ಬೆಂಗಳೂರು: ದಸರಾ ಆನೆಗಳ (Dasara Elephants) ಬಳಿ ರೀಲ್ಸ್ ಮಾಡುವುದನ್ನು ಸಂಪೂರ್ಣ ನಿಷೇಧಿಸಿದ್ದು, ಆನೆಗಳ ಬಳಿ ಹೋಗದಂತೆ ತಡೆಯಲು ಕಮಾಂಡೋ (Commando) ಬಳಕೆಗೆ ತಿಳಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ (Eshwar Khandre) ಹೇಳಿದ್ದಾರೆ.
ಮೈಸೂರು ಅರಮನೆಯಲ್ಲಿಂದು (Mysuru Palace) ಜಂಬೂಸವಾರಿಯ ಪ್ರಧಾನ ಆಕರ್ಷಣೆಯಾದ ದಸರಾ ಆನೆಗಳ ನಿರ್ವಹಣೆಯ ಜವಾಬ್ದಾರಿ ಹೊತ್ತ ಮಾವುತರು ಮತ್ತು ಕಾವಾಡಿಗಳು ಹಾಗೂ ಅವರ ಕುಟುಂಬ ವರ್ಗದವರಿಗೆ ಭೋಜನ ಬಡಿಸಿದ ಬಳಿಕ ಮಾತನಾಡಿದ ಅವರು, ದಸರಾ ಆನೆಗಳ ಸೊಂಡಿಲು, ದಂತ ಹಿಡಿದುಕೊಂಡು ಫೋಟೋ ರೀಲ್ಸ್ (Reels) ಮಾಡಿ ಸಾಮಾಜಿಕ ತಾಣಗಳಲ್ಲಿ ಹಾಕುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆನೆಗಳನ್ನು ಪಳಗಿಸಿದ್ದರೂ, ಕೆಲವೊಂದು ಸಂದರ್ಭದಲ್ಲಿ ಪ್ರಾಣಿಗಳ ವರ್ತನೆಯನ್ನು ಊಹಿಸುವುದೂ ಅಸಾಧ್ಯ. ಹೀಗಾಗಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿರುವ ಆನೆಗಳ ಬಳಿ ಯಾರಿಗೂ ಬಿಡದಂತೆ ಸೂಚನೆ ನೀಡಲಾಗಿದೆ. ಆದರೂ ಕೆಲವರು ಫೋಟೋ, ರೀಲ್ಸ್ ಮಾಡಿದ್ದು ಇಂತಹವರಿಗೆ ನಿರ್ದಾಕ್ಷಿಣ್ಯವಾಗಿ ದಂಡ ಸೂಚಿಸಲಾಗಿದೆ ಎಂದರು. ಇದನ್ನೂ ಓದಿ: 1 ಗಂಟೆ ಹೈಡ್ರಾಮಾ, ಟ್ರೋಫಿ ಜೊತೆ ಓಡಿದ ನಖ್ವಿ – ಮಧ್ಯರಾತ್ರಿ ಏನಾಯ್ತ? ಇಲ್ಲಿದೆ ಪೂರ್ಣ ವಿವರ
ಕಳೆದ 18ರಂದು ಮಹಿಳೆಯೊಬ್ಬರು ಸಿಬ್ಬಂದಿಯ ಕಣ್ತಪ್ಪಿಸಿ ರೀಲ್ಸ್ ಮಾಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯನ್ನು ನೀಡಲಾಗಿದೆ. ಇದು ಮೇಲ್ನೋಟಕ್ಕೆ ಕರ್ತವ್ಯಲೋಪವಾಗಿದೆ ಎಂಬುದನ್ನು ಪುಷ್ಟೀಕರಿಸಿದ್ದು, ಅಧಿಕಾರಿ, ಸಿಬ್ಬಂದಿಗೂ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: Chitradurga | ಸಮೀಕ್ಷೆ ಕಾರ್ಯಕ್ಕೆ ಗೈರು – 68 ಸಿಬ್ಬಂದಿಗೆ ನೋಟಿಸ್
ಆನೆ ಪಳಗಿಸುವ ಕಲೆಯನ್ನು ವಂಶಪಾರಂಪರ್ಯವಾಗಿ ಕರಗತ ಮಾಡಿಕೊಂಡಿರುವ ಮಾವುತರು ಹಾಗೂ ಕಾವಾಡಿಗಳು ಪುಂಡಾನೆ, ನರಭಕ್ಷಕ ಹುಲಿ ಸೆರೆ ಕಾರ್ಯಾಚರಣೆಗಳಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಇಡೀ ದೇಶದಲ್ಲಿಯೇ ಆನೆಗಳನ್ನು ಪಳಗಿಸುವಲ್ಲಿ ಕರ್ನಾಟಕದ ಮಾವುತ ಮತ್ತು ಕಾವಾಡಿಗಳಿಗೆ ವಿಶೇಷ ಕೌಶಲ್ಯವಿದೆ. ಹೀಗಾಗಿಯೇ ನೆರೆಯ ಆಂಧ್ರಪ್ರದೇಶ, ಗೋವಾ ಮೊದಲಾದ ರಾಜ್ಯಗಳು ಸಹ ಕುಮ್ಕಿ ಆನೆಯ ಸಹಾಯಕ್ಕೆ ರಾಜ್ಯಕ್ಕೆ ಮನವಿ ಮಾಡುತ್ತವೆ ಎಂದು ತಿಳಿಸಿದರು. ಇದನ್ನೂ ಓದಿ: ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ? – ಬಿ.ಕೆ ಹರಿಪ್ರಸಾದ್ ಪ್ರಶ್ನೆ
ಮಾವುತರು ಮತ್ತು ಕಾವಾಡಿಗಳಿಗೆ ಆನೆಗಳನ್ನು ಸೆರೆ ಹಿಡಿಯುವ ಮತ್ತು ಪಳಗಿಸುವ, ನಿಯಂತ್ರಿಸುವ, ಪಾಲನೆ ಹಾಗೂ ಪೋಷಣೆ ಮಾಡುವ ಕಲೆ ರಕ್ತಗತವಾಗಿ ಬಂದಿದೆ. ಈ ಕಲೆಯನ್ನು ಪಠ್ಯ ಪುಸ್ತಕದಿಂದ ಅಥವಾ ಶಾಲಾ-ಕಾಲೇಜಿನಲ್ಲಿ ಕಲಿ ಸಲುಸಾಧ್ಯವಿಲ್ಲ. ನಮ್ಮ ರಾಜ್ಯದ ಮಾವುತರು ಹಾಗೂ ಕಾವಾಡಿಗಳಿಗೆ ವಂಶಪಾರಂಪರ್ಯವಾಗಿ ಕೌಶಲ್ಯವಿದ್ದರೂ, ಅವರಿಗೆ ತಜ್ಞರಿಂದ ವೃತ್ತಿ ತರಬೇತಿಯನ್ನೂ ಕೊಡಿಸಲಾಗುತ್ತಿದ್ದು, ಇದು ಅವರ ನೈಪುಣ್ಯತೆಯನ್ನು ಮತ್ತಷ್ಟು ಹೆಚ್ಚಿಸುತ್ತಿದೆ. ಮಾವುತರು, ಕಾವಾಡಿಗಳ ನ್ಯಾಯಯುತ ಬೇಡಿಕೆಯ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವ ಭರವಸೆ ನೀಡಿದರು. ಇದನ್ನೂ ಓದಿ: ಮುಡಾ ಕೇಸಲ್ಲಿ ಬಿ-ರಿಪೋರ್ಟ್‌ಗೆ ಸ್ನೇಹಮಯಿ ಆಕ್ಷೇಪ – ಅ.8ಕ್ಕೆ ಆದೇಶ ಕಾಯ್ದಿರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
ಮೈಸೂರು ದಸರಾ ಜಂಬೂಸವಾರಿಯಲ್ಲಿ 8 ಬಾರಿ ಅಂಬಾರಿ ಹೊತ್ತು ಗಜಗಾಂಭೀರ್ಯದಿಂದ ಹೆಜ್ಜೆಹಾಕುತ್ತಾ ಜನಮನ ಗೆದ್ದಿದ್ದ ಅರ್ಜುನ ಆನೆ ಹಾಸನ ಜಿಲ್ಲೆ ಯಸಳೂರು ಬಳಿ ಆನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾಗಿದ್ದು, ಸರ್ಕಾರ ಅರ್ಜುನ ಇದ್ದ ನಾಗರಹೊಳೆಯ ಬಳ್ಳೆ ಮತ್ತು ಯಸಳೂರಿನಲ್ಲಿ ಸ್ಮಾರಕ ನಿರ್ಮಿಸಿದೆ. ಈಗಾಗಲೇ ಬಳ್ಳೆಯ ಸ್ಮಾರಕವನ್ನು ಉದ್ಘಾಟಿಸಲಾಗಿದ್ದು, ಈ ತಿಂಗಳಲ್ಲಿ ಯಸಳೂರಿನಲ್ಲೂ ಅರ್ಜುನ ಆನೆ ಸ್ಮಾರಕ ಉದ್ಘಾಟಿಸುವುದಾಗಿ ತಿಳಿಸಿದರು. ಇದನ್ನೂ ಓದಿ: ಉತ್ತರ ಕರ್ನಾಟಕದಲ್ಲಿ ಮಳೆ ಅವಾಂತರ – ಮಂಗಳವಾರ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ
ಮೈಸೂರು: ರಾತ್ರೋರಾತ್ರಿ ಅರಮನೆ ಆವರಣಕ್ಕೆ ಬಂದು ದಸರಾ ಆನೆಗಳನ್ನು (Dasara Elephants) ತಬ್ಬಿಕೊಂಡು ರೀಲ್ಸ್ ಮಾಡಿರುವ ಘಟನೆ ಮೈಸೂರಿನ (Mysuru) ಅರಮನೆ ಆವರಣದಲ್ಲಿ (Palace Ground) ನಡೆದಿದೆ.
ರಾತ್ರೋರಾತ್ರಿ ಯಾರು ಇಲ್ಲದ ವೇಳೆ ಕರಿಕಲ್ಲುತೊಟ್ಟಿ ಮೂಲಕ ಅರಮನೆ ಆವರಣಕ್ಕೆ ಎರಡು ಕಾರುಗಳಲ್ಲಿ ಪ್ರವೇಶ ಪಡೆದಿರುವ ಯುವತಿ ಆನೆಗಳು ವಾಸ್ತವ್ಯ ಹೂಡಿರುವ ಸ್ಥಳಕ್ಕೆ ಹೋಗಿ ಫೋಟೊಶೂಟ್ ಮಾಡಿಸಿದ್ದಾಳೆ. ಮೊಬೈಲ್‌ನ ಫ್ಲ್ಯಾಶ್ ಲೈಟ್ ಬಳಸಿಕೊಂಡು ರೀಲ್ಸ್ ಮಾಡಿ, ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾಳೆ.
ಅರಮನೆ ನಿಯಮಗಳ ಪ್ರಕಾರ, ಆನೆಗಳು ವಾಸ್ತವ್ಯ ಹೂಡಿರುವ ಸ್ಥಳಕ್ಕೆ ರಾತ್ರಿ ವೇಳೆ ಯಾರು ಹೋಗುವಂತಿಲ್ಲ. ಫ್ಲ್ಯಾಶ್ ಲೈಟ್‌ಗಳನ್ನ ಬಳಸಿ ಫೋಟೊಶೂಟ್ ಮಾಡುವಂತಿಲ್ಲ. ಸದ್ಯ ಈ ವಿಡಿಯೋ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದು, ಅರಣ್ಯ ಅಧಿಕಾರಿಗಳು ಪ್ರಭಾವಿಗಳ ಮುಂದೆ ಮಂಡಿಯೂರಿ ಕಾಡು ಪ್ರಾಣಿಗಳ ಜೊತೆ ಚೆಲ್ಲಾಟಕ್ಕಿಳಿದಿದ್ದಾರೆ ಎನ್ನುವ ಪ್ರಶ್ನೆ ಮೂಡಿದೆ.
ಜಂಬೂ ಸವಾರಿಯಿಲ್ಲದೇ ಮೈಸೂರು ದಸರಾ (Mysuru Dasara) ಊಹಿಸಿಕೊಳ್ಳೋದಕ್ಕೂ ಸಾಧ್ಯವಿಲ್ಲ. ಮೈಸೂರು ದಸರಾ ಮಹೋತ್ಸವಕ್ಕೆ ಶತಮಾನಗಳ ಇತಿಹಾಸವಿದೆ. ಈ ದಸರಾ ಮಹೋತ್ಸವದಲ್ಲಿ ಜಂಬೂ ಸವಾರಿ ಅಂದ್ರೆ ಆನೆಗಳೇ ಆಕರ್ಷಣೆ. ಮೈಸೂರು ಮಹಾರಾಜರ ಆಡಳಿತದ ನಂತರವೂ ಆನೆಯ ಮೇಲೆ ಅಂಬಾರಿ ಹೊರುವ ಪರಂಪರೆ ಸಾಗಿ ಬಂದಿದೆ. ಅದೇ ರೀತಿ ಈ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತ ಆನೆಗಳ ಇತಿಹಾಸ ಅಷ್ಟೇ ವಿಸ್ಮಯ. ಹೀಗೆ ಇತಿಹಾಸ ನಿರ್ಮಿಸಿ ಹೋದ ಹಳೆಯ ಆನೆಗಳ ಸಾಲಿನಲ್ಲಿ ಈಗ ಅಭಿಮನ್ಯುವೇ (Abhimanyu Elephant) ಕೊನೆಯವನಾಗಿದ್ದು, ದಶಕಗಳಿಂದ ಈಚೆಗೆ ಬಂದ ಆನೆಗೆ ಅಂಬಾರಿ ಹೊರುವ ಹೊಣೆ ಬಿಟ್ಟುಕೊಡುವ ಕಾಲ ಬಂದೇ ಬಿಟ್ಟಿದೆ.
ಹೌದು. ಪ್ರಸಕ್ತ ವರ್ಷದ ದಸರಾ ಮಹೋತ್ಸವಕ್ಕೆ ಭರ್ಜರಿ ತಯಾರಿ ಶುರುವಾಗಿದೆ. ನಾಡಹಬ್ಬ ದಸರಾದ ಐತಿಹಾಸಿಕ ಜಂಬೂ ಸವಾರಿಯಲ್ಲಿ ಈ ಬಾರಿಯೂ 59 ವರ್ಷ ವಯಸ್ಸಿನ ಅಭಿಮನ್ಯು ಆನೆಯೇ ಅಂಬಾರಿ ಹೊರಲಿದೆ. ದಸರಾ ಮಹೋತ್ಸವಲ್ಲಿ ಪಾಲ್ಗೊಳ್ಳಲಿರುವ 14 ಆನೆಗಳ ಪೈಕಿ 9 ಆನೆಗಳ ಪಟ್ಟಿಯನ್ನ ಈಗಾಗಲೇ ಬಿಡುಗಡೆ ಮಾಡಿದ್ದು, ಆಗಸ್ಟ್ 4ರಂದು (ಸೋಮವಾರ) ಅವು ಗಜಪಯಣದ ಮೂಲಕ ಅರಮನೆ ಅಂಗಳಕ್ಕೆ ಬಂದಿಳಿಯಲಿವೆ.
ದಸರಾ ಆನೆಗಳಿಗೂ (Dasara Elephants) ಶತಮಾನದ ನಂಟು ಇದೆ. ಎಲ್ಲೆಡೆ ಹೊಸ ಪೀಳಿಗೆ ಪ್ರವೇಶಿಸಿದಂತೆ ಮೈಸೂರಿನ ಆನೆಗಳಲ್ಲೂ ಬದಲಾವಣೆ ಆಗುತ್ತಿದೆ. ಆದ್ರೆ ಈಗ ಇರುವ ಹಳೆಯ ಆನೆಗಳ ಪೈಕಿ ಅಭಿಮನ್ಯುನೇ ಹಿರಿಯ. 59 ವರ್ಷ ವಯಸ್ಸಿನ ಅಭಿಮನ್ಯು ಮುಂದಿ ವರ್ಷ ಅಂಬಾರಿ ಹೊತ್ತರೆ ಮುಗಿಯಿತು. ಏಕೆಂದರೆ ಅರಣ್ಯ ಅಧಿಕಾರಿಗಳು ಹೇಳುವಂತೆ 60 ವರ್ಷ ತುಂಬಿದ ಆನೆಗಳಿಗೆ ನಿಯಮದಂತೆ ನಿವೃತ್ತಿ ಕೊಡಬೇಕು. ಅಭಿಮನ್ಯುವಿಗೆ ಈಗ 59 ವರ್ಷ ವಯಸ್ಸಾಗಿದ್ದು, ಮುಂದಿನ ವರ್ಷ 60ನೇ ವಯಸ್ಸಿಗೆ ಕಾಲಿಡಲಿದ್ದಾನೆ. ಮುಂದಿನ ವರ್ಷ ಅಂಬಾರಿ ಹೊತ್ತರೆ ಅಲ್ಲಿಗೆ ಅಭಿಮನ್ಯು ಇತಿಹಾಸ ಪುಟ ಸೇರಿಕೊಳ್ಳಲಿದ್ದಾನೆ ಎನ್ನುತ್ತಾರೆ ಡಿಸಿಎಫ್ ಪ್ರಭು.
ಅಭಿಮನ್ಯು ಹೆಮ್ಮರವಾಗಿ ಬೆಳೆದಿದ್ದು ಹೇಗೆ?
1951ರ ಸಮಯದಲ್ಲಿ ಸುರ್ಗುಜಾ ಮಧ್ಯಪ್ರದೇಶದ ಭಾಗವಾಗಿತ್ತು. ಆದ್ರೆ 2000 ಇಸವಿಯ ನಂತರ ಛತ್ತಿಸ್‌ಘಡದ ಜಿಲ್ಲೆಯಾಗಿ ಸೇರ್ಪಡೆಯಾಯಿತು. ಈ ಸ್ಥಳಕ್ಕೂ ನಮ್ಮ ಕರ್ನಾಟಕಕ್ಕೂ ನಂಟು ಇದೆ. ಅದು ಹೇಗೆ ಅಂತೀರಾ..? ಈ ಹಿಂದೆ ಸುಮಾರು 3 ದಶಕಗಳ ಕಾಲ ಸರ್ಗುಜಾದಲ್ಲಿ ಆನೆಗಳ ಹಾವಳಿ ಮಿತಿ ಮೀರಿತ್ತು. ಆನೆಗಳನ್ನ ಸೆರೆ ಹಿಡಿಯಬೇಕು, ಉಪಟಳ ತಪ್ಪಿಸಬೇಕು ಅನ್ನೋ ಕೂಗು ಸರ್ಗೂಜಾ ಭಾಗದಲ್ಲಿ ಜೋರಾಗಿತ್ತು. ಸ್ಥಳೀಯರ ಒತ್ತಡಕ್ಕೆ ಮಣಿದ ಅಂದಿನ ಮಧ್ಯಪ್ರದೇಶದ ರಾಜ್ಯ ಸರ್ಕಾರ ಆನೆಗಳನ್ನ ಸೆರೆ ಹಿಡಿಯೋದಕ್ಕೇನೋ ಅನುಮತಿ ನೀಡಿತು. ಆದ್ರೆ ಅವುಗಳನ್ನ ಸೆರೆ ಹಿಡಿಯುವ ಕಾರ್ಯಾಚರಣೆ ಅಷ್ಟು ಸುಲಭವಾಗಿರಲಿಲ್ಲ. ಆಗ ಮಧ್ಯಪ್ರದೇಶದ ಚಿತ್ತ ಹಾಯಿಸಿದ್ದು, ಕರ್ನಾಟಕದತ್ತ. ಖೆಡ್ಡಕ್ಕೆ ಕೆಡವುವ ಕಾರ್ಯಾಚರಣೆಯಲ್ಲಿ ಕರ್ನಾಟಕದ ಆನೆಗಳು ಆಗಲೇ ಬಲಶಾಲಿಗಳಾಗಿ ಗುರುತಿಸಿಕೊಂಡಿದ್ದವು. ಇಲ್ಲಿಂದ ಆನೆಗಳನ್ನ ಕರೆದುಕೊಂಡು ಬಂದು ಆನೆಗಳನ್ನ ಸೆರೆಹಿಡಿಯುವ ತೀರ್ಮಾನಕ್ಕೆ ಅಲ್ಲಿನ ಸರ್ಕಾರ ಮುಂದಾಯಿತು. ಅದರಂತೆ ಇಂದಿನ ಅಂಬಾರಿ ಹೊರುವ ಕ್ಯಾಪ್ಟನ್ ಅಭಿಮನ್ಯು ಸೇರಿ ಹಲವು ಆನೆಗಳ ತಂಡವನ್ನ ಸರ್ಗುಜಾಕ್ಕೆ ಕರೆದೊಯ್ಯಲಾಯ್ತು. ನೀರಿಕ್ಷೆಯಂತೆ ನಮ್ಮ ಆನೆಗಳು ಸರ್ಗುಜಾದಲ್ಲಿ ಸುಮಾರು 42 ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಯಶಸ್ವಿಯಾದವು. ಈ ಆನೆ ಸೆರೆ ಕಾರ್ಯಾಚರಣೆ ಆಗ The Last Migration – Wild Elephant Captureʼ ಸಾಕ್ಷ್ಯಚಿತ್ರವಾಗಿ ರೂಪುಗೊಂಡಿತು. ಇದು ನಮ್ಮ ಅಭಿಮನ್ಯುವಿನ ಮೇಲಿನ ಅಭಿಮಾನ ಹೆಚ್ಚಿಸಿ ಈಗಲೂ ಅಪರೇಷನ್ ಎಂದರೆ ʻಅಭಿಮನ್ಯುʼ ಎನ್ನುವಷ್ಟರ ಮಟ್ಟಿಗೆ ಬೆಳೆದು ನಿಂತಿದೆ. ಆದ್ರೆ ಇನ್ನೊಂದು ವರ್ಷ ಕಳೆದರೆ ಆಮೇಲೆ ಅಭಿಮನ್ಯು ಅಂಬಾರಿ ಹೊರುವ ಸೌಭಾಗ್ಯದಿಂದ ದೂರವಾಗಲಿದ್ದಾನೆ ಅನ್ನೋದು ವಿಷಾದನೀಯ.
ಅಂಬಾರಿ ಹೊತ್ತ ಆನೆಗಳು ಅಜರಾಮರ
ಮೈಸೂರು ದಸರಾ ಮಹೋತ್ಸವದಲ್ಲಿ ಹಲವು ಆನೆಗಳು ಭಾಗಿಯಾಗಿವೆ. ಇಂತ ಆನೆಗಳ ಪಟ್ಟಿ ನೂರಕ್ಕೂ ಅಧಿಕ. ಆದ್ರೆ ಅಂಬಾರಿ ಹೊತ್ತ ಆನೆಗಳ ಸಂಖ್ಯೆ ಕಡಿಮೆ. ಇದರಲ್ಲಿ ಶತಮಾನಗಳಷ್ಟು ಹಳೆಯಾದ ಜಯಮಾರ್ತಾಂಡ ಆನೆಯೇ ಅತ್ಯಂತ ಹಿರಿಯ. ಈತನೇ ಅಂಬಾರಿ ಹೊತ್ತ ಮೊದಲಿಗ. ಹಲವಾರು ವರ್ಷ ಮಾರ್ತಾಂಡ ಯಶಸ್ವಿಯಾಗಿ ತನ್ನ ಜವಾಬ್ದಾರಿ ನಿಭಾಯಿಸಿ ಮಹಾರಾಜರ ಪ್ರೀತಿಗೂ ಪಾತ್ರನಾಗಿದ್ದ. ಈಗಲೂ ಅರಮನೆಯ ದೊಡ್ಡ ದ್ವಾರದ (ಜಯಮಾರ್ತಾಂಡ ದ್ವಾರ) ರೂಪದಲ್ಲಿ ಅಜರಾಮರನಾಗಿದ್ದಾನೆ. ಆನಂತರ ವಿಜಯಬಹದ್ದೂರ್, ರಾಮಪ್ರಸಾದ್, ನಂಜುಂಡ, ಐರಾವತ, ಮೋತಿಲಾಲ್, ರಾಜೇಂದ್ರ, ಬಿಳಿಗಿರಿ, ದ್ರೋಣ, ಬಲರಾಮ, ಅರ್ಜುನನ ನಂತರ ಅಭಿಮನ್ಯು ಈ ಸ್ಥಾನ ಅಲಂಕರಿಸಿದ್ದಾನೆ.
ಕೆಲ ಆನೆಗಳ ಅಕಾಲಿಕ ಮರಣ
ಇನ್ನು ದಸರೆಯಲ್ಲಿ ಪಾಲ್ಗೊಂಡು ವಿಶ್ವವಿಖ್ಯಾತಿಯಾಗಿದ್ದ ಆನೆಗಳ ಪೈಕಿ ಕೆಲ ಆನೆಗಳು ಅಕಾಲಿಕ ಮರಣಕ್ಕೆ ತುತ್ತಾಗಿ ಕಹಿ ಸುದ್ದಿ ನೀಡಿದ ಘಟನೆಗಳೂ ನಮ್ಮ ಕಣ್ಣಮುಂದಿವೆ. ಹೌದು. ಈ ಹಿಂದೆ ದ್ರೋಣ ಆನೆ ವಿದ್ಯುತ್ ದುರಂತದಿಂದ ಸಾವನ್ನಪ್ಪಿತ್ತು. 2023ರಲ್ಲಿ ಎಲ್ಲರ ಮನೆ ಮಾತಾಗಿದ್ದ ಅರ್ಜುನ ಆನೆ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹಾಸನದಲ್ಲಿ ಕಾಡಾನೆ ತಿವಿತದಿಂದ ಸಾವನ್ನಪ್ಪಿತ್ತು. ಕೋಟ್ಯಂತರ ಅಭಿಮಾನಿಗಳು ಅರ್ಜುನನ್ನ ನೆನೆದು ಕಣ್ಣೀರಿಟ್ಟಿದ್ದರು. ಇದೀಗ ಸರ್ಕಾರ ಅರ್ಜುನನ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿಯನ್ನೂ ಘೋಷಣೆ ಮಾಡಿದೆ. ಇದಕ್ಕೆ ಒಂದು ವರ್ಷದ ಮುನ್ನವೇ ಅಂಬಾರಿ ಹೊರುವ ಆನೆಗಳ ಸಾಲಿನಲ್ಲಿದ್ದ ಗೋಪಾಲಕೃಷ್ಣ ಆನೆಯೂ ಅಯ್ಯಪ್ಪ ಎಂಬ ಆನೆ ಜೊತೆಗೆ ಕಾದಾಟ ನಡೆಸಿ ಸಾವನ್ನಪ್ಪಿತ್ತು. ದಸರೆ, ಗಜಪಯಣ ಬಂತೆಂದರೆ, ಆನೆ ಪ್ರಿಯರಿಗೆ ಇದು ಮರೆಯಲಾಗದ ಕಹಿ ಘಟನೆ.
ಅಭಿಮನ್ಯು ನಂತರದ ಯಜಮಾನ ಯಾರು?
ದಸರಾ ಪ್ರತಿ ವರ್ಷದ ನಾಡ ಹಬ್ಬ. ಮೈಸೂರು ದಸರಾವೆಂದರೆ ಅದು ಜಂಬೂ ಸವಾರಿಯೂ ಹೌದು. ಅಭಿಮನ್ಯು ನಿವೃತ್ತಿ ನಂತರ ಹಳೆ ತಲೆಮಾರಿನ ಆನೆಗಳ ಕೊಂಡಿ ಮುಗಿಯಲಿದೆ. ಬಳಿಕ ಹೊಸ ತಲೆಮಾರಿನ ಆನೆಗಳದ್ದೇ ಕಾಲ. 2026ರ ನಂತರ ಹೊಸ ಕ್ಯಾಪ್ಟನ್ ಬೇಕೇ ಬೇಕು. ಇದಕ್ಕಾಗಿ ಈಗಿನಿಂದಲೇ ಅರಣ್ಯ ಇಲಾಖೆ ತಯಾರಿಯನ್ನೂ ಮಾಡಿಕೊಂಡಿದೆ. ದಶಕದ ಹಿಂದೆಯಷ್ಟೆ ಸೆರೆ ಸಿಕ್ಕು ನಾಲೈದು ವರ್ಷದಿಂದ ದಸರಾಕ್ಕೆ ಬರುತ್ತಿರುವ ಆನೆಗಳಿಗೂ ಅಂಬಾರಿ ಹೊರುವ ಅವಕಾಶ ಸಿಗಲಿದೆ. ಇದರಲ್ಲಿ ಧನಂಜಯ, ಮಹೇಂದ್ರ, ಭೀಮಾ, ಗೋಪಿ, ಪ್ರಶಾಂತ, ಏಕಲವ್ಯ ಆನೆಗಳಿವೆ. ಇವುಗಳಲ್ಲಿ ಧನಂಜಯ ಇಲ್ಲವೇ ಮಹೇಂದ್ರಗೆ ಮುಂದಿನ ಅವಕಾಶ ಸಿಗುವ ಸಾಧ್ಯತೆಗಳಿವೆ ಎನ್ನುತ್ತಾರೆ ಅರಣ್ಯಾಧಿಕಾರಿಗಳು.
ಅಂಬಾರಿ ಆನೆಗಳ ಸಿನಿಮಾ ನಂಟು
ಹಲವು ಆನೆಗಳು ಅಂಬಾರಿ ಹೊತ್ತು ಹೆಸರುವಾಸಿಯಾಗಿವೆ. ಅಲ್ಲದೇ ಸಿನಿಮಾ ನಂಟನ್ನು ಹೊಂದಿರುವುದು ವಿಶೇಷ. ಹೌದು. ಐರಾವತ ಆನೆಯಂತು ಹಾಲಿವುಡ್ ಸಿನಿಮಾದಲ್ಲೇ ನಟಿಸಿ ಸೈ ಎನಿಸಿಕೊಂಡಿದೆ. 1935ರಲ್ಲಿ ತೆರೆ ಕಂಡ ʻದಿ ಎಲಿಫೆಂಟ್ ಬಾಯ್ʼ ಅನ್ನೋ ಚಿತ್ರದಲ್ಲಿ ನಟಿಸಿದ್ದ. ಇನ್ನೂ ಅಣ್ಣಾವ್ರ ಸೂಪರ್ ಹಿಟ್ ಸಿನಿಮಾದಲ್ಲಿ ಕಾಣಿಸಿಕೊಂಡಿರೋದು ರಾಜೇಂದ್ರ ಆನೆ. ಅಣ್ಣಾವ್ರ ಗಂಧದ ಗುಡಿ ಸಿನಿಮಾ ನೋಡುವಾಗೆಲ್ಲ ರಾಜೇಂದ್ರ ಕಣ್ಮುಂದೆ ಬರುತ್ತಾನೆ. ಇನ್ನೂ ಅಭಿಮನ್ಯು ಕೂಡ ವಿಶೇಷ ಸಾಕ್ಷ್ಯಚಿತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾನೆ. ದ್ರೋಣ ಆನೆಯೂ ಸ್ಟೋರ್ಡ್ ಆಫ್ ಟಿಪ್ಪು ಸುಲ್ತಾನ್ ಧಾರಾವಾಹಿಯಲ್ಲಿ ಕಾಣಿಸಿಕೊಂಡಿತ್ತು.
ಹೀಗೆ ಮೈಸೂರು ದಸರಾದ ಮುಕುಟ ಮಣಿಗಳಂತೆ ಕಾಣಿಸಿಕೊಳ್ಳುವ ದಸರಾ ಆನೆಗಳ ಇತಿಹಾಸ ಅವಿಸ್ಮರಣೀಯವಾಗಿದೆ. ಆದ್ರೆ ಅಭಿಮನ್ಯು ನಂತರ ಯಾರಾಗಲಿದ್ದಾರೆ ಅಂಬಾರಿಯ ಸಾರಥಿ ಅನ್ನೋದಕ್ಕೆ ಇನ್ನಷ್ಟೇ ಉತ್ತರ ಸಿಗಬೇಕಿದೆ.
ಬೆಂಗಳೂರು/ಮೈಸೂರು: ಈ ಬಾರಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ಒಟ್ಟು 11 ದಿನಗಳ ಕಾಲ ದಸರಾ ಆಚರಣೆ ನಡೆಯಲಿದೆ. ನಾಡಹಬ್ಬ ದಸರಾವನ್ನು (Dadara Festival) ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ದಸರಾ ಆಚರಣೆ ಕುರಿತ ಪೂರ್ವಭಾವಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಮೈಸೂರಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ – ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಸಾಗರ
ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರ ವರೆಗೆ ಒಟ್ಟು 11 ದಿನಗಳ ಕಾಲ ದಸರಾ ಆಚರಣೆ ನಡೆಯಲಿದೆ. ಕಳೆದ 100 ವರ್ಷದಲ್ಲಿ 8 ನೇ ಬಾರಿ 11 ದಿನದ ದಸರಾ ಆಚರಣೆ ಮಾಡಲಾಗುತ್ತಿದೆ. ಈ ಬಾರಿಯೂ 21 ದಿನಗಳ ಕಾಲ ದೀಪ ಅಲಂಕಾರ ಇರಲಿದೆ. ಈ ಬಾರಿ ಅಂದಾಜು 10 ಲಕ್ಷ ಜನ ದಸರಾದಲ್ಲಿ ಭಾಗವಹಿಸಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಬಿನಿಯಿಂದ 25 ಸಾವಿರ ಕ್ಯುಸೆಕ್ ನೀರು ಹೊರಕ್ಕೆ – ಯಾವುದೇ ಕ್ಷಣದಲ್ಲಿ ಮತ್ತಷ್ಟು ನೀರು ಬಿಡುಗಡೆ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಅಂಬಾವಿಲಾಸ ಅರಮನೆಯಲ್ಲಿ ಭರದ ಸಿದ್ಧತೆ ನಡೆದಿದೆ.
ಈ ನಡುವೆ ಜಿಲ್ಲಾಡಳಿತ ಜಂಬೂ ಸವಾರಿ ಮಾರ್ಗವನ್ನ ಬದಲಾವಣೆ ಮಾಡಿದೆ. ಅರಮನೆ ಆವರಣದಲ್ಲಿ ಜಂಬೂ ಸವಾರಿ ಮಾರ್ಗ ಬದಲಾವಣೆ ಮಾಡಿದ್ದು, ಹೊಸ ಸಂಪ್ರದಾಯ ಆರಂಭಿಸಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ.
ಪ್ರತಿ ಬಾರಿ ಅಂಬಾರಿ ಕಟ್ಟಿದ ನಂತರ ಆನೆ ನೇರವಾಗಿ ಪುಷ್ಪಾರ್ಚನೆಗೆ ಬಂದು ನಿಲ್ಲುತ್ತಿತ್ತು. ಆದ್ರೆ ಈ ಬಾರಿ ಪುಷ್ಪಾರ್ಚನೆಗೆ ಮೊದಲೇ ಸುಮಾರು 400 ಮೀಟರ್ ಸಂಚಾರ ಮಾಡುವಂತೆ ಪ್ಲಾನ್ ಮಾಡಲಾಗಿದೆ. ಅಂಬಾರಿ ಕಟ್ಟಿದ ನಂತರ ಅಭಿಮನ್ಯುವು ತ್ರಿನಯನೇಶ್ವರ ದೇವಸ್ಥಾನ ತಲುಪಿ, ಅಲ್ಲಿಂದ ಶ್ವೇತ ವರಹ ದೇವಸ್ಥಾನ ಬಳಿ ಸಾಗಿ ನಂತರ ಗಣ್ಯರ ಬಳಿ ಬಂದು ನಿಲ್ಲುತ್ತದೆ. ಹೀಗಾಗಿ ಗಣ್ಯರ ಪುಷ್ಪಾರ್ಚನೆಗೆ ಮುನ್ನವೇ 10 ಸಾವಿರಕ್ಕೂ ಹೆಚ್ಚು ಮಂದಿಗೆ ಅಂಬಾರಿಯಲ್ಲಿ ಅಲಂಕಾರ ಭೂಷಿತಳಾದ ತಾಯಿ ಚಾಮುಂಡಿ ದರ್ಶನ ಕೊಡಲಿದ್ದಾಳೆ.
10 ರಿಂದ 15 ಸಾವಿರ ಆಸನ ವ್ಯವಸ್ಥೆ:
ಇನ್ನೂ ಕೋವಿಡ್ ಸಮಯ ಹೊರತುಪಡಿಸಿ ಉಳಿದೆಲ್ಲ ವರ್ಷ ಜಂಬೂ ಸವಾರಿಗೆ ಅರಮನೆ ಆವರಣದಲ್ಲಿ 25 ರಿಂದ 30 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗುತ್ತಿತ್ತು. ಆದ್ರೆ ಈ ಬಾರಿ 10 -15 ಸಾವಿರ ಹೆಚ್ಚುವರಿ ಆಸನಗಳ ವ್ಯವಸ್ಥೆಗೆ ಜಿಲ್ಲಾಡಳಿತ ಪ್ಲ್ಯಾನ್ ಮಾಡಿದೆ. ಹಾಗಾಗಿ 40 ಸಾವಿರ ಆಸನಗಳ ವ್ಯವಸ್ಥೆಗೆ ತೀರ್ಮಾನಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಮೆರವಣಿಗೆಯಲ್ಲಿ 9 ಆನೆಗಳು ಭಾಗಿ:
ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಮೆರವಣಿಗೆಗೆ ಸಂಬಂಧಿಸಿದಂತೆ ಮಾತನಾಡಿರುವ ಡಿಸಿಎಫ್ ಪ್ರಭುಗೌಡ, ಕಳೆದ 50 ದಿನಗಳಿಂದ ಆನೆಗಳಿಗೆ ತಯಾರಿ ನೀಡಿದ್ದೇವೆ, ಯಾವುದೇ ಸಮಸ್ಯೆಗಳಿಲ್ಲ. ಯಶಸ್ವಿಯಾಗಿ ಜಂಬೂ ಸವಾರಿ ಮಾಡುವ ಕಾನ್ಪಿಡೆನ್ಸ್‌ನಲ್ಲಿದ್ದೇವೆ. ನಿನ್ನೆ ಸಂಜೆ ಕೂಡ ಮಾವುತ, ಕಾವಾಡಿಗರ ತಂಡದ ಜೊತೆ ಸಭೆ ಮಾಡಿದ್ದೇವೆ ಅವರೆಲ್ಲರೂ ಕೂಡ ಉತ್ಸಾಹದಲ್ಲಿದ್ದಾರೆ. 14 ಆನೆಗಳ ಪೈಕಿ 9 ಆನೆಗಳು ಮೆರವಣಿಗೆಯಲ್ಲಿ ಭಾಗಿಯಾಗಲಿವೆ. 5 ಆನೆಗಳು ಮೀಸಲು ಆನೆಗಳಾಗಿರಲಿವೆ. ಇವು ಮೆರವಣಿಗೆಯಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಶ್ರೀರಂಗಪಟ್ಟಣ ಜಂಬೂ ಸವಾರಿ ಮೆರವಣಿಗೆ ವೇಳೆ ಲಕ್ಷ್ಮಿ ಆನೆ ಗಲಿಬಿಲಿ ಆಗಿತ್ತು. ಅದು ಲಾರಿ ಹತ್ತೋಕೆ ಹಠ ಮಾಡಿತ್ತು. ಅದನ್ನ ಹೊರತು ಪಡಿಸಿದ್ರೆ ಜನ ನೋಡಿ ನಮ್ಮ ಆನೆಗಳು ಗಾಬರಿಯಾಗಲ್ಲ. ಆ ರೀತಿಯ ಯಾವುದೇ ತೊಂದರೆ ಇಲ್ಲ ಎಂದು ಡಿಸಿಎಫ್ ಪ್ರಭುಗೌಡ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.
ಮೈಸೂರು: ಎಲ್ಲೆಡೆ ಗಣೇಶ ಹಬ್ಬವನ್ನು (Ganesh Chaturthi) ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಅರಮನೆ ನಗರ ಮೈಸೂರಿನಲ್ಲಿ (Mysuru) ದಸರಾ ಆನೆಗಳಿಗೂ (Dasara Elephant) ಪೂಜೆ ನೆರವೇರಿಸಲಾಯಿತು. ನಾಡಹಬ್ಬ ದಸರಾ ಮಹೋತ್ಸವಕ್ಕಾಗಿ ಮೈಸೂರಿಗೆ ಬಂದಿರುವ ಆನೆಗಳಿಗೆ ಅರಮನೆಯ ಆವರಣದಲ್ಲಿ ಪೂಜೆ ನೆರವೇರಿಸಲಾಯಿತು.
ಆನೆಗಳನ್ನು ಸಾಲಾಗಿ ನಿಲ್ಲಿಸಿ ಪೂಜೆ ನೆರವೇರಿಸಲಾಗಿದೆ. ಮಳೆಯ ನಡುವೆಯೇ ಗಣಪತಿಗೇ ಇಷ್ಟವಾದ ಮೋದಕ, ಬೆಲ್ಲ, ಕಬ್ಬು ಹೀಗೆ ಅನೇಕ ಭಕ್ಷ್ಯಗಳನ್ನು ನೈವೇದ್ಯವಾಗಿ ಅರ್ಪಿಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಸಿಸಿಎಫ್ ಮಾಲತಿ ಪ್ರಿಯಾ, ಡಿಸಿಎಫ್ ಡಾ.ಪ್ರಭುಗೌಡ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಸುಗ್ರೀವ, ಮಹೇಂದ್ರ, ಗೋಪಿ, ಭೀಮ, ಲಕ್ಷ್ಮಿ, ವರಲಕ್ಷ್ಮಿ ಸೇರಿದಂತೆ ಎಲ್ಲ 14 ಆನೆಗಳೂ ಪಾಲ್ಗೊಂಡಿದ್ದವು. ಇದನ್ನೂ ಓದಿ: ಕಲಬುರಗಿಯಲ್ಲಿ ಹನಿಟ್ರ್ಯಾಪ್ ಗ್ಯಾಂಗ್ ಸಕ್ರಿಯ – ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳೇ ಟಾರ್ಗೆಟ್
ಹಾಸನ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳ ಸೆರೆ ಕಾರ್ಯಾಚರಣೆ ನಾಳೆಯಿಂದ (ಶನಿವಾರ) ಮತ್ತೆ ಆರಂಭಗೊಳ್ಳಲಿದೆ. ದುಬಾರೆ ಹಾಗೂ ಮತ್ತಿಗೋಡು ಶಿಬಿರದಿಂದ ಎಂಟು ಸಾಕಾನೆಗಳು ಆಗಮಿಸಿದ್ದು, ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದ ಬಳಿಯ ಕ್ಯಾಂಪ್‌ನಲ್ಲಿವೆ. ಈ ಭಾರಿ ನುರಿತ ತಂಡದೊಂದಿಗೆ ಕಾರ್ಯಾಚರಣೆ ಆಗಮಿಸಲಿದ್ದು ಇದಕ್ಕೆ ಬೇಕಾದ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ಅಂಬಾರಿ ಹೊತ್ತಿದ್ದ ಅಭಿಮನ್ಯು (Abhimanyu Elephant) ಸಹ ಕಾಡಾನೆಗಳ ಹಂಟಿಂಗ್ ಕಾರ್ಯಾಚರಣೆಯಲ್ಲಿ ಭಾಗವಹಿಸಲಿದೆ. ಇಂದು (ಶುಕ್ರವಾರ) ಎಂಟು ಸಾಕಾನೆಗಳಿಗೆ ಪೂಜೆ ಸಲ್ಲಿಸಿ ಕಬ್ಬು, ಬೆಲ್ಲ ನೀಡಲಾಯಿತು. ಈಗಾಗಲೇ ಸೆರೆ ಹಿಡಿಯುವ ಸಲಗಗಳನ್ನು ಗುರುತಿಸಲಾಗಿದ್ದು, ನಾಳೆಯಿಂದ ಸತತ ಒಂದು ತಿಂಗಳ ಕಾಲ ಕಾರ್ಯಾಚರಣೆ ನಡೆಯಲಿದೆ. ಇದನ್ನೂ ಓದಿ: ಅರ್ಜುನನ ಕಾಲಿಗೆ ಗುಂಡೇಟು ಬಿದ್ದಿಲ್ಲ, ಯಾವುದೇ ಲೋಪ ಆಗಿಲ್ಲ: ವೈದ್ಯ ರಮೇಶ್ ಸ್ಪಷ್ಟನೆ
ಮಲೆನಾಡ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ನ.24 ರಿಂದ ಕ್ಯಾಪ್ಟನ್ ಅರ್ಜುನ ನೇತೃತ್ವದಲ್ಲಿ ಆರು ಸಾಕಾನೆಗಳೊಂದಿಗೆ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಎರಡು ಹೆಣ್ಣಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಅಲ್ಲಿಯೇ ಬಿಡಲಾಗಿದ್ದರೆ, ಮೂರು ಪುಂಡಾನೆಗಳನ್ನು ಹಿಡಿದು ರೇಡಿಯೋ ಕಾಲರ್ ಅಳವಡಿಸಿ ಬೇರೆಡೆಗೆ ಸ್ಥಳಾಂತರ ಮಾಡಲಾಗಿತ್ತು. ಡಿ.4 ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮದಗಜದೊಂದಿಗೆ ಕಾದಾಟದ ವೇಳೆ ಅರ್ಜುನ ವೀರಮರಣವನ್ನಪ್ಪಿದ್ದ. ಅಂದಿನಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಕಾರ್ಯಾಚರಣೆ ಮುಂದುವರೆಸಲು ತೀರ್ಮಾನಿಸಲಾಗಿದ್ದು, ನಾಳೆಯಿಂದ ಕಾಡಾನೆ ಹಂಟಿಂಗ್ ಆಪರೇಷನ್ ಶುರುವಾಗಲಿದೆ.
ದುಬಾರೆ, ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು, ಪ್ರಶಾಂತ, ಸುಗ್ರೀವ, ಅಶ್ವತ್ಥಾಮ, ಕರ್ನಾಟಕ ಭೀಮ, ಹರ್ಷ, ಮಹೇಂದ್ರ, ಧನಂಜಯ ಸೇರಿ ಎಂಟು ಸಾಕಾನೆಗಳು ಬಿಕ್ಕೋಡು ಬಳಿಯ ಶಿಬಿರಕ್ಕೆ ಆಗಮಿಸಿದ್ದು ಇಂದು ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್ ಹಾಗೂ ಅರಣ್ಯ ಅಧಿಕಾರಿಗಳು ಪೂಜೆ ಸಲ್ಲಿಸಿ ಕಬ್ಬು, ಬೆಲ್ಲ ನೀಡಿ ಆಪರೇಷನ್ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಬೇಲೂರು ಭಾಗದಲ್ಲಿ ಸುಮಾರು ನಲವತ್ತು ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಕಳೆದ ವಾರ ಮತ್ತಾವರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವಸಂತ ಎಂಬವರು ಬಲಿಯಾಗಿದ್ದರು. ಇದರಿಂದ ಸರ್ಕಾರದ ಹಾಗೂ ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆದ್ದರಿಂದ ನಾಳೆ ಬೇಲೂರು ಭಾಗದಿಂದಲೇ ನರಹಂತಕ ಆನೆ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭವಾಗಲಿದ್ದು, ಜನರಿಗೆ ಆಗುವ ಸಮಸ್ಯೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಹೆಚ್.ಕೆ.ಸುರೇಶ್ ಹೇಳಿದ್ದಾರೆ. ಇದನ್ನೂ ಓದಿ: ಸಕಲೇಶಪುರದ ಗ್ರಾಮದೊಳಗೆ ಎಂಟ್ರಿ ಕೊಟ್ಟ ಗಜಪಡೆ – ಗುಂಪಿನಲ್ಲಿ ಸೇರಿಕೊಂಡ ಅರ್ಜುನನನ್ನು ಕೊಂದ ಪುಂಡಾನೆ
ಕಳೆದ ಬಾರಿಯ ಕಾರ್ಯಾಚರಣೆಯಲ್ಲಿ ಆದ ಅನಾಹುತದಿಂದ ಎಚ್ಚೆತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳು ಈ ಸಲ ನುರಿತ ಅರವಳಿಕೆ ವೈದ್ಯರು ಹಾಗೂ ತಂಡದೊಂದಿಗೆ ಕಾರ್ಯಾಚರಣೆ ನಡೆಸಲಿದ್ದಾರೆ. ಇಂದು ಪೂಜೆ ನಂತರ ಕಾರ್ಯಾಚರಣೆಯಲ್ಲಿ ಭಾಗಿಯಾಗುವ ತಂಡದ ಜೊತೆ ಹಿರಿಯ ಅರಣ್ಯ ಇಲಾಖೆ ಅಧಿಕಾರಿಗಳು ಸಮಾಲೋಚನೆ ನಡೆಸಿ ಅಗತ್ಯ ಸಲಹೆ ಹಾಗೂ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದರು. ಮೊದಲು ಮುಂದುವರಿದ ಭಾಗವಾಗಿ ಮೂರು ಸಲಗಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲಾಗುವುದು. ನಂತರ ಹೆಚ್ಚು ಉಪಟಳ ನೀಡುತ್ತಿರುವ ಕಾಡಾನೆಗಳ ಜೊತೆಗೆ ಅರ್ಜುನನ ಸಾವಿಗೆ ಕಾರಣವಾದ ನರಹಂತಕ ಆನೆಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲಾಗುವುದು. ಇದಕ್ಕೆ ಬೇಕಾದಂತಹ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು ಎಲ್ಲರೂ ಸಹಕಾರ ನೀಡಬೇಕೆಂದು ಸಿಸಿಎಫ್ ರವಿಶಂಕರ್ ಮನವಿ ಮಾಡಿದ್ದಾರೆ.
ಕಳೆದ ಎರಡು ದಶಗಳಿಂದ ಸಕಲೇಶಪುರ, ಆಲೂರು ಹಾಗೂ ನಾಲ್ಕೈದು ವರ್ಷಗಳಿಂದ ಬೇಲೂರು ಭಾಗದಲ್ಲಿ ಗಜಪಡೆ ಗಲಾಟೆ ಮಿತಿಮೀರಿದ್ದು ರೈತರು ಹಾಗೂ ಕಾಫಿ ಬೆಳೆಗಾರರು ಕಂಗಾಲಾಗಿ ಹೋಗಿದ್ದಾರೆ. ಆದರೆ ಸರ್ಕಾರಗಳು ಒಂದೆರಡು ಕಾಡಾನೆಗಳನ್ನು ಹಿಡಿದು ಸ್ಥಳಾಂತರ ಮಾಡಿದರೆ ಸಾಲದು. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯಬೇಕೆಂಬುದು ಎಲ್ಲರ ಒಕ್ಕೊರಲ ಒತ್ತಾಯವಾಗಿದೆ. ಆದರೆ ಭರವಸೆಗಳನ್ನು ನೀಡುತ್ತಲೇ ಇರುವ ಸರ್ಕಾರ ಹಾಗೂ ಅರಣ್ಯ ಇಲಾಖೆ ಮಲೆನಾಡು ಭಾಗದ ಜನರ ನೆಮ್ಮದಿ ಕೆಡಿಸಿರುವ ಪುಂಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡುವ ಮೂಲಕ ತಾತ್ಕಾಲಿಕ ಪರಿಹಾರ ನೀಡಲು ಮುಂದಾಗಿವೆ. ಇದನ್ನೂ ಓದಿ: ಅರ್ಜುನನ ದುರಂತ ಅಂತ್ಯ – ಕಾಡಾನೆ ಸೆರೆ ಕಾರ್ಯಾಚರಣೆ ಸ್ಥಗಿತ
ಬೆಂಗಳೂರು: ದಸರಾ ಆನೆ ಅರ್ಜುನ (Dasara Elephant Arjuna) ಪ್ರಾಣ ಕಳೆದುಕೊಂಡ ಜಾಗ ಹಾಗೂ ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಅಂಬಾರಿ ಹೊತ್ತ ಅರ್ಜುನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅರ್ಜುನನ ಸಾವಿನ ಕುರಿತು ಸಂಪೂರ್ಣ ಮಾಹಿತಿ ಕೇಳಿದ್ದೇನೆ. ಅರ್ಜುನ ಆನೆ ಸಕಲೇಶಪುರದಲ್ಲಿ ಎಲ್ಲಿ ಪ್ರಾಣ ಕಳೆದುಕೊಂಡಿದ್ನೋ ಅಲ್ಲಿಯೇ ಸ್ಮಾರಕ ಮಾಡುತ್ತೇವೆ. ಹಾಗೂ ಹೆಗ್ಗಡದೇವನಕೋಟೆಯಲ್ಲಿಯೂ ಸ್ಮಾರಕ ಮಾಡಲು ತಿಳಿಸಿದ್ದೇವೆ ಎಂದರು.
ಅರ್ಜುನ ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದವನ ಅಚಾನಕ್ ಸಾವಾಗಿದೆ. ಆತ ಇನ್ನೂ ಹೆಚ್ಚು ಕಾಲ ಬದುಕಬೇಕಿತ್ತು, ಇನ್ನೊಂದು ಆನೆ ಕಾರ್ಯಾಚರಣೆಗೆ ಅರ್ಜುನ ನನ್ನ ಉಪಯೋಗಿಸಿದ ಕಾರಣ ಸಾವನಪ್ಪಿದೆ ಎಂದು ಸಿಎಂ ಹೇಳಿದರು. ಇದನ್ನೂ ಓದಿ: ಅರ್ಜುನನ ದುರಂತ ಅಂತ್ಯ – ಕಾಡಾನೆ ಸೆರೆ ಕಾರ್ಯಾಚರಣೆ ಸ್ಥಗಿತ
ಇತ್ತ ಹಾಸನದಲ್ಲಿ ಮಾವುತ ವಿನು ಮಾತನಾಡುತ್ತಾ, ಅರ್ಜುನನ್ನು ನೆನೆದು ಕಣ್ಣೀರು ಹಾಕಿದರು. ಕಾದಾಟದ ವೇಳೆ ಕಾಲಿನಲ್ಲಿ ರಕ್ತ ಬಂತು. ಆದರೂ ಮದಗಜದ ಜೊತೆಗೆ ಹೋರಾಡಿದ. ನಂತರ ಮಿಸ್ ಫೈರ್ ಆಗಿ ಕಾಲಿಗೆ ಗುಂಡು ಬಿತ್ತು. ಪ್ರಶಾಂತ ಇಲ್ಲದಿದ್ದರೂ ಅರ್ಜುನ ಹೋರಾಡಿ ಗೆಲ್ಲುತ್ತಿದ್ದನು. ಆದರೆ ಕಾಲಿಗೆ ಬಿದ್ದ ಗಾಯದಿಂದ ಆಗಲಿಲ್ಲ. ಕಾಡಾನೆ ತಿವಿದು ಸಾಯಿಸಿತು. ಅರ್ಜುನ ಹತ್ತು ಜನರ ಪ್ರಾಣ ಉಳಿಸಿ ಸಾವನ್ನಪ್ಪಿದ್ದಾನೆ. ಹೀಗಾಗಿ ಮೈಸೂರಿನಲ್ಲೇ ಆತನ ಸ್ಮಾರಕ ಮಾಡಬೇಕು ಎಂದು ಕಣ್ಣೀರಿಡುತ್ತಲೇ ಸರ್ಕಾರಕ್ಕೆ ಒತ್ತಾಯಿಸಿದರು.
ಹಾಸನ: ನನ್ನ ಆನೆಯನ್ನು (Elephant) ಮೈಸೂರಿಗೆ ಕಳುಹಿಸಿಕೊಡಿ. ಇಲ್ಲಾ ನನ್ನನ್ನು, ನನ್ನ ಕುಟುಂಬವನ್ನು ಅರ್ಜುನನ (Arjuna) ಜೊತೆ ಮಣ್ಣು ಮಾಡಿ ಎಂದು ಮಾವುತರೊಬ್ಬರು ಕಣ್ಣೀರು ಹಾಕಿದ್ದು, ನೆರೆದವರ ಕಣ್ಣಂಚಲ್ಲಿಯೂ ನೀರು ತರಿಸುವಂತಿತ್ತು.
ಅರ್ಜುನನ ಅಂತಿಮ ದರ್ಶನ ಪಡೆದು ಮಾವುತ ವಿನು ಕಣ್ಣೀರಿಟ್ಟರು. ಅರ್ಜುನನ ಸೊಂಡಿಲನ್ನು ತಬ್ಬಿಕೊಂಡು ನನ್ನ ಆನೆಯನ್ನು ಬದುಕಿಸಿಕೊಡಿ. ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲವೇ ನನ್ನನ್ನು ಹಾಗೂ ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ. ಅರ್ಜುನ ಸತ್ತಿಲ್ಲ ಎಂದು ನನ್ನ ಹೆಂಡತಿ ಮಕ್ಕಳಿಗೆ ಹೇಳಿದ್ದೇನೆ. ಅರ್ಜುನನನ್ನು ನನ್ನ ಜೊತೆ ಕಳುಹಿಸಿಕೊಡಿ ಎಂದು ಮಾವುತ ಅರ್ಜುನನ ಎದುರು ರೋಧಿಸಿದ್ದಾರೆ.
ವಿನು ಅವರು ಅರ್ಜುನನ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದರು. ಇದೀಗ ಅರ್ಜುನನ ಸಾವಿನ ನೋವನ್ನು ಅರಗಿಸಿಕೊಳ್ಳಲಾಗದೆ ರೋಧಿಸುತ್ತಿದ್ದಾರೆ. ಮಂಗಳವಾರ ಅರ್ಜುನನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದಿದ್ದರು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಚೇತರಿಸಿಕೊಂಡು ಬಂದಿದ್ದ ವಿನು ಅವರು ತನ್ನ ಪ್ರೀತಿಯ ಅರ್ಜುನನ್ನು ಕಂಡು ಬಿಕ್ಕಳಿಸಿ ಬಿಕ್ಕಳಿಸಿ ಅತ್ತಿದ್ದಾರೆ. ಇದು ನೋಡಗರ ಕಣ್ಣಲ್ಲಿ ನೀರು ತರಿಸುವಂತಿತ್ತು.
ಮಹಿಳೆಯೊಬ್ಬರು ಕೂಡ ಅರ್ಜುನನ ಅಂತಿಮ ದರ್ಶನ ಪಡೆದು ಬಾವೋದ್ವೇಗಕ್ಕೆ ಒಳಗಾದರು. ನಾಗಮ್ಮ ಎಂಬವರು ಅರ್ಜುನನ್ನು ಕಂಡು ಕಣ್ಣೀರಿಟ್ಟರು. ದೇವರೇ ಅರ್ಜುನನ್ನು ನಿನ್ನಲ್ಲಿ ಸೇರಿಸಿಕೊಳ್ಳು. ಅರ್ಜುನನಿಗೆ ಮುಕ್ತಿ ಕೊಡು ದೇವರೇ ಎಂದು ಕಣ್ಣೀರು ಹಾಕಿದರು. ಇದನ್ನೂ ಓದಿ: ನಡೆದು ಹೋಯ್ತಾ ಮಹಾ ಪ್ರಮಾದ – ಗುರಿ ತಪ್ಪಿ ಬಿದ್ದ ಗುಂಡೇಟಿನಿಂದ ಅರ್ಜುನ ಸಾವು?
ಇತ್ತ ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟ ಅಂಬಾರಿ ಹೊತ್ತ ಅರ್ಜುನನ ಅಂತಿಮ ದರ್ಶನಕ್ಕೆ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ಮೈಸೂರಿನಿಂದ ಬಂದು ಜನ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಮೃತ ಅರ್ಜುನನ ಕಳೇಬರಕ್ಕೆ ಹಾರ ಹಾಕಿ ನಮನ ಸಲ್ಲಿಕೆ ಮಾಡುತ್ತಿದ್ದಾರೆ. 8 ಬಾರಿ ಅಂಬಾರಿ ಹೊತ್ತು ಜನರ ಪ್ರೀತಿ ಪಾತ್ರವಾಗಿದ್ದ ಅರ್ಜುನ, ಕಾರ್ಯಾಚರಣೆ ವೇಳೆ ಹುತಾತ್ಮನಾದ. ಈ ಹಿನ್ನೆಲೆಯಲ್ಲಿ ದೂರದೂರುಗಳಿಂದ ಅರ್ಜುನನ ಅಂತಿಮ ದರ್ಶನಕ್ಕೆ ಜನ ಬರುತ್ತಿದ್ದಾರೆ.
ಈಚೆಗಷ್ಟೇ ನಡೆದ ಮೈಸೂರು ದಸರಾ ಮಹೋತ್ಸವದಲ್ಲಿ ಗೋಪಾಲಸ್ವಾಮಿ ಆನೆ ಪಾಲ್ಗೊಂಡಿತ್ತು. ತನ್ನ ಶಾಂತ ಸ್ವಭಾವಕ್ಕೆ ಈ ಆನೆ ಜನರ ಪ್ರೀತಿ ಗಳಿಸಿತ್ತು. ಈ ಬಾರಿ ದಸರಾದಲ್ಲಿ ಮರದ ಅಂಬಾರಿ ಹೊತ್ತು ಗಮನ ಸೆಳೆದಿತ್ತು.
ಶ್ರೀರಂಗಪಟ್ಟಣದ ದಸರಾ ಮಹೋತ್ಸವ ಉದ್ಘಾಟನೆ ವೇಳೆ ಒಮ್ಮೆ ಜನದಟ್ಟಣೆ ಹಾಗೂ ಪಟಾಕಿ ಶಬ್ದದಿಂದ ಗೋಪಾಲಸ್ವಾಮಿ ವಿಚಲಿತ ಆಗಿತ್ತು. 14 ದಸರಾ ಮಹೋತ್ಸವದಲ್ಲಿ ಗೋಪಾಲಸ್ವಾಮಿ ಆನೆ ಪಾಲ್ಗೊಂಡಿತ್ತು. ಇದನ್ನೂ ಓದಿ: ನಾಳೆಯಿಂದ ಹಾಲು, ಮೊಸರಿನ ದರ 2 ರೂ. ಏರಿಕೆ
Live Tv
[brid partner=56869869 player=32851 video=960834 autoplay=true]