Tag: ದಂತೇವಾಡ

  • ಛತ್ತೀಸ್‌ಗಢದ ದಂತೇವಾಡ-ಬಿಜಾಪುರ ಗಡಿಯಲ್ಲಿ ಎನ್‌ಕೌಂಟರ್: ಮೂವರು ನಕ್ಸಲರು ಹತ್ಯೆ

    ಛತ್ತೀಸ್‌ಗಢದ ದಂತೇವಾಡ-ಬಿಜಾಪುರ ಗಡಿಯಲ್ಲಿ ಎನ್‌ಕೌಂಟರ್: ಮೂವರು ನಕ್ಸಲರು ಹತ್ಯೆ

    ಜಗದಲ್‌ಪುರ: ಛತ್ತೀಸ್‌ಗಢದ (Chhattisgarh) ದಂತೇವಾಡ (Dantewada) ಮತ್ತು ಬಿಜಾಪುರ (Bijapura) ಜಿಲ್ಲೆಗಳ ಗಡಿಭಾಗದ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ತೀವ್ರ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ.

    ಮಂಗಳವಾರ ಬೆಳಗ್ಗೆ ನಡೆದ ಈ ಎನ್‌ಕೌಂಟರ್, ನಕ್ಸಲೀಯರ ವಿರುದ್ಧ ಭದ್ರತಾ ಪಡೆಗಳು ನಡೆಸುತ್ತಿರುವ ಶೋಧ ಕಾರ್ಯಾಚರಣೆಯ ಭಾಗವಾಗಿ ಸಂಭವಿಸಿದೆ ಎಂದು ರಾಜ್ಯ ಪೊಲೀಸ್ ಇಲಾಖೆ ತಿಳಿಸಿದೆ. ಗುಪ್ತಚರ ಮಾಹಿತಿಗಳ ಪ್ರಕಾರ, ಈ ಪ್ರದೇಶದಲ್ಲಿ ನಕ್ಸಲರು ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ನಿಖರ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ ಛತ್ತೀಸ್‌ಗಢ ರಾಜ್ಯ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿಯ ಜಂಟಿ ತಂಡ ಸೋಮವಾರ ರಾತ್ರಿಯಿಂದಲೇ ಶೋಧ ಕಾರ್ಯಾಚರಣೆಗೆ ತೆರಳಿತ್ತು. ಇದನ್ನೂ ಓದಿ: ಮೇಕೆದಾಟು ಯೋಜನೆಗೆ ಡಿಕೆಶಿಯವರು ಸ್ಟಾಲಿನ್‌ರನ್ನು ಒಪ್ಪಿಸಲಿ: ನಿಖಿಲ್ ಸವಾಲ್

    ಮಂಗಳವಾರ ಈ ತಂಡವು ಕಾಡಿನ ಒಳಗೆ ಮುನ್ನಡೆಯುತ್ತಿದ್ದಾಗ, ಅಡಗಿದ್ದ ನಕ್ಸಲರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದರು. ಈ ದಾಳಿಗೆ ತಕ್ಷಣವೇ ಪ್ರತಿಕ್ರಿಯಿಸಿದ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದವು. ಸುಮಾರು ಒಂದು ಗಂಟೆಗೂ ಅಧಿಕ ಕಾಲ ನಡೆದ ಈ ಗುಂಡಿನ ಕಾಳಗದಲ್ಲಿ ಐವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಮೂವರು ನಕ್ಸಲರ ಮೃತದೇಹ ಸಿಕ್ಕಿದೆ. ಇದನ್ನೂ ಓದಿ: ರೀಲ್ಸ್ ತಂದ ಸಂಕಷ್ಟ: ವಿಚಾರಣೆಗೆ ಜೊತೆಯಾಗಿ ಹಾಜರಾದ ವಿನಯ್, ರಜತ್

    ಮೃತರ ಗುರುತು ಇನ್ನೂ ಖಚಿತವಾಗಿಲ್ಲವಾದರೂ, ಇವರು ಸ್ಥಳೀಯ ಮಾವೋವಾದಿ ಗುಂಪಿನ ಸದಸ್ಯರಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಎನ್‌ಕೌಂಟರ್ ಸ್ಥಳದಿಂದ ಒಂದು ಎಕೆ-47 ರೈಫಲ್, ಎರಡು ಸ್ಥಳೀಯವಾಗಿ ತಯಾರಿಸಿದ ಬಂದೂಕುಗಳು, ಸ್ಫೋಟಕ ವಸ್ತುಗಳು ಮತ್ತು ಗುಂಡುಗಳನ್ನು ಒಳಗೊಂಡ ಶಸ್ತ್ರಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ, ನಕ್ಸಲರ ಬಳಕೆಯ ದಿನಚರಿ ವಸ್ತುಗಳು, ಕೆಲವು ದಾಖಲೆಗಳು ಮತ್ತು ಸಂಪರ್ಕ ಸಾಧನಗಳು ಸಹ ದೊರೆತಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಸಂವಿಧಾನ ಬದಲಾವಣೆ ಮಾಡ್ತೀನಿ ಅಂದರೆ ಜನರೇ ಡಿಕೆಶಿ ನೆಟ್ಟು-ಬೋಲ್ಟ್‌ ಟೈಟ್ ಮಾಡ್ತಾರೆ: ನಿಖಿಲ್ ಕುಮಾರಸ್ವಾಮಿ

    ಈ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳಿಗೆ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ದೃಢಪಡಿಸಲಾಗಿದೆ. ಆದಾಗ್ಯೂ, ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ತಪಾಸಣೆ ಮತ್ತು ಪರಿಶೀಲನೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಒಂದೇ ದಿನ ಎರಡು ಕಡೆ 80 ಕ್ಕೂ ಹೆಚ್ಚು ಹಂದಿಗಳ ಕಳ್ಳತನ – ಕಳ್ಳರ ಕಾಟಕ್ಕೆ ಹೈರಾಣಾದ ಸಾಕಾಣಿಕೆದಾರರು

    ಈ ಘಟನೆ ಕುರಿತು ಪ್ರತಿಕ್ರಿಯಿಸಿದ ದಂತೇವಾಡ ಜಿಲ್ಲೆಯ ಪೊಲೀಸ್ ಅಧೀಕ್ಷಕರು, ನಕ್ಸಲೀಯರ ವಿರುದ್ಧ ನಮ್ಮ ಕಾರ್ಯಾಚರಣೆಗಳು ಯಶಸ್ವಿಯಾಗಿ ಮುಂದುವರೆದಿವೆ. ಈ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತರಾಗಿದ್ದು, ಪ್ರದೇಶದಲ್ಲಿ ಶಾಂತಿ ಸ್ಥಾಪನೆಗೆ ನಾವು ಬದ್ಧರಾಗಿದ್ದೇವೆ. ಶೋಧ ಕಾರ್ಯ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ಶೀಘ್ರದಲ್ಲಿ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಣ್ಣ ದೂರು ಕೊಡಬೇಕಲ್ಲವಾ? ನೀವು ಎಷ್ಟು ಬಾರಿ ತಿರುಗಿಸಿ ಮುರುಗಿಸಿ ಕೇಳಿದ್ರು ಅಷ್ಟೇ: ಪರಮೇಶ್ವರ್

    ಮಾರ್ಚ್ 20 ರಂದು ಸೈನಿಕರು ಛತ್ತೀಸ್‌ಗಢದ ಬಿಜಾಪುರ ಮತ್ತು ಕಾಂಕೇರ್ ಜಿಲ್ಲೆಗಳಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಪ್ರತ್ಯೇಕ ಎನ್‌ಕೌಂಟರ್‌ಗಳು ನಡೆದವು. ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 26 ನಕ್ಸಲರು ಹತರಾದರು ಮತ್ತು ಬಿಜಾಪುರ ಜಿಲ್ಲಾ ಮೀಸಲು ಪಡೆಯ (ಡಿಆರ್‌ಜಿ) ಒಬ್ಬ ಜವಾನ ಹುತಾತ್ಮರಾದರು. ಇದೇ ಸಮಯದಲ್ಲಿ, ಕಾಂಕೇರ್‌ನಲ್ಲಿ ನಾಲ್ವರು ನಕ್ಸಲರು ಕೊಲ್ಲಲ್ಪಟ್ಟಿದ್ದಾರೆ. ಎಲ್ಲಾ 30 ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಬ್ಲಡ್‌ ಕ್ಯಾನ್ಸರ್‌ನಿಂದ ತಮಿಳು ನಟ ಶಿಹಾನ್‌ ಹುಸೈನಿ ನಿಧನ

  • ಕಲಿಯುಗದ ಶ್ರವಣಕುಮಾರ- ಸ್ಕೂಟರ್​ನಲ್ಲಿ ತಾಯಿಗೆ ತೀರ್ಥಯಾತ್ರೆ

    ಕಲಿಯುಗದ ಶ್ರವಣಕುಮಾರ- ಸ್ಕೂಟರ್​ನಲ್ಲಿ ತಾಯಿಗೆ ತೀರ್ಥಯಾತ್ರೆ

    ಬೆಂಗಳೂರು: ಪುತ್ರನೋರ್ವ ತನ್ನ ತಾಯಿಯನ್ನು ಹಳೆ ಸ್ಕೂಟರ್ ನಲ್ಲಿ ಕರೆದುಕೊಂಡು ತೀರ್ಥಯಾತ್ರೆಯನ್ನು ಮಾಡಿಸುತ್ತಿದ್ದಾರೆ. ಮೈಸೂರು ನಿವಾಸಿಯಾಗಿರುವ ಕೃಷ್ಣ ಕುಮಾರ್ ತಮ್ಮ ತಾಯಿ ರತ್ನಮ್ಮ ಜೊತೆ ತೀರ್ಥಯಾತ್ರೆ ಮಾಡುತ್ತಾ ಇದೀಗ ಛತ್ತೀಸ್ ಗಢದ ದಂತೇವಾಡ ತಲುಪಿದ್ದಾರೆ.

    ಕೃಷ್ಣ ಕುಮಾರ್ ಅವರ ತಂದೆ ನಾಲ್ಕು ವರ್ಷಗಳ ಹಿಂದೆ ನಿಧನರಾಗಿದ್ದಾರೆ. ಒಂದು ದಿನ ರತ್ಮಮ್ಮನವರು, ನಿಮ್ಮ ತಂದೆ ಕೊನೆಗೂ ನನಗೆ ವೆಲ್ಲೂರು ದೇವಸ್ಥಾನ ತೋರಿಸಲಿಲ್ಲ. ನನ್ನನ್ನು ಒಂಟಿಯಾಗಿ ಬಿಟ್ಟು ಹೋಗಿಬಿಟ್ಟರು ಎಂದು ನೋವು ತೋಡಿಕೊಂಡಿದ್ದರು. ಅಂದು ಕೃಷ್ಣ ಕುಮಾರ್, ಕೇವಲ ವೆಲ್ಲೂರು ಏಕೆ, ದೇಶದ ನಾಲ್ಕು ದಿಕ್ಕಿನಲ್ಲಿರುವ ಕ್ಷೇತ್ರಗಳ ದರ್ಶನ ಮಾಡಿಸುತ್ತೇನೆ ಎಂದು ಮಾತು ಕೊಟ್ಟಿದ್ದರು.

    ತಾಯಿಗೆ ನೀಡಿದ ಮಾತಿನಂತೆ ತಂದೆಯ ನಲವತ್ತು ವರ್ಷದ ಹಳೆಯ ಸ್ಕೂಟರ್ ಮೇಲೆ ಅಮ್ಮನ ಜೊತೆ ಕೃಷ್ಣ ಕುಮಾರ್ ತೀರ್ಥಯಾತ್ರೆ ಆರಂಭಿಸಿದ್ದಾರೆ. ತಮಿಳುನಾಡು, ಆಂಧ್ರಪ್ರದೇಶ, ಮಾಹಾರಾಷ್ಟ್ರ, ಗೋವಾ, ಪುದುಚೇರಿ ಬಳಿಕ ಇದೀಗ ದಂತೇವಾಡದ ತಲುಪಿದ್ದು, ದಂತೇಶ್ವರಿ ದೇವರ ದರ್ಶನ ಪಡೆಯಲಿದ್ದಾರೆ.

    ತಂದೆ-ತಾಯಿ ಸೇವೆಯಲ್ಲಿ ತೊಡಗಿಕೊಂಡಿರುವ ಕೃಷ್ಣಕುಮಾರ್ ಗೆ ಮದುವೆ ಆಗಿಲ್ಲ. ತಂದೆಯ ನಿಧನದ ಬಳಿಕ ತಾಯಿಯೇ ಕೃಷ್ಣ ಕುಮಾರ್ ಅವರ ದೊಡ್ಡ ಆಸ್ತಿಯಾಗಿದ್ದಾರೆ. ತೀರ್ಥಯಾತ್ರೆಯನ್ನ ಬಸ್ ಅಥವಾ ಬೇರೆ ವಾಹನದ ಮೂಲಕ ಕೈಗೊಳ್ಳಬಹುದಿತ್ತು ಎಂದು ಕೇಳಿದ್ರೆ, ಸ್ಕೂಟರ್ ನಮ್ಮ ಜೊತೆಯಲ್ಲಿದ್ದರೆ ತಂದೆಯೊಂದಿಗೆ ಪ್ರಯಾಣ ಮಾಡುತ್ತಿದ್ದೇವೆ ಅನ್ನಿಸುತ್ತದೆ ಎಂದು ಕೃಷ್ಣ ಕುಮಾರ್ ಹೇಳುತ್ತಾರೆ.

    ತಾಯಿಯ ಸೇವೆ ಮಾಡುವುದರಲ್ಲಿಯೇ ನನಗೆ ಖುಷಿ ಹಾಗೂ ತೃಪ್ತಿ ಸಿಗುತ್ತದೆ. ಸ್ಕೂಟರ್ ಜೊತೆ ತಂದೆಯ ನೆನಪುಗಳು ಬೆಸೆದುಕೊಂಡಿವೆ. ಒಂದು ಸ್ಟೆಪ್ನಿ ಜೊತೆ ಪ್ರಯಾಣ ಮಾಡುತ್ತಿದ್ದು, ಇದೂವರೆಗೂ ಎರಡು ಬಾರಿ ಮಾತ್ರ ಮಾರ್ಗ ಮಧ್ಯೆ ಸ್ಕೂಟರ್ ಪಂಚರ್ ಆಗಿದೆ. ಹೋದ ಸ್ಥಳಗಳಲ್ಲಿ ಒಳ್ಳೆಯ ಜನರು ಸಿಗುತ್ತಿದ್ದು, ನಮಗೆ ಸಹಾಯ ಮಾಡುತ್ತಿದ್ದಾರೆ ಎಂದು ಕೃಷ್ಣ ಕುಮಾರ್ ತಿಳಿಸಿದರು.

    ಮಗ ನನಗಾಗಿ ಮದುವೆ ಮಾಡಿಕೊಳ್ಳಲಿಲ್ಲ. ಕೃಷ್ಣ ಕುಮಾರನನೇ ನನಗೆ ಮಗ ಮತ್ತು ಮಗಳಾಗಿ ನೋಡಿಕೊಳ್ಳುತ್ತಿದ್ದಾನೆ. ಪ್ರಯಾಣದಲ್ಲಿ ಇದೂವರೆಗೂ ಯಾವುದೇ ತೊಂದರೆ ಆಗಿಲ್ಲ. ಇಂತಹ ಮಗನನ್ನು ಎಲ್ಲರಿಗೂ ದೇವರು ಕರುಣಿಸಲಿ ಎಂದು ತಾಯಿ ರತ್ನಮ್ಮ ಪುತ್ರನ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದರು.

  • ನಕ್ಸಲ್ ದಾಳಿ: ಯೋಧರ ಬಲಿದಾನ ವ್ಯರ್ಥವಾಗಲು ಬಿಡಲ್ಲ-ಮೋದಿ

    ನಕ್ಸಲ್ ದಾಳಿ: ಯೋಧರ ಬಲಿದಾನ ವ್ಯರ್ಥವಾಗಲು ಬಿಡಲ್ಲ-ಮೋದಿ

    ರಾಯ್ಪುರ: ಛತ್ತಿಸ್‍ಗಢದ ದಂತೇವಾಡಾದ ಬಳಿ ಬಿಜೆಪಿ ನಾಯಕರು ತೆರೆಳುತ್ತಿದ್ದ ಬೆಂಗಾವಲು ವಾಹನದ ಮೇಲೆ ನಕ್ಸಲರು ಸುಧಾರಿತ ಸ್ಫೋಟಕ ಬಳಸಿ ಮಾಡಿದ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದಾರೆ.

    ಘಟನೆಯ ಕುರಿತು ಟ್ವೀಟ್ ಮಾಡಿದ ಪ್ರಧಾನಿ, ಛತ್ತೀಸ್‍ಗಢದಲ್ಲಿ ಮಾವೋವಾದಿಗಳು ನಡೆಸಿದ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ವೀರ ಮರಣವಪ್ಪಿದ ಸೈನಿಕರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ. ವೀರ ಯೋಧರ ಬಲಿದಾನವನ್ನು ಯಾವುದೇ ಕಾರಣಕ್ಕೂ ವ್ಯರ್ಥವಾಗಲು ಬಿಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ದಾಳಿಯ ಕುರಿತು ಪ್ರತಿಕ್ರಿಯಿಸಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆಯ ಡಿಐಜಿ ಪಿ.ಸುಂದರ್ ರಾಜ್, ದಂತೇವಾಡ ಜಿಲ್ಲೆಯ ಕುವಾಂಕೋಡ ಇಲಾಖೆಯಲ್ಲಿ ದಾಳಿ ನಡೆದಿದೆ. ನಕ್ಸಲರು ದಾಳಿಯಲ್ಲಿ ಶಾಸಕರ ವಾಹನದೊಂದಿಗೆ ಭದ್ರತಾ ಸಿಬ್ಬಂದಿಯ ವಾಹನವನ್ನು ಗುರಿಯಾಗಿಸಿಕೊಂಡಿದ್ದರು. ಈ ದಾಳಿಯಲ್ಲಿ ಚಾಲಕ ಮತ್ತು ಮೂವರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ತಿಳಿಸಿದ್ದಾರೆ.

    ದಾಳಿಯ ಬೆನ್ನಲ್ಲೆ ದಂತೇವಾಡ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯ ಸಿಆರ್ ಪಿಎಫ್ ಮತ್ತು ಪೊಲೀಸ್ ತಂಡಗಳನ್ನು ನೇಮಿಸಲಾಗಿದೆ. ದಾಳಿ ನಡೆದ ಸುತ್ತಲಿನ ಪರಿಸರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

    ಏನಿದು ಘಟನೆ?:
    ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಭೀಮಾ ಮಂಡಾವಿ ಪ್ರಚಾರ ಕಾರ್ಯವನ್ನು ನಡೆಸಲು ತೆರಳುತ್ತಿದ್ದ ವೇಳೆ ನಕ್ಸಲರು ದಾಳಿ ನಡೆಸಿದ್ದರು. ಸ್ಫೋಟದ ತೀವ್ರತೆಗೆ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಥಳದಲ್ಲೇ ಶಾಸಕ ಸೇರಿದಂತೆ ಐವರು ಮೃತಪಟ್ಟಿದ್ದರು.

    ನಕ್ಸಲರ ದಾಳಿಯ ಕುರಿತು ಮಾಹಿತಿ ಲಭಿಸುತ್ತಿದಂತೆ ಸಿಆರ್ ಪಿಎಫ್ ತಂಡ ಸ್ಥಳಕ್ಕೆ ಭೇಟಿ ನೀಡಿದೆ. ಛತ್ತೀಸ್‍ಗಢ ಸಿಎಂ ಭೂಪೇಶ್ ಬಾಗೇಲ್ ಕಠಿಣ ಕ್ರಮಕೈಗೊಳ್ಳುವಂತೆ ಡಿಐಜಿಗೆ ಸೂಚನೆ ನೀಡಿದ್ದಾರೆ. ದಾಳಿ ನಡೆದ ಪ್ರದೇಶದಲ್ಲಿ ಗುರುವಾರ ಚುನಾವಣೆ ನಡೆಯಲಿದೆ. ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 80 ಸಾವಿರ ರಕ್ಷಣಾ ಸಿಬ್ಬಂದಿ, ಡ್ರೋಣ್ ಕ್ಯಾಮೆರಾಗಳನ್ನು ಸರ್ಕಾರ ನಿಯೋಜನೆ ಮಾಡಿದೆ.