Tag: ತೇಜಸ್ವಿನಿ ಅನಂತ್ ಕುಮಾರ್

  • ಅನಂತ್‌ಕುಮಾರ್‌ ತನ್ನನ್ನು ಬೆಳೆಸಿದ ಕಥೆಯನ್ನು ಬಿಚ್ಚಿಟ್ಟ ತೇಜಸ್ವಿ ಸೂರ್ಯ!

    ಅನಂತ್‌ಕುಮಾರ್‌ ತನ್ನನ್ನು ಬೆಳೆಸಿದ ಕಥೆಯನ್ನು ಬಿಚ್ಚಿಟ್ಟ ತೇಜಸ್ವಿ ಸೂರ್ಯ!

    ಬೆಂಗಳೂರು: ದಿವಂಗತ ಅನಂತ್ ಕುಮಾರ್ ಅವರು ಬೆಳೆಸಿದ ಹುಡುಗ ನಾನು. ತೇಜಸ್ವಿನಿ ಅನಂತ್ ಕುಮಾರ್ ಅವರು ನನ್ನನ್ನು ಬೆಂಬಲಿಸುತ್ತಾರೆ. ಅಲ್ಲದೆ ಪ್ರೋತ್ಸಾಹ ಕೂಡ ನೀಡಲಿದ್ದಾರೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು ಅನಂತ್ ಕುಮಾರ್ ಜೊತೆಗಿನ ಸಂಬಂಧದ ಬಗ್ಗೆ ಮೆಲುಕು ಹಾಕಿಕೊಂಡರು. ತೇಜಸ್ವಿನಿ ಅನಂತ್ ಕುಮಾರ್ ಅವರು ಆಶೀರ್ವಾದ ಹಾಗೂ ಸಂಪೂರ್ಣ ಬೆಂಬಲ ನೀಡುವವರಿದ್ದಾರೆ. ಅನಂತ್ ಕುಮಾರ್ ಅವರು ಹೈಸ್ಕೂಲ್ ದಿವಸದಿಂದ ನನ್ನನ್ನು ಬೆಳೆಸಿದವರು. ಅಂತಹ ಮೇರು ನಾಯಕರು ಇದ್ದಂತಹ ಕ್ಷೇತ್ರದಲ್ಲಿ ನನಗೆ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ. ಹೀಗಾಗಿ ಎಲ್ಲರು ಸಹಕರಿಸುವಂತೆ ಮತದಾರರಲ್ಲಿ ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು.

    ನಾನು ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದಾಗ ಅದಮ್ಯ ಚೇತನ ಕಾರ್ಯಕ್ರಮದಲ್ಲಿ ನನ್ನನ್ನು ಗುರುತಿಸುತ್ತಿದ್ದರು. ಕಾರ್ಯಕ್ರಮದ ನಿರೂಪಣೆ ಮಾಡಲು ಅವಕಾಶ ನೀಡುತ್ತಿದ್ದರು. ಅಷ್ಟು ಮಾತ್ರವಲ್ಲದೇ ಯಾವುದಾದರೂ ಕಾರ್ಯಕ್ರಮದಲ್ಲಿ 5-10 ನಿಮಿಷ ಮಾತನಾಡಲು ಅವಕಾಶ ನೀಡುವ ಮೂಲಕ ನನ್ನನ್ನು ಬೆಳೆಸಿದ್ದಾರೆ ಅಂದ್ರು.

    ಅಡ್ವಾಣಿಯವರ ಜನಚೇತನ ಯಾತ್ರೆ ನಡೆಯುತ್ತಿದ್ದ ಸಂದರ್ಭದಲ್ಲಿ, ಕಾರ್ಯಕ್ರಮಕ್ಕೆ ನನ್ನನ್ನು ಕಳುಹಿಸಿ ಎಂದು ನಾನು ಅನಂತ್ ಕುಮಾರ್ ಅವರನ್ನು ಬಹಳ ಕಾಡಿದ್ದೆನು. ಹೀಗಾಗಿ ಸಾಹೆಬ್ರು ನನ್ನನ್ನು ಜನಚೇತನ ಯಾತ್ರೆಗೆ ಕಳುಹಿಸಿದ್ದರು. ಆವಾಗಿಂದಲೇ ಅವರು ನನ್ನನ್ನು ಬೆಳೆಸಿಕೊಂಡು ಬಂದಿದ್ದಾರೆ ಎಂದು ಹೇಳುವ ಮೂಲಕ ಹಳೆಯ ನೆನಪನ್ನು ಮೆಲುಕು ಹಾಕಿದ್ರು.

    ನಮ್ಮ ತಾಯಿಯಂತೆ ಅವರು ಕೂಡ ನನ್ನನ್ನು ಬೆಳೆಸಿಕೊಂಡು ಬಂದಿದ್ದಾರೆ ಎಂದು ಹಲವು ಬಾರಿ ಹೇಳಿದ್ದೆ. ಹೀಗಾಗಿ ಈ ಹಿಂದೆ ತೇಜಸ್ವಿನಿ ಅನಂತ್ ಕುಮಾರ್ ಅವರು ಅಭ್ಯರ್ಥಿ ಎಂದು ಹೆಸರು ಕಳುಹಿಸಿದ್ರೋ, ಆವಾಗ ಟ್ವೀಟ್ ಮಾಡುವ ಮೂಲಕ ಬಹಳ ಸಂತೋಷದ ಸಂಗತಿ. ಅಂಥವರು ಇಲ್ಲಿಗೆ ನಾಯಕರಾಗಬೇಕು ಎಂದು ಹೇಳಿದ್ದೆ. ಆದ್ರೆ ಪಕ್ಷದ ಹೈಕಮಾಂಡ್ ಯಾವ ದೃಷ್ಟಿಯಿಂದ ಈ ರೀತಿಯ ನಿರ್ಧಾರ ತೆಗೆದುಕೊಂಡಿತೆಂದು ಗೊತ್ತಿಲ್ಲ. ಅವರು ಅಭ್ಯರ್ಥಿಯಾಗ್ತಿದ್ರೆ ಖುಷಿ ಪಡುತ್ತಿದ್ದರು. ನಾನು ಕೂಡ ನಮ್ಮ ತಾಯಿ ಅಭ್ಯರ್ಥಿಯಾಗುತ್ತಿದ್ರೆ ಎಷ್ಟು ಖುಷಿ ಪಡುತ್ತಿದ್ದೆನೋ ಅಷ್ಟೇ ಖುಷಿ ಅವರು ಕ್ಯಾಂಡಿಡೇಟ್ ಆದಾಗಲೂ ಖುಷಿಯಾಗುತ್ತಿದ್ದೆ. ಆದ್ರೂ ಅವರು ಈ ಸಂದರ್ಭದಲ್ಲಿ ನನಗೆ ಪ್ರೋತ್ಸಾಹ ಕೊಡುವವರಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

    ಪಕ್ಷದ ಅಧ್ಯಕ್ಷರು ಹೋಗಿ ಗೆದ್ದು ಬಾ ಎಂದು ನನಗೆ ಇಂದು ಸಂಪೂರ್ಣ ಆಶೀರ್ವಾದ ಮಾಡಿದರು. ಒಬ್ಬ ಕಾರ್ಯಕರ್ತನನ್ನು ಗುರುತಿಸಿ, ಪಕ್ಷದ ಬೆಳವಣಿಗೆಗೆ ಹಾಗೂ ಪಕ್ಷಕ್ಕೆ ಬಹಳ ಅವಕಾಶ ಆಗುತ್ತೆ. ಹೀಗಾಗಿ ಈ ಕಾರ್ಯಕರ್ತನನ್ನು ಬೆಳೆಸಬೇಕು ಎನ್ನುವ ದೃಷ್ಟಿಯಿಂದ ಪಕ್ಷ ಈ ನಿರ್ಧಾರ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವಕ್ಕೆ ಬಹಳ ಕೃತಜ್ಞತೆ ಸಲ್ಲಿಸುತ್ತೇನೆ. ಇಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ರು.

    ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ರಾಜ್ಯದ ನಾಯಕರಾದ ಯಡಿಯೂರಪ್ಪ, ಅಶೋಕ್, ಸತೀಶ್ ರೆಡ್ಡಿ ಹಾಗೂ ಸೋಮಣ್ಣ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ರು.

  • ಮೂರು ದಿನದ ಹಿಂದೆ ತೇಜಸ್ವಿ ಸೂರ್ಯಗೆ ಮನವಿ ಮಾಡಿದ್ದ ತೇಜಸ್ವಿನಿ!

    ಮೂರು ದಿನದ ಹಿಂದೆ ತೇಜಸ್ವಿ ಸೂರ್ಯಗೆ ಮನವಿ ಮಾಡಿದ್ದ ತೇಜಸ್ವಿನಿ!

    ಬೆಂಗಳೂರು: ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರು ಮೂರು ದಿನಗಳ ಹಿಂದೆಯಷ್ಟೇ ರಾಜ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತೇಜಸ್ವಿ ಸೂರ್ಯ ಅವರನ್ನು ಭೇಟಿ ಮಾಡಿಕೊಂಡಿದ್ದರು.

    ತೇಜಸ್ವಿನಿ ಅನಂತ್ ಕುಮಾರ್ ಅವರು ಮೂರು ದಿನಗಳ ಹಿಂದೆ ಶಾಸಕ ರವಿಸುಬ್ರಮಣ್ಯ ಮನೆಗೆ ತೆರಳಿದ್ದರು. ಇದೇ ವೇಳೆ ರವಿಸುಬ್ರಮಣ್ಯ ಅಣ್ಣನ ಮಗ ರಾಜ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತೇಜಸ್ವಿ ಸೂರ್ಯ ಜೊತೆಯೂ ಮಾತುಕತೆ ನಡೆಸಿದ್ದರು.

    ಇದೇ ಸಂದಂರ್ಭದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರು ಬಿಜೆಪಿ ರಾಷ್ಟ್ರೀಯ ಸಾಮಾಜಿಕ ಜಾಲತಾಣದ ಸದಸ್ಯರಾಗಿರುವ ತೇಜಸ್ವಿ ಸೂರ್ಯ ಅವರ ಬಳಿಕ ನಮ್ಮ ಪ್ರಚಾರ ಹೆಚ್ಚು ಮಾಡಪ್ಪ ಎಂದು ಮನವಿ ಮಾಡಿಕೊಂಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಬಿಜೆಪಿ ಹೈಕಮಾಂಡ್ ತೇಜಸ್ವಿನಿಗೆ ಟಿಕೆಟ್ ನೀಡದೇ ತೇಜಸ್ವಿ ಸೂರ್ಯ ಅವರಿಗೆ ನೀಡಿದೆ.

    ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಮತ್ತು ತೇಜಸ್ವಿ ಸೂರ್ಯ ಮಧ್ಯೆ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆಯ ಮಧ್ಯೆ ಬಿಜೆಪಿ ಹೈಕಮಾಂಡ್ ರವಿಸುಬ್ರಹ್ಮಣ್ಯ ಅವರಿಗೆ ಟಿಕೆಟ್ ನೀಡಲು ಮುಂದಾಗಿತ್ತು. ಆದರೆ ರವಿ ಸುಬ್ರಹ್ಮಣ್ಯ ಟಿಕೆಟ್ ಆಫರ್ ನಿರಾಕರಿಸಿದ ಹಿನ್ನೆಲೆಯಲ್ಲಿ ಅವರ ಅಣ್ಣನ ಮಗನಾದ ತೇಜಸ್ವಿ ಸೂರ್ಯ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿದೆ.

    ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದ ಬಳಿಕ ಈ ಕ್ಷೇತ್ರವನ್ನು ಅವರ ಪತ್ನಿ ತೇಜಸ್ವಿನಿ ಅವರಿಗೆ ನೀಡಲು ಪಕ್ಷದ ಮುಖಂಡರು ಮುಂದಾಗಿದ್ದರು. ಈ ಸಂಬಂಧ ದಕ್ಷಿಣ ಭಾಗದ ಬಿಜೆಪಿ ಶಾಸಕರು, ಮುಖಂಡರ ಸಭೆ ನಡೆಸಿದ ಬಳಿಕ ರಾಜ್ಯ ನಾಯಕರು ಹೈಕಮಾಂಡಿಗೆ ತೇಜಸ್ವಿನಿ ಅವರ ಹೆಸರನ್ನು ಶಿಫಾರಸು ಮಾಡಿದ್ದರು.

  • ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯಗೆ ಬಿಜೆಪಿ ಟಿಕೆಟ್

    ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯಗೆ ಬಿಜೆಪಿ ಟಿಕೆಟ್

    ಬೆಂಗಳೂರು: ಕುತೂಹಲ ಕೆರಳಿಸಿ ಸುದ್ದಿಯಾಗಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ರಾಜ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತೇಜಸ್ವಿ ಸೂರ್ಯ ಕಣಕ್ಕೆ ಇಳಿಯಲಿದ್ದಾರೆ.

    ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಮತ್ತು ತೇಜಸ್ವಿ ಸೂರ್ಯ ಮಧ್ಯೆ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆಯ ಮಧ್ಯೆ ಬಿಜೆಪಿ ಹೈಕಮಾಂಡ್ ರವಿಸುಬ್ರಹ್ಮಣ್ಯ ಅವರಿಗೆ ಟಿಕೆಟ್ ನೀಡಲು ಮುಂದಾಗಿತ್ತು. ಆದರೆ ರವಿ ಸುಬ್ರಹ್ಮಣ್ಯ ಟಿಕೆಟ್ ಆಫರ್ ನಿರಾಕರಿಸಿದ ಹಿನ್ನೆಲೆಯಲ್ಲಿ ಅವರ ಅಣ್ಣನ ಮಗನಾದ ತೇಜಸ್ವಿ ಸೂರ್ಯ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿದೆ.

    ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದ ಬಳಿಕ ಈ ಕ್ಷೇತ್ರವನ್ನು ಅವರ ಪತ್ನಿ ತೇಜಸ್ವಿನಿ ಅವರಿಗೆ ನೀಡಲು ಪಕ್ಷದ ಮುಖಂಡರು ಮುಂದಾಗಿದ್ದರು. ಈ ಸಂಬಂಧ ದಕ್ಷಿಣ ಭಾಗದ ಬಿಜೆಪಿ ಶಾಸಕರು, ಮುಖಂಡರ ಸಭೆ ನಡೆಸಿದ ಬಳಿಕ ರಾಜ್ಯ ನಾಯಕರು ಹೈಕಮಾಂಡಿಗೆ ತೇಜಸ್ವಿನಿ ಅವರ ಹೆಸರನ್ನು ಶಿಫಾರಸು ಮಾಡಿದ್ದರು.

    ಅನಂತ್ ಕುಮಾರ್ ಅವರ ಸತತ ಜಯದಿಂದ ಬಿಜೆಪಿಯ ಭದ್ರಕೋಟೆ ಆಗಿರುವ ಈ ಕ್ಷೇತ್ರದಲ್ಲಿ ಸುಲಭವಾಗಿಯೇ ಅಭ್ಯರ್ಥಿ ಆಯ್ಕೆಯನ್ನು ಬಿಜೆಪಿ ಮಾಡುತ್ತದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಈ ಮಧ್ಯೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರು ತೇಜಸ್ವಿನಿ ಅವರಿಗೆ ಟಿಕೆಟ್ ನೀಡಲು ಆರ್‍ಎಸ್‍ಎಸ್ ಆಕ್ಷೇಪ ವ್ಯಕ್ತಪಡಿಸುತ್ತದೆ. ಹೀಗಾಗಿ ಪಕ್ಷದ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ತೇಜಸ್ವಿಸೂರ್ಯ ಅವರನ್ನು ಕಣಕ್ಕೆ ಇಳಿಸಬಹುದು ಎಂದು ಹೈಕಮಾಂಡ್ ಮಟ್ಟದವರಿಗೆ ಸಲಹೆ ನೀಡಿದ್ದಾರೆ. ಈ ಸಲಹೆಯನ್ನು ಪರಿಗಣಿಸಿದ ಹೈಕಮಾಂಡ್ ಈಗ ತೇಜಸ್ವಿನಿ ಅವರನ್ನು ಇಳಿಸಬೇಕೋ ಅಥವಾ ತೇಜಸ್ವಿ ಸೂರ್ಯ ಅವರನ್ನು ಇಳಿಸಬೇಕೋ ಎನ್ನುವ ಗೊಂದಲದಲ್ಲಿತ್ತು. ಕೊನೆಗೆ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ಸಿಕ್ಕಿದ್ದು, ಮೂಲಕ ಬಿಎಲ್ ಸಂತೋಷ್ ಗೆದ್ದಿದ್ದಾರೆ.

    ಜಯನಗರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಹಾಲಿ ಶಾಸಕರಾಗಿದ್ದ ವಿಜಯ್ ಕುಮಾರ್ ಅವರು ಮೃತಪಟ್ಟಿದ್ದರು. ಹೀಗಾಗಿ ನಂತರ ನಡೆದ ಚುನಾವಣೆಯಲ್ಲಿ ವಿಜಯ್ ಕುಮಾರ್ ಅವರ ಸಹೋದರ ಪ್ರಹ್ಲಾದ್ ಬಾಬು ಅವರನ್ನು ಬಿಜೆಪಿ ಕಣಕ್ಕೆ ಇಳಿಸಿತ್ತು. ಅನುಕಂಪದ ಅಲೆಯಲ್ಲಿ ಪ್ರಹ್ಲಾದ್ ಬಾಬು ಅವರಿಗೆ ಜಯ ಸಿಗಬಹುದು ಎಂದು ಎಣಿಸಿ ಟಿಕೆಟ್ ನೀಡಿದ್ದರೂ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಸೌಮ್ಯಾ ರೆಡ್ಡಿ ಜಯಗಳಿಸಿದ್ದರು. ಹೀಗಾಗಿ ಯಾವಾಗಲೂ ಅನುಕಂಪ ಕೆಲಸ ಮಾಡುವುದಿಲ್ಲ. ಪಕ್ಷ ಸಂಘಟನೆಯ ದೃಷ್ಟಿಯಿಂದಾಗಿ ಕ್ಷೇತ್ರದಲ್ಲಿ ಗಟ್ಟಿ ಅಭ್ಯರ್ಥಿಯನ್ನು ಹಾಕಬೇಕು ಎನ್ನುವ ವಿಚಾರದ ಬಗ್ಗೆ ಚರ್ಚೆ ನಡೆದು ಹೈಕಮಾಂಡ್ ತೇಜಸ್ವಿನಿ ಅವರಿಗೆ ಟಿಕೆಟ್ ನಿರಾಕರಿಸಿದೆ ಎನ್ನಲಾಗಿದೆ.

     

    ಯಾರು ತೇಜಸ್ವಿ ಸೂರ್ಯ?
    ಕಾನೂನು ಪದವಿ ಓದಿರುವ ತೇಜಸ್ವಿ ಸೂರ್ಯ, ಪ್ರಸ್ತುತ ರಾಜ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಾಮಾಜಿಕ ಜಾಲತಾಣದ ಸದಸ್ಯರಾಗಿರುವ ಇವರು ಶಾಸಕ ರವಿ ಸುಬ್ರಮಣ್ಯ ಅವರ ಅಣ್ಣನ ಮಗ. ಆರ್ಎಸ್‍ಎಸ್‍ನ ಮೂಲಕ ರಾಜಕಾರಣಕ್ಕೆ ಎಂಟ್ರಿ ಕೊಟ್ಟ ಇವರು 4 ವರ್ಷಗಳ ಹಿಂದೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಾಧ್ಯಮಗಳ ಚರ್ಚಾ ಕಾರ್ಯಕ್ರಮದಲ್ಲಿ ಪಕ್ಷದ ಪರವಾಗಿ ಭಾಗವಹಿಸುತ್ತಿರುವ ಇವರು ಉತ್ತಮ ಭಾಷಣಕಾರರಾಗಿದ್ದಾರೆ.

  • ಬೆಂಗಳೂರು ದಕ್ಷಿಣದ ಟಿಕೆಟ್ ಯಾರಿಗೆ – ತೇಜಸ್ವಿನಿಗೋ, ತೇಜಸ್ವಿ ಸೂರ್ಯಗೋ?

    ಬೆಂಗಳೂರು ದಕ್ಷಿಣದ ಟಿಕೆಟ್ ಯಾರಿಗೆ – ತೇಜಸ್ವಿನಿಗೋ, ತೇಜಸ್ವಿ ಸೂರ್ಯಗೋ?

    ಬೆಂಗಳೂರು: ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್  ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಗೊಂದಲಕ್ಕೆ ಕಾರಣ ಎನ್ನುವ ಮಾತು ಬಿಜೆಪಿ ವಲಯದಿಂದ ಈಗ ಕೇಳಿ ಬಂದಿದೆ.

    ಹೌದು. ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದ ಬಳಿಕ ಈ ಕ್ಷೇತ್ರವನ್ನು ಅವರ ಪತ್ನಿ ತೇಜಸ್ವಿನಿ ಅವರಿಗೆ ನೀಡಲು ಪಕ್ಷದ ಮುಖಂಡರು ಮುಂದಾಗಿದ್ದರು. ಈ ಸಂಬಂಧ ದಕ್ಷಿಣ ಭಾಗದ ಬಿಜೆಪಿ ಶಾಸಕರು, ಮುಖಂಡರ ಸಭೆ ನಡೆಸಿದ ಬಳಿಕ ರಾಜ್ಯ ನಾಯಕರು ಹೈಕಮಾಂಡಿಗೆ ತೇಜಸ್ವಿನಿ ಅವರ ಹೆಸರನ್ನು ಶಿಫಾರಸು ಮಾಡಿದ್ದರು.

    ಅನಂತ್ ಕುಮಾರ್ ಅವರ ಸತತ ಜಯದಿಂದ ಬಿಜೆಪಿಯ ಭದ್ರಕೋಟೆ ಆಗಿರುವ ಈ ಕ್ಷೇತ್ರದಲ್ಲಿ ಸುಲಭವಾಗಿಯೇ ಅಭ್ಯರ್ಥಿ ಆಯ್ಕೆಯನ್ನು ಬಿಜೆಪಿ ಮಾಡುತ್ತದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಬಿಜೆಪಿ ತನ್ನ ಐದು ಪಟ್ಟಿಯನ್ನು ಬಿಡುಗಡೆ ಮಾಡಿದರೂ ಬೆಂಗಳೂರು ದಕ್ಷಿಣದ ಅಭ್ಯರ್ಥಿಯನ್ನು ಘೋಷಿಸದೇ ಕುತೂಹಲ ಮೂಡಿಸಲು ಕಾರಣ ಬಿಎಲ್ ಸಂತೋಷ್ ಕಾರಣ ಎನ್ನುವ ಮಾತು ಪಕ್ಷದ ಮೂಲದಿಂದ ತಿಳಿದು ಬಂದಿದೆ.

    ತೇಜಸ್ವಿನಿ ಅವರಿಗೆ ಟಿಕೆಟ್ ನೀಡಲು ಆರ್‍ಎಸ್‍ಎಸ್ ಆಕ್ಷೇಪ ವ್ಯಕ್ತಪಡಿಸುತ್ತದೆ. ಹೀಗಾಗಿ ಪಕ್ಷದ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ತೇಜಸ್ವಿಸೂರ್ಯ ಅವರನ್ನು ಕಣಕ್ಕೆ ಇಳಿಸಬಹುದು ಎಂದು ಹೈಕಮಾಂಡ್ ಮಟ್ಟದವರಿಗೆ ಸಲಹೆ ನೀಡಿದ್ದಾರೆ. ಈ ಸಲಹೆಯನ್ನು ಪರಿಗಣಿಸಿದ ಹೈಕಮಾಂಡ್ ಈಗ ತೇಜಸ್ವಿನಿ ಅವರನ್ನು ಇಳಿಸಬೇಕೋ ಅಥವಾ ತೇಜಸ್ವಿ ಸೂರ್ಯ ಅವರನ್ನು ಇಳಿಸಬೇಕೋ ಎನ್ನುವ ಗೊಂದಲದಲ್ಲಿದೆ.

    ತೇಜಸ್ವಿನಿ ಹೆಸರನ್ನು ಶಿಫರಾಸು ಮಾಡಿದ ಬಳಿಕ ಸಂತೋಷ್ ಅವರು ಮತ್ತೊಂದು ಹೆಸರನ್ನು ಪ್ರಸ್ತಾಪಿಸಿದ್ದಕ್ಕೆ ರಾಜ್ಯ ನಾಯಕರು ಸಂತೋಷ್ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂದು ಬಿಜೆಪಿ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ಸಂತೋಷ್ ಅವರ ಪ್ರಸ್ತಾಪಕ್ಕೆ ಕೆಲ ಬಿಜೆಪಿ ನಾಯಕರು ಸಹಮತವನ್ನೂ ಸೂಚಿಸಿದ್ದಾರೆ ಎನ್ನಲಾಗಿದೆ. ಜಯನಗರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಹಾಲಿ ಶಾಸಕರಾಗಿದ್ದ ವಿಜಯ್ ಕುಮಾರ್ ಅವರು ಮೃತಪಟ್ಟಿದ್ದರು. ಹೀಗಾಗಿ ನಂತರ ನಡೆದ ಚುನಾವಣೆಯಲ್ಲಿ ವಿಜಯ್ ಕುಮಾರ್ ಅವರ ಸಹೋದರ ಪ್ರಹ್ಲಾದ್ ಬಾಬು ಅವರನ್ನು ಬಿಜೆಪಿ ಕಣಕ್ಕೆ ಇಳಿಸಿತ್ತು. ಅನುಕಂಪದ ಅಲೆಯಲ್ಲಿ ಪ್ರಹ್ಲಾದ್ ಬಾಬು ಅವರಿಗೆ ಜಯ ಸಿಗಬಹುದು ಎಂದು ಎಣಿಸಿ ಟಿಕೆಟ್ ನೀಡಿದ್ದರೂ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಸೌಮ್ಯಾ ರೆಡ್ಡಿ ಜಯಗಳಿಸಿದ್ದರು. ಹೀಗಾಗಿ ಯಾವಾಗಲೂ ಅನುಕಂಪ ಕೆಲಸ ಮಾಡುವುದಿಲ್ಲ. ಪಕ್ಷ ಸಂಘಟನೆಯ ದೃಷ್ಟಿಯಿಂದಾಗಿ ಕ್ಷೇತ್ರದಲ್ಲಿ ಗಟ್ಟಿ ಅಭ್ಯರ್ಥಿಯನ್ನು ಹಾಕಬೇಕು ಎನ್ನುವ ವಿಚಾರದ ಬಗ್ಗೆ ಬಿಜೆಪಿ ನಾಯಕರು ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

    ಸಂಜೆ ಇತ್ಯರ್ಥ: ಸೋಮವಾರ ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಯಾರು ಎನ್ನುವುದು ಇಂದು ಸಂಜೆ ಇತ್ಯರ್ಥವಾಗಲಿದೆ ಎಂದು ತಿಳಿಸಿದ್ದಾರೆ.

  • ಬೆಂಗ್ಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಚ್ಚರಿಯ ಅಭ್ಯರ್ಥಿ

    ಬೆಂಗ್ಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಚ್ಚರಿಯ ಅಭ್ಯರ್ಥಿ

    ಬೆಂಗಳೂರು: 2019ರ ಲೋಕಸಭಾ ಚುನಾವಣೆಯಲ್ಲಿ ಭಾರೀ ಕುತೂಹಲವನ್ನು ಮೂಡಿಸಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ರಾಜ್ಯ ಸಭಾ ಸದಸ್ಯ ಬಿ.ಕೆ ಹರಿಪ್ರಸಾದ್‍ರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.

    ಸದ್ಯ ರಾಜ್ಯ ಸಭಾ ಸದಸ್ಯರಾಗಿರುವ ಹರಿಪ್ರಸಾದ್ ಅವರ ಅವಧಿ ಜೂನ್‍ಗೆ ಅಂತ್ಯವಾಗಲಿದೆ. ಬೆಂಗಳೂರು ಸೆಂಟ್ರಲ್ ನಿಂದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ದಕ್ಷಿಣ ಕ್ಷೇತ್ರದಲ್ಲಿ ಅವರಿಗೆ ಅವಕಾಶ ನೀಡಲಾಗಿದೆ. ಸೆಂಟ್ರಲ್ ಕ್ಷೇತ್ರದಲ್ಲಿ ರಿಜ್ವಾನ್ ಅರ್ಷದ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದಿಂದ 19 ಅಭ್ಯರ್ಥಿಗಳ ಹೆಸರು ರಾಜ್ಯದಲ್ಲಿ ಅಂತಿಮವಾಗಿದೆ.

    1999ರ ಚುನಾವಣೆಯಲ್ಲಿ ಹರಿಪ್ರಸಾದ್ ಅವರು ಅನಂತ್ ಕುಮಾರ್ ಅವರ ವಿರುದ್ಧ ಕಣಕ್ಕೆ ಇಳಿದಿದ್ದರು. ಆದರೆ ಅಂದು 3,44,107 ಮತ ಪಡೆದಿದ್ದ ಹರಿಪ್ರಸಾದ್, 4,10,161 ಮತ ಪಡೆದಿದ್ದ ಅನಂತ್ ಕುಮಾರ್ ಅವರ ವಿರುದ್ಧ ಸೋಲುಂಡಿದ್ದರು.

    ಇತ್ತ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರ ಹೆಸರು ಬಿಜೆಪಿಯಲ್ಲಿ ಚಾಲ್ತಿಯಲ್ಲಿದ್ದು, ಆದರೆ ಹೈಕಮಾಂಡ್ ಇದುವರೆಗೂ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಇದರ ನಡುವೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ ಮಾಡುವ ಬಗ್ಗೆ ಅಭಿಯಾನ ಆರಂಭವಾಗಿದೆ. ಆದರೆ ಮೋದಿ ಕರ್ನಾಟಕದಿಂದ ಸ್ಪರ್ಧೆ ಮಾಡುವ ಯಾವುದೇ ರೀತಿಯ ಚಿಂತನೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

    ಉಳಿದಂತೆ ಹುಬ್ಬಳ್ಳಿ-ಧಾರವಾಡ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಮವಾರ ಘೋಷಣೆ ಮಾಡುವ ಸಾಧ್ಯತೆ ಇದ್ದು, ಈ ಕುರಿತು ಅಂತಿಮ ನಿರ್ಧಾರ ರಾಹುಲ್ ಗಾಂಧಿ ನಾಳೆ ತೆಗೆದುಕೊಳ್ಳಲಿದ್ದಾರೆ. ಕ್ಷೇತ್ರದಲ್ಲಿ ಸದಾನಂದ ಡಂಗನವರ್ ಮತ್ತು ಶಾಕೀರ್ ಸನದಿ ಅವರ ನಡುವೆ ಟಿಕೆಟ್‍ಗಾಗಿ ಪೈಪೋಟಿ ನಡೆಯುತ್ತಿದೆ.

  • ಬೆಂಗಳೂರು ದಕ್ಷಿಣದ ಇನ್‍ಸೈಡ್ ಸ್ಟೋರಿ – ತೇಜಸ್ವಿನಿ ಜೊತೆ ಚರ್ಚೆಯಾಗುತ್ತಿದೆ ಎರಡು ಹೆಸರು

    ಬೆಂಗಳೂರು ದಕ್ಷಿಣದ ಇನ್‍ಸೈಡ್ ಸ್ಟೋರಿ – ತೇಜಸ್ವಿನಿ ಜೊತೆ ಚರ್ಚೆಯಾಗುತ್ತಿದೆ ಎರಡು ಹೆಸರು

    ಬೆಂಗಳೂರು: ಬಿಜೆಪಿ ತನ್ನ ಐದು ಪಟ್ಟಿಯನ್ನು ಬಿಡುಗಡೆ ಮಾಡಿದರೂ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಯಾರು ಎನ್ನುವುದನ್ನು ತಿಳಿಸದೇ ಸಸ್ಪೆನ್ಸ್ ಮೂಡಿಸಿದೆ.

    ಹೌದು. ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದ ಬಳಿಕ ಈ ಕ್ಷೇತ್ರವನ್ನು ಅವರ ಪತ್ನಿ ತೇಜಸ್ವಿನಿ ಅವರಿಗೆ ನೀಡಲು ಪಕ್ಷದ ಮುಖಂಡರು ಮುಂದಾಗಿದ್ದರು. ಈ ಸಂಬಂಧ ದಕ್ಷಿಣ ಭಾಗದ ಬಿಜೆಪಿ ಶಾಸಕರು, ಮುಖಂಡರ ಸಭೆ ನಡೆಸಿದ ಬಳಿಕ ರಾಜ್ಯ ನಾಯಕರು ಹೈಕಮಾಂಡಿಗೆ ತೇಜಸ್ವಿನಿ ಅವರ ಹೆಸರನ್ನು ಶಿಫಾರಸು ಮಾಡಿದ್ದರು.

    ಅನಂತ್ ಕುಮಾರ್ ಅವರ ಸತತ ಜಯದಿಂದ ಬಿಜೆಪಿಯ ಭದ್ರಕೋಟೆ ಆಗಿರುವ ಈ ಕ್ಷೇತ್ರದಲ್ಲಿ ಸುಲಭವಾಗಿಯೇ ಅಭ್ಯರ್ಥಿ ಆಯ್ಕೆಯನ್ನು ಬಿಜೆಪಿ ಮಾಡುತ್ತದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಬಿಜೆಪಿ ತನ್ನ ಐದು ಪಟ್ಟಿಯನ್ನು ಬಿಡುಗಡೆ ಮಾಡಿದರೂ ಬೆಂಗಳೂರು ದಕ್ಷಿಣದ ಅಭ್ಯರ್ಥಿಯನ್ನು ಘೋಷಿಸದೇ ಕುತೂಹಲ ಮೂಡಿಸಿದೆ.

    ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಪ್ರಧಾನಿ ಮೋದಿ ಸ್ಪರ್ಧಿಸುತ್ತಾರೆ ಎನ್ನುವ ಗಾಳಿ ಸುದ್ದಿ ಹಬ್ಬಿತ್ತು. ಈ ಸುದ್ದಿಗೆ ರಾಜ್ಯ ನಾಯಕರು ಪ್ರಧಾನಿ ಮೋದಿ ಈ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ನಿಲೇಕಣಿ ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದಿದ್ದ ಅನಂತ್ ಕುಮಾರ್- ಕೊನೆಯ ಹೈ ವೋಲ್ಟೇಜ್ ಚುನಾವಣಾ ಕಣ ಹೀಗಿತ್ತು

    ಯಾರು ಅಭ್ಯರ್ಥಿ?
    ತೇಜಸ್ವಿನಿ ಅನಂತಕುಮಾರ್ ಜತೆಗೆ ಇಬ್ಬರು ಹೆಸರನ್ನು ರಾಜ್ಯ ಬಿಜೆಪಿಯ ನಾಯಕರು ತೇಲಿಬಿಟ್ಟಿದ್ದಾರೆ. ಹಾಲಿ ಬಿಜೆಪಿ ಯುವಮೋರ್ಚಾದಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿ ಮತ್ತು ಉದ್ಯಮಿಯೊಬ್ಬರ ಪತ್ನಿಯೊಬ್ಬರ ಹೆಸರು ಮುನ್ನೆಲೆಗೆ ಬಂದಿದೆ. ಹೈಕಮಾಂಡ್ ಬಳಿ ಮೂರು ಹೆಸರುಗಳಿದ್ದು ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ.

    ಅನಂತ್ ಕುಮರ್ ಅವರು 6 ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿ ಜಯಗಳಿಸಿದ್ದರು. 2014ರ ಚುನಾವಣೆಯಲ್ಲಿ ಅನಂತ್ ಕುಮಾರ್ 2.28 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಅನಂತ್ ಕುಮಾರ್ 6,33,816 ಮತಗಳನ್ನು ಪಡೆದಿದ್ದರೆ, ನಿಲೇಕಣಿ 4,05,241 ಮತಗಳನ್ನು ಪಡೆದಿದ್ದರು.

    ಬೆಂಗಳೂರು ದಕ್ಷಿಣದಿಂದ ತೇಜಸ್ವಿನಿ ಅನಂತ್ ಕುಮಾರ್ ಸ್ಪರ್ಧೆ ನಿಶ್ಚಿತ ಎನ್ನಲಾಗಿತ್ತು. ಹೀಗಾಗಿ ಕಾಂಗ್ರೆಸ್ ನಿಂದ ಗೋವಿಂದರಾಜ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿತ್ತು. ಆದರೆ ಅಭ್ಯರ್ಥಿ ಘೋಷಣೆ ಮಾಡದೇ ಬಿಜೆಪಿ ತೀವ್ರ ಕುತೂಹಲ ಮೂಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಪ್ರಕಟಿಸಿಲ್ಲ.