Tag: ತೇಜಸ್ವಿನಿ ಗೌಡ

  • ಬಿಜೆಪಿಗೆ ಶಾಕ್ – ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ತೇಜಸ್ವಿನಿ ಗೌಡ ಕಾಂಗ್ರೆಸ್ ಸೇರ್ಪಡೆ

    ಬಿಜೆಪಿಗೆ ಶಾಕ್ – ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ತೇಜಸ್ವಿನಿ ಗೌಡ ಕಾಂಗ್ರೆಸ್ ಸೇರ್ಪಡೆ

    ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election) ಹೊತ್ತಲ್ಲಿ ಬಿಜೆಪಿಗೆ ಮತ್ತೊಂದು ಆಘಾತವುಂಟಾಗಿದೆ. ಇತ್ತೀಚಿಗಷ್ಟೇ ಎಂಎಲ್‌ಸಿ (MLC) ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ತೇಜಸ್ವಿನಿ ಗೌಡ (Tejaswini Gowda) ಇದೀಗ ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

    ದೆಹಲಿಯಲ್ಲಿ (New Delhi) ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ತೇಜಸ್ವಿನಿ ಗೌಡ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು. ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಕೆಲವು ದಿನಗಳ ಹಿಂದಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ವಿಧಾನಸೌಧದಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಇದನ್ನೂ ಓದಿ: ಕೇಜ್ರಿವಾಲ್‌ ಬಂಧನ ಬೆನ್ನಲ್ಲೇ ಮತ್ತೊಬ್ಬ ದೆಹಲಿ ಸಚಿವರಿಗೆ ಇ.ಡಿ ಸಮನ್ಸ್‌

    ಸುಮಾರು ಹತ್ತು ವರ್ಷಗಳ ಹಿಂದೆ ಕಾಂಗ್ರೆಸ್‌ನಿಂದ ಬಿಜೆಪಿಗೆ ವಲಸೆ ಬಂದಿದ್ದ ತೇಜಸ್ವಿನಿ ಅವರು ಈಗ ಮತ್ತೆ ಕಾಂಗ್ರೆಸ್‌ಗೆ ವಾಪಸ್ಸಾಗಿದ್ದಾರೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ತೇಜಸ್ವಿನಿ ಮೈಸೂರು ಅಥವಾ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಬಯಸಿದ್ದರು. ಟಿಕೆಟ್ ಸಿಗದೇ ಇದ್ದುದರಿಂದ ಬೇಸರಗೊಂಡು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಘರ್‌ವಾಪ್ಸಿ ಆಗಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌ ಏ.3 ರಂದು ನಾಮಪತ್ರ ಸಲ್ಲಿಕೆ

  • ಸೆಂಚುರಿ ಕ್ಲಬ್‍ನ್ನು ಪಾರ್ಕ್ ಜೋನ್‍ನಿಂದ ಹೊರಗಿಡಲು ಸಾಧ್ಯವಿಲ್ಲ: ಮುನಿರತ್ನ

    ಸೆಂಚುರಿ ಕ್ಲಬ್‍ನ್ನು ಪಾರ್ಕ್ ಜೋನ್‍ನಿಂದ ಹೊರಗಿಡಲು ಸಾಧ್ಯವಿಲ್ಲ: ಮುನಿರತ್ನ

    ಬೆಂಗಳೂರು: ಸೆಂಚುರಿ ಕ್ಲಬ್‍ನ್ನು ಯಾವುದೇ ಕಾರಣಕ್ಕೂ ಪಾರ್ಕ್ ಜೋನ್‍ನಿಂದ ಕೈ ಬಿಡುವ ಪ್ರಶ್ನೆ ಇಲ್ಲ ಎಂದು ತೋಟಗಾರಿಕೆ ಸಚಿವ ಮುನಿರತ್ನ ಸ್ಪಷ್ಟಪಡಿಸಿದ್ದಾರೆ.

    ವಿಧಾನ ಪರಿಷತ್‌ನಲ್ಲಿ ನಿಯಮ 330ರ ಅಡಿ ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ವಿಷಯ ಪ್ರಸ್ತಾಪ ಮಾಡಿದರು. ಇದಕ್ಕೆ ಉತ್ತರ ನೀಡಿದ ಸಚಿವರು, ಪಾರ್ಕ್ ಜೋನ್‍ನಿಂದ ಸೆಂಚುರಿ ಕ್ಲಬ್ ಹೊರಗಿಡಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಕೆಐಎಡಿಬಿ ವಶಪಡಿಸಿಕೊಂಡ ಜಮೀನಿಗೆ ಪರಿಹಾರ ಬೇಡ ಎಂದವರಿಗೆ ಅಭಿವೃದ್ಧಿಪಡಿಸಿದ ಭೂಮಿ: ನಿರಾಣಿ

    ಬೆಂಗಳೂರಿನ ಸೆಂಚುರಿ ಕ್ಲಬ್‍ನ್ನು ಪಾರ್ಕ್ ಜೋನ್ ನಿಂದ ಹೊರಗಿಟ್ಟಿಲ್ಲ. ಹೀಗಾಗಿ ಕ್ಲಬ್‍ನ ಅಭಿವೃದ್ಧಿ, ಪುನಶ್ಚೇತನ ಹಾಗೂ ನವೀಕರಣಕ್ಕೆ ಅಡಚಣೆ ಉಂಟಾಗಿದೆ. ಬೆಂಗಳೂರು ಸೆಂಚುರಿ ಕ್ಲಬ್‍ನ್ನು ಪಾರ್ಕ್ ಜೋನ್‍ನಿಂದ ಹೊರಗೆ ಇಡಬೇಕು. ಕ್ಲಬ್ ಸುಮಾರು 7 ಏಕರೆ ಜಾಗದಲ್ಲಿ ಇದೆ. ಕೂಡಲೇ ಸರ್ಕಾರ ಪಾರ್ಕ್ ಜೋನ್‍ನಿಂದ ಕೈ ಬಿಡಬೇಕು. ಈ ಮೂಲಕ ವಿಶ್ವೇಶ್ವರಯ್ಯ ಹೆಸರಿನಲ್ಲಿ ಕ್ಲಬ್ ಅಭಿವೃದ್ಧಿಗೆ ಅವಕಾಶ ಮಾಡಿಕೊಡಬೇಕು ಎಂದು ತೇಜಸ್ವಿನಿ ಗೌಡ ಒತ್ತಾಯ ಮಾಡಿದರು.

    ಇದಕ್ಕೆ ಉತ್ತರ ನೀಡಿದ ಸಚಿವರು, ಸೆಂಚುರಿ ಕ್ಲಬ್ ಒಂದನ್ನು ಪಾರ್ಕ್ ಜೋನ್‍ನಿಂದ ಕೈ ಬಿಟ್ಟರೆ ಸಮಸ್ಯೆ ಆಗುತ್ತದೆ. ಇವತ್ತು ಒಂದಕ್ಕೆ ಅವಕಾಶ ನೀಡಿದರೆ, ಅದೇ ವಲಯಗಳಲ್ಲಿ ದೊಡ್ಡ ದೊಡ್ಡ ಕಟ್ಟಡಗಳು ತಲೆ ಎತ್ತಲಿವೆ. ಇಲ್ಲಿರೋ ಪಾರಂಪರಿಕ ಕಟ್ಟಡಗಳಿಗೆ ತೊಂದರೆ ಆಗಲಿದೆ. ಸೆಂಚುರಿ ಕ್ಲಬ್ ಪ್ರವೇಶದಲ್ಲಿ ಈಗ ಸಾರ್ವಜನಿಕರು ಓಡಾಡುತ್ತಿದ್ದಾರೆ. ಪಾರ್ಕ್ ಜೋನ್‍ನಿಂದ ಕೈ ಬಿಟ್ಟರೆ ಸಾರ್ವಜನಿಕರ ಓಡಾಟಕ್ಕೆ ಬ್ರೇಕ್ ಹಾಕ್ತಾರೆ. ನಮ್ಮ ತೋಟಗಾರಿಕೆ ಇಲಾಖೆಯಿಂದ ಸೆಂಚುರಿ ಕ್ಲಬ್‍ಗೆ ಯಾವುದೇ ಸಮಸ್ಯೆ ಆಗಿಲ್ಲ. ಹೀಗಾಗಿ ಸೆಂಚುರಿ ಕ್ಲಬ್‍ನ್ನು ಪಾರ್ಕ್ ಜೋನ್‍ನಿಂದ ಹೊರಗೆ ಇಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮಂಗಳೂರಿನ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ

    ಇದಕ್ಕೆ ವಿರೋಧ ಮಾಡಿದ ತೇಜಸ್ವಿನಿ ಗೌಡ, ಈಗಾಗಲೇ ಲೋಕೋಪಯೋಗಿ ಇಲಾಖೆ, ಯವನಿಕಾ, ಡಿಜಿ ಅಫೀಸ್ ಸೇರಿದಂತೆ ಅನೇಕ ಕಟ್ಟಡಗಳನ್ನು ಪಾರ್ಕ್ ಜೋನ್‍ನಿಂದ ಹೊರಗೆ ಇಡಲಾಗಿದೆ. ಸರ್ಕಾರ ಸೆಂಚುರಿ ಕ್ಲಬ್‍ನ್ನು ಪಾರ್ಕ್ ಜೋನ್‍ನಿಂದ ಹೊರಗಿಡಬೇಕು. ಇಲ್ಲದೆ ಹೋದ್ರೆ ಈಗ ಹೊರಗೆ ಇಟ್ಟಿರೋ ಕಟ್ಟಡಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯ ಮಾಡಿದರು. ಇದಕ್ಕೆ ಉತ್ತರ ನೀಡಿದ ಸಚಿವರು, ಕಬ್ಬನ್ ಪಾರ್ಕ್ ವಿಚಾರ ಕೋರ್ಟ್‍ನಲ್ಲಿ ಕೇಸ್ ಇದೆ. ಆದರೂ ಸ್ಥಳ ಪರಿಶೀಲನೆ ಮಾಡಿ, ಏನು ಅನುಕೂಲ ಸಾಧ್ಯವೋ ಅದನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.

  • ಕರ್ನಾಟಕದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ..!

    ಕರ್ನಾಟಕದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ..!

    ಚೆನ್ನೈ: ಮೇಕೆದಾಟು ಡ್ಯಾಂ ವಿಚಾರದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ ಕದನ ಎನ್ನುವಂತಾಗಿದೆ. ಈಗ ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕ ಕೆಡಾರ್‍ನ ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕ ಸಿಂಗಂ ಅಂತಲೇ ಹೆಸರಾಗಿದ್ದ ಅಣ್ಣಾಮಲೈ ಈಗ ಕರ್ನಾಟಕದ ವಿರುದ್ಧವೇ ತಿರುಗಿಬಿದ್ದಿದ್ದಾರೆ.

    ಮೇಕೆದಾಟು ಜಲಾಶಯ ನಿರ್ಮಾಣ ಕಾಮಗಾರಿ ವಿರೋಧಿಸಿ ಕರ್ನಾಟಕದ ವಿರುದ್ಧ ಆಗಸ್ಟ್ 5ರಷ್ಟು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅಣ್ಣಾಮಲೈ ಘೋಷಿಸಿದ್ದಾರೆ. ಕರ್ನಾಟಕದಲ್ಲಿ ನಮ್ಮದೇ ಸರ್ಕಾರ ಇರಬಹುದು.. ಆದ್ರೆ ನಾವು ತಮಿಳುನಾಡು ಸರ್ಕಾರದ ಪರ ನಿಲ್ಲುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 21 ಸಚಿವರ ಪಟ್ಟಿಗೆ ಇನ್ನೂ ಹೈಕಮಾಂಡ್‍ನಿಂದ ಸಿಕ್ಕಿಲ್ಲ ಗ್ರೀನ್‍ಸಿಗ್ನಲ್

    ಇದು ರಾಜ್ಯ ಬಿಜೆಪಿ ನಾಯಕರಿಗೆ ಇರಿಸುಮುರಿಸು ತಂದಿದೆ. ಆದರೂ ಎಂಎಲ್‍ಸಿ ತೇಜಸ್ವಿನಿ ಗೌಡ ಪರೋಕ್ಷವಾಗಿ ಸಮರ್ಥನೆ ಮಾಡಿಕೊಂಡಿದ್ದಾರೆ. ರಾಷ್ಟ್ರೀಯ ವಿಚಾರ ಬಂದಾಗ ನಾವೆಲ್ಲಾ ಒಂದೇ, ಪ್ರಾದೇಶಿಕ ವಿಚಾರ ಬಂದಾಗ ಮಾತ್ರ ಬೇರೆ ಬೇರೆ ಎಂದಿದ್ದಾರೆ.

  • ಕಾಂಗ್ರೆಸ್ ಸ್ಪೇಸ್ ಸರ್ಜಿಕಲ್ ಸ್ಟ್ರೈಕ್ ಸಾಕ್ಷಿ ಕೇಳಲಿಲ್ಲ, ಇದು ನಮ್ಮ ಪುಣ್ಯ: ಸುರೇಶ್ ಕುಮಾರ್

    ಕಾಂಗ್ರೆಸ್ ಸ್ಪೇಸ್ ಸರ್ಜಿಕಲ್ ಸ್ಟ್ರೈಕ್ ಸಾಕ್ಷಿ ಕೇಳಲಿಲ್ಲ, ಇದು ನಮ್ಮ ಪುಣ್ಯ: ಸುರೇಶ್ ಕುಮಾರ್

    – ಬಿಜೆಪಿ ಯೋಗ್ಯರಿಗೆ ಟಿಕೆಟ್ ಕೊಟ್ಟಿದೆ, ಅಯೋಗ್ಯರಿಗಲ್ಲ: ಯತ್ನಾಳ್‍ಗೆ ತಿರುಗೇಟು
    – ಸಮ್ಮಿಶ್ರ ಸರ್ಕಾರದಲ್ಲಿ ದುಷ್ಟ ಜೋಡೆತ್ತುಗಳಿವೆ: ತೇಜಸ್ವಿನಿ ಗೌಡ

    ಬೆಂಗಳೂರು: ಕಾಂಗ್ರೆಸ್‍ನವರು ಸ್ಪೇಸ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸಾಕ್ಷಿ ಕೇಳಿಲ್ಲ. ಇದು ನಮ್ಮ ಪುಣ್ಯ. ಕಾಂಗ್ರೆಸ್ ನಾಯಕರಿಗೆ ಪ್ರಬುದ್ಧತೆ ಬಂದಿರುವುದು ಸಂತೋಷ ತಂದಿದೆ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಲೇವಡಿ ಮಾಡಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕರು, ಸ್ಪೇಸ್ ಸರ್ಜಿಕಲ್ ಸ್ಟ್ರೈಕ್‍ನಿಂದ ಬಿಜೆಪಿಗೆ ಲಾಭ ವಿಚಾರ ಎನ್ನುವ ಕಾಂಗ್ರೆಸ್ ನಾಯಕರ ಟೀಕೆಗೆ ತಿರುಗೇಟು ಕೊಟ್ಟರು. ಪ್ರಧಾನಿ ನರೇಂದ್ರ ಮೋದಿ ಭಾಷಣವನ್ನು ಕಾಂಗ್ರೆಸ್‍ನವರು ಪೂರ್ಣ ಕೇಳಲಿ. ಬಳಿಕ ಪ್ರತಿಕ್ರಿಯೆ ನೀಡಲಿ. ಸ್ಪೇಸ್ ಸರ್ಜಿಕಲ್ ಸ್ಟ್ರೈಕ್ ಶ್ರೇಯಸ್ಸು ಡಿಆರ್ ಡಿಒ ವಿಜ್ಞಾನಿಗಳಿಗೆ ಸಲ್ಲುತ್ತದೆ ಎಂದು ಪ್ರಧಾನಿ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ. ನಮ್ಮ ವಿಜ್ಞಾನಿಗಳ ಸಾಧನೆಯನ್ನು ದೇಶಕ್ಕೆ ತಿಳಿಯಲಿ ಎನ್ನುವ ಕಾರಣಕ್ಕೆ ಸುದ್ದಿಗೋಷ್ಠಿ ಮಾಡಿದರು ಎಂದು ತಿಳಿಸಿದರು.

    ಸಮ್ಮಿಶ್ರ ಸರ್ಕಾರದ ಅವಸ್ಥೆ ಹರಿದ ಬಟ್ಟೆಯಂತಾಗಿದೆ. ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‍ಗೆ ಅಭ್ಯರ್ಥಿ ಸಿಕ್ಕಿಲ್ಲ. ಹೊಸ ರೀತಿಯಲ್ಲಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಚುನಾವಣೆ ಹಾಸ್ಯಾಸ್ಪದವಾಗಿ ನಡೆಯುತ್ತಿದೆ ಎಂದು ವ್ಯಂಗ್ಯವಾಡಿದರು.

    ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಿದರೆ ಅಂಬರೀಶ್ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದು ಮತದಾರರನ್ನು ಬ್ಲಾಕ್ ಮೇಲ್ ಮಾಡುವ ಹೇಳಿಕೆ. ಮಂಡ್ಯದಲ್ಲಿ ಮುಕ್ತ, ಶಾಂತಿಯುತ ಮತದಾನ ನಡೆಯಬೇಕು. ಈ ನಿಟ್ಟಿನಲ್ಲಿ ಮಂಡ್ಯವನ್ನು ಅತಿ ಸೂಕ್ಷ್ಮ ಕ್ಷೇತ್ರವೆಂದು ಚುನಾವಣಾ ಆಯೋಗ ಘೋಷಿಸಬೇಕು ಎಂದು ಆಗ್ರಹಿಸಿದರು.

    ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಟಿಕೆಟ್ ತಪ್ಪಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶಾಸಕರು, ತೇಜಸ್ವಿನಿ ಅವರ ಹೆಸರನ್ನು ರಾಜ್ಯ ಕೋರ್ ಕಮಿಟಿ ಕಳಿಸಿತ್ತು ಹಾಗೂ ಟಿಕೆಟ್ ಸಿಗುವ ನಿರೀಕ್ಷೆ ಹೊಂದಿದ್ದೆವು. ಆದರೆ ಪಕ್ಷದ ತೀರ್ಮಾನದಂತೆ ಟಿಕೆಟ್ ಸಿಗಲಿಲ್ಲ. ಇದೇ ಕಾರಣಕ್ಕೆ ತೇಜಸ್ವಿನಿ ಅವರಿಗೆ ಟಿಕೆಟ್ ಕೈತಪ್ಪಿದೆ ಎಂದು ಹೇಳಲು ಸಾಧ್ಯವಿಲ್ಲ. ತುಮಕೂರು ಸಂಸದ ಮುದ್ದಹನುಮೇಗೌಡ ಅವರಂತೆ ತೇಜಸ್ವಿನಿ ಅನಂತ್‍ಕುಮಾರ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿಲ್ಲ. ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸಿ, ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್‍ಗೆ ಟಾಂಗ್ ಕೊಟ್ಟರು.

    ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಸುರೇಶ್ ಕುಮಾರ್ ಅವರು, ಬಿಜೆಪಿ ಹೈಕಮಾಂಡ್ ಯೋಗ್ಯರಿಗೆ ಟಿಕೆಟ್ ಕೊಟ್ಟಿದೆ. ಯಾವುದೇ ಅಯೋಗ್ಯರಿಗೆ ಟಿಕೆಟ್ ಕೊಟ್ಟಿಲ್ಲ. ಚುನಾವಣಾ ಕಣದಲ್ಲಿರುವ ಎಲ್ಲರೂ ಯೋಗ್ಯರೇ. ಎಲ್ಲರೂ ಗೆದ್ದು ಬರುತ್ತಾರೆ ಎಂದು ತಿರುಗೇಟು ಕೊಟ್ಟರು.

    ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಮಾತನಾಡಿ, ಸಮ್ಮಿಶ್ರ ಸರ್ಕಾರದಲ್ಲಿ ದುಷ್ಟ ಜೋಡೆತ್ತುಗಳಿವೆ. ಅವುಗಳು ಚುನಾವಣಾ ಸಂಸ್ಕೃತಿಯನ್ನು ಹಾಳು ಮಾಡುತ್ತಿವೆ ಎಂದು ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.

    ಮಂಡ್ಯದಲ್ಲಿ ಅಧಿಕಾರ ದುರ್ಬಳಕೆ ಆಗುತ್ತಿದೆ. ಸಿಎಂ ತಮ್ಮ ಮಗ ನಿಖಿಲ್ ನಾಮಪತ್ರ ಸಲ್ಲಿಸುವ ದಿನದಂದು 3 ಗಂಟೆಗೂ ಹೆಚ್ಚು ಕಾಲ ಮೈಸೂರು-ಬೆಂಗಳೂರು ರಸ್ತೆ ಬಂದ್ ಮಾಡಿಸಿದ್ದರು. ನಟರಾದ ಯಶ್, ಹಾಗೂ ದರ್ಶನ್ ವಿರುದ್ಧ ಜೆಡಿಎಸ್ ನಾಯಕರು ಅವಮಾನಕರ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

    ಪತಿ ನಿಧನರಾದ ಬಳಿಕ ಮಹಿಳೆಯರು ರಾಜಕೀಯಕ್ಕೆ ಬರಲೇಬಾರದೆಂಬ ಧೋರಣೆಯನ್ನು ಜೆಡಿಎಸ್‍ನವರು ತೋರುತ್ತಿದ್ದಾರೆ. ಮಂಡ್ಯ ರಾಜಕಾರಣದಲ್ಲಿ ಸುಮಲತಾ ಪರ ಅಲೆ ಇದೆ. ಅಷ್ಟೇ ಅಲ್ಲದೆ ಸುಮಲತಾರಿಗೆ ಬಿಜೆಪಿ ಹಾಗೂ ರೈತಸಂಘದ ಬೆಂಬಲವಿದೆ. ಹೀಗಾಗಿ ಸಿಎಂ ಕುಮಾರಸ್ವಾಮಿ ಹೆದರಿದ್ದು, ಅವರ ಮನಸಲ್ಲಿರುವ ಭಯ ನಮಗೆ ಅರ್ಥವಾಗುತ್ತಿದೆ ಎಂದರು.

  • ಎಚ್‍ಡಿಕೆ ಮಾತು ತಪ್ಪಿದ ಮಗ, ಡಿಕೆಶಿ ದಾರಿ ತಪ್ಪಿದ ಮಗ: ತೇಜಸ್ವಿನಿ ಗೌಡ ವಾಗ್ದಾಳಿ

    ಎಚ್‍ಡಿಕೆ ಮಾತು ತಪ್ಪಿದ ಮಗ, ಡಿಕೆಶಿ ದಾರಿ ತಪ್ಪಿದ ಮಗ: ತೇಜಸ್ವಿನಿ ಗೌಡ ವಾಗ್ದಾಳಿ

    -ರಾಮನಗರ ಇಂದು ರಾವಣನಗರ ಆಗಿದೆ

    ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತು ತಪ್ಪಿದ ಮಗ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ದಾರಿ ತಪ್ಪಿದ ಮಗ. ಇಬ್ಬರೂ ದುರ್ಯೋಧನ, ದುಶ್ಯಾಸನ ಇದ್ದ ಹಾಗೆ ಎಂದು ಬಿಜೆಪಿ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ವಾಗ್ದಾಳಿ ನಡೆಸಿದ್ದಾರೆ.

    ಬಿಜೆಪಿ ಪಾದಯಾತ್ರೆ ಅಂತ್ಯದ ನಂತರ ಫ್ರೀಡಂಪಾರ್ಕ್ ಸಮೀಪದ ರಸ್ತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ದುರ್ಯೋಧನ ಹಾಗೂ ದುಶ್ಯಾಸನ ಮಹಾ ಪರಾಕ್ರಮಿಗಳು. ಆದರೆ ಅವರಲ್ಲಿ ಧರ್ಮ ಇರಲಿಲ್ಲ, ಹೀಗಾಗಿ ಸೋತರು. ದಾರಿ ತಪ್ಪಿದ ಮಗ ಹಾಗೂ ಮಾತು ತಪ್ಪಿದ ಮಗ ಇಬ್ಬರು ಸೇರಿದ್ದಾರೆ ಏನಾಗುತ್ತದೆ ನೋಡಬೇಕು ಎಂದು ವ್ಯಂಗ್ಯವಾಡಿದರು.

    ನೀವು ತೊಡೆ ತಟ್ಟಿದ್ದು ನನಗೂ ನೆನಪಿದೆ. ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ನಾಯಕರು ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದರು. ಆಗ ಬಿಜೆಪಿ ನಿಮಗೆ ನೀರು, ಭದ್ರತೆ ಸೇರಿದಂತೆ ಅನೇಕ ವ್ಯವಸ್ಥೆ ಮಾಡಿತ್ತು. ನೀವು ಕದ್ದು ಕದ್ದು ಪಾದಯಾತ್ರೆ ಮಾಡಿದ್ದು ನನಗೂ ಗೊತ್ತು ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ನೇರವಾಗಿಯೇ ವಾಗ್ದಾಳಿ ನಡೆಸಿದರು.

    ನಿಮಗೆ ಪಾದಯಾತ್ರೆಯ ಬಗ್ಗೆ ಅರಿವು ಇಲ್ಲ, ಹೀಗಾಗಿ ಹಗುರವಾಗಿ ಮಾತನಾಡುತ್ತಿರುವಿರಿ. ಅನುಪಮ ಜೋಡಿಗಳಾದ ನೀವು 57 ಕಿ.ಮೀ. ಪಾದಯಾತ್ರೆ ಮಾಡಿ, ಕಾಲಿನಲ್ಲಿ ಹೇಗೆ ಬೊಬ್ಬೆ ಬರುತ್ತವೆ ಎನ್ನುವುದು ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಸವಾಲು ಹಾಕಿದರು.

    ಕುಮಾರಸ್ವಾಮಿ ರಾಮನಗರ ಮತಕ್ಷೇತ್ರವನ್ನು ಕೈಬಿಟ್ಟಿದ್ದಾರೆ. ಇದರಿಂದ ಶಾಸಕರಿಲ್ಲದೇ ರಾಮನಗರ ಸದ್ಯ ರಾವಣನ ನಗರವಾಗಿದೆ. ಕಾಂಗ್ರೆಸ್ ಉದ್ಧಾರಕ್ಕಾಗಿ ಏನನ್ನು ಡಿ.ಕೆ.ಶಿವಕುಮಾರ್ ಮಾಡಲಿಲ್ಲ. ಸಚಿವ ಸ್ಥಾನಕ್ಕಾಗಿ ಕುಮಾರಸ್ವಾಮಿಗೆ ಎಲ್ಲವನ್ನು ಮಾಡಿದರು ಎಂದು ವ್ಯಂಗ್ಯವಾಡಿದರು.

    ಕಾಂಗ್ರೆಸ್ ಶಲ್ಯ ಹಾಕಿದವರೆಲ್ಲರೂ ಕಾಂಗ್ರೆಸ್ಸಿಗರಾ, ರಾಮರಾಜ್ಯ ಆಗಬೇಕು ಎಂದು ಗಾಂಧೀಜಿ ಅವರು ಕಾಂಗ್ರೆಸ್ ಶಲ್ಯ ಹಾಕಿದ್ದರು. ಆದರೆ ನೀವು ಕೆರೆ, ಹೊಲ, ಮನೆ ಅತಿಕ್ರಮಣ ಮಾಡಿ ಗಾಂಧೀಜಿಯವರ ಉದ್ದೇಶವನ್ನು ಮರೆತು ಬಿಟ್ಟಿರುವಿರಿ ಎಂದು ಹಸಿರು ಶಲ್ಯ ಹಾಕಿದವರು ರೈತರಲ್ಲ ಎಂದಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟರು.

  • ಕುಮಾರಸ್ವಾಮಿಯವರಿಗೆ ಆತ್ಮರತಿ ಹೆಚ್ಚಾಗಿದೆ: ತೇಜಸ್ವಿನಿ ಗೌಡ

    ಕುಮಾರಸ್ವಾಮಿಯವರಿಗೆ ಆತ್ಮರತಿ ಹೆಚ್ಚಾಗಿದೆ: ತೇಜಸ್ವಿನಿ ಗೌಡ

    ಬೆಂಗಳೂರು: ಎಚ್‍ಡಿ ಕುಮಾರಸ್ವಾಮಿಯವರಿಗೆ ಆತ್ಮರತಿ ಹೆಚ್ಚಾಗಿದ್ದು, ಜಂತಕಲ್ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ಅವರು ವಿಚಿತ್ರವಾಗಿ ವರ್ತಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ತೇಜಸ್ವಿನಿ ಗೌಡ ವಾಗ್ದಾಳಿ ನಡೆಸಿದ್ದಾರೆ.

    ತನ್ನ ವಿರುದ್ಧ ಆದಾಯ ತೆರಿಗೆ ಇಲಾಖೆಯಲ್ಲಿ ದೂರು ದಾಖಲಾಗಲು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಾರಣ ಎಂದು ಎಚ್‍ಡಿ ಕುಮಾರಸ್ವಾಮಿ ಆರೋಪಿಸಿದ ಬಳಿಕ ತೇಜಸ್ವಿನಿ ಗೌಡ ಮಲ್ಲೇಶ್ವರಂ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ವಾಗ್ದಾಳಿ ನಡೆಸಿ ಪ್ರತ್ಯುತ್ತರ ನೀಡಿದ್ದಾರೆ.

    ಮಾಜಿ ಸಿಎಂ ಆಗಿ ಕಾನೂನು ಎಲ್ಲರಿಗೂ ಒಂದೇ ಎನ್ನುವುದನ್ನು ಅವರು ಮರೆತಿದ್ದಾರೆ. ಹಿಟ್ ಅಂಡ್ ರನ್ ಮಾಡುವುದರಲ್ಲಿ ಕುಮಾರಸ್ವಾಮಿ ಎಕ್ಸ್ ಪರ್ಟ್. ಉಪಚುನಾವಣೆಗೆ ಅವರು ಅಭ್ಯರ್ಥಿಗಳನ್ನು ಹಾಕುವುದಿಲ್ಲ. ಬೇಕಾದಾಗ ಕಾಂಗ್ರೆಸ್ ಜೊತೆ ಸೇರುತ್ತಾರೆ. ಯಡಿಯೂರಪ್ಪ ಸುದೀರ್ಘ ರಾಜಕಾರಣದ ಮೂಲಕ ಮುಖ್ಯಮಂತ್ರಿಯಾದವರು. ಅದ್ರೆ ಎಚ್‍ಡಿಕೆ ರಾತ್ರೋ ರಾತ್ರಿ ಮುಖ್ಯಮಂತ್ರಿಯಾದವರು. ಬಾಹುಬಲಿ, ಬಾಹುಬಲಿ 2 ನೋಡಿದ್ದೇವೆ. ಅದರೆ ಇವರ ಮೇಲೆ ಆರೋಪ ಮಾಡಲು ತುಂಬಾ ಸ್ಟೋರಿಗಳಿವೆ ಎಂದು ಆರೋಪಿಸಿದರು.

    ಎಚ್‍ಡಿಕೆಯನ್ನು ಕಟ್ಟಪ್ಪನಿಗೆ ಹೋಲಿಕೆ ಮಾಡಿದ ಅವರು, 8 ಮಂದಿ ಸ್ನೇಹಿತರಿಗೇ ಅವರು ವಿಶ್ವಾಸದ್ರೋಹ ಮಾಡಿದ್ದಾರೆ. ತಮ್ಮ ಪುತ್ರರ ರಾಜಕೀಯ ಯಶಸ್ಸಿಗಾಗಿ ಯಾರನ್ನ ಬೇಕಾದ್ರೂ ಪಕ್ಷದಿಂದ ಹೊರಹಾಕ್ತಾರೆ ಎಂದು ಹೇಳಿದರು.

    ಇದನ್ನೂ ಓದಿ: ಹೇಡಿತನದ ರಾಜಕಾರಣ ಮಾಡದೇ, ಧೈರ್ಯವಾಗಿ ಮುಂದೆ ಬಂದು ಮಾತನಾಡಿ: ಬಿಎಸ್‍ವೈಗೆ ಎಚ್‍ಡಿಕೆ ಸವಾಲು