Tag: ತೋಶಾ-ಖಾನಾ ಪ್ರಕರಣ

  • ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಜಾಮೀನು

    ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಜಾಮೀನು

    ಇಸ್ಲಾಮಾಬಾದ್: ತೋಶಾ-ಖಾನಾ ಪ್ರಕರಣದಲ್ಲಿ (Toshakhana Case) ಬಂಧನಕ್ಕೊಳಗಾಗಿದ್ದ ಪಾಕಿಸ್ತಾನ (Pakistan) ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ (Imran Khan) ಅವರಿಗೆ ಪಾಕಿಸ್ತಾನ ಕೋರ್ಟ್‌ ಜಾಮೀನು ನೀಡಿದ್ದು, ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

    ಇಸ್ಲಾಮಾಬಾದ್ ಹೈಕೋರ್ಟ್ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಅಧ್ಯಕ್ಷ ಇಮ್ರಾನ್‌ ಖಾನ್‌ ಅವರ ದೋಷಾರೋಪಣೆ ಮತ್ತು ತೋಶಾಖಾನಾ ಪ್ರಕರಣದಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದೆ ಎಂದು ಡಾನ್ ನ್ಯೂಸ್ ವರದಿ ಮಾಡಿದೆ. ಇದನ್ನೂ ಓದಿ: ಇಮ್ರಾನ್‌ ಖಾನ್‌ ಬೆನ್ನಲ್ಲೇ ಪಾಕ್‌ ವಿದೇಶಾಂಗ ಮಾಜಿ ಸಚಿವ ಅರೆಸ್ಟ್‌ – ಅಜ್ಞಾತ ಸ್ಥಳಕ್ಕೆ ಶಿಫ್ಟ್‌

    ತಮಗೆ ವಿಧಿಸಿರುವ ಜೈಲು ಶಿಕ್ಷೆಯ ವಿರುದ್ಧ ಮಾಜಿ ಪ್ರಧಾನಿ ಮೇಲ್ಮನವಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಅಮರ್ ಫಾರೂಕ್ ಮತ್ತು ನ್ಯಾಯಮೂರ್ತಿ ತಾರಿಕ್ ಮೆಹಮೂದ್ ಜಹಾಂಗಿರಿ ಅವರನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆ ನಡೆಸಿ, ಜಾಮೀನು ನೀಡಿದೆ.

    ಇಸ್ಲಾಮಾಬಾದ್‌ನ ವಿಚಾರಣಾ ನ್ಯಾಯಾಲಯವು ಪಾಕಿಸ್ತಾನದ ಚುನಾವಣಾ ಆಯೋಗ (ಇಸಿಪಿ) ಸಲ್ಲಿಸಿದ ಪ್ರಕರಣದಲ್ಲಿ ಇಮ್ರಾನ್‌ ಖಾನ್ ತಪ್ಪಿತಸ್ಥರೆಂದು ಘೋಷಿಸಿತ್ತು. ಅಲ್ಲದೇ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತು. ಈ ತೀರ್ಪಿನಿಂದಾಗಿ ಅವರು ಐದು ವರ್ಷಗಳ ಕಾಲ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಾಗಿದ್ದರು. ನಂತರ ಇಮ್ರಾನ್ ತನ್ನ ಶಿಕ್ಷೆಯ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅರೆಸ್ಟ್‌

    ಉಡುಗೊರೆಯಾಗಿ ಪಡೆದ ಕೋಟ್ಯಂತರ ರೂ. ಮೌಲ್ಯದ ನೆಕ್ಲೆಸ್‌ ಅನ್ನು ರಾಜ್ಯದ ಉಡುಗೊರೆ ಭಂಡಾರಕ್ಕೆ ಠೇವಣಿ ಇಡುವ ಬದಲು ಆಭರಣ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಿರುವ ಆರೋಪವನ್ನು ಇಮ್ರಾನ್‌ ಎದುರಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬಂಧನಕ್ಕೆ ಮನೆಗೆ ಪೊಲೀಸರ ದಂಡು

    ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬಂಧನಕ್ಕೆ ಮನೆಗೆ ಪೊಲೀಸರ ದಂಡು

    ಇಸ್ಲಾಮಾಬಾದ್: ತೋಶಾ-ಖಾನಾ (Toshakhana Case) ಪ್ರಕರಣದಲ್ಲಿ ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ (Imran Khan) ಅವರನ್ನು ಬಂಧಿಸುವಂತೆ ನ್ಯಾಯಾಲಯ ಆದೇಶಿಸಿದ್ದು, ಬಂಧನಕ್ಕೆ ಅವರ ನಿವಾಸದೆದುರು ಪೊಲೀಸರ ದಂಡೇ ಬೀಡು ಬಿಟ್ಟಿದೆ.

    ಲಾಹೋರ್‌ನಲ್ಲಿರುವ (Lahore) ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (PTI) ಅಧ್ಯಕ್ಷ ಇಮ್ರಾನ್ ಖಾನ್ ಅವರ ನಿವಾಸದ ಹೊರಗೆ ಶಸ್ತ್ರಸಜ್ಜಿತ ಪೊಲೀಸ್ ವಾಹನಗಳು ಬೀಡುಬಿಟ್ಟಿರುವ ದೃಶ್ಯ ಕಂಡುಬಂದಿದೆ. ಇದನ್ನೂ ಓದಿ: ಗಿಫ್ಟ್‌ ಆಗಿ ಬಂದ ನೆಕ್ಲೆಸ್‌ನ್ನು 18 ಕೋಟಿಗೆ ಮಾರಿದ್ದಕ್ಕೆ ಇಮ್ರಾನ್‌ ಖಾನ್‌ ವಿರುದ್ಧ ತನಿಖೆ

    ತಮ್ಮ ನಾಯಕನ ಬಂಧನಕ್ಕೆ ಪಿಟಿಐ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದರು. ಇಮ್ರಾನ್‌ ಖಾನ್‌ ನಿವಾಸದ ಬಳಿ ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು ಜಮಾಯಿಸಿದ್ದರು. ಜಲಫಿರಂಗಿ ಮತ್ತು ಅಶ್ರುವಾಯು ಬಳಸಿ ಬೆಂಬಲಿಗರನ್ನು ಪೊಲೀಸರು ಚದುರಿಸಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಲಾಯಿತು.

    ಡಿಐಜಿ ಶಹಜಾದ್ ಬುಖಾರಿ ಮಾತನಾಡಿ, ಕಾನೂನುಬದ್ಧ ಪ್ರಕ್ರಿಯೆಯಡಿ ಕ್ರಮಕೈಗೊಳ್ಳಲು ಪೊಲೀಸರು ಆಗಮಿಸಿದ್ದಾರೆ. ಬೆಂಬಲಿಗರು ಅಧಿಕಾರಿಗಳೊಂದಿಗೆ ಸಹಕರಿಸಬೇಕು. ಜನರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುವುದಿಲ್ಲ ಎಂದು ಭಾವಿಸಿದ್ದೇವೆ. ಇಮ್ರಾನ್ ಖಾನ್ ಅವರ ನಿವಾಸದ ಹೊರಗೆ ನೆರೆದಿದ್ದ ಸಾರ್ವಜನಿಕರಿಗೂ ಈ ಬಗ್ಗೆ ಮನವರಿಕೆ ಮಾಡಲಾಗುವುದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧ ಅರೆಸ್ಟ್‌ ವಾರೆಂಟ್‌

    ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಅಧಿಕಾರವಧಿಯಲ್ಲಿ ದುಬಾರಿ ನೆಕ್ಲೆಸ್‌ ಉಡುಗೊರೆಯಾಗಿ ಬಂದಿತ್ತು. ಆದರೆ ಅವರು ಅದನ್ನು ರಾಜ್ಯದ ಉಡುಗೊರೆ ಭಂಡಾರಕ್ಕೆ (ತೋಶಾ-ಖಾನಾ) ಠೇವಣಿ ಇಡದೇ ವ್ಯಾಪಾರಿಯೊಬ್ಬರಿಗೆ 18 ಕೋಟಿ ರೂ.ಗೆ ಮಾರಾಟ ಮಾಡಿದ್ದಾರೆಂಬ ಆರೋಪ ಕೇಳಿಬಂದಿತ್ತು.