Tag: ಥೈರಾಯ್ಡ್

  • ಥೈರಾಯ್ಡ್ ಸಮಸ್ಯೆ ಅಂದ್ರೆ ಏನು? – ಸಾಮಾನ್ಯ ಲಕ್ಷಣಗಳು ಯಾವುವು?

    ಥೈರಾಯ್ಡ್ ಸಮಸ್ಯೆ ಅಂದ್ರೆ ಏನು? – ಸಾಮಾನ್ಯ ಲಕ್ಷಣಗಳು ಯಾವುವು?

    ಥೈರಾಯ್ಡ್ (Thyroid) ಸಮಸ್ಯೆಗಳು ಪ್ರಪಂಚದಾದ್ಯಂತ ಸಾಮಾನ್ಯವಾಗಿದೆ. ಇದು ಹೆಚ್ಚಿನ ಮಹಿಳೆಯರಲ್ಲಿ ಕಾಣಿಸಿಕೊಳ್ಳುತ್ತಿದೆ. ಥೈರಾಯ್ಡ್ ಇದ್ದರೆ ಕೆಲವರು ದಪ್ಪವಾಗುತ್ತಾರೆ, ಇನ್ನೂ ಕೆಲವರು ಸಣ್ಣ ಆಗುತ್ತಾ ಹೋಗುತ್ತಾರೆ. ಹಾಗಾದ್ರೆ ಈ ಥೈರಾಯ್ಡ್ ಅಂದ್ರೆ ಏನು? ಹೇಗೆ ಬರುತ್ತೆ? ಲಕ್ಷಣಗಳೇನು? ಚಿಕಿತ್ಸೆ ಹೇಗೆ ಎಂಬುದರ ಬಗ್ಗೆ ಇಲ್ಲಿ ವಿವರ ನೀಡಲಾಗಿದೆ.

    ಇಂದಿನ ಜೀವನ ಶೈಲಿ ಹಾಗೂ ಆಹಾರ ಕ್ರಮದಲ್ಲಿನ ಬದಲಾವಣೆಗಳು ಮನುಷ್ಯನಲ್ಲಿ ಕೆಲವೊಂದು ರೋಗಗಳಿಗೆ ಕಾರಣವಾಗುತ್ತದೆ. ಅಂತೆಯೇ ಮನುಷ್ಯನಲ್ಲಿ ಕಾಣಿಸಿಕೊಳ್ಳುವ ಸಮಸ್ಯೆಗಳಲ್ಲಿ ಥೈರಾಯ್ಡ್ ಕೂಡ ಒಂದಾಗಿರುತ್ತದೆ. ಇದು ಅಧಿಕ ಮಾನಸಿಕ ಒತ್ತಡ, ವ್ಯಾಯಾಮ ಇಲ್ಲದಿರುವುದು, ಅಯೋಡಿನ್ ಅಂಶ ಇಲ್ಲದಿರುವುದು ಹಾಗೂ ಪೌಷ್ಟಿಕ ಆಹಾರ ಸೇವಿಸದೇ ಇರುವುದು ಕೂಡ ಥೈರಾಯ್ಡ್ ಸಮಸ್ಯೆ ಬರಲು ಕಾರಣವಾಗುತ್ತದೆ.

    ಥೈರಾಯ್ಡ್ ಅಂದ್ರೆ ಏನು, ದೇಹದ ಯಾವ ಭಾಗದಲ್ಲಿದೆ? ಥೈರಾಯ್ಡ್ ಕತ್ತಿನ ಮುಂಭಾಗದಲ್ಲಿರುವ ಚಿಟ್ಟೆಯಾಕಾರದ ಒಂದು ಗೃಂಥಿ. ಈ ಗೃಂಥಿಯು ನಿಮ್ಮ ಶರೀರದ ಅನೇಕ ಕಾರ್ಯ ಚಟುವಟಿಕೆಗಳಿಗೆ ಅತ್ಯವಶ್ಯಕವಾದ ಥೈರಾಯ್ಡ್ ಹಾರ್ಮೋನ್‍ಗಳನ್ನು ಉತ್ಪಾದಿಸುತ್ತದೆ.

    ಥೈರಾಯಿಡ್ ಗ್ರಂಥಿಯು ಕುತ್ತಿಗೆಯಲ್ಲಿ ಶ್ವಾಸನಾಳದ ಮುಂದೆ ಗಂಟಲಿನ ಕೆಳಗೆ ಇದೆ. ಈ ಗ್ರಂಥಿಯು ಥ್‍ಐರಾಕ್ಸಿನ್ ಎಂಬ ಹಾರ್ಮೋನನ್ನು ಸ್ರವಿಸುತ್ತದೆ. ಇದು ಅಯೋಡಿನ್ ಇಂದ ಕೂಡಿದ ಅಮೈನೋ ಆಮ್ಲವಾಗಿದೆ. ಥೈರಾಕ್ಸಿನ್ ದೇಹದಲ್ಲಿ ನಡೆಯುವ ಚಯಾಪಚನೆಯ ಕ್ರಿಯೆಯ ವೇಗವನ್ನು ಹೆಚ್ಚಿಸುತ್ತದೆ ಮತ್ತು ಆಹಾರ ಉತ್ಕರ್ಷೆಯ ಪ್ರಮಾಣವನ್ನು ನಿಯಂತ್ರಿಸುತ್ತದೆ.

    ಥೈರಾಯ್ಡ್ ತೂಂದರೆಯಿಂದ ಯಾವ ಯಾವ ಕಾಯಿಲೆಗಳು ಉಂಟಾಗಬಹುದು?
    * ಗಾಯ್ಟರ್ (ಗಳಗಂಡ ರೋಗ): ಥೈರಾಯ್ಡ್ ಗೃಂಥಿಯು ದೊಡ್ಡದಾಗಿ ಬೆಳೆದರೆ ಅದನ್ನು ಗಾಯ್ಟರ್ ಎಂದು ಕರೆಯುತ್ತಾರೆ.
    * ಹೈಪೋಥೈರಾಯ್ಡಿಸಮ್: ಥೈರಾಯ್ಡ್ ಗೃಂಥಿ ಅಗತ್ಯಕ್ಕಿಂತ ಕಡಿಮೆ ಹಾರ್ಮೋನ್ ಉತ್ಪಾದನೆ ಮಾಡಿದರೆ ಉಂಟಾಗಬಹುದಾದ ಸಮಸ್ಯೆ.
    * ಹೈಪರ್‍ಥೈರಾಯ್ಡಿಸಮ್: ಥೈರಾಯ್ಡ್ ಗೃಂಥಿ ಅಗತ್ಯಕ್ಕಿಂತ ಹೆಚ್ಚು ಹಾರ್ಮೋನ್ ಉತ್ಪಾದನೆ ಮಾಡಿದರೆ ಉಂಟಾಗಬಹುದಾದ ಸಮಸ್ಯೆ.
    * ಥೈರಾಯ್ಡೈಟಿಸ್: ಥೈರಾಯ್ಡ್ ಗೃಂಥಿಯಲ್ಲಿ ಉರಿ-ಊತ ಉಂಟಾಗಿ ಅದರಲ್ಲಿರುವ ಹಾರ್ಮೋನಿನ ಸಂಗ್ರಹವು ರಕ್ತಕ್ಕೆ ಸೋರಿಕೆಯಾಗುವ ಸಾಧ್ಯತೆಗಳಿವೆ. ಈ ರೀತಿ ಆದಾಗ ರಕ್ತದಲ್ಲಿನ ಹಾರ್ಮೋನ್ ಮಟ್ಟದ ಹೆಚ್ಚಳ ಉಂಟಾಗಬಹುದು.
    * ಥೈರಾಯ್ಡ್ ಗೃಂಥಿಯ ಗೆಡ್ಡೆಗಳು: ಕೆಲವೊಮ್ಮೆ ಸಾಮಾನ್ಯ ಗೆಡ್ಡೆಗಳಾಗಿರುತ್ತವೆ. ಅಪರೂಪವಾಗಿ ಕ್ಯಾನ್ಸರ್ ಕೂಡ ಆಗಿರಬಹುದು.

    ಲಕ್ಷಣಗಳೇನು?: ಪದೇ ಪದೇ ಆಯಾಸವಾಗುವುದು, ಕೂದಲು ಉದುರುವುದು, ಅನಿಯಮಿತ ಮುಟ್ಟು ಸಮಸ್ಯೆ, ಆಗಾಗ ನಡುಕ ಉಂಟಾಗುವುದು, ಬೆವರುವಿಕೆ ಜಾಸ್ತಿ ಇರುವುದು, ಅನಿರೀಕ್ಷಿತವಾಗಿ ತೂಕ ಏರಿಕೆ ಆಗುವುದು, ಸಣ್ಣಸಣ್ಣ ವಿಷಯಕ್ಕೂ ಕೋಪ ಬರುವುದು ಇವೆಲ್ಲಾ ಥೈರಾಯ್ಡ್ ಗ್ರಂಥಿಯ ಸಾಮಾನ್ಯ ಲಕ್ಷಣಗಳು.

    ಪರೀಕ್ಷೆ ಹಾಗೂ ಚಿಕಿತ್ಸೆ ಹೇಗೆ?: ಥೈರಾಯ್ಡ್ ಗ್ರಂಥಿ, ಕುತ್ತಿಗೆಯ ಭಾಗದ ಸಿಟಿ ಸ್ಕ್ಯಾನ್ ಮೂಲಕ ಥೈರಾಯ್ಡ್ ಸಮಸ್ಯೆಗಳನ್ನು ತಿಳಿದುಕೊಳ್ಳಬಹುದು. ಥೈರಾಯ್ಡ್‍ಗೆ ಸಂಬಂಧಿಸಿದ ಸಮಸ್ಯೆಗಳಿಗೆ ಹಲವು ರೀತಿಯ ಚಿಕಿತ್ಸೆ ಮತ್ತು ಔಷಧಗಳು ಲಭ್ಯವಿವೆ. ಆದಾಗ್ಯೂ ಇದನ್ನು ಕೆಲವು ಆಯುರ್ವೇದ ಪರಿಹಾರಗಳ ಮೂಲಕ ಚಿಕಿತ್ಸೆ ಮಾಡಬಹುದು.

    ಯಾವ ಆಹಾರ ಸೇವಿಸಬೇಕು?: ಬ್ರೆಜಿಲ್ ನಟ್ಸ್ ಸೆಲೆನಿಯಮ್ ಮತ್ತು ಸತುವುಗಳ ಅತ್ಯುತ್ತಮ ಮೂಲವಾಗಿದ್ದು ಥೈರಾಯ್ಡ್ ಗ್ರಂಥಿಯ ಉತ್ತಮ ಕಾರ್ಯನಿರ್ವಹಣೆಗೆ ಸಹಾಯ ಮಾಡುತ್ತದೆ. ಹೆಚ್ಚುವರಿಯಾಗಿ, ಚಿಯಾ ಮತ್ತು ಕುಂಬಳಕಾಯಿ ಬೀಜಗಳು ಸತುವಿನ ಸಮೃದ್ಧ ಮೂಲಗಳಾಗಿವೆ. ಇವುಗಳಿಂದ ರೋಗಿಯು ಅತಿಯಾಗಿ ಸೇವನೆ ಮಾಡುವುದನ್ನು ಕಡಿಮೆ ಮಾಡಬಹುದು. ಇನ್ನು ಪ್ರೋಟೀನ್‍ನ ಈ ಸಮೃದ್ಧ ಮೂಲಗಳು ನಿಮ್ಮ ಚಯಾಪಚಯವನ್ನು ಸುಧಾರಿಸುತ್ತದೆ. ಹೆಚ್ಚು ಊಟ ತಿನ್ನಬೇಕು ಎನ್ನಿಸಲ್ಲ. ಇದರಿಂದ ನಿಮ್ಮ ತೂಕವನ್ನು ನಿಯಂತ್ರಿಸಬಹುದು.

    ಥೈರಾಯ್ಡ್ ರೋಗಿಗಳು ಮೊಟ್ಟೆಯನ್ನು ಸೇವಿಸಬೇಕು. ಇದು ಅವರ ದೇಹವನ್ನು ಸತು, ಸೆಲೆನಿಯಮ್ ಮತ್ತು ಪ್ರೋಟೀನ್‍ಗಳಿಂದ ಸಮೃದ್ಧಗೊಳಿಸುತ್ತದೆ. ಅಲ್ಲದೆ ತೂಕ ನಷ್ಟಕ್ಕೆ ಮತ್ತು ಮೂಳೆಗಳು ಬಲವಾಗಲು ಸಹಕಾರಿಯಾಗುತ್ತದೆ. ಇಷ್ಟು ಮಾತ್ರವಲ್ಲದೆ ಟೊಮೆಟೋ ಮತ್ತು ಬೆಲ್ ಪೆಪರ್‍ಗಳಂತಹ ತರಕಾರಿಗಳನ್ನು ಸೇವಿಸುವುದರಿಂದ ಥೈರಾಯ್ಡ್ ರೋಗಿಗಳಿಗೆ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಏಕೆಂದರೆ ಅವುಗಳು ವಿಟಮಿನ್ ಸಿ, ಫೈಬರ್ ಮತ್ತು ಆಂಟಿ ಆಕ್ಸಿಡೆಂಟ್‍ಗಳಲ್ಲಿ ಸಮೃದ್ಧವಾಗಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಥೈರಾಯ್ಡ್ ರೋಗಿಗಳು ಮಲಗುವ ಮುನ್ನ ಈ ಆಹಾರ ಸೇವಿಸಿ

    ಥೈರಾಯ್ಡ್ ರೋಗಿಗಳು ಮಲಗುವ ಮುನ್ನ ಈ ಆಹಾರ ಸೇವಿಸಿ

    ತ್ತೀಚಿನ ದಿನಗಳಲ್ಲಿ ಯುವ ಜನರು ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆಧುನಿಕ ಜೀವನಶೈಲಿ ಮತ್ತು ಕೆಲಸದ ಒತ್ತಡದಿಂದಾಗಿ ಅನೇಕರು ಥೈರಾಯ್ಡ್ (Thyroid) ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಆದರೆ ಆಹಾರ ಶೈಲಿಯಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡರೆ ಥೈರಾಯ್ಡ್ ಕಡಿಮೆ ಮಾಡಿಕೊಳ್ಳಬಹುದು. ರಾತ್ರಿ ಮಲಗುವ ವೇಳೆ ಈ ಆಹಾರಗಳನ್ನು ಸೇವಿಸುವುದರಿಂದ ಒಳ್ಳೆಯ ನಿದ್ದೆಯೂ ಬರುತ್ತದೆ ಜೊತೆಗೆ ಥೈರಾಯ್ಡ್ ಸಮಸ್ಯೆಯು ಸ್ವಲ್ಪ ಮಟ್ಟಿಗೆ ದೂರವಾಗುತ್ತದೆ.

    4-5 ಗೋಡಂಬಿ ಸೇವಿಸಿ: ಗೋಡಂಬಿಯು (Cashews) ಖನಿಜ ಸೆಲೆನಿಯಮ್ ಹೊಂದಿರುತ್ತದೆ. ಇದು ಥೈರಾಯ್ಡ್  ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಜೊತೆಗೆ ಆಕ್ಸಿಡೇಟಿವ್ ಒತ್ತಡದಿಂದ ಥೈರಾಯ್ಡ್ ಅಂಗಾಂಶವನ್ನು ರಕ್ಷಿಸುತ್ತದೆ. ಇದರಿಂದಾಗಿ ಪ್ರತಿನಿತ್ಯ ನೆನೆಸಿದ 4-5 ಗೋಡಂಬಿಗಳನ್ನು ಸೇವಿಸಿ.

    ತೆಂಗಿನ ಕಾಯಿ: ಇದರಲ್ಲಿ ಹೆಚ್ಚಿನ ಮಟ್ಟದ ಕೊಬ್ಬಿನಾಮ್ಲಗಳನ್ನು ಹೊಂದಿದೆ. ತೆಂಗಿನ ಕಾಯಿಯು ಚಯಾಪಚಯ ಮತ್ತು ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ. ಜೊತೆಗೆ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಸುಧಾರಿತ ಥೈರಾಯ್ಡ್ ಆರೋಗ್ಯಕ್ಕೆ ಕೊಡುಗೆ ನೀಡುತ್ತದೆ. ಇದರಿಂದಾಗಿ ಮಲಗುವ ಮುನ್ನ 4 – 5 ತೆಂಗಿನ ಚೂರುಗಳನ್ನು ತಿನ್ನುವುದರಿಂದ ಥೈರಾಯ್ಡ್‌ ನಿಯಂತ್ರಣಕ್ಕೆ ಬರುತ್ತದೆ.

    ಚೀಯಾ ಬೀಜಗಳು: 1 ಚಮಚದಷ್ಟು ನೆನಸಿದ ಚೀಯಾ ಬೀಜಗಳನ್ನು ಸೇವಿಸುವುದರಿಂದ ಥೈರಾಯ್ಡ್ ನಿಯಂತ್ರಣದಲ್ಲಿರುತ್ತದೆ. ಇದರಲ್ಲಿ ಒಮೆಗಾ – 3 ಕೊಬ್ಬಿನಾಮ್ಲಗಳು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಇದರಿಂದಾಗಿ ಥೈರಾಯ್ಡ್ ಗ್ರಂಥಿಯಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನೂ ಓದಿ: ಖಿನ್ನತೆಯಿಂದ ಬಳಲುತ್ತಿದ್ದೀರಾ ಹಾಗಾದ್ರೆ ಈ ಆಹಾರ ಸೇವಿಸಿ

    ಕುಂಬಳಕಾಯಿ ಬೀಜಗಳು: ಹುರಿದ ಕುಂಬಳ ಕಾಯಿ ಬೀಜಗಳು ಝಿಂಕ್‍ನ ಸಮೃದ್ಧ ಮೂಲವಾಗಿದೆ. ಇದು ಥೈರಾಯ್ಡ್ ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ. ಕುಂಬಳಕಾಯಿ ಬೀಜಗಳು ಟ್ರಿಪ್ಟೋಫಾನ್‍ನ ನೈಸರ್ಗಿಕ ಮೂಲವಾಗಿದೆ. ಇದರಲ್ಲಿ ನಿದ್ರೆಯನ್ನು ಉತ್ತೇಜಿಸುವ ಅಮೈನೋ ಆಮ್ಲವಿದೆ. ಸರಿಯಾಗಿ ನಿದ್ದೆ ಮಾಡುವುದರಿಂದ ಥೈರಾಯ್ಡ್ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಇದನ್ನೂ ಓದಿ: ಬೇಸಿಗೆಯಲ್ಲಿ ಕಬ್ಬಿನ ಹಾಲನ್ನು ಕುಡಿಯೋದ್ರಿಂದ ಅದ್ಭುತ ಪ್ರಯೋಜನ