ನವದೆಹಲಿ: ನಟ, ರಾಜಕಾರಣಿ ಕಮಲ್ ಹಾಸನ್ (Kamal Hassan) ಅವರ `ಥಗ್ ಲೈಫ್’ (Thag Life) ಚಿತ್ರ ಬಿಡುಗಡೆಯ ಸಂದರ್ಭದಲ್ಲಿ ಹಿಂಸಾಚಾರ, ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳದ ಕರ್ನಾಟಕ ಸರ್ಕಾರ ಮತ್ತು ರಾಜ್ಯ ಚಲನಚಿತ್ರ ಮಂಡಳಿಯನ್ನು ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ.
ಚಿತ್ರದ ಮೇಲೆ ಯಾವುದೇ ನಿರ್ಬಂಧ ಹೇರಿಲ್ಲ. ನಿರ್ಮಾಪಕರು ಸಿನಿಮಾ ಬಿಡುಗಡೆ ಮಾಡಲು ಮನಸ್ಸು ಮಾಡಿದರೆ ಸಂಪೂರ್ಣ ಭದ್ರತೆಯನ್ನು ಒದಗಿಸುವುದಾಗಿ ರಾಜ್ಯ ಸರ್ಕಾರ ಸಲ್ಲಿಸಿದ ಅಫಿಡವಿಟ್ ಅನ್ನು ದಾಖಲಿಸಿಕೊಂಡ ನ್ಯಾಯಾಲಯ, ಬೆದರಿಕೆ ಹಾಕಿದವರ ವಿರುದ್ಧ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿತು. ಇದನ್ನೂ ಓದಿ: ಆರ್‌ಸಿಬಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದೆ – ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಬಾಂಬ್
ದ್ವೇಷ ಭಾಷಣ ಮತ್ತು ಹಿಂಸಾಚಾರದ ಬೆದರಿಕೆಗಳ ಕುರಿತು ಮಾರ್ಗಸೂಚಿಗಳನ್ನು ಕೋರಿ ನಿರ್ಮಾಪಕ ಮತ್ತು ಮೂರನೇ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ನಡೆಸಿದ ಪೀಠವು, ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆ ಎಂದು ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ಗುತ್ತಿಗೆ ಆಯ್ತು, ಈಗ ವಸತಿ ಯೋಜನೆಯಲ್ಲೂ ಮುಸ್ಲಿಮ್ ಮೀಸಲಾತಿ ಹೆಚ್ಚಳ!
ಸ್ಟ್ಯಾಂಡ್-ಅಪ್ ಕಾಮಿಕ್ಸ್ ಅನ್ನು ನಿಲ್ಲಿಸಬೇಕೇ? ಕವಿಗಳು ಕವಿತೆಗಳನ್ನು ಹೇಳಬಾರದೇ? ಎಂದು ನ್ಯಾಯಾಲಯವು ಪ್ರಶ್ನಿಸಿತು. ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಕೆಲವು ಗುಂಪುಗಳು ಏನು ಬಿಡುಗಡೆ ಮಾಡಬಹುದು ಅಥವಾ ಬಿಡುಗಡೆ ಮಾಡಬಾರದು ಎಂದು ನಿರ್ದೇಶಿಸಲು ಅನುಮತಿಸಬಾರದು ಎಂದು ಒತ್ತಿ ಹೇಳಿತು.
ಬೆಂಕಿ ಹಚ್ಚುವವರಿಗೆ, ಬೆದರಿಕೆ ಹಾಕುವವರಿಗೆ `ರಾಜನಂತಹ ವಿನಾಯಿತಿ’ ನೀಡಲಾಗಿದೆ ಎಂದು ಅರ್ಜಿದಾರರು ವಾದಿಸಿದರು. ಚಲನಚಿತ್ರ ನಿರ್ಮಾಪಕರು ಮತ್ತು ಚಿತ್ರಮಂದಿರ ಮಾಲೀಕರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದರು. ಇತ್ತೀಚಿನ ಬೆಳವಣಿಗೆಯಿಂದ ನಿರ್ಮಾಪಕರು 30 ಕೋಟಿ ರೂ.ಗಳವರೆಗೆ ನಷ್ಟವಾಗಿದೆ ಇದನ್ನು ಭರಿಸಿಕೊಡಬೇಕು ಇಂತಹ ಸನ್ನಿವೇಶ ನಿಭಾಯಿಸಲು ಮಾರ್ಗಸೂಚಿ ನೀಡಬೇಕು ಎಂದರು. ಇದನ್ನೂ ಓದಿ: ಕರ್ನಾಟಕಕ್ಕೆ ಹೆಚ್‌ಡಿಕೆ, ಜೋಶಿ ಕೊಡುಗೆ ಏನು? ಚರ್ಚೆಗೆ ಬರಲಿ: ಪ್ರದೀಪ್ ಈಶ್ವರ್ ಪಂಥಾಹ್ವಾನ
ವಾದ ಆಲಿಸಿದ ನ್ಯಾಯಲಯವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿತು. ಹೋರಾಟಗಾರರು ಸಂಸ್ಥೆಗೆ ಮುತ್ತಿಗೆ ಹಾಕಿದರೆ, ನೀವು ಪೊಲೀಸ್ ಭದ್ರತೆ ಪಡೆಯಬೇಕು. ನೀವು ಒತ್ತಡಕ್ಕೆ ಒಳಗಾಗುವುದು ಸರಿಯಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಮಂಡಳಿ ಪರ ವಕೀಲರು ನಾವು ನಟನಿಗೆ ಕ್ಷಮೆ ಕೇಳುವಂತೆ ಪತ್ರ ಬರೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ವೇಳೆ ನಿರ್ಮಾಪಕ ಮತ್ತು ಫಿಲ್ಮ್ ಚೇಂಬರ್ ನಡುವೆ ವಿವಾದ ಉದ್ಭವಿಸಿತು. ನಿರ್ಮಾಪಕರು ಸ್ವಯಂಪ್ರೇರಣೆಯಿಂದ ಚಿತ್ರ ಬಿಡುಗಡೆಯನ್ನು ತಡೆಹಿಡಿದಿದ್ದಾರೆ ಎಂದು ಕರ್ನಾಟಕ ಸರ್ಕಾರ ವಾದಿಸಿತು. ಚಿತ್ರ ಬಿಡುಗಡೆ ಮಾಡಿದರೆ ನಾವು ಅಗತ್ಯ ಭದ್ರತೆ ನೀಡಲು ಸಿದ್ಧವಿದ್ದೇವೆ. ಅಲ್ಲದೇ ರಾಜ್ಯವು ಈಗ ತನ್ನ ಅಫಿಡವಿಟ್‌ಗೆ ಬದ್ಧವಾಗಿದೆ ಎಂದು ಹೇಳಿತು. ಇದನ್ನೂ ಓದಿ: ‘666 ಆಪರೇಷನ್ ಡ್ರೀಮ್ ಥಿಯೇಟರ್’ನಲ್ಲಿ ಡಾಲಿ, ಶಿವಣ್ಣ
ರಾಜ್ಯ ಸರ್ಕಾರದ ಅಫಿಡವಿಟ್‌ನಿಂದ ತೃಪ್ತವಾದ ನ್ಯಾಯಲಯವು ನಾವು ಯಾವುದೇ ಪರಿಹಾರಕ್ಕೆ ಸೂಚಿಸುವುದಿಲ್ಲ ಅಥವಾ ಮಾರ್ಗಸೂಚಿ ನೀಡುವುದಿಲ್ಲ. ಸರ್ಕಾರ ಇಂತಹ ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಬೇಕು ಮತ್ತು ಚಿತ್ರ ಬಿಡುಗಡೆಗೆ ಅವಕಾಶ ನೀಡಿ, ಕಾನೂನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕ್ರಿಮಿನಲ್ ಕಾನೂನು ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ನ್ಯಾ. ಉಜ್ಜಲ್ ಭುಯಾನ್ ನೇತೃತ್ವದ ದ್ವಿ ಸದಸ್ಯ ಪೀಠ ಆದೇಶಿಸಿತು.



ಕನ್ನಡಿಗರಿಗೆ ಕ್ಷಮೆಯಾಚಿಸಲು ಕಮಲ್ ಹಾಸನ್‌ಗೆ ಕೊಟ್ಟ ಗಡುವು ಮುಗಿದಿದೆ. ಕರ್ನಾಟಕದಲ್ಲಿ 100ಕ್ಕೂ ಹೆಚ್ಚು ಸ್ಕ್ರಿನ್‌ಗಳಲ್ಲಿ ರಿಲೀಸ್‌ಗೆ ರೆಡಿಯಿರುವ ‘ಥಗ್ ಲೈಫ್’ (Thug Life) ಚಿತ್ರ ಪ್ರದರ್ಶನ ಮಾಡದಂತೆ ಥಿಯೇಟರ್‌ಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಇತರ ಕನ್ನಡಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಒಂದು ವೇಳೆ ಚಿತ್ರ ಪ್ರದರ್ಶನಕ್ಕೆ ಮುಂದಾದರೆ ಥಿಯೇಟರ್‌ಗೆ ಬೆಂಕಿ ಹಚ್ಚೋದಾಗಿ ಎಚ್ಚರಿಕೆ ನೀಡಿವೆ. ಇದನ್ನೂ ಓದಿ:
ಕಮಲ್ ನಟನೆ, ನಿರ್ಮಾಣದ ‘ಥಗ್ ಲೈಫ್’ ಚಿತ್ರದ ಹಂಚಿಕೆಯ ಹಕ್ಕನ್ನು ಪಡೆದಿದ್ದ ವೆಂಕಟೇಶ್ ಹಣ ವಾಪಸ್ ಕೊಡಲು ಮುಂದಾಗಿದ್ದಾರೆ. ರಿಲೀಸ್‌ಗೆ ಅಡ್ಡಿಯಾದ್ರೂ ಪರ್ವಾಗಿಲ್ಲ ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದ ಕಮಲ್ ಈಗಲಾದ್ರು ತಪ್ಪು ಅರಿತು ಕ್ಷಮೆಯಾಚಿಸುತ್ತಾರಾ ಎಂದು ಕಾದುನೋಡಬೇಕಿದೆ.
ನಿನ್ನೆ (ಮೇ 30) ಚೆನ್ನೈನಲ್ಲಿ ಕಮಲ್ ಹಾಸನ್ ಮಾತನಾಡಿ, ಕ್ಷಮೆ ಕೇಳಲ್ಲ ಎಂದು ಹೇಳಿ ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನಿಂದ ತಪ್ಪಾಗಿದ್ರೆ ಕ್ಷಮೆ ಕೇಳುವೆ, ನನ್ನಿಂದ ತಪ್ಪು ಆಗಿಲ್ಲ. ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದರು.
ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಮಾತನಾಡಿದ್ದ ಕಮಲ್ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಕ್ಷಮೆ ಯಾಚಿಸುವಂತೆ ಫಿಲ್ಮ್ ಚೇಂಬರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಕನ್ನಡ ಭಾಷೆಗೆ 4ರಿಂದ 5 ಸಾವಿರ ವರ್ಷಗಳ ಇತಿಹಾಸವಿದೆ. ಅವರು ಆಡಿದ ಮಾತಿನಿಂದ ದ್ರಾವಿಡ ಭಾಷೆಗಳು ಒಗ್ಗಟ್ಟಿಗೆ ದಕ್ಕೆಯಾಗಿದೆ. ಕಮಲ್ ಅತ್ಯುತ್ತಮ ಕಲಾವಿದ, ಅವರು ಕನ್ನಡ ಚಿತ್ರಗಳಲ್ಲೂ ನಟಿಸಿದ್ದಾರೆ. ನಟನ ಮಾತಿನಿಂದ ಕನ್ನಡಿಗರು, ತಮಿಳರ ನಡುವೆ ದ್ವೇಷ ಹುಟ್ಟುವಂತೆ ಮಾಡಿದ್ದಾರೆ. ತಕ್ಷಣ ತಮ್ಮ ತಪ್ಪನ್ನ ಅವರು ತಿದ್ದುಕೊಂಡು ಕನ್ನಡಿಗರಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಕ್ಷಮೆಯಾಚಿಸದಿದ್ದರೆ ‘ಥಗ್ ಲೈಫ್’ ಚಿತ್ರದ ರಿಲೀಸ್‌ಗೆ ತಡೆ ನೀಡೋದಾಗಿ ಕರವೇ ಮತ್ತು ಕನ್ನಡಪರ ಸಂಘಟನೆ ಎಚ್ಚರಿಸಿದೆ. ಇದನ್ನೂ ಓದಿ:
ಕಮಲ್ ಆಡಿರುವ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕನ್ನಡ ತಮಿಳಿನಿಂದ ಬಂದಿಲ್ಲ. ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು ಎಂದು ಕನ್ನಡಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ.