Tag: ದರ ಏರಿಕೆ

  • ಗ್ಯಾರಂಟಿ ಎಫೆಕ್ಟ್‌-  ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ದರ ಏರಿಕೆ ಬಿಸಿ

    ಗ್ಯಾರಂಟಿ ಎಫೆಕ್ಟ್‌- ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ದರ ಏರಿಕೆ ಬಿಸಿ

    ಬೆಂಗಳೂರು: ಸರ್ಕಾರಿ ಆಸ್ಪತ್ರೆಯ (Govt Hospitals) ರೋಗಿಗಳಿಗೆ ದರ ಏರಿಕೆ ಬಿಸಿ ತಟ್ಟಿದೆ. ಉಚಿತ ಚಿಕಿತ್ಸೆ ಕೊಡುವ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳ (Medical Service) ದರ ಹೆಚ್ಚಳ ಆಗಿದೆ.

    ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ದರ ಏರಿಕೆ ಆಗಿದೆ. ಸರ್ಕಾರಿ ಸೇವೆಗಳ ದರ 10 ರಿಂದ 20% ದರ ಏರಿಕೆ ಆಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ದರ ಏರಿಕೆ ಆಗಿರುವ ಬಗ್ಗೆ ನೋಟಿಸ್ ಹಾಕಿದ್ದಾರೆ. ಆಸ್ಪತ್ರೆಯ ಹೊರ ರೋಗಿ ವಿಭಾಗಗಳ ಮುಂದೆ ದರ ಏರಿಕೆ ಆಗಿದೆ ಎಂದು ನೋಟಿಸ್ ಅಂಟಿಸಲಾಗಿದೆ. ರಾಜ್ಯದ ಅತಿದೊಡ್ಡ ಆಸ್ಪತ್ರೆ ವಿಕ್ಟೋರಿಯಾದಲ್ಲಿ ದರ ಏರಿಕೆ ಆಗಿರೋದನ್ನು ಕಂಡು ರೋಗಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಹೊಸ ಜನೌಷಧಿ ಕೇಂದ್ರಕ್ಕೆ ಅನುಮತಿ ನೀಡಲ್ಲ: ಶರಣ ಪ್ರಕಾಶ್‌ ಪಾಟೀಲ್‌

     

    ಯಾವ ಸೇವೆಯ ದರ ಎಷ್ಟು ಹೆಚ್ಚಳ?
    *ಓಪಿಡಿ ರಿಜಿಸ್ಟ್ರೇಷನ್ ಬುಕ್
    ಹಿಂದಿನ ದರ – 10 ರೂ.
    ಈಗಿನ ದರ – 20 ರೂ.
    ಹೆಚ್ಚಳ – 10 ರೂ.

    *ಒಳರೋಗಿ ಅಡ್ಮಿಷನ್
    ಹಿಂದಿನ ದರ – 25 ರೂ.
    ಈಗಿನ ದರ – 50 ರೂ.
    ಹೆಚ್ಚಳ – 25 ರೂ.

    *ರಕ್ತ ಪರೀಕ್ಷೆ
    ಹಿಂದಿನ ದರ – 70 ರೂ.
    ಈಗಿನ ದರ – 120 ರೂ.
    ಹೆಚ್ಚಳ – 50 ರೂ.

    *ವಾರ್ಡ್ ಚಾರ್ಜಸ್
    ಹಿಂದಿನ ದರ – 25 ರೂ.
    ಈಗಿನ ದರ – 50 ರೂ.
    ಹೆಚ್ಚಳ – 25 ರೂ.

    *ಆಸ್ಪತ್ರೆ ತ್ಯಾಜ್ಯ ನಿರ್ವಹಣೆ ದರ
    ಹಿಂದಿನ ದರ – 10 ರೂ.
    ಈಗಿನ ದರ – 50 ರೂ.
    ಹೆಚ್ಚಳ – 40 ರೂ.

  • ಹಾಲಿನ ದರ ಏರಿಕೆಗೆ ಕೆಎಂಎಫ್ ತಾತ್ಕಾಲಿಕ ಬ್ರೇಕ್- ಈ ವರ್ಷ ಹಾಲಿನ ದರ ಏರಿಕೆ ಬಹುತೇಕ ಡೌಟ್

    ಹಾಲಿನ ದರ ಏರಿಕೆಗೆ ಕೆಎಂಎಫ್ ತಾತ್ಕಾಲಿಕ ಬ್ರೇಕ್- ಈ ವರ್ಷ ಹಾಲಿನ ದರ ಏರಿಕೆ ಬಹುತೇಕ ಡೌಟ್

    ಬೆಂಗಳೂರು: ಹಾಲಿನ ದರ ಏರಿಕೆ ಭೀತಿಯಲ್ಲಿದ್ದ ಜನತೆಗೆ ಸದ್ಯಕ್ಕೆ ಆ ಚಿಂತೆ ದೂರವಾಗುವ ಸಾಧ್ಯತೆ ಇದೆ. ಸರ್ಕಾರ ತಾತ್ಕಾಲಿಕ ರಿಲೀಫ್ ನೀಡುವ ಸಾಧ್ಯತೆ ಇದ್ದು, ದರ ಏರಿಕೆ ಮಾಡುವ ನಿರ್ಧಾರದಿಂದ ಹಿಂದೆ ಸರಿದಂತಿದೆ.

    ಕಳೆದ ಕೆಲ ದಿನಗಳ ಹಿಂದಷ್ಟೇ ಸಿಎಂ (CM Siddaramaih) ಸಮಾವೇಶವೊಂದರಲ್ಲಿ ಬಹಿರಂಗವಾಗಿ ದರ ಏರಿಕೆ ಮಾಡುವ ಬಗ್ಗೆ ಸುಳಿವು ನೀಡಿದ್ದರು. ಅದು ಕೂಡ ಏರಿಕೆ ಕಂಡ ಹಣವನ್ನ ನೇರವಾಗಿ ರೈತರಿಗೆ ತಲುಪಿಸುವ ಬಗ್ಗೆ ಕೂಡ ಸುಳಿವು ಕೊಟ್ಟಿದ್ದರು. ಆ ಬೆನ್ನಲ್ಲೆ ಕೆಎಂಎಫ್ (KMF) ಕೂಡ ಏರಿಕೆ ಸಂಬಂಧ ಕೆಲ ಸಭೆಗಳನ್ನು ಮಾಡಿ ಏರಿಕೆಗೆ ಬೇಕಾದಂತ 2023ರ ಪ್ರಸ್ತಾವನೆ ಸಲ್ಲಿಕೆಗೂ ತಯಾರಿ ಮಾಡಿತ್ತು. ಈ ಬೆನ್ನಲ್ಲೆ ಸದ್ಯ ದರ ಏರಿಕೆ ಬೇಡ ಅನ್ನೋ ನಿರ್ಧಾರಕ್ಕೆ ಸರ್ಕಾರ ಬಂದಂತಿದ್ದು, ಈ ವರ್ಷ ಬಹುತೇಕ ಈ ಬಗ್ಗೆ ಯೋಚನೆ ಬೇಡ ಅನ್ನೋ ತೀರ್ಮಾನ ಮಾಡಿದೆಯಂತೆ. ಇದನ್ನೂ ಓದಿ: ನಾವು ಎಲ್ಲಿಯೂ, ಯಾವತ್ತೂ ಸಿಎಂ ಪದವಿ ಬಗ್ಗೆ ಚರ್ಚೆ ಮಾಡಿಲ್ಲ: ಸಚಿವ ಪರಮೇಶ್ವರ್‌

    ಇದೇ ವರ್ಷ ಈಗಾಗಲೇ ಎರಡು ಬಾರಿ ಏರಿಕೆ ಕಂಡಿದ್ದ ಹಾಲಿನ ದರ, ಮತ್ತೆ ಏರಿಕೆಯಾದ್ರೆ ಹೇಗೆ ಅನ್ನೋ ಆತಂಕ ಗ್ರಾಹಕರಲ್ಲಿ ಮನೆ ಮಾಡಿತ್ತು. ಅಲ್ಲದೇ ಈಗಾಗಲೇ . ಲೀಟರ್ ಗೆ 48 ರೂ ತಲುಪಿದ್ದು, ಮತ್ತೆ ಹೆಚ್ಚಾದರೆ ಹೇಗೆ ಅನ್ನೋ ಆತಂಕ ಕೂಡ ಗ್ರಾಹಕರಲ್ಲಿ ಮೂಡಿತ್ತು. ಸರ್ಕಾರದ ಈ ನಿರ್ಧಾರ ಸದ್ಯಕ್ಕಂತು ಗುಡ್ ನ್ಯೂಸ್ ಅಂದ್ರೆ ತಪ್ಪಾಗಲ್ಲ. ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಟಿಕೆಟ್‌ನಲ್ಲಿ ಕನ್ನಡ ಕಗ್ಗೊಲೆ – ಪ್ರಯಾಣಿಕರ ಆಕ್ರೋಶ

    ಕೆಎಂಎಫ್ 5 ರೂ. ಏರಿಕೆಗೆ ಪ್ರಸ್ತಾವನೆ ಸಿದ್ಧತೆ ಮಾಡಿತ್ತು. ಇದು ಫೈನಲ್ ಆಗಿದ್ರೆ ಸರ್ಕಾರ 1 ರಿಂದ 2 ರೂ. ದರ ಏರಿಕೆ ಮಾಡುವ ಸಾಧ್ಯತೆ ಇತ್ತು. ಆದರೆ ಸರ್ಕಾರ ಪರಿಷ್ಕರಣೆ ಕೈ ಬಿಡುವ ಸಾಧ್ಯತೆ ಹಿನ್ನೆಲೆ ಗ್ರಾಹಕರು ಸದ್ಯಕ್ಕಂತು ಕೊಂಚ ನಿರಾಳ ಆಗಬಹುದು. ಇದನ್ನೂ ಓದಿ:  ಅಡಿಕೆ ವ್ಯಾಪಾರಿಗೆ ಬೆದರಿಸಿ 17 ಲಕ್ಷ ದರೋಡೆ – 7 ಮಂದಿ ಅರೆಸ್ಟ್

    ಸದ್ಯ ಹಾಲಿನ ದರ ಎಷ್ಟಿದೆ?
    – ನೀಲಿ ಪ್ಯಾಕೆಟ್ ಹಾಲು 44 ರೂ.
    – ಕೇಸರಿ ಪ್ಯಾಕೆಟ್ ಹಾಲು 48 ರೂ.
    – ಶುಭಂ ಪ್ಯಾಕೆಟ್ ಹಾಲು 50 ರೂ
    – ಸಮೃದ್ಧಿ ಹಾಲಿನ ಪ್ಯಾಕೆಟ್ 53 ರೂ. ಇದನ್ನೂ ಓದಿ: ದಸರಾ ಜಂಬೂಸವಾರಿ ಮೆರವಣಿಗೆಗೆ ಪೊಲೀಸ್ ಇಲಾಖೆ ಬಿಗಿ ಭದ್ರತೆ: ಕಮಿಷನರ್ ಸೀಮಾ ಲಾಟ್ಕರ್

  • ಶತಕದಂಚಿನಲ್ಲಿ ಟೊಮೆಟೊ  ದರ – ವರ್ಷದಲ್ಲಿ 2ನೇ ಬಾರಿಗೆ 100 ರೂ. ಸನಿಹಕ್ಕೆ ‘ಕೆಂಪಣ್ಣ’

    ಶತಕದಂಚಿನಲ್ಲಿ ಟೊಮೆಟೊ  ದರ – ವರ್ಷದಲ್ಲಿ 2ನೇ ಬಾರಿಗೆ 100 ರೂ. ಸನಿಹಕ್ಕೆ ‘ಕೆಂಪಣ್ಣ’

    ಬೆಂಗಳೂರು: ಕಳೆದ ಕೆಲ ದಿನಗಳಿಂದ ದಿನಬೆಳಗಾದರೆ ಒಂದಲ್ಲ ಒಂದು ವಸ್ತುಗಳ ದರ ಏರಿಕೆಯಾಗುತ್ತಲೇ ಇದೆ. ಅದರಲ್ಲೂ ಅಗತ್ಯ ತರಕಾರಿಗಳಾದ ಈರುಳ್ಳಿ, ಬೆಳ್ಳುಳ್ಳಿ ದರ ಗಗನ ಸಖಿಯಾಗಿದ್ದು, ಈ ಸಾಲಿಗೆ ಟೊಮೆಟೊ (Tomato) ಕೂಡ ಸೇರ್ಪಡೆಯಾಗಿದೆ.

    ಕಳೆದ ಕೆಲ ದಿನಗಳಿಂದ ಈರುಳ್ಳಿ, ಬೆಳ್ಳುಳ್ಳಿ ದರ ಕೇಳಿದ್ರೆನೆ ಜನ ಹೆದರುವ ಪರಿಸ್ಥಿತಿ ನಿರ್ಮಾಣ ಆಗಿದೆ. ಈಗಾಗಲೇ ಬೆಳ್ಳುಳ್ಳಿ ಕೆಜಿಗೆ 400 ರೂ. ದಾಟಿದ್ರೆ ಈರುಳ್ಳಿ 100 ರೂ. ಸನಿಹಕ್ಕೆ ಬಂದಿದೆ. ಈ ನಡುವೆ ಟೊಮೆಟೊ ಕೂಡ ಇದೇ ಸಾಲಿಗೆ ಸೇರಿದ್ದು. ಟೊಮೆಟೊ ದರ 100 ರೂ. ದರ ಏರಿಕೆಯಾಗಿದೆ. ಇದನ್ನೂ ಓದಿ: ಇಸ್ರೇಲ್‌ ಯುದ್ಧಕ್ಕೆ ಬೆಚ್ಚಿದ ಜನ – 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ

    ಕಳೆದ ನಾಲ್ಕೈದು ತಿಂಗಳ ಹಿಂದಷ್ಟೇ ಮಳೆ ಅಭಾವ ಮತ್ತು ರೋಗದ ಕಾರಣ ಭಾರೀ ಪ್ರಮಾಣದಲ್ಲಿ ಟೊಮೆಟೊ ಇಳುವರಿ ಕಡಿಮೆಯಾಗಿತ್ತು. ಪರಿಣಾಮ ಟೊಮೆಟೊ ದರ 100 ರೂ. ದಾಟಿತ್ತು. ಆ ಬಳಿಕ ಈಗ ಮತ್ತೆ ಅದೇ ಪರಿಸ್ಥಿತಿ ನಿರ್ಮಾಣ ಆಗಿ ದಿಢೀರ್ ದರ ಏರಿಕೆಯಾಗಿದ್ದು, ಟೊಮೆಟೊ ಕೊಳ್ಳೋಕು ಹಿಂದೂಮುಂದು ನೋಡುವ ಸ್ಥಿತಿ ನಿರ್ಮಾಣ ಆಗಿದೆ. ಈ ಬಾರಿ ಮಳೆ ಪ್ರಮಾಣ ಹೆಚ್ಚಾದ ಕಾರಣ ಇತರೆ ಜಿಲ್ಲೆಗಳಿಂದ ಬೆಂಗಳೂರಿಗೆ (Bengaluru) ಸರಬರಾಜು ಆಗುತ್ತಿದ್ದ ಟೊಮೆಟೊದಲ್ಲಿ ಭಾರೀ ಇಳಿಕೆ ಕಂಡಿದೆ. ಬೆಂಗಳೂರಿನ ಕೆಲ ಭಾಗಗಳಿಂದ ಮಾತ್ರ ಟೊಮೆಟೊ ಬರುತ್ತಿದ್ದು, ಸಂಪೂರ್ಣ ಪೂರೈಕೆ ಆಗುತ್ತಿಲ್ಲ. ಹೀಗಾಗಿ ದರ ಏರಿಕೆ ಆಗುತ್ತಿದೆ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ. ಇದನ್ನೂ ಓದಿ: ಈಗಲೂ ಸಮಯವಿದೆ ಹಿಂದೆ ಸರಿದುಬಿಡಿ – ಲೆಬನಾನ್‌ಗೆ ಇಸ್ರೇಲ್‌ ಪ್ರಧಾನಿ ಎಚ್ಚರಿಕೆ

    ಟೊಮೆಟೊ ದರ ಏರಿಕೆಯಾಗಲು ಕಾರಣಗಳೇನು?
    – ಅತಿವೃಷ್ಟಿಯಿಂದ ಅನೇಕ ಕಡೆ ಬೆಳೆ ನಾಶದಿಂದ ಸರಬರಾಜು ಇಳಿಕೆ
    – ಪೂರೈಕೆಗಿಂತ ಎರಡು ಪಟ್ಟು ಬೇಡಿಕೆ ಇರುವುದು
    – ಕೋಲಾರ ಜಿಲ್ಲೆಯಿಂದಲೇ ಹೆಚ್ಚು ಪೂರೈಕೆ ಆಗುತ್ತಿದ್ದು, ಪೂರೈಕೆ ಇಳಿಕೆಯಾಗಿರೋದು.
    – ಇಳುವರಿ ಕುಸಿತದ ಪರಿಣಾಮ ನೆಲಕಚ್ಚಿದ ಟೊಮೆಟೊ ಬೆಳೆ
    – ರೋಗ ಬಾಧೆ, ಕಳಪೆ ಸಸಿಗಳಿಂದಾಗಿ ಹಲವೆಡೆ ಟೊಮೆಟೊ ಇಳುವರಿಯಲ್ಲಿ ಕುಸಿತ
    – ಸಾಲು, ಸಾಲು ಹಬ್ಬಗಳ ಹಿನ್ನೆಲೆ ಹೊರ ರಾಜ್ಯಗಳಿಂದಲೂ ಟೊಮೆಟೊಗೆ ಭಾರೀ ಬೇಡಿಕೆ
    – ಹೀಗಾಗಿ ಹೊರ ರಾಜ್ಯಗಳ ಬೇಡಿಕೆಯಿಂದ ಅಲ್ಲಿಗೂ ಪೂರೈಕೆಯಾಗುತ್ತಿರೋ ಕಾರಣ ಟೊಮೆಟೊ ದುಬಾರಿ
    – ತಮಿಳುನಾಡು, ತೆಲಂಗಾಣ, ಒಡಿಶಾ, ಪಶ್ಚಿಮ ಬಂಗಾಳ ರಾಜ್ಯಗಳಿಂದ ನಮ್ಮ ರಾಜ್ಯದ ಟೊಮೆಟೊಗೆ ಬೇಡಿಕೆ ಹೆಚ್ಚಾಗಿ ಅಲ್ಲಿಗೂ ಪೂರೈಕೆಯಾಗಿ ದರ ಏರಿಕೆಯಾಗಿದೆ. ಇದನ್ನೂ ಓದಿ: ಜಾತಿಗಣತಿ ಅನುಷ್ಠಾನಕ್ಕೆ ಕಾಂಗ್ರೆಸ್ ಶಾಸಕ ಎಸ್‌ಆರ್ ಶ್ರೀನಿವಾಸ್ ವಿರೋಧ

    ಹೊರ ರಾಜ್ಯಗಳು ಕೂಡ ಹೆಚ್ಚಾಗಿ ರಾಜ್ಯದ ಟೊಮೆಟೊ ಮೇಲೆ ಅವಲಂಬನೆ ಕಾರಣ ಅನೇಕ ಗಡಿ ಜಿಲ್ಲೆಗಳು ಹೊರ ರಾಜ್ಯಗಳಿಗೆ ಹೆಚ್ಚಾಗಿ ಪೂರೈಕೆ ಮಾಡುತ್ತಿವೆ. ಇದು ಕೂಡ ದರ ಏರಿಕೆಗೆ ಕಾರಣ ಆಗುತ್ತಿದೆ. ಸದ್ಯ ಇದೇ ಪರಿಸ್ಥಿತಿ ಇನ್ನೂ ಒಂದೆರೆಡು ವಾರ ಮುಂದುವರಿಯುವ ಸಾಧ್ಯತೆ ಇದೆ. ಹೊಸ ಬೆಳೆ ಬಂದು ಅಗತ್ಯಕ್ಕೆ ತಕ್ಕಂತೆ ಪೂರೈಕೆಯಾಗಬೇಕಿದೆ. ಮಳೆ ಕಡಿಮೆಯಾದರೆ ಮುಂದಿನ ಒಂದೆರೆಡು ವಾರಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ದರ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಅಂತಿದ್ದಾರೆ. ಇದನ್ನೂ ಓದಿ: ಮೂವರಲ್ಲಿ ಒಬ್ಬರಿಗೆ ಸಿಎಂ ಚಾನ್ಸ್‌ – ಡಿನ್ನರ್ ಮೀಟಿಂಗ್‌ನಲ್ಲಿ ತ್ರಿಮೂರ್ತಿಗಳು ಚರ್ಚಿಸಿದ್ದೇನು?

    ಹಬ್ಬದ ನಡುವೆಯೇ ದರ ಏರಿಕೆ ಜನರನ್ನ ಹೈರಾಣಾಗಿಸುತ್ತಿದೆ ಅನ್ನೋ ಬೇಸರ ಒಂದು ಕಡೆಯಾದರೆ, ಮತ್ತೊಂದೆಡೆ ಈಗಾಗಲಾದರು ಬೆಳೆದ ಬೆಳೆಗೆ ರೈತ ಸ್ವಲ್ಪ ಲಾಭ ಕಾಣುವ ಸಮಯ ಬಂತಲ್ಲ ಅನ್ನೋದೇ ನೆಮ್ಮದಿ ವಿಚಾರ. ಇದನ್ನೂ ಓದಿ: ನಾವು ದಿನನಿತ್ಯ ತಿನ್ನೋ ಅನ್ನ ಎಷ್ಟು ಸೇಫ್? – ಕೃಷಿ ವಿವಿಯಿಂದ ಸ್ಫೋಟಕ ಮಾಹಿತಿ ಬಹಿರಂಗ!

  • ಈರುಳ್ಳಿ, ಬೆಳ್ಳುಳ್ಳಿ ಆಯ್ತು – ಈಗ ದಿಢೀರ್‌ ಟೊಮೆಟೊ ದರ ಭಾರೀ ಏರಿಕೆ

    ಈರುಳ್ಳಿ, ಬೆಳ್ಳುಳ್ಳಿ ಆಯ್ತು – ಈಗ ದಿಢೀರ್‌ ಟೊಮೆಟೊ ದರ ಭಾರೀ ಏರಿಕೆ

    ಬೆಂಗಳೂರು: ಜನಸಾಮಾನ್ಯನಿಗೆ ಒಂದರ ಹಿಂದೆ ಒಂದರಂತೆ ದರ ಏರಿಕೆಯ ಬರೆ ಬೀಳುತ್ತಿದ್ದು ಈರುಳ್ಳಿ, ಬೆಳ್ಳುಳ್ಳಿ ಬಳಿಕ ಟೊಮೆಟೊ ದರ ಏರಿಕೆಯಾಗಿದೆ.

    ಕಳೆದ ಒಂದು ವಾರದ ಹಿಂದೆ ಕೆಜಿಗೆ 40 ರೂ. ಇದ್ದ ದರ ಈಗ ಎರಡು ಪಟ್ಟು ಹೆಚ್ಚಳವಾಗಿದೆ. ಶುಕ್ರವಾರದಿಂದ ಕೆಜಿಗೆ 80 ರೂ. ದರದಲ್ಲಿ ಟೊಮೆಟೊ (Tomato) ಮಾರಾಟವಾಗುತ್ತಿದೆ.

    ಅಕಾಲಿಕ ಮಳೆ‌ಯಿಂದ (Rain) ಟೊಮೆಟೊ ಇಳುವರಿ ಕುಸಿತಗೊಂಡಿದೆ. ಇದರ ಜೊತೆ ಈಗ ನವರಾತ್ರಿ ಹಬ್ಬ ಆರಂಭಗೊಂಡಿದೆ. ಬೇಡಿಕೆ ಜಾಸ್ತಿ ಇದೆ. ಪೂರೈಕೆ ಕಡಿಮೆ ಇರುವ ಕಾರಣ ಟೊಮೆಟೊ ಬೆಲೆ ದಿಢೀರ್‌ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಭಾರೀ ಮಳೆ – ನೂರಾರು ಗಣಿ ಲಾರಿಗಳು ಜಲಾವೃತ

    ಈಗಾಗಲೇ ಅಕಾಲಿಕ ಮಳೆಯಿಂದಾಗಿ 1 ಕೆಜಿ ಈರುಳ್ಳಿ ದರ 70 ರೂ. ದಾಟಿದೆ. 1 ಕೆಜಿ ಬೆಳ್ಳುಳ್ಳಿ ದರ 500 ರೂ. ಆಗಿದೆ. ಈಗ ಟೊಮೆಟೊ ದರ ಏರಿಕೆಯಿಂದಾಗಿ ದಸರಾ ಹಬ್ಬದ (Dasara Festival) ಸಮಯದಲ್ಲಿ ಜನರ ಜೇಬು ಮತ್ತಷ್ಟು ಖಾಲಿಯಾಗಲಿದೆ.

     

  • ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಶೀಘ್ರದಲ್ಲೇ ದರ ಏರಿಕೆ ಶಾಕ್!

    ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಶೀಘ್ರದಲ್ಲೇ ದರ ಏರಿಕೆ ಶಾಕ್!

    ಬೆಂಗಳೂರು: ನಗರದ ನಮ್ಮ ಮೆಟ್ರೋ (Namma Metro) ರೈಲು ಇದೀಗ ದರ ಏರಿಕೆ ಬಗ್ಗೆ ಪ್ರಸ್ತಾಪ ಮಾಡಿದ್ದು, ಶೀಘ್ರದಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆಯಿದೆ.

    ಇದಕ್ಕೂ ಮುಂಚೆ ಹಲವಾರು ಬಾರಿ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್‌ಸಿಎಲ್ (Bengaluru Metro Rail Corporation Limited)  ಪ್ರಸ್ತಾಪಿಸಿತ್ತು. ಆದರೆ ಕಳೆದ ಹಲವು ವರ್ಷಗಳಿಂದ ದರ ಏರಿಕೆ ಮಾಡಿರಲಿಲ್ಲ. ಸದ್ಯ ಈ ಬಾರಿ ದರ ಏರಿಕೆ ಮಾಡಲು ಮುಂದಾಗಿದೆ.ಇದನ್ನೂ ಓದಿ:

    ಟಿಕೆಟ್ ದರ ಏರಿಕೆಗೆ ಈಗಾಗಲೇ ಮೆಟ್ರೋ ದರ ನಿಗದಿ ಸಮಿತಿಯನ್ನು ರಚಿಸಿದ್ದು 15% ರಿಂದ 20% ರಷ್ಟು ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಈ ಕುರಿತು ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ್ ಚೌಹಾನ್ ಮಾತನಾಡಿ, ರಾಜ್ಯ ಹಾಗೂ ಕೇಂದ್ರದ ಹಿರಿಯ ಅಧಿಕಾರಿಗಳು, ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡು ದರ ಏರಿಕೆ ಬಗ್ಗೆ ಕಮಿಟಿ ಆಗಿದೆ. ಇದೊಂದು ಸ್ವತಂತ್ರ ಸಮಿತಿಯಾಗಿದ್ದು, ಒಂದು ಸಭೆ ಕೂಡಾ ಆಗಿದೆ. ಕಮಿಟಿ ಶೀಘ್ರದಲ್ಲೇ ವರದಿ ನೀಡಲಿದ್ದು, ವರದಿ ಆಧಾರದ ಮೇಲೆ ದರ ಏರಿಕೆ ಆಗಲಿದೆ. ಕಮಿಟಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಮಾಡಲಿದೆ. ನಮ್ಮ ಖರ್ಚು ವೆಚ್ಚ ನೋಡಿಕೊಂಡು ದರ ಏರಿಕೆ ಮಾಡಲಿದ್ದೇವೆ. ಇನ್ನೂ ಮೂರು ತಿಂಗಳ ಒಳಗಾಗಿ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

    ಅ.21 ರೊಳಗೆ ಪ್ರಯಾಣಿಕರು ಬಿಎಂಆರ್ಸಿಎಲ್‌ಗೆ ತಮ್ಮ ಅಭಿಪ್ರಾಯ ತಿಳಿಸಲು ಕಾಲಾವಕಾಶ ನೀಡಿದ್ದು, ಸಲಹೆಯನ್ನ ffc@bmrc.co.in ಇಮೇಲ್‌ಗೆ ಕಳಿಸುವಂತೆ ತಿಳಿಸಿದೆ.ಇದನ್ನೂ ಓದಿ:

  • ಗುರುವಾರ 224 ಕ್ಷೇತ್ರಗಳಲ್ಲಿ ಬಿಜೆಪಿ ರಸ್ತೆತಡೆ: ಎನ್ ರವಿಕುಮಾರ್

    ಗುರುವಾರ 224 ಕ್ಷೇತ್ರಗಳಲ್ಲಿ ಬಿಜೆಪಿ ರಸ್ತೆತಡೆ: ಎನ್ ರವಿಕುಮಾರ್

    – ತೈಲ ದರ ಏರಿಕೆ ವಾಪಸ್ ಪಡೆಯಲು ಆಗ್ರಹ

    ಬೆಂಗಳೂರು: ಡೀಸೆಲ್- ಪೆಟ್ರೋಲ್ ದರ (Petrol-Diesel Price) ಏರಿಕೆ ವಿರೋಧಿಸಿ ಮತ್ತು ಈ ದರ ಏರಿಕೆಯನ್ನು ವಾಪಸ್ ಪಡೆಯಲು ಆಗ್ರಹಿಸಿ ಗುರುವಾರ ಎರಡನೇ ಹಂತದ ಹೋರಾಟ ನಡೆಸಲಾಗುವುದು ಎಂದು ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ (N Ravikumar) ತಿಳಿಸಿದರು.

    ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೊನ್ನೆ ರಾಜ್ಯಾದ್ಯಂತ ಬೃಹತ್ ಹೋರಾಟ ಮಾಡಿದ್ದೇವೆ. ನಾಳೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿ ರಸ್ತೆತಡೆ ಆಂದೋಲನ ನಡೆಸಲಿದ್ದೇವೆ ಎಂದು ವಿವರಿಸಿದರು. ಇದನ್ನೂ ಓದಿ: 54ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ರಾಹುಲ್‌ ಗಾಂಧಿ

    ವಿಪರೀತ ತೆರಿಗೆ ಶುಲ್ಕ ಹೆಚ್ಚಳದ ಅಭಿಯಾನವನ್ನೇ ರಾಜ್ಯ ಸರ್ಕಾರ ನಡೆಸುತ್ತಿದೆ. ಹಲವಾರು ಕ್ಷೇತ್ರಗಳ ತೆರಿಗೆಯನ್ನು ಈ ಸರ್ಕಾರ ಹೆಚ್ಚಿಸಿದೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ (Congress) ಸರ್ಕಾರವು ಕರ್ನಾಟಕದ ಜನರ ಜೀವನವನ್ನೇ ಕಷ್ಟದಾಯಕವನ್ನಾಗಿ ಮಾಡಿದೆ ಎಂದು ಟೀಕಿಸಿದರು. ಜನರ ಬದುಕನ್ನೇ ದುಸ್ತರವನ್ನಾಗಿ ಮಾಡಿದ ಜನವಿರೋಧಿ ಸರ್ಕಾರ ಇದು. ರೈತವಿರೋಧಿ, ಎಸ್ಸಿ, ಎಸ್ಟಿ, ಒಬಿಸಿಗಳ ವಿರೋಧಿ ಸರ್ಕಾರ ಇದಾಗಿದ್ದು, ಸಿದ್ದರಾಮಯ್ಯನವರ ನೇತೃತ್ವದ ಈ ಸರ್ಕಾರ ಕೂಡಲೇ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಹಿಂಪಡೆಯುವಂತೆ ಆಗ್ರಹಿಸಿದರು. ಇದನ್ನೂ ಓದಿ: ಮೂರನೇ ರೇಪ್ ಕೇಸ್‍ನಲ್ಲಿ ಪ್ರಜ್ವಲ್‍ಗೆ ಮತ್ತೆ 5 ದಿನ ಪೊಲೀಸ್ ಕಸ್ಟಡಿ

    ವಿವಿಧ ತೆರಿಗೆ ಏರಿಕೆ:
    ಆಸ್ತಿ ತೆರಿಗೆಯನ್ನು 20% ರಿಂದ 120% ವರೆಗೆ ಹೆಚ್ಚಿಸಿದ್ದಾರೆ. ಮೋಟಾರು ವಾಹನ ತೆರಿಗೆಯನ್ನು 40% ರಿಂದ 80% ರಷ್ಟು ಹೆಚ್ಚಿಸಿದ್ದಾರೆ. ಅಬಕಾರಿ ತೆರಿಗೆ (ಮದ್ಯ) 20% ರಿಂದ 400% ವರೆಗೆ ಹೆಚ್ಚಳವಾಗಿದೆ. ಹೆಣ್ಮಕ್ಕಳಿಗೆ ಬಸ್ ಪ್ರಯಾಣದರ ಉಚಿತ ಎನ್ನುತ್ತಿದ್ದರು. ಗಂಡಸರ ಬಸ್ ಪ್ರಯಾಣದರ ಏರಿಸಿದ್ದಾರೆ. ವಿದ್ಯುತ್ ದರವನ್ನೂ ಹೆಚ್ಚಿಸಿದ್ದಾರೆ. ಇದರಿಂದ ಕೈಗಾರಿಕಾ ಉತ್ಪನ್ನಗಳ ದರ ಏರಿದೆ. ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹಧನವನ್ನು ಕಡಿಮೆ ಮಾಡಿದ್ದಾರೆ. ಪ್ರತಿ ಲೀಟರ್ ಹಾಲಿನ ದರ ಏರಿಸಿದ್ದಾರೆ. ಇದರಿಂದ ಹಾಲು, ಮೊಸರು, ತುಪ್ಪ ಮತ್ತಿತರ ಉತ್ಪನ್ನಗಳ ದರ ಏರಿದೆ ಎಂದು ತಿಳಿಸಿದರು. ಇದನ್ನೂ ಓದಿ: ವೋಟ್‌ ಮಾಡಿದ ಮೋದಿ ಕೈ ಬೆರಳು ನೋಡಿದ ನಿತೀಶ್‌ ವೀಡಿಯೋ ವೈರಲ್‌

  • ಸಾರಿಗೆ ನಿಗಮದ ನಷ್ಟ ತುಂಬಿಸಲು ದರ ಏರಿಕೆಗೆ ಸಲಹೆ

    ಸಾರಿಗೆ ನಿಗಮದ ನಷ್ಟ ತುಂಬಿಸಲು ದರ ಏರಿಕೆಗೆ ಸಲಹೆ

    ಬೆಂಗಳೂರು: ವರ್ಷಕ್ಕೊಂದು ಬಾರಿ ಕೆಇಆರ್‌ಸಿ (KERC) ಮೂಲಕ ಇಂಧನ ಇಲಾಖೆ ದರ ಏರಿಕೆ ಮಾಡಿ, ಇದರಿಂದ ಗ್ರಾಹಕರಿಗೆ ಹೊರೆಯಾಗುವುದನ್ನು ನೋಡಿದ್ದೇವೆ. ಆದರೀಗ ಬಸ್‌ದರ (Bus) ಏರಿಕೆಗೂ ಇದೇ ಮಾಡೆಲ್ ಅನುಸರಿಸುವಂತೆ ಸಾರಿಗೆ ಇಲಾಖೆಗೆ ಗಂಭೀರ ಸಲಹೆ ಬಂದಿದೆ.

    ಇಂಧನ ಇಲಾಖೆಯಲ್ಲಿ ಎಸ್ಕಾಂಗಳು ವರ್ಷಕ್ಕೊಮ್ಮೆ ಕೆಇಆರ್‌ಸಿ ಮುಂದೆ ದರ ಪ್ರಸ್ತಾಪ ಇಡುತ್ತದೆ. ಕೆಇಆರ್‌ಸಿ ಕೂಡ ಒಪ್ಪಿಗೆ ನೀಡಿ ವರ್ಷಕ್ಕೊಮ್ಮೆ ದರ ಏರಿಕೆ ಮಾಡುತ್ತಿದೆ. ಇದೇ ಮಾಡೆಲ್‌ನ್ನು ಈಗ ಸಾರಿಗೆ ಇಲಾಖೆಗೂ ಅನ್ವಯ ಮಾಡುವಂತೆ ಹಿರಿಯ ಐಎಎಸ್ ಅಧಿಕಾರಿ ಶ್ರೀನಿವಾಸ್ ಮೂರ್ತಿ ಅವರ ಏಕ ಸದಸ್ಯ ಸಮಿತಿ ಸಲಹೆ ನೀಡಿದೆ.

    ಇಂಧನ ಇಲಾಖೆಯಲ್ಲಿ ಹೇಗೆ ವರ್ಷಕ್ಕೊಮ್ಮೆ ದರ ಏರಿಕೆ ಆಗುತ್ತೋ ಅದೇ ತರ ಟಿಕೆಟ್ ರೇಟ್ (Bus Ticket Rate) ಅನ್ನು ಏರಿಸಬೇಕು. ಕೆಇಆರ್‌ಸಿ ಮಾದರಿಯಲ್ಲಿ ಸಾರಿಗೆ ಇಲಾಖೆಯಲ್ಲೂ ಟಿಕೆಟ್ ರೇಟ್ ಬಗ್ಗೆ ಮತ್ತು ಆರ್ಥಿಕ ನಿರ್ವಹಣೆ ಮಾಡಲು ಒಂದು ಬೋರ್ಡ್ ಸ್ಥಾಪಿಸುವಂತೆ ಸಲಹೆ ನೀಡಲಾಗಿದೆ. ಇದನ್ನೂ ಓದಿ: ದೇಶದಲ್ಲಿ ಫಸ್ಟ್‌ – ಶಂಕಿತ ಉಗ್ರರ ಕಾಲಿಗೆ ಜಿಪಿಎಸ್‌ ಬಳೆ

    ಸದ್ಯ ಈ ಪ್ರಸ್ತಾವನೆಗೆ ಸಾರಿಗೆ ಇಲಾಖೆ ಕಾದು ನೋಡುವ ತಂತ್ರ ಅನುಸರಿಸಲು ನಿರ್ಧರಿಸಿದೆ. ಬೊಮ್ಮಾಯಿ ಸರ್ಕಾರದಲ್ಲಿ ಈ ಸಮಿತಿ ರಚನೆಯಾಗಿದ್ದು ಈಗ ವರದಿ ಕೊಡಲಾಗಿದೆ. 2015ರಿಂದ ಬಸ್ ಟಿಕೆಟ್ ರೇಟ್ ಹೆಚ್ಚು ಮಾಡಿಲ್ಲ. ಜೊತೆಗೆ ಡಿಸೇಲ್ ಮತ್ತು ಉಪಕರಣಗಳ ಬೆಲೆ ಏರಿಕೆಯಾಗಿದೆ. ದರ ಏರಿಕೆ ಅನಿವಾರ್ಯವಾಗಿದ್ದರೂ ಸದ್ಯಕ್ಕೆ ಟಿಕೆಟ್ ದರ ಏರಿಕೆ ಮಾಡಲ್ಲ ಎಂದು ಗುಡ್ ನ್ಯೂಸ್ ಕೊಟ್ಟಿದೆ. ಇದನ್ನೂ ಓದಿ: ಬೆಂಗಳೂರು ಕಂಬಳಕ್ಕೆ 1 ಕೋಟಿ ರೂ. ಘೋಷಿಸಿದ ಸಿಎಂ – ಐಶ್ವರ್ಯಾ ರೈ, ಅನುಷ್ಕಾ ಶೆಟ್ಟಿ ಸಿನಿಸ್ಟಾರ್ಸ್ ಭಾಗಿ

  • Nandini Milk: ನಂದಿನಿ ಹಾಲಿನ ದರ 3 ರೂ. ಹೆಚ್ಚಳ

    Nandini Milk: ನಂದಿನಿ ಹಾಲಿನ ದರ 3 ರೂ. ಹೆಚ್ಚಳ

    ಬೆಂಗಳೂರು: ನಂದಿನಿ ಹಾಲಿನ (Nandini Milk) ದರವನ್ನು ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡುವ ಕೆಎಂಎಫ್‌ (KMF) ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.

    ಶುಕ್ರವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಲಾಯಿತು. ಈ ವೇಳೆ ಹಾಲಿನ ದರ ಹೆಚ್ಚಳಕ್ಕೆ ಸರ್ಕಾರ ಒಪ್ಪಿಕೊಂಡಿದೆ. ಆಗಸ್ಟ್ 1 ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಶಾಸಕತ್ವ ಅಸಿಂಧು ಕೋರಿ ಅರ್ಜಿ – ಜು.28 ಕ್ಕೆ ಹೈಕೋರ್ಟ್‌ನಿಂದ ವಿಚಾರಣೆ

    KMF ಪ್ರತಿ ಲೀಟರ್‌ ಹಾಲಿನ ದರದಲ್ಲಿ 5 ರೂ. ಹೆಚ್ಚಳ ಮಾಡುವಂತೆ ಪ್ರಸ್ತಾವ ಸಲ್ಲಿಸಿತ್ತು. ಕೊನೆಗೆ ಸರ್ಕಾರ 3 ರೂ. ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಹೆಚ್‌.ಡಿ.ರೇವಣ್ಣ, 5 ರೂ. ದರ ಏರಿಕೆಗೆ ಪ್ರಸ್ತಾಪವಿತ್ತು. 3 ರೂ. ದರ ಹೆಚ್ಚಳಕ್ಕೆ ಸಿಎಂ ಒಪ್ಪಿಗೆ ನೀಡಿದ್ದಾರೆ. ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್‌ಗೆ 3 ರೂ. ದರ ಹೆಚ್ಚಳವಾದಂತಾಗಿದೆ ಎಂದು ತಿಳಿಸಿದ್ದಾರೆ.

    ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್‌ ಪ್ರಸಾದ್‌, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಜಗದೀಶ್‌, ಕೆಎಂಎಫ್ ನಿರ್ದೇಶಕ ಹೆಚ್.ಡಿ.ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಲೂರು ಶಾಸಕ ನಂಜೇಗೌಡ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಕುರುಡನ ಹೆಗಲ ಮೇಲೆ ಕುಂಟನ ಸವಾರಿಯಂತಿದೆ ಜೆಡಿಎಸ್‌-ಬಿಜೆಪಿ ಹೊಂದಾಣಿಕೆ: ಕಾಲೆಳೆದ ಕಾಂಗ್ರೆಸ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗ್ರಾಹಕರಿಗೆ ಶಾಕ್ ಮೇಲೆ ಶಾಕ್ – ಆಷಾಢ ಮುಗಿಯುತ್ತಿದ್ದಂತೆ ಹೋಟೆಲ್ ದರ ಏರಿಕೆ ಬರೆ ಫಿಕ್ಸ್

    ಗ್ರಾಹಕರಿಗೆ ಶಾಕ್ ಮೇಲೆ ಶಾಕ್ – ಆಷಾಢ ಮುಗಿಯುತ್ತಿದ್ದಂತೆ ಹೋಟೆಲ್ ದರ ಏರಿಕೆ ಬರೆ ಫಿಕ್ಸ್

    – 10% ನಿಂದ 15% ರಷ್ಟು ದರ ಹೆಚ್ಚಳ ಸಾಧ್ಯತೆ

    ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಆಗಿದೆ. ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಲೇ ಇದೆ. ಅತ್ತ ಸದ್ಯದಲ್ಲೇ ನೀರು ಮತ್ತು ಹಾಲಿನ ಹೆಚ್ಚಳವಾಗುವ ಎಲ್ಲಾ ಸಾಧ್ಯತೆಗಳು ಕಂಡು ಬರುತ್ತಿದೆ. ಈ ಮಧ್ಯ ಸಿಲಿಕಾನ್ ಸಿಟಿ ಜನರಿಗೆ ಹೋಟೆಲ್ ದರ ಬಿಲ್ ಕೂಡ ಏರಿಕೆ ಕಾಣಲಿದ್ದು, ಬೆಂಗಳೂರಲ್ಲಿ ಹೋಟೆಲ್ ನಂಬಿಕೊಂಡು ಜೀವನ ಮಾಡುತ್ತಿರುವ ಜನರ ಜೇಬು ಮತ್ತಷ್ಟು ಭಾರವಾಗಲಿದೆ.

    ಮನೆಯಲ್ಲಿ ಅಡುಗೆ ಮಾಡೋಣ ಅಂದ್ರೆ ಅಕ್ಕಿ, ಬೇಳೆ ಕಾಳು, ಕಾಫಿ ಪುಡಿ, ತರಕಾರಿ ಎಲ್ಲಾ ಕಾಸ್ಲಿ. ಈ ಮಧ್ಯೆ ವಿದ್ಯುತ್ ದರ ಕೂಡ ಹೆಚ್ಚಳವಾಗಿದೆ. ಅಡುಗೆ ಮಾಡುವುದೇ ಬೇಡ. ಹೇಗೋ ಹೋಟೆಲಿನಲ್ಲಿ ತಿನ್ನೋಣ ಎನ್ನುವವರಿಗೆ ಶಾಕ್ ಎದುರಾಗಿದೆ. ಕಾರಣ ಸದ್ಯದಲ್ಲೇ ಹೊಟೇಲ್ ದರ ಏರಿಕೆಯಾಗಲಿದೆ.

    ಅಗತ್ಯ ವಸ್ತುಗಳ ಬೆಲೆ ದಿನಕಳೆದಂತೆ ಗಗನಕ್ಕೇರುತ್ತಿರೋದು ಹೊಟೇಲ್ ಉದ್ಯಮವನ್ನ ಸಂಕಷ್ಟಕ್ಕೆ ದೂಡಿದೆ. ಇದರ ಜೊತೆ ವಿದ್ಯುತ್, ಹಾಲಿನ ದರ ಏರಿಕೆ ಬರೆ ಮಾಲೀಕರನ್ನ ಕಂಗೆಡಿಸಿದ್ದು, ಉದ್ಯಮ ನಡೆಸಬೇಕಾದ್ರೆ ಹೋಟೆಲ್ ಊಟ, ತಿಂಡಿ, ಕಾಫಿ, ಟೀ ಮೇಲಿನ ಬೆಲೆ ಏರಿಕೆ ಮಾಡುವುದು ಅನಿವಾರ್ಯವಾಗಿದೆ. ಇದೇ ಕಾರಣಕ್ಕೆ ಸದ್ಯ ಈ ಬಾರಿಯ ಆಷಾಢ ಮುಗಿದ ಬೆನ್ನಲ್ಲೆ ಸಿಲಿಕಾನ್ ಸಿಟಿ ಹೊಟೇಲ್ ದರ ಏರಿಕೆಯಾಗಲಿದೆ.

    ಯಾವುದಕ್ಕೆ ಎಷ್ಟು ದರ?
    ಐಟಮ್ಸ್                                            ಹಿಂದಿನ ದರ                          ದರ ಏರಿಕೆ ಬಳಿಕ
    ಮಸಾಲೆ ದೋಸೆ                                 50ರೂ.                                55 -60, 70ರೂ.
    ಉದ್ದಿನವಡೆ                                         10. ರೂ.                             12- 15 ರೂ.
    ಪೂರಿ                                                 40 ರೂ.                              45-50 ರೂ.
    ಪೂಳಿಯೊಗರೆ                                     35 ರೂ.                               40-45 ರೂ.
    ಇಡ್ಲಿ ವಡೆ                                            30 ರೂ.                               50 ರೂ.
    ಬಿಸಿ ಬೇಳೆಬಾತ್                                  30 ರೂ.                               35- 40ರೂ.
    ರೈಸ್ ಬಾತ್                                        30 ರೂ.                               35-40 ರೂ.
    ಟೀ, ಕಾಫಿ                                            10. ರೂ.                               12- 15ರೂ.
    ಅನ್ನ ಸಾಂಬಾರ್                                   30 ರೂ.                               35-40 ರೂ.
    ಊಟ                                                 50 ರೂ.                                60- 70 ರೂ.

    ಇನ್ನೂ ಉಳಿದ ಹೋಟೆಲ್‌ಗಳ ದರ ಪರಿಷ್ಕರಣೆ ವಿಚಾರವಾಗಿ ಈಗಾಗಲೇ ಜೂಮ್ ಮೀಟಿಂಗ್‌ಗಳನ್ನು ಮಾಡಲಾಗಿದೆ. ಕೊನೆಯದಾಗಿ ಮತ್ತೊಮ್ಮೆ ಇದೇ ತಿಂಗಳ 25 ರಂದು ಕನಕಪುರ ರೋಡ್‌ನಲ್ಲಿರುವ ಅಡಿಗಾಸ್ ಹೋಟೆಲ್‌ನಲ್ಲಿ ಸಭೆ ಕರೆಯಲಾಗಿದೆ.

    ಒಟ್ಟಾರೆ ಹೋಟೆಲ್ ಮಾಲೀಕರ ಸಂಘ ಅಧಿಕೃತವಾಗಿ ದರ ಹೆಚ್ಚಳ ಮಾಡದೆ ಇದ್ದರೂ ಬೀದಿ ಬದಿ ಹೋಟೆಲ್‌ಗಳು ಮತ್ತು ದರ್ಶಿನಿಗಳಲ್ಲಿ ಈಗಾಗಲೇ ದರ ಏರಿಕೆ ಸದ್ದಿಲ್ಲದೆ ಆಗಿದೆ. ಹೊಟೇಲ್‌ನಲ್ಲಿ ತಿನ್ನುವವರು ಒಮ್ಮೆ ಯೋಚನೆ ಮಾಡುವಂತಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿದ್ಯುತ್‌ ಬಿಲ್‌ ಏರಿಕೆ, ತೊಗರಿ ಬೇಳೆ ದರ ಗಗನಕ್ಕೆ

    ವಿದ್ಯುತ್‌ ಬಿಲ್‌ ಏರಿಕೆ, ತೊಗರಿ ಬೇಳೆ ದರ ಗಗನಕ್ಕೆ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]