Tag: ದಕ್ಷಿಣ ರಾಜ್ಯಗಳು

  • ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲು ಬಿಡಲ್ಲ, ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ – ಸಿಎಂ

    ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲು ಬಿಡಲ್ಲ, ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ – ಸಿಎಂ

    ಬೆಂಗಳೂರು: ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ. ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಟೀಕಿಸಿದ್ದಾರೆ.

    ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ ಅವರು, ಮರುವಿಂಗಡಣೆಯನ್ನು ಜನಸಂಖ್ಯೆಯ ಅನುಪಾತದ ಆಧಾರದಲ್ಲಿ ಮಾಡಲಾಗುವುದೋ? ಅಥವಾ ಲೋಕಸಭಾ ಸದಸ್ಯರ ಈಗಿನ ಸಂಖ್ಯೆಯ ಅನುಪಾತದಲ್ಲಿ ಮಾಡಲಾಗುವುದೋ? ಎಂಬ ಮುಖ್ಯ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಬೇಕಾಗುತ್ತದೆ ಎಂದರು.ಇದನ್ನೂ ಓದಿ: `ಪುಟ್ಟಕ್ಕ’ ಉಮಾಶ್ರೀ ಹೋರಾಟಕ್ಕೆ ನಟ ರವಿಚಂದ್ರನ್ ಸಾಥ್

    ಇತ್ತೀಚಿನ ಜನಸಂಖ್ಯೆಯ ಅನುಪಾತದಲ್ಲಿ ಕ್ಷೇತ್ರ ಮರುವಿಂಗಡಣೆ ನಡೆದರೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಕಟ್ಟಿಟ್ಟ ಬುತ್ತಿ ಎನ್ನುವುದು ನಮಗೆ ಸ್ಪಷ್ಟವಾಗಿ ಅರ್ಥವಾಗಿದೆ. ಇತ್ತೀಚಿನ ಜನಗಣತಿಯನ್ನು (2021 ಇಲ್ಲವೇ 2031) ಮಾತ್ರ ಆಧರಿಸಿ ಕ್ಷೇತ್ರ ಮರುವಿಂಗಡಣೆ ನಡೆದರೆ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28ರಿಂದ 26ಕ್ಕೆ ಇಳಿಯುವ ಸಾಧ್ಯತೆ ಇದೆ. ಇದೇ ರೀತಿ ಆಂಧ್ರಪ್ರದೇಶದಲ್ಲಿ 42 ರಿಂದ 34, ಕೇರಳದಲ್ಲಿ ಸಂಖ್ಯೆ 20 ರಿಂದ 12ಕ್ಕೆ, ತಮಿಳುನಾಡಿನಲ್ಲಿ 39 ರಿಂದ 31ಕ್ಕೆ ಇಳಿಯಲಿದೆ. ಇದೇ ವೇಳೆ ಉತ್ತರಪ್ರದೇಶದಲ್ಲಿ 80 ರಿಂದ 91, ಬಿಹಾರದಲ್ಲಿ 40ರಿಂದ 50, ಮಧ್ಯಪ್ರದೇಶದಲ್ಲಿ 29ರಿಂದ 33ಕ್ಕೆ ಏರಿಕೆಯಾಗಲಿದೆ. ಇದನ್ನು ಅನ್ಯಾಯ ಎನ್ನದೆ ನ್ಯಾಯ ಎನ್ನಲು ಸಾಧ್ಯವೇ? ಈ ಅನ್ಯಾಯವನ್ನು ಖಂಡಿತ ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

    ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕ್ಷೇತ್ರ ಮರುವಿಂಗಡಣೆಗೆ ತೋರುತ್ತಿರುವ ಅತ್ಯುತ್ಸಾಹವನ್ನು ನೋಡಿದರೆ ತಮ್ಮ ಪಕ್ಷದ ಕೀರ್ತಿಪತಾಕೆ ಹಾರಿಸುವುದಕ್ಕೆ ಪ್ರತಿರೋಧ ಒಡ್ಡುತ್ತಿರುವ ದಕ್ಷಿಣದ ರಾಜ್ಯಗಳ ಜನತೆಗೆ ಶಿಕ್ಷಿಸುವ ದುರುದ್ದೇಶ ಇರುವಂತೆ ಕಾಣಿಸುತ್ತಿದೆ. ರಾಜ್ಯಕ್ಕೆ ಆಗುತ್ತಿರುವ ಸರಣಿ ಅನ್ಯಾಯಗಳನ್ನು ನೋಡಿಯೂ ರಾಜ್ಯದಿಂದ ಲೋಕಸಭೆಗೆ ಆರಿಸಿಹೋಗಿರುವ ಹದಿನೇಳು ಬಿಜೆಪಿ ಮತ್ತು ಇಬ್ಬರು ಜೆಡಿಎಸ್ ಸದಸ್ಯರು ಜೀತದಾಳುಗಳಂತೆ ಬಾಯಿಗೆ ಬೀಗಹಾಕಿಕೊಂಡು ಕೂತಿದ್ದಾರೆ. ರಾಜ್ಯದ ಬಿಜೆಪಿ ನಾಯಕರು ಪರಸ್ಪರ ಕೆಸರೆರೆಚಾಟ ನಡೆಸುತ್ತಾ ಬೀದಿ ಜಗಳದಲ್ಲಿ ಮಗ್ನರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಜಾತಿ-ಧರ್ಮ ಪಕ್ಷ-ಪಂಥಗಳ ಭೇದವನ್ನು ಮರೆತು ಕನ್ನಡಿಗರೆಲ್ಲರೂ ಒಂದಾಗಿ ಒಂದೇ ದನಿಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾಗಿದೆ. ಈ ಅನ್ಯಾಯದ ವಿರುದ್ಧ ಸಮಗ್ರ ರೂಪದ ಹೋರಾಟವನ್ನು ನಡೆಸಲು ನೆರೆಯ ದಕ್ಷಿಣದ ರಾಜ್ಯಗಳ ಜೊತೆಯಲ್ಲಿಯೂ ಮಾತುಕತೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅನ್ಯಾಯಕ್ಕೀಡಾಗಿರುವ ಎಲ್ಲ ರಾಜ್ಯಗಳ ಜೊತೆಗೂಡಿ ಸಂಘಟಿತವಾದ ಹೋರಾಟ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.ಇದನ್ನೂ ಓದಿ: ರಾಜಮೌಳಿ ಮೇಲೆ ಗಂಭೀರ ಆರೋಪ : ನಿರ್ಮಾಪಕ ಆತ್ಮಹತ್ಯೆ

     

  • ದಕ್ಷಿಣ ಭಾರತದಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಸಿಗಲಿದೆ – Mission South ಬಗ್ಗೆ ಅಮಿತ್‌ ಶಾ ಹೇಳಿದ್ದೇನು?

    ದಕ್ಷಿಣ ಭಾರತದಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಸಿಗಲಿದೆ – Mission South ಬಗ್ಗೆ ಅಮಿತ್‌ ಶಾ ಹೇಳಿದ್ದೇನು?

    ನವದೆಹಲಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ (Lok Sabha Elections) ದಕ್ಷಿಣ ಭಾರತದಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಸಿಗಲಿದೆ. ದಕ್ಷಿಣ ರಾಜ್ಯಗಳಾದ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ದೊಡ್ಡ ಗೆಲುವಿನತ್ತ ಸಾಗುತ್ತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ಭವಿಷ್ಯ ನುಡಿದಿದ್ದಾರೆ.

    ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ʻಮಿಷನ್‌ ಸೌತ್‌ʼ (Mission South) ಬಗ್ಗೆ ಸುಳಿವು ನೀಡಿದ್ದಾರೆ. ಇದೇ ವೇಳೆ ದಕ್ಷಿಣ ಭಾರತದ ನಾಲ್ಕು ರಾಜ್ಯಗಳಲ್ಲಿ ದೊಡ್ಡಮಟ್ಟದ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗ್ಳೂರು, ದೆಹಲಿ ಬಳಿಕ ಜೈಪುರದ ಹಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ – ಪೊಲೀಸರು ಫುಲ್‌ ಅಲರ್ಟ್‌!

    ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ಸೇರಿ ಒಟ್ಟು 109 ಕ್ಷೇತ್ರಗಳಿವೆ. ಈ ನಾಲ್ಕು ರಾಜ್ಯುಗಳಲ್ಲಿ 2019ರಲ್ಲಿ ಬಿಜೆಪಿ 29 ಸ್ಥಾನಗಳನ್ನ ಮಾತ್ರ ಗೆದ್ದಿತ್ತು. ಕರ್ನಾಟಕದಲ್ಲಿ 25, ತೆಲಂಗಾಣದಲ್ಲಿ 4 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಬಿಜೆಪಿ ಖಾತೆ ತೆರೆದಿರಲಿಲ್ಲ. 20 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಕೇರಳದಲ್ಲಿಯೂ ಬಿಜೆಪಿ ಖಾತೆ ತೆರೆದಿಲ್ಲ. ಆದ್ರೆ ಈ ಬಾರಿ ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಾಳೆ ಶುಭಗಳಿಗೆಯಲ್ಲಿ ಮೋದಿ ನಾಮಪತ್ರ ಸಲ್ಲಿಕೆ – ಇಂದು ವಾರಣಾಸಿಯಲ್ಲಿ ಅದ್ಧೂರಿ ರೋಡ್‌ ಶೋ!

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು 3ನೇ ಬಾರಿಗೆ ಹೋರಾಡುತ್ತಿದೆ. ಬಿಜೆಪಿ ಏಕಾಂಗಿಯಾಗಿ 370ಕ್ಕೂ ಅಧಿಕ ಸ್ಥಾನಗಳನ್ನ ಗೆಲ್ಲುವ ಗುರಿ ಹೊಂದಿದೆ. ಒಟ್ಟಾರೆ ಎನ್‌ಡಿಎ ಒಕ್ಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ. ಅಲ್ಲದೇ 200ಕ್ಕೂ ಹೆಚ್ಚು ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶ, ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಗುಜರಾತ್ ನಲ್ಲಿಯೂ ಬಿಜೆಪಿಗೆ ಹೆಚ್ಚಿನ ಬೆಂಬಲವಿದೆ. ಇದರೊಂದಿಗೆ ಬಿಜೆಪಿ ತನ್ನ ಗುರಿ ಸಾಧಿಸಲು ದಕ್ಷಿಣ ರಾಜ್ಯಗಳ ಫಲಿತಾಂಶವೂ ಅಗತ್ಯವಿದೆ ಎಂದು ಹೇಳಿದ್ದಾರೆ.

  • ಕರ್ನಾಟಕದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆ – ಕೇಂದ್ರದಿಂದ ಆಘಾತಕಾರಿ ಮಾಹಿತಿ ಬಹಿರಂಗ

    ಕರ್ನಾಟಕದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆ – ಕೇಂದ್ರದಿಂದ ಆಘಾತಕಾರಿ ಮಾಹಿತಿ ಬಹಿರಂಗ

    ನವದೆಹಲಿ: ದೇಶದಲ್ಲೇ ಅತಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿರುವ ಆಘಾತಕಾರಿ ಅಂಶ ಪ್ರಕಟವಾಗಿದೆ.

    2019ರಲ್ಲಿ ದಕ್ಷಿಣದ ಆರು ರಾಜ್ಯಗಳಲ್ಲಿ ಒಟ್ಟು 35 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದ್ದು, 14 ಸಾವಿರ ಕೇಸ್ ದಾಖಲಾಗುವ ಮೂಲಕ ಕರ್ನಾಟಕ ಅಗ್ರ ಸ್ಥಾನದಲ್ಲಿದೆ.

    ಲೋಕಸಭೆಯ ಅಧಿವೇಶನದಲ್ಲಿ ಪ್ರಶ್ನೆಯೊಂದಕ್ಕೆ ಕೇಂದ್ರ ಸರ್ಕಾರ ಉತ್ತರಿಸಿದ್ದು, ಇದರಲ್ಲಿ ಮಾಹಿತಿ ಬಹಿರಂಗವಾಗಿದೆ. ದಕ್ಷಿಣ ಭಾರತ ಆರು ರಾಜ್ಯಗಳಲ್ಲಿ ಶೇ.50ರಷ್ಟು ಪ್ರಕರಣಗಳು ದಾಖಲಾಗಿದ್ದು, ಕರ್ನಾಟಕ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಕೇರಳ ಹಾಗೂ ಆಂಧ್ರ ಪ್ರದೇಶಗಳಲ್ಲಿ ಒಟ್ಟು 36 ಜನ ಈ ಮಹಾಮಾರಿಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಇದನ್ನೂ ಓದಿ: ಡೆಂಗ್ಯೂ ಜ್ವರಕ್ಕೆ ಮನೆ ಮದ್ದು

    ಅಕ್ಟೋಬರ್ ವರೆಗೆ ದೇಶದಲ್ಲಿ ಒಟ್ಟು 91 ಸಾವಿರ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ನವೆಂಬರ್ ಹಾಗೂ ಡಿಸೆಂಬರ್ ಅಂಕಿ ಅಂಶಗಳನ್ನೂ ಸೇರಿಸಿದರೆ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಾಗಲಿದೆ ಎಂದು ಹೇಳಿದೆ.

    ಮಹಾರಾಷ್ಟ್ರ ಹಾಗೂ ಗೋವಾಗಳಲ್ಲಿ ಅನುಕ್ರಮವಾಗಿ 9,899 ಹಾಗೂ 908 ಕೇಸ್ ದಾಖಲಾಗಿವೆ. ಡೆಂಗ್ಯೂ ಮಹಾಮಾರಿಯನ್ನು ನಿಯಂತ್ರಿಸಲು ಕರ್ನಾಟಕದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯ ಕಲ್ಪಿಸಿದರೂ ಸಹ ಪ್ರಕರಣಗಳ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ.

    ಕಳೆದ ವರ್ಷ ರಾಜ್ಯದಲ್ಲಿ 4 ಸಾವಿರ ಪ್ರಕರಣಗಳು ಪತ್ತೆಯಾಗಿದ್ದವು. ಇದರಲ್ಲಿ ಶೇ.70ರಷ್ಟು ಬೆಂಗಳೂರಿನಲ್ಲಿಯೇ ದಾಖಲಾಗಿದ್ದವು. ಅಲ್ಲದೆ ಡೆಂಗ್ಯೂ ಮಹಾಮಾರಿಗೆ ದಕ್ಷಿಣದ ರಾಜ್ಯಗಳಲ್ಲಿ ಹಲವರು ಮೃತಪಟ್ಟಿದ್ದರು. ದೇಶಾದ್ಯಂತ ಒಟ್ಟು 82 ಜನ ಸಾವನ್ನಪ್ಪಿದ್ದರು. ಕರ್ನಾಟಕ, ಕೇರಳಗಳಲ್ಲಿ 13 ಹಾಗೂ 16 ಜನ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

    ದಕ್ಷಿಣ ರಾಜ್ಯಗಳಲ್ಲೇ ಹೆಚ್ಚೇಕೆ?
    ಅಧಿಕಾರಿಗಳ ನಿರಾಸಕ್ತಿ ಹಾಗೂ ಸೊಳ್ಳೆಗಳ ಸಂತಾನೋತ್ಪತ್ತಿ ಸ್ಥಳಗಳನ್ನು ನಿಯಂತ್ರಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಇಲ್ಲದಿರುವುದೇ ಡೆಂಗ್ಯೂ ಪ್ರಕರಣಗಳು ಹೆಚ್ಚಲು ಕಾರಣ. ಈ ಕುರಿತು ಹೆಚ್ಚು ಜಾಗೃತಿ ಮೂಡಿಸುವ ಅಗತ್ಯವಿದೆ. ಆಶಾ ಕಾರ್ಯಕರ್ತೆಯರ ಮೂಲಕ ರಾಜ್ಯಾದ್ಯಂತ ಬೃಹತ್ ಜಾಗೃತಿ ಅಭಿಯಾನವನ್ನು ನಾವು ಕೈಗೊಂಡಿದ್ದೇವೆ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಿ.ಕೆ.ಪಾಂಡೆ ತಿಳಿಸಿದ್ದಾರೆ.