Tag: ದಂತ ವೈದ್ಯಕೀಯ

  • ರಾಜ್ಯಾದ್ಯಂತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪುನರಾರಂಭಕ್ಕೆ ಗ್ರೀನ್ ಸಿಗ್ನಲ್

    ರಾಜ್ಯಾದ್ಯಂತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪುನರಾರಂಭಕ್ಕೆ ಗ್ರೀನ್ ಸಿಗ್ನಲ್

    – ಮುಖ್ಯಮಂತ್ರಿಗಳಿಂದ 5 ಲಕ್ಷ ಲಸಿಕೆಗೆ ಬೇಡಿಕೆ

    ಬೆಂಗಳೂರು: ರಾಜ್ಯಾದ್ಯಂತ ವೈದ್ಯಕೀಯ, ಆಯುಷ್, ದಂತ ವೈದ್ಯಕೀಯ ಹಾಗೂ ಪ್ಯಾರಾ ಮೆಡಿಕಲ್ ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ರಾಜ್ಯಾದ್ಯಂತ ವೈದ್ಯಕೀಯ, ಆಯುಷ್, ದಂತ ವೈದ್ಯಕೀಯ ಹಾಗೂ ಪ್ಯಾರಾ ಮೆಡಿಕಲ್ ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದ್ದು, ಕೊರೊನಾ ಲಸಿಕೆ ಪಡೆದಿರುವ ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಮಾತ್ರ ಕಾಲೇಜು ಹಾಜರಾತಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

    ಕೋವಿಡ್ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳಲ್ಲಿ ತರಬೇತಿ:
    ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ಇತರೆ ಸಿಬ್ಬಂದಿಗೆ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ನಿರ್ವಹಣೆ ಸಂಬಂಧ ವೈದ್ಯರಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 18 ವರ್ಷ ಮೇಲಿನವರೆಲ್ಲರಿಗೂ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಇದಕ್ಕಿಂತ ಕೆಳ ವಯಸ್ಸಿನ ಮಕ್ಕಳಿಗೆ ಸೋಂಕು ತಗುಲಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ಮಧ್ಯಮ, ಹಿರಿಯ ವಯಸ್ಸಿನವರಿಗೆ ನೀಡುವ ಚಿಕಿತ್ಸೆಯನ್ನು ಮಕ್ಕಳಿಗೆ ನೀಡಲು ಸಾಧ್ಯವಿಲ್ಲ. ಈ ವಯೋಮಾನದವರಿಗೆ ಸೋಂಕು ಬಂದರೆ ಮಕ್ಕಳ ತಜ್ಞರ ಬಳಿಯೇ ಹೋಗಬೇಕೆಂದು ಸೂಚಿಸಲಾಗಿದೆ. ಇದಕ್ಕೆ ಪೂರಕವಾಗಿ ವೈದ್ಯರಿಗೆ ತರಬೇತಿ ನೀಡಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವೈದ್ಯರಿಗೆ ತರಬೇತಿ ನೀಡಲಾಗುವುದು ಎಂದರು.

    ತರಬೇತಿಯನ್ನು ವಿಷಯ ತಜ್ಞರು ನೀಡುತ್ತಿದ್ದು, ಇದನ್ನು ದಾಖಲೆಯಾಗಿಸಿದರೆ ಅನುಕೂಲವಾಗುತ್ತದೆ. ಆದ್ದರಿಂದ ಇಲ್ಲಿ ನೀಡುವ ತರಬೇತಿಯನ್ನು ವೀಡಿಯೋ ರೆಕಾರ್ಡ್ ಮಾಡಿಸಿ ದಾಖಲಿಸಬೇಕು. ಇತರೆ ವೈದ್ಯರಿಗೂ ಈ ವಿಷಯ ತಿಳಿಸಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಉಮಾಪತಿಗೆ ಬ್ಲ್ಯಾಕ್‍ಮೇಲ್, ದರ್ಶನ್ ಹೊಡೆದಿದ್ದು ನಿಜ: ಸಂದೇಶ್ ಆಡಿಯೋ ಬಾಂಬ್

    ಡಾ.ದೇವಿಶೆಟ್ಟಿ ಸಮಿತಿ ಮೂರನೇ ಅಲೆ ಸಿದ್ಧತೆಗೆ ವರದಿ ನೀಡಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ವೈರಾಣು ರೂಪಾಂತರಗೊಳ್ಳುತ್ತಿದ್ದು, ಮುಂದುವರಿದ ದೇಶಗಳು ಕೂಡ ಎಡವಿದೆ. ಮೊದಲ ಅಲೆಯಲ್ಲಿ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಪರಿಣಾಮಕಾರಿಯಾಗಿ ನಿಯಂತ್ರಣ ಮಾಡಿದ್ದೇವೆ. ಎರಡನೇ ಅಲೆಗೆ ಮುನ್ನ ಮೂಲಸೌಕರ್ಯ ಹೆಚ್ಚಿಸಲಾಗಿದೆ. 4 ಸಾವಿರ ವೈದ್ಯರನ್ನು ನೇಮಿಸಲಾಗಿದೆ ಎಂದು ವಿವರಿಸಿದರು.

    ಕೇರಳ, ಮಹಾರಾಷ್ಟ್ರ ಗಡಿ ಹಂಚಿಕೊಳ್ಳುವುದರಿಂದ ಕೋವಿಡ್ ಬಗ್ಗೆ ಎಚ್ಚರವಾಗಿರಬೇಕು. ಸೋಂಕು ಇನ್ನೂ ಇರುವುದರಿಂದ ಸುರಕ್ಷತಾ ಕ್ರಮ ವಹಿಸಬೇಕು. ಬೆಂಗಳೂರು ನಗರ ಜಿಲ್ಲೆ ಕೋವಿಡ್ ಲಸಿಕಾಕರಣದಲ್ಲಿ ಮುಂಚೂಣಿಯಲ್ಲಿದೆ. ಇದಕ್ಕಾಗಿ ಎಲ್ಲ ಸಿಬ್ಬಂದಿಗೆ ಧನ್ಯವಾದ ಎಂದರು.

    ಮಕ್ಕಳಿಗೆ ಚಿಕಿತ್ಸೆ:
    ಪ್ರತಿ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಆರೈಕೆಗಾಗಿ ವಿಶೇಷ ವಿಭಾಗ ಆರಂಭಿಸಲಾಗುತ್ತಿದೆ. ಅದಕ್ಕೆ ಬೇಕಾದ ಮಾನವ ಸಂಪನ್ಮೂಲವನ್ನು ಒದಗಿಸಲಾಗಿದೆ. ಹಲವು ದೇಶಗಳಲ್ಲಿ ಮೂರನೇ ಅಲೆ ಬಂದಿದೆ. ಮೈಮರೆತರೆ ಮೂರನೇ ಅಲೆ ನಾವೇ ಉಂಟುಮಾಡಿದಂತಾಗುತ್ತದೆ. ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಿದರೆ ಸೋಂಕು ಹರಡುವುದನ್ನು ತಪ್ಪಿಸಬಹುದು. ಕನಿಷ್ಠ ಶೇ.70 ಜನಸಂಖ್ಯೆಗೆ ಲಸಿಕೆ ನೀಡುವವರೆಗೂ ಎಚ್ಚರ ಅಗತ್ಯ ಎಂದರು.

    ಪ್ರಧಾನಿಗಳು, ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದು, ನಮ್ಮ ಮುಖ್ಯಮಂತ್ರಿಗಳು ದಿನಕ್ಕೆ 5 ಲಕ್ಷ ಲಸಿಕೆಗೆ ಬೇಡಿಕೆ ಇಟ್ಟಿದ್ದಾರೆ. ಒಂದು ತಿಂಗಳಲ್ಲಿ ಒಂದೂವರೆ ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಇದೆ. ಈಗಾಗಲೇ 2.40 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಿದ್ದೇವೆ ಎಂದು ಸಿಎಂ ಮನವಿ ಮಾಡಿದ್ದಾರೆ. ಈ ತಿಂಗಳಲ್ಲೇ ಹೆಚ್ಚು ಲಸಿಕೆ ಸಿಗುವ ನಿರೀಕ್ಷೆ ಇದೆ ಎಂದರು.

    ಹೆಚ್ಚು ಎಚ್ಚರಿಕೆಯಿಂದಿರಬೇಕೆಂದು ಪ್ರಧಾನಿ ಕಿವಿಮಾತು ಹೇಳಿದ್ದಾರೆ. ಲಸಿಕೆ ಹೆಚ್ಚು ನೀಡಲು ಹಾಗೂ ಕಂಟೇನ್ ಮೆಂಟ್ ನಿಯಮ ಪಾಲಿಸಲು ಸೂಚಿಸಿದ್ದಾರೆ. ಈಗಾಗಲೇ ಮೂಲಸೌಕರ್ಯ ಹೆಚ್ಚಳಕ್ಕೆ 23 ಸಾವಿರ ಕೋಟಿ ರೂ. ಅನ್ನು ಕೇಂದ್ರ ನೀಡಿದೆ. ಇದನ್ನು ಗ್ರಾಮೀಣ ಆರೋಗ್ಯ ಮೂಲಸೌಕರ್ಯ ಹೆಚ್ಚಿಸಲು ಬಳಸಲು ಸಲಹೆ ನೀಡಲಾಗಿದೆ ಎಂದರು.

  • ಇಂದು ದೇಶದಾದ್ಯಂತ ನೀಟ್ ಪರೀಕ್ಷೆ

    ಇಂದು ದೇಶದಾದ್ಯಂತ ನೀಟ್ ಪರೀಕ್ಷೆ

    ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟುಗಳ ಹಂಚಿಕೆಗೆ ನೀಟ್ ಪರೀಕ್ಷೆ ಕಡ್ಡಾಯವಾದ ಬಳಿಕ ಇವತ್ತು ದೇಶದಾದ್ಯಂತ ನೀಟ್ ಪರೀಕ್ಷೆ ನಡೆಯುತ್ತಿದೆ.

    ಸಿಬಿಎಸ್‍ಇ ರಾಷ್ಟ್ರಾದ್ಯಂತ ಏಕರೂಪ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ನಡೆಸುತ್ತಿದೆ. 11 ಲಕ್ಷದ 35 ಸಾವಿರದ 104 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 103 ನಗರಗಳ 2,200 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರು, ಮಂಗಳೂರು, ದಾವಣಗೆರೆ, ಹುಬ್ಬಳ್ಳಿ, ಮೈಸೂರು, ಕಲಬುರ್ಗಿ, ಬೆಳಗಾವಿಯಲ್ಲಿ ಪರೀಕ್ಷೆಗಳು ನಡೆಯಲಿವೆ.

    ಪರೀಕ್ಷೆಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ವೇಳೆ ಸೂಕ್ತ ದಾಖಲಾತಿ ಸಲ್ಲಿಸದ ವಿದ್ಯಾರ್ಥಿಗಳು ಇಂದಿನ ಪರೀಕ್ಷೆಗೆ ಪ್ರವೇಶ ಪತ್ರದ ಜೊತೆ ಆಧಾರ್ ಕಾರ್ಡ್ ಕಡ್ಡಾಯವಾಗಿ ತೆಗದುಕೊಂಡು ಹೋಗಬೇಕು. ಆಧಾರ್ ಕಾರ್ಡ್ ಇಲ್ಲದವರು ಸರ್ಕಾರದ ಯಾವುದಾದರೂ ಗುರುತಿನ ಪತ್ರವನ್ನ ತೆಗೆದುಕೊಂಡು ಹೋಗೋದು ಕಡ್ಡಾಯ. ಪರೀಕ್ಷೆಗಳ ಬೆಳಗ್ಗೆ 10.30ಕ್ಕೆ ಪ್ರಾರಂಭವಾಗಿದೆ. ಅಭ್ಯರ್ಥಿಗಳು 9.30ರ ಒಳಗೆ ಪರೀಕ್ಷಾ ಕೇಂದ್ರದಲ್ಲಿ ಇರೋದು ಕಡ್ಡಾಯ. ಒಂದು ನಿಮಿಷ ತಡ ಆದ್ರು ಪರೀಕ್ಷಾ ಕೇಂದ್ರಕ್ಕೆ ನೋ ಎಂಟ್ರಿ.

    ಪರೀಕ್ಷೆಯನ್ನ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಬೋರ್ಡ್ ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ಹಾಗೂ ಇನ್ನಿತರ ವಸ್ತುಗಳ ನಿಷೇಧ ಮಾಡಿದ್ದು ಅವುಗಳು ಹೀಗಿವೆ:
    > ವಿದ್ಯಾರ್ಥಿಗಳು ಜುಬ್ಬಾ-ಪೈಜಾಮ, ಶೂ, ಫುಲ್ ತೋಳಿನ ಶರ್ಟ್, ವಾಚ್ ಧರಿಸುವಂತಿಲ್ಲ. ಬದಲಿಗೆ ಜೀನ್ಸ್ ಪ್ಯಾಂಟ್, ಲೈಟ್ ಕಲರ್ ಹಾಫ್ ಶರ್ಟ್, ಚಪ್ಪಲಿ ಧರಿಸಬೇಕು.
    > ವಿದ್ಯಾರ್ಥಿನಿಯರು ಹೀಲ್ಡ್ ಶೂ – ಸಾಕ್ಸ್, ಕತ್ತಿಗೆ ಸರ, ವಾಚ್ ,ದೊಡ್ಡ ಗುಂಡಿಗಳ ಡ್ರೆಸ್ ಹಾಕುವಂತಿಲ್ಲ. ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷೆ ಕೇಂದ್ರಕ್ಕೆ ತರುವಂತಿಲ್ಲ.