Tag: ದಸರಾ ರಜೆ

  • ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ: ನಿಖಿಲ್

    ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ: ನಿಖಿಲ್

    ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ (Caste Census) ದಸರಾ ರಜೆ (Dasara Holiday) ವಿಸ್ತರಣೆ ಮಾಡಿರೋ ಸರ್ಕಾರದ ನಡೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆಕ್ರೋಶ ಹೊರ ಹಾಕಿದ್ದಾರೆ.

    ಈ ಸಂಬಂಧ ಎಕ್ಸ್‌ನಲ್ಲಿ ಟ್ವೀಟ್ ಮಾಡಿರೋ ನಿಖಿಲ್, ಸರ್ಕಾರ (Congress) ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: `ನಟ್ಟು ಬೋಲ್ಟು’ ಹೇಳಿಕೆಗೂ ಬಿಗ್‌ಬಾಸ್ ಬಂದ್‌ಗೂ ಸಂಬಂಧವಿಲ್ಲ – ಈಶ್ವರ್ ಖಂಡ್ರೆ 

    ಎಕ್ಸ್‌ನಲ್ಲಿ ಏನಿದೆ?
    ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್ ಸರ್ಕಾರ ಪೂರ್ವ ತಯಾರಿ ಇಲ್ಲದೆ ಯಾರದೋ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ಮಾಡುತ್ತಿದೆ. ಜಾತಿಗಣತಿ ದಿನದಿಂದ ದಿನಕ್ಕೆ ಗೊಂದಲಮಯವಾಗುತ್ತಿದೆ. ಈಗ ಸಮೀಕ್ಷೆಗಾಗಿ ಶಾಲಾ ಮಕ್ಕಳ ಭವಿಷ್ಯದ ಜೊತೆ ಕಾಂಗ್ರೆಸ್ ಸರ್ಕಾರ ಚೆಲ್ಲಾಟವಾಡುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ವಿದ್ಯಾರ್ಥಿಗಳ ಭವಿಷ್ಯ ಮುಖ್ಯವಲ್ಲ. ಜಾತಿ ಮುಖ್ಯ ಎಂಬುದು ಇದರಿಂದ ಸ್ಪಷ್ಟವಾಗಿದೆ. ಇದನ್ನೂ ಓದಿ: ನೈಋತ್ಯ ಮುಂಗಾರಿನಲ್ಲಿ ಸುಮಾರು 12.54 ಲಕ್ಷ ಹೆಕ್ಟೇರ್ ಬೆಳೆ ಹಾನಿ – ಯಾವ ಜಿಲ್ಲೆಗೆ ಎಷ್ಟು ಲಾಸ್?

    2 ಕೋಟಿ ಮನೆಗಳಲ್ಲಿ ವಾಸಿಸುವ 7 ಕೋಟಿ ಜನರನ್ನು ಕೇವಲ 15 ದಿನಗಳಲ್ಲಿ ಸಮೀಕ್ಷೆ ಮಾಡಲು ಸಾಧ್ಯವಿಲ್ಲ ಎಂಬುದು ಸಮೀಕ್ಷೆ ಪ್ರಾರಂಭವಾಗುವ ಮೊದಲೇ ಸ್ಪಷ್ಟವಾಗಿತ್ತು. ಸರ್ಕಾರಿ ಶಾಲೆಗಳು ದೀಪಾವಳಿಯ ನಂತರವೇ ಮತ್ತೆ ತೆರೆಯುತ್ತವೆ. ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಒಂದು ತಿಂಗಳ ಕಾಲ ಶಾಲೆಗಳಿಂದ ದೂರವಿರುತ್ತಾರೆ. ಆದರೆ ಖಾಸಗಿ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಇದು ಲಕ್ಷಾಂತರ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನೂ ಓದಿ: ಬಿಗ್‌ಬಾಸ್ ಮನೆಗೆ ಬೀಗ; ಸುದೀಪ್‌ಗೂ ಡಿಕೆಶಿಗೂ ತಂದಿಡೋದು ಬೇಡ: ಶಾಸಕ ಬಾಲಕೃಷ್ಣ

    ಈ ಸಮೀಕ್ಷೆಯು ನಿಜವಾಗಿಯೂ ಸಾಮಾಜಿಕ ಕಲ್ಯಾಣದ ಬಗ್ಗೆ ಆಗಿದ್ದರೆ, ಬೇಸಿಗೆ ರಜೆಯ ಸಮಯದಲ್ಲಿ ಶಿಕ್ಷಣವನ್ನು ಅಡ್ಡಿಪಡಿಸದೆ ವ್ಯವಸ್ಥಿತವಾಗಿ ನಡೆಸಬಹುದಿತ್ತು. ಇವರ ರಾಜಕೀಯದ ತೆವಲಿಗೋಸ್ಕರ ಸಾರ್ವಜನಿಕರ ತೆರಿಗೆ ಹಣವನ್ನು ವ್ಯರ್ಥ ಮಾಡುವ ಜೊತೆಗೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕೂಡ ಅಡ್ಡಿಪಡಿಸುತ್ತಿದೆ. ಸರ್ಕಾರದ ಈ ನಿಲುವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ತಪ್ಪು ಸರಿಪಡಿಸಿಕೊಳ್ಳಲು ಕಾಲಾವಕಾಶ ಕೊಡಿ: ಜಾಲಿವುಡ್ ಆಡಳಿತ ಮಂಡಳಿ

  • ದಸರಾ ರಜೆಯನ್ನು 1 ತಿಂಗಳಿಗೆ ವಿಸ್ತರಿಸಿ – ಸರ್ಕಾರಕ್ಕೆ ಹೊರಟ್ಟಿ ಪತ್ರ

    ದಸರಾ ರಜೆಯನ್ನು 1 ತಿಂಗಳಿಗೆ ವಿಸ್ತರಿಸಿ – ಸರ್ಕಾರಕ್ಕೆ ಹೊರಟ್ಟಿ ಪತ್ರ

    ಹುಬ್ಬಳ್ಳಿ: ಶಾಲೆಗಳಿಗೆ ನೀಡುವ ಒಂದು ತಿಂಗಳ ದಸರಾ ರಜೆಯನ್ನು (Dasara) 15 ದಿನಕ್ಕೆ ಸೀಮಿತಗೊಳಿಸಿರುವ ಸರ್ಕಾರದ ನಡೆಗೆ ಮಾಜಿ ಸಭಾಪತಿ ಮತ್ತು ಹಾಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ (Basavaraj Horatti) ಬೇಸರ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಶಿಕ್ಷಣ ಸಚಿವರು, ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ. ದಸರಾಗೆ ಈ ಮುಂಚೆ ಒಂದು ತಿಂಗಳು ರಜೆ ಕೊಡಲಾಗುತ್ತಿತ್ತು. ಹಾಗೇ ಎರಡು ತಿಂಗಳ ಬೇಸಿಗೆ ರಜೆ ನೀಡಲಾಗುತ್ತಿತ್ತು. ಆದ್ರೆ ಈ ಬಾರಿ ಕೇವಲ 15 ದಿನ ರಜೆ ನೀಡಿರೋದು ಸರಿಯಲ್ಲ. ದಸರಾ ಮತ್ತು ದೀಪಾವಳಿ ಹಬ್ಬ ಎರಡೂ ಒಂದೇ ತಿಂಗಳಲ್ಲಿ ಬಂದಿವೆ. ಹೀಗಾಗಿ ಈ ಎರಡೂ ಹಬ್ಬ ಮುಗಿಯೋವರೆಗೆ ರಜೆ ಕೊಡಬೇಕಾಗಿತ್ತು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಎಷ್ಟೇ ದೊಡ್ಡವರಾದರು ಕಾನೂನಿನ ಮುಂದೆ ಎಲ್ಲರೂ ಒಂದೇ : ಆರಗ ಜ್ಞಾನೇಂದ್ರ

    ಕೇವಲ 15 ದಿನಗಳ ರಜೆಯಿಂದ ಮಕ್ಕಳಿಗೆ ತೊಂದರೆಯಾಗುತ್ತದೆ. ಮಕ್ಕಳಿಗೆ ಶಾಲೆಯ ಪಾಠಗಳ ಜೊತೆಗೆ ಮನೆಯಲ್ಲಿನ ವಾತಾವರಣವು ಅಷ್ಟೇ ಮುಖ್ಯ. ಮಕ್ಕಳು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ. ಹೀಗಾಗಿ ಒಂದು ತಿಂಗಳಿಗೆ ರಜೆ ವಿಸ್ತರಣೆ ಮಾಡಬೇಕೆಂದು ಪತ್ರದ ಮೂಲಕ ತಾಕೀತು ಮಾಡಿದ್ದಾರೆ.

    ಸರ್ಕಾರದ ನಡೆಗೆ ರಾಜ್ಯ‌ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವೂ‌ ಸಹ ವಿರೋಧ ವ್ಯಕ್ತಪಡಿಸಿದೆ. ರಜೆಯನ್ನು ವಿಸ್ತರಣೆ ಮಾಡಬೇಕು ಎಂದು ಸಂಘವು ಸರ್ಕಾರಕ್ಕೆ ಮನವಿ ಮಾಡಿದೆ. ಇದನ್ನೂ ಓದಿ: ಹರೀಶ್‌ ಪೂಂಜಾ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿ ದುಷ್ಕರ್ಮಿಯಿಂದ ಜೀವ ಬೆದರಿಕೆ

    Live Tv
    [brid partner=56869869 player=32851 video=960834 autoplay=true]

  • ಆರ್ಟಿಕಲ್ 370 ರದ್ದು, ದಸರಾ ರಜೆ ಬಳಿಕ ವಿಚಾರಣೆ – ಸಿಜೆಐ

    ಆರ್ಟಿಕಲ್ 370 ರದ್ದು, ದಸರಾ ರಜೆ ಬಳಿಕ ವಿಚಾರಣೆ – ಸಿಜೆಐ

    ನವದೆಹಲಿ: ಜಮ್ಮು (Jammu) ಮತ್ತು ಕಾಶ್ಮೀರಕ್ಕೆ (Kashmir) ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮುಂಬರುವ ದಸರಾ ರಜೆಯ (Dasara) ನಂತರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ (Supreme Court) ಹೇಳಿದೆ.

    ಈ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ (Uday Umesh Lalit) ಅವರ ಮುಂದೆ ಪ್ರಸ್ತಾಪಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ದಸರಾ ವಿರಾಮದ ನಂತರ ಅದನ್ನು ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು. ಅಕ್ಟೋಬರ್ 3 ರಿಂದ 10ರವರೆಗೂ ಒಂದು ವಾರದ ದಸರಾ ಹಬ್ಬದ ಹಿನ್ನೆಲೆ ಕೋರ್ಟ್ ರಜೆಯಲ್ಲಿರಲಿದೆ. ಇದನ್ನೂ ಓದಿ: ವಿವಾಹಿತೆಯೊಂದಿಗಿನ ಅಕ್ರಮ ಸಂಬಂಧ ನಿರಾಕರಿಸಿದ್ದಕ್ಕೆ ತಾಯಿಯನ್ನೇ ಕೊಂದ ಮಗ

    court order law

    ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಆಗಸ್ಟ್ 2019ರ ನಿರ್ಧಾರವನ್ನು ಪ್ರಶ್ನಿಸಿ 20ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂಕೋರ್ಟ್‍ನಲ್ಲಿ ಬಾಕಿ ಉಳಿದಿವೆ. ಈ ವಿಧಿಯನ್ನು ರದ್ದುಪಡಿಸುವ ಮೂಲಕ ಕೇಂದ್ರವು ಜಮ್ಮು ಮತ್ತು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದೆ. ತರುವಾಯ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು, ಲಡಾಖ್, ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವಾಗಿವೆ. ಇದನ್ನೂ ಓದಿ: Bigg Boss 9- ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ದಿಢೀರ್ ಅಂತ ರಾಜೇಶ್ ಸಾವು: ಬಿಗ್ ಬಾಸ್ ಮನೆಗೆ ಬರ್ತಾರಾ ನಟ ಸುನೀಲ್?

    ಮಾರ್ಚ್ 2020ರಲ್ಲಿ ಸುಪ್ರೀಂಕೋರ್ಟ್‍ನ 5 ನ್ಯಾಯಾಧೀಶರ ಸಂವಿಧಾನಿಕ ಪೀಠವು 370ನೇ ವಿಧಿಯನ್ನು ಪ್ರಶ್ನಿಸುವ ಅರ್ಜಿಗಳ ಬ್ಯಾಚ್ ಅನ್ನು 7 ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ಉಲ್ಲೇಖಿಸುವ ಅಗತ್ಯವಿಲ್ಲ ಎಂದು ಹೇಳಿತ್ತು. ಕೆಲವು ಅರ್ಜಿದಾರರು ಸುಪ್ರೀಂಕೋರ್ಟ್‍ನ ಎರಡು ತೀರ್ಪುಗಳ ನಡುವೆ ಸಂಘರ್ಷವಿದೆ ಎಂದು ವಾದಿಸಿ 7 ನ್ಯಾಯಾಧೀಶರ ಪೀಠಕ್ಕೆ ಪ್ರಕರಣ ವರ್ಗಾಯಿಸಲು ಮನವಿ ಮಾಡಲಾಗಿತ್ತು. ಆದರೆ, ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಐವರು ನ್ಯಾಯಾಧೀಶರ ಪೀಠ, ಹಿಂದಿನ ಎರಡು ತೀರ್ಪುಗಳ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಪರಿಗಣಿಸಿ ಪ್ರಕರಣವನ್ನು ದೊಡ್ಡ ಪೀಠಕ್ಕೆ ವರ್ಗಾಯಿಸಲು ನಿರಾಕರಿಸಿತು.

    Live Tv
    [brid partner=56869869 player=32851 video=960834 autoplay=true]