ಮೈಸೂರು: ವಸ್ತುಪ್ರದರ್ಶನ ಮೈದಾನದಲ್ಲಿ ದಸರಾದಲ್ಲಿ (Mysuru Dasara) ಬಲೂನ್ ಮಾರಲು ಬಂದಿದ್ದ 10 ವರ್ಷದ ಬಾಲಕಿಯ (Girl) ಶವ ಪತ್ತೆಯಾಗಿದೆ. ಬಾಲಕಿಯ ದೇಹದ ಮೇಲೆ ಬಟ್ಟೆ ಇಲ್ಲದೆ ಮೃತದೇಹ ಪತ್ತೆಯಾದ ಕಾರಣ ಅತ್ಯಾಚಾರ ಎಸಗಿ ಕೊಲೆ (Rape and Murder) ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ದಸರಾ ಸಮಯದಲ್ಲಿ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ (Kalaburagi) ಕಡೆಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ 50 ಕ್ಕೂ ಹೆಚ್ಚು ಕುಟುಂಬ ಬಂದಿವೆ. ಇವರು ದೊಡ್ಡಕೆರೆ ಮೈದಾನದ ಸುತ್ತಲಿನ ರಸ್ತೆಯಲ್ಲಿ ನೆಲೆಸಿದ್ದರು. ಬುಧವಾರ ಚಾಮುಂಡೇಶ್ವರಿ ದೇವಾಲಯದ ತೆಪ್ಪೋತ್ಸವ ಮುಗಿಸಿ, ಗುರುವಾರ ಬೇರೆ ಕಡೆ ತೆರಳಲು ಸಿದ್ಧತೆ ನಡೆಸಿದ್ದರು.
ರಾತ್ರಿ ವ್ಯಾಪಾರ ಮುಗಿಸಿ ಬಂದ ಬಾಲಕಿ ತಂದೆ, ತಾಯಿಯೊಂದಿಗೆ ಮಲಗಿದ್ದಳು. ಮುಂಜಾನೆ ಮಳೆ ಬಂದು ಎಲ್ಲರೂ ಎದ್ದಾಗ ಬಾಲಕಿ ಸ್ಥಳದಿಂದ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಟೆಂಟ್‌ನಿಂದ 50 ಮೀ ದೂರದಲ್ಲಿರುವ ಮಣ್ಣಿನ ರಾಶಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಇದನ್ನೂ ಓದಿ: ರಮ್ಯಾಗೆ ಅವಹೇಳನ| ದರ್ಶನ್ ಅಭಿಮಾನಿಗಳ ವಿರುದ್ಧ 380 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಕೇವಲ ಎರಡೇ ದಿನಗಳ ಬಾಲಕಿ ಶವ ಪತ್ತೆಯಾದ ಜಾಗದ ಬಳಿ ರೌಡಿಶೀಟರ್‌ನ ಸಹರ್ವತಿಯ ಕೊಲೆ ನಡೆದಿತ್ತು. ಈಗ ಅದೇ ಜಾಗದ ಸಮೀಪ ಬಾಲಕಿಯ ಮೃತದೇಹ ಸಿಕ್ಕಿದೆ. ವ್ಯಾಪಾರಕ್ಕೆ ಆಗಮಿಸಿದ್ಧ 50 ಹಕ್ಕಿಪಿಕ್ಕಿ ಕುಟುಂಬಸ್ಥರನ್ನು ಪೊಲೀಸರು ಈಗ ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಶ್ವಾನ ದಳ ಆಗಮಿಸಿದ್ದು, ಪೊಲೀಸರು ಸಿಸಿಟಿವಿ ಪರಿಶೀಲನೆ ಮಾಡುತ್ತಿದ್ದಾರೆ.
ತುಮಕೂರು: ತುಮಕೂರಿನ ಎರಡನೇ ವರ್ಷದ ದಸರಾ (Tumakuru Dasara) ವಿಜೃಂಭಣೆಯಿಂದ ನಡೆಯಿತು. ಅಂಬಾರಿ ಹೊತ್ತ ಆನೆ ಶ್ರೀರಾಮ ಶಾಂತತೆಯಿಂದ ಹೆಜ್ಜೆ ಹಾಕಿ ಎಲ್ಲರ ಕಣ್ಮನ ಸೆಳೆಯಿತು.
ಮಧ್ಯಾಹ್ನ 12 ಗಂಟೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ನಂದಿ ಧ್ವಜಕ್ಕೆ ಪೂಜೆ ನೆರವೇರಿಸುವ ಮೂಲಕ ದಸರಾ ಮೆರವಣಿಗೆಗೆ ಚಾಲನೆ ನೀಡಿದರು. ವಿವಿಧ ಕಲಾತಂಡಗಳು, 50ಕ್ಕೂ ಹೆಚ್ಚು ದೇವರುಗಳು, ಪೊಲೀಸ್ ಕುದುರೆ ಸವಾರಿ, ನಾಟಿ ಎತ್ತುಗಳ ಮೆರವಣಿಗೆಯು ನಗರದ ಬಿಜಿಎಸ್ (ಟೌನ್ ಹಾಲ್ ವೃತ್ತ) ವೃತ್ತದಿಂದ ಪ್ರಾರಂಭಗೊಂಡಿತು. ಇದನ್ನೂ ಓದಿ: 5 ವರ್ಷದ ಬಳಿಕ ಭಾರತ, ಚೀನಾ ಮಧ್ಯೆ ನೇರ ವಿಮಾನ ಸೇವೆ ಆರಂಭ
ಆನೇಕಲ್: ಮಿನಿ ಮೈಸೂರು ಖ್ಯಾತಿಯ ಆನೇಕಲ್ (Anekal) ಪಟ್ಟಣದಲ್ಲಿ ಶಕ್ತಿ ದೇವತೆ ಚೌಡೇಶ್ವರಿ ದೇವಿ (Chowdeshwari) ವಿಜಯದಶಮಿ (Vijayadashami) ದಸರಾ ಉತ್ಸವ ಮತ್ತು ಜಂಬೂಸವಾರಿ (Jamboo Savari) ವಿಜೃಂಭಣೆಯಿಂದ ಆಚರಿಸಲಾಯಿತು. ನಾಡ ಹಬ್ಬ ಮೈಸೂರು ದಸರಾದಲ್ಲಿ ಚಾಮುಂಡೇಶ್ವರಿಯ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಹೆಜ್ಜೆ ಹಾಕಿದ್ರೆ ಆನೇಕಲ್‌ನಲ್ಲಿ ಕೇರಳದ ಕೊಚ್ಚಿಯ ಶೇಖರ್ ಆನೆ ಚೌಡೇಶ್ವರಿ ದೇವಿ ಉತ್ಸವ ಮೂರ್ತಿ ಅಂಬಾರಿ ಹೊತ್ತು ಹೆಜ್ಜೆ ಹಾಕಿತು.
ಮೈಸೂರಿನಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿ ಜಂಬೂಸವಾರಿ ನಡೆಸಿದಂತೆ ಆನೇಕಲ್‌ನಲ್ಲಿ ನಾಡಹಬ್ಬ ದಸರಾ (Dasara) ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಿದ್ದಾರೆ. ನಗರದ ಆದಿ ದೇವತೆ ಚೌಡೇಶ್ವರಿ ದೇವಿ ಅಂಬಾರಿಯನ್ನು ಹೊತ್ತ ಕೇರಳದ ಕೊಚ್ಚಿಯ ಶೇಖರ್ ಆನೆ ಪಟ್ಟಣದ ತಾಲೂಕು ಕಚೇರಿಯಿಂದ ತಿಲಕ್ ವೃತ್ತದ ಚೌಡೇಶ್ವರಿ ದೇವಾಲಯದ ಬಳಿ ಬರುತ್ತಿದ್ದಂತೆ ಜನಸಾಗರ ತುಂಬಿತ್ತು. ಗಣ್ಯರು ಜಂಬೂಸವಾರಿ ಹೊರಟಿದ್ದ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿದ್ದಾರೆ. ಬಳಿಕ ಆನೇಕಲ್ ನಗರದ ಪ್ರಮುಖ ಬೀದಿಗಳಲ್ಲಿ ಜಂಬೂಸವಾರಿ ಗಜಗಾಂಭೀರ್ಯವಾಗಿ ಸಾಗಿದೆ. ಇದನ್ನೂ ಓದಿ: ದಾವಣಗೆರೆಯಲ್ಲಿ ವಿಜಯದಶಮಿ ಶೋಭಾಯಾತ್ರೆ – 50,000 ಮಂದಿ ಭಾಗಿ, ಕಣ್ಮನ ಸೆಳೆಯುತ್ತಿರುವ ಟ್ಯಾಬ್ಲೋಗಳು
ಇದಕ್ಕೂ ಮೊದಲು ತಿಲಕ್ ವೃತ್ತದ ಬಳಿ ಚೌಡೇಶ್ವರಿ ದೇವಿ ಅಂಬಾರಿ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪಕ್ಕದ ತಮಿಳುನಾಡು, ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಿಂದ ಆಪಾರ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು. ಚೌಡೇಶ್ವರಿ ದೇವಿ ಅಂಬಾರಿ ಹೊತ್ತು ಸಾಗಿದ ಶೇಖರ್ ಆನೆಯನ್ನು ಕಂಡು ಭಕ್ತರು ರೋಮಾಂಚನಗೊಂಡಿದ್ದಾರೆ. ಇದನ್ನೂ ಓದಿ: ಚಿತ್ರಗಳಲ್ಲಿ ಮೈಸೂರು ಜಂಬೂಸವಾರಿ ನೋಡಿ
ಆನೇಕಲ್ ಪಟ್ಟಣದ ಚೌಡೇಶ್ವರಿ ದೇವಿ ದಸರಾ ಮಹೋತ್ಸವ ನೋಡಲು ಕಳೆದ ಮೂರು ವರ್ಷದಿಂದ ಇಲ್ಲಿಗೆ ಬರುತ್ತೆವೆ. ಈ ಬಾರಿಯು ಕುಟುಂಬ ಸಮೇತ ಆಗಮಿಸಿದ್ದು, ತಾಯಿ ಚೌಡೇಶ್ವರಿ ಜಂಬೂ ಸವಾರಿಯನ್ನು ನೋಡಲು ತುಂಬಾ ಖುಷಿಯಾಯಿತು. ತುಂಬಾ ವಿಜೃಂಭಣೆಯಿಂದ ಈ ಬಾರಿ ದಸರಾ ಆಚರಣೆ ಮಾಡಿದ್ದಾರೆ. ಸಾವಿರಾರು ಮಂದಿ ಭಕ್ತರು ಆಗಮಿಸಿದ್ದು, ದೇವಿಯ ದರ್ಶನ ಪಡೆದಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾ ನೋಡಲು ಸಾದ್ಯವಾಗದ ಭಕ್ತರು ಆನೇಕಲ್ ದಸರಾ ನೋಡಿ ಕಣ್ತುಂಬಿಕೊಳ್ಳುತ್ತಾರೆ. ಜೊತೆಗೆ ವಿವಿಧ ಕಡೆಯಿಂದ ಆಗಮಿಸಿದ್ದ ಆಕರ್ಷಕ ಕಲಾತಂಡಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ನೆರೆದಿದ್ದ ಜನರನ್ನು ರಂಜಿಸಿವೆ ಎಂದು ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ದಸರಾ | ಜಂಬೂ ಸವಾರಿಗೆ ಅದ್ದೂರಿ ಚಾಲನೆ
ವಿಜಯದಶಮಿಯ ಪ್ರಮುಖ ಆಕರ್ಷಣೆ, ಮೈಸೂರು ದಸರಾದ ವಿಶ್ವವಿಖ್ಯಾತ ಜಂಬೂಸವಾರಿ ಅದ್ಧೂರಿಯಾಗಿ ನಡೆದಿದೆ. 750 ಕೆಜಿ ತೂಕದ ಬಂಗಾರ ಅಂಬಾರಿಯನ್ನು 6ನೇ ಬಾರಿ ಹೊತ್ತ ಕ್ಯಾಪ್ಟನ್ ಅಭಿಮನ್ಯು ಗಂಭೀರವಾಗಿ ಹೆಜ್ಜೆ ಹಾಕಿದ್ದಾನೆ. ಅಭಿಮನ್ಯುಗೆ ಕುಮ್ಕಿ ಆನೆಗಳಾದ ಕಾವೇರಿ, ರೂಪ ಜೊತೆಗಿದ್ದವು. ಸಂಜೆ 4:42ರಿಂದ 5:06 ಗಂಟೆಯ ಕುಂಭಲಗ್ನದಲ್ಲಿ ತಾಯಿ ಚಾಮುಂಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿ ಜಂಬೂ ಸವಾರಿಗೆ ಚಾಲನೆ ನೀಡಿದರು.
ಜಂಬೂಸವಾರಿಗೆ ಚಾಲನೆ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ
ಜಂಬೂಸವಾರಿ ವೀಕ್ಷಿಸಲು ಅರಮನೆ ಮುಂಭಾಗ ಸೇರಿದ ಜನ
750 ಕೆಜಿ ಚಿನ್ನದ ಅಂಬಾರಿ ಹೊತ್ತು ಸಾಗುತ್ತಿರುವ ಅಭಿಮನ್ಯು
ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ
ದೊಡ್ಡ ಗಡಿಯಾರ ತಿರುವು, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗ ಸೇರಿದ ಜನ
ಅಭಿಮನ್ಯುವಿಗೆ ಸಾಥ್ ನೀಡಿದ ಕಾವೇರಿ, ರೂಪ
ಅಭಿಮಾನಿಗಳಿಗೆ ಕೈ ಬೀಸಿದ ಅಭಿಮನ್ಯು ಮಾವುತ ಜೆ.ಎಸ್.ವಸಂತ
ಜಂಬೂಸವಾರಿ ವೀಕ್ಷಿಸಲು ರಸ್ತೆ ಬದಿಯಲ್ಲಿ ಕಾದು ಕುಳಿತಿರುವ ಜನರು
– ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ ಚಾಮುಂಡೇಶ್ವರಿ – ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ಕ್ಯಾಪ್ಟನ್ ಅಭಿಮನ್ಯು
ಮೈಸೂರು: ಲಕ್ಷಾಂತರ ಜನರು ಕಾತುರದಿಂದ ಕಾದಿದ್ದ ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಜಂಬೂಸವಾರಿಗೆ(Jambusavari) ಅದ್ದೂರಿ ಚಾಲನೆ ಸಿಕ್ಕಿದೆ.
ಸಂಜೆ 4.42ರಿಂದ 5.06 ಅವಧಿಯ ಶುಭ ಕುಂಭ ಲಗ್ನದಲ್ಲಿ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಸಿಎಂ ಜೊತೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ, ಪೊಲೀಸ್ ಆಯುಕ್ತೆ ಸೀಮಾಲಾಟ್ಕರ್ ಪುಷ್ಪಾರ್ಚನೆ ಮಾಡಿದರು.
ಅಲಂಕೃತಗೊಂಡ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ನಾಡ ಅಧಿದೇವತೆ ಚಾಮುಂಡಿತಾಯಿಯನ್ನು (Chamundeshwari) ಹೊತ್ತು 6ನೇ ಬಾರಿ ಅಭಿಮನ್ಯು (Abhimnyu) ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ.
ದಸರಾ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಧನಂಜಯ ಹೆಜ್ಜೆ ಹಾಕಿದರೆ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ರೂಪ, ನೌಫತ್ ಆನೆಯಾಗಿ ಗೋಪಿ, ಪಟ್ಟದ ಆನೆಯಾಗಿ ಶ್ರೀಕಂಠ ಮತ್ತು ಲಕ್ಷ್ಮಿ ಹೆಜ್ಜೆ ಹಾಕುತ್ತಿವೆ. ಸಾಲಾನೆಯಾಗಿ ಮಹೇಂದ್ರ, ಭೀಮ, ಕಂಜನ್, ಏಕಲವ್ಯ, ಪ್ರಶಾಂತ, ಸುಗ್ರೀವ, ಹೇಮಾವತಿ ಈ ಆನೆಗಳು ಅಭಿಮನ್ಯುವಿಗೆ ಸಾಥ್ ನೀಡುತ್ತಿವೆ.
ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ಚಾಮುಂಡಿತಾಯಿಯನ್ನು ಕಣ್ತುಂಬಿಕೊಂಡು ಜನರು ಧನ್ಯತಾ ಭಾವ ಮೆರೆದರು. ದಸರಾ ಜಂಬೂಸವಾರಿ ವೀಕ್ಷಿಸಲು ಅರಮನೆ ಅಂಗಳದಲ್ಲಿ 48 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿತ್ತು.
ದಸರಾ ಜಂಬೂಸವಾರಿಗೆ ಸ್ತಬ್ಧಚಿತ್ರ ಹಾಗೂ ವಿವಿಧ ಕಲಾತಂಡಗಳು ಮೆರುಗು ನೀಡುತ್ತಿವೆ. ಒಟ್ಟು 57 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ. ಮೆರವಣಿಗೆಯಲ್ಲಿ ಸಾಗುವ ದಾರಿಯಲ್ಲಿ 140ಕ್ಕೂ ಹೆಚ್ಚು ಕಲಾ ತಂಡಗಳು ಭಾಗಿಯಾಗಿವೆ.
ಉತ್ತರ ದ್ವಾರದ ಮೂಲಕ ತೆರಳಿರುವ ಜಂಬೂಸವಾರಿ ಮೆರವಣಿಗೆ ಕೆ.ಆರ್ ಸರ್ಕಲ್, ಸಯ್ಯಾಜಿರಾವ್ ರಸ್ತೆ, ಸರ್ಕಾರಿ ಆಯುರ್ವೇದ ಸರ್ಕಲ್, ಬಂಬೂ ಬಜಾರ್, ಹೈವೇ ಸರ್ಕಲ್ ಮೂಲಕ ಸಾಗಿ ಸಂಜೆ ವೇಳೆಗೆ ಬನ್ನಿಮಂಟಪ ಪಂಜಿನ ಕವಾಯತು ಮೈದಾನ ತಲುಪಲಿದೆ.
ನವದೆಹಲಿ: ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ವಿಜಯದಶಮಿಯ (Vijaya Dashami) ಶುಭಾಶಯ ಕೋರಿದ್ದಾರೆ.
ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ವಿಜಯದಶಮಿಯು ದುಷ್ಟ ಮತ್ತು ಸುಳ್ಳಿನ ಮೇಲೆ ಒಳ್ಳೆಯದು ಮತ್ತು ಸದಾಚಾರದ ವಿಜಯವನ್ನು ಆಚರಿಸುತ್ತದೆ. ಧೈರ್ಯ, ಬುದ್ಧಿವಂತಿಕೆ ಮತ್ತು ಭಕ್ತಿ ಯಾವಾಗಲೂ ನಮ್ಮ ಮಾರ್ಗಗಳಿಗೆ ಮಾರ್ಗದರ್ಶನ ನೀಡಲಿ ಎಂದು ಆಶಿಸಿದ್ದಾರೆ. ಇದನ್ನೂ ಓದಿ: ಕೇಸರಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ
Vijaya Dashami celebrates the triumph of good and righteousness over evil and falsehood. May courage, wisdom and devotion always guide our paths.
ನವರಾತ್ರಿಯ 9 ದಿನ ಅಥವಾ ವಿಜಯ ಆಚರಣೆ ನಡೆಯುವ ಜಾಗದಲ್ಲಿ ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆಯನ್ನು ಮಾಡಲಾಗುತ್ತದೆ.
ದಸರಾ ಸಮಯದಲ್ಲೇ ಮಾಡಬೇಕು ಎಂದು ಏನಿಲ್ಲ. ಮಂಗಳವಾರ ಅಥವಾ ಶುಕ್ರವಾರವೂ ಮಾಡಬಹುದು. ಕೆಲವೊಮ್ಮೆ ಮನೆಯಲ್ಲಿ ಬೆಳಗ್ಗೆ ಗಣಹೋಮ, ಮಧ್ಯಾಹ್ನ ಸತ್ಯನಾರಾಯಣ ಪೂಜೆ, ರಾತ್ರಿ ದುರ್ಗಾ ನಮಸ್ಕಾರ ಪೂಜೆಯನ್ನು ಮಾಡುತ್ತಾರೆ.
ಯಾಕೆ ಈ ಪೂಜೆ?
ದುರ್ಗಾ ದೇವು ತುಂಬಾ ಶಕ್ತಿಶಾಲಿ ಮತ್ತು ಕರುಣಾಮಯಿ ತಾಯಿ. ಅವಳು ದುಷ್ಟಶಕ್ತಿಗಳನ್ನು ನಾಶಮಾಡುವವಳು. ದುರ್ಗಾ ನಮಸ್ಕಾರ ಪೂಜೆ ಮಾಡುವುದರಿಂದ ಎಲ್ಲಾ ನಕಾರಾತ್ಮಕ ಶಕ್ತಿ ಹೋಗುತ್ತದೆ ಎಂಬ ನಂಬಿಕೆ. ಜಾತಕ ದೋಷಕ್ಕೆ ಪರಿಹಾರ, ವ್ಯವಹಾರ ನಷ್ಟವನ್ನು ಕಡಿಮೆ ಮಾಡಿ ಆರ್ಥಿಕ ಅಭಿವೃದ್ಧಿ..ಹೀಗೆ ನಾನಾ ಕಾರಣಕ್ಕೆ ಈ ಪೂಜೆಯನ್ನು ಮಾಡಲಾಗುತ್ತದೆ.
ಈ ಪೂಜೆ ಮಾಡುವ ಮೊದಲು ಮಂಡಲವನ್ನು ರಚಿಸಲಾಗುತ್ತದೆ. ಮಂಡಲದ ಮಧ್ಯ ಭಾಗದಲ್ಲಿ ಕಾಲುದೀಪವನ್ನು ಇಡಲಾಗುತ್ತದೆ. ನಂತರ ಸುತ್ತಲು ಹೂವುಗಳಿಂದ ಅಲಂಕರಿಸಲಾಗುತ್ತದೆ. ದುರ್ಗಾ ದೇವಿಯನ್ನು ಮಾತೃಕ-ನ್ಯಾಸ ಮಾಡುವ ಮೂಲಕ ದೊಡ್ಡ ದೀಪದಲ್ಲಿ ಆವಾಹಿಸಿ ಅಲ್ಲಿ ಅವಳ ಪ್ರತಿಯೊಂದು ಭಾಗವನ್ನು ವಿಭಿನ್ನ ಅಕ್ಷರಗಳಿಂದ ಪೂಜಿಸಲಾಗುತ್ತದೆ. ದುರ್ಗಾ ದೇವಿಯನ್ನು ಮಹಾಕಾಳಿ, ಮಹಾಲಕ್ಷ್ಮಿ ಮತ್ತು ಮಹಾಸರಸ್ವತಿಯ ರೂಪದಲ್ಲಿ ಆವಾಹಿಸಲಾಗುತ್ತದೆ. ಪೂಜೆಯ ಕೊನೆಯಲ್ಲಿ ದೀಪಕ್ಕೆ ಪ್ರದಕ್ಷಿಣೆ ಹಾಕಿ ನಮಸ್ಕಾರ ಮಾಡಲಾಗುತ್ತದೆ.
ದುರ್ಗಾ ದೇವಿ ಪರಾಕ್ರಮ, ಶಕ್ತಿ ಮತ್ತು ಜ್ಞಾನದ ದೇವತೆ. ಈ ಪೂಜೆಯ ಮೂಲಕ ಅವಳ ದೈವಿಕ ಶಕ್ತಿಯನ್ನು ಮನೆಗೆ ಆಹ್ವಾನಿಸಿ, ಕುಟುಂಬದ ಸದಸ್ಯರನ್ನು ರಕ್ಷಿಸುವುದು ಮತ್ತು ಅವರಿಗೆ ಆಶೀರ್ವಾದಗಳನ್ನು ನೀಡುವುದು ಈ ಪೂಜೆಯ ಮುಖ್ಯ ಉದ್ದೇಶ. ಈ ಪೂಜೆಯ ಮೂಲಕ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳನ್ನು ದೂರವಿಡಬಹುದು ಎಂದು ನಂಬಲಾಗಿದೆ.
ದುರ್ಗಾ ದೇವಿಯನ್ನು ಸಂಪತ್ತು ಮತ್ತು ಸಮೃದ್ಧಿಯ ದೇವತೆಯಾಗಿಯೂ ಪೂಜಿಸಲಾಗುತ್ತದೆ. ದುರ್ಗಾ ದೇವಿಯು ಆರೋಗ್ಯ ಮತ್ತು ಸುಖವನ್ನು ನೀಡುವ ದೇವತೆ. ಪೂಜೆಯ ಮೂಲಕ ಕುಟುಂಬದ ಎಲ್ಲ ಸದಸ್ಯರು ಆರೋಗ್ಯವಾಗಿ ಮತ್ತು ಸುಖವಾಗಿ ಇರುತ್ತಾರೆ ಎಂಬ ನಂಬಿಕೆಯಿದೆ.
ಮೈಸೂರು: ಮುಂದಿನ ವರ್ಷವೂ ನಾನೇ ಯಾಕೆ ಪುಷ್ಪಾರ್ಚನೆ ಮಾಡಬಾರದು? ಹೋಪ್ ಸೋ ನಾನು ಮಾಡಬಹುದು. ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ಇರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಪುನರಾಚ್ಚರಿಸಿದ್ದಾರೆ.
ನವೆಂಬರ್‌ನಲ್ಲಿ ಕ್ರಾಂತಿ ನಡೆಯಲಿದೆ ಎಂಬ ವಿಪಕ್ಷಗಳ ಮಾತಿಗೆ ಪ್ರತಿಕ್ರಿಯಿಸಿದ ಅವರು, ಎರಡನೇ ಬಾರಿ ಸಿಎಂ ಆಗಲ್ಲ ಅಂದಿದ್ದರು. ನಾನು ಸಿಎಂ ಆಗಲಿಲ್ವಾ? ಬಹಳ ಜನ ಬಹಳಷ್ಟು ಹೇಳುತ್ತಾರೆ, ಹೇಳಲಿ. ನವೆಂಬರ್‌ನಲ್ಲಿ ಸರ್ಕಾರಕ್ಕೆ ಎರಡು ವರ್ಷ ತುಂಬುವ ಕಾರಣ ಆ ರೀತಿ ಮಾತನಾಡುತ್ತಾರೆ ಎಂದರು. ಇದನ್ನೂಓದಿ: ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರವಾಗಿದೆ: ಸಿದ್ದರಾಮಯ್ಯ
ಹೈಕಮಾಂಡ್ (High Command) ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಮತ್ತು ಅವರು ಹೇಳಿದಂತೆ ಕೇಳಬೇಕು. ಬಿಜೆಪಿಗೆ ವಸ್ತು ಸ್ಥಿತಿ ಗೊತ್ತಿಲ್ಲ. ಅವರು ಹೇಳಿದ ಏನು ನಡೆಯುವುದಿಲ್ಲ. ಬಿಜೆಪಿಯವರು ಬಿಜೆಪಿ ಹೇಳಿದ್ದೆಲ್ಲಾ ಸುಳ್ಳಾಗಿದೆ ಎಂದು ಹೇಳಿದರು.
– 4ಕ್ಕಿಂತ ಹೆಚ್ಚು ಟಿಕೆಟ್ ಒಟ್ಟಿಗೆ ಬುಕ್ ಮಾಡಿದ್ರೆ ಡಿಸ್ಕೌಂಟ್
ಕಲಬುರಗಿ: ದಸರಾ ಹಬ್ಬ, ವಾರಾಂತ್ಯ ಹಾಗೂ ಸಾಲು ರಜೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (KKRTC_ ಪ್ರದೇಶದ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು ಮತ್ತು ಸೋಲಾಪೂರದ ತುಳಜಾಪುರಕ್ಕೆ ಹೋಗಿ ಬರಲು ಪ್ರಯಾಣಿಕರ ಅನುಕೂಲಕ್ಕಾಗಿ 500 ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ ಸುಶೀಲಾ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸೆಪ್ಟೆಂಬರ್ 29ರ ವರೆಗೆ ಸಂಸ್ಥೆ ವ್ಯಾಪ್ತಿಯ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು (Bengaluru), ತುಳಜಾಪೂರ ಸೇರಿದಂತೆ ಇತರೆ ಪ್ರಮುಖ ಸ್ಥಳಗಳಿಗೆ ಹಾಗೂ ಸೆಪ್ಟೆಂಬರ್ 26 (ಇಂದಿನಿಂದ) ರಿಂದ ಸೆ.27 ಹಾಗೂ ಸೆ.30 ರಂದು ಬೆಂಗಳೂರಿನಿಂದ ಇತರೆ ಸ್ಥಳಗಳಿಗೆ ಹೆಚ್ಚುವರಿ ವಾಹನಗಳನ್ನ ಕಾರ್ಯಾಚರಣೆಗೆ ನಿಯೋಜಿಸಲಾಗುತ್ತಿದೆ. ಇನ್ನು ಹಬ್ಬ ಮತ್ತು ರಜೆ ಮುಗಿದ ನಂತರ ಅಕ್ಟೋಬರ್ 3 ರಿಂದ 5ರ ವರೆಗೆ ಸಹ ಸಂಚಾರ ದಟ್ಟಣೆಗೆ ಅನುಗುಣವಾಗಿ ವಾಹನಗಳ ಕಾರ್ಯಾಚರಣೆ ನಡೆಯಲಿದೆ ಎಂದಿದ್ದಾರೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ಬಸ್ ನಲ್ಲಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅವಕಾಶವಿದ್ದು, ಪ್ರಯಾಣಿಕರು ಕರ್ನಾಟಕ ಹಾಗೂ ಅಂತರ ರಾಜ್ಯದಲ್ಲಿರುವ 18 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳ ಮುಖಾಂತರ ಆಸನ ಬುಕಿಂಗ್ ಮಾಡಬಹುದಾಗಿದೆ. 4 ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ.5ರಷ್ಟು ಅಥವಾ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯತಿ ನೀಡಲಾಗುತ್ತಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ, ಪಿಕ್ ಅಪ್ ಪಾಯಿಂಟ್ ಸ್ಥಳ ಮತ್ತು ಹೆಸರು ಗಮನಿಸಬೇಕೆಂದು ಅವರು ತಿಳಿಸಿದ್ದಾರೆ.