Tag: ದಲಿತ ಸಂಘಟನೆ

  • ಚಿಂತಾಮಣಿಯಲ್ಲಿ ವಿವಾದಿತ ಅಂಬೇಡ್ಕರ್ ಪ್ರತಿಮೆ ತೆರವು ವಿಚಾರ – ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

    ಚಿಂತಾಮಣಿಯಲ್ಲಿ ವಿವಾದಿತ ಅಂಬೇಡ್ಕರ್ ಪ್ರತಿಮೆ ತೆರವು ವಿಚಾರ – ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

    ಚಿಕ್ಕಬಳ್ಳಾಪುರ: ವಿವಾದಿತ ಅಂಬೇಡ್ಕರ್ ಪ್ರತಿಮೆ ತೆರವು ಖಂಡಿಸಿ ದಲಿತ ಸಂಘಟನೆಗಳು ಕರೆ ನೀಡಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಅಂದಹಾಗೆ ಚಿಂತಾಮಣಿ ನಗರದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಕಳೆದ 8 ತಿಂಗಳ ಹಿಂದೆ ಅಂಬೇಡ್ಕರ್ ಪ್ರತಿಮೆಯನ್ನ ರಾತ್ರೋರಾತ್ರಿ ಸ್ಥಾಪನೆ ಮಾಡಲಾಗಿತ್ತು. ಇದು ಚಿಂತಾಮಣಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ರಾಜಕೀಯ ಪ್ರತಿಷ್ಠೆಯಾಗಿ ವಿವಾದದ ರೂಪ ಪಡೆದುಕೊಂಡಿತ್ತು. ಇದನ್ನೂ ಓದಿ: ಸೂರ್ಯ ನಟನೆಯ ಸಿನಿಮಾದಲ್ಲಿ ವಿಜಯ್ ದೇವರಕೊಂಡ?

    ಈ ಪ್ರತಿಮೆಯನ್ನ ತಾಲೂಕು ಆಡಳಿತ ನ್ಯಾಯಾಲಯದ ನಿದೇರ್ಶನದ ಮೇರೆಗೆ ತೆರವು ಮಾಡಿದ್ದು ಇದನ್ನ ಖಂಡಿಸಿ ದಲಿತ ಸಂಘಟನೆಗಳು ಚಿಂತಾಮಣಿ ಬಂದ್‌ಗೆ ಕರೆ ನೀಡಿದ್ದವು. ಬಂದ್ ಹಿನ್ನೆಲೆಯಲ್ಲಿ ದಲಿತ ಸಂಘಟನೆಗಳು ಮುಖಂಡರನ್ನ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾಗಿತ್ತು. ಇದನ್ನ ಖಂಡಿಸಿ ದಲಿತ ಕಾಲೋನಿ ನಿವಾಸಿಗಳು ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಭಾರೀ ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ರೆಸಾರ್ಟ್‌ನಲ್ಲಿ ಅಪ್ರಾಪ್ತೆಯ ಮೇಲೆ ಗ್ಯಾಂಗ್‌ ರೇಪ್‌ – ಸಿಪಿಐ ಪುತ್ರ ಸೇರಿ ಮೂವರು ಅರೆಸ್ಟ್‌

    ಇದೇ ವೇಳೆ ಪ್ರತಿಭಟನಕಾರರು ಹಾಗೂ ಪೊಲೀಸರ ನಡುವೆ ಭಾರೀ ವಾಗ್ವಾದವೂ ನಡೆಯಿತು. ಇದನ್ನ ಹೊರತುಪಡಿಸಿ ಬಂದ್‌ನಿಂದ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದರೆ, ಬಸ್ ವಾಹನಗಳ ಓಡಾಟ ಎಂದಿನಂತೆ ಇತ್ತು. ಹೀಗಾಗಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಇದನ್ನೂ ಓದಿ: ಸೀಲ್ ಮಾಡಿದ್ದ ಬೋಬಾ ಟೀ ಬಾಟಲ್‌ನಲ್ಲಿ ಗ್ಲಾಸ್ ಪತ್ತೆ – ಐಸ್‌ ಕ್ಯೂಬ್ ಎಂದು ಕುಡಿದು ಆಸ್ಪತ್ರೆ ಸೇರಿದ ಯುವತಿ!

  • ಗ್ಯಾರಂಟಿಗಳಿಗೆ ಎಸ್ಸಿ-ಎಸ್ಟಿ ಹಣ ಬಳಕೆ ಆರೋಪ – ಸರ್ಕಾರದ ವಿರುದ್ಧ ದಲಿತ ಸಂಘ ಪ್ರತಿಭಟನೆ

    ಗ್ಯಾರಂಟಿಗಳಿಗೆ ಎಸ್ಸಿ-ಎಸ್ಟಿ ಹಣ ಬಳಕೆ ಆರೋಪ – ಸರ್ಕಾರದ ವಿರುದ್ಧ ದಲಿತ ಸಂಘ ಪ್ರತಿಭಟನೆ

    ರಾಮನಗರ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ (Guarantee Scheme) ಶೋಷಿತ ಸಮುದಾಯದ ಹಣವನ್ನ ದುರುಪಯೋಗ ಮಾಡಿಕೊಂಡಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ದಲಿತ ಸಂಘಟನೆ ಪ್ರತಿಭಟನೆ (Dalit Organization Protest) ನಡೆಸಿದೆ.

    ಚನ್ನಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ದಲಿತ ಮುಖಂಡರು (Dalits Leaders), ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಮುಡಾ ಅಕ್ರಮ ಕೇಸ್‌: ಚರ್ಚೆಗೆ ಅವಕಾಶ ಇಲ್ಲವೆಂದು ಸ್ಪೀಕರ್ ರೂಲಿಂಗ್ – ವಿಧಾನಸಭೆಯಲ್ಲಿ ಗದ್ದಲ, ಮಾತಿನ ಚಕಮಕಿ

    ರಾಜ್ಯ ಸರ್ಕಾರ‌ (Karnataka Govt) ದಲಿತ ವಿರೋಧಿ ನಡೆಯನ್ನ ಅನುಸರಿಸುತ್ತಿದೆ. 2024-25ನೇ ಸಾಲಿನ ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗೆ 52,000 ಕೋಟಿ ರೂ. ಮೀಸಲಿಟಿದ್ದೇವೆ, SCSP-TSP ಯೋಜನೆಗೆ (SCSP TSP Scheme) 32,191,46 ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು ಆಯವ್ಯಯದಲ್ಲಿ ಹೇಳಿತ್ತು. ಆದ್ರೆ ಗ್ಯಾರಂಟಿ ಯೋಜನೆಗಳಿಗೆ SCSP-TSP ಯೋಜನೆ ಹಣವನ್ನ ಗ್ಯಾರಂಟಿ ಯೋಜನೆಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

    ಸರ್ಕಾರ ಗ್ಯಾರಂಟಿಗೆ ಹಣ ಬಳಕೆ ಮಾಡಿಕೊಳ್ಳುವ ಮೂಲಕ ಪರಿಶಿಷ್ಟರ ಸಮುದಾಯಕ್ಕೆ ಅನ್ಯಾಯ ಮಾಡ್ತಿದೆ. ಹಾಗಾಗಿ ಕೂಡಲೇ ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನ ವಾಪಸ್ಸ್ ನೀಡಬೇಕು. ಇಲ್ಲವಾದಲ್ಲಿ ಉಗ್ರಹೋರಾಟ ಮಾಡುವುದುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಶಿವಮೊಗ್ಗ: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ

  • ಸಾರಿಗೆ ಇಲಾಖೆ ಸಿಬ್ಬಂದಿಯ ಎಡವಟ್ಟು – ಧ್ವಜಾರೋಹಣ ವೇಳೆ ಅಂಬೇಡ್ಕರ್ ಫೋಟೋ ಇಡದ್ದಕ್ಕೆ ಆಕ್ರೋಶ

    ಸಾರಿಗೆ ಇಲಾಖೆ ಸಿಬ್ಬಂದಿಯ ಎಡವಟ್ಟು – ಧ್ವಜಾರೋಹಣ ವೇಳೆ ಅಂಬೇಡ್ಕರ್ ಫೋಟೋ ಇಡದ್ದಕ್ಕೆ ಆಕ್ರೋಶ

    ಗದಗ: ಸ್ವಾತಂತ್ರ್ಯ ದಿನಾಚರಣೆ (Independence Day) ವೇಳೆ ಸಾರಿಗೆ ಇಲಾಖೆ ಸಿಬ್ಬಂದಿ ಎಡವಟ್ಟು ಮಾಡಿರುವ ಘಟನೆ ಗದಗ (Gadag) ನಗರದ ಸಾರಿಗೆ ವಿಭಾಗೀಯ ಕಚೇರಿ ಬಳಿ ನಡೆದಿದೆ.

    ಕೆಎಸ್‌ಆರ್‌ಟಿಸಿ (KSRTC) ಡಿಸಿ ಶೀನಯ್ಯ ನೇತೃತ್ವದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಧ್ವಜಾರೋಹಣ ವೇಳೆ ಡಾ. ಬಿಆರ್ ಅಂಬೇಡ್ಕರ್ (BR Ambedkar) ಅವರ ಫೋಟೋ ಇಡದ್ದಕ್ಕೆ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಇದನ್ನೂ ಓದಿ: ಪರೇಡ್ ವೇಳೆ ಕುಸಿದು ಬಿದ್ದ ಮೂವರು ವಿದ್ಯಾರ್ಥಿಗಳು

    ಧ್ವಜಾರೋಹಣ ವೇಳೆ ಅಂಬೇಡ್ಕರ್ ಫೋಟೋ ಇಡದೇ ಕೇವಲ ಮಹಾತ್ಮ ಗಾಂಧೀಜಿ ಅವರ ಫೋಟೋ ಇಟ್ಟು ಸ್ವಾಂತಂತ್ರ್ಯ ದಿನಾಚರಣೆ ಮಾಡಲಾಗಿದೆ. ಇದರಿಂದ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದೀರಿ ಎಂದು ಸಂಘಟಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲಾ ಸಾರಿಗೆ ವಿಭಾಗೀಯ ಕಚೇರಿ ಮುಂದೆ ದಲಿತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಕಾಲೇಜಿನಲ್ಲಿ ಕಾಂಗ್ರೆಸ್ ಚಿಹ್ನೆ ಫ್ಲೆಕ್ಸ್ – ನಲಪಾಡ್ ಧ್ವಜಾರೋಹಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿಕ್ಕಮಗಳೂರು ಸರ್ಕಾರಿ ಹಾಸ್ಟೆಲ್‌ನಲ್ಲಿ PUC ವಿದ್ಯಾರ್ಥಿನಿಗೆ ಹೆರಿಗೆ

    ಚಿಕ್ಕಮಗಳೂರು ಸರ್ಕಾರಿ ಹಾಸ್ಟೆಲ್‌ನಲ್ಲಿ PUC ವಿದ್ಯಾರ್ಥಿನಿಗೆ ಹೆರಿಗೆ

    ಚಿಕ್ಕಮಗಳೂರು: ಇಲ್ಲಿನ ಸರ್ಕಾರಿ ಹಾಸ್ಟೆಲ್‌ನಲ್ಲಿ (Government Hostel) ಪಿಯುಸಿ ವಿದ್ಯಾರ್ಥಿನಿಗೆ (PUC Student) ಹೆರಿಗೆ ಆಗಿರುವ ಘಟನೆ ನಡೆದಿದ್ದು, ದಲಿತ ಸಂಘಟನೆಗಳು (Dalits Organization) ಹಾಸ್ಟೆಲ್ ವಾರ್ಡನ್ ಹಾಗೂ ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿವೆ.

    ನಗರದ ಬೇಲೂರು ರಸ್ತೆಯಲ್ಲಿ ಸುಮಾರು 200 ಹೆಣ್ಣು ಮಕ್ಕಳಿರುವ ಪಿಯುಸಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಓರ್ವ ವಿದ್ಯಾರ್ಥಿನಿಗೆ ಹೆರಿಗೆ ಆಗಿದೆ ಎಂದು ದಲಿತ ಸಂಘಟನೆಗಳು ದೂರಿವೆ. ಪ್ರಕರಣವನ್ನ ಹೊರಬರಲು ಬಿಡದೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ (Social Welfare Department) ಅಧಿಕಾರಿ, ಹಾಸ್ಟೆಲ್ ವಾರ್ಡನ್ ಮುಚ್ಚಿ ಹಾಕಿದ್ದಾರೆ. ವಿಷಯ ತಿಳಿದ ಕೂಡಲೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಕೇಳಿದ್ರೆ ಆಕೆ ಹೊಟ್ಟೆಗೆ ಬಟ್ಟೆ ಕಟ್ಟಿಕೊಳ್ಳುತ್ತಿದ್ದಳು, ಗೊತ್ತಾಗಿಲ್ಲ. ಹಾಗಾಗಿ, ಆಕೆಯನ್ನ ಮನೆಗೆ ಕಳಿಸಿ ಹುಡುಗನ ಮೇಲೆ ಪೋಕ್ಸೋ ಕೇಸ್ (POCSO Case) ದಾಖಲಿಸಿದ್ದೇವೆ ಅಂತಾ ಹೇಳಿದ್ದಾರೆ. ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಹೆಚ್ಚಿನ ಸಮಯ ಫಿಕ್ಸ್? – ಮಧ್ಯರಾತ್ರಿ 2 ಗಂಟೆವರೆಗೂ ಅವಕಾಶ ಸಾಧ್ಯತೆ

    ಇಷ್ಟಕ್ಕೆ ಸುಮ್ಮನಾಗದ ದಲಿತ ಮುಖಂಡರು, ನಮ್ಮ ಮಕ್ಕಳನ್ನ ಹಾಸ್ಟೆಲ್‌ಗೆ ಕಳಿಸೋದು ಏಕೆ? ಪೋಷಕರು ಯಾವ ಧೈರ್ಯದ ಮೇಲೆ ಮಕ್ಕಳನ್ನ ಹಾಸ್ಟೆಲ್‌ಗೆ ಸೇರಿಸುತ್ತಾರೆ? ಇಬ್ಬರು ವಾರ್ಡನ್‌ಗಳು ಏನು ಮಾಡುತ್ತಿದ್ದರು? ಸರ್ಕಾರಿ ಹಾಸ್ಟೆಲ್‌ನಲ್ಲೇ ರಕ್ಷಣೆ ಇಲ್ಲ ಅಂದ ಮೇಲೆ ಮಕ್ಕಳನ್ನ ಹೇಗೆ ಕಳಿಸೋದು? ಊಟ ಹಾಕಿ, ಬಿಲ್ ಮಾಡ್ಕೊಂಡು ದುಡ್ ತೆಗೆದುಕೊಳ್ಳುವುದು ಮಾತ್ರ ವಾರ್ಡನ್ ಕೆಲಸನಾ? ಒಂಭತ್ತು ತಿಂಗಳು ಹೊಟ್ಟೆಗೆ ಬಟ್ಟೆ ಕಟ್ಟಿಕೊಂಡು ಯಾರಿಗೂ ಗೊತ್ತಾಗದಂತೆ ಅದ್ಹೇಗೆ ಇದ್ದಳು? ಸಹಪಾಠಿಗಳು, ಅಡುಗೆಯವರು, ಕಾಲೇಜಿನಲ್ಲಿ ಶಿಕ್ಷಕರು, ವಾರ್ಡನ್‌ಗಳಿಗೆ ಒಂಚೂರು ಅನುಮಾನ ಬಾರದಂತೆ 9 ತಿಂಗಳು ಯಾಮಾರಿಸಿದಳಾ ಎಂದು ಪ್ರಶ್ನಿಸಿದ್ದಾರೆ.

    ಹಾಸ್ಟೆಲ್‌ನಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಹೆಣ್ಣುಮಕ್ಕಳ ಆರೋಗ್ಯದ ಬಗ್ಗೆ ತಪಾಸಣೆ ಮಾಡಬೇಕು. ಅದನ್ನ ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಅದನ್ನ ಮಾಡಿದ್ದರೆ ಈ ಪ್ರಕರಣ ಆಗಲೇ ಹೊರಗೆ ಬರುತ್ತಿತ್ತು. ಆದರೆ ಒಂಭತ್ತು ತಿಂಗಳು ಮುಗಿದು ಹಾಸ್ಟೆಲ್‌ನಲ್ಲಿಯೇ ಹೆರಿಗೆ ಮಾಡಿಸಿದ್ದಾರೆ ಅಂದರೆ ಒಳಗೆ ಏನು ನಡೆಯುತ್ತಿದೆ ಎಂದು ಗೊತ್ತಾಗುತ್ತಿಲ್ಲ ಎಂದು ವಾರ್ಡನ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಹೆಚ್ಚಿದ ಬೀದಿ ನಾಯಿ ಹಾವಳಿ – ಬಿಬಿಎಂಪಿಯಿಂದ ವರ್ಷಕ್ಕೆ ಕೋಟಿ, ಕೋಟಿ ರೂ. ಖರ್ಚು!

    ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೂ ಮಹಿಳೆಯಾಗಿದ್ದಾರೆ. ವಾರ್ಡನ್ ಸಹ ಮಹಿಳೆಯಾಗಿದ್ದು ಏನು ಮಾಡ್ತಿದ್ರು? ಇದು ಅವರಿಗೆ ಗೊತ್ತಿದ್ದೇ ಆಯ್ತಾ ಅಥವಾ ಗೊತ್ತಿಲ್ಲದೇ ಆಯ್ತಾ? ಮಕ್ಕಳ ಭವಿಷ್ಯದ ಬಗ್ಗೆ ಬೇಜವಾಬ್ದಾರಿ ಇರುವ ಇಂತಹ ವಾರ್ಡನ್‌ಗಳ ವಿರುದ್ಧ ಕೇಸ್ ದಾಖಲಿಸಿ ಕೆಲಸದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಗವದ್ಗೀತೆಯನ್ನು ಸುಟ್ಟು ದಲಿತ ಸಂಘಟನೆಗಳಿಂದ ಪ್ರತಿಭಟನೆ

    ಭಗವದ್ಗೀತೆಯನ್ನು ಸುಟ್ಟು ದಲಿತ ಸಂಘಟನೆಗಳಿಂದ ಪ್ರತಿಭಟನೆ

    ಹುಬ್ಬಳ್ಳಿ: ಇತ್ತೀಚೆಗೆ ದೆಹಲಿಯಲ್ಲಿ ಸಂವಿಧಾನ ಪ್ರತಿಗಳನ್ನು ಸುಟ್ಟು ಹಾಕಿದ್ದಕ್ಕೆ ಪ್ರತಿಕಾರವಾಗಿ, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡು ಬೀದಿಯಲ್ಲಿ ಭಗವದ್ಗೀತೆ ಪ್ರತಿಗಳನ್ನು ಸುಡುವ ಮೂಲಕ ದಲಿತ ಸಂಘಟನೆಗಳು ಆಕ್ರೋಶ ಹೊರಹಾಕಿವೆ.

    ಪ್ರತಿಭಟನೆಯಲ್ಲಿ ಹುಬ್ಬಳ್ಳಿ-ಧಾರವಾಡ ಸಂವಿಧಾನ ಉಳಿಸಿ ಹೋರಾಟ ವೇದಿಕೆ ಹಾಗೂ ವಿವಿಧ ದಲಿತ ಸಂಘಟನೆಗಳು ಭಾಗವಹಿಸಿದ್ದವು. ಚೆನ್ನಮ್ಮ ವೃತ್ತದಲ್ಲಿ ಸೇರಿದ್ದ ಪ್ರತಿಭಟನಾಕಾರರು, ಭಗವದ್ಗೀತೆ ಪ್ರತಿಗಳಿಗೆ ಬೆಂಕಿ ಹಚ್ಚಿದರು.

    ನೆಹರೂ ಮೈದಾನದ ಬಳಿಯ ಅಂಬೇಡ್ಕರ್ ಭವನದಿಂದ ನೂರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ, ಬಳಿಕ ರಾಣಿ ಚನ್ನಮ್ಮ ವೃತ್ತದಲ್ಲಿ ಸೇರಿದರು. ಅಲ್ಲಿ ಕೆಲ ಹೊತ್ತು ದಲಿತ ಗೀತೆ ಹಾಡಿ, ಸಂವಿಧಾನ ಸುಟ್ಟು, ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತ ಉಂಟಾಗಿ, ಸವಾರರು ಹಾಗೂ ಚಾಲಕರು ಪರದಾಡುವಂತಾಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv