Tag: ತೇಜಸ್ವಿನಿ ಶರ್ಮಾ

  • ಲಿಖಿತ್ ಶೆಟ್ಟಿ ಹುಟ್ಟುಹಬ್ಬದಂದು ‘ಫುಲ್ ಮೀಲ್ಸ್’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

    ಲಿಖಿತ್ ಶೆಟ್ಟಿ ಹುಟ್ಟುಹಬ್ಬದಂದು ‘ಫುಲ್ ಮೀಲ್ಸ್’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

    ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್, ಅಬ್ಬಬ್ಬ ಚಿತ್ರಗಳ ಖ್ಯಾತಿಯ ನಟ ಲಿಖಿತ್ ಶೆಟ್ಟಿ (Likith Shetty) ಪ್ರಸ್ತುತ ‘ಫುಲ್ ಮೀಲ್ಸ್’ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ನಾಯಕ ನಟನಾಗೂ ನಟಿಸುತ್ತಿದ್ದಾರೆ. ಈಗ ‘ಫುಲ್ ಮೀಲ್ಸ್’ (Full Meals) ಚಿತ್ರದ ನಾಯಕ ಲಿಖಿತ್ ಶೆಟ್ಟಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ‘ಫುಲ್ ಮೀಲ್ಸ್’ ಚಿತ್ರತಂಡ ಲಿಖಿತ್ ಶೆಟ್ಟಿ ಬರ್ತ್‌ಡೇಗೆ (Birthday) ಶುಭಾಶಯ ಕೋರಿದೆ.

    ಲಿಖಿತ್ ಶೆಟ್ಟಿ ಇಬ್ಬರು ನಾಯಕಿಯರ ಸಾಂಗತ್ಯದಲ್ಲಿರುವ ರೊಮ್ಯಾಂಟಿಕ್ ಥೀಮ್ ಹೊಂದಿರುವ ಈ ಸುಂದರವಾದ ಮೋಷನ್ ಪೋಸ್ಟರ್ ನೋಡುಗರ ಗಮನ ಸೆಳೆದಿದ್ದು, ಸಿನಿಮಾದ ಬಗ್ಗೆ ಕುತೂಹಲ ಮೂಡಿಸಿದೆ. ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬಹುತೇಕ ಸಂಪೂರ್ಣವಾಗಿದ್ದು, ಸದ್ಯ ರೀ ರೆಕಾರ್ಡಿಂಗ್ ನಡೆಯುತ್ತಿದೆ. ವರ್ಷಾಂತ್ಯದೊಳಗೆ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿರುವುದಾಗಿ ಲಿಖಿತ್ ಶೆಟ್ಟಿ ತಿಳಿಸಿದ್ದಾರೆ.

    ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ಸಿನಿಮಾ, ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನೆಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಲಿಖಿತ್ ಶೆಟ್ಟಿ ಅವರಿಗಿದೆ. ಇದನ್ನೂ ಓದಿ:ಸಂಜಯ್ ದತ್ ಜೊತೆಗಿನ ಫೋಟೋ ಹಂಚಿಕೊಂಡ ಉಪ್ಪಿಯ ಟ್ರೋಲ್ ಹುಡುಗಿ ರೀಷ್ಮಾ

    ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಸಿನೆಮಾಗೆ ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ, ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಚಿತ್ರಕ್ಕಿದೆ.

    ಲಿಖಿತ್ ಶೆಟ್ಟಿಗೆ ನಾಯಕಿಯರಾಗಿ ಖುಷಿ ರವಿ (Kushee Ravi)  ಮತ್ತು ತೇಜಸ್ವಿನಿ ಶರ್ಮ ಅಭಿನಯಿಸಿದ್ದು, ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ಬಹು ದೊಡ್ಡ ತಾರಾ ಬಳಗವೇ ಇದೆ.

  • ಲಿಖಿತ್ ಶೆಟ್ಟಿ ಜೊತೆ ‘ಫುಲ್ ಮೀಲ್ಸ್’ ಗೆ ಜೊತೆಯಾದ ಇಬ್ಬರು ನಾಯಕಿಯರು

    ಲಿಖಿತ್ ಶೆಟ್ಟಿ ಜೊತೆ ‘ಫುಲ್ ಮೀಲ್ಸ್’ ಗೆ ಜೊತೆಯಾದ ಇಬ್ಬರು ನಾಯಕಿಯರು

    ವರ್ ಸ್ಟಾರ್ ಪುನೀತ್ ರಾಜಕುಮಾರ್ ನಿರ್ಮಾಣದ “ಫ್ಯಾಮಿಲಿ ಪ್ಯಾಕ್” ಚಿತ್ರದಲ್ಲಿ ನಟಿಸಿ ಜನಪ್ರಿಯರಾಗಿರುವ ಲಿಖಿತ್ ಶೆಟ್ಟಿ ನಾಯಕರಾಗಿ ಅಭಿನಯಿಸುತ್ತಿರುವ “ಫುಲ್ ಮೀಲ್ಸ್” ಚಿತ್ರದ ಚಿತ್ರೀಕರಣ ಬೆಂಗಳೂರಿನ ಅರಮನೆಯಲ್ಲಿ ನಡೆಯುತ್ತಿದೆ. ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

    ಇದೊಂದು ಸಂಪೂರ್ಣ ಮನೋರಂಜನಾತ್ಮಕ ಚಿತ್ರ. ನನ್ನ ಮೊದಲ ನಿರ್ದೇಶನದ ಚಿತ್ರ ಕೂಡ. ಲಿಖಿತ್ ಶೆಟ್ಟಿ ನಾಯಕರಾಗಿ, ಖುಷಿ ರವಿ, ತೇಜಸ್ವಿನಿ ಶರ್ಮ ನಾಯಕಿಯರಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ ಸೇರಿದಂತೆ ಅನೇಕ ಅನುಭವಿ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ ಜೋಷಿ ಛಾಯಾಗ್ರಹಣ ಹಾಗೂ ಗುರುಕಿರಣ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಬೆಂಗಳೂರು, ರಾಮನಗರ ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಎನ್.ವಿನಾಯಕ ಚಿತ್ರದ ಕುರಿತು ಮಾಹಿತಿ ನೀಡಿದರು.

    ನಾನು ಈ ಚಿತ್ರದಲ್ಲಿ ಫೋಟೋಗ್ರಾಫರ್. ಮದುವೆ ಮನೆಗೆ ಫೋಟೋ ತೆಗೆಯಲು ಹೋದಾಗ ಮದುಮಗಳ ಮೇಲೆ ಪ್ರೀತಿಯಾಗುತ್ತದೆ. ಆನಂತರ ಏನಾಗುತ್ತದೆ? ಎಂಬುದನ್ನು ಚಿತ್ತದಲ್ಲೇ ನೋಡಬೇಕು. ಒಟ್ಟಿನಲ್ಲಿ ನಾವು ಇಡೀ ತಂಡ ಸೇರಿ ಪ್ರೇಕ್ಷಕರಿಗೆ ಮನೋರಂಜನೆಯ “ಫುಲ್ ಮೀಲ್ಸ್” ನೀಡಲಿದ್ದೇವೆ ಎಂದರು ನಾಯಕ ಲಿಖಿತ್ ಶೆಟ್ಟಿ. ಇದನ್ನೂ ಓದಿ: ಬೆಡ್‌ರೂಮ್ ಫೋಟೋ ಹಂಚಿಕೊಂಡ ನಟಿ ರಾಗಿಣಿ ದ್ವಿವೇದಿ

    ನಾಯಕಿಯರಾದ ಖುಷಿ ರವಿ, ತೇಜಸ್ವಿನಿ ಶರ್ಮ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಕಲಾವಿದರಾದ ರಂಗಾಯಣ ರಘು, ಚಂದ್ರಕಲಾ ಮೋಹನ್, ರಮೇಶ್ ಪಂಡಿತ್, ಗಣೇಶ್ ರಾವ್, ವಿಜಯ್ ಚೆಂಡೂರ್,  ಛಾಯಾಗ್ರಾಹಕ ಮನೋಹರ್ ಜೋಶಿ ಹಾಗೂ ಸಂಭಾಷಣೆ ಬರೆಯುತ್ತಿರುವ ಹರೀಶ್ ರಾಜಣ್ಣ “ಫುಲ್ ಮೀಲ್ಸ್” ಬಗ್ಗೆ ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k