Tag: ದರ ಏರಿಕೆ

  • ಮದ್ಯ ಪ್ರಿಯರಿಗೆ ಶಾಕ್ – ಬಿಯರ್ ದರ ಏರಿಕೆ

    ಮದ್ಯ ಪ್ರಿಯರಿಗೆ ಶಾಕ್ – ಬಿಯರ್ ದರ ಏರಿಕೆ

    ಬೆಂಗಳೂರು: ಮದ್ಯ (Alcohol) ಪ್ರಿಯರಿಗೆ ಇದೀಗ ಬೆಲೆ ಏರಿಕೆ (Price Hike) ಬಿಸಿ ಕಾಡುತ್ತಿದೆ. ಕುಡಿಯೋ ಮೊದಲೇ ಬಿಯರ್ (Beer) ಉತ್ಪಾದನಾ ಕಂಪನಿಗಳು ಮದ್ಯ ಪ್ರಿಯರ ಕಿಕ್ ಏರಿಸಿದೆ. ಪ್ರತಿ ಬಿಯರ್ ಮೇಲೂ 10 ರಿಂದ 15 ರೂ. ದರ ಏರಿಕೆಯಾಗಿದೆ.

    ಇತ್ತ ಸರ್ಕಾರ ಸುಂಕ ಏರಿಕೆ ಮಾಡದಿದ್ದರೂ, ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿರೋ ಬಿಯರ್ ಉತ್ಪಾದನಾ ಕಂಪನಿಗಳು ಪ್ರತಿ ವರ್ಷದಂತೆ ಈ ವರ್ಷವೂ ದರ ಏರಿಕೆ ಮಾಡಿದೆ. ಬಿಯರ್ ಉತ್ಪಾದನೆಗೆ ತಗಲುವ ವೆಚ್ಚವನ್ನು ಹೊಂದಾಣಿಕೆ ಮಾಡಿಕೊಳ್ಳಲು ಬಿಯರ್ ದರವನ್ನು ಪ್ರತಿ ಬಾಟಲ್‌ಗೆ ಸುಮಾರು 10 ರೂ.ಗಳಷ್ಟು ಹೆಚ್ಚಳ ಮಾಡಿವೆ.

    ಇದರ ನಡುವೆ ಜುಲೈನ ಹೊಸ ಬಜೆಟ್‌ನಲ್ಲೂ ಕಾಂಗ್ರೆಸ್ ಸರ್ಕಾರ ಅಬಕಾರಿ ಸುಂಕವನ್ನು ಹೆಚ್ಚಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಬೆಸ್ಕಾಂ ಎಡವಟ್ಟು, ಮೀಟರ್ ರಿಡೀಂಗ್‌ಗಿಂತ ಹೆಚ್ಚು ಬಿಲ್ – ಜನರ ಜೇಬಿಗೆ ಕತ್ತರಿ

    ಯಾವ ಬ್ರ್ಯಾಂಡ್ ಎಷ್ಟು ದರ ಏರಿಕೆ?
    ಮದ್ಯ ಹಳೆಯ ದರ – ಹೊಸ ದರ
    ಬಡ್ ವೈಸರ್ 198 – 220 ರೂ.
    ಕಾರ್ಲ್ಸ್ ಬರ್ಗ್ 190 – 220 ರೂ.
    ಬ್ಲಾಕ್ ಫೋಟ್ 135 – 155 ರೂ.
    ಟುಬರ್ಗ್ 140 – 150 ರೂ.
    ಹೇನಿಕೇನ್ 210 – 235 ರೂ.
    ಕೊರೋನಾ 220 – 235 ರೂ.
    ಕಿಂಗ್ ಫಿಶರ್ 160 – 170 ರೂ.
    ಯುಬಿ ಪ್ರೀಮಿಯಂ 125 – 135 ರೂ.
    ಯುಬಿ ಸ್ಟ್ರಾಂಗ್ 130 – 135 ರೂ.
    ಕಿಂಗ್ ಫಿಶರ್ ಅಲ್ಟ್ರಾ 190 – 220 ರೂ. ಇದನ್ನೂ ಓದಿ: ಇಂದು ಬೆಂಗಳೂರಿನಲ್ಲಿ ಬೀಳಲಿದೆ ಮಳೆ – ಭಾನುವಾರ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

  • ವಿದ್ಯುತ್‌ ದರ ಇಳಿಸದಿದ್ರೆ ಪ್ರತಿ ಕೆಜಿ ಅಕ್ಕಿ ಬೆಲೆ 5-10 ರೂ ಏರಿಸುತ್ತೇವೆ: ರೈಸ್‌ ಮಿಲ್‌ ಮಾಲೀಕರ ಎಚ್ಚರಿಕೆ

    ವಿದ್ಯುತ್‌ ದರ ಇಳಿಸದಿದ್ರೆ ಪ್ರತಿ ಕೆಜಿ ಅಕ್ಕಿ ಬೆಲೆ 5-10 ರೂ ಏರಿಸುತ್ತೇವೆ: ರೈಸ್‌ ಮಿಲ್‌ ಮಾಲೀಕರ ಎಚ್ಚರಿಕೆ

    ಬೆಂಗಳೂರು: ಅನ್ನಭಾಗ್ಯ (Anna Bhagya) ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ (Free Ration) ನೀಡಲು ಸರ್ಕಾರ ಹೆಣಗಾಡುತ್ತಿದ್ದರೆ ಇನ್ನೊಂದು ಕಡೆ ಜನ ಸಮಾನ್ಯರಿಗೆ ಅಕ್ಕಿ ದರ ಏರಿಕೆಯ ಆತಂಕ ಶುರುವಾಗಿದೆ. ರಾಜ್ಯದ ರೈಸ್ ಮಿಲ್‍ಗಳಿಗೆ (Rice Mill) ವಿದ್ಯುತ್ ದರ ದುಪ್ಪಟ್ಟು ಬಂದಿದ್ದು, ಇಲ್ಲಿಂದ ರಪ್ತು ಆಗುವ ಅಕ್ಕಿಗೆ ಪ್ರತಿ ಕೆಜಿಗೆ 5-10 ರೂಪಾಯಿ ದರ ಏರಿಕೆ ಮಾಡುವ ಎಚ್ಚರಿಕೆಯನ್ನ ರೈಸ್ ಮಿಲ್ ಅಸೋಸಿಯೇಷನ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

    ರೈಸ್ ಮಿಲ್ ಮಾಲೀಕರ ಸಮಸ್ಯೆಗೆ ಅಲಿಸದೇ, ವಿದ್ಯುತ್ ಬಿಲ್ (Electricity Bill) ಕಡಿಮೆ ಮಾಡದೇ ಇದ್ದರೆ ಪ್ರತಿ ಕ್ವಿಂಟಾಲ್ ಅಕ್ಕಿ ಬೆಲೆಯನ್ನು 400-800 ರೂಪಾಯಿಗಳಷ್ಟು ಹೆಚ್ಚಿಸುವುದಾಗಿ ಎಚ್ಚರಿಸಿದ್ದಾರೆ.   ಇದನ್ನೂ ಓದಿ: 2 ಬಲ್ಬ್ ಇರುವ ಮನೆಗೆ 1 ಲಕ್ಷ ರೂ. ಕರೆಂಟ್ ಬಿಲ್ – ಕಂಗಲಾದ ವೃದ್ಧೆ

    ರಾಜ್ಯದಲ್ಲಿ ಸುಮಾರು 2 ಸಾವಿರ ರೈಸ್ ಮಿಲ್‍ಗಳಿದ್ದು, ವರ್ಷಕ್ಕೆ 30 ರಿಂದ 40 ಮೆಟ್ರಿಕ್ ಟನ್ ನಷ್ಟು ಅಕ್ಕಿಯನ್ನ ಉತ್ಪಾದನೆ ಮಾಡಲಾಗುತ್ತದೆ. ದುಬಾರಿ ವಿದ್ಯುತ್ ಬಿಲ್‍ನಿಂದ ರೈಸ್ ಮಿಲ್ ಮಾಲೀಕರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಮುಂದಿನ ವಾರದೊಳಗೆ 15 ರೂಪಾಯಿ ತನಕ ದರ ಏರಿಕೆಯಾಗುವ ಆತಂಕವೂ ಶುರುವಾಗಿದೆ. ಇದನ್ನೂ ಓದಿ: ಗೃಹಜ್ಯೋತಿ – ಅರ್ಜಿ ಸಲ್ಲಿಕೆಗೆ 5ನೇ ದಿನವೂ ಸರ್ವರ್‌ ಸಮಸ್ಯೆ

    ಕಳೆದ 15 ದಿನಗಳಿಂದ ಹೋಲ್ ಸೆಲ್ ಅಕ್ಕಿಯ ದರದಲ್ಲಿ ಏರಿಕೆ ಕಂಡಿದ್ದು, ಮುಂದಿನ ವಾರದೊಳಗೆ ಮತ್ತಷ್ಟು ದುಬಾರಿಯಾಗಲಿದೆ. ಸರ್ಕಾರ ಅನ್ನಭಾಗ್ಯ ಯೋಜನೆಗೆ ಸಾಕಷ್ಟು ಅಕ್ಕಿಯನ್ನು ಸಂಗ್ರಹಿಸಲು ಹೆಣಗಾಡುತ್ತಿರುವಾಗ, ಅಕ್ಕಿ ದರ ಏರಿಕೆ ಬಿಸಿಯನ್ನ ಗ್ರಾಹಕರು ಅನುಭವಿಸುವ ಆತಂಕದಲ್ಲಿದ್ದು ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ಏರ್‌ಟೆಲ್‌ ಪ್ಯಾಕ್‌ ದರ ಏರಿಕೆ: ಶೀಘ್ರವೇ ಮೊಬೈಲ್‌ ರಿಚಾರ್ಜ್‌ ದುಬಾರಿ

    ಏರ್‌ಟೆಲ್‌ ಪ್ಯಾಕ್‌ ದರ ಏರಿಕೆ: ಶೀಘ್ರವೇ ಮೊಬೈಲ್‌ ರಿಚಾರ್ಜ್‌ ದುಬಾರಿ

    ನವದೆಹಲಿ: ಶೀಘ್ರವೇ ಟೆಲಿಕಾಂ(Telecom) ಕಂಪನಿಗಳು ತಮ್ಮ ಪ್ಯಾಕ್‌ಗಳ ದರಗಳನ್ನು ಏರಿಸುವ ಸಾಧ್ಯತೆಯಿದೆ.

    ಈಗಾಗಲೇ ಏರ್‌ಟೆಲ್‌(Airtel) ಕಂಪನಿ ಎರಡು ಸರ್ಕಲ್‌ನಲ್ಲಿ ಶೇ.57ರಷ್ಟು ದರವನ್ನು ಏರಿಸಿದ್ದು ಉಳಿದ ಕಂಪನಿಗಳು ಏರ್‌ಟೆಲ್‌ ಕ್ರಮವನ್ನು ಅನುಸರಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಶೀಘ್ರವೇ ಭಾರತದ ಎಲ್ಲಾ ಸ್ಮಾರ್ಟ್‌ಫೋನ್‌ಗಳಿಗೆ ಏಕರೂಪದ ಚಾರ್ಜರ್

    ಹರ್ಯಾಣ ಮತ್ತು ಒಡಿಶಾ ಸರ್ಕಲ್‌ನಲ್ಲಿ ಏರ್‌ಟೆಲ್‌ ಕನಿಷ್ಟ ರಿಚಾರ್ಚ್‌ ದರವನ್ನು ಶೇ.57ರಷ್ಟು ಏರಿಕೆ ಮಾಡಿದೆ. ಈ ಮೊದಲು 99 ರೂ. ರಿಚಾರ್ಜ್‌ ಮಾಡಿದರೆ 28 ದಿನಗಳ ವ್ಯಾಲಿಡಿಟಿ, 99 ರೂ. ಟಾಕ್‌ ಟೈಂ ಮತ್ತು 200 ಎಂಬಿ ಡೇಟಾ ಸಿಗುತ್ತಿತ್ತು. ಈಗ ಈ ಪ್ಯಾಕ್‌ ದರವನ್ನು155 ರೂ.ಗೆ ಏರಿಕೆ ಮಾಡಲಾಗಿದೆ.  28 ದಿನಗಳ ವ್ಯಾಲಿಡಿಟಿಯ ಜೊತೆಗೆ ಹೆಚ್ಚುವರಿಯಾಗಿ ಅನ್‌ಲಿಮಿಟೆಡ್‌ ಕಾಲ್‌ ಮತ್ತು 1 ಜಿಬಿ ಡೇಟಾ ಮತ್ತು 300 ಉಚಿತ ಎಸ್‌ಎಂಎಸ್‌ ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • ಮೊದ್ಲು ಜನ್ರಿಗೆ ಆದಾಯ ಬರುವಂತೆ ಮಾಡಿ, ಆಮೇಲೆ ದರ ಏರಿಕೆ ಮಾಡಿ: ಡಿಕೆಶಿ

    ಮೊದ್ಲು ಜನ್ರಿಗೆ ಆದಾಯ ಬರುವಂತೆ ಮಾಡಿ, ಆಮೇಲೆ ದರ ಏರಿಕೆ ಮಾಡಿ: ಡಿಕೆಶಿ

    ಬೆಂಗಳೂರು: ಮೊದಲು ಜನರಿಗೆ ಆದಾಯ ಬರುವಂತೆ ಸರ್ಕಾರ ಮಾಡಿ ಕೊಡಲಿ. ಆಮೇಲೆ ದರ ಏರಿಕೆ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಸರ್ಕಾರ ದರ ಏರಿಕೆ ಮಾಡುತ್ತಿರುವ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಲು, ವಿದ್ಯುತ್, ಸಾರಿಗೆ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಮೊದಲು ಜನರಿಗೆ ಆದಾಯ ಬರುವಂತೆ ಸರ್ಕಾರ ಮಾಡಿ ಕೊಡಲಿ. ಆಮೇಲೆ ದರ ಏರಿಕೆ ಮಾಡಲಿ. ಕೇಸ್‍ಗಳ ಸಂಖ್ಯೆ ಕಡಿಮೆ ಇದ್ದಾಗ, ಲಾಕ್‍ಡೌನ್, ಸೀಲ್‍ಡೌನ್, ಬ್ರೇಕ್‍ಡೌನ್ ಅಂತಾರೆ. ಅವೈಜ್ಞಾನಿಕ ರೂಲ್ಸ್‌ಗಳನ್ನು ಸರ್ಕಾರ ತರುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ನೋಡಬೇಕು. ಆಂಧ್ರ, ತೆಲಂಗಾಣಗಳಲ್ಲಿ ಕರ್ಫ್ಯೂ ಎಲ್ಲ ಮಾಡಿಲ್ಲ. ಇಲ್ಲಿ ಮಾತ್ರ ಯಾಕೆ? ನೈಟ್ ಕರ್ಫ್ಯೂ ಕೂಡಾ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೋವಿಡ್‌ ಯಾರನ್ನೂ ಬಿಟ್ಟಿಲ್ಲ, ದೇವೇಗೌಡರಿಗೆ ಕೊರೊನಾ ತೀವ್ರತೆ ಇಲ್ಲ: ಬೊಮ್ಮಾಯಿ

    MONEY

    ಕಡಿಮೆ ಕೇಸ್ ಇದ್ದಾಗ ಕರ್ಫ್ಯೂ ಮಾಡಿದ್ದರು. ಕೇಸ್ ಹೆಚ್ಚಿದಾಗ ಕರ್ಫ್ಯೂ ತೆಗೆದಿದ್ದಾರೆ. ರೈತರು ನಷ್ಟ ಅನುಭವಿಸುತ್ತಿದ್ದರೂ, ಏನಾದರೂ ಕಾರ್ಯಕ್ರಮ ಕೊಟ್ರಾ? ಅವರ ರಕ್ಷಣೆಗೆ ಯಾಕೆ ಬರಲಿಲ್ಲ? ಸಿಮೆಂಟ್ ಕಬ್ಬಿಣ ರೇಟ್ ಕಡಿಮೆ ಮಾಡುವುದಕ್ಕೆ ಪ್ರಯತ್ನ ಮಾಡಿದ್ರಾ? ವಿದ್ಯುತ್ ಕಂಪನಿಗಳ ಪರಿಸ್ಥಿತಿ ಗೊತ್ತಿದೆ. ಆದರೆ ಜನರನ್ನು ರಕ್ಷಿಸುವ ಕೆಲಸ ಮೊದಲು ಮಾಡಲಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಗೋವಾ ಚುನಾವಣೆ- ಜಗದೀಶ್ ಶೆಟ್ಟರ್ ಪ್ರಚಾರ, ಮತಯಾಚನೆ

    ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದೇವೆ ಎಂಬ ಕಾರಣಕ್ಕೆ ಕರ್ಫ್ಯೂ ಜಾರಿಗೆ ತಂದರು. ಜನರಿಗೆ ಬಹಳ ನಷ್ಟ ಆಗುವ ರೀತಿ ನಡೆದುಕೊಂಡರು. ಸರ್ಕಾರ ಪ್ರಾಕ್ಟಿಕಲ್ ಆಗಿ ಯೋಜನೆ ಜಾರಿ ಮಾಡಲಿ. ಅವೈಜ್ಞಾನಿಕ ರೂಲ್ಸ್ ಬೇಡ. ಲಂಡನ್‍ನಲ್ಲಿ ಎಲ್ಲರನ್ನು ಫ್ರೀ ಬಿಟ್ಟಿಲ್ಲವಾ. ಆಂಧ್ರ, ತೆಲಂಗಾಣದಲ್ಲಿ ಯಾವುದೇ ಕರ್ಫ್ಯೂ ಇಲ್ಲ. ಇಲ್ಲಿ ಯಾಕೆ ಕರ್ಫ್ಯೂ ಜಾರಿ ಮಾಡಿದ್ದರು. ಜನರಿಗೆ ತೊಂದರೆ ಕೊಡುವುದನ್ನು ಮೊದಲು ನಿಲ್ಲಿಸಿ. 50-50 ರೂಲ್ಸ್ ಯಾಕೆ? ಅದರಿಂದ ಎಷ್ಟು ಜನರಿಗೆ ಅನಾನುಕೂಲ ಆಗುತ್ತಿದೆ. ಬಸ್ಸಲ್ಲಿ, ಮೆಟ್ರೋದಲ್ಲಿ, ವಿಮಾನದಲ್ಲಿ ಎಲ್ಲೂ 50-50 ರೂಲ್ಸ್ ಇಲ್ಲ. ದೊಡ್ಡವರಿಗೆ ಒಂದು, ಬಡವರಿಗೆ ಒಂದು ರೂಲ್ಸಾ? ಮೊದಲು ಜನರಿಗೆ ಆದಾಯ ಬರುವಂತೆ ಮಾಡಿ ಬಳಿಕ ದರ ಏರಿಕೆ ಮಾಡಲಿ ಎಂದಿದ್ದಾರೆ.

  • ಗ್ರಾಹಕರಿಗೆ ಮತ್ತೊಮ್ಮೆ ಶಾಕ್ – ಮತ್ತೆ ಎಲ್‍ಪಿಜಿ ಸಿಲಿಂಡರ್ ಬೆಲೆ ಏರಿಕೆ

    ಗ್ರಾಹಕರಿಗೆ ಮತ್ತೊಮ್ಮೆ ಶಾಕ್ – ಮತ್ತೆ ಎಲ್‍ಪಿಜಿ ಸಿಲಿಂಡರ್ ಬೆಲೆ ಏರಿಕೆ

    ನವದೆಹಲಿ : ವಾಣಿಜ್ಯ ಉದ್ದೇಶಗಳಿಗಾಗಿ ಬಳಸುವ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 100.50 ರೂ. ಏರಿಕೆಯಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಕಳೆದ ನವೆಂಬರ್‌ನಲ್ಲಿ 266.50 ರೂಪಾಯಿ ಏರಿಸಿದ್ದ ಸರ್ಕಾರ ಒಂದು ತಿಂಗಳ ಬಳಿಕ ಮತ್ತೆ ನೂರು ರೂಪಾಯಿ ಐವತ್ತು ಪೈಸೆ ಏರಿಸಿದೆ.

    ಇದರಿಂದಾಗಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕರ್ಮಷಿಯಲ್ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆಯಾಗಿದೆ. ಸದ್ಯ ದೆಹಲಿಯಲ್ಲಿ 19-ಕೆಜಿ ವಾಣಿಜ್ಯ ಸಿಲಿಂಡರ್ ದರ 2,101 ರೂ. ಆಗಿದೆ. ಮುಂಬೈನಲ್ಲಿ, 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‍ನ ಬೆಲೆ 1,950 ರಿಂದ 2,051 ರೂ. ಆದರೆ, ಕೋಲ್ಕತ್ತಾದಲ್ಲಿ, ವಾಣಿಜ್ಯ ಎಲ್‍ಪಿಜಿ ದರ 2,177 ರೂ. ಆಗಿದೆ. ಇನ್ನು ಚೆನ್ನೈನಲ್ಲಿ 19 ಕೆಜಿ ಸಿಲಿಂಡರ್ 2,234.50 ಗೆ ಏರಿಕೆಯಾಗಿದೆ. ಇದನ್ನೂ ಓದಿ: ಇಸ್ರೋ ಖಾಸಗೀಕರಣ – ಬೆಂಗಳೂರಿನ ಕಛೇರಿ ಗುಜರಾತ್‍ಗೆ ವರ್ಗಾವಣೆ ಖಂಡಿಸಿ ಪ್ರತಿಭಟನೆ

    ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರೆಸಲಾಗಿದೆ. ದೆಹಲಿಯಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಗೃಹ ಬಳಕೆ ಸಿಲಿಂಡರ್ ಬೆಲೆ ದರ 899.50 ರೂ. ಇದೆ. ಸಬ್ಸಿಡಿ ಗ್ಯಾಸ್ ಸೇರಿದಂತೆ ಎಲ್ಲಾ ವರ್ಗಗಳ ಎಲ್‍ಪಿಜಿ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಅಕ್ಟೋಬರ್ 6 ರಂದು 15 ರೂ.ಗಳಷ್ಟು ಹೆಚ್ಚಿಸಲಾಗಿದೆ. ಅದಕ್ಕೂ ಮೊದಲು, ಅಕ್ಟೋಬರ್ 1 ರಂದು ಸಬ್ಸಿಡಿ ಮತ್ತು ಸಬ್ಸಿಡಿ ರಹಿತ ಎಲ್‍ಪಿಜಿ ದರಗಳನ್ನು 25 ರೂಗಳಷ್ಟು ಹೆಚ್ಚಿಸಲಾಗಿತ್ತು. ಇದನ್ನೂ ಓದಿ: ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಸ್ಯಾಂಪಲ್‌ ಕಳುಹಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ

    ಪ್ರತಿ ಕುಟುಂಬಕ್ಕೆ ಸರ್ಕಾರ ಗೃಹ ಬಳಕೆಯ 12 ಸಿಲಿಂಡರ್‌ಗಳನ್ನು ಸಬ್ಸಿಡಿಯಲ್ಲಿ ನೀಡುತ್ತಿದೆ. ಈಗ ಎಲ್‍ಪಿಜಿ ಗ್ಯಾಸ್ ಗ್ರಾಹಕರಿಗೆ ಪ್ರತಿ ಸಿಲಿಂಡರ್‌ಗೆ 79.26 ರೂ.ಗಳನ್ನು ಸಬ್ಸಿಡಿಯಾಗಿ ನೀಡಲಾಗುತ್ತಿದೆ. ಆದರೆ, ಕೆಲವು ಗ್ರಾಹಕರು 158.52 ಅಥವಾ 237.78 ಸಬ್ಸಿಡಿ ಪಡೆಯುತ್ತಿದ್ದಾರೆ.

  • ಬಿಎಂಟಿಸಿ ಪ್ರಯಾಣ ದರ ಏರಿಕೆ ಸದ್ಯಕ್ಕಿಲ್ಲ: ಸವದಿ

    ಬಿಎಂಟಿಸಿ ಪ್ರಯಾಣ ದರ ಏರಿಕೆ ಸದ್ಯಕ್ಕಿಲ್ಲ: ಸವದಿ

    ಬೆಂಗಳೂರು: ಸದ್ಯಕ್ಕೆ ಬಿಎಂಟಿಸಿ ಪ್ರಯಾಣ ದರ ಏರಿಕೆ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸಾರಿಗೆ ಸಚಿವ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡು ತಿಂಗಳ ಹಿಂದೆ ನಾಲ್ಕೂ ನಿಗಮಗಳು ದರ ಹೆಚ್ಚಳದ ಪ್ರಸ್ತಾವನೆ ಸಲ್ಲಿಸಿತ್ತು. ಆವಾಗ ಬಿಎಂಟಿಸಿ ದರ ಹೆಚ್ಚಳ ಮಾಡಿಲ್ಲವೆಂದು ಶೇ.15 ರಷ್ಟು ದರ ಹೆಚ್ಚಿಸುವಂತೆ ಸಂಸ್ಥೆ ಕೋರಿದೆ. ಆದರೆ ಕೋವಿಡ್ ಪರಿಸ್ಥಿತಿ, ಲಾಕ್ ಡೌನ್ ನಿಂದ ನಾಗರಿಕರಿಗೆ ತುಂಬಾ ತೊಂದರೆಯಾಗಿದೆ. ಸರ್ಕಾರದ ಸಾರಿಗೆ ಬಳಸುವುದು ಬಡ ಮಧ್ಯಮವರ್ಗದ ಜನತೆಯಾದ್ದರಿಂದ, ಸಂಕಷ್ಟದಲ್ಲಿರುವ ಜನರಿಗೆ ಇನ್ನಷ್ಟು ತೊಂದರೆ ಕೊಡುವ ಕೆಲಸ ಸರ್ಕಾರ ಮಾಡುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಾಲಕ್ಕೆ ಶಾಂತಿನಗರ ಟಿಟಿಎಂಸಿ ಅಡಮಾನ – ಪ್ರತಿ ತಿಂಗಳು ಬಿಎಂಟಿಸಿ ಪಾವತಿಸುತ್ತಿದೆ 1.04 ಕೋಟಿ ಬಡ್ಡಿ

    ಲಾಕ್‍ಡೌನ್ ಮುಗಿದ ಬಳಿಕ ಹಂತ ಹಂತವಾಗಿ ಬಸ್ ಕಾರ್ಯಾಚರಣೆ ಆರಂಭಿಸಲಾಗುವುದು. ಸಂಸ್ಥೆಯ ಸಿಬ್ಬಂದಿಗೆ ಲಸಿಕೆ ಕೊಡುವ ಕಾರ್ಯ ಆರಂಭವಾಗಿದೆ. ಎರಡೂ ಡೋಸ್ ಪಡೆದವರನ್ನು ಮಾತ್ರ ಕರ್ತವ್ಯಕ್ಕೆ ಬಳಸಲಾಗುವುದು ಎಂದು ಹೇಳಿದರು.

    ಲಾಕ್‍ಡೌನ್‍ನಿಂದ ಸಂಸ್ಥೆ ಸಾಕಷ್ಟು ನಷ್ಟ ಅನುಭವಿಸಿದೆ, ಹಂತ ಹಂತವಾಗಿ ಸರ್ಕಾರದ ನೆರವು ಪಡೆದು ಸಾರಿಗೆ ಸಂಸ್ಥೆಯನ್ನು ಗಟ್ಟಿಗೊಳಿಸುವ ಕೆಲಸ ಮಾಡಲಾಗುವುದು ಎಂದು ಲಕ್ಷ್ಮಣ ಸವದಿ ತಿಳಿಸಿದರು.

  • ಇನ್ಮುಂದೆ ಹೋಟೆಲ್ ತಿಂಡಿ ದುಬಾರಿ

    ಇನ್ಮುಂದೆ ಹೋಟೆಲ್ ತಿಂಡಿ ದುಬಾರಿ

    ಬೆಂಗಳೂರು: ಕಳೆದ ಎರಡು ತಿಂಗಳುಗಳಿಂದ ಈರುಳ್ಳಿ, ತರಕಾರಿ, ದವಸ-ಧಾನ್ಯಗಳು, ಗ್ಯಾಸ್, ಹಾಲಿನ ದರ ಏರಿಕೆಯಾಗಿತ್ತು. ಆದರೆ ಈಗ ಹೋಟೆಲ್ ಊಟ-ತಿಂಡಿ ದರ ಕೂಡ ಸಹ ದುಬಾರಿಯಾಗಿದ್ದು, ಗ್ರಾಹಕರಿಗೆ ಹೋಟೆಲ್ ಮಾಲೀಕರು ಶಾಕ್ ನೀಡಿದ್ದಾರೆ.

    ಕೆಲವೇ ದಿನಗಳಲ್ಲಿ ಹೋಟೆಲ್ ಊಟ-ತಿಂಡಿಗಳ ಬೆಲೆಗಳಲ್ಲಿ ಶೇ. 5 ರಿಂದ 10ರಷ್ಟು ಹೆಚ್ಚಳ ಮಾಡಲು ಬೃಹತ್ ಬೆಂಗಳೂರು ಹೋಟೆಲ್ ಸಂಘ ನಿರ್ಧರಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಮೊದಲೇ ತತ್ತರಿಸಿರುವ ರಾಜ್ಯದ ಜನತೆಗೆ ಇದು ಬರೆಯೆಳೆದಂತಾಗಿದೆ. ಹಾಲು, ಎಣ್ಣೆ, ಮೊಸರು, ಬೆಳೆ ಕಾಳುಗಳ ಬೆಲೆ ಏರಿಕೆಯಾಗಿರುವುದರಿಂದ ಹೋಟೆಲ್ ಊಟ-ತಿಂಡಿಗಳ ಬೆಲೆ ಏರಿಕೆ ಅನಿವಾರ್ಯ ಎಂದು ಬೃಹತ್ ಬೆಂಗಳೂರು ಹೋಟೆಲ್ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಹೇಳಿದ್ದಾರೆ.

    ಬೆಂಗಳೂರಿನಲ್ಲಿ 17,000 ಹೋಟೆಲ್‍ಗಳಿವೆ. ಇವುಗಳಲ್ಲಿ ಸಣ್ಣ, ಮಧ್ಯಮ ಹಾಗೂ ದೊಡ್ಡ ಮಟ್ಟದ ಮೂರು ರೀತಿಯ ಹೋಟೆಲ್‍ಗಳು ಸೇರಿದೆ. ಸಣ್ಣ ಮತ್ತು ಮಾಧ್ಯಮ ಗಾತ್ರದ ಹೋಟೆಲ್‍ಗಳಲ್ಲಿ ಇಂದಿನಿಂದಲೇ ಕಾಫಿ, ಟೀ ದರ ಹೆಚ್ಚಾಗಲಿದೆ. ಕೇವಲ ಬೆಂಗಳೂರು ಮಾತ್ರವಲ್ಲದೇ ರಾಜ್ಯಾದ್ಯಂತ ಈ ಹೆಚ್ಚಳ ಜಾರಿಗೆ ಬರಲಿದೆಯಂತೆ. ಈ ಬಗ್ಗೆ ಗ್ರಾಹಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

  • ದೇಶದ ಏಳಿಗೆಗಾಗಿ ಜನ ಎಲ್‍ಪಿಜಿ ದರ ಏರಿಕೆ ಸ್ವೀಕರಿಸಬೇಕು: ಅಶ್ವಥ್ ನಾರಾಯಣ್

    ದೇಶದ ಏಳಿಗೆಗಾಗಿ ಜನ ಎಲ್‍ಪಿಜಿ ದರ ಏರಿಕೆ ಸ್ವೀಕರಿಸಬೇಕು: ಅಶ್ವಥ್ ನಾರಾಯಣ್

    ಚಿಕ್ಕಬಳ್ಳಾಪುರ: ದೇಶದ ಏಳಿಗೆಗಾಗಿ ಜನರು ಎಲ್‍ಪಿಜಿ ದರ ಏರಿಕೆ ಸ್ವೀಕರಿಸಬೇಕು ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ.

    ಹೊಸ ವರ್ಷದ ಅಂಗವಾಗಿ ಅಶ್ವಥ್ ನಾರಾಯಣ್ ಅವರು ಕುಟುಂಬ ಸಮೇತರಾಗಿ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದ ಪುರಾತನ ಪ್ರಸಿದ್ಧ ಶ್ರೀ ಭೋಗನಂದೀಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಕೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರಿಗೆ ಹೊಸ ವರ್ಷದ ಶುಭಾಶಯ ಕೋರಿದರು.

    ಈ ವೇಳೆ ಸಬ್ಸಿಡಿ ರಹಿತ ಎಲ್‍ಪಿಜಿ ದರ ಏರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆ ಆದ ಕಾರಣ ದೇಶದಲ್ಲೂ ಎಲ್‍ಪಿಜಿ ದರ ಏರಿಕೆ ಆಗಿದೆ. ದರ ಏರಿಕೆ ಆದಾಗ ವಿರೋಧ ಇದ್ದೇ ಇರುತ್ತೆ. ಆದರೆ ದೇಶದ ಏಳಿಗೆಗಾಗಿ ಗ್ರಾಹಕರು ಎಲ್‍ಪಿಜಿ ದರ ಏರಿಕೆ ಸ್ವೀಕರಿಸಬೇಕು ಎಂದು ತಿಳಿಸಿದರು.

    ಇದೇ ವೇಳೆ ನೂತನ ಬಿಜೆಪಿ ಶಾಸಕರಿಗೆ ಮಂತ್ರಿ ಸ್ಥಾನ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನೂತನ ಬಿಜೆಪಿ ಶಾಸಕರಿಗೆ ಮಂತ್ರಿ ಸ್ಥಾನ ಕೊಡೋದು ಬಹಿರಂಗವಾಗಿಯೇ ಘೋಷಣೆ ಮಾಡಿರುವಂತಹ ವಿಚಾರ. ಹೈಕಮಾಂಡ್ ಗಮನಕ್ಕೆ ತಂದು ಈ ತಿಂಗಳೊಳಗೆ ಮಂತ್ರಿ ಸ್ಥಾನ ಕೊಡುವ ಕೆಲಸ ಆಗಲಿದೆ. ಇದರಲ್ಲಿ ಯಾವುದೇ ವಿಳಂಬವಿಲ್ಲ ಎಂದರು.

  • ಮತ್ತೆ ಏರಿಕೆಯಾಯ್ತು ನುಗ್ಗೆಕಾಯಿ ದರ – ಕೆಜಿಗೆ 500 ರಿಂದ 600 ರೂ.

    ಮತ್ತೆ ಏರಿಕೆಯಾಯ್ತು ನುಗ್ಗೆಕಾಯಿ ದರ – ಕೆಜಿಗೆ 500 ರಿಂದ 600 ರೂ.

    ಬೆಂಗಳೂರು: ಇಷ್ಟು ದಿನ ಈರುಳ್ಳಿ ಬೆಲೆಯಿಂದ ಕಂಗಾಲಾಗಿದ್ದ ಗ್ರಾಹಕರು ಈಗ ನುಗ್ಗುಕಾಯಿ ಬೆಲೆ ಕೇಳಿ ಶಾಕ್ ಆಗಿದ್ದಾರೆ.

    ಏಕಾಏಕಿ ನಗರದಲ್ಲಿ ನುಗ್ಗೆಕಾಯಿ ದರ ಹೆಚ್ಚಳವಾಗಿದೆ. ಒಂದು ಕೆಜಿ ನುಗ್ಗೆಕಾಯಿಗೆ ಬರೋಬ್ಬರಿ 500 ರಿಂದ 600 ರೂಪಾಯಿ ತನಕ ಏರಿಕೆಯಾಗಿದೆ. ನುಗ್ಗೆಕಾಯಿ ದರ ಏರಿಕೆಯಿಂದ ಸಾಂಬರ್ ಗೆ ನುಗ್ಗೇಕಾಯಿ ಇಲ್ಲದೆ ಹೇಗೆ ಅಡುಗೆ ಮಾಡೋದು ಅಂತ ಗ್ರಾಹಕರು ತಲೆ ಬಿಸಿ ಮಾಡಿಕೊಂಡಿದ್ದಾರೆ.

    ರಾಜ್ಯಕ್ಕೆ ಮಹಾರಾಷ್ಟ್ರ, ತಮಿಳುನಾಡು, ಆಂಧ್ರ ಪ್ರದೇಶದಿಂದ ನುಗ್ಗೆಕಾಯಿಯನ್ನ ಅಮದು ಮಾಡಿಕೊಳ್ಳಲಾಗ್ತಿತ್ತು. ಆದರೆ ಈ ಬಾರಿ ನೆರೆ ರಾಜ್ಯಗಳಲ್ಲಿ ಅತಿ ಹೆಚ್ಚು ಮಳೆಯಾಗಿರುವ ಹಿನ್ನಲೆ ನುಗ್ಗೆ ಮರಗಳು ಬಿದ್ದು ಹೋಗಿವೆ. ಹೀಗಾಗಿ ಬೇಡಿಕೆಗೆ ತಕ್ಕಂತೆ ನುಗ್ಗೇಕಾಯಿ ಪೂರೈಕೆ ಆಗುತ್ತಿಲ್ಲ.

    ಇದರ ಪರಿಣಾಮ ನುಗ್ಗೆಕಾಯಿ ದರ ಏರಿಕೆಯಾಗಿದೆ. ಇತ್ತೀಚೆಗೆ ಈರುಳ್ಳಿ ಬೆಲೆ ಗಗನಕ್ಕೆ ಏರಿ ಗ್ರಾಹಕರ ಕಣ್ಣಲ್ಲಿ ನೀರು ತರಿಸಿತ್ತು. ಈಗ ಗ್ರಾಹಕರಿಗೆ ನುಗ್ಗೆಕಾಯಿ ಬೆಲೆ ಕೇಳಿ ಶಾಕ್ ಆಗಿದೆ. ಹೀಗೆ ದಿನ ಕಳೆದಂತೆ ಒಂದೊಂದೆ ತರಕಾರಿಗಳ ಬೆಲೆ ಏರಿಕೆಯಾದರೆ ಹೇಗಪ್ಪಾ ಅಡುಗೆ ಮಾಡೋದು ಎಂದು ಗ್ರಾಹಕರು ತಲೆ ಕೆಡಿಸಿಕೊಂಡಿದ್ದಾರೆ.

  • ಪೆಟ್ರೋಲ್, ವಿದ್ಯುತ್ ಆಯ್ತು ಶೀಘ್ರವೇ ಬಸ್ ಪ್ರಯಾಣ ದರ ಏರಿಕೆ?

    ಪೆಟ್ರೋಲ್, ವಿದ್ಯುತ್ ಆಯ್ತು ಶೀಘ್ರವೇ ಬಸ್ ಪ್ರಯಾಣ ದರ ಏರಿಕೆ?

    ಬೆಂಗಳೂರು: ಬಸ್ ಪ್ರಯಾಣದ ದರವನ್ನು ಹೆಚ್ಚಿಸುವ ಸುಳಿವನ್ನು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೊರ ಹಾಕಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಪೆಟ್ರೋಲ್ ಹಾಗೂ ಡೀಸೆಲ್ ತೆರಿಗೆ ಹೆಚ್ಚಳದಿಂದ ಸಾರಿಗೆ ಇಲಾಖೆಯ ನಷ್ಟದ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಇಲಾಖೆಗೆ ಕನಿಷ್ಟ 1 ಸಾವಿರ ಕೋಟಿ ರೂ. ಹೆಚ್ಚುವರಿ ಅನುದಾನ ಕೇಳಿದ್ದೇವೆ. ಇದರೊಂದಿಗೆ 20%ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಎಲ್ಲ ಸಾರಿಗೆ ನಿಗಮಗಳೂ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

    ಬಸ್ ಪ್ರಯಾಣ ದರವನ್ನು ಏರಿಕೆ ಮಾಡಬೇಕು ಎಂದು ಈ ಹಿಂದೆ ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದವು. ಈ ನಿರ್ಧಾರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೈಗೆ ಒಪ್ಪಿಸಲಾಗಿದೆ ಎಂದರು.

    ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿಚಾರವಾಗಿ ಮಾತನಾಡಿದ ಸಚಿವರು, ಉಚಿತ ಬಸ್ ಪಾಸ್ ಗೆ 2 ಸಾವಿರ ಕೋಟಿ ರೂ. ಖರ್ಚು ಬರಲಿದೆ. ಹೀಗಾಗಿ ಶಿಕ್ಷಣ ಸಚಿವ ಎಂ.ಮಹೇಶ್ ಶಿಕ್ಷಣ ಇಲಾಖೆಯಿಂದ 25% ಅನುದಾನ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಇದಕ್ಕೆ ಸಾರಿಗೆ ಇಲಾಖೆಯಿಂದ 25% ರಷ್ಟು ಅನುದಾನ ಕೂಡಿಸುತ್ತೇವೆ. ಆದರೆ ಉಳಿದ 50%ರಷ್ಟು ಅನುದಾನವನ್ನು ಸರ್ಕಾರ ಕೊಡಲಿದೆ. ಹಿಂದಿನ ಸರ್ಕಾರವು ಇಷ್ಟೇ ನೆರವು ಕೊಡುತ್ತಿತ್ತು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಯಲ್ಲಿದ್ದಾರೆ. ರಾಜ್ಯಕ್ಕೆ ಮರಳಿದ ಬಳಿಕ ಉಚಿತ ಬಸ್ ಪಾಸ್ ಕುರಿತು ಚರ್ಚೆ ನಡೆಸಲಾಗುತ್ತದೆ. ಒಂದು ವಾರದಲ್ಲಿ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಾರಿಗೆ ಸೆಸ್ ಸಂಗ್ರಹಿಸುವಂತೆ ಬಿಬಿಎಂಪಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಮಹಾನಗರ ಪಾಲಿಕೆ ಈಗಾಗಲೇ ಭಿಕ್ಷುಕರ ಕರ ಸೇರಿದಂತೆ ವಿವಿಧ ಸೆಸ್‍ಗಳನ್ಮು ವಿಧಿಸಲಾಗುತ್ತಿದೆ. ಅದೇ ರೀತಿ ಸಾರಿಗೆ ಸೆಸ್ ಸಂಗ್ರಹಿಸಿ ಕೊಟ್ಟರೆ ನಗರ ಸಾರಿಗೆಗೆ ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ:  ಬೆಂಗಳೂರಿಗರ ಮೇಲೆ ಟ್ರಾನ್ಸ್ ಪೋರ್ಟ್ ಸೆಸ್: ಸಾರಿಗೆ ಸಚಿವರಿಂದ ಶಾಕ್!

    ಮನಸ್ಸಿಗೆ ದುಃಖ ಆದಾಗ ಅತ್ತು ಬಿಡಬೇಕು. ಆಗಲೇ ಮನಸ್ಸಿಗೆ ಸಮಾಧಾನವಾಗುತ್ತದೆ. ಕುಮಾರಸ್ವಾಮಿ ಭಾವನಾತ್ಮಕ ವ್ಯಕ್ತಿ. ಹೀಗಾಗಿ ಅವರು ಅಳುವಿನ ಮೂಲಕ ತಮ್ಮ ದುಃಖ ಶಮನ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಯಾರ ಮೇಲೂ ಆರೋಪ ಮಾಡಿಕೊಂಡಿಲ್ಲ. ಅಲ್ಲದೆ ತಮಗೆ ನೋವು ಕೊಟ್ಟಿದ್ದಾರೆ ಎಂದು ಹೇಳಿಲ್ಲ ಎಂದು ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದರು.

    ನಿಗಮಗಳ ಬೇಡಿಕೆ ಏನು:
    ಸಾರಿಗೆ ಇಲಾಖೆ ಮೂರುವರೆ ವರ್ಷಗಳ ಹಿಂದೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡಿತ್ತು. ಈಗ ಸಾರಿಗೆ ಇಲಾಖೆ 65 ರೂ. ಗೆ ಹೋಲ್ ಸೇಲ್ ದರದಲ್ಲಿ ಪ್ರತಿ ಲೀಟರ್ ಡೀಸೆಲ್ ಪಡೆಯುತ್ತಿದೆ. ಆಗುತ್ತಿರುವ ನಷ್ಟವನ್ನು ಸರಿದೂಗಿಸಲು 8% ದಿಂದ 10% ದರ ಏರಿಸಲು ಸಾರಿಗೆ ಇಲಾಖೆ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ.

    ಕಳೆದ ಕೆಲ ತಿಂಗಳಿಂದ ಡೀಸೆಲ್ ದರ ಹೆಚ್ಚಾಗುತ್ತಿದೆ. ಏಪ್ರಿಲ್ ನಲ್ಲಿ ಲೀಟರ್ ಗೆ 61.02 ರೂ. ಇತ್ತು. ಆದರೆ ಮೇ ತಿಂಗಳಲ್ಲಿ 70.25 ರೂ. ಗೆ ಏರಿಕೆ ಆಗಿದೆ. ಇದರ ಜೊತೆ ಬಜೆಟ್‍ನಲ್ಲಿ ತೈಲ ದರದ ಮೇಲೆ ವಿಧಿಸಲಾಗುತ್ತಿದ್ದ ಸೆಸ್ ದರವನ್ನು 30% ದಿಂದ 32%ಕ್ಕೆ ಏರಿಕೆ ಮಾಡಲಾಗಿದೆ. ಹೀಗಾಗಿ ಶನಿವಾರದಿಂದ ಪೆಟ್ರೋಲ್ ಪ್ರತಿ ಲೀಟರ್ ಗೆ 1.14 ರೂ. ಮತ್ತು ಡೀಸೆಲ್ ಲೀಟರ್ ಗೆ 1.12 ರೂ. ದುಬಾರಿಯಾಗಿದೆ.

    ಡೀಸೆಲ್ ಏರಿಕೆಯಿಂದ ದಿನಕ್ಕೆ ಲಕ್ಷಾಂತರ ಲೀಟರ್ ಡೀಸೆಲ್ ಉಪಯೋಗಿಸುವ ಸಾರಿಗೆ ನಿಗಮಗಳು ಈಗ ಡೀಸೆಲ್ ಗಾಗಿ ಅಧಿಕ ಹಣ ಪಾವತಿಸುತ್ತಿದೆ. ಮೊದಲೇ ಸಾರಿಗೆ ನಿಮಗ ನಷ್ಟದಲ್ಲಿರುವುದರಿಂದ ಈಗ ಟಿಕೆಟ್ ಬೆಲೆ ಏರಿಕೆ ಅನಿವಾರ್ಯವಾಗಿದೆ. ಅಷ್ಟೇ ಅಲ್ಲದೆ ತೈಲ ಕಂಪೆನಿಗಳು ಸಗಟು ಡೀಸೆಲ್ ಬೆರೆಯನ್ನು ಏರಿಕೆ ಮಾಡಿವೆ. ಆದ್ದರಿಂದ ಸಾರಿಗೆ ನಿಗಮಗಳಿಗೆ ಪ್ರತಿದಿನ 30.97 ಲಕ್ಷ ರೂ. ಅಧಿಕವಾಗಿ ಆರ್ಥಿಕ ಹೊರೆ ಬೀಳುತ್ತಿದ್ದು, ತಿಂಗಳಿಗೆ 9.29 ಕೋಟಿ ರೂ. ಅಧಿಕ ವೆಚ್ಚವಾಗುತ್ತಿದೆ ಎಂದು ವರದಿಯಾಗಿತ್ತು.