Tag: ದಕ್ಷಿಣ ಕನ್ನಡ ಮಳೆ

  • ದಕ್ಷಿಣ ಕನ್ನಡ, ಕೊಡಗಿನಲ್ಲಿ ಮಳೆ – ಹಾವೇರಿಯಲ್ಲಿ ಸಿಡಿಲಿಗೆ 30 ಕುರಿ ಸಾವು

    ದಕ್ಷಿಣ ಕನ್ನಡ, ಕೊಡಗಿನಲ್ಲಿ ಮಳೆ – ಹಾವೇರಿಯಲ್ಲಿ ಸಿಡಿಲಿಗೆ 30 ಕುರಿ ಸಾವು

    ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಕೂಡಾ ಮಳೆಯಾಗಿದೆ. ಹಾವೇರಿಯಲ್ಲಿ (Haveri) ಸಿಡಿಲು ಬಡಿದು 30 ಕುರಿಗಳು ಸಾವನ್ನಪ್ಪಿವೆ. ಮಂಗಳೂರು (Mangaluru Rain) ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆ ಆರ್ಭಟ ಮಾಡಿದೆ. ಎಲ್ಲೆಡೆ ಸಿಡಿಲು ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದೆ.

    ಜಿಲ್ಲೆಯ ಕಡಬ ತಾಲೂಕಿನಾದ್ಯಂತ ಭಾರೀ ಮಳೆ ಸುರಿದಿದ್ದು, ಕಡಬ, ಕೋಡಿಂಬಾಳ, ನೆಲ್ಯಾಡಿಯಲ್ಲಿ ಸುರಿದ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಗೆ ನೆಲ್ಯಾಡಿ ಪೇಟೆ ಸಂಪೂರ್ಣ ಜಲಾವೃತವಾಗಿದೆ. ಇದನ್ನೂ ಓದಿ: ಶಿರಾದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲು 30 ಕ್ಕೂ ಹೆಚ್ಚು ಶಾಸಕರಿಂದ ಮನವಿ

    ಕಡಬದ ಪಂಜೋಡಿಯಲ್ಲಿ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಧರೆಗುರುಳಿವೆ. ಮಂಗಳೂರು ನಗರದಲ್ಲೂ ಕೆಲ ಕಾಲ ಭಾರೀ ಗಾಳಿ ಜೊತೆ ಮಳೆಯಾಗಿದೆ. ನಿನ್ನೆ ಪುತ್ತೂರಿನಲ್ಲಿ ಭಾರೀ ಮಳೆಯಾಗಿತ್ತು. ಪುತ್ತೂರಿನ ಬಪ್ಪಳಿಗೆ ಬಳಿ ಭಾರೀ ಗಾಳಿ ಮಳೆಗೆ ಮನೆ ಮೇಲೆ ತೆಂಗಿನ ಮರ ಬಿದ್ದು, ಮನೆ ಹಾನಿಗೀಡಾಗಿದೆ. ಮನೆಯವರು ಹೊರಗೆ ಕೆಲಸ ಮಾಡುತ್ತಿದ್ದ ವೇಳೆ ಮರ ಬಿದ್ದ ಕಾರಣ ಭಾರೀ ದುರಂತ ತಪ್ಪಿದೆ.

    ಮಡಿಕೇರಿಯಲ್ಲೇನಾಯ್ತು..?:
    ಕೊಡಗಿನ (Kodagu Rain) ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆ ಸುರಿದಿದ್ದು ಇಳೆ ತಂಪಾಗಿದೆ. ಮಡಿಕೇರಿ, ಸುಂಟಿಕೊಪ್ಪ, ಗಾಳಿಬೀಡು, ಮದೆನಾಡು ಸೇರಿದಂತೆ ಹಲವೆಡೆ ಮಳೆ ಬಿದ್ದಿದೆ. ಗುಡುಗು ಸಿಡಿಲಿನೊಂದಿಗೆ ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಇದನ್ನೂ ಓದಿ: ಚೆಕ್‌ ಬೌನ್ಸ್‌ ಕೇಸ್‌ – ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್‌

    ಹಾವೇರಿ ಜಿಲ್ಲೆಯಲ್ಲಿ ಸಿಡಿಲಿಗೆ 30 ಕುರಿ ಸಾವು
    ಹಾವೇರಿಯ ಹಿರೇಕೆರೂರು ತಾಲೂಕಿನ ಹುಲಬಿಕೊಂಡ ಗ್ರಾಮದಲ್ಲಿ ಸಿಡಿಲು ಬಡಿದು 30 ಕುರಿಗಳು ಸಾವನ್ನಪ್ಪಿವೆ. ಹಾನಗಲ್ ತಾಲೂಕಿನ ಕುರಿಗಾಯಿ ಈಟೇಪ್ಪ ಬನ್ನಿ ಎಂಬವರಿಗೆ ಸೇರಿದ ಕುರಿಗಳು ಸಾವಿಗೀಡಾಗಿವೆ. ಸ್ಥಳಕ್ಕೆ ಶಾಸಕ ಯು.ಬಿ. ಬಣಕಾರ ಭೇಟಿ ನೀಡಿದ್ದು, ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಹಿರೇಕೆರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆ ಅಬ್ಬರ – ಮಕ್ಕಳು, ವಾಹನ ಸವಾರರು ಪರದಾಟ

    ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆ ಅಬ್ಬರ – ಮಕ್ಕಳು, ವಾಹನ ಸವಾರರು ಪರದಾಟ

    ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಕೆಲ ದಿನ ಬಿಡುವು ನೀಡಿದ್ದ ಮಳೆ ಮತ್ತೆ ಇಂದು ಅಬ್ಬರಿಸಿದೆ. ಸಂಜೆಯಾಗುತ್ತಿದ್ದಂತೆ ಗ್ರಾಮೀಣ ಪ್ರದೇಶಗಳಲ್ಲಿ ಭಾರೀ ಹೆಚ್ಚಿನ ಮಳೆಯಾಗಿದೆ.

    ಕಡಬ ತಾಲೂಕಿನಾದ್ಯಂತ ಗಾಳಿ, ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಪಶ್ಚಿಮ ಘಟ್ಟ ಹಾಗೂ ಸುಬ್ರಮಣ್ಯದ ಕುಮಾರಪರ್ವತದಲ್ಲೂ ಹೆಚ್ಚಿನ ಮಳೆಯಾಗಿದೆ. ಸಂಜೆಯಾಗುತ್ತಿದ್ದಂತೆ ಏಕಾಏಕಿ ಸುಮಾರು ಒಂದು ಗಂಟೆಗಳ ಕಾಲ ನಿರಂತರವಾಗಿ ಮಳೆ ಸುರಿದಿದೆ.

    ಕಡಬದ ಹಲವೆಡೆ ರಸ್ತೆಯಲ್ಲೇ ಮಳೆ ನೀರು ಹರಿದು ಶಾಲಾ ಮಕ್ಕಳು, ವಾಹನ ಸವಾರರು ಸಂಚಾರಕ್ಕೆ ಪರದಾಡಿದರು. ಜಿಲ್ಲೆಯ ಇತರೆ ತಾಲೂಕಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ.

  • ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಗಿರಿತಾಣ, ಶಿಖರಗಳಿಗೆ ಚಾರಣ ನಿಷೇಧ

    ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಗಿರಿತಾಣ, ಶಿಖರಗಳಿಗೆ ಚಾರಣ ನಿಷೇಧ

    ನದಿ‌, ಸಮುದ್ರ ತೀರದಲ್ಲಿ ಮೋಜು ಮಸ್ತಿಗೂ ತಡೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ (Dakshina Kannada Rain) ಜಿಲ್ಲೆಯ ವಿವಿದೆಡೆ ಭೂ ಕುಸಿತ, ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗಿದೆ. ಹೀಗಾಗಿ ಇನ್ನಷ್ಟು ಪ್ರಾಕೃತಿಕ ವಿಕೋಪ ಸಂಭವಿಸುವ ಆತಂಕದ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ಗಿರಿತಾಣ, ಶಿಖರಗಳಲ್ಲಿ ಚಾರಣಕ್ಕೆ (Trekking prohibited) ಪ್ರವಾಸಿಗರು ತೆರಳದಂತೆ ನಿಷೇಧ ಹೇರಲಾಗಿದೆ.

    DAKSHINA-KANNADA-TREKKING-PROHIBITION

    ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನಿಷೇಧ ಆದೇಶ ಹೊರಡಿಸಿದ್ದು, ಮಳೆಗಾಲ ಮುಗಿಯುವವರೆಗೆ ಹೋಮ್ ಸ್ಟೇ, ರೆಸಾರ್ಟ್ (Home Stay, Resorts) ಸೇರಿದಂತೆ ಅರಣ್ಯ ಇಲಾಖೆ ಏರ್ಪಡಿಸುವ ಟ್ರೆಕ್ಕಿಂಗ್, ಸಾಹಸ ಯಾತ್ರೆಗೂ ನಿಷೇಧ ಹೇರಲಾಗಿದೆ. ಇದರ ಜೊತೆಗೆ ನದಿ, ಸಮುದ್ರ ತೀರಕ್ಕೆ ಜನ ತೆರಳದಂತೆ ಸೂಚನೆ‌ ನೀಡಲಾಗಿದೆ. ಇದನ್ನೂ ಓದಿ: ಎಲ್.ಕೆ ಅಡ್ವಾಣಿ ಆರೋಗ್ಯ ಸ್ಥಿರ – ಆಸ್ಪತ್ರೆಯಿಂದ ಡಿಸ್ಚಾರ್ಜ್

    ನದಿ ಹಾಗೂ ಸಮುದ್ರ ತಟದಲ್ಲಿ ಈಜು ಮೋಜು-ಮಸ್ತಿ, ನೀರಿಗೆ ಇಳಿಯೋದು, ಮೀನು ಹಿಡಿಯುವುದು ಇತ್ಯಾದಿ ಚಟುವಟಿಕೆಗಳಿಗೂ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.