Tag: ತೇಜಸ್ವಿ ಸೂರ್ಯ

  • ಸುಳ್ಳು ಸುದ್ದಿ ಹರಿಬಿಟ್ಟ ಆರೋಪ – ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ರದ್ದುಗೊಳಿಸಿದ ಸುಪ್ರೀಂ

    ಸುಳ್ಳು ಸುದ್ದಿ ಹರಿಬಿಟ್ಟ ಆರೋಪ – ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ರದ್ದುಗೊಳಿಸಿದ ಸುಪ್ರೀಂ

    – ರಾಜಕೀಯ ಕೋರ್ಟ್‌ನ ಹೊರಗೆ ನಡೆಯಲಿ ಎಂದು ಟೀಕೆ

    ನವದೆಹಲಿ: ಹಾವೇರಿಯ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಿಬಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದತಿ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ.

    ಪ್ರಕರಣವನ್ನು ರಾಜಕೀಯಗೊಳಿಸಬಾರದು ಎಂದು ತಿಳಿಸಿರುವ ಸಿಜೆಐ ಬಿಆರ್ ಗವಾಯಿ ಇಂತಹ ಸಮರ ನ್ಯಾಯಾಲಯದ ಹೊರಗೆ ನಡೆಯಲಿ ಎಂದು ಆಕ್ಷೇಪ ಹೊರ ಹಾಕಿದರು, ಬಳಿಕ ಅರ್ಜಿ ವಜಾ ಮಾಡಿದರು. ಇದನ್ನೂ ಓದಿ: ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ ನಡೆದಿದೆ: ಬೆಲ್ಲದ್‌ ಗಂಭೀರ ಆರೋಪ

    ವಕ್ಫ್ ಆಸ್ತಿ ಅಂತ ಪಹಣಿಯಲ್ಲಿ ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆಂಬ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದನ್ನೂ ಓದಿ: ಹಾಸನ – ಸೋಲಾಪುರ ರೈಲಿನಲ್ಲಿ ಕಾಣಿಸಿಕೊಂಡ ದಟ್ಟ ಹೊಗೆ

    ಪ್ರಕರಣ ರದ್ದು ಕೋರಿ ಸಂಸದ ತೇಜಸ್ವಿ ಸೂರ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಬಳಿಕ ಹೈಕೋರ್ಟ್ ಪ್ರಕರಣವನ್ನು ರದ್ದು ಮಾಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ ಹಾವೇರಿಯ ಸಿಇಎನ್ ಪೊಲೀಸ್ ತನಿಖಾಧಿಕಾರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ಒಡಿಶಾ ಹೋಟೆಲ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ – ಕಾಂಗ್ರೆಸ್ ಸ್ಟೂಡೆಂಟ್ ಲೀಡರ್ ಅರೆಸ್ಟ್

  • ಮೆಟ್ರೋ ದರ ಏರಿಕೆ| ನೀವಿಷ್ಟು ಪ್ರಬಲರಾಗಿದ್ದರೂ ನಿಮಗೆ ವರದಿ ಸಿಗುತ್ತಿಲ್ಲವೇ? – ಬಿಎಂಆರ್‌ಸಿಎಲ್‌ಗೆ ಹೈಕೋರ್ಟ್‌ ನೋಟಿಸ್‌ ಜಾರಿ

    ಮೆಟ್ರೋ ದರ ಏರಿಕೆ| ನೀವಿಷ್ಟು ಪ್ರಬಲರಾಗಿದ್ದರೂ ನಿಮಗೆ ವರದಿ ಸಿಗುತ್ತಿಲ್ಲವೇ? – ಬಿಎಂಆರ್‌ಸಿಎಲ್‌ಗೆ ಹೈಕೋರ್ಟ್‌ ನೋಟಿಸ್‌ ಜಾರಿ

    – 2 ವಾರಗಳಲ್ಲಿ ಉತ್ತರಿಸುವಂತೆ ಸೂಚನೆ
    – ಕರ್ನಾಟಕ ಸರ್ಕಾರ ವರದಿಯನ್ನು ರಹಸ್ಯವಾಗಿ ಇಡೋದು ಯಾಕೆ – ತೇಜಸ್ವಿ ಪ್ರಶ್ನೆ

    ಬೆಂಗಳೂರು: ನಮ್ಮ ಮೆಟ್ರೋ ದರ (Namma Metro Fare) ನಿಗದಿ ಸಂಬಂಧ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್‌ಗೆ (BMRCL) ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿ 2 ವಾರದಲ್ಲಿ ಉತ್ತರಿಸುವಂತೆ ಸೂಚಿಸಿದೆ.

    ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರು ಶುಲ್ಕ ನಿಗದಿ ಸಮಿತಿ (FFC) ವರದಿಯನ್ನು ಬಹಿರಂಗ ಪಡಿಸುವಂತೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ನ್ಯಾ.ಸುನಿಲ್ ದತ್ ಯಾದವ್ ಅವರ ಏಕಸದಸ್ಯ ಪೀಠದಲ್ಲಿ ನಡೆಯಿತು.

    ವಿಚಾರಣೆ ವೇಳೆ, ನೀವಿಷ್ಟು ಪ್ರಬಲರಾಗಿದ್ದೂ ನಿಮಗೆ ವರದಿ ಸಿಗುತ್ತಿಲ್ಲವೇ ಎಂದು ನ್ಯಾಯಮೂರ್ತಿಗಳು ತೇಜಸ್ವಿ ಸೂರ್ಯ ಪರ ವಕೀಲರಿಗೆ ಪ್ರಶ್ನಿಸಿದರು.  ಇದನ್ನೂ ಓದಿ: ಕೋವಿಡ್ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ: ದಿನೇಶ್ಗುಂಡೂರಾವ್ಸ್ಪಷ್ಟನೆ

    ಡಿಸೆಂಬರ್ ತಿಂಗಳಲ್ಲೇ ದರ ನಿಗದಿ ಸಮಿತಿ ವರದಿ ನೀಡಿದ್ದರೂ ಬಿಎಂಆರ್‌ಸಿಎಲ್‌ ವರದಿ ನೀಡುತ್ತಿಲ್ಲ. ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿದ್ದರೂ ಸಮಿತಿ ವರದಿ ಬಹಿರಂಗಪಡಿಸಿಲ್ಲ ಎಂದು ವಕೀಲರು ಉತ್ತರಿಸಿದರು. ಕೊನೆಗೆ ಬಿಎಂಆರ್‌ಸಿಎಲ್‌ಗೆ ನೋಟಿಸ್‌ ಜಾರಿ ಮಾಡಿದ ಕೋರ್ಟ್‌ ಅರ್ಜಿ ವಿಚಾರಣೆಯನ್ನು 2 ವಾರ ಮುಂದೂಡಿಕೆ ಮಾಡಿತು.

    ಅರ್ಜಿಯಲ್ಲಿ ಏನಿತ್ತು?
    ದರ ನಿಗದಿ ಸಮಿತಿಯ ತಜ್ಞರು ವಿದೇಶಿ ಪ್ರವಾಸವನ್ನು ಕೈಗೊಂಡು ಅಲ್ಲಿನ ಮೆಟ್ರೋ ದರವನ್ನು ಪರಿಶೀಲಿಸಿದ ಬಳಿಕ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದರು. ಈ ವರದಿಯ ನಂತರ ಬಿಎಂಆರ್‌ಸಿಎಲ್ 130% ರವರೆಗೆ ಮೆಟ್ರೋ ರೈಲು ಟಿಕೆಟ್ ದರವನ್ನು ಏರಿಕೆ ಮಾಡಿದೆ.

    ದರ ಏರಿಕೆ ಬಳಿಕ ಮೆಟ್ರೋ ರೈಲು ಪ್ರಯಾಣಿಕರ ಸಂಖ್ಯೆ ಕುಸಿದಿದೆ. ದರ ನಿಗದಿ ಸಮಿತಿ ವರದಿಯನ್ನು ನೀಡುವಂತೆ ಬಿಎಂಆರ್‌ಸಿಎಲ್‌ ಅನ್ನು ಕೇಳಿದ್ದರೂ ನೀಡಿಲ್ಲ. ಅಂತಿಮವಾಗಿ ಮಾಹಿತಿ ಹಕ್ಕು ಕಾಯ್ದೆಯ (RTI Act) ಅಡಿ ಪ್ರಶ್ನಿಸಿದ್ದರೂ ಉತ್ತರ ನೀಡಿಲ್ಲ. ಹೀಗಾಗಿ ದರ ನಿಗದಿ ಸಮಿತಿಯ ವರದಿಯನ್ನು ಬಹಿರಂಗ ಪಡಿಸಬೇಕೆಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ಒಂದೂವರೆ ತಿಂಗಳ ಗಂಡು ಮಗುವನ್ನು ನೀರಿನ ಹಂಡೆಯಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ

     

    ತೇಜಸ್ವಿ ಕಿಡಿ:
    ಶುಲ್ಕ ನಿಗದಿ ಸಮಿತಿ (FFC) ವರದಿಯನ್ನು ಬಿಎಂಆರ್‌ಸಿಎಲ್ ಮತ್ತು ಕರ್ನಾಟಕ ಸರ್ಕಾರ ರಹಸ್ಯವಾಗಿಡುವುದು ಆಕ್ರೋಶದ ಸಂಗತಿ. ಬೆಂಗಳೂರು ಮೆಟ್ರೋ ಈಗ ಭಾರತದಲ್ಲಿ ಅತ್ಯಂತ ದುಬಾರಿಯಾಗಿದ್ದು ಅನೇಕ ಮಧ್ಯಮ ವರ್ಗದ ಪ್ರಯಾಣಿಕರಿಗೆ ಇದು ಕೈಗೆಟುಕುವಂತಿಲ್ಲ.

    ದೆಹಲಿ ಸೇರಿದಂತೆ ದೇಶದ ಇತರ ಪ್ರತಿಯೊಂದು ಮೆಟ್ರೋ ವ್ಯವಸ್ಥೆಯು ತನ್ನ ಶುಲ್ಕ ನಿಗದಿ ಸಮಿತಿಯ ವರದಿಗಳನ್ನು ಸಾರ್ವಜನಿಕಗೊಳಿಸಿರುವಾಗ ಬಿಎಂಆರ್‌ಸಿಎಲ್‌ ಯಾಕೆ ಈ ವರದಿಯನ್ನು ಬಹಿರಂಗ ಪಡಿಸುತ್ತಿಲ್ಲ. ಸರ್ಕಾರ ಏನನ್ನು ಮರೆಮಾಡಲು ಪ್ರಯತ್ನಿಸುತ್ತಿದೆ?

    ಮೂರು ತಿಂಗಳಿನಿಂದ ಪದೇ ಪದೇ ಮನವಿ ಮಾಡಲಾಗಿತ್ತು. ನಂತರ ಆರ್‌ಟಿಐ ಅರ್ಜಿಗಳ ಹೊರತಾಗಿಯೂ ವರದಿಯನ್ನು ರಹಸ್ಯವಾಗಿಡಲಾಗಿದೆ. ಇಲ್ಲಿ ಯಾವುದೇ ರಾಷ್ಟ್ರೀಯ ಭದ್ರತಾ ಕಾಳಜಿ ಇಲ್ಲ. ಹಾಗಾದರೆ ಇಷ್ಟೊಂದು ಗೌಪ್ಯತೆ ಏಕೆ? ಸಿಎಂ ಸಿದ್ದರಾಮಯ್ಯನವರು ಈ ವರದಿಯನ್ನು ಬಿಡುಗಡೆ ಮಾಡಲು ನಿರಾಕರಿಸುತ್ತಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

  • ದಿನಕ್ಕೆ 45ಕ್ಕೂ ಹೆಚ್ಚು ನಿಮಿಷ ಉಳಿಸಬಹುದು – ಸುರಂಗ ಮಾರ್ಗದ ಉಪಯೋಗ ತಿಳಿಸಿದ ಡಿಕೆಶಿ

    ದಿನಕ್ಕೆ 45ಕ್ಕೂ ಹೆಚ್ಚು ನಿಮಿಷ ಉಳಿಸಬಹುದು – ಸುರಂಗ ಮಾರ್ಗದ ಉಪಯೋಗ ತಿಳಿಸಿದ ಡಿಕೆಶಿ

    – ಬೆಂಗಳೂರು ಟ್ರಾಫಿಕ್‌ಗೆ ಇದು ಪರಿಹಾರವಲ್ಲ ಎಂದ ತೇಜಸ್ವಿ ಸೂರ್ಯ
    – ಇಡೀ ರಾಜ್ಯಕ್ಕೆ ಮಾಡ್ಲಿ ಎಂದು ಹೆಚ್‌ಡಿಕೆ ವ್ಯಂಗ್ಯ

    ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಕನಸು ಕಂಡಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಟನಲ್ ರೋಡ್‌ನಿಂದ (Tunnel Road) ಏನೇನು ಉಪಯೋಗ ಆಗುತ್ತದೆ ಎಂದು ಎಕ್ಸ್ ಮೂಲಕ ಹಂಚಿಕೊಂಡಿದ್ದಾರೆ.

    ನಿಮ್ಮ ಸಮಯ, ನಿಮ್ಮನ್ನು ಗಮನದಲ್ಲಿಟ್ಟುಕೊಂಡು ಸುರಂಗ ನಿರ್ಮಾಣ ಮಾಡುತ್ತಿದ್ದೇವೆ. ಹೆಬ್ಬಾಳ ಟು ಸಿಲ್ಕ್ ಬೋರ್ಡ್ 25ಕ್ಕೂ ಹೆಚ್ಚು ಅಡಚಣೆ ತಪ್ಪಿಸಬಹುದು. ದಿನಕ್ಕೆ 45ಕ್ಕೂ ಹೆಚ್ಚು ನಿಮಿಷ ಉಳಿಸಬಹುದು. 16.75 ಕಿ.ಮೀ ತಡೆರಹಿತ, ಸಿಗ್ನಲ್-ಮುಕ್ತವಾಗಿ ಪ್ರಯಾಣಿಸಬಹುದು. ಐಟಿ ಕಾರಿಡಾರ್‌ಗೆ ನೇರ ಪ್ರವೇಶ ಸಿಗಲಿದೆ. ವೇಗವಾದ ಸ್ಮಾರ್ಟ್ ಬೆಂಗಳೂರು ತನ್ನ ಹಾದಿಯಲ್ಲಿದೆ ಎಂದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: Israel-Iran tensions: ರಷ್ಯಾ, ಅಮೆರಿಕದಿಂದ ತೈಲ ಆಮದು ಹೆಚ್ಚಿಸಿದ ಭಾರತ

    ಇನ್ನು ಈ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಬೆಂಗಳೂರಿನ ಸಂಚಾರ ಸಮಸ್ಯೆಗಳಿಗೆ ಸುರಂಗ ರಸ್ತೆ ಒಂದು ಅವೈಜ್ಞಾನಿಕ ಪರಿಹಾರ. ತೆರಿಗೆದಾರರ 18,000 ಕೋಟಿ ಹಣ ಖರ್ಚು ಮಾಡಿ ಯೋಜನೆ ವಿಫಲಗೊಳ್ಳುವುದು ಖಚಿತ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ನಾನು ಹೆಲ್ಮೆಟ್ ಹಾಕಲ್ಲ ಏನಿವಾಗ – ಜೆಡಿಎಸ್ ಅಧ್ಯಕ್ಷ ಎಂದವನ ಜೈಲಿಗಟ್ಟಿದ ಪೊಲೀಸರು

    ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕೂಡ ಡಿಕೆಶಿಗೆ ತಿರುಗೇಟು ಕೊಟ್ಟಿದ್ದಾರೆ. ಟನಲ್ ರೋಡನ್ನು ಬೆಂಗಳೂರು ಮಾತ್ರ ಅಲ್ಲ, ಇಡೀ ರಾಜ್ಯಕ್ಕೆ ಮಾಡಲಿ. ಯಾವ ಟನಲ್ ಮಾಡುತ್ತಾರೆ ನೋಡೋಣ ಎಂದು ವ್ಯಂಗ್ಯವಾಡಿದ್ದಾರೆ.  ಇದನ್ನೂ ಓದಿ: ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಅಕ್ರಮ – ಶಾಸಕ ಬಿಆರ್ ಪಾಟೀಲ್ ಮತ್ತೊಂದು ಬಾಂಬ್

  • ಉಗ್ರರು ನಿಮ್ಮ ಚಡ್ಡಿ ಬಿಚ್ಚಿಸಿ ಚೆಕ್ ಮಾಡಿದ್ರೆ ಏನ್ ಮಾಡ್ತೀರಿ – ತಿಮ್ಮಾಪೂರ್‌ ವಿರುದ್ಧ ಸೂರ್ಯ ಆಕ್ರೋಶ

    ಉಗ್ರರು ನಿಮ್ಮ ಚಡ್ಡಿ ಬಿಚ್ಚಿಸಿ ಚೆಕ್ ಮಾಡಿದ್ರೆ ಏನ್ ಮಾಡ್ತೀರಿ – ತಿಮ್ಮಾಪೂರ್‌ ವಿರುದ್ಧ ಸೂರ್ಯ ಆಕ್ರೋಶ

    ಬೆಂಗಳೂರು/ಬಾಗಲಕೋಟೆ: ಉಗ್ರರು ನಿಮ್ಮ ಚಡ್ಡಿ ಬಿಚ್ಚಿಸಿ ಚೆಕ್ ಮಾಡಿದ್ರೆ ಏನ್ ಮಾಡ್ತೀರಿ ಎಂದು ಪ್ರಶ್ನಿಸುವ ಮೂಲಕ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ (RB Thimmapur) ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

    ಹಿಂದೂ (Hindu) ಧರ್ಮದ ಹೆಸರಿನಲ್ಲಿ ಗುಂಡಿಟ್ಟು ಕೊಂದಿಲ್ಲ, ಇದೆಲ್ಲ ರಾಜಕೀಯ ಎಂದಿದ್ದ ತಿಮ್ಮಾಪುರ ವಿರುದ್ಧ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಿಮಗೆ ಮಂಜುನಾಥ ಹಾಗೂ ಭರತ್ ಕುಟುಂಬದ ಮುಂದೆ ಹೋಗಿ ನಿಂತು ಹೇಳುವುದಕ್ಕೆ ಧೈರ್ಯ ಇದೆಯಾ ಎಂದು ಕೇಳಿದರು.

     

    ತಿಮ್ಮಾಪುರ್‌ ಅವರ ಚಡ್ಡಿ ಬಿಚ್ಚಿ ಚೆಕ್ ಮಾಡಬೇಕಿತ್ತು. ಈ ರೀತಿ ಹೇಳಿಕೆ ನೀಡಿದ ನೀವು ಸಾರ್ವಜನಿಕ ಜೀವನದಲ್ಲಿ ಇರಬೇಡಿ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮನೆಯಲ್ಲಿ ಇರಿ ಎಂದು ಹೇಳಿದರು.

    ಹಿಂದೂ ಪುರುಷರನ್ನು ಗುರುತಿಸಿ ಅವರ ಹೆಂಡತಿ ಮಕ್ಕಳ ಮುಂದೆ ಕೊಲೆ ಮಾಡಿದ್ದಾರೆ. ಅವರು ಕೊಂದಿದ್ದು ಪ್ರವಾಸಿಗರಲ್ಲ, ತಾವು ಹಿಂದೂ ಎಂದಿದಕ್ಕೆ ಮಾತ್ರವೇ ಅವರನ್ನು ಕೊಂದಿದ್ದಾರೆ. ಇದು ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ದಾಳಿ ಅಂತ ಓವೈಸಿ ಒಪ್ಪಿದ್ದಾರೆ. ಬೇಸರದ ಸಂಗತಿ ಏನೆಂದರೆ ಕಾಂಗ್ರೆಸ್ ಒಪ್ಪಲು ತಯಾರಿಲ್ಲ ಎಂದರು.

    ಎಂಥ ದರಿದ್ರ ಪರಿಸ್ಥಿತಿಗೆ ಈ ಸರ್ಕಾರ ಇಳಿದಿದೆ ಎಂದರೆ ಈ ಸರ್ಕಾರ ಮೃತರ ಕುಟುಂಬಕ್ಕೆ 10 ಲಕ್ಷ ರೂ. ಹಣ ಘೋಷಣೆ ಮಾಡಿದೆ. ಕನಿಷ್ಠ ಮಾನವೀಯತೆ ಇದ್ದರೆ 1 ಕೋಟಿ ರೂ. ಕೊಡಬೇಕಿತ್ತು. ಪಕ್ಕದ ಕೇರಳದಲ್ಲಿ ಆನೆ ತುಳಿತಕ್ಕೆ ಒಳಗಾದವರಿಗೆ ಈ ಸರ್ಕಾರ 15 ಲಕ್ಷ ಹಣ ನೀಡಿದೆ. ಅದಕ್ಕೆ ಸರಿ ಸಮಾನವಾಗಿ ಆದರೂ ಹಣ ಕೊಡಬೇಕಿತ್ತು ಎಂದು ವಾಗ್ದಾಳಿ ನಡೆಸಿದರು.

    ಬೆಂಗಳೂರು ದಕ್ಷಿಣ ಕ್ಷೇತ್ರದಿಂದ 20 ಲಕ್ಷ ರೂಪಾಯಿ ಒಗ್ಗೂಡಿಸುವ ಕೆಲಸ ಮಾಡಿದ್ದೇನೆ. ನಾಳೆ ಅಥವಾ ನಾಡಿದ್ದು ಭರತ್ ಭೂಷಣ್ ಮನೆಗೆ 10 ಲಕ್ಷದ 1 ರೂ. ಹಾಗೂ ಮಧುಸೂದನ್ ರಾವ್ ಮನೆಗೆ 10 ಲಕ್ಷದ 1 ರೂ. ಕೊಡುತ್ತೇವೆ. ರಾಜ್ಯ ಸರ್ಕಾರ ಕೊಟ್ಟಿರುವ ಹಣಕ್ಕಿಂತ ಒಂದು ರೂಪಾಯಿ ಹೆಚ್ಚು ಹಣವನ್ನು ನಮ್ಮ ಕ್ಷೇತ್ರದಿಂದಲೇ ನೀಡುತ್ತೇವೆ ಎಂದು ಸಿಟ್ಟು ಹೊರ ಹಾಕಿದರು.

  • ಮದುವೆ ಬಳಿಕ ಸಂಸತ್ತಿಗೆ ಪತ್ನಿ ಶಿವಶ್ರೀ ಸ್ಕಂದಪ್ರಸಾದ್ ಜೊತೆ ಬಂದ ಸಂಸದ ತೇಜಸ್ವಿ ಸೂರ್ಯ

    ಮದುವೆ ಬಳಿಕ ಸಂಸತ್ತಿಗೆ ಪತ್ನಿ ಶಿವಶ್ರೀ ಸ್ಕಂದಪ್ರಸಾದ್ ಜೊತೆ ಬಂದ ಸಂಸದ ತೇಜಸ್ವಿ ಸೂರ್ಯ

    ನವದೆಹಲಿ: ಮದುವೆ ಬಳಿಕ ಪತ್ನಿ ಶಿವಶ್ರೀ ಸ್ಕಂದಪ್ರಸಾದ್ (Sivasri Skandaprasad) ಜೊತೆ ಸಂಸದ ತೇಜಸ್ವಿ ಸೂರ್ಯ (Tejasvi Surya) ಸಂಸತ್ತಿಗೆ ಆಗಮಿಸಿದರು. ಬಳಿಕ ತೇಜಸ್ವಿ ಸೂರ್ಯ ಲೋಕಸಭಾ ಅಧಿವೇಶನದಲ್ಲಿ ಪಾಲ್ಗೊಂಡರು.

    ಬೆಂಗಳೂರು ದಕ್ಷಿಣ (Bengaluru South) ಸಂಸದ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಸ್ಕಂದ ಈಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಅಧಿವೇಶನ ಹಿನ್ನೆಲೆ ದೆಹಲಿಯಲ್ಲಿರುವ ಸಂಸದರ ಜೊತೆ ಪತ್ನಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಓಲಾ, ಊಬರ್ ಕ್ಯಾಬ್‍ಗಳಿಗೆ ಕೇಂದ್ರ ಸರ್ಕಾರದಿಂದ ಶಾಕ್ – ಸಹಕಾರ್ ಟ್ಯಾಕ್ಸಿ ಲೋಕಾರ್ಪಣೆಗೆ ಸಿದ್ಧತೆ

    ಮಾ. 6ರಂದು ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವಿವಾಹವಾದರು. ವಿವಾಹ ಸಮಾರಂಭದಲ್ಲಿ ರಾಜಕೀಯ ಗಣ್ಯರು ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದರು. ಇದನ್ನೂ ಓದಿ: ತಾಯಿಗೆ ಕೆಟ್ಟ ಸನ್ನೆ ಮಾಡಿದ್ದವನ ತಲೆ ಕಡಿದು ಪೊಲೀಸ್ ಠಾಣೆಗೆ ತಂದಿದ್ದವನಿಗೆ ಜೀವಾವಧಿ ಶಿಕ್ಷೆ

  • ಆಡಿಸಿದಳೆಶೋದೆ ಜಗದೋದ್ಧಾರನ.. – ಉಡುಪಿಯಲ್ಲಿ ಕೀರ್ತನೆ ಹಾಡಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

    ಆಡಿಸಿದಳೆಶೋದೆ ಜಗದೋದ್ಧಾರನ.. – ಉಡುಪಿಯಲ್ಲಿ ಕೀರ್ತನೆ ಹಾಡಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

    – ಉಡುಪಿಯಲ್ಲಿ ಶಿವಶ್ರೀ ತೇಜಸ್ವಿ ಸಂಗೀತ ಸೇವೆ

    ಉಡುಪಿ: ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ (Tejasvi Surya) ಮತ್ತು ಗಾಯಕಿ ಶಿವಶ್ರೀ, ಉಡುಪಿ ಶ್ರೀಕೃಷ್ಣ ಮಠದಲ್ಲಿ ಸಂಗೀತ ಸೇವೆ ನೀಡಿದ್ದಾರೆ.

    ರಥಬೀದಿಯಲ್ಲಿ ನಡೆದ ನಿತ್ಯೋತ್ಸವದಲ್ಲಿ ಭಾಗಿಯಾದ ನವದಂಪತಿಯ ಕುಟುಂಬಗಳು, ಕೃಷ್ಣ ದೇವರ ಗರ್ಭಗುಡಿಯಲ್ಲಿ ನಡೆಯುವ ಮಹಾಪೂಜೆ ಮತ್ತು ಶಯನ ಪೂಜೆಯಲ್ಲಿ ಭಾಗಿಯಾಯ್ತು. ಈ ಸಂದರ್ಭದಲ್ಲಿ ಶಿವಶ್ರೀ ತೇಜಸ್ವಿ ದೇವರ ಮುಂದೆ ಸಂಗೀತ ಸೇವೆಯನ್ನು ನೀಡಿದರು. ಇದನ್ನೂ ಓದಿ: ಕಾರು ಬಿಟ್ಟು ಬಸ್‍ನಲ್ಲಿ ಸಂಚರಿಸಿ ಮಲೆನಾಡ ಸೌಂದರ್ಯ ಸವಿದ ತೇಜಸ್ವಿ ಸೂರ್ಯ ದಂಪತಿ

    ಜಗದೋದ್ಧಾರನಾ ಆಡಿಸಿದಳು ಯಶೋಧೆ.. ಮತ್ತು ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ ಹಾಡನ್ನು ಹಾಡಿದರು. ಪರ್ಯಾಯ ಪುತ್ತಿಗೆ ಮಠ ಮತ್ತು ಉಡುಪಿ ಶ್ರೀಕೃಷ್ಣ ಮಠದ ಸಂಗೀತಗಾರರಾದ ನಾರಾಯಣ ಶರಳಾಯರು ಸಂಗೀತದಲ್ಲಿ ಸಾಥ್ ನೀಡಿದರು. ಪತಿ ಸಂಸದ ತೇಜಸ್ವಿ ಸೂರ್ಯ ವೇದಘೋಷ ಮಾಡಿದರು.

  • ತೇಜಸ್ವಿ ಸೂರ್ಯ, ಶಿವಶ್ರೀ ರಿಸೆಪ್ಷನ್ – ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ನವದಂಪತಿಗೆ ಶುಭಹಾರೈಕೆ

    ತೇಜಸ್ವಿ ಸೂರ್ಯ, ಶಿವಶ್ರೀ ರಿಸೆಪ್ಷನ್ – ಸಿಎಂ, ಡಿಸಿಎಂ ಸೇರಿದಂತೆ ಗಣ್ಯರಿಂದ ನವದಂಪತಿಗೆ ಶುಭಹಾರೈಕೆ

    ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಹಾಗೂ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್‌ (Sivasri Skandaprasad) ಆರತಕ್ಷತೆ ಸಂಭ್ರಮದಲ್ಲಿದ್ದಾರೆ. ನವ ದಂಪತಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿ ಅನೇಕ ಗಣ್ಯರು ಶುಭಹಾರೈಸಿದ್ದಾರೆ.

    ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಸಂಸದ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಜೋಡಿಯ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದೆ. ಈ ಸಂಭ್ರಮದಲ್ಲಿ ಸಿಎಂ, ಡಿಸಿಎಂ, ಸಚಿವರು, ರಾಜಕೀಯ ಪಕ್ಷಗಳ ನಾಯಕರು, ಮುಖಂಡರು, ಆಪ್ತರು, ಬಂಧುಗಳು ಆಗಮಿಸಿ ಜೋಡಿಯನ್ನು ಆಶೀರ್ವದಿಸಿದ್ದಾರೆ. ಇದನ್ನೂ ಓದಿ: ಗಾಯಕಿ ಶಿವಶ್ರೀ ಜೊತೆ ಸಪ್ತಪದಿ ತುಳಿದ ಸಂಸದ ತೇಜಸ್ವಿ ಸೂರ್ಯ

    ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಗೃಹ ಸಚಿವ ಜಿ.ಪರಮೇಶ್ವರ್‌, ಸಚಿವ ಜಮೀರ್‌ ಅಹ್ಮದ್‌ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡು ನವದಂಪತಿಗೆ ವಿಶ್‌ ಮಾಡಿದರು.

    ಮಾರ್ಚ್‌ 5 ಮತ್ತು 6 ರಂದು ತೇಜಸ್ವಿ ಸೂರ್ಯ ವಿವಾಹ ಸಮಾರಂಭ ಬೆಂಗಳೂರು ಕನಕಪುರ ರೆಸಾರ್ಟ್‌ನಲ್ಲಿ ನಡೆದಿತ್ತು. ಇದಕ್ಕೆ ಕುಟುಂಬ ಸದಸ್ಯರು, ಆಪ್ತ ವಲಯದ ಸ್ನೇಹಿತರು, ರಾಜಕೀಯ ಗಣ್ಯರು ಸಾಕ್ಷಿಯಾಗಿದ್ದರು. ಇದನ್ನೂ ಓದಿ: ತೇಜಸ್ವಿ ಸೂರ್ಯ ಮದುವೆ – ಎಲ್ಲಿ? ಯಾವಾಗ? ಇಲ್ಲಿದೆ ಸಂಪೂರ್ಣ ಡಿಟೇಲ್ಸ್‌

  • ರಾಜ್ಯ ಸರ್ಕಾರ ಪತ್ರ ಬರೆದರೆ ಮಾತ್ರ ಮೆಟ್ರೋ ದರ ಇಳಿಕೆ: ತೇಜಸ್ವಿ ಸೂರ್ಯ

    ರಾಜ್ಯ ಸರ್ಕಾರ ಪತ್ರ ಬರೆದರೆ ಮಾತ್ರ ಮೆಟ್ರೋ ದರ ಇಳಿಕೆ: ತೇಜಸ್ವಿ ಸೂರ್ಯ

    – ಇದು ಆರೋಪದ ಸಮಯವಲ್ಲ, ಸಮಸ್ಯೆ ಬಗೆಹರಿಸಬೇಕು

    ನವದೆಹಲಿ: ಮೆಟ್ರೋ (Namma Metro) ದರ ಏರಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ರ ಬರೆದರೆ ನಾಳೆಯೇ ಸಮಿತಿ ರಚನೆಯಾಗಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸದಸ್ಯ ತೇಜಸ್ವಿ ಸೂರ್ಯ (Tejaswi Surya) ಹೇಳಿದ್ದಾರೆ.

    ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಿರುವ ದರ ಪರಿಷ್ಕರಣೆಯನ್ನುಮೆಟ್ರೋ ನಿಯಮಗಳಲ್ಲಿ ತಡೆ ಹಿಡಿಯಲು ಸಾಧ್ಯವಿಲ್ಲ. ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು. ಆದರೆ ಕೋರ್ಟ್ ಮಧ್ಯಪ್ರವೇಶ ಮಾಡುತ್ತಾ ಗೊತ್ತಿಲ್ಲ ಎಂದು ಹೇಳಿದರು.

    ನಾನು ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ ಮಾತನಾಡಿದ್ದೇವೆ. ಪ್ರಯಾಣಿಕರ ಸಂಖ್ಯೆ ಕುಸಿತದ ಬಗ್ಗೆಯೂ ಗಮನಕ್ಕೆ ತರಲಾಗಿದೆ. ಅವರು ರಾಜ್ಯ ಸರ್ಕಾರ ಮತ್ತೊಮ್ಮೆ ಪತ್ರ ಬರೆದು ದರ ಪರಿಷ್ಕರಣೆ ಮಾಡಲು ಮನವಿ ಮಾಡಿದರೆ ಮತ್ತೊಮ್ಮೆ ಸಮಿತಿ ರಚಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರದಿಂದ ಸಿಎಂ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ಇದರಿಂದ ಮಾತ್ರ ದರ ಇಳಿಕೆ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.

    ಮೆಟ್ರೋ ದರಗಳು ಏರಿಕೆಯಾಗಿ ಜನರಿಗೆ ಸಮಸ್ಯೆಯಾಗಿದೆ. ಮಧ್ಯಮ ವರ್ಗದ ಜನರಿಗೆ ಇನ್ನು ತೊಂದರೆಯಾಗಿದೆ. ಏಕಾಏಕಿ ಮೆಟ್ರೋ ದರವನ್ನು 50%, 100% ಏರಿಕೆಯಾಗಿದೆ. ಸಂಬಳದ ದೊಡ್ಡ ಭಾಗ ಈಗ ಮೆಟ್ರೋಗೆ ಕೊಡಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ರಾಜ್ಯ ಸರ್ಕಾರದ ನಿರ್ದೇಶನ ಮೇರೆಗೆ ಅಧಿಕಾರಿಗಳು ದರ ನಿಗದಿ ಮಾಡಲು ಸಮಿತಿ ರಚಿಸುವ ಪ್ರಕ್ರಿಯೆ ಶುರು ಮಾಡಿದರು. ಮೆಟ್ರೋ ಕಂಪನಿ ಮತ್ತು ರಾಜ್ಯ ಸರ್ಕಾರ ದರ ಏರಿಕೆಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ಅದರ ಆಧಾರದ ಮೇಲೆ ಕೇಂದ್ರ ಸರ್ಕಾರ ಸಮಿತಿ ರಚನೆ ಮಾಡುತ್ತದೆ. ಸಮಿತಿ ರಾಜ್ಯ ಸರ್ಕಾರ ಹಾಗೂ ಬಿಎಂಆರ್‌ಸಿಎಲ್‌ನಿಂದ ಮಾಹಿತಿ ಪಡೆದು ಪರಿಷ್ಕೃತ ದರ ಪಟ್ಟಿ ನಿಗದಿ ಮಾಡುತ್ತದೆ. ಸಮಿತಿ ನಿಗದಿ ಮಾಡಿದ ದರ ಪರಿಷ್ಕರಣೆಯನ್ನು ಅನುಷ್ಠಾನ ಮಾಡಬೇಕು ಎಂದು ಕಾನೂನು ಹೇಳುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಮೆಟ್ರೋ ದರ ಏರಿಕೆ| ಬಿಜೆಪಿಯಿಂದ ತಿರುಚಿದ ಮಾಹಿತಿ – ಸಿದ್ದರಾಮಯ್ಯ ಕೆಂಡಾಮಂಡಲ

    ಮಂಗಳವಾರ ಲೋಕಸಭೆಯಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದೇನೆ. ಟ್ರಾಫಿಕ್ ಸಮಸ್ಯೆಗೆ ಜನರು ಮೆಟ್ರೋ ಬಳಸುತ್ತಾರೆ. ಆದರೆ ಈ ಪ್ರಮಾಣದಲ್ಲಿ ದರ ಏರಿಸಿದರೆ ಜನರು ಬೈಕಿನಲ್ಲಿ ಹೋಗುತ್ತಾರೆ. ಸಾರ್ವಜನಿಕ ಸಾರಿಗೆ ಪ್ರೊತ್ಸಾಹ ಮಾಡಬೇಕಿತ್ತು ಇದು ಸರ್ಕಾರದ ಕರ್ತವ್ಯ. ಆದರೆ ಇದು ಕೇಂದ್ರ ಸರ್ಕಾರದ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ದೂರಿದರು.

    ದರ ಪರಿಷ್ಕರಣೆಗೆ ಪತ್ರ ಬರೆದಿದ್ದೆ ರಾಜ್ಯ ಸರ್ಕಾರ. ಈ ವಿಚಾರವನ್ನು ಅವರು ಹೇಳುತ್ತಿಲ್ಲ. ಬರೀ ಮೆಟ್ರೋ ಅಲ್ಲ ನೋಂದಣಿ ಶುಲ್ಕ, ವಾಹನ ನೋಂದಣಿ, ಆಸ್ಪತ್ರೆ ಸೇವಾ ಶುಲ್ಕ, ಕಾಲೇಜು ಫಿ, ಎಲೆಕ್ಟ್ರೀಕ್ ವಾಹನಗಳ ಮೇಲೂ ತೆರಿಗೆ ಹಾಕಿದೆ. ಈಗ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ಇದು ಆರೋಪದ ಸಮಯ ಅಲ್ಲ, ಸಮಸ್ಯೆ ಬಗೆಹರಿಸಬೇಕು ಎಂದರು.

     

  • ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧ ಸಂಸತ್‌ನಲ್ಲಿ ಧ್ವನಿ ಎತ್ತಿದ ತೇಜಸ್ವಿ ಸೂರ್ಯ

    ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧ ಸಂಸತ್‌ನಲ್ಲಿ ಧ್ವನಿ ಎತ್ತಿದ ತೇಜಸ್ವಿ ಸೂರ್ಯ

    ನವದೆಹಲಿ: ನಮ್ಮ ಮೆಟ್ರೋದಲ್ಲಿ (Namma Metro) ಕಡಿಮೆ ಅಂತರದ ಸ್ಥಳಗಳಿಗೆ ಪ್ರಯಾಣಿಸುವವರಿಗೆ 100% ರಷ್ಟು ಪ್ರಯಾಣ ದರ ಏರಿಕೆಯಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಹೇಳಿದ್ದಾರೆ.

    ಸಂಸತ್‌ನ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ತೇಜಸ್ವಿ ಸೂರ್ಯ ಮೆಟ್ರೋ ದರಲ್ಲಿ ಭಾರಿ ಏರಿಕೆಯಾಗಿರುವುದರಿಂದ ಮಧ್ಯಮ ವರ್ಗಕ್ಕೆ ಉಂಟಾಗುತ್ತಿರುವ ಅನಾನುಕೂಲದ ಬಗ್ಗೆ ಸರ್ಕಾರದ ಗಮನ ಸೆಳೆದರು. ನಮ್ಮ ಮೆಟ್ರೋನಲ್ಲಿ ಕಡಿಮೆ ಅಂತರದ ಸ್ಥಳಗಳಿಗೆ ಪ್ರಯಾಣಿಸುವವರಿಗೂ 100% ಪ್ರಯಾಣ ದರ ಏರಿಕೆಯಾಗಿದೆ. ಇದರಿಂದಾಗಿ ಮೆಟ್ರೋ ಪ್ರಯಾಣ ದುಬಾರಿಯಾಗಿದೆ. ನಗರಕ್ಕೆ ಸುಸ್ಥಿರ ಸಾರ್ವಜನಿಕ ಸಾರಿಗೆ ಪರಿಹಾರವಾಗಿರುವ ಮೂಲ ಉದ್ದೇಶಕ್ಕೇ ಧಕ್ಕೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ದರ ರಚನೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಇದೇ ವಿಷಯವಾಗಿ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನೂ ತೇಜಸ್ವಿ ಸೂರ್ಯ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಮ್ಮ ಮೆಟ್ರೋ ಪ್ರಯಾಣ ದರದ ಏರಿಕೆಗೆ ರಾಜ್ಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

    ಫೆ.10 ರಂದು ಬಿಎಂ ಆರ್ ಸಿಎಲ್ ಕೇಂದ್ರ ಕಚೇರಿಗೆ ತೆರಳಿದ್ದ ಬಿಜೆಪಿ ನಿಯೋಗ, ಏರಿಕೆಯಾಗಿರುವ ದರವನ್ನು ಜನ ಸಾಮಾನ್ಯರಿಗೆ ಹೊರೆಯಾಗದಂತೆ ಇಳಿಸುವಂತೆ ಮನವಿ ಮಾಡಿತ್ತು. ದರ ಏರಿಕೆ ಕಡಿಮೆ ಮಾಡಿದಿದ್ದರೆ ಹೋರಾಟ ಮಾಡುವುದಾಗಿ ಹೇಳಿದ್ದೇವೆ. ಜನಕ್ಕೆ ಹೆಚ್ಚು ಹೊರೆಯಾಗದಂತೆ ಏರಿಸಲಿ ಎಂದು ಜಯನಗರ ಶಾಸಕ ಸಿ.ಕೆ ರಾಮಮೂರ್ತಿ ಹೇಳಿದ್ದರು.

  • ವಕ್ಪ್ ತಿದ್ದುಪಡಿ ಮಸೂದೆ ಪರಿಶೀಲನೆ ಅಂತ್ಯ – ಲೋಕಸಭಾ ಸ್ಪೀಕರ್‌ಗೆ ವರದಿ ಸಲ್ಲಿಸಿದ ಜೆಪಿಸಿ

    ವಕ್ಪ್ ತಿದ್ದುಪಡಿ ಮಸೂದೆ ಪರಿಶೀಲನೆ ಅಂತ್ಯ – ಲೋಕಸಭಾ ಸ್ಪೀಕರ್‌ಗೆ ವರದಿ ಸಲ್ಲಿಸಿದ ಜೆಪಿಸಿ

    ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆ (Waqf Amendment Bill) ಕುರಿತ ಕರಡು ವರದಿಯನ್ನು ಜಂಟಿ ಸಂಸದೀಯ ಸಮಿತಿಯು ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Om Birla) ಅವರಿಗೆ ಸಲ್ಲಿಸಿದೆ.

    ವಕ್ಫ್ ಮಸೂದೆ ಕುರಿತ ಸಂಸದೀಯ ಸಮಿತಿಯ ಅಧ್ಯಕ್ಷರಾದ ಜಗದಾಂಬಿಕಾ ಪಾಲ್ ಅವರು ಸಂಸತ್ ಭವನದ ಕಚೇರಿಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ವರದಿಯನ್ನು ಹಸ್ತಾಂತರಿಸಿದ್ದಾರೆ.

    ಜಂಟಿ ಸಂಸದೀಯ ಸಮಿತಿಯು ನಿನ್ನೆ ವಕ್ಫ್ ತಿದ್ದುಪಡಿ ಮಸೂದೆ ಕುರಿತ ಕರಡು ವರದಿಯನ್ನು ಅಂಗೀಕರಿಸಿದೆ. ಸಮಿತಿಯ 16 ಸದಸ್ಯರು ಕರಡು ಮಸೂದೆ ಪರವಾಗಿ ಮತ ಚಲಾಯಿಸಿದರೆ, 11 ಸದಸ್ಯರು ಮಸೂದೆಯ ವಿರೋಧವಾಗಿ ಮತವನ್ನು ಚಲಾಯಿಸಿದ್ದರು. ವಕ್ಫ್ ತಿದ್ದುಪಡಿ ಮಸೂದೆ-2024 ಅನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ಮಂಡಿಸಿದ್ದರು. ಮಸೂದೆಯನ್ನು 2024ರ ಆಗಸ್ಟ್ 8ರಂದು ಜಂಟಿ ಸಂಸದೀಯ ಸಮಿತಿಗೆ(Waqf JPC) ಉಲ್ಲೇಖಿಸಲಾಗಿತ್ತು.

    ಇನ್ನೂ ಞ ಬಗ್ಗೆ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, 1995ರ ವಕ್ಫ್ ಕಾಯ್ದೆಗೆ ಪ್ರಸ್ತಾಪಿಸಲಾದ ತಿದ್ದುಪಡಿಗಳು ದೇಶಾದ್ಯಂತ ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ವೃತ್ತಿಪರತೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ. ಇದನ್ನ ಐತಿಹಾಸಿಕ ಹೆಜ್ಜೆ ಎಂದು ಕರೆದ ಸೂರ್ಯ, ಜೆಪಿಸಿ ತನ್ನ ವರದಿಯನ್ನು ಅಂತಿಮಗೊಳಿಸುವ ಮೊದಲು ಪಾಲುದಾರರು ಮತ್ತು ಸಾರ್ವಜನಿಕರೊಂದಿಗೆ ವ್ಯಾಪಕವಾದ ಸಮಾಲೋಚನೆಗಳನ್ನು ಕೈಗೊಂಡಿದೆ ಎಂದು ಹೇಳಿದರು.

    ವಕ್ಫ್ ಆಸ್ತಿಗಳನ್ನು ದೀರ್ಘಕಾಲದವರೆಗೆ ದುರುಪಯೋಗಪಡಿಸಿಕೊಳ್ಳಲಾಗಿದೆ. ಈ ಆಸ್ತಿಗಳ ವಂಚನೆ ಮತ್ತು ಅತಿಕ್ರಮಣದ ಹಲವಾರು ನಿದರ್ಶನಗಳು ಕಂಡುಬಂದಿವೆ, ಸರ್ಕಾರಿ ಭೂಮಿಗಳು, ಖಾಸಗಿ ಭೂಮಿಗಳು ಮತ್ತು ಕೃಷಿ ಭೂಮಿಗಳನ್ನು ಸಹ ವಕ್ಫ್ ಎಂದು ಹೇಳಿಕೊಳ್ಳಲಾಗುತ್ತಿದೆ. ಮಸೂದೆಯು ಈ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸುತ್ತದೆ, ವಕ್ಫ್ ನಿರ್ವಹಣೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ವೃತ್ತಿಪರತೆಯನ್ನು ತರುತ್ತದೆ. ತಿದ್ದುಪಡಿಗಳು ಮುಸ್ಲಿಂ ಸಮುದಾಯವನ್ನು ಸಬಲೀಕರಣಗೊಳಿಸುತ್ತವೆ. ಅದೇ ಸಮಯದಲ್ಲಿ ವಕ್ಫ್ ಕಾಯ್ದೆಯ ನಿಬಂಧನೆಗಳ ದುರುಪಯೋಗವನ್ನು ತಡೆಯುತ್ತವೆ ಎಂದು ಹೇಳಿದರು.