Tag: ತ್ರಿಪುರ

  • ಬಾಂಗ್ಲಾದೇಶದಲ್ಲಿ ಜೈಲಲ್ಲಿದ್ದ ಟೆರರಿಸ್ಟ್‌ಗಳು ಈಗ ರಿಲೀಸ್‌ ಆಗಿದ್ದಾರೆ: ತ್ರಿಪುರಾ ಸಿಎಂ ಕಳವಳ

    ಬಾಂಗ್ಲಾದೇಶದಲ್ಲಿ ಜೈಲಲ್ಲಿದ್ದ ಟೆರರಿಸ್ಟ್‌ಗಳು ಈಗ ರಿಲೀಸ್‌ ಆಗಿದ್ದಾರೆ: ತ್ರಿಪುರಾ ಸಿಎಂ ಕಳವಳ

    – ಬಾಂಗ್ಲಾದೊಂದಿಗೆ ತ್ರಿಪುರಾ ರಾಜ್ಯ ಗಡಿ ಹಂಚಿಕೊಂಡಿದೆ

    ಅಗರ್ತಲಾ: ಶೇಖ್ ಹಸೀನಾ ಅವರು ಬಾಂಗ್ಲಾದೇಶದಲ್ಲಿ ಪ್ರಧಾನಿಯಾಗಿದ್ದಾಗ ಜೈಲಿನಲ್ಲಿದ್ದ ಅನೇಕ ಭಯೋತ್ಪಾದಕರು ಈಗ ಬಿಡುಗಡೆಯಾಗಿದ್ದಾರೆ. ಭಾರತದ ತ್ರಿಪುರಾ ರಾಜ್ಯ ಬಾಂಗ್ಲಾದೇಶದೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ ಎಂದು ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ (Manik Saha) ಕಳವಳ ವ್ಯಕ್ತಪಡಿಸಿದ್ದಾರೆ.

    ಸಿಎಂ ಸಹಾ ಅವರು ಬಾಂಗ್ಲಾದೇಶದ ಪ್ರಸ್ತುತ ಸರ್ಕಾರವನ್ನು ಟೀಕಿಸಿದರು. ಅಲ್ಲಿ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ʻಇವಿಎಂ ಹ್ಯಾಕ್‌ ಮಾಡಬಹುದುʼ – ವಿಡಿಯೋ ಹರಿಬಿಟ್ಟವನ ವಿರುದ್ಧ ಎಫ್‌ಐಆರ್

    ಬಾಂಗ್ಲಾದೇಶದಲ್ಲಿ ಪರಿಸ್ಥಿತಿ ಚೆನ್ನಾಗಿಲ್ಲ, ಅಲ್ಲಿನ ಸರ್ಕಾರ ಹೇಗೆ ಕಾರ್ಯನಿರ್ವಹಿಸುತ್ತಿದೆ? ಇತ್ತೀಚಿನ ದಿನಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ನಮಗೆ ಬರುತ್ತಿರುವ ಸುದ್ದಿಗಳು ಒಳ್ಳೆಯದಲ್ಲ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎಂದು ಕಿಡಿಕಾರಿದ್ದಾರೆ.

    ಆಗ ಶೇಖ್ ಹಸೀನಾ ಸರ್ಕಾರದ ಅವಧಿಯಲ್ಲಿ ಜೈಲು ಸೇರಿದ್ದ ಭಯೋತ್ಪಾದಕರು ಈಗ ಮುಕ್ತರಾಗಿದ್ದಾರೆ. ಅವರು ಈಗ ಎಲ್ಲಿದ್ದಾರೆ? ಅವರ ಇರುವಿಕೆಯ ಬಗ್ಗೆ ನಾವು ಚಿಂತಿತರಾಗಿದ್ದೇವೆ. ವಿಶೇಷವಾಗಿ ತ್ರಿಪುರಾ, ಬಾಂಗ್ಲಾದೇಶದೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ. ಭಯೋತ್ಪಾದಕರು ಈಗ ಎಲ್ಲಿದ್ದಾರೆ ಮತ್ತು ಅವರ ಚಟುವಟಿಕೆ ಏನು ಎಂಬುದನ್ನು ಅವರು ಪರಿಶೀಲಿಸಬೇಕು. ಈಗಿನ ಸರ್ಕಾರವು ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ವಹಿಸಬೇಕು ಎಂದು ನಾನು ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಫೆಂಗಲ್‌ ಚಂಡಮಾರುತ | ಲ್ಯಾಂಡ್‌ ಆಗಲು ಪರದಾಡಿ ಮತ್ತೆ ಹಾರಿದ ವಿಮಾನ – ವಿಡಿಯೋ ವೈರಲ್‌

    ಭಾರತ ಸರ್ಕಾರವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಅಂತಿಮವಾಗಿ ಭಾರತವಿಲ್ಲದೆ ಬಾಂಗ್ಲಾದೇಶದ ಅಸ್ತಿತ್ವವು ಸಾಧ್ಯವಿಲ್ಲ. ಆದ್ದರಿಂದ ಅವರೂ ಈ ಬಗ್ಗೆ ಯೋಚಿಸಬೇಕು. ಅವರ ಜಿಡಿಪಿ ಈ ಹಿಂದೆ ಏರಿಕೆ ಕಂಡಿತ್ತು. ಆದರೆ, ಈಗ ಕುಸಿಯುತ್ತಿದೆ ಎಂದು ಎಚ್ಚರಿಸಿದ್ದಾರೆ.

  • ICUನಲ್ಲಿ ಮಯಾಂಕ್ ಅಗರ್ವಾಲ್ – ಆರೋಗ್ಯದ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ILS ಆಸ್ಪತ್ರೆ

    ICUನಲ್ಲಿ ಮಯಾಂಕ್ ಅಗರ್ವಾಲ್ – ಆರೋಗ್ಯದ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ILS ಆಸ್ಪತ್ರೆ

    ನವದೆಹಲಿ: ವಿಮಾನದಲ್ಲಿ ಸೀಟಿನ ಮುಂಭಾಗ ಇಟ್ಟಿದ್ದ ನೀರನ್ನು ಕುಡಿದು ಅಸ್ವಸ್ಥರಾದ ಕಾರಣ ಕರ್ನಾಟಕದ ರಣಜಿ ಕ್ಯಾಪ್ಟನ್ ಮಯಾಂಕ್ ಅಗರ್ವಾಲ್ (Mayank Agarwal) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಮತ್ತೊಂದು ಬಿಗ್ಸ್‌ ಅಪ್ಡೇಟ್‌ ಹೊರಬಿದ್ದಿದೆ.

    ಅಗರ್ತಲಾ ಐಎಲ್‌ಎಸ್ ಆಸ್ಪತ್ರೆ (ILS Hospital) ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಮಯಾಂಕ್‌ ಅಗರ್ವಾಲ್‌, ಸದ್ಯ ವೈದ್ಯಕೀಯವಾಗಿ ಸ್ಥಿರವಾಗಿದ್ದಾರೆ. ಅವರನ್ನು ನಿರಂತರ ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಇರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಮಣಿಪುರದಲ್ಲಿ ಮತ್ತೆ ಗುಂಡಿನ ಸುರಿಮಳೆ – ಇಬ್ಬರು ಸಾವು, ಓರ್ವ BJP ಮುಖಂಡನಿಗೆ ಗಂಭೀರ ಗಾಯ

     

    ಮಯಾಂಕ್‌ಗೆ ಏನಾಗಿತ್ತು?
    ಕರ್ನಾಟಕ ರಣಜಿ ತಂಡದೊಂದಿಗೆ ತ್ರಿಪುರಾದ ಅಗರ್ತಲಾದಿಂದ ಸೂರತ್‌ಗೆ ವಿಮಾನದಲ್ಲಿ ಅಗರ್ವಾಲ್ ಪ್ರಯಾಣ ಬೆಳೆಸಿದ್ದರು. ವಿಮಾನದಲ್ಲಿ ಕುಳಿತಿದ್ದ ಮಯಾಂಕ್, ಸೀಟಿನ ಮುಂಭಾಗದಲ್ಲಿ ಇಟ್ಟಿದ್ದ ನೀರನ್ನು ಕುಡಿದು ಅಸ್ವಸ್ಥಗೊಂಡಿದ್ದರು.

    ನೀರು ಕುಡಿಯುತ್ತಿದ್ದಂತೆ ಮಯಾಂಕ್ ನಾಲಿಗೆ, ಬಾಯಿಗೆ ಸುಟ್ಟ ಅನುಭವವಾಗಿದೆ. ಪರಿಣಾಮ ಅವರು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಅಗರ್ತಲಾದ ಐಎಲ್‌ಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ತ್ರಿಪುರಾ ವಿರುದ್ಧ ಸೋಮವಾರ ನಡೆದ ರಣಜಿ ಪಂದ್ಯದಲ್ಲಿ ಕರ್ನಾಟಕ ಗೆಲುವು ಸಾಧಿಸಿತ್ತು. ಮುಂದಿನ ಪಂದ್ಯಕ್ಕಾಗಿ ಸೂರತ್‌ಗೆ ಮಯಾಂಕ್‌ ಪ್ರಯಾಣ ಬೆಳೆಸಿದ್ದರು. ಇದನ್ನೂ ಓದಿ: Loksabha Election: ಬೆಂಗಳೂರಿನಲ್ಲಿ ಕಣಕ್ಕೆ ಇಳಿಯುತ್ತಾರಾ ಸುಮಲತಾ ಅಂಬರೀಶ್?‌

  • ವಿಮಾನದಲ್ಲಿ ನೀರು ಕುಡಿದು ಅಸ್ವಸ್ಥ; ಮಯಾಂಕ್‌ ಅಗರ್ವಾಲ್‌ ಆಸ್ಪತ್ರೆಗೆ ದಾಖಲು

    ವಿಮಾನದಲ್ಲಿ ನೀರು ಕುಡಿದು ಅಸ್ವಸ್ಥ; ಮಯಾಂಕ್‌ ಅಗರ್ವಾಲ್‌ ಆಸ್ಪತ್ರೆಗೆ ದಾಖಲು

    ನವದೆಹಲಿ: ವಿಮಾನದಲ್ಲಿ ಸೀಟಿನ ಮುಂಭಾಗ ಇಟ್ಟಿದ್ದ ನೀರನ್ನು ಕುಡಿದು ಅಸ್ವಸ್ಥರಾದ ಕಾರಣ ಕರ್ನಾಟಕದ ರಣಜಿ (Karnataka Ranji) ಕ್ಯಾಪ್ಟನ್‌ ಮಯಾಂಕ್‌ ಅಗರ್ವಾಲ್‌ (Mayank Agarwal) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಕರ್ನಾಟಕ ರಣಜಿ ತಂಡದೊಂದಿಗೆ ತ್ರಿಪುರಾದ ಅಗರ್ತಲಾದಿಂದ ಸೂರತ್‌ಗೆ ವಿಮಾನದಲ್ಲಿ ಅಗರ್ವಾಲ್‌ ಪ್ರಯಾಣ ಬೆಳೆಸಿದ್ದರು. ವಿಮಾನದಲ್ಲಿ ಕುಳಿತಿದ್ದ ಮಯಾಂಕ್‌, ಸೀಟಿನ ಮುಂಭಾಗದಲ್ಲಿ ಇಟ್ಟಿದ್ದ ನೀರನ್ನು ಕುಡಿದು ಅಸ್ವಸ್ಥಗೊಂಡಿದ್ದಾರೆ. ಇದನ್ನೂ ಓದಿ: IND vs ENG: 2ನೇ ಟೆಸ್ಟ್​ನಿಂದ ಹೊರಬಿದ್ದ ರವೀಂದ್ರ ಜಡೇಜಾ, ಕೆಎಲ್ ರಾಹುಲ್!

    ನೀರು ಕುಡಿಯುತ್ತಿದ್ದಂತೆ ಮಯಾಂಕ್‌ ನಾಲಿಗೆ, ಬಾಯಿಗೆ ಸುಟ್ಟ ಅನುಭವವಾಗಿದೆ. ಪರಿಣಾಮ ಅವರು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಅಗರ್ತಲಾದ ಐಎಲ್‌ಎಸ್‌ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಯಿತು.

    ತ್ರಿಪುರ ವಿರುದ್ಧ ಸೋಮವಾರ ನಡೆದ ರಣಜಿ ಪಂದ್ಯದಲ್ಲಿ ಕರ್ನಾಟಕ ಗೆಲುವು ಸಾಧಿಸಿತ್ತು. ಮುಂದಿನ ಪಂದ್ಯಕ್ಕಾಗಿ ಸೂರತ್‌ಗೆ ಪ್ರಯಾಣ ಬೆಳೆಸಲಾಗಿತ್ತು. ಇದನ್ನೂ ಓದಿ: India vs England, 1st Test: 7 ವಿಕೆಟ್‌ ಕಬಳಿಸಿದ ಟಾಮ್ ಹಾರ್ಟ್ಲಿ – ಭಾರತದ ವಿರುದ್ಧ ಇಂಗ್ಲೆಂಡ್‌ಗೆ 28 ರನ್‌ಗಳ ಜಯ

  • ವಿವಾಹೇತರ ಸಂಬಂಧ ಆರೋಪ – ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

    ವಿವಾಹೇತರ ಸಂಬಂಧ ಆರೋಪ – ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

    ದಿಸ್ಪುರ್: ವಿವಾಹೇತರ ಸಂಬಂಧದ ಆರೋಪದ ಮೇಲೆ ಓರ್ವ ಪುರುಷ ಹಾಗೂ ಯುವತಿಯನ್ನು ಗ್ರಾಮಸ್ಥರು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ತ್ರಿಪುರಾದಲ್ಲಿ (Tripura) ನಡೆದಿದೆ. ಹಲ್ಲೆಯ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ವಿವಾಹಿತ ವ್ಯಕ್ತಿ ಅದೇ ಗ್ರಾಮದ 20 ವರ್ಷದ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮದ ಮುಖಂಡರು ಸೇರಿ ಇಬ್ಬರನ್ನು ವಿಚಾರಣೆ ನಡೆಸಿದ್ದಾರೆ. ಬಳಿಕ ಇದ್ದಕ್ಕಿದ್ದಂತೆ ಗಲಾಟೆ ಶುರು ಮಾಡಿ ಇಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಬಳಿಕ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಜಮೀನಿನಲ್ಲಿ ಧರೆಗುರುಳಿದ ಚಾಲಕ ರಹಿತ ತಪಸ್ ವಿಮಾನ

    ಥಳಿತಕ್ಕೊಳಗಾದ ವ್ಯಕ್ತಿಗೆ ಈಗಾಗಲೇ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ. ಯುವತಿ ಆಕೆಯ ಸೋದರ ಸಂಬಂಧಿ ಹಾಗೂ ಅತ್ತಿಗೆಯೊಂದಿಗೆ ವಾಸಿಸುತ್ತಿದ್ದಳು ಎಂದು ತಿಳಿದು ಬಂದಿದೆ. ವೈರಲ್ ಆಗಿರುವ ವೀಡಿಯೋದಲ್ಲಿ ಮಹಿಳೆಯೊಬ್ಬಳು ಯುವತಿಯ ಕೂದಲನ್ನು ಎಳೆದು ಹೊಡೆಯುತ್ತಿರುವುದು ಸೆರೆಯಾಗಿದೆ. ಅಲ್ಲದೇ ವ್ಯಕ್ತಿಯ ಮೇಲೂ ದಾಳಿ ಮಾಡಿದ್ದಾರೆ. ಹಲವಾರು ಜನ ಈ ಘಟನೆಯನ್ನು ನೋಡುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.

    ಬಳಿಕ ಪೊಲೀಸರು (Police) ಮಧ್ಯ ಪ್ರವೇಶಿಸಿ ಇಬ್ಬರನ್ನು ಗ್ರಾಮಸ್ಥರಿಂದ ಬಿಡಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡು ಯುವತಿಯ ಸೋದರ ಸಂಬಂಧಿಯನ್ನು ಬಂಧಿಸಿದ್ದಾರೆ. ಅಲ್ಲದೇ ಆಕೆಯ ಅತ್ತಿಗೆ ಸಹ ಆರೋಪಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮಗಳಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ ಅಳಿಯನನ್ನು ಪ್ರಶ್ನಿಸಿದ ಮಾವನೇ ಮಟಾಶ್!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಜಬ್‌ ಹಾಕದೇ ಶಾಲೆಗೆ ಬಂದ ಬಾಲಕಿಯರನ್ನು ತಡೆದ 10 ನೇ ತರಗತಿ ಮುಸ್ಲಿಂ ವಿದ್ಯಾರ್ಥಿ – ಗುಂಪಿನಿಂದ ಹಲ್ಲೆ

    ಹಿಜಬ್‌ ಹಾಕದೇ ಶಾಲೆಗೆ ಬಂದ ಬಾಲಕಿಯರನ್ನು ತಡೆದ 10 ನೇ ತರಗತಿ ಮುಸ್ಲಿಂ ವಿದ್ಯಾರ್ಥಿ – ಗುಂಪಿನಿಂದ ಹಲ್ಲೆ

    ಗುವಾಹಟಿ: ಮುಸ್ಲಿಂ ಸಮುದಾಯದ ಬಾಲಕಿಯರು ಹಿಜಬ್‌ (Hijab) ಹಾಕದೇ ಶಾಲೆಗೆ ಹೋಗುತ್ತಿದ್ದಾಗ ತಡೆದ ಮುಸ್ಲಿಂ ವಿದ್ಯಾರ್ಥಿಯನ್ನು ಬಲಪಂಥೀಯ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ತ್ರಿಪುರಾದಲ್ಲಿ (Tripura) ನಡೆದಿದೆ.

    10ನೇ ತರಗತಿಯ ವಿದ್ಯಾರ್ಥಿಯನ್ನು ಶಾಲೆಯ ಮುಂದೆ ಎಳೆದೊಯ್ದು ಥಳಿಸಲಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಆದರೆ ಮುಖ್ಯೋಪಾಧ್ಯಾಯರು ಸೇರಿದಂತೆ ಯಾವುದೇ ಶಿಕ್ಷಕರು ಆತನ ರಕ್ಷಣೆಗೆ ಬರಲಿಲ್ಲ. ಈ ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಹಲ್ಲೆ ನಡೆಸಿದವರು ಹೊರಗಿನವರಾಗಿದ್ದು, ಅವರಿಗೂ ಶಾಲೆಗೆ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ವರದಿಯಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ – ಮೂವರು ಯೋಧರು ಹುತಾತ್ಮ

    ಘಟನೆಯ ನಂತರ ಸೆಪಹಿಜಾಲಾ ಜಿಲ್ಲೆಯ ಬಿಶಾಲ್‌ಘರ್ ಉಪವಿಭಾಗವು ಉದ್ವಿಗ್ನವಾಗಿತ್ತು. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಶಾಲೆಯ ಅಧಿಕಾರಿಗಳ ಪ್ರಕಾರ, ಒಂದು ವಾರದ ಹಿಂದೆ ಬಲಪಂಥೀಯ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಮಾಜಿ ವಿದ್ಯಾರ್ಥಿಗಳ ಗುಂಪು ಶಾಲೆಗೆ ಬಂದು ಶಾಲಾ ಆವರಣದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡುವ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಹಿಜಬ್‌ ಧರಿಸೋದಕ್ಕೆ ಅವಕಾಶ ನೀಡಬಾರದು ಎಂದು ಮುಖ್ಯೋಪಾಧ್ಯಾಯರನ್ನು ವಿನಂತಿಸಿತು. ಇದನ್ನೂ ಓದಿ: ಬೇಲ್ ಮೇಲೆ ರಿಲೀಸ್ ಆಗ್ತಿದ್ದಂತೆ ರೌಡಿಶೀಟರ್ ಮರ್ಡರ್ – ಮಗ ಬರ್ತಾನೆ ಅಂತ ಮಟನ್ ಚಾಪ್ಸ್ ಮಾಡ್ತಿದ್ಲು ತಾಯಿ!

    ಇಂತಹ ನಿಯಮಕ್ಕೆ ಸಂಬಂಧಪಟ್ಟ ಸರ್ಕಾರಿ ಇಲಾಖೆಯಿಂದ ಸ್ಪಷ್ಟ ಸೂಚನೆ ಇಲ್ಲದ ಕಾರಣ ಶಾಲೆಯಲ್ಲಿ ಹಿಜಬ್ ಧರಿಸದಂತೆ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳಿಗೆ ಮೌಖಿಕವಾಗಿ ತಿಳಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಲಾಪದ ವೇಳೆ ತ್ರಿಪುರ ಬಿಜೆಪಿ ಶಾಸಕನಿಂದ ಅಶ್ಲೀಲ ದೃಶ್ಯ ವೀಕ್ಷಣೆ – ವಿಡಿಯೋ ವೈರಲ್

    ಕಲಾಪದ ವೇಳೆ ತ್ರಿಪುರ ಬಿಜೆಪಿ ಶಾಸಕನಿಂದ ಅಶ್ಲೀಲ ದೃಶ್ಯ ವೀಕ್ಷಣೆ – ವಿಡಿಯೋ ವೈರಲ್

    ದಿಸ್ಪುರ್: ವಿಧಾನಸಭೆಯ ಅಧಿವೇಶನದ ವೇಳೆ ತ್ರಿಪುರದ ಬಿಜೆಪಿ (BJP) ಶಾಸಕ (MLA) ತಮ್ಮ ಮೊಬೈಲ್  ಫೋನ್‌ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚರ್ಚೆ ಹುಟ್ಟು ಹಾಕಿದೆ.

    ಈಶಾನ್ಯ ರಾಜ್ಯದ ಬಾಗ್ಬಸ್ಸಾ (Bagbassa) ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕ ಜಾದವ್ ಲಾಲ್ ನಾಥ್ ಅಧಿವೇಶನದ ವೇಳೆ ಅಶ್ಲೀಲ ದೃಶ್ಯ ವೀಕ್ಷಿಸಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಚರ್ಚೆಯಾಗುತ್ತಿದ್ದ ವೇಳೆ ಶಾಸಕ ಮೊಬೈಲ್‍ನಲ್ಲಿ ನೋಡುತ್ತಿರುವ ದೃಶ್ಯಗಳನ್ನು ಹಿಂಬದಿ ಕುಳಿತಿದ್ದ ವ್ಯಕ್ತಿ ಸೆರೆ ಹಿಡಿದಿದ್ದಾರೆ. ಈ ಬಗ್ಗೆ ಪಕ್ಷ, ಶಾಸಕನಿಂದ ಸ್ಪಷ್ಟನೆ ಕೇಳಿದ್ದು, ಶಾಸಕ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ರಾಮನವಮಿ ಆಚರಣೆ ವೇಳೆ ದೇವಾಲಯದ ನೆಲ ಕುಸಿತ – ಬಾವಿಗೆ ಬಿದ್ದ 25 ಜನ

    ಈ ಹಿಂದೆ 2012ರಲ್ಲಿ ಕರ್ನಾಟಕ (Karnataka) ವಿಧಾನಸಭೆಯ (Assembly) ಕಲಾಪದ ವೇಳೆ ಬಿಜೆಪಿ ನಾಯಕರಾದ ಸಿ.ಸಿ ಪಾಟೀಲ್ ಹಾಗೂ ಲಕ್ಷ್ಮಣ್ ಸವದಿ ಇಬ್ಬರೂ ಅಶ್ಲೀಲ ವಿಡಿಯೋ ನೋಡುತ್ತಿರುವುದು ಚರ್ಚೆಯಾಗಿ ರಾಜಿನಾಮೆ ನೀಡಿದ್ದರು. ನಂತರದ ತನಿಖೆಯಲ್ಲಿ ತಪ್ಪಿತಸ್ಥರಲ್ಲ ಎಂಬುದು ಸಾಬೀತಾದ ಮೇಲೆ ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿತ್ತು. ಇದನ್ನೂ ಓದಿ: ವಾಹನ ಸವಾರನ ಮೇಲೆ‌ ಎಕ್ಸ್‌ಪ್ರೆಸ್‌ ವೇ ಟೋಲ್ ಸಿಬ್ಬಂದಿ ಹಲ್ಲೆ

  • ತ್ರಿಪುರ ಬಿಜೆಪಿ ಬೆಂಬಲಿಗರಿಂದ ಸಂಸದೀಯ ತಂಡದ ಮೇಲೆ ದಾಳಿ

    ತ್ರಿಪುರ ಬಿಜೆಪಿ ಬೆಂಬಲಿಗರಿಂದ ಸಂಸದೀಯ ತಂಡದ ಮೇಲೆ ದಾಳಿ

    ಅಗರ್ತಲಾ: ಬಿಜೆಪಿ (BJP) ಬೆಂಬಲಿಗರಿಂದ ಕಾಂಗ್ರೆಸ್ (Congress) ಹಾಗೂ ಸಿಪಿಐ (CPI) ಸಂಸದೀಯ ತಂಡದ ಮೇಲೆ ದಾಳಿ ನಡೆದ ಘಟನೆ ಬಿಸಲ್‍ಗಢ್‍ನಲ್ಲಿ ನಡೆದಿದೆ.

    ತ್ರಿಪುರ ಸಿಪಿಐ ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ (Jitendra Chaudhury) ಹಾಗೂ ತಂಡ ಶುಕ್ರವಾರ ಸಂಜೆ ಬಿಸಲ್‍ಗಢ್‍ನ (Bisalgarh) ನೇಹಲ್‍ಚಂದ್ರ ನಗರಕ್ಕೆ (Nehalchandra Nagar) ತೆರಳಿದ್ದಾಗ ಈ ದಾಳಿ ನಡೆದಿದೆ. ದಾಳಿಯ ಹಿನ್ನೆಲೆಯಲ್ಲಿ ಇಂದು ನಡೆಯ ಬೇಕಿದ್ದ ಸಂಸದೀಯ ತಂಡದ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದು ಪಡಿಸುವಂತೆ ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಇನ್ನಿಲ್ಲ

    ಸಂಸದೀಯ ತಂಡ ಚುನಾವಣೋತ್ತರ ರಾಜಕೀಯ ಹಿಂಸಾಚಾರದ ಕುರಿತು ಸಂತ್ರಸ್ತರೊಂದಿಗೆ ಮಾತನಾಡಲು ಬಿಜೆಪಿ ಆಡಳಿತದ ತ್ರಿಪುರದಲ್ಲಿ ಎರಡು ದಿನ ಪ್ರವಾಸ ಕೈಗೊಂಡಿತ್ತು.

    ದಾಳಿಯಲ್ಲಿ ಮೂರು ವಾಹನಗಳು ಹಾನಿಗೊಳಗಾಗಿವೆ. ವಾಹನದಲ್ಲಿದ್ದ ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲಾಯಿತು. ಘಟನೆ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆಯನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಖಂಡಿಸಿದ್ದಾರೆ. ಪಕ್ಷದ ನಾಯಕರ ನಿಯೋಗದ ಮೇಲೆ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ. ನಿಯೋಗದ ಜೊತೆಯಲ್ಲಿದ್ದ ಪೊಲೀಸರು ಪ್ರತಿಕ್ರಿಯಿಸಿಲ್ಲ. ಬಿಜೆಪಿ ಪ್ರಾಯೋಜಿತ ಹಿಂಸಾಚಾರಕ್ಕೆ ಜಯವಾಗಲಿ ಎಂದು ಟ್ವಿಟ್ಟರ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ತಂದೆ ಮನೆಯಿಂದ ಕಾಸ್ಟ್ಲಿ ವಾಚ್ ತರದಿದ್ದಕ್ಕೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ!

  • ಸತತ 2ನೇ ಬಾರಿಗೆ ತ್ರಿಪುರ ಸಿಎಂ ಆಗಿ ಮಣಿಕ್ ಸಹಾ ಪ್ರಮಾಣ ವಚನ ಸ್ವೀಕಾರ

    ಸತತ 2ನೇ ಬಾರಿಗೆ ತ್ರಿಪುರ ಸಿಎಂ ಆಗಿ ಮಣಿಕ್ ಸಹಾ ಪ್ರಮಾಣ ವಚನ ಸ್ವೀಕಾರ

    ಅಗರ್ತಲಾ: ಬಿಜೆಪಿ (BJP) ಮುಖಂಡ ಮಣಿಕ್ ಸಹಾ (Manik Saha) ಅವರು ಬುಧವಾರ ತ್ರಿಪುರಾ (Tripura) ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ 8 ಸಚಿವರು ಪ್ರಮಾಣವಚನ ಸ್ವೀಕರಿಸಿದರು.

    ಬುಧವಾರ ಅಗರ್ತಲಾದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi), ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda), ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಇತರ ಹಿರಿಯ ಮುಖಂಡರು ಭಾಗಿಯಾಗಿದ್ದರು.

    ಫೆ. 16ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಸೋಲನ್ನು ಅನುಭವಿಸಿತ್ತು. ಈ ಹಿನ್ನೆಲೆಯಲ್ಲಿ ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಸಿಪಿಎಂ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿವೆ. ಇದನ್ನೂ ಓದಿ: ಜಿಲ್ಲಾಡಳಿತದ ವಿರುದ್ಧ ಮುಸ್ಲಿಮರು ಕಿಡಿ – ದತ್ತಪೀಠದಲ್ಲಿ ಉರುಸ್‌ನಿಂದ ದೂರ ಉಳಿಯುವ ತೀರ್ಮಾನ

    2022 ರಲ್ಲಿ ಬಿಪ್ಲಬ್ ದೇಬ್ ಬದಲಿಗೆ ಡಾ ಮಾಣಿಕ್ ಸಹಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಬಿಜೆಪಿಯಲ್ಲಿ ತಳಮಟ್ಟದಲ್ಲಿ ಕೆಲಸ ಮಾಡುತ್ತಿದ್ದ ಸಹಾ 2020 ರಲ್ಲಿ ರಾಜ್ಯದಲ್ಲಿ ಪಕ್ಷದ ಮುಖ್ಯಸ್ಥರಾಗಿದ್ದರು. ಆದಾಗ್ಯೂ ಅವರು ಮುಖ್ಯಮಂತ್ರಿಯಾಗುವ ಮೊದಲು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಟೌನ್ ಬರ್ಡೋವಾಲಿ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿಯಾದರು. ಈ ವಿಧಾನಸಭಾ ಚುನಾವಣೆಯಲ್ಲಿಯೂ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ನೌಕಾಸೇನೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ; ಮೂವರು ಪೈಲೆಟ್‌ಗಳ ರಕ್ಷಣೆ

  • Exit Polls: ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿಗೆ ಅಧಿಕಾರ – ಮೇಘಾಲಯದಲ್ಲಿ 3ನೇ ಸ್ಥಾನ

    Exit Polls: ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿಗೆ ಅಧಿಕಾರ – ಮೇಘಾಲಯದಲ್ಲಿ 3ನೇ ಸ್ಥಾನ

    ನವದೆಹಲಿ: ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮೇಘಾಲಯದಲ್ಲಿ ಮೂರನೇ ಸ್ಥಾನ ಗಳಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿವೆ.

    ನಾಗಾಲ್ಯಾಂಡ್, ಮೇಘಾಲಯಗಳಲ್ಲಿ ವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಷ್ಟ್ರೀಯ ವಾಹಿನಿಗಳು ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸಿವೆ. ಸಮೀಕ್ಷೆಗಳ ಪೈಕಿ ಎರಡು ಸಮೀಕ್ಷೆಗಳು ಬಿಜೆಪಿಗೆ ಪೂರ್ಣ ಬಹುಮತ ಬರಲಿದೆ ಎಂದು ತಿಳಿಸಿದರೆ ಒಂದು ಸಮೀಕ್ಷೆ ಮಾತ್ರ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದಿದೆ.

    ಮೂರು ರಾಜ್ಯಗಳಲ್ಲಿ ಒಟ್ಟು 60 ವಿಧಾನಸಭಾ ಕ್ಷೇತ್ರಗಳಿದ್ದು, ಬಹುಮತಕ್ಕೆ 31 ಸ್ಥಾನ ಗಳಿಸಬೇಕಾಗುತ್ತದೆ. ಮಾರ್ಚ್ 2 ರಂದು ಫಲಿತಾಂಶ ಹೊರಬೀಳಲಿದೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಕರ್ನಾಟಕಕ್ಕೆ ಅವಮಾನ, ಖರ್ಗೆಗೆ ಛತ್ರಿಯೇ ಸಿಗಲಿಲ್ಲ: ಮೋದಿ

    ನಾಗಾಲ್ಯಾಂಡ್
    ಒಟ್ಟು ಸ್ಥಾನ : 60
    ಮ್ಯಾಜಿಕ್‌ ಸಂಖ್ಯೆ:31
    ಬಿಜೆಪಿ+ 42, ಎನ್‌ಪಿಎಫ್‌ 6, ಕಾಂಗ್ರೆಸ್‌ 1

    ತ್ರಿಪುರ
    ಒಟ್ಟು ಸ್ಥಾನ 60
    ಮ್ಯಾಜಿಕ್‌ ಸಂಖ್ಯೆ :31
    ಬಿಜೆಪಿ +32, ಎಡ ಪಕ್ಷ 15, ಟಿಐಪಿಆರ್‌ಎ 12

    ಮೇಘಾಲಯ
    ಒಟ್ಟು ಸ್ಥಾನ 60
    ಮ್ಯಾಜಿಕ್‌ ಸಂಖ್ಯೆ 31
    ಎನ್‌ಪಿಪಿ 20, ಟಿಎಂಸಿ 11, ಬಿಜೆಪಿ 6