– ಡಿಸಿಎಂ ನಿವಾಸದಲ್ಲಿ 1 ಗಂಟೆಗೂ ಹೆಚ್ಚು ಸಮಯ ಚರ್ಚಿಸಿದ ಸಂಸದ
ಬೆಂಗಳೂರು: ಬೆಂಗಳೂರು ಟನಲ್ ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಸಂಸದ ತೇಜಸ್ವಿ ಸೂರ್ಯ ಚರ್ಚೆ ನಡೆಸಿದ್ದಾರೆ.
ಡಿಕೆಶಿ ಅವರ ಸದಾಶಿವನಗರ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ತೇಜಸ್ವಿ ಸೂರ್ಯ 1 ಗಂಟೆಗೂ ಹೆಚ್ಚು ಸಮಯ ಚರ್ಚೆ ಮಾಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಸಂಸದ ಮಾತನಾಡಿ, ಡಿಸಿಎಂ ಡಿಕೆಶಿ ಅವರ ಜೊತೆ 1 ಗಂಟೆಗೂ ಹೆಚ್ಚು ಕಾಲ ಚರ್ಚೆ ಆಯ್ತು. ಬೆಂಗಳೂರು ಟ್ರಾಫಿಕ್ ಸಮಸ್ಯೆ ಪರಿಹಾರದ ಬಗ್ಗೆ ಸುದೀರ್ಘ ಚರ್ಚೆ ಆಯ್ತು. ಬಹಳ ಶಾಂತವಾಗಿ ನಾನು ಕೊಟ್ಟ ಪ್ರೆಸೆಂಟೇಷನನ್ನ ಕೇಳಿದ್ರು. ಬೆಂಗಳೂರಿಗೆ ಮೆಟ್ರೋ ಬರೋದರಲ್ಲಿ ಅವರ ಪಾತ್ರ ಏನು ಎಂಬುದನ್ನ ಡಿ.ಕೆ.ಶಿವಕುಮಾರ್ ಅವರು ನನಗೆ ತಿಳಿಸಿದರು. ಎಸ್.ಎಂ.ಕೃಷ್ಣ ಅವಧಿಯಲ್ಲಿ ಅನಂತ್ ಕುಮಾರ್ ಅವರು ಬೇರೆ ದೇಶದ ವ್ಯವಸ್ಥೆ ಎಲ್ಲಾ ನೋಡಿ ಹೇಗೆ ವರದಿ ಕೊಟ್ರು ಅಂತ ಹೇಳಿದರು ಎಂದರು.
ಟನಲ್ ರಸ್ತೆ ಕೇವಲ 30-35 ಕಿ.ಮೀ.ಗೆ 47 ಸಾವಿರ ಕೋಟಿ ಖರ್ಚು ಮಾಡುವ ಬದಲು ಬಸ್ಸು ಬೇರೆ ಬೇರೆ ಇನ್ಫಾಟ್ರಕ್ಚರ್ ಅಭಿವೃದ್ಧಿಗೆ ಬಳಸಬಹುದು. ಇವತ್ತು ಟನಲ್ ರೋಡ್‌ನ ಎಲ್ಲಾ ಸಮಸ್ಯೆ ಬಗ್ಗೆ ನಾನು ತಿಳಿಸಿದ್ದೇನೆ. ಎಲ್ಲವನ್ನೂ ಅವರು ಕೇಳಿದ್ದಾರೆ. ಅವರು ಏನೂ ತೀರ್ಮಾನ ಮಾಡ್ತಾರೆ ನೋಡಬೇಕು. ಚೀನಾ ಸೇರಿದಂತೆ ಬೇರೆ ಬೇರೆ ಕಡೆ ಫ್ಲೈಓವರ್ ಕೆಡವಿರುವ ಘಟನೆ ನಡೆದಿದೆ. ಟನಲ್ ಕೂಡ ಮಾಡದೆ ನಿಲ್ಲಿಸಿದ ಬೆಳವಣಿಗೆಯೂ ಆಗಿದೆ. ಟನಲ್ ರೋಡ್‌ನ ಕೈಬಿಡಿ, ಜಿದ್ದಿಗೆ ತಗೊಂಡು ಮಾಡೋದಲ್ಲ. ಸಬ್‌ಅರ್ಬನ್ ರೈಲು ಹಾಗೂ ಮೆಟ್ರೋ ರೈಲಿಗೆ ಹೆಚ್ಚಿನ ಆದ್ಯತೆ ಕೊಡಬೇಕು. ಟನಲ್‌ಗಿಂತ ಕಡಿಮೆ ವೆಚ್ಚದಲ್ಲಿ ಆಗುತ್ತದೆ ಎಂದು ಸಂಸದ ಸಲಹೆ ನೀಡಿದರು.
– ಅರ್ಧ ಗಂಟೆ ಸಮಯ ಕೊಟ್ಟರೆ ವಿವರಿಸುತ್ತೇನೆ ಎಂದ ಬಿಜೆಪಿ ಸಂಸದ
ಬೆಂಗಳೂರು: ಟನಲ್ ರೋಡ್ ಯೋಜನೆಗೆ ಸಂಸದ ತೇಜಸ್ವಿ ಸೂರ್ಯ ವಿರೋಧ ವ್ಯಕ್ತಪಡಿಸಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಸಂಸದನನ್ನು ಖಾಲಿ ಡಬ್ಬ, ಅಮಾವಸ್ಯೆ ಎಂದು ಟೀಕಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಂಸದ ತೇಜಸ್ವಿ ಸೂರ್ಯ, ಅವರು ಹಿರಿಯ ರಾಜಕಾರಣಿ. ಅನುಭವ ಇದ್ದವ್ರು. ವೈಯಕ್ತಿಕ ಟೀಕೆ ಮಾಡೋದಿಲ್ಲ ಎಂದರು.
ಈ ಯೋಜನೆಯ ಬಗ್ಗೆ ಡಿಸಿಎಂ ಅವರಿಗೆ ಅಧಿಕಾರಿಗಳು ಸರಿಯಾದ ಮಾಹಿತಿ ನೀಡಿಲ್ಲ ಅನಿಸುತ್ತೆ. ಈ ಯೋಜನೆಯಿಂದ ಸ್ಯಾಂಕಿ ಕೆರೆ, ಲಾಲ್ ಬಾಗ್ ಪ್ರದೇಶಕ್ಕೆ ಹಾನಿಯಾಗಲಿದೆ. ಮಾಡೇ ಮಾಡ್ತೀನಿ ಅಂತ ಜಿದ್ದಿಗೆ ಬೀಳೋದು ತಪ್ಪು. ಟನಲ್ ಯೋಜನೆ ಬೇಡ ಅಂತ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಲೇಖಕ, ನಟ ಪ್ರಕಾಶ್ ಬೆಳವಾಡಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ಮಂಗಳವಾರ ಬರಲಿದ್ದು, ನಾನೇ ವಾದ ಮಂಡಿಸಲಿದ್ದೇನೆ ಎಂದು ಹೇಳಿದರು.
ಬೆಂಗಳೂರು: ಸುರಂಗ ಮಾರ್ಗ (Bengaluru Tunnel Road) ವಿವಾದ ಈಗ ಹೈಕೋರ್ಟ್ ಅಂಗಳ ತಲುಪಿದೆ. ಟನಲ್ ರಸ್ತೆ ಯೋಜನೆ ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ (Tejasvi Surya), ನಟ ಪ್ರಕಾಶ್ ಬೆಳವಾಡಿ ಅರ್ಜಿ ಸಲ್ಲಿಸಿದ್ದಾರೆ.
ಯೋಜನೆಗೆ ಪರಿಸರ ಪರಿಣಾಮ ಮೌಲ್ಯಮಾಪನವನ್ನು ನಡೆಸದಿರುವುದು, ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರದೊಂದಿಗೆ ಸಮಾಲೋಚಿಸದಿರುವುದು ಮತ್ತು ವಿವರವಾದ ಯೋಜನಾ ವರದಿ, ವಿಶೇಷವಾಗಿ ಐತಿಹಾಸಿಕ ಲಾಲ್‌ಬಾಗ್ ಬಂಡೆಯ ಕೆಳಗೆ ಹಾದುಹೋಗುವ ಸುರಂಗದ ಜೋಡಣೆಯ ಬಗ್ಗೆ ಇರುವ ಕಳವಳಗಳನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ಇದನ್ನೂ ಓದಿ: ಕನ್ನೇರಿ ಶ್ರೀಗಳು ಆಡಿರುವ ಶಬ್ದಗಳು ಖಂಡನೀಯ, ಕ್ಷಮೆ ಕೇಳಬೇಕು – ಎಂ.ಬಿ ಪಾಟೀಲ್ ಆಗ್ರಹ
ಹೈಕೋರ್ಟ್‌ನಲ್ಲಿ ಖುದ್ದು ವಾದ ಮಂಡನೆ ಮಾಡಿದ ವಕೀಲರೂ ಆಗಿರುವ ತೇಜಸ್ವಿ ಸೂರ್ಯ, ಯೋಜನೆಯಿಂದ ಸುಮಾರು 6.5 ಎಕರೆ ಲಾಲ್‌ಬಾಗ್ ಭೂಮಿಗೆ ಪರಿಣಾಮ ಬೀರಬಹುದು. ರಾಷ್ಟ್ರೀಯ ಭೂವೈಜ್ಞಾನಿಕ ಸ್ಮಾರಕ ಎಂದು ಗುರುತಿಸಲ್ಪಟ್ಟಿರುವ 3,000 ಮಿಲಿಯನ್ ವರ್ಷಗಳಷ್ಟು ಹಳೆಯದಾದ ಲಾಲ್‌ಬಾಗ್ ಬಂಡೆಗೆ ಈ ಯೋಜನೆಯಿಂದ ಮಾರಕ ಆಗುತ್ತೆ. ತೋಡುವ ಸುರಂಗದಿಂದಾಗಿ ಈ ಬಂಡೆಯು ಗಂಭೀರ ಅಪಾಯವನ್ನು ಎದುರಿಸುತ್ತದೆ. ಹಲವು ಮರಗಳಿಗೂ ಕೊಡಲಿ ಬೀಳಲಿದೆ ಎಂದು ತಿಳಿಸಿದರು.
ಯೋಜನೆಯೊಂದಿಗೆ ಸಂಬಂಧಿಸಿದ ಮರಗಳನ್ನು ಕಡಿಯುವ ಪ್ರಸ್ತಾವನೆಯ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸರ್ಕಾರಿ ವಕೀಲರಿಗೆ ಕೋರ್ಟ್ ಸೂಚನೆ ನೀಡಿದೆ. ಪರಿಸರ ಪರಿಣಾಮ ಮೌಲ್ಯಮಾಪನದ ಕುರಿತು ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯಿಂದಲೂ ಅಭಿಪ್ರಾಯ ಕೇಳಿದ ಕೋರ್ಟ್, ನಂತರ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 28ರಂದು ಮುಂದೂಡಿದೆ. ಇದನ್ನೂ ಓದಿ: ಚಾಮುಂಡಿ ತಾಯಿಯ ಕ್ಷಮೆ ಕೇಳು: ಪ್ರತಾಪ್ ಸಿಂಹಗೆ ಪ್ರದೀಪ್ ಈಶ್ವರ್ ಆಗ್ರಹ
ಬೆಂಗಳೂರು: ಕರ್ನೂಲ್ ಬಸ್ ದುರಂತದ (Karnool Bus Fire) ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನೂಲ್‌ನಲ್ಲಿ ಸಂಭವಿಸಿರುವ ಬಸ್ ಅಪಘಾತ ದುರಾದೃಷ್ಟಕರ. ಇತ್ತೀಚೆಗೆ ಬೆಂಗಳೂರಿನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಗ್ರೀನ್ ಲೈನ್ ಬಸ್ ಕೂಡ ಇದೇ ರೀತಿ ದುರಂತಕ್ಕೆ ಒಳಗಾಗಿತ್ತು. ಆಗ ನಮ್ಮ ಪಕ್ಷದ ರಾಯಚೂರು ಅಧ್ಯಕ್ಷೆ ಚಾಲಕನನ್ನು ಎಚ್ಚರಿಸಿದ ಪರಿಣಾಮ, ಬಸ್‌ನಲ್ಲಿದ್ದ 20 ಮೆಡಿಕಲ್ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದರು. ಕೆಲವು ಸಣ್ಣಪುಟ್ಟ ಗಾಯಗಳಾಗಿದ್ದವು. ಆದರೆ ಆ ರಾಜ್ಯದ ಪೊಲೀಸರು ಅಗತ್ಯ ಕ್ರಮ ಕೈಗೊಂಡಿರಲಿಲ್ಲ. ನಾನು ರಾಯಚೂರಿಗೆ ಹೋದಾಗ ಅಲ್ಲಿ ಕೆಲವರು ನನಗೆ ಅದರ ವಿಡಿಯೋ ತೋರಿಸಿದರು ಎಂದು ಹೇಳಿದರು.ಇದನ್ನೂ ಓದಿ: ಡ್ರೈವರ್, ಕಂಡಕ್ಟರ್ ಬೆಂಕಿ ನಂದಿಸ್ತಿದ್ದರು, 5 ಸೆಕೆಂಡ್‌ಲ್ಲಿ ಜೀವ ಉಳಿಸಿಕೊಂಡ್ವಿ – ಪ್ರಾಣಾಪಾಯದಿಂದ ಪಾರಾದ ಆಕಾಶ್ ಮಾತು
ಈ ದುರಂತ ಬೇರೆ ರಾಜ್ಯದಲ್ಲಿ ಆಗಿದ್ದರೂ ಈ ಬಗ್ಗೆ ಗಮನಹರಿಸುವಂತೆ ಸಾರಿಗೆ ಸಚಿವರು ಹಾಗೂ ಗೃಹ ಸಚಿವರಿಗೆ ಸೂಚಿಸುತ್ತೇವೆ. ಯಾವುದೇ ರಾಜ್ಯದ ಸರ್ಕಾರವಾಗಲಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು. ಈ ಪ್ರಕರಣದಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಹೀಗಾಗಿ ಅಪಘಾತಕ್ಕೆ ಕಾರಣ ತಿಳಿಯಲು ತನಿಖೆ ನಡೆಸಬೇಕಿದೆ. ಇದು ಸಣ್ಣ ಘಟನೆಯಲ್ಲ. ಇಂತಹ ದುರ್ಘಟನೆ ಮತ್ತೆ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ ತೇಜಸ್ವಿ ಸೂರ್ಯ ಬಗ್ಗೆ ಮಾತನಾಡಿದ ಅವರು, ಎಷ್ಟು ಬಾರಿ ಪ್ರಧಾನಿಯವರನ್ನು ಭೇಟಿ ಮಾಡಿ ಬೆಂಗಳೂರಿನ ಅಭಿವೃದ್ಧಿಗೆ ಎಷ್ಟು ಅನುದಾನ ಕೋರಿದ್ದಾರೆ. ಲೋಕಸಭಾ ಸದಸ್ಯನಾಗಿ ಆತ ಕರ್ನಾಟಕಕ್ಕೆ ಎಷ್ಟು ಅನುದಾನ ತಂದಿದ್ದಾನೆ? ನಿಗದಿತವಾಗಿ ದೊರೆಯುವ ಅನುದಾನ ಬೇರೆಯಾದರೆ ವಿಶೇಷ ಅನುದಾನದ ಬಗ್ಗೆ ನಾನು ಪ್ರಶ್ನೆ ಮಾಡುತ್ತಿದ್ದೇನೆ. ಬೆಂಗಳೂರಿನ ಜನ ಆತನಿಗೆ ಮತ ನೀಡಿದ್ದಾರೆ. ಬೆಂಗಳೂರಿಗೆ ಆತನ ಕೊಡುಗೆ ಏನೆಂದು ಉತ್ತರಿಸಲಿ ಎಂದು ತಿರುಗೇಟು ನೀಡಿದರು.ಇದನ್ನೂ ಓದಿ: ಚಿತ್ತಾಪುರದಲ್ಲಿ RSS ಪಥಸಂಚಲನ ವಿವಾದ – ಅ.28ಕ್ಕೆ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚನೆ
ಬೆಂಗಳೂರು: ಸೂರ್ಯನಿಗೂ ಚಂದ್ರನಿಗೂ, ಅಮಾವಾಸ್ಯೆಗೂ ಹುಣ್ಷಿಮೆಗೂ ವ್ಯತ್ಯಾಸ ತಿಳಿದು ಸಿದ್ದರಾಮಯ್ಯನವರು ಮಾತಾಡಲಿ ಅಂತ ಅಮಾವಾಸ್ಯೆ ಎಂದು ಕರೆದ ಸಿಎಂ ಸಿದ್ದರಾಮಯ್ಯಗೆ (Siddaramaiah) ಸಂಸದ ತೇಜಸ್ವಿ ಸೂರ್ಯ (Tejaswi Surya) ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತಾಡಿದ ಅವರು, ಸಿದ್ದರಾಮಯ್ಯ ಹಿರಿಯರು, ಲೋಕಾನುಭ ಇರೋರು ಅವರಿಗೆ ಅಮಾವಾಸ್ಯೆ, ಹುಣ್ಣಿಮೆ ನಡುವಿನ ವ್ಯತ್ಯಾಸ ಗೊತ್ತಿಲ್ವಾ? ವರ್ಷದ 365 ದಿನವೂ ಬೆಳಕು ಕೊಡೋದು ಸೂರ್ಯ ಮಾತ್ರ, ಚಂದ್ರ ಅಲ್ಲ. ಚಂದ್ರನ ಪೂಜೆ ಮಾಡುವವರ ಜೊತೆಯಿದ್ದು, ಅಮಾವಾಸ್ಯೆ ದಿನ ಸೂರ್ಯ ಇರಲ್ಲ ಅಂತ ಸಿಎಂ ಗೊಂದಲಗೊಂಡಿರಬಹುದು ಎಂದು ಟಾಂಗ್ ಕೊಟ್ಟಿದ್ದಾರೆ.ಇದನ್ನೂ ಓದಿ: ಇದಾನಲ್ಲ ಅಮವಾಸ್ಯೆ ತೇಜಸ್ವಿ ಸೂರ್ಯ ಕೇಂದ್ರದಿಂದ ಹಣ ತರಲ್ಲ – ಸಿಎಂ
ಸಿದ್ದರಾಮಯ್ಯ ಹಿರಿಯರು, ನನ್ನ ತಂದೆ ಸಮಾನ. ಅವರ ವಿರುದ್ಧ ನಾನು ವೈಯಕ್ತಿಕವಾಗಿ ಟೀಕಿಸಿದರೆ ನನಗೆ ಶೋಭೆ ತರಲ್ಲ. ಅದು ನನ್ನ ರಾಜಕಾರಣದ ಸಂಸ್ಕಾರ ಅಲ್ಲ, ನಮ್ಮ ಪಕ್ಷದ ಸಂಸ್ಕಾರವೂ ಅಲ್ಲ. ಆದರೆ ಸಿದ್ದರಾಮಯ್ಯ ಆಡಳಿತವನ್ನು ಪ್ರಶ್ನೆ ಮಾಡಲೇಬೇಕು. ಕರ್ನಾಟಕಕ್ಕೆ ಸಿದ್ದರಾಮಯ್ಯ ಆಡಳಿತ ಎಂಬ ಗ್ರಹಣ ಹಿಡಿದಿದೆ. ಬೆಂಗಳೂರಿನಲ್ಲಿ ನರಕ ಸ್ಥಿತಿ ಇದೆ. ಬೆಂಗಳೂರಿನಲ್ಲಿ ಗುಂಡಿಗಳಿಲ್ಲದ ರಸ್ತೆಗಳಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಆಗ್ತಿಲ್ಲ. ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚಾಗಿವೆ. ಕಂಪನಿಗಳು ಬೆಂಗಳೂರಿಗೆ ಬರ್ತಿಲ್ಲ. ಗೃಹ ಸಚಿವರು ಬೆಟ್ಟಿಂಗ್‌ನಲ್ಲಿ ಬ್ಯುಸಿ ಇದ್ದರೆ, ಐಟಿ ಸಚಿವರು ಆರ್‌ಎಸ್‌ಎಸ್ ಬ್ಯಾನ್ ಮಾಡೋದ್ರಲ್ಲಿ ಬ್ಯುಸಿ ಇದ್ದಾರೆ. ಇದು ಸಿದ್ದರಾಮಯ್ಯ ಆಡಳಿತದ ವೈಖರಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಸಂಸದರು ಕೇಂದ್ರದ ಬಳಿ ಕರ್ನಾಟಕಕ್ಕೆ ಕೊಡಬೇಕಾದ ದುಡ್ಡು ಕೇಳಲ್ಲ, ದಕ್ಷಿಣದಲ್ಲಿ ಇದಾನಲ್ಲ ಅಮವಾಸ್ಯೆ ತೇಜಸ್ವಿ ಸೂರ್ಯ (Tejaswi Surya) ಕೂಡ ಕೇಂದ್ರದ ಬಳಿ ಹಣ ಕೇಳಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರು ಕೇಂದ್ರ ನಗರ ಪಾಲಿಕೆ ಹಾಗೂ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವತಿಯಿಂದ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವೈಟ್‌ಟಾಪಿಂಗ್ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಬಿ.ವಿ.ಕೆ ಐಯ್ಯಂಗಾರ್ ರಸ್ತೆಯ ಆರ್.ಟಿ ಸ್ಟ್ರೀಟ್ ಜಂಕ್ಷನ್‌ನಲ್ಲಿ ಭೂಮಿ ಪೂಜೆ ನೆರವೇರಿಸಿದರು.ಇದನ್ನೂ ಓದಿ: ಡಿಕೆಶಿಯನ್ನು ಭೇಟಿಯಾದ ಕಿರಣ್ ಮಜುಂದಾರ್ ಶಾ – ಉತ್ತಮ ಚರ್ಚೆಯಾಗಿದೆ ಎಂದ ಡಿಸಿಎಂ
ಬಳಿಕ ಮಾತನಾಡಿದ ಅವರು, ಸಂಸದರು ಕರ್ನಾಟಕಕ್ಕೆ ಕೊಡಬೇಕಾದ ದುಡ್ಡು ಕೇಳಲ್ಲ, ಪಿಸಿ ಮೋಹನ್ ಕೇಳಲಿಲ್ಲ, ಅವನು ಯಾರು ಸೌತ್ ಅಲ್ಲಿ ಇದಾನಲ್ಲ ಅಮಾವಾಸ್ಯೆ ತೇಜಸ್ವಿ ಸೂರ್ಯ ಕೇಂದ್ರದ ಬಳಿ ಹಣ ಕೇಳಲಿಲ್ಲ, ಆಯಮ್ಮ ಶೋಭಾ ಕರಂದ್ಲಾಜೆ ಕೂಡ ಹಣ ತರಲ್ಲ. ಮಂತ್ರಿ ಆಗಿರುವ ಕುಮಾರಸ್ವಾಮಿ ಕೂಡ ಕೇಂದ್ರದ ಬಳಿ ಹಣ ಕೇಳಿಲ್ಲ. ಅದಕ್ಕೆ ಕುಮಾರಸ್ವಾಮಿ ಸೇರಿ ಎಲ್ಲ ಎಂಪಿಗಳನ್ನು ಸೋಲಿಸಿ ಎಂದು ಕರೆ ನೀಡಿದರು.
ಪ್ರಧಾನಿ ಮೋದಿಗೆ ಕರ್ನಾಟಕದ ಮೇಲೆ ದ್ವೇಷವಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಹಣ ಬರಲ್ಲ. ನಾವು ಕೊಟ್ಟ ತೆರಿಗೆ ಹಣವೂ ವಾಪಸ್ ಕೊಡಲ್ಲ. ಕೇಂದ್ರಕ್ಕೆ ತೆರಿಗೆ ರೂಪದಲ್ಲಿ ಒಂದು ರೂಪಾಯಿ ಕೊಡ್ತೇವೆ. ಆದರೆ ನಮಗೆ ಕೇಂದ್ರದಿಂದ 14-15 ಪೈಸೆ ತೆರಿಗೆ ವಾಪಾಸ್ ಬರುತ್ತದೆ ಅಷ್ಟೇ. ಇನ್ನೂ ಬಿಜೆಪಿಯವರು ಕೇಂದ್ರದ ಹಣ ಅಂತಾರೆ. ಬಿಜೆಪಿಯವರು ಜಿಎಸ್‌ಟಿ ಇಳಿಕೆಯನ್ನ ದೀಪಾವಳಿ ಗಿಫ್ಟ್ ಅಂತಾ ಬ್ಯಾನರ್ ಹಾಕಿಕೊಳ್ಳುತ್ತಾರೆ. ಎಂಟು ವರ್ಷ ತೆರಿಗೆ ವಸೂಲಿ ಮಾಡಿ ಈಗ ದೀಪಾವಳಿ ಗಿಫ್ಟ್ ಅಂತೆ. ಯಾವ ದೀಪಾವಳಿ ಗಿಫ್ಟ್ ಅಪ್ಪ ಇದು ಎಂದು ಟಾಂಗ್ ಕೊಟ್ಟರು.
ಈ ವೇಳೆ ಗಾಂಧಿನಗರ ಕ್ಷೇತ್ರದ ಶಾಸಕರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಯೋಜನೆ ಇಲಾಖೆ ಸಚಿವರಾದ ಡಿ. ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹ್ಮದ್, ಶಾಸಕರಾದ ವೆಂಕಟೇಶ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ಇದನ್ನೂ ಓದಿ: ದೀಪಾವಳಿ ಹಬ್ಬ | ಪಟ್ಟಕ್ಕಾಗಿ ಕೈ ಶಾಸಕರಿಂದ ಎರಡೂ ಪವರ್ ಸೆಂಟರ್ ಬ್ಯಾಲೆನ್ಸ್!
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ಭಾನುವಾರ ಜೆ.ಪಿ. ನಗರ 1ನೇ ಹಂತದಲ್ಲಿರುವ ಎಸ್‌ಬಿಐ ಕಾಲೋನಿಯಲ್ಲಿ ಪೈಪ್‌ಲೈನ್ ಅನಿಲ (PNG) ಕಾಮಗಾರಿಗೆ ಚಾಲನೆ ನೀಡಿದರು.
ನಗರದ ಮನೆಗಳಿಗೆ ಸ್ವಚ್ಛ, ಸುರಕ್ಷಿತ ಮತ್ತು ಹೆಚ್ಚು ವೆಚ್ಚ-ಪರಿಣಾಮಕಾರಿ ಶಕ್ತಿಯನ್ನು ಒದಗಿಸುವ ದಿಕ್ಕಿನಲ್ಲಿ ಈ ಯೋಜನೆಯು ಒಂದು ಮಹತ್ವದ ಹೆಜ್ಜೆಯಾಗಿದೆ. ಈ ಸಂದರ್ಭದಲ್ಲಿ ಪಿಎನ್‌ಜಿಯ ಆರ್ಥಿಕ ಪ್ರಯೋಜನಗಳನ್ನು ವಿವರಿಸಿದ ಸಂಸದ ಸೂರ್ಯ ಅವರು, ಕುಟುಂಬಗಳು ಪ್ರತಿ ಸಿಲಿಂಡರ್ ಮೇಲೆ ಸರಾಸರಿ 200 ರಿಂದ 300 ರೂ. ಉಳಿತಾಯವನ್ನು ಮಾಡಬಹುದಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಸಿಎಂ ಅವರೇ ರೈತರ ಮುಂದೆ ತೊಡೆ ತಟ್ಟುತ್ತಿದ್ದೀರಿ, ನಿಮ್ಮ ತೊಡೆ ಮುರಿಯುವ ಕಾಲ ದೂರವಿಲ್ಲ: ನಿಖಿಲ್
ಪಿಎನ್‌ಜಿ ಸಾಂಪ್ರದಾಯಿಕ ಎಲ್‌ಪಿಜಿಗಿಂತ ಹೆಚ್ಚು ಸುರಕ್ಷಿತ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರವು ಬೆಂಗಳೂರಿನಲ್ಲಿ ಶೇ.100 ರಷ್ಟು ಪಿಎನ್‌ಜಿ ವ್ಯಾಪ್ತಿಯನ್ನು ಒದಗಿಸಲು ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಬೆಂಗಳೂರು ದಕ್ಷಿಣದಲ್ಲಿ ಇಲ್ಲಿಯವರೆಗೆ ಬೊಮ್ಮನಹಳ್ಳಿ ಮತ್ತು ಬಿಟಿಎಂ ವಿಧಾನಸಭಾ ಕ್ಷೇತ್ರದ ನಿವಾಸಿಗಳು ಪೈಪ್‌ಲೈನ್ ಅನಿಲ ಸಂಪರ್ಕವನ್ನು ಪಡೆಯುತ್ತಿದ್ದು, ಎಸ್‌ಬಿಐ ಲೇಔಟ್‌ನಲ್ಲಿ ಪಿಎನ್‌ಜಿ ಯೋಜನೆಗೆ ಅಂದಾಜು 1.5 ರಿಂದ 2 ಕೋಟಿ ರೂ. ವೆಚ್ಚವಾಗಲಿದೆ. ಸಂಪೂರ್ಣ ವ್ಯವಸ್ಥೆಯನ್ನು ಗೇಲ್ (GAIL) ಒದಗಿಸಲಿದೆ. ಇದನ್ನೂ ಓದಿ: ರಾಯಚೂರು | ಜಾತಿಗಣತಿ ಸಮೀಕ್ಷಾ ಕಾರ್ಯಕ್ಕೆ ನಿರ್ಲಕ್ಷ್ಯ ತೋರಿದ ಅಧಿಕಾರಿ ಅಮಾನತು
– ನನಗೆ ಸರ್ಕಾರದ ಮೇಲೆ ನಂಬಿಕೆ ಇಲ್ಲ, ನಾನು ಕೂಡ ಜಾತಿಗಣತಿಯಲ್ಲಿ ಪಾಲ್ಗೊಳ್ಳಲ್ಲ: ಬಿಜೆಪಿ ಸಂಸದ
ಬೆಂಗಳೂರು: ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ. ಹಾಗಾಗಿ, ಜಾತಿಗಣತಿ ಬಹಿಷ್ಕರಿಸಿ ಎಂದು ಜನತೆಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಕರೆ ಕೊಟ್ಟಿದ್ದಾರೆ.
ಜಾತಿಗಣತಿ (Caste Census) ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಜಾತಿಗಣತಿಯಲ್ಲಿ ಪಾಲ್ಗೊಳ್ಳಲ್ಲ. ನಂಗೆ ನನ್ನ ಮಾಹಿತಿ ಸುರಕ್ಷಿತವಾಗಿರುತ್ತೆ ಅನ್ನೋ ನಂಬಿಕೆ ಇಲ್ಲ. ಹೀಗಾಗಿ, ಸರ್ಕಾರದ ಮೇಲೆ ನಂಬಿಕೆ ಇರದೇ ಇರೋದ್ರಿಂದ ಇದರಲ್ಲಿ ಪಾಲ್ಗೊಳ್ಳಲ್ಲ. ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ. ಜಾತಿ ಜಾತಿ ಮಧ್ಯೆ ಗಲಾಟೆ ತರಲು ಮಾತ್ರ ಇದನ್ನು ಮಾಡುತ್ತಿದ್ದಾರೆ. ದಯವಿಟ್ಟು ನೀವು ಇದರಲ್ಲಿ ಪಾಲ್ಗೊಳ್ಳಬೇಡಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಮೀಕ್ಷೆಗೆ ಸಿದ್ಧತೆ ಸರಿಯಾಗಿ ಮಾಡದೇ ಸರ್ಕಾರದಿಂದ ಗೊಂದಲ: ನಿಖಿಲ್
ಬೆಂಗಳೂರು ರಸ್ತೆ ಗುಂಡಿ ವಿಚಾರವಾಗಿ ಮಾತನಾಡಿ, ದೆಹಲಿಯಲ್ಲಿ ಗುಂಡಿ ಇದ್ಯೋ ಇಲ್ವೋ ಯಾಕೆ ಬೇಕು? ಬೆಂಗಳೂರು ಸರಿ ಮಾಡ್ಸಿ ಮೊದಲು. ದೆಹಲಿಯಲ್ಲಿ ಅದ್ಭುತ ಮೆಟ್ರೋ ಕನೆಕ್ಟಿವಿಟಿ ಇದೆ. ಬೆಂಗಳೂರಿನಲ್ಲಿ ಯಾಕಿಲ್ಲ? ಹೋಲಿಕೆ ಮಾಡೋದು ಯಾಕೆ? ಏಳು ಕಿಮೀ ನಡೆದುಕೊಂಡು ಹೋಗಿದ್ದೀನಿ. 100 ಮೀಟರ್‌ಗೊಂದು ರಾಶಿ ರಾಶಿ ಗುಂಡಿಗಳು ಇವೆ. ಅಧಿಕಾರಿಗಳು ನಮ್ ಮಾತು ಕೇಳೋದಾ? ಸಿಎಂ ಡಿಸಿಎಂ ಮಾತು ಕೇಳ್ತಾರಾ ಎಂದು ಪ್ರಶ್ನಿಸಿದ್ದಾರೆ.
ರಸ್ತೆ ಗುಂಡಿ ಮುಚ್ಚಿಸೋದು ದೊಡ್ಡ ದುಡ್ಡು ಕೊಡೋ ಕಾಮಧೇನು. ಈ ವಿಚಾರದಲ್ಲಿ ದೊಡ್ಡ ಸ್ಕ್ಯಾಮ್ ಇದೆ. ಎರಡು ಮೂರು ಮಳೆ ಬಂದ್ರೆ ರಸ್ತೆ ಕಿತ್ತೋಗುತ್ತೆ. ಜಿಬಿಐ ಹಳೆ ವೈನ್ ಹೊಸ ಬಾಟಲ್ ನಲ್ಲಿ ಹಾಕಿದ್ದಾರೆ. ಕಾಂಟ್ರ್ಯಾಕ್ಟರ್, ಅಧಿಕಾರಿಗಳು, ರಾಜಕೀಯ ನಾಯಕರು ಇವರೆಲ್ಲರೂ ಈ ಸ್ಕ್ಯಾಮ್‌ನಲ್ಲಿ ಭಾಗಿದಾರರು. ಕೆಟ್ಟದನ್ನು ಮಾತ್ರ ಹೋಲಿಕೆ ಮಾಡೋದು ಅಧಿಕಾರನಾ? 100 ಕಿಮೀ ಫ್ಲೈಓವರ್ ಅಂತಾರೆ. ಮೊದಲು 100 ಮೀಟರ್ ಗುಂಡಿಯಿಲ್ಲದ ರಸ್ತೆ ಕೊಡಿ ಸ್ವಾಮಿ. ರಸ್ತೆ ಹಾಕಿದ್ರೆ ಬೇರೆ ಕಡೆ ಎಂಟತ್ತು ವರ್ಷ ಬಾಳಿಕೆ ಬರುತ್ತೆ. ನಮ್ಮಲ್ಲಿ ಯಾಕೆ ತಿಂಗಳು ಬಾಳಿಕೆ ಬರುತ್ತೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್
ಬೆಂಗಳೂರು-ಮುಂಬೈ ಪ್ರಮುಖ ವ್ಯಾಪಾರದ ಹಬ್ ಆಗಲಿದೆ. ಇದುವರೆಗೆ ಒಂದು ಟ್ರೈನ್ ಇತ್ತು. ಬಹಳ ದೀರ್ಘಕಾಲದ ಪ್ರಯಾಣ. ಹೀಗಾಗಿ, ಸೂಪರ್ ಫಾಸ್ಟ್ ಟ್ರೈನ್‌ಗೆ ನಾಲ್ಕು ವರ್ಷದಿಂದ ಶ್ರಮ ಪಡುತ್ತಿದ್ದೆ. ಮೂರು ನಾಲ್ಕು ವಾರಗಳಲ್ಲಿ ಸೂಪರ್ ಫಾಸ್ಟ್ ಟ್ರೈನ್ ಓಡಾಡಲಿದೆ. ಟೈಂಟೇಬಲ್ ಫಿಕ್ಸ್ ಆಗಲಿದೆ. ಜರ್ನಿ ಅವರ್‌ನ್ನು ಸಂಪೂರ್ಣ ಕಡಿತ ಮಾಡುವ ಉದ್ದೇಶದಿಂದ ಇದನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ (Bengaluru-Mumbai Superfast Train) ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಮಾಹಿತಿ ನೀಡಿದ್ದಾರೆ. ಈ ಅನುಮೋದನೆಯಿಂದ ಎರಡೂ ನಗರಗಳ ನಾಗರಿಕರ 30 ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಸಂಭ್ರಮಿಸಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಅವರು ‘ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್‌ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದು, ಅವುಗಳ ನಿಲ್ದಾಣಗಳಲ್ಲಿನ ಸಾಮರ್ಥ್ಯದ ವಿಸ್ತರಣೆಯಿಂದಾಗಿ ಇದು ಈಗ ಸಾಧ್ಯವಾಗಿದೆ’ ಎಂದಿದ್ದಾರೆ ಎಂದು ತೇಜಸ್ವಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಗಡಿ ಜಿಲ್ಲೆ ಬೀದರ್‌ನಲ್ಲಿ ಧಾರಾಕಾರ ಮಳೆಗೆ ಭಾರೀ ಅವಾಂತರ – ರಸ್ತೆ ಸಂಚಾರ ಬಂದ್
I have some great news for people of Bengaluru and Mumbai.
From last 30 years, our two great cities were connected by only one super fast train -Udyan Express. Even that train took more than 24 hrs to reach. This forced most people to inevitably take bus or flights. Travel was… pic.twitter.com/NZmJ2rhiLs
ಬೆಂಗಳೂರು ಮತ್ತು ಮುಂಬೈ ಭಾರತದ ಎರಡು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದರೂ, ಈ ಎರಡೂ ನಗರಗಳು ಕೇವಲ ಒಂದೇ ಒಂದು ರೈಲಿನಿಂದ ಸಂಪರ್ಕ ಹೊಂದಿದ್ದವು. ಆ ರೈಲು ಉದ್ಯಾನ ಎಕ್ಸ್‌ಪ್ರೆಸ್ ಆಗಿದ್ದು, ಈ ಪ್ರಯಾಣವನ್ನು ಪೂರ್ಣಗೊಳಿಸಲು 24 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿತ್ತು. ಇದು 30 ವರ್ಷಗಳಿಂದ ಬಾಕಿ ಉಳಿದಿದ್ದ ಬೇಡಿಕೆಯಾಗಿದೆ. ಕಳೆದ ಮೂರು ದಶಕಗಳಲ್ಲಿ ಎರಡೂ ನಗರಗಳ ಬೆಳವಣಿಗೆಯ ಹೊರತಾಗಿಯೂ, ಬೆಂಗಳೂರು ಮತ್ತು ಮುಂಬೈ ನಡುವೆ ಕೇವಲ ಒಂದು ಸೂಪರ್‌ಫಾಸ್ಟ್ ರೈಲು ಮಾತ್ರ ಇತ್ತು. ಕಳೆದ ವರ್ಷವೊಂದರಲ್ಲೇ 26 ಲಕ್ಷಕ್ಕೂ ಹೆಚ್ಚು ಜನರು ಈ ಎರಡು ನಗರಗಳ ನಡುವೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಈ ಹೊಸ ಸೇವೆಯು ಲಕ್ಷಾಂತರ ನಾಗರಿಕರಿಗೆ ಪ್ರಯಾಣವನ್ನು ಹೆಚ್ಚು ಕೈಗೆಟುಕುವ ದರದಲ್ಲಿ ಅನುಕೂಲಕರವಾಗಿಸಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಥಾರ್ ಡಿಕ್ಕಿ – ಐವರು ದುರ್ಮರಣ, ಓರ್ವ ಗಂಭೀರ
ಈ ವಿಷಯದ ಕುರಿತಾಗಿ ಕಳೆದ ನಾಲ್ಕು ವರ್ಷಗಳಿಂದ ಸಂಸತ್ತಿನಲ್ಲಿ, ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಗಳಲ್ಲಿ ಮತ್ತು ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ನಿರಂತರ ಪ್ರಯತ್ನದ ಫಲವಾಗಿದೆ. ಈ ಹೊಸ ರೈಲು ಪ್ರಯಾಣದ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ ಮತ್ತು ವಿಮಾನ ಹಾಗೂ ಬಸ್‌ಗಳಿಗೆ ಆರಾಮದಾಯಕವಾದ ಪರ್ಯಾಯವನ್ನು ಒದಗಿಸುತ್ತದೆ. ಅಲ್ಲದೆ, ಇದು ಎರಡು ಮಹಾನಗರಗಳ ನಡುವಿನ ಆರ್ಥಿಕ ಮತ್ತು ಸಾಮಾಜಿಕ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುತ್ತದೆ. ಕರ್ನಾಟಕದ ಜನತೆ ಮತ್ತು ಕನ್ನಡಿಗರ ಪರವಾಗಿ, ಈ ಬಹುಕಾಲದ ಕನಸನ್ನು ನನಸಾಗಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ತೇಜಸ್ವಿ ಸೂರ್ಯ ಕೃತಜ್ಞತೆಯನ್ನು ಸಲ್ಲಿಸಿದ್ದು, ಈ ಕಾರ್ಯಕ್ಕೆ ಬೆಂಬಲ ನೀಡಿದ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೂ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಬುರುಡೆ ದೆಹಲಿಗೆ ಎತ್ತಿಕೊಂಡು ಹೋಗಿದ್ದು, ಸುಪ್ರೀಂ ಕೋರ್ಟ್‌ಗೆ ಹೋಗಿದ್ದು ಎಲ್ಲಾ ಗೊತ್ತು: ಡಿಕೆಶಿ ಬಾಂಬ್
– ಮೆಟ್ರೋ ಸೇವೆ ಕೊಡಲು ಬಿಜೆಪಿಗೆ ಇರುವ ಅರ್ಜೆಂಟ್ ಕಾಂಗ್ರೆಸ್‌ಗೆ ಇಲ್ಲ – ಸಂಸದ
ಬೆಂಗಳೂರು: ಬೆಂಗಳೂರಿನ ಮೆಟ್ರೋ (Bengaluru Metro) ಕನೆಕ್ಟಿವಿಟಿ ಸುಮಾರು 100 ಕಿ.ಮೀ ತಲುಪಲು ಅದಕ್ಕೆ ನರೇಂದ್ರ ಮೋದಿಯವರ (Narendra Modi) ಸರ್ಕಾರ ಮತ್ತು ಪ್ರಧಾನಿಯವರು ಬೆಂಗಳೂರಿನ ಮೂಲಭೂತ ಸೌಕರ್ಯಕ್ಕೆ ಕೊಟ್ಟ ಆದ್ಯತೆಯೇ ಕಾರಣ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2014ರಲ್ಲಿ ಮೋದಿಯವರು ಪ್ರಧಾನಿ ಆಗುವುದಕ್ಕೆ ಮೊದಲು ಬೆಂಗಳೂರಿನ ಮೆಟ್ರೋ ಕನೆಕ್ಟಿವಿಟಿ ಇದ್ದದ್ದು ಸುಮಾರು 7.5 ಕಿ.ಮೀ. ಆ.10ರಂದು ಯೆಲ್ಲೋ ಲೈನ್ ಉದ್ಘಾಟನೆಯ ನಂತರ ಬೆಂಗಳೂರಿನ ಮೆಟ್ರೋ ಕನೆಕ್ಟಿವಿಟಿ ಸುಮಾರು 100 ಕಿ.ಮೀ ತಲುಪಲಿದೆ. ದೆಹಲಿ ನಂತರ ಅತಿ ಹೆಚ್ಚು ಕನೆಕ್ಟಿವಿಟಿ ಇರುವ, ವಿಸ್ತರಣೆ ಆಗುತ್ತಿರುವ ಮೆಟ್ರೊ ಇದು ಎಂದು ವಿವರ ನೀಡಿದರು. ಇದನ್ನೂ ಓದಿ: ಟ್ರಂಪ್ ಸುಂಕ ಮೋದಿ ವಿದೇಶಾಂಗ ನೀತಿಯ ದುರಂತ: ಮಲ್ಲಿಕಾರ್ಜುನ ಖರ್ಗೆ ಆರೋಪ
ಪ್ರಧಾನಿಯವರನ್ನು ಯಾರು ಕರೆಸಿದರು ಎಂಬುದಕ್ಕೆ ಉತ್ತರಿಸುವ ಅಗತ್ಯವಿಲ್ಲ. ಬೆಂಗಳೂರಿನ ಮೆಟ್ರೋ ಆದಷ್ಟು ಬೇಗ ಉದ್ಘಾಟನೆ ಆಗಬೇಕು, ವಿಳಂಬ ಸಲ್ಲದೆಂದು ಪ್ರಧಾನಿಯವರು ದಿನಾಂಕ ನಿಗದಿಪಡಿಸಿ ಬರುತ್ತಿದ್ದಾರೆ. ಅವರು ಕರ್ನಾಟಕ, ದೆಹಲಿ ಮಾತ್ರವಲ್ಲ ಭಾರತದ ಪ್ರಧಾನಿ. ಅವರ ಆಗಮಿಸುವಿಕೆಯನ್ನು ರಾಜ್ಯ ಸರ್ಕಾರ, ಬಿಜೆಪಿ, ಇಲ್ಲಿನ ಜನತೆ ಉತ್ಸಾಹ, ಹಬ್ಬದಂತೆ ಸ್ವಾಗತಿಸಲು ಸಜ್ಜಾಗಬೇಕಿದೆ. ಅಂತೆಯೇ ಅವರ ಸ್ವಾಗತ ಕಾರ್ಯಕ್ಕೆ ಎಲ್ಲರೂ ಸಜ್ಜಾಗಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿಯಿಂದ ಯೆಲ್ಲೋ ಮೆಟ್ರೋ ಲೈನ್ ಲೋಕಾರ್ಪಣೆ; ಪ್ರಧಾನಿ ಸ್ವಾಗತಕ್ಕೆ ಬಿಜೆಪಿ ಭರ್ಜರಿ ಸಿದ್ಧತೆ
ಯೆಲ್ಲೋ ಲೈನಿನ ಮೆಟ್ರೊ ಬಗ್ಗೆ ಸಿಎಂ, ಡಿಸಿಎಂ ತಲೆ ಕೆಡಿಸಿಕೊಂಡಿಲ್ಲ.
ರಾಜ್ಯ ಸರ್ಕಾರ ಅದರಲ್ಲೂ ವಿಶೇಷವಾಗಿ ಉಪಮುಖ್ಯಮಂತ್ರಿಗಳು ಬುಧವಾರ ಯೆಲ್ಲೋ ಲೈನಿನ ಮೆಟ್ರೋದಲ್ಲಿ ಓಡಾಡಿದರು. ಇದು ಶೇ 50-50ರ ಯೋಜನೆ. ನಮ್ಮದೂ ದೊಡ್ಡ ಕೊಡುಗೆ ಇದೆ ಎಂದಿದ್ದಾರೆ. ಕಳೆದ ಎರಡೂವರೆ ವರ್ಷಗಳಲ್ಲಿ ಮುಖ್ಯಮಂತ್ರಿ- ಉಪ ಮುಖ್ಯಮಂತ್ರಿಗಳು ಯೆಲ್ಲೋ ಲೈನಿನ ಮೆಟ್ರೋ ಬಗ್ಗೆ ಒಂದು ದಿನವೂ ತಲೆ ಕೆಡಿಸಿಕೊಂಡಿಲ್ಲ ಎಂದು ತೇಜಸ್ವಿ ಸೂರ್ಯ ಆರೋಪಿಸಿದರು. ಆ.10ರಂದು ಪ್ರಧಾನಿಯವರು ಉದ್ಘಾಟಿಸಲು ಆಗಮಿಸುತ್ತಾರೆ ಎಂದ ತಕ್ಷಣ, ಬುಧವಾರ ಪ್ರಚಾರ ಗಿಟ್ಟಿಸಿಕೊಳ್ಳಲು ಟೂರ್ ಹೊಡೆಯಲು ಶುರು ಮಾಡಿದ್ದಾರೆ. ಈ ಮೆಟ್ರೋ ಲೈನಿನ ಕೆಲಸ 2018ರಲ್ಲಿ ಆರಂಭವಾಗಿತ್ತು. 2021ಕ್ಕೆ ಇದು ಪೂರ್ಣಗೊಳ್ಳಬೇಕಿತ್ತು. ಕೋವಿಡ್‌ನಿಂದ ಕೆಲವು ಸಮಸ್ಯೆಗಳಾದವು. ಭೂಮಿ ಸ್ವಾಧೀನದಲ್ಲೂ ಕೆಲವು ಸಮಸ್ಯೆಗಳಾದವು. ಆಗ ಕಾಂಗ್ರೆಸ್ಸಿನವರು, ಇನ್ನೊಬ್ಬರಾಗಲಿ ಸಹಾಯಕ್ಕೆ ಬರಲಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಕಾರವಾರ| ಧಾರಾಕಾರ ಮಳೆಗೆ ಕುಸಿದ 2 ಮನೆಗಳು
ಪೂರ್ಣಾವಧಿ ಎಂ.ಡಿ ನೇಮಕ ಮಾಡಿರಲಿಲ್ಲ:
ಕೋವಿಡ್ ಅವಧಿಯಲ್ಲಿ ಯಡಿಯೂರಪ್ಪ ಅವರ ಸರ್ಕಾರವಿತ್ತು. ಕೋವಿಡ್ ಮಧ್ಯದಲ್ಲೂ ಸಿವಿಲ್ ಕೆಲಸಗಳು ನಮ್ಮ ಸರ್ಕಾರದ ಅವಧಿಯಲ್ಲಿ ನಡೆಯಿತು. ಕಾರ್ಮಿಕರನ್ನು ಕರೆಸಲು ಸಮಸ್ಯೆ ಆಗಿದ್ದು, ನಾವು ಆಗ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೆವು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿದ್ದರು. ಹೆಚ್ಚು ಕೆಲಸವೂ ಆಗಿತ್ತು. ಬಳಿಕ ಬೊಮ್ಮಾಯಿಯವರ ಅವಧಿಯಲ್ಲಿ 95% ಸಿವಿಲ್ ಕಾಮಗಾರಿ ನಾವೇ ಪೂರ್ಣಗೊಳಿಸಿದ್ದೆವು. ಇವರ ಸರ್ಕಾರವೇ ಇರಲಿಲ್ಲ; ಇವರ ಸರ್ಕಾರವು ಬಿಎಂಆರ್‌ಸಿಎಲ್‌ಗೆ ಒಬ್ಬ ಪೂರ್ಣಾವಧಿ ಎಂ.ಡಿ ನೇಮಕಕ್ಕೆ ಮುಂದಾಗಲಿಲ್ಲ ಎಂದು ದೂರಿದರು. ಇದನ್ನೂ ಓದಿ: ಉತ್ತರಕಾಶಿಯಲ್ಲಿ ಮೇಘಸ್ಫೋಟ – ಈವರೆಗೆ 274 ಮಂದಿ ರಕ್ಷಣೆ, ಪತ್ತೆಯಾಗದ 59 ಜನರು
ಕಳೆದ ವರ್ಷ ಜನವರಿಯಲ್ಲಿ 3 ತಿಂಗಳ ಹೋರಾಟದ ಬಳಿಕ ರಾಜ್ಯ ಸರ್ಕಾರವು ಮೊದಲ ಬಾರಿ ಪೂರ್ಣಾವಧಿ ಎಂ.ಡಿಯನ್ನು ಬೆಂಗಳೂರು ಮೆಟ್ರೋಗೆ ನೇಮಕ ಮಾಡಿತು. ಕೋಚ್ ಉತ್ಪಾದನಾ ಪ್ರದೇಶಕ್ಕೆ ನಾನು 3 ಬಾರಿ ಹೋಗಿ ಬಂದಿದ್ದೇನೆ. ಪೂರ್ಣಾವಧಿ ಎಂ.ಡಿ ಇಲ್ಲದ ಕಾರಣ ಎಂ.ಡಿ ಬಂದಿರಲಿಲ್ಲ. ರಾಜ್ಯ ಸರ್ಕಾರ ಬುಧವಾರ ಸಬರ್ಬನ್ ರೈಲಿಗೆ ಇನ್ನೊಬ್ಬ ಅಧಿಕಾರಿಯನ್ನು ನೇಮಿಸಿದೆ. ಅವರಿಗೆ ಇನ್ನೊಂದು ಇಲಾಖೆಯ ಪ್ರಭಾರ ಹುದ್ದೆ ಕೊಟ್ಟಿದೆ. ಸಬರ್ಬನ್ ರೈಲಿನ 4 ಕಾರಿಡಾರ್ ಕೆಲಸ ಇವತ್ತು ನಿಂತಿದೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಟ್ರಂಪ್ ಸುಂಕ ಶಾಕ್ ಬೆನ್ನಲ್ಲೇ ಈ ವರ್ಷ ಭಾರತಕ್ಕೆ ಪುಟಿನ್ ಭೇಟಿ
ವೀಸಾ ಸಮಸ್ಯೆ ಬಗ್ಗೆಯೂ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮಾತನಾಡಿಲ್ಲ, ಟ್ವೀಟ್ ಮಾಡಿಲ್ಲ. ಕೇಂದ್ರದ ಸಚಿವರ ಜೊತೆಗೆ ಮಾತನಾಡಿಲ್ಲ. ಆರ್‌ಸಿಬಿ ಕ್ರಿಕೆಟ್ ಮ್ಯಾಚ್ ಗೆದ್ದಾಗ ಇವರೇ ಏನೋ ಸಿಕ್ಸರ್, ಫೋರ್ ಹೊಡೆದ ರೀತಿ ರಾಜ್ಯ ಸರ್ಕಾರ ಪೋಸ್ ಕೊಟ್ಟಿತ್ತು ಎಂದು ಟೀಕಿಸಿದರು. ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ – ಕೆಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು
6 ಬಾರಿ ಕಾಗೆ ಹಾರಿಸಿದರು:
ಕ್ರಿಕೆಟ್ ಪಂದ್ಯದ ಅಷ್ಟೊಂದು ಕ್ರೆಡಿಟ್ ತೆಗೆದುಕೊಳ್ಳಲು ನಿಂತವರು ಇನ್ನು ಮೆಟ್ರೋದಲ್ಲಿ ಕ್ರೆಡಿಟ್ ತೆಗೆದುಕೊಳ್ಳಲು ಬರದೇ ಇರುತ್ತಾರಾ ಎಂದು ಕೇಳಿದರು. ಭೂಸ್ವಾಧೀನ, ವೀಸಾ ಸಮಸ್ಯೆಗಳು ಇದ್ದಾಗ ನೀವೆಲ್ಲಿದ್ದೀರಿ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಉದ್ಘಾಟನೆಗೆ ಇನ್ನು 15 ದಿನ, ಇನ್ನು ಒಂದು ತಿಂಗಳು ಎಂದು 6 ಬಾರಿ ಕಾಗೆ ಹಾರಿಸಿದ್ದಾರೆ. ಮೊನ್ನೆ ನಾವೆಲ್ಲರೂ ಯೆಲ್ಲೋ ಲೈನಿನ ಪ್ರದೇಶದ 7 ಶಾಸಕರು, ಇಬ್ಬರು ಸಂಸದರು, ನಮ್ಮ ಜಿಲ್ಲಾಧ್ಯಕ್ಷರು, ನೂರಾರು ಜನ ಸಾರ್ವಜನಿಕರು ಸೇರಿ ಪ್ರಯತ್ನ ಮಾಡಿ ಹೋರಾಟ ಮಾಡಿ ಗಲಾಟೆ ಮಾಡಿದಾಗ ಆಗಸ್ಟ್ 15ರೊಳಗೆ ಮಾಡುತ್ತೇವೆ ಎಂದಿದ್ದರು ಎಂದು ವಿವರಿಸಿದರು. ಇದನ್ನೂ ಓದಿ: ನನ್ನ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂದು ಗೊತ್ತಿಲ್ಲ: ಡಾ.ಸುಧಾಕರ್ ರಿಯಾಕ್ಷನ್