Tag: ತ್ರಿಪುರಾ ಪೊಲೀಸ್

  • ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ

    ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ

    – ಬರ್ತ್‌ಡೇ ಪಾರ್ಟಿಗೆ ಅನುಮತಿ ಬೇಕೆಂದು ನನಗೆ ಗೊತ್ತಿರಲಿಲ್ಲ ಎಂದ ಗಾಯಕಿ

    ತೆಲುಗು, ಕನ್ನಡ ಸೇರಿ ಸೂಪರ್‌ ಹಿಟ್ ಸಿನಿಮಾಗಳ ಹಾಡುಗಳಿಗೆ ಧ್ವನಿಯಾಗಿರುವ ಜನಪದ ಗಾಯಕಿ ಮಂಗ್ಲಿ (Folk Singer Mangli) ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

    ತ್ರಿಪುರಾದ ರೆಸಾರ್ಟ್‌ವೊಂದರಲ್ಲಿ ತನ್ನ ಬರ್ತ್‌ಡೇ ಪಾರ್ಟಿಯಲ್ಲಿ (Mangli Birthday Party) ಮಾದಕ ವಸ್ತು ಪತ್ತೆಯಾಗಿತ್ತು. ಬುಧವಾರ ತಡರಾತ್ರಿ ನಡೆದ ಈ ಕಾರ್ಯಕ್ರಮದಲ್ಲಿ ಪೂರ್ವಾನುಮತಿ ಇಲ್ಲದೇ ಪಾರ್ಟಿ ನಡೆಸಲಾಗಿದೆ ಎಂಬ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಪರಿಣಾಮವಾಗಿ, ಮಂಗ್ಲಿ ಮತ್ತು ಇತರ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಕಿ ಸ್ಪಷ್ಟನೆ ನೀಡಿದ್ದಾರೆ. ಈ ವಿಡಿಯೋವನ್ನು ಸೋಷಿಯಲ್‌ ಮೀಡಿಯಾದಲ್ಲೂ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!

    ನನ್ನ ಕುಟುಂಬದೊಂದಿಗೆ ಸಮಯ ಕಳೆಯುವ ಉದ್ದೇಶದಿಂದ ನಾನು ಬರ್ತ್‌ಡೇ ಪಾರ್ಟಿ ಆಯೋಜಿಸಿದ್ದೆ. ಇದು ನನ್ನ ಪೋಷಕರ ಇಚ್ಛೆಯಂತೆ ನಡೆಯಿತು. ಈ ಪಾರ್ಟಿಯಲ್ಲಿ ನನ್ನ ಕುಟುಂಬದ ಎಲ್ಲ ಸದಸ್ಯರು, ಸಂಬಂಧಿಕರು, ಸ್ನೇಹಿತರೂ ಹಾಜರಿದ್ರು. ಡ್ರಿಂಗ್ಸ್‌ ಮತ್ತು ಸಾಂಗ್‌ ವ್ಯವಸ್ಥೆ ಕೂಡ ಮಾಡಲಾಗಿತ್ತು. ಆದ್ರೆ ಇವುಗಳಿಗೆ ಅನುಮತಿ ಅಗತ್ಯವಿದೆ ಅನ್ನೋದು ನನಗೆ ಗೊತ್ತಿರಲಿಲ್ಲ. ರೆಸಾರ್ಟ್‌ನಲ್ಲಿ ಹಠಾತ್ತನೆ ಪಾರ್ಟಿ ಮಾಡಲಾಗಿತ್ತು. ಯಾರಾದ್ರೂ ನನಗೆ ಮಾಹಿತಿ ಕೊಟ್ಟಿದ್ದರೆ ಖಂಡಿತವಾಗಿ ಬೇಕಾದ ಅನುಮತಿ ಪಡೆದುಕೊಳ್ಳುತ್ತಿದೆ. ಯಾರೊಬ್ಬರೂ ಅನುಮತಿ ಅಗತ್ಯ ಅಂತ ನನಗೆ ಹೇಳಲಿಲ್ಲ. ನಾನು ತಿಳಿದೂ ತಿಳಿದೂ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ

    ಅಲ್ಲದೇ ರೆಸಾರ್ಟ್‌ನಲ್ಲಿ ಸ್ಥಳೀಯ ಮದ್ಯ (ಲೋಕಲ್‌ ಡ್ರಿಂಕ್ಸ್‌) ಮಾತ್ರ ಇತ್ತು. ಬೇರೆ ಯಾವುದೇ ಮಾದಕ ವಸ್ತುಗಳು ಬಳಸಿರಲಿಲ್ಲ ಅಥವಾ ಕಂಡುಬಂದಿಲ್ಲ. ಪೊಲೀಸರು ಶೋಧ ನಡೆಸಿದಾಗಲೂ ಯಾವುದೇ ಅಕ್ರಮ ವಸ್ತುಗಳು ಪತ್ತೆಯಾಗಿಲ್ಲ. ಗಾಂಜಾ ಸೇವಿಸಿದ್ದ ವ್ಯಕ್ತಿ ಬೇರೆಡೆ ಮತ್ತು ಬೇರೆ ಸಮಯದಲ್ಲಿ ಸೇವಿಸಿದ್ದಾನೆ ಅನ್ನೋದನ್ನ ಪೊಲೀಸರೇ ಖಚಿತಪಡಿಸಿದ್ದಾರೆ. ನಾವು ಅಧಿಕಾರಿಗಳಿಗೆ ಸಂಪೂರ್ಣ ಸಕರಿಸುತ್ತಿದ್ದೇವೆ. ತಿಳಿದೂ ತಿಳಿದೂ ಅಂತಹ ಕೆಲಸ ಮಾಡ್ತೀನಾ? ನನ್ನ ಹೆತ್ತವರ ಮುಂದೆ ಆ ರೀತಿ ನಡೆದುಕೊಳ್ಳಲು ಇಚ್ಛಿಸುತ್ತೀನಾ? ದಯವಿಟ್ಟು ಸಾಕ್ಷ್ಯಗಳಿಲ್ಲದೇ ನನ್ನ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ

    ಇದಕ್ಕೂ ಮುನ್ನ ಪಾರ್ಟಿಯಲ್ಲಿ ಭಾಗಿಯಾಗಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಮೆಡಿಕಲ್ ಟೆಸ್ಟ್‌ನಲ್ಲಿ ಹಲವರು ಮಾದಕ ವಸ್ತು ಸೇವಿಸಿರೋದು ಪತ್ತೆಯಾಗಿತ್ತು. ಈ ಸಂಬಂಧ ಚೆವೆಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದಾಳಿ ವೇಳೆ ಪೊಲೀಸರು ವಿಡಿಯೋ ಮಾಡಿದ್ದು, ಮಂಗ್ಲಿ, ವಿಡಿಯೋ ಮಾಡೋದು ನಿಲ್ಲಿಸ್ತಿಯೋ ಇಲ್ವೋ ಎಂದು ಪೊಲೀಸರ ಮೇಲೆ ಗದರಿದ್ದರು. ಇದಕ್ಕೆ, ನನ್ನ ಕೆಲಸ ನಾನು ಮಾಡ್ತಿದ್ದೇನೆ ಎಂದು ಪೊಲೀಸ್ ಸಿಬ್ಬಂದಿ ಉತ್ತರಿಸಿದ್ದರು.

  • 16ರ ಬಾಲಕಿ ಮೇಲೆ ಗ್ಯಾಂಗ್ ರೇಪ್- ಓರ್ವ ಮಹಿಳೆ ಸೇರಿ ಮೂವರು ಅರೆಸ್ಟ್

    16ರ ಬಾಲಕಿ ಮೇಲೆ ಗ್ಯಾಂಗ್ ರೇಪ್- ಓರ್ವ ಮಹಿಳೆ ಸೇರಿ ಮೂವರು ಅರೆಸ್ಟ್

    ಅಗರ್ತಲಾ: ತ್ರಿಪುರಾದ (Tripura) ಉನಕೋಟಿ ಜಿಲ್ಲೆಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಓರ್ವ ಮಹಿಳೆ (Women) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

    ಘಟನೆಯಲ್ಲಿ ಸಿಪಿಐ(ಎಂ) (CPI) ಸಚಿವರ ಪುತ್ರನ ಕೈವಾಡವಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ (Congress) ಆರೋಪಿಸಿದೆ. ಆದರೆ ಬಿಜೆಪಿ (BJP) ಆರೋಪವನ್ನು ತಳ್ಳಿಹಾಕಿದೆ. ಇದನ್ನೂ ಓದಿ: 5 ಬಾರಿ ಗರ್ಭಪಾತ, ಮೂರನೇ ಪತ್ನಿಯಾಗಿರುವಂತೆ ಒತ್ತಡ- ಸಿಪಿಐ ವಿರುದ್ಧ ರೇಪ್ ಕೇಸ್!

    ಇದೇ ತಿಂಗಳ ಅಕ್ಟೋಬರ್ 19ರಂದು ಕುಮಾರಘಾಟ್‌ನ 3 ಅಂತಸ್ತಿನ ಕಟ್ಟಡದಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ನೆರೆಯ ಮಹಿಳೆಯೊಬ್ಬಳೇ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗುವಂತೆ ಮಾಡಿದ್ದಾಳೆ. ಈ ಸಂಬಂಧ ಸಂತ್ರಸ್ತೆ ತಾಯಿ ನೀಡಿದ ದೂರಿನ ಮೇರೆಗೆ ಕೇಸ್ ದಾಖಲಿಸಿ, ಮೂವರನ್ನು ಬಂಧಿಸಲಾಗಿದೆ. ಇನ್ನೂ ಹಲವರಿಗಾಗಿ ಬಲೆ ಬೀಸಲಾಗಿದೆ ಎಂದು ಪೊಲೀಸರು (Tripura Police) ತಿಳಿಸಿದ್ದಾರೆ.

    ಪ್ರಕರಣದಲ್ಲಿ (FIR) ಸಚಿವರೊಬ್ಬರ ಪುತ್ರನ ಹೆಸರು ಕೇಳಿಬಂದಿದೆ. ಆದ್ದರಿಂದ ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಬಂಧಿಸುವ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುತ್ತದೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಆಶಿಶ್ ಸಹಾ ತಿಳಿಸಿದ್ದಾರೆ. ಇದನ್ನೂ ಓದಿ: ನರ್ಸ್‍ನ್ನು ಕಟ್ಟಿ ಹಾಕಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ

    ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ ಮಾತನಾಡಿ, ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಚಿವರೊಬ್ಬರ ಪುತ್ರನ ಹೆಸರು ಕೇಳಿಬಂದಿರುವುದು ಬೇಸರ ತಂದಿದೆ. ನಾವು ಅವರ ವಿರುದ್ಧ ತನಿಖೆಗೆ ಒತ್ತಾಯಿಸುತ್ತೇವೆ. ಒಂದು ವೇಳೆ ಆರೋಪ ಸಾಬೀತಾದರೆ ಕಠಿಣ ಶಿಕ್ಷೆ ಕೈಗೊಳ್ಳಲಿ ಎಂದು ಹೇಳಿದ್ದಾರೆ.

    CRIME COURT

    ಆರೋಪ ತಳ್ಳಿಹಾಕಿರುವ ಬಿಜೆಪಿ, ಅಕ್ಟೋಬರ್ 19ರಂದು ಸಚಿವರ ಪುತ್ರ ಅಗರ್ತಲಾದಲ್ಲಿದ್ದ ಕಾರಣ ಆರೋಪಗಳು ಸಂಪೂರ್ಣವಾಗಿ ಆಧಾರ ರಹಿತ ಹಾಗೂ ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿದೆ.

    Live Tv
    [brid partner=56869869 player=32851 video=960834 autoplay=true]