Tag: ದರ ಕಡಿತ

  • ರೈತರಿಗೆ ಕೋಚಿಮುಲ್ ಬಿಗ್ ಶಾಕ್ – ಹಾಲು ಉತ್ಪಾದಕರಿಗೆ 2 ರೂ. ಕಡಿತ

    ರೈತರಿಗೆ ಕೋಚಿಮುಲ್ ಬಿಗ್ ಶಾಕ್ – ಹಾಲು ಉತ್ಪಾದಕರಿಗೆ 2 ರೂ. ಕಡಿತ

    – ಇಂದಿನಿಂದಲೇ ಜಾರಿ, ಹಾಲು ಉತ್ಪಾದಕರು ಕಂಗಾಲು

    ಕೋಲಾರ: ಕೆಎಂಎಫ್ (KMF) ಹಾಲಿನ ದರ (Milk Price) ಏರಿಕೆ ಮಾಡಿದ ಬೆನ್ನಲ್ಲೇ ರೈತರಿಗೆ (Farmers) ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ (KOCHIMUL) ರೈತರಿಗೆ ಬಿಗ್ ಶಾಕ್ ನೀಡಿದೆ.

    ಈಗಷ್ಟೇ ಮುಂಗಾರು ಆರಂಭವಾಗಿ ರೈತರು ನಿಟ್ಟುಸಿರು ಬಿಡುತ್ತಿದ್ದ ವೇಳೆ ಕೋಚಿಮುಲ್ ಆಡಳಿತ ಮಂಡಳಿ ದಿಢೀರ್‌ 2 ರೂ. ಕಡಿಮೆ ಮಾಡಿದ್ದರಿಂದ ರೈತರು ಕಂಗಾಲಾಗಿದ್ದಾರೆ. ಪ್ರತಿ ಲೀಟರ್ ಹಾಲಿನ ಮೇಲೆ 2 ರೂ. ಕಡಿತ ಮಾಡಿದ್ದು, ಇಂದು ಬೆಳಿಗ್ಗೆಯಿಂದ ಜಾರಿಗೆ ಬರುವಂತೆ ಕೋಚಿಮುಲ್ ಆದೇಶ ಆದೇಶ ಹೊರಡಿಸಿದೆ.

    ಈ ಮೊದಲು ಪ್ರತಿ ಲೀಟರ್‌ ಹಾಲಿಗೆ 33.40 ರೂ. ನೀಡಲಾಗುತ್ತಿತ್ತು. ಕೋಚಿಮುಲ್‌ ಆದೇಶದಿಂದ ಉತ್ಪಾದಕರಿಗೆ ಪರಿಷ್ಕೃತ ದರ ಲೀಟರ್ ಗೆ 31.40 ರೂ. ಸಿಗಲಿದೆ.

    ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್‌ಗೆ 9.65 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿತ್ತು. ಆದರೆ ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್‌ಗೆ 12.37 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿದೆ. ಇದನ್ನೂ ಓದಿ: Champions: ವಿಶ್ವ ಚಾಂಪಿಯನ್ಸ್‌ಗೆ ಬಂಪರ್‌ ಗಿಫ್ಟ್‌ – 125 ಕೋಟಿ ರೂ. ಬಹುಮಾನ ಚೆಕ್‌ ವಿತರಣೆ

    ಕೋಲಾರ – ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಂದ ಎರಡೂವರೆ ಲಕ್ಷ ಲೀಟರ್‌ ಹಾಲು ಹೆಚ್ಚಳವಾದ ಕಾರಣ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ.

    ಈಗಾಗಲೇ ಲೀಟರ್‌ಗೆ 2 ರೂ. ಹೆಚ್ಚಳ ಮಾಡಿ ಕೆಎಂಎಫ್‌ ಆದೇಶ ಹೊರಡಿಸಿದೆ. ಈಗ ರೈತರಿಗೆ 2 ರೂ. ಕಡಿತ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.

     

  • ಗೃಹಬಳಕೆಯ ಬೆನ್ನಲ್ಲೇ ವಾಣಿಜ್ಯ ಬಳಕೆಯ LPG ಬೆಲೆ 158 ರೂ. ಇಳಿಕೆ

    ಗೃಹಬಳಕೆಯ ಬೆನ್ನಲ್ಲೇ ವಾಣಿಜ್ಯ ಬಳಕೆಯ LPG ಬೆಲೆ 158 ರೂ. ಇಳಿಕೆ

    ನವದೆಹಲಿ: ಗೃಹ ಬಳಕೆಯ 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ (LPG Cylinder) 200 ರೂ. ಸಬ್ಸಿಡಿ ಘೋಷಣೆ ಮಾಡಿದ ಬೆನ್ನಲ್ಲೇ ಈಗ ವಾಣಿಜ್ಯ ಬಳಕೆಯ (Commercial LPG) ಸಿಲಿಂಡರ್‌ ದರ ಕಡಿತಗೊಂಡಿದೆ.

    ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (OMCs) 19-ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 158 ರೂ. ಕಡಿತಗೊಳಿಸಿವೆ. ಹೊಸ ಬೆಲೆಗಳು ಇಂದಿನಿಂದಲೇ ಜಾರಿಗೆ ಬರಲಿವೆ. ವಾಣಿಜ್ಯ ಮತ್ತು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಪರಿಷ್ಕರಣೆಗಳು ಪ್ರತಿ ತಿಂಗಳ ಮೊದಲ ದಿನದಂದು ನಡೆಯುತ್ತವೆ.

    ಈ ಹಿಂದೆ ರಕ್ಷಾ ಬಂಧನದ ಮುನ್ನಾದಿನದಂದು ದೇಶದ ಮಹಿಳೆಯರಿಗೆ ಉಡುಗೊರೆಯಾಗಿ ಕೇಂದ್ರ ಸರ್ಕಾರವು ಗೃಹ ಬಳಕೆಯ ಎಲ್‌ಪಿಜಿಗೆ 200 ರೂ. ಸಬ್ಸಿಡಿ (Subsidy) ಘೋಷಣೆ ಮಾಡಿತ್ತು. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್‍ನ್ಯೂಸ್- ಇಂದಿನಿಂದ ಹೆಚ್ಚುವರಿ ಸರ್ವಿಸ್

     

    ಆಗಸ್ಟ್‌ನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಒಎಂಸಿಗಳು 99.75 ರೂ. ರಷ್ಟು ಕಡಿತಗೊಳಿಸಿದ್ದವು. ಜುಲೈನಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ತಲಾ 7 ರೂ.ಗಳಷ್ಟು ಹೆಚ್ಚಿಸಲಾಗಿತ್ತು.

    ಈ ಏರಿಕೆಗೆ ಮೊದಲು ಈ ವರ್ಷದ ಮೇ ಮತ್ತು ಜೂನ್‌ನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳಿಗೆ ಸತತ ಎರಡು ಬಾರಿ ಕಡಿತ ಮಾಡಲಾಗಿತ್ತು. ಮೇ ತಿಂಗಳಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 172 ರೂ. ಕಡಿತಗೊಂಡಿದ್ದರೆ ಜೂನ್‌ನಲ್ಲಿ 83 ರೂ. ಕಡಿತಗೊಂಡಿದೆ.

    ಬೆಂಗಳೂರಿನಲ್ಲಿ 19 ಕೆಜೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 1,768 ರೂ. ಇದ್ದರೆ ದೆಹಲಿಯಲ್ಲಿ 1,680 ರೂ. ಇತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಚಿಮುಲ್‍ನಿಂದ ಹಾಲಿನ ದರ 4 ರೂ. ಕಡಿತ ಖಂಡಿಸಿ ರೈತರ ಪ್ರತಿಭಟನೆ

    ಕೋಚಿಮುಲ್‍ನಿಂದ ಹಾಲಿನ ದರ 4 ರೂ. ಕಡಿತ ಖಂಡಿಸಿ ರೈತರ ಪ್ರತಿಭಟನೆ

    ಚಿಕ್ಕಬಳ್ಳಾಪುರ: ಕೊರೊನಾ ಸಂಕಷ್ಟದ ಸಮಯದಲ್ಲಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದಿಂದ ಹಾಲಿನ ದರ 4 ರೂಪಾಯಿ ಕಡಿತ ಮಾಡಿರೋದನ್ನ ಖಂಡಿಸಿ, ಚಿಕ್ಕಬಳ್ಳಾಪುರ ತಾಲೂಕು ನಂದಿ ಕ್ರಾಸ್ ಬಳಿಯ ಮೆಗಾಡೈರಿ ಬಳಿ ರೈತರು ಪ್ರತಿಭಟನೆ ನಡೆಸಿದರು.

    ಇಷ್ಟು ದಿನ ತಲಾ ಒಂದು ಲೀಟರ್ ಗೆ 28 ರೂಪಾಯಿ ಕೊಡುತ್ತಿದ್ದು, ಈಗ 4 ರೂಪಾಯಿ ಕಡಿತಗೊಳಿಸಿದ್ದು, ಸದ್ಯ ರೈತರಿಗೆ ತಲಾ ಒಂದು ಲೀಟರ್ ಗೆ 24 ರೂಪಾಯಿ ಕೊಡಲಾಗುತ್ತಿದೆ. ಜುಲೈ 23 ರಿಂದ ನೂತನ ಪರಿಷ್ಕೃತ ದರ ಅನ್ವಯವಾಗಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಹಾಲಿನ ದರ ಕಡಿತಗೊಳಿಸಿರೋದು ಹೈನುಗಾರರಿಗೆ ಬರೆ ಎಳೆದಂತಾಗಿದೆ.

    ಪ್ರತಿ ದಿನ ಜಿಲ್ಲೆಯಲ್ಲಿ ಸರಿಸಮಾರು 10 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಹೈನುಗಾರಿಕೆಯನ್ನೇ ನಂಬಿ ಜೀವನ ನಡೆಸುತ್ತಿದ್ದ ಜಿಲ್ಲೆಯ ರೈತರಿಗೆ ದರ ಕಡಿತ ಸಮಸ್ಯೆಗಳನ್ನ ತಂದೊಡ್ಡಿದೆ. ಕೋವಿಡ್-19 ನಿಂದ ಹಾಲು ಹಾಗೂ ಹಾಲಿನ ಉತ್ಪನ್ನಗಳ ಮಾರಾಟ ಕುಸಿತಗೊಂಡಿದ್ದು, ಇದರಿಂದ ಹಾಲಿನ ದರ ಕಡಿತಗೊಳಿಸಲಾಗಿದೆ ಎನ್ನಲಾಗಿದೆ. ಆದರೆ ಒಕ್ಕೂಟದ ಈ ತೀರ್ಮಾನದ ವಿರುದ್ಧ ಆಕ್ರೋಶ ಹೊರಹಾಕಿರುವ ರೈತರು ಮೆಗಾ ಡೈರಿ ಎದುರು ಧರಣಿ ನಡೆಸಿ, ಸಾಂಕೇತಿಕವಾಗಿ ಹಾಲು ಕರೆಯುವ ಮೂಲಕ ಪ್ರತಿಭಟನೆ ನಡೆಸಿದರು.