ್ತಕ್ಷೇಪವಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಮಾತುಗಳು ಕೇಳಿ ಬಂದ ಬೆನ್ನಲ್ಲೇ ಜೀನ್ಸ್, ಡಿಎನ್‍ಎ ನೋಡಿ ಟಿಕೆಟ್ ಕೊಡ್ತಾ ಹೋದ್ರೆ ಪಾರ್ಟಿ ಮೆಂಬರ್ ಸ್ಲಿಪ್‍ಗೆ ಬೆಲೆ ಬೇಕಲ್ಲ ಎಂದು ಪರೋಕ್ಷವಾಗಿ ಹೇಳುವ ಮೂಲಕ ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಟಿಕೆಟ್ ತಪ್ಪಿದೆ ಎಂದು ಬಿ.ಎಲ್. ಸಂತೋಷ್ ಹೇಳಿದ್ದಾರೆ.

    ಚಾಮರಾಜನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಎಲ್.ಸಂತೋಷ್, ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಕಟ್ಟಿದ ಇಬ್ಬರಲ್ಲಿ ದಿವಂಗತ ಅನಂತ್‍ಕುಮಾರ್ ಸಹ ಒಬ್ಬರು. ಅನಂತ್‍ಕುಮಾರ್ ಅವರಿಗೆ ಏನು ಕ್ರೆಡಿಟ್ ಕೊಡಬೇಕು ಅದನ್ನು ಸಂಘ ಪರಿವಾರ ಹಿಂದಿನಿಂದಲೂ ಕೊಡುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಕೊಡುತ್ತದೆ. ಅದೇ ಕ್ರೆಡಿಟ್ ಅವರ ಹೆಂಡತಿ ತೇಜಸ್ವಿನಿ ಪಡೆದುಕೊಳ್ಳಬೇಕೆಂದರೆ ಹೇಗೆ ಎಂದು ಪ್ರಶ್ನೆ ಮಾಡಿದರು.

    20-30 ವರ್ಷ ಪಾರ್ಟಿ ರಾಜಕಾರಣದಲ್ಲಿ ಮುಂದುವರಿಯಲು ಸಾಮರ್ಥ್ಯ ಇರುವವರಿಗೆ ಟಿಕೆಟ್ ಕೊಟ್ಟಿದ್ದೇವೆ. ಸದ್ಯ ಟಿಕೆಟ್ ಪಡೆದವರು ತಮ್ಮ ಸಾಮರ್ಥ್ಯವನ್ನು ಮುಂದಿನ ಐದು ವರ್ಷಗಳಲ್ಲಿ ಸಾಬೀತು ಮಾಡಬೇಕಾಗುತ್ತದೆ. ತೇಜಸ್ವಿನಿ ಅವರಿಗೆ ಟಿಕೆಟ್ ತಪ್ಪಿಸಲಾಗಿದೆ ಎಂದು ಹೇಳುವುದು ಸರಿಯಲ್ಲ. ಪಕ್ಷ ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಿಷ್ಠವಾಗಿಸಲು ಯಾರಿಗೂ ಅಗೌರವ ಸೂಚಿಸದೇ ಯುವಕರಿಗೆ ಟಿಕೆಟ್ ನೀಡಲಾಗಿದೆ. ಜೀನ್ಸ್, ಡಿಎನ್‍ಎ ಆಧಾರದ ಮೇಲೆ ಟಿಕೆಟ್ ನೀಡಿ ಎಂದು ಎಲ್ಲರೂ ಕೇಳಿದರೆ ಪಾರ್ಟಿಯ ಮೆಂಬರ್ ಶಿಪ್ ರಶೀದಿಗೆ ಬೆಲೆ ಇರಲ್ಲ. ಹಾಗಾಗಿ ಪಕ್ಷ ಎಲ್ಲರನ್ನೂ ಗೌರವದಿಂದ ನೋಡಿ ಸೂಕ್ತ ಸ್ಥಾನಮಾನಗಳನ್ನು ನೀಡುತ್ತಿದೆ ಎಂದರು.

    ಸದ್ಯ ತೇಜಸ್ವಿನಿ ಅವರ ಗೌರವ ಮತ್ತು ಸಾಮರ್ಥ್ಯವನ್ನು ಲೆಕ್ಕ ಹಾಕಿ ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ನೀಡಿರುವ ಅವಕಾಶ ಬಳಸಿಕೊಂಡು ತಮ್ಮನ್ನು ತಾವು ಪಕ್ಷದಲ್ಲಿ ಗುರುತಿಸಿಕೊಳ್ಳಬಹುದು. ಟಿಕೆಟ್ ನೀಡಿದ್ರೆ ಗೌರವ, ನೀಡಲ್ಲ ಅಂದ್ರೆ ಅಗೌರವ ಎಂದು ಹೇಳೋದು ತಪ್ಪಾಗುತ್ತದೆ. ಈ ರೀತಿ ಟಿಕೆಟ್ ನೀಡುವುದು ಪಕ್ಷಕ್ಕೆ ತುಂಬಾನೇ ಅಪಾಯಕಾರಿ. ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದು, ಈ ಅವಕಾಶವನ್ನು ಬಳಸಿಕೊಂಡು ಪಕ್ಷದಲ್ಲಿ ಅವರು ಬೆಳೆಯಬಹುದು ಎಂದು ಹೇಳುವ ಮೂಲಕ ತೇಜಸ್ವಿ ಸೂರ್ಯರಿಗೆ ಟಿಕೆಟ್ ನೀಡಿದ್ದನ್ನು ಬಿ.ಎಲ್.ಸಂತೋಷ್ ಸಮರ್ಥಿಸಿಕೊಂಡಿದ್ದಾರೆ.

  • ನನಗೆ ಇನ್ನು ರಾಜಕೀಯ ಬೇಡ: ತೇಜಸ್ವಿನಿ ಅನಂತಕುಮಾರ್

    ನನಗೆ ಇನ್ನು ರಾಜಕೀಯ ಬೇಡ: ತೇಜಸ್ವಿನಿ ಅನಂತಕುಮಾರ್

    – ಟಿಕೆಟ್ ತಪ್ಪಿದ್ಯಾಕೆ ಅಂತ ಮೋದಿ, ಅಮಿತ್ ಶಾ ಮೊದಲು ಸ್ಪಷ್ಟಪಡಿಸಲಿ!
    – ಪ್ರಚಾರಕ್ಕೆ ಕರೆದವರಿಗೆ ತೇಜಸ್ವನಿ ಫುಲ್ ಕ್ಲಾಸ್

    ಬೆಂಗಳೂರು: ನನಗೆ ಇನ್ನು ರಾಜಕೀಯ ಬೇಡ. ಅದಮ್ಯ ಚೇತನದ ಸಮಾಜ ಸೇವಾ ಕಾರ್ಯಗಳನ್ನು ಮುಂದುವರಿಸುತ್ತೇವೆ ಎಂದು ತೇಜಸ್ವಿನಿ ಅನಂತ್‍ಕುಮಾರ್ ಅವರು ಬಿಜೆಪಿ ಕಾರ್ಯಕರ್ತರ ಮುಂದೆ ಅಸಮಾಧಾನ ಹೊರಹಾಕಿದ್ದಾರೆ.

    ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವಂತೆ ತೇಜಸ್ವಿನಿ ಅನಂತಕುಮಾರ್ ಅವರಿಗೆ ಬಿಜೆಪಿ ಮುಖಂಡ ಮುರಳೀಧರರಾವ್ ಮನವಿ ಮಾಡಿದರು. ಈ ವೇಳೆ ತೇಜಸ್ವಿನಿ ಅವರು, ತಮಗೆ ಬೆಂಗಳೂರು ದಕ್ಷಿಣ ಲೋಕಸಭಾ ಟಿಕೆಟ್ ತಪ್ಪಿದ್ಯಾಕೆ..? ಅಂತ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮೊದಲು ಸ್ಪಷ್ಟಪಡಿಸಲಿ. ಅವರ ಉತ್ತರ ಒಪ್ಪಿಗೆಯಾದರೆ ಮಾತ್ರ ನಾವು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತೇವೆ ಎಂದು ಅಸಮಾಧಾನ ಹೊರಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಇಲ್ಲಿ ಯಾರೂ ದೊಡ್ಡವರಲ್ಲ. ಯಾರ ಕಾಲಿಗೂ ಬೀಳುವ ಅಗತ್ಯವಿಲ್ಲ ಎಂದು ತೇಜಸ್ವಿನಿ ಅನಂತಕುಮಾರ್, ಕಾರ್ಯಕರ್ತರನ್ನು ಸಮಾಧಾನ ಪಡಿಸಿದರು. ಇದಕ್ಕೂ ಮುನ್ನ ವಿಧಾನ ಪರಿಷತ್ ಮಾಜಿ ಸದಸ್ಯ ಕೃಷ್ಣ ಭಟ್, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ತೇಜಸ್ವಿನಿ ಅನಂತ್‍ಕುಮಾರ್ ಮನೆಗೆ ಭೇಟಿ ನೀಡಿ, ಮನವೊಲಿಕೆಗೆ ಯತ್ನಿಸಿದರು.

    ಬೆಂಗಳೂರಿನ ಸೌತ್ ಎಂಡ್ ಸರ್ಕಲ್‍ನಲ್ಲಿ ತೇಜಸ್ವಿನಿ ಅವರ ನಿವಾಸದಲ್ಲಿ ಮುರಳೀಧರರಾವ್ ಕಾರನ್ನು ತಡೆದು ಅನಂತ್‍ಕುಮಾರ್ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಈ ವೇಳೆ ಕೆಲವರು ಕಾರಿಗೆ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ಸ್ಥಳಕ್ಕೆ ಬಂದ ಅನಂತಕುಮಾರ್ ಸಹೋದರ ನಂದಕುಮಾರ್ ಅವರು, ಕಾರ್ಯಕರ್ತರನ್ನ ಸಮಾಧಾನಪಡಿಸಿ ಮುರಳೀಧರರಾವ್ ಅವರನ್ನು ನಿವಾಸಕ್ಕೆ ಕರೆಕೊಂಡು ಹೋದರು.

  • ಮಹಿಳೆಯಾಗಿ ಕಣ್ಣೀರಿಡುವುದು ಬೇಡ- ತೇಜಸ್ವಿನಿ ಅನಂತಕುಮಾರ್ ಮಾರ್ಮಿಕ ನುಡಿ

    ಮಹಿಳೆಯಾಗಿ ಕಣ್ಣೀರಿಡುವುದು ಬೇಡ- ತೇಜಸ್ವಿನಿ ಅನಂತಕುಮಾರ್ ಮಾರ್ಮಿಕ ನುಡಿ

    ಬೆಂಗಳೂರು: ಮಹಿಳೆಯಾಗಿ ಕಣ್ಣೀರಿಡುವುದು ಬೇಡ. ಮಹಿಳೆಯಲ್ಲಿ ಬೇರೆಯವರ ಕಣ್ಣೊರೆಸುವ ಶಕ್ತಿ ಇದೆ ಎಂದು ದಿವಂಗತ, ಕೇಂದ್ರ ಸಚಿವ ಅನಂತಕುಮಾರ್ ಪತ್ನಿ ತೇಜಸ್ವಿನಿ ಅವರು ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅನಂತಕುಮಾರ್ ಸ್ಪರ್ಧಿಸೋದು ಬಹುತೇಕ ಖಚಿತವಾಗಿತ್ತು. ಆದ್ರೆ ಕೊನೆ ಗಳಿಗೆಯಲ್ಲಿ ತೇಜಸ್ವಿ ಸೂರ್ಯರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಸುವ ವೇಳೆಯೂ ಸ್ಥಳೀಯ ಬಿಜೆಪಿ ಮುಖಂಡರು ಗೈರಾಗುವ ಮೂಲಕ ಅಸಮಾಧಾನ ಹೊರಹಾಕಿದ್ದರು. ಅಭ್ಯರ್ಥಿ ಎಂದು ಘೋಷಣೆಯಾದ ಬಳಿಕ ತೇಜಸ್ವಿನಿ ಅನಂತಕುಮಾರ್ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು.

    ತಮ್ಮ ನಿವಾಸಕ್ಕೆ ಆಗಮಿಸಿದ ತೇಜಸ್ವಿ ಅವರಿಗೆ ಮಾಧ್ಯಮಗಳ ಮುಂದೆ ಹೇಗಿರಬೇಕು ಎಂಬ ಪ್ರಬುದ್ಧತೆಯ ಮಾತುಗಳನ್ನು ಹೇಳುವ ಮೂಲಕ ಕುಟುಕಿದರು. ಪಕ್ಷದ ತೀರ್ಮಾನಕ್ಕೆ ಬದ್ಧಳಾಗಿದ್ದು, ತೇಜಸ್ವಿ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಖಚಿತಪಡಿಸಿದರು.

    ತೇಜಸ್ವಿನಿ ಅವರ ಟ್ವೀಟ್‍ಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು, ಮಹಿಳೆಯರಲ್ಲಿ ಕಣ್ಣೀರು ತರಿಸುವ ಮೂರ್ಖರು ಇದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕಿದೆ. ನೀವು ಗೆದ್ದಾಗಿದೆ, ಸಾಧಕಿಯ ಅನುಭವದ ಮಾತು ಎಂದು ಬರೆದಿದ್ದಾರೆ. ಇನ್ನು ಕೆಲವರು ಮುಂದಿನ ದಿನಗಳಲ್ಲಿ ಒಳ್ಳೆಯ ಸ್ಥಾನಮಾನ ಸಿಗಲಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

  • ಸಮಾಜದಲ್ಲಿ ವಿಷ ಬೀಜ ಬಿತ್ತುವ ವ್ಯಕ್ತಿಗೆ ಬಿಜೆಪಿ ಟಿಕೆಟ್ ಕೊಟ್ಟಿದ್ದು ದುರಂತ: ಕೃಷ್ಣಬೈರೇಗೌಡ

    ಸಮಾಜದಲ್ಲಿ ವಿಷ ಬೀಜ ಬಿತ್ತುವ ವ್ಯಕ್ತಿಗೆ ಬಿಜೆಪಿ ಟಿಕೆಟ್ ಕೊಟ್ಟಿದ್ದು ದುರಂತ: ಕೃಷ್ಣಬೈರೇಗೌಡ

    ಬೆಂಗಳೂರು: ತೇಜಸ್ವಿನಿಯಂತಹ ಸುಸಂಸ್ಕೃತರಿಗೆ ಟಿಕೆಟ್ ಕೊಡದೇ ಸಮಾಜದಲ್ಲಿ ವಿಷ ಬೀಜ ಬಿತ್ತುವ ವ್ಯಕ್ತಿಗೆ ಬಿಜೆಪಿ ಟಿಕೆಟ್ ಕೊಟ್ಟಿದ್ದು ದುರಂತ ಎಂದು ಬೆಂಗಳೂರು ಉತ್ತರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಬೈರೇಗೌಡ ಹೇಳಿದ್ದಾರೆ.

    ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರು ಅಭ್ಯರ್ಥಿ ಆಗುತ್ತಾರೆ ಎಂದು ನಾವು ಅಂದುಕೊಂಡಿದ್ದೇವು. ಏಕೆಂದರೆ ಈ ರಾಜ್ಯದಲ್ಲಿ ಅನಂತಕುಮಾರ್ ಅವರ ಕೊಡುಗೆ ಇದೆ. ಅನಂತಕುಮಾರ್ ಹಿರಿಯ ನಾಯಕರು. ಅವರು ಸದಾಕಾಲ ದೆಹಲಿಯಲ್ಲಿ ಕನ್ನಡದ ಧ್ವನಿಯಾಗಿ ಕೆಲಸ ಮಾಡಿದ್ದಾರೆ. ತೇಜಸ್ವಿನಿ ಅವರು ಕೂಡ ಸಾರ್ವಜನಿಕ ಜೀವನದಲ್ಲಿ ಸಂಘ – ಸಂಸ್ಥೆ ಮುಖಾಂತರ, ಕಾಲೇಜಿನ ಮುಖಾಂತರ ಬಹಳ ಆಳವಾಗಿ ತೊಡಗಿಸಿಕೊಂಡವರು. ಅವರಿಗೆ ಟಿಕೆಟ್ ಸಿಗುತ್ತೆ ಎಂದು ಭರವಸೆ ಇಟ್ಟುಕೊಂಡಿದ್ದೇವೆ ಎಂದರು.

    ಈಗ ಅವರಂತಹ ಒಳ್ಳೆಯ ಹಿನ್ನೆಲೆ ಇರುವವರನ್ನು ಬಿಟ್ಟು ಎಲ್ಲೋ ಒಂದು ಕಡೆ ಸಮಾಜದಲ್ಲಿ ದ್ವೇಷದ ಬೀಜವನ್ನು ಬಿತ್ತನೆ ಮಾಡುವಂತ ಅಭ್ಯರ್ಥಿಗೆ ಸುಸಂಸಂಸ್ಕೃವಾದ ಬೆಂಗಳೂರು ದಕ್ಷಿಣವನ್ನು ನೀಡಲಾಗಿದೆ. ತೇಜಸ್ವಿ ಸೂರ್ಯ ಅವರಿಗೆ ಬೆಂಗಳೂರು ದಕ್ಷಿಣದಲ್ಲಿ ಕೊಟ್ಟಿರುವುದು ಆ ಭಾಗದ ಜನತೆಗೆ ಇಷ್ಟವಾಗುವುದಿಲ್ಲ ಎಂಬುದು ನನ್ನ ಅನಿಸಿಕೆ. ಬೆಂಗಳೂರಲ್ಲಿ 4 ಕ್ಷೇತ್ರ ಇದೆ. ಕೇಂದ್ರ, ಉತ್ತರ, ದಕ್ಷಿಣ ಹಾಗೂ ಗ್ರಾಮೀಣ ಈ 4 ಕ್ಷೇತ್ರದಲ್ಲಿ ಜೆಡಿಎಸ್ – ಕಾಂಗ್ರೆಸ್ ಗೆಲ್ಲುವ ವಾತಾವಾರಣ ಕಂಡು ಬರುತ್ತಿದೆ ಎಂದರು.

    ಕಠಿಣವಾಗಿರುವ ಬೆಂಗಳೂರು ದಕ್ಷಿಣದಲ್ಲೂ ಸಹ ಕಾಂಗ್ರೆಸ್ ಗೆಲ್ಲಬಹುದು ಎಂಬ ಬದಲಾವಣೆ ಸಹ ಸೋಮವಾರದಿಂದ ಕಾಣಿಸುತ್ತಿದೆ. ಬೆಂಗಳೂರು ದಕ್ಷಿಣದಲ್ಲಿ ಬೆಜೆಪಿ ಆಯ್ಕೆ ಮಾಡಿದ ಅಭ್ಯರ್ಥಿ ಹಿನ್ನೆಲೆಯಲ್ಲಿ ನಾವು ನಾಲ್ಕು ಸ್ಥಾನ ಗೆಲ್ಲುವ ಅವಕಾಶ ಹೊಂದಿದ್ದೇವೆ. ನಮ್ಮ ಪಕ್ಷದ ವರಿಷ್ಠರು, ಜೆಡಿಎಸ್ ಪಕ್ಷದ ವರಿಷ್ಠರು, ನಮ್ಮ ಕ್ಷೇತ್ರದ ಶಾಸಕರು ನೀವೇ ಅಭ್ಯರ್ಥಿ ಆಗಬೇಕೆಂದು ಹೇಳಿದ್ದರು. ಅವರ ಭಾವನೆಗೆ ಬೆಲೆ ಕೊಟ್ಟು ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ತಿಳಿಸಿದರು.

    ನಾನು ಈ ಬಾರಿ ಸಚಿವನಾಗಬೇಕು ಎಂದು ಬಯಸಿರಲಿಲ್ಲ. ಆದರೂ ಪಕ್ಷ ನನ್ನನ್ನು ಸಚಿವರಾಗಿ ಆಯ್ಕೆ ಮಾಡಿತ್ತು. ಭಾರತದ ಸಂಸತ್‍ನಲ್ಲಿ ಒಬ್ಬ ಸದಸ್ಯನಾಗಿ ನಮ್ಮ ರಾಜ್ಯವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕರೆ ನನ್ನ ಪಾಲಿಗೆ ದೊಡ್ಡ ಗೌರವ. ಜನರು ಆಶಿರ್ವಾದ ಮಾಡಿದರೆ ನಾನು ಅದನ್ನು ಸ್ವೀಕರಿಸುತ್ತೇನೆ. ಅದನ್ನು ಬಿಟ್ಟು ಮಂತ್ರಿ ಸ್ಥಾನ ಬಿಟ್ಟು ಹೋಗಬೇಕೆಂಬ ಅನಿವಾರ್ಯ ಆ ಆಲೋಚನೆ ನನಗಿಲ್ಲ. ಭಾರತದ ಸಂಸತ್ ನಮ್ಮ ದೇಶದ ಧ್ವನಿ ಅದು. ಅಂತಹದರಲ್ಲಿ ನಾನು ಒಬ್ಬ ಸದಸ್ಯನಾಗುವ ಅವಕಾಶ ಸಿಕ್ಕರೆ ನನ್ನ ಜೀವನದಲ್ಲಿ ಒಂದು ದೊಡ್ಡ ಹೆಜ್ಜೆ. ಇದರಿಂದ ನನ್ನ ಜೀವನ ಸಾರ್ಥಕ ಆಗುತ್ತದೆ ಎಂದರು.

    ರಾಷ್ಟ್ರಮಟ್ಟದಲ್ಲಿ ಯಾರೇ ಬೆಳೆಯುತ್ತಿರುವ ಒಬ್ಬ ಸಾರ್ವಜನಿಕ ಜೀವನದ ಪ್ರತಿನಿಧಿಗೆ ರಾಷ್ಟ್ರಮಟ್ಟದ ಅನುಭವ ಸಿಕ್ಕರೆ ನಾವು ಇನ್ನು ಒಳ್ಳೆಯ ನಾಯಕರಾಗಿ ಬೆಳೆಯವ ಅನುಕೂಲ ಆಗಲಿದೆ. ನಾಳೆ ನಾವು ರಾಜ್ಯ ರಾಜಕಾರಣ ಮಾಡಬಹುದು. ಆದರೆ ನಾವು ದೆಹಲಿಯಲ್ಲಿ ಆ ಅನುಭವ ಪಡೆದರೆ ಇಡೀ ದೇಶದ ಸಮಗ್ರ ದೃಷ್ಟಿ ಭಾರತ ಸರ್ಕಾರ ಯಾವ ರೀತಿ ಕೆಲಸ ಮಾಡುತ್ತದೆ. ಒಂದೊಂದು ರಾಜ್ಯ, ಒಂದೊಂದು ಸಂಸ್ಕೃತಿ, ಒಂದೊಂದು ಭಾಷೆ, ಅವರ ವಿಚಾರ ಭಾವವನ್ನು ಅರ್ಥ ಮಾಡಿಕೊಂಡಿದರೆ, ನಮ್ಮ ವ್ಯಕ್ತಿತ್ವ ಸುಧಾರಣೆ ಆಗುತ್ತದೆ ಎಂದು ತಿಳಿಸಿದರು.

  • ಅನಂತ್​ಕುಮಾರ್​ ಗೆ ಅನ್ಯಾಯ – ಟಿಕೆಟ್ ಸಿಗದ್ದಕ್ಕೆ ತೇಜಸ್ವಿನಿ ಅಭಿಮಾನಿಗಳು ಆಕ್ರೋಶ

    ಅನಂತ್​ಕುಮಾರ್​ ಗೆ ಅನ್ಯಾಯ – ಟಿಕೆಟ್ ಸಿಗದ್ದಕ್ಕೆ ತೇಜಸ್ವಿನಿ ಅಭಿಮಾನಿಗಳು ಆಕ್ರೋಶ

    ಬೆಂಗಳೂರು: ಲೋಕಸಭೆ ಚುನಾವಣೆಗೆ ಬೆಂಗಳೂರು ದಕ್ಷಿಣದಿಂದ ದಿವಂಗತ ಅನಂತ್​ಕುಮಾರ್ ಅವರ ಪತ್ನಿ ತೇಜಸ್ವಿನಿಗೆ ಬಿಜೆಪಿಯಿಂದ ಟಿಕೆಟ್ ನೀಡುವುದಾಗಿ ಹೇಳಿ, ಕೊನೆಗೆ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿರುವುದಕ್ಕೆ, ತೇಜಸ್ವಿನಿ ಅವರ ಅಭಿಮಾನಿಗಳು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ತೇಜಸ್ವಿನಿ ಅವರ ನಿವಾಸ ಮುಂದೆ ಮಾಧ್ಯಮಗಳ ಜೊತೆ ಮಾತನಾಡಿದ ಅಭಿಮಾನಿಗಳು, ಅನಂತ್​ಕುಮಾರ್ ಅವರು ಕೇಂದ್ರದಲ್ಲಿ ಉತ್ತಮ ಆಡಳಿತ ಮಾಡಿ ರಾಜ್ಯಕ್ಕೆ ಹಾಗೂ ದೇಶಕ್ಕೆ ಹೆಸರನ್ನು ತಂದುಕೊಟ್ಟಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್ ಲೋಕಸಭೆ ಚುನಾವಣೆಗೆ ಅವರ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ನೀಡುವುದಾಗಿ ತಿಳಿಸಿ, ಕೊನೆ ಕ್ಷಣದಲ್ಲಿ ಮತ್ತೊಬ್ಬರನ್ನು ಅಭ್ಯರ್ಥಿಯಾಗಿ ಮಾಡಿರುವುದು ತಪ್ಪು. ಇದು ಅನ್ಯಾಯ. ಪಕ್ಷಕ್ಕೊಸ್ಕರ ದುಡಿದ ಪ್ರಭಾವಿ ನಾಯಕನ ಪತ್ನಿಗೆ ಟಿಕೆಟ್ ನೀಡದಿರುವುದು ಮೋಸ ಎಂದು ಕಿಡಿಕಾರಿದರು. ಇದನ್ನು ಓದಿ:ಮೂರು ದಿನದ ಹಿಂದೆ ತೇಜಸ್ವಿ ಸೂರ್ಯಗೆ ಮನವಿ ಮಾಡಿದ್ದ ತೇಜಸ್ವಿನಿ!

    ರಾಜ್ಯಕ್ಕೆ ಒಳ್ಳೆದನ್ನ ಮಾಡಿದ್ದು ನೀವೊಬ್ಬರೆ ಎಂದು ಅನಂತ್​ಕುಮಾರ್ ಅವರಿಗೆ ಹಾಡಿ ಹೊಗಳಿ ಈಗ ಅವರ ಮನೆಯವರಿಗೆ ಮೋಸ ಮಾಡುತ್ತಿರುವುದು ಕಾಣದ ಕೈಗಳ ಕೈವಾಡ. ತೇಜಸ್ವಿನಿ ಅವರು ಯಾವಾಗಲು ದೇಶ ಮೊದಲು, ಪಕ್ಷ ಹಾಗೂ ವ್ಯಕ್ತಿ ಅದರನಂತರ ಎಂದು ಹೇಳುತ್ತಾರೆ. ಅದಮ್ಯ ಚೇತನ ಎಂಬ ಸಾಮಾಜಿಕ ಸಂಸ್ಥೆ ಮೂಲಕ ಕಳೆದ ನಾಲ್ಕು ವರ್ಷಗಳಿಂದ ಒಳ್ಳೆಯ ಕೆಲಸ ಮಾಡಿಕೊಂಡು ಬಂದಿದ್ದಾರೆ. ಆದರೆ ಯಾವತ್ತು ಅವರು ಇದನ್ನೆಲ್ಲ ತೋರಿಸಿಕೊಂಡಿಲ್ಲ. ಅದಮ್ಯ ಚೇತನ ಸಂಸ್ಥೆ ಜೊತೆ ಹೊರಗೆಲ್ಲೂ ಕಾಣಿಸಿಕೊಂಡಿಲ್ಲ. ಇನ್ನು ಮುಂದಾದರು ಅವರು ನಮ್ಮೊಂದಿಗೆ ಕಾಣಿಸಿಕೊಳ್ಳಬೇಕು. ಆಗ ಅವರ ಕೆಲಸಗಳು ಜನರಿಗೆ ತಿಳಿಯುತ್ತದೆ ಎಂದು ಮನವಿ ಮಾಡಿದರು. ಇದನ್ನು ಓದಿ:ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯಗೆ ಬಿಜೆಪಿ ಟಿಕೆಟ್

    ಬಳಿಕ ಕಳೆದ 30 ವರ್ಷಗಳಿಂದ ತೇಜಸ್ವಿನಿ ಅವರು ಅನಂತ್​ಕುಮಾರ್ ಅವರ ಜೊತೆಗೂಡಿ ಜನಪರ ಕೆಲಸ ಮಾಡಿದ್ದಾರೆ. ಆದರೆ ಅದ್ಯಾವುದು ಬೆಳಕಿಗೆ ಬಂದಿಲ್ಲ. ತೆರೆಮರೆಯಲ್ಲಿದ್ದುಕೊಂಡೆ ತೇಜಸ್ವಿನಿ ಅವರು ಸಾಕಷ್ಟು ಸಾಮಾಜಿಕ ಕೆಲಸಗಳನ್ನು ಮಾಡಿದ್ದಾರೆ. ಅದ್ಯಾವುದಕ್ಕೂ ಇಗ ಬೆಲೆ ಇಲ್ಲದಂತಾಗಿದೆ. ಬಿಜೆಪಿ ತೇಜಸ್ವಿನಿ ಅವರಿಗೆ ಟಿಕೆಟ್ ನೀಡಿ ಇನ್ನಷ್ಟು ಜನಪರ ಕೆಲಸಗಳನ್ನು ಮಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.