Tag: ದಸರಾ

  • ದಸರಾ ಆನೆ ವಿಕ್ರಮನಿಗೆ ಮದ – ಈ ಬಾರಿ ದಸರಾದಿಂದ ವಿಕ್ರಮ ಔಟ್

    ದಸರಾ ಆನೆ ವಿಕ್ರಮನಿಗೆ ಮದ – ಈ ಬಾರಿ ದಸರಾದಿಂದ ವಿಕ್ರಮ ಔಟ್

    ಮಂಡ್ಯ: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಎಂದರೆ ಜನರಿಗೆ ಥಟ್ ಎಂದು ನೆನಪಿಗೆ ಬರುವುದು ಆನೆಗಳು. ಅಂಬಾರಿ ಹೊರುವ ಅರ್ಜುನನ್ನು ಕಂಡರೆ ಜನರು ಎಷ್ಟು ಆಕರ್ಷಿತಗೊಳ್ಳುತ್ತಾರೋ ಅಷ್ಟೇ ಪ್ರಮಾಣದಲ್ಲಿ ಜಂಬೂ ಸವಾರಿ ಟ್ರೂಫ್‍ನಲ್ಲಿರುವ ಮತ್ತೊಂದು ಆನೆ ವಿಕ್ರಮ ಅಂದರೆ ಜನರಿಗೆ ಅಚ್ಚು-ಮೆಚ್ಚು. ಜನರ ಮೆಚ್ಚಿನ ಆನೆ ವಿಕ್ರಮನಿಗೆ ಮದವೇರಿರುವ ಕಾರಣ ಈ ಬಾರಿ ಜಂಬೂ ಸವಾರಿ ಮೆರವಣಿಗೆಯಿಂದ ಔಟ್ ಆಗಿದ್ದಾನೆ.

    ಕಳೆದ ಐದು ವರ್ಷಗಳಿಂದ ಸತತವಾಗಿ ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಜರುಗುವ ಖಾಸಗಿ ದರ್ಬಾರ್‍ನ ಪೂಜಾ ವಿಧಿ ವಿಧಾನಗಳಲ್ಲಿ ಪಟ್ಟದ ಆನೆಯಾಗಿ ಜವಾಬ್ದಾರಿ ಹೊತ್ತಿದ್ದ ವಿಕ್ರಮ ಆನೆಗೆ ಇದೀಗ ಮದವೇರಿರುವ ಕಾರಣ ಈ ಬಾರಿಯ ದಸರಾ ಮಹೋತ್ಸವದ ಕಾರ್ಯಕ್ರಮದಿಂದ ದೂರ ಉಳಿಸಲಾಗಿದೆ. ವಿಕ್ರಮನ ಬದಲಿಗೆ ಗೋಪಾಲಸ್ವಾಮಿ ಆನೆಗೆ ಪಟ್ಟದ ಆನೆಯ ಸ್ಥಾನವನ್ನು ಈ ಬಾರಿ ನೀಡಲಾಗಿದೆ. 58 ವರ್ಷದ ವಿಕ್ರಮ ಶರೀರದ ಎತ್ತರ 2.89 ಮೀಟರ್ ಇದ್ದು, 3.43 ಮೀಟರ್ ಉದ್ದ, 3,820 ಕೆ.ಜಿ ತೂಕವಿರುವ ವಿಕ್ರಮ ಕಳೆದ 18 ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಭಾಗಿಯಾಗುತ್ತಿದ್ದಾನೆ. ಇಲ್ಲಿಯವರೆಗೆ ಬಹಳ ಸೌಮ್ಯ ಸ್ವಭಾವದ ಆನೆ ಎಂಬ ಹೆಗ್ಗಳಿಕೆ ಹೊಂದಿದ್ದ ವಿಕ್ರಮನಿಗೆ ಇದೀಗ ಮದವೇರಿರುವ ಕಾರಣ ಬಹಳ ಕೋಪದಿಂದ ವರ್ತನೆ ಮಾಡುತ್ತಿದ್ದಾನೆ. ಈ ಮದ ಇಳಿಯಬೇಕು ಎಂದರೆ ನಾಲ್ಕು ತಿಂಗಳಿಗೂ ಹೆಚ್ಚು ಕಾಲ ಬೇಕು. ಹೀಗಾಗಿ ಇವನನ್ನು ಪ್ರತ್ಯೇಕವಾಗಿ ಅರಮನೆಯ ಆವರಣದಲ್ಲಿ ಕಟ್ಟಿಹಾಕಲಾಗಿದೆ. ಇದನ್ನೂ ಓದಿ: ಮನೆ ಮೇಲೆ ಕಲ್ಲು ತೂರಿರುವುದು ರಾಜಕೀಯ ಪ್ರೇರಿತವಲ್ಲ: ಪುಟ್ಟರಾಜು ಸ್ಪಷ್ಟನೆ

    ದಸರಾ ಆನೆಗಳಲ್ಲಿ ಅಂಬಾರಿ ಆನೆ ಹೊರತುಪಡಿಸಿದರೆ, ಪಟ್ಟದ ಆನೆಯ ಪಾತ್ರ ಬಹುಮುಖ್ಯ. ಈ ಹಿನ್ನೆಲೆಯಲ್ಲಿ ಪಟ್ಟದ ಆನೆಯಾಗಿ ಸೌಮ್ಯ ಸ್ವಭಾವದ ಆನೆಯನ್ನೇ ಆಯ್ಕೆ ಮಾಡಲಾಗುತ್ತದೆ. ಈ ಹಿಂದೆ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕೆ.ಗುಡಿ ಆನೆ ಶಿಬಿರದಲ್ಲಿನ ಗಜೇಂದ್ರ ಆನೆ ಪಟ್ಟದ ಆನೆಯಾಗಿ ಜವಾಬ್ದಾರಿ ನಿಭಾಯಿಸುತ್ತಿತ್ತು. ಗಜೇಂದ್ರನಿಗೆ ಮದವೇರಿ ದಸರಾ ಆನೆ ಶ್ರೀರಾಮ ಹಾಗೂ ಮಾವುತ ಗಣಪತಿಯನ್ನು ಕೊಂದ ಹಿನ್ನೆಲೆ ಹಾಗೂ ಹೊಸ ಮಾವುತ ಶಂಕರ್ ಅನಾರೋಗ್ಯದಿಂದ ಮೃತಪಟ್ಟ ಕಾರಣ ಗಜೇಂದ್ರ ದಸರಾ ಮಹೋತ್ಸವದಿಂದ ದೂರವುಳಿಯ ಬೇಕಾಯಿತು.

    ಗಜೇಂದ್ರನಿಂದ ತೆರವಾದ ಪಟ್ಟದ ಆನೆ ಸ್ಥಾನವನ್ನು 2015ರಿಂದಲೂ ವಿಕ್ರಮ ನಿಭಾಯಿಸುತ್ತಿದ್ದು, ತನ್ನ ಸೌಮ್ಯ ಸ್ವಭಾವದಿಂದಲೇ ಮನ್ನಣೆಗಳಿಸಿದೆ. ಮದ ಇದ್ದರೂ ವರ್ತನೆಯಲ್ಲಿ ಯಾವುದೇ ಬದಲಾವಣೆಯಿಲ್ಲದೆ, ಸಾಮಾನ್ಯ ಸ್ಥಿತಿಯಲ್ಲಿರುವಂತೆ ವರ್ತಿಸುತ್ತಿದೆ. ಇದರಿಂದ ಅರಣ್ಯ ಇಲಾಖೆಯ ಅಧಿಕಾರಿಗಳು ಮಾತ್ರವಲ್ಲದೆ, ಪಶುವೈದ್ಯರು, ಮಾವುತ, ಕಾವಾಡಿಗಳಿಗೂ ಸಮಾಧಾನವನ್ನುಂಟು ಮಾಡಿದೆ. ವಿಕ್ರಮನಿಗೆ ಅತ್ಯಂತ ಸಣ್ಣ ಪ್ರಮಾಣದಲ್ಲಿ ಮದ ಇರುವುದರಿಂದ ಆತಂಕಪಡುವ ಅಗತ್ಯವಿಲ್ಲ ಎಂದು ಮಾವುತರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಉಚಿತವಾಗಿ 120 ದಿನಗಳಲ್ಲಿ 25 ಸಾವಿರ ಮಂದಿಗೆ ಕೋವಿಡ್ ಲಸಿಕೆ- ಶ್ರೀರಾಮ ಸೇವಾ ಮಂಡಳಿ

    ELEPHANT

    ವಿಕ್ರಮನಿಗೆ ಸದ್ಯ ಸ್ಪಲ್ಪ ಪ್ರಮಾಣದಲ್ಲಿ ಮದ ಇದ್ದರು ಕಾರಣ ಗಂಡಾನೆ ಹತ್ತಿರ ಬಂದಾಗ ಹಾಗೂ ಶಬ್ದ ಕೇಳಿದಾಗ ಗಲಾಟೆ ಮಾಡುವ ಸಾಧ್ಯತೆ ಹೆಚ್ಚಿದೆ. ಇದರ ಮದವನ್ನು ಕಡಿಮೆ ಮಾಡುವ ಉದ್ದೇಶದಿಂದ ವಿಕ್ರಮನಿಗೆ ವಿಶೇಷ ಆರೈಕೆ ಮಾಡಲಾಗುತ್ತಿದೆ. ಇದರ ದೇಹದ ಉಷ್ಣಾಂಶವನ್ನು ಕಡಿಮೆ ಮಾಡಲು ಇದಕ್ಕೆ ಪ್ರತಿ ದಿನ ನಾಲ್ಕು ಬಾರಿ ತಣ್ಣೀರಿನಲ್ಲಿ ಸ್ನಾನ ಮಾಡಿಸಿ, ಕುಸಲ್ಕಿ, ಮೊಸರನ್ನಾ ಈ ರೀತಿಯಾ ತಂಪಾದ ಆಹಾರ ಪದಾರ್ಥಗಳನ್ನು ನೀಡಲಾಗುತ್ತದ್ದು, ಬೇರೆ ಆನೆಗಳಿಗೆ ಕೊಡುತ್ತಿರುವ ಆಹಾರ ಪದಾರ್ಥಗಳನ್ನು ಈ ಆನೆಗೆ ನೀಡುತ್ತಿಲ್ಲ.

    ಒಟ್ಟಾರೆ ಸತತ ಐದು ವರ್ಷಗಳ ಕಾಲ ಪಟ್ಟದ ಆನೆಯ ಜವಾಬ್ದಾರಿ ಹೊತ್ತಿದ್ದ ವಿಕ್ರಮನಿಗೆ ಮದವೇರಿದ್ದು, ಯಾವುದೇ ಅಹಿತಕರ ಘಟನೆಗಳು ಜರುಗಬಾರದು ಎಂದು ವಿಕ್ರಮನಿಗೆ ಈ ಬಾರಿ ದಸರಾದಿಂದ ಗೇಟ್ ಪಾಸ್ ನೀಡಲಾಗಿದೆ. ಮುಂದಿನ ದಸರಾ ವೇಳೆಗೆ ನಮ್ಮ ಮೆಚ್ಚಿನ ವಿಕ್ರಮ ಮೋಸ್ಟ್ ಎಲಿಜಬಲ್ ಆಗಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಬೇಕು ಎನ್ನುವುದೇ ನಮ್ಮ ಆಶಯವಾಗಿದೆ.

  • ನವರಾತ್ರಿ ಎರಡನೇ ದಿನ ಇಷ್ಟಾರ್ಥ ಸಿದ್ಧಿಗಾಗಿ ಬ್ರಹ್ಮಚಾರಿಣಿಯನ್ನು ಪೂಜಿಸೋದು ಯಾಕೆ? ಪುರಾಣ ಕಥೆ ಓದಿ

    ನವರಾತ್ರಿ ಎರಡನೇ ದಿನ ಇಷ್ಟಾರ್ಥ ಸಿದ್ಧಿಗಾಗಿ ಬ್ರಹ್ಮಚಾರಿಣಿಯನ್ನು ಪೂಜಿಸೋದು ಯಾಕೆ? ಪುರಾಣ ಕಥೆ ಓದಿ

    ವರಾತ್ರಿಯ ಮೊದಲ ದಿನ ದೇವಿಯನ್ನು ಶೈಲಪುತ್ರಿಯ ರೂಪದಲ್ಲಿ ಪೂಜಿಸಿದರೆ, ಎರಡನೇ ದಿನ ಬ್ರಹ್ಮಚಾರಿಣಿ ರೂಪದಲ್ಲಿ ಪೂಜಿಸಲಾಗುತ್ತದೆ.

    ಪಾರ್ವತಿಯೂ ಉಮಾ ಹೆಸರಿನಲ್ಲಿ ಹಿಮಾಲಯನ ಪುತ್ರಿಯಾಗಿ ಜನಿಸುತ್ತಾಳೆ. ನಾರದರ ಉಪದೇಶದಿಂದ ಉಮೆ ಭಗವಾನ್ ಶಿವನನ್ನು ಪತಿಯಾಗಿ ಪಡೆದುಕೊಳ್ಳಲು ಅತಿಯಾದ ಕಠಿಣ ತಪಸ್ಸನ್ನು ಮಾಡುತ್ತಾಳೆ. ಬಹಳ ಕಠಿಣವಾದ ತಪಸ್ಸನ್ನು ಆಚರಿಸಿದ ಕಾರಣ ಇವಳಿಗೆ ತಪಶ್ಚಾರಿಣೀ ಅರ್ಥಾತ್ ಬ್ರಹ್ಮಚಾರಿಣಿ ಎನ್ನುವ ಹೆಸರು ಬಂತು.

    ಯಾವ ರೀತಿ ತಪಸ್ಸು ಮಾಡಿದ್ದಳು?
    ಹಲವು ವರ್ಷ ಈಕೆ ಕೇವಲ ಫಲ ಮೂಲಗಳನ್ನು ತಿಂದು ಕಳೆದಿದ್ದಳು. ನೂರು ವರ್ಷಗಳವರೆಗೆ ಕೇವಲ ಎಲೆಗಳನ್ನು ತಿನ್ನುತ್ತಿದ್ದಳು. ಕೆಲವು ದಿನಗಳವರೆಗೆ ಕಠಿಣ ಉಪವಾಸವಿದ್ದು ತೆರೆದ ಆಕಾಶದ ಕೆಳಗೆ ಮಳೆ-ಬಿಸಿಲಿನ ಭಯಾನಕ ಕಷ್ಟಗಳನ್ನು ಸಹಿಸಿದಳು. ಈ ಕಠಿಣ ತಪಸ್ಸಿನ ಬಳಿಕ ಮೂರು ಸಾವಿರ ವರ್ಷಗಳವರೆಗೆ ಕೇವಲ ನೆಲದ ಮೇಲೆ ಉದುರಿಬಿದ್ದ ಬಿಲ್ವಪತ್ರಗಳನ್ನು ತಿಂದು ಹಗಲು-ರಾತ್ರಿ ಭಗವಾನ್ ಶಂಕರನ ಆರಾಧನೆ ಮಾಡುತ್ತಿದ್ದಳು. ಹೀಗಾಗಿ ಕೇವಲ ಎಲೆ(ಪರ್ಣ)ಗಳನ್ನು ತಿಂದು ಜೀವಿಸಿದ್ದರಿಂದ ಆಕೆಗೆ ಅಪರ್ಣ ಎನ್ನುವ ಹೆಸರು ಬಂತು.

    ಕಠಿಣ ತಪಸ್ಸು ಮಾಡಿದರೂ ಶಿವನ ಅನುಗ್ರಹ ಸಿಗದ್ದಕ್ಕೆ ಅವಳು ಒಣಗಿದ ಬಿಲ್ವಪತ್ರಗಳನ್ನು ತಿನ್ನುವುದನ್ನು ಬಿಟ್ಟು ಬಿಟ್ಟಳು. ಅನೇಕ ಸಾವಿರ ವರ್ಷಗಳವರೆಗೆ ಅವಳು ಆಹಾರ-ನೀರೂ ಸೇವಿಸದೇ ಮತ್ತಷ್ಟು ಕಠಿಣ ತಪಸ್ಸು ಮುಂದುವರಿಸಿದ್ದಳು. ಅನೇಕ ಸಾವಿರ ವರ್ಷಗಳ ಈ ತಪಸ್ಸಿನಿಂದಾಗಿ ಉಮಾಳ ಶರೀರವು ತುಂಬಾ ಕ್ಷೀಣವಾಯಿತು. ಮಗಳ ದೇಹ ಕೃಶವಾಗುತ್ತಿರುವುದನ್ನು ಕಂಡು ತಾಯಿಯಾದ ಮೇನಾದೇವಿಯು ಅತಿ ದುಃಖಿತಳಾದಳು. ಇವಳ ಈ ತಪಸ್ಸಿನಿಂದ ಮೂರು ಲೋಕಗಳಲ್ಲಿ ಹಾಹಾಕಾರ ಎದ್ದಿತು.

    ಕೊನೆಗೆ ಈಕೆಯ ಕಠಿಣ ತಪಸ್ಸಿಗೆ ಮೆಚ್ಚಿ ಬ್ರಹ್ಮ ಪ್ರತ್ಯಕ್ಷನಾಗಿ,”ಹೇ ದೇವಿ, ಇಂದಿನವರೆಗೆ ಯಾರೂ ಇಂತಹ ಕಠೋರ ತಪಸ್ಸು ಮಾಡಿರಲಿಲ್ಲ. ಇಂತಹ ತಪಸ್ಸು ನಿನ್ನಿಂದಲೇ ಸಂಭವಿಸಿದೆ. ನಿನ್ನ ತಪಸ್ಸಿನ ಬಗ್ಗೆ ಹೊಗಳಿಕೆ ಎಲ್ಲೆಡೆ ನಡೆಯುತ್ತಿದೆ. ನಿನ್ನ ಮನೋ ಕಾಮನೆಯು ಎಲ್ಲಾ ವಿಧದಿಂದ ಪೂರ್ಣವಾಗುತ್ತದೆ. ಭಗವಾನ್ ಚಂದ್ರಮೌಳಿ ಶಿವನು ನಿನಗೆ ಪತಿಯಾಗಿ ದೊರೆಯುವನು. ಈಗ ನೀನು ತಪಸ್ಸನ್ನು ಬಿಟ್ಟು ಮನೆಗೆ ಹಿಂತಿರುಗು” ಎಂದು ವರವನ್ನು ನೀಡುತ್ತಾನೆ. ನಂತರ ಶಿವನು ಬ್ರಹ್ಮಚಾರಿಣಿಯನ್ನು ಸತಿಯಾಗಿ ಸ್ವೀಕರಿಸುತ್ತಾನೆ. ಇದನ್ನೂ ಓದಿ: ನವರಾತ್ರಿ ಮೊದಲ ದಿನ ಶೈಲಪುತ್ರಿಯ ಪೂಜೆ: ದಾಕ್ಷಾಯಿಣಿ ಶೈಲಪುತ್ರಿಯಾಗಿ ಶಿವನ ಕೈ ಹಿಡಿದ ಕಥೆ ಓದಿ

    ಬ್ರಹ್ಮಚಾರಿಣಿ ಉಪಾಸನೆಯಿಂದ ಮನುಷ್ಯರಲ್ಲಿ ತಪಸ್ಸು, ತ್ಯಾಗ, ವೈರಾಗ್ಯ, ಸದಾಚಾರ, ಸಂಯಮ, ಇವುಗಳ ವೃದ್ಧಿ ಆಗುತ್ತದೆ. ಬ್ರಹ್ಮಚಾರಿಣಿ ದೇವಿಯ ಕೃಪೆ ಇದ್ದರೆ ಆತನಿಗೆ ಎಲ್ಲೆಡೆ ಸಿದ್ಧಿ ಮತ್ತು ವಿಜಯದ ಪ್ರಾಪ್ತಿ ಆಗುತ್ತದೆ ಎನ್ನುವ ನಂಬಿಕೆಯಿದೆ. ಈಕೆಯ ಬಲಕೈಯಲ್ಲಿ ಜಪಮಾಲೆ ಮತ್ತು ಎಡಕೈಯಲ್ಲಿ ಕಮಂಡಲ ಇರುತ್ತದೆ.

     

  • ಮಡಿಕೇರಿ ದಸರಾ- ನಾಲ್ಕು ಶಕ್ತಿ ದೇವತೆಗಳ ಕರಗಕ್ಕೆ ಚಾಲನೆ

    ಮಡಿಕೇರಿ ದಸರಾ- ನಾಲ್ಕು ಶಕ್ತಿ ದೇವತೆಗಳ ಕರಗಕ್ಕೆ ಚಾಲನೆ

    ಮಡಿಕೇರಿ: ಐತಿಹಾಸಿಕ ಹಿನ್ನೆಲೆಯ ಮಡಿಕೇರಿಯ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವಕ್ಕೆ ನಗರದ ಪಂಪಿನ ಕೆರೆಯ ಬನ್ನಿ ಮಂಟಪದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಇಂದು ಸಂಜೆ ಚಾಲನೆ ನೀಡಲಾಯಿತು.

    ಮಡಿಕೇರಿ ನಗರ ದಸರಾ ಸಮಿತಿ, ದಶಮಂಟಪ ಸಮಿತಿಯ ಪದಾಧಿಕಾರಿಗಳು, ಸಂಘ ಸಂಸ್ಥೆಗಳ ಪ್ರಮುಖರು, ಜನಪ್ರತಿನಿಧಿಗಳು, ಅಧಿಕಾರಿಗಳು ನಾಲ್ಕು ಶಕ್ತಿ ದೇವತೆಗಳ ಕರಗಗಳಿಗೆ ಸಂಜೆ ಪೂಜೆ ಸಲ್ಲಿಸಿ, ನಾಡಿನ ಒಳಿತಿಗೆ ಪ್ರಾರ್ಥಿಸುವ ಮೂಲಕ ಕರಗ ಮೆರವಣಿಗೆ ಆರಂಭಗೊಂಡಿತು. ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳಾದ ರಾಜಾಸೀಟು ಬಳಿಯ ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಗೌಳಿಬೀದಿಯ ಶ್ರೀ ಕಂಚಿಕಾಮಾಕ್ಷಿ, ನಗರಸಭೆ ಬಳಿಯ ಶ್ರೀ ದಂಡಿನ ಮಾರಿಯಮ್ಮ, ಪೆನ್ ಷನ್ ಲೇನ್‍ನ ಶ್ರೀ ಕೋಟೆ ಮಾರಿಯಮ್ಮ ಕರಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ: ನಾಯಿಯಿಂದ ನಾಯಿಗೆ ರಕ್ತದಾನ

    ಮಧ್ಯಾಹ್ನ ನಾಲ್ಕು ಶಕ್ತಿ ದೇವತೆಗಳ ದೇವಸ್ಥಾನಗಳಲ್ಲಿ ಸಂಪ್ರದಾಯದಂತೆ ವಿಶೇಷ ಪೂಜೆ ಸಲ್ಲಿಸಿದ ವ್ರತಧಾರಿಗಳು ಹಾಗೂ ದೇವಾಲಯ ಸಮಿತಿಯ ಪ್ರಮುಖರು ಕರಗ ಅಲಂಕಾರಕ್ಕೆ ಅಗತ್ಯವಿರುವ ಫಲ, ಪುಷ್ಪಗಳೊಂದಿಗೆ ಪಂಪಿನ ಕೆರೆಗೆ ತೆರಳಿದರು. ವಿವಿಧ ಪೂಜಾ, ಕೈಂಕರ್ಯಗಳ ಮೂಲಕ ಕರಗಗಳನ್ನು ಕಟ್ಟಿ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಚಾಲನೆ ನೀಡಲಾಯಿತು.

    ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಸೇರಿದಂತೆ ದಸರಾ ಸಮೀಪ ಪ್ರಮುಖರು ಗಣ್ಯರು ಪೂಜೆಯಲ್ಲಿ ಭಾಗಿಯಾಗಿದ್ದರು. ಪಂಪಿನಕೆರೆ ಬಳಿಯಿಂದ ಹೊರಟ ನಾಲ್ಕು ಕರಗಗಳಿಗೆ ಮಹದೇವಪೇಟೆಯ ಶ್ರೀಚೌಡೇಶ್ವರಿ ದೇವಾಲಯ, ಕನ್ನಿಕಾ ಪರಮೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಲಾಯಿತು. ಸಂಪ್ರದಾಯದಂತೆ ಪೇಟೆ ಶ್ರೀರಾಮ ಮಂದಿರದ ಬಳಿ ಕರಗಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ದೇವಾಲಯಗಳಿಗೆ ಕೊಂಡೊಯ್ಯಲಾಯಿತು. ಇದನ್ನೂ ಓದಿ: ಡ್ರಗ್ಸ್‌ ಕೇಸ್‌ – ಶಾರೂಖ್ ಪುತ್ರ ಆರ್ಯನ್ ಜೈಲುಪಾಲು

    ಕೊರೊನಾ ವೈರಸ್ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ಜಿಲ್ಲಾಡಳಿತ ಸರಳ ದಸರಾಗೆ ಮುಂದಾಗಿದೆ. ಹೀಗಾಗಿ ಪ್ರತಿವರ್ಷ ಕೋಟ್ಯಂತರ ರೂ. ಖರ್ಚು ಮಾಡಿ, ವಿಜೃಂಭಣೆಯಿಂದ ನಡೆಸಲಾಗುತ್ತಿದ್ದ ಮಂಜಿನ ನಗರಿ ಮಡಿಕೇರಿಯ ದಸರಾ ಈ ಬಾರಿ ಸರಳವಾಗಿ ನಡೆಯಲಿದೆ.

  • ನಾಳೆ ಅಂಬಾ ವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್- ಕೃಷ್ಣದತ್ತ ಒಡೆಯರ್ ಸಿಂಹಾಸನಾರೋಹಣ

    ನಾಳೆ ಅಂಬಾ ವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್- ಕೃಷ್ಣದತ್ತ ಒಡೆಯರ್ ಸಿಂಹಾಸನಾರೋಹಣ

    ಮೈಸೂರು: ನಾಳೆ ಒಂದೆಡೆ ನಾಡ ಹಬ್ಬ ದಸರಾಗೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ಸಿಕ್ಕಿದರೆ. ಇತ್ತ ನಾಳೆ ಬೆಳಗ್ಗೆಯೇ ಅಂಬಾ ವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್ ಜರುಗಲಿದ್ದು, ಗತ ಕಾಲದ ವೈಭವ ಮರುಕಳಿಸಲಿದೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಿಂಹಾಸನರೋಹಣ ಮಾಡಿ ದರ್ಬಾರ್ ನಡೆಸಲಿದ್ದಾರೆ.

    ರಾಜಾಧೀರಾಜ, ರಾಜ ಮಾರ್ತಾಂಡ, ರಾಜ ಕುಲತಿಲಕ, ರಾಜ ಮಾರ್ತಾಂಡ, ಯದುವೀರ್ ಪರಾಕ್, ಬಹು ಪರಾಕ್, ಹೀಗೆ ನಾಳೆ ಮೈಸೂರಿನ ಅಂಬಾ ವಿಲಾಸ ಅರಮನೆಯಲ್ಲಿ ವಂಧಿ ಮಾಧಗರು ಬಹುಪರಾಕ್ ಕೂಗುವ ಶಬ್ದ ಕೇಳಲಿದೆ. ಮತ್ತೊಂದು ಕಡೆ ರಾಜಗಾಂಭೀರ್ಯದಿಂದ ಸಿಂಹಾನದ ಕಡೆ ಯದುವಂಶದ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೆಜ್ಜೆ ಇಡುತ್ತಾರೆ. ಹಿಂದೆ ರಾಜ ಮಹಾರಾಜರು ನಡೆಸುತ್ತಿದ್ದ ದರ್ಬಾರು ಮಾದರಿಯಲ್ಲೇ ಇಂದಿಗೂ ದಸರೆಯ ಸಂದರ್ಭದಲ್ಲಿ ಸಂಪ್ರದಾಯ ಬದ್ಧವಾಗಿ ಅರಮನೆಯಲ್ಲಿ ರಾಜವಂಶಸ್ಥರು ಖಾಸಗಿ ದರ್ಬಾರ್ ನಡೆಸಿಕೊಂಡು ಬರುತ್ತಿದ್ದಾರೆ. ಇದನ್ನೂ ಓದಿ: ಸ್ವರ್ಣ ನದಿಗೆ ಬಾಗಿನ ಅರ್ಪಿಸಿದ ಸುನಿಲ್ ಕುಮಾರ್

    ಗುರುವಾರ ಏಳನೇ ಬಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ರಾಜ ಪೋಷಾಕು ಧರಿಸಿದ ಯದುವೀರ್, ದರ್ಬಾರ್ ಹಾಲ್ ಪ್ರವೇಶಿಸುತ್ತಿದ್ದಂತೆ ದರ್ಬಾರಿಗಳು ಬಹು ಪರಾಕ್ ಕೂಗಿಲಿದ್ದಾರೆ. ಸಿಂಹಾಸನದ ಬಳಿ ತೆರಳಿದ ನಂತರ ಯದುವೀರ್ ಸಿಂಹಾಸನಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿ, ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಮಂಗಳಾರತಿ ಮಾಡಲಿದ್ದಾರೆ. ಸಿಂಹಾಸನದ ಪಕ್ಕದಲ್ಲೇ ಕುಳಿತು ನವಗ್ರಹ ಪೂಜೆ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿ, ನಂತರ ಅವರು ಸಿಂಹಾಸನಾರೂಢರಾಗಲಿದ್ದಾರೆ. ಇದೇ ವೇಳೆ ಪತ್ನಿ ತ್ರಿಷಿಕಾ ಕುಮಾರಿ ಯದುವೀರ್ ಪಾದಗಳಿಗೆ ಪುಷ್ಪಾರ್ಚನೆ ಮಾಡಿ, ಪತ್ನಿ ಬಳಿಕ ದಿವಾನರು ಸಿಂಹಾಸನದ ಮುಂದೆ ನಿಂತು ನಡುಬಾಗಿಸಿ ವಂದಿಸುತ್ತಾರೆ.

    ಇದಾದ ನಂತರ ಅರಮನೆಯ ದೇವಸ್ಥಾನಗಳು, ಚಾಮುಂಡಿ ಬೆಟ್ಟ ಸೇರಿದಂತೆ ಹಲವು ದೇವಸ್ಥಾನಗಳಿಂದ ತಂದಿದ್ದ ಪ್ರಸಾದವನ್ನು ಒಡೆಯರ್‍ಗೆ ನೀಡಲಾಗುತ್ತದೆ. ಈ ವೇಳೆ ಎಲ್ಲ ಪ್ರಸಾದವನ್ನು ಶ್ರದ್ಧಾ ಭಕ್ತಿಯಿಂದ ಯದುವೀರ್ ಸ್ವೀಕರಿಸುತ್ತಾರೆ. ನಂತರ ಮೈಸೂರು ರಾಜ್ಯ ಗೀತೆಯನ್ನು ನುಡಿಸಲಾಗುತ್ತದೆ. ಈ ವೇಳೆ ರತ್ನ ಖಚಿತ ಸಿಂಹಾಸನದ ಮೇಲೆ ನಿಂತ ಯದುವೀರ್ ಸೆಲ್ಯೂಟ್ ಮಾಡಿ ರಾಜ್ಯ ಗೀತೆಗೆ ಗೌರವ ಸಲ್ಲಿಸಲಿದ್ದಾರೆ. ರಾಜ್ಯ ಗೀತೆ ಮುಗಿದ ನಂತರ ಸಿಂಹಾಸನದಿಂದ ಇಳಿದು ಖಾಸಗಿ ದರ್ಬಾರನ್ನು ಮುಕ್ತಾಯಗೊಳಿಸುತ್ತಾರೆ. ಯದುವೀರ್ ಅವರು ಖಾಸಗಿ ದರ್ಬಾರ್ ನಡೆಸುವ ಮುನ್ನ ಅರಮನೆಯಲ್ಲಿ ಬೆಳಗಿನ ಜಾವದಿಂದಲೇ ಪೂಜಾ ವಿಧಿ ವಿಧಾನಗಳು ಜರುಗುತ್ತವೆ. ಮಂಗಳ ಸ್ನಾನ ನೆರವೇರಿಸಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಯದುವೀರ್ ಅವರಿಗೆ ಕಂಕಣ ಧಾರಣೆ ಮಾಡಲಾಗುತ್ತದೆ. ಇದಾದ ಬಳಿಕ ಆರಮನೆಗೆ ಪಟ್ಟದ ಆನೆ, ಕುದರೆ, ಹಸುವನ್ನು ಕರೆಸಿ ಪೂಜೆ ಸಲ್ಲಿಸಲಾಗುತ್ತದೆ. ಇದನ್ನೂ ಓದಿ: ಜ್ಞಾನಪೀಠ ಯಾರಿಗೆ ಸಿಕ್ಕರೂ ಸಂತೋಷ: ಹಿರಿಯ ಕವಿ ಚನ್ನವೀರ ಕಣವಿ


    ಸುಮಾರು 1 ಗಂಟೆ ಮೈಸೂರು ಅರಮನೆಯಲ್ಲಿ ನಾಳೆ ಗತಕಾಲದ ವೈಭವ ಮರುಕಳಿಸಲಿದ್ದು, ರಾಜರ ಕಾಲದ ಆಳ್ವಿಕೆ ಮಾದರಿಯಲ್ಲಿ ದರ್ಬಾರ್ ನಡೆಯಲಿದೆ. ಇದನ್ನು ಕಣ್ತುಂಬಿಕೊಳ್ಳಲು ಯಾರಿಗೂ ಅವಕಾಶವಿಲ್ಲ. ಈ ಬಾರಿ ಅರಮನೆಯಲ್ಲೂ 10 ದಿನಗಳ ಕಾಲ ಸರಳವಾಗಿ ದಸರಾ ದರ್ಬಾರ್ ನಡೆಯಲಿದೆ.

  • ನಾಡಹಬ್ಬಕ್ಕೆ ಪ್ರಮೋದಾದೇವಿಯವರಿಗೆ ಎಸ್.ಟಿ.ಎಸ್ ಅಧಿಕೃತ ಆಹ್ವಾನ

    ನಾಡಹಬ್ಬಕ್ಕೆ ಪ್ರಮೋದಾದೇವಿಯವರಿಗೆ ಎಸ್.ಟಿ.ಎಸ್ ಅಧಿಕೃತ ಆಹ್ವಾನ

    ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ಅವರನ್ನು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಇಂದು ಅಧಿಕೃತವಾಗಿ ಆಹ್ವಾನಿಸಿದ್ದಾರೆ.

    ರಾಜಮಾತೆಗೆ ಫಲಪುಷ್ಪ ತಾಂಬೂಲ ನೀಡಿ ಗೌರವಿಸಿ ಆಹ್ವಾನ ನೀಡಲಾಯಿತು. ಸಚಿವರ ಆಹ್ವಾನ ಸ್ವೀಕರಿಸಿದ ಪ್ರಮೋದಾದೇವಿ ಅವರು ದಸರಾ ಆಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

    ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರತಿವರ್ಷದ ಪದ್ಧತಿಯಂತೆ ದಸರಾ ಮಹೋತ್ಸವಕ್ಕೆ ರಾಜಮಾತೆಯವರನ್ನು ಆಹ್ವಾನಿಸಲಾಯಿತು. ದಸರಾಗೆ ಪೂರ್ಣ ಸಹಕಾರ ನೀಡುವಂತೆ ಕೋರಲಾಯಿತು. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು. ಅರಮನೆಯ ಕಾರ್ಯಕ್ರಮಗಳಿಗೂ ಯಾವುದೇ ಅಡಚಣೆಯಾಗದ ರೀತಿಯಲ್ಲಿ ಸಹಕಾರ ನೀಡುವಂತೆ ಅವರೂ ಕೋರಿದರು. ಅದಕ್ಕೆ ಸಂಪೂರ್ಣ ಸಹಕಾರ ಕೊಡುವುದಾಗಿ ತಿಳಿಸಲಾಗಿದೆ ಎಂದರು. ಇದನ್ನೂ ಓದಿ:   ಸಮಂತಾ, ನಾಗ ಚೈತನ್ಯ DIVORCEಗೆ ಅಸಲಿ ಕಾರಣ ಬಯಲು

    ಅ.7ರಿಂದ 15ರವರೆಗೆ ದಸರಾ ನಡೆಯಲಿದೆ. ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ 400 ಜನರಿಗೆ ಅವಕಾಶ ನೀಡಲಾಗಿದೆ. ಚಾಮುಂಡಿಬೆಟ್ಟದಲ್ಲಿ ಯಾವುದೇ ನಿಬರ್ಂಧ ಇಲ್ಲ. ದೇವರ ದರ್ಶನ ಮಾಡುವವರು ಮಾಡಬಹುದು ಎಂದು ಹೇಳಿದರು. ಇದನ್ನೂ ಓದಿ:  ರಾಜ್ಯ ರಾಜಕಾರಣ ಬಿಟ್ಟು ನಾನು ಬರಲ್ಲ: ಸೋನಿಯಾ ಭೇಟಿಯ ಇನ್‌ಸೈಡ್‌ ಸುದ್ದಿ

    ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ, ಅರಮನೆ ಆವರಣದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು, ಜಂಬೂ ಸವಾರಿ ನಡೆಯಲಿದೆ. ಇದರ ಹೊರತು ಬೇರೆ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಜಂಬೂ ಸವಾರಿ ವೀಕ್ಷಣೆಗೆ 500 ಜನರಿಗೆ ಅವಕಾಶವಿದ್ದು, ಯಾವರೀತಿ ಅವಕಾಶ ಕಲ್ಪಿಸಬೇಕು ಎಂಬುದರ ಕುರಿತಾಗಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು. ಇದನ್ನೂ ಓದಿ: ಡಿಕೆಶಿ ಸಾಕ್ಷ್ಯ ವೇಳೆ ಸುಳ್ಯ ಕೋರ್ಟಲ್ಲಿ ಕೈ ಕೊಟ್ಟ ಕರೆಂಟ್! 

    ರಾಜಮಾತೆಗೆ ಆಹ್ವಾನ ನೀಡುವ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಮೈಸೂರು ಮೇಯರ್ ಸುನಂದಾ ಪಾಲನೇತ್ರ, ಮೂಡಾ ಅಧ್ಯಕ್ಷ ರಾಜೀವ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್.ಮಂಜುನಾಥಸ್ವಾಮಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಪಾಲಿಕೆ ಆಯುಕ್ತರಾದ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಶ್ರೀವತ್ಸ ಸೇರಿದಂತೆ ಇತರೆ ಗಣ್ಯರು ಹಾಗೂ ಅಧಿಕಾರಿವರ್ಗದವರು ಉಪಸ್ಥಿತರಿದ್ದರು.

  • ಅ. 7 ರಿಂದ13 ರವರೆಗೆ ನಿತ್ಯ ಸಂಜೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ: ಎಸ್.ಟಿ.ಸೋಮಶೇಖರ್

    ಅ. 7 ರಿಂದ13 ರವರೆಗೆ ನಿತ್ಯ ಸಂಜೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ: ಎಸ್.ಟಿ.ಸೋಮಶೇಖರ್

    ಮೈಸೂರು: ಕೋವಿಡ್ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ಸರಳ ಮತ್ತು ಸಾಂಪ್ರದಾಯಿಕ ದಸರಾ ಆಚರಣೆ ಮಾಡಲಾಗುವುದು. ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಹೆಚ್ಚು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಲಾವಿದರಿಗೆ ಹೆಚ್ಚು ಅವಕಾಶ ನೀಡುವಂತೆ ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.

    ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುದಾನ ಕಡಿತ ಮಾಡಬೇಡಿ. ಪ್ರತಿನಿತ್ಯ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿ ಎಂದರು.

    ಅ.7ರಿಂದ 13ರವರೆಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಸಂಜೆ 6 ರಿಂದ 9ರವರೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮೈಸೂರು ನಗರದ ಎಲ್ಲಾ ಪ್ರವೇಶದ್ವಾರಗಳಲ್ಲಿ ದೀಪಾಲಂಕಾರ ಮಾಡಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

    ಪರಿಸರ ಸ್ನೇಹಿ ಎಲ್ ಇಡಿ ಬಳಕೆ ಮಾಡಲಾಗುತ್ತದೆ. 100 ಕಿ.ಮೀ.ನಷ್ಟು ದೀಪಾಲಂಕಾರ ಮಾಡಲಾಗುವುದು. 41 ಸರ್ಕಲ್ ಗಳಲ್ಲಿ ಅಂಬಾರಿ, ವಿಧಾನಸೌಧ, ಕೆಆರ್ ಎಸ್ ಪ್ರತಿಕೃತಿಗಳ ದೀಪಾಲಂಕಾರ ಮಾಡಲಾಗುತ್ತದೆ. ಇನ್ನೆರಡು ದಿನದಲ್ಲಿ ದೀಪಾಲಂಕಾರ ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ಹೇಳಿದರು. ಇದನ್ನೂ ಓದಿ: ಇನ್ಸ್‌ಪೆಕ್ಟರ್‌ ಮೃತಪಟ್ಟಾಗ ಸೋನಿಯಾ ಅತ್ತಿರಲಿಲ್ಲ, ಟೆರರಿಸ್ಟ್ ಸತ್ತಾಗ ಅತ್ತಿದ್ದರು: ಪ್ರಹ್ಲಾದ್ ಜೋಶಿ

    ಅ.6ರಂದು ಸಂಜೆ 6 ಗಂಟೆಗೆ ದೀಪಾಲಂಕಾರಗಳ ಉದ್ಘಾಟನೆಯಾಗಲಿ. ಅಂದು ಮಾನ್ಯ ಮುಖ್ಯಮಂತ್ರಿಗಳು ಆಗಮಿಸಲಿದ್ದು ದೀಪಾಲಂಕಾರಗಳನ್ನು ವೀಕ್ಷಿಸಲಿದ್ದಾರೆ. ರಾತ್ರಿ 10 ಗಂಟೆಯವರೆಗೆ ದೀಪಾಲಂಕಾರ ಇರಲಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಸಭೆಗೆ ಆಗಮಿಸಿದ ಇಂಧನ ಸಚಿವ ಸುನೀಲ್ ಕುಮಾರ್ ಅವರಿಗೆ ಸಚಿವ ಸೋಮಶೇಖರ್ ಅವರು ಧನ್ಯವಾದ ತಿಳಿಸಿದರು. ಸಭೆಯಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿಯ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.

    ಸಭೆಯಲ್ಲಿ ಶಾಸಕ ಹರ್ಷವರ್ಧನ್, ಸಂಸದ ಪ್ರತಾಪ್ ಸಿಂಹ, ಮೂಡಾ ಅಧ್ಯಕ್ಷ ರಾಜೀವ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಸಿಇಒ ಎ.ಎಂ.ಯೋಗೀಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ನಟ ನಿನಾಸಂ ಸತೀಶ್‍ಗೆ ಮಾತೃ ವಿಯೋಗ

  • ಎಸ್.ಎಂ ಕೃಷ್ಣರಿಂದ ಈ ಬಾರಿ ದಸರಾ ಉದ್ಘಾಟನೆ: ಬೊಮ್ಮಾಯಿ

    ಎಸ್.ಎಂ ಕೃಷ್ಣರಿಂದ ಈ ಬಾರಿ ದಸರಾ ಉದ್ಘಾಟನೆ: ಬೊಮ್ಮಾಯಿ

    ಬೆಂಗಳೂರು: ದಸರಾ ಮಹೋತ್ಸವಕ್ಕೆ ಪೂಜೆ ಮಾಡಲು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಉದ್ಘಾಟಕರು. ಎಸ್.ಎಂ ಕೃಷ್ಣರಿಂದ ಈ ಬಾರಿ ದಸರಾ ಉದ್ಘಾಟನೆ ನಡೆಯಲಿದೆ. ಈ ಕುರಿತು ಇಂದಿನ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಮೈಸೂರು ದಸರಾ ಆಚರಣೆ ಕುರಿತ ಸಭೆ ನಡೆಯಿತು. ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ದಸರಾ ಉನ್ನತ ಮಟ್ಟದ ಸಮಿತಿ ಸದಸ್ಯರು ಭಾಗಿಯಾಗಿದ್ದರು. ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಅನ್ನೋ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದನ್ನೂ ಓದಿ:  ಕಾಂಗ್ರೆಸ್ ಸೇರ್ಪಡೆಗೆ ಎಷ್ಟು ಜನ ಆಸಕ್ತರು ಎಂದು ಹೇಳಲ್ಲ: ಡಿಕೆಶಿ

    ಎಸ್.ಎಂ ಕೃಷ್ಣ ಕೇವಲ ಸಿಎಂ ಆಗಿದ್ದವರು ಮಾತ್ರ ಅಲ್ಲ, ಅವರ ಯೋಗದಾನ ಬಹಳ ಇದೆ. ಅವರು ಹಲವು ಉತ್ತಮ ಸೇವೆಗಳನ್ನು ಮಾಡಿದ್ದಾರೆ. ಎಸ್.ಎಂ ಕೃಷ್ಣ ಒಬ್ಬ ಮುತ್ಸದ್ಧಿ ರಾಜಕಾರಣಿಯಾಗಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಇದನ್ನೂ ಓದಿ:  ಜೆಡಿಎಸ್‍ನದ್ದು ಮಿಷನ್ 123, ಬಿಜೆಪಿ 150, ನಮ್ಮದು 224: ಡಿಕೆಶಿ

    ಬಿಪಿಎಲ್ ಕುಟುಂಬಗಳಿಗೆ 1 ಲಕ್ಷ ರೂ.  ಪರಿಹಾರ ಕೊಡಲು ನಿರ್ಧಾರ ಮಾಡಿದ್ದೆವು. ಆ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ, ಘೋಷಣೆ ಮಾಡಿದಂತೆ 1 ಲಕ್ಷ ರೂ ಪರಿಹಾರ ಕೊಡುತ್ತಿದ್ದೇವೆ ಎಂದು ಹೇಳಿದ್ದಾರೆ.

  • ದಸರಾ ಬಳಿಕ ಪ್ರಾಥಮಿಕ ಶಾಲೆ ಓಪನ್?

    ದಸರಾ ಬಳಿಕ ಪ್ರಾಥಮಿಕ ಶಾಲೆ ಓಪನ್?

    ಬೆಂಗಳೂರು: ಕೋವಿಡ್ 19 ಕಡಿಮೆ ಆಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಶೀಘ್ರವೇ ಪ್ರಾಥಮಿಕ ಶಾಲೆ ಆರಂಭವಾಗುವ ಸಾಧ್ಯತೆಯಿದೆ.

    6 ರಿಂದ 12ನೇ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ದಸರಾ ಬಳಿಕ ಪ್ರೈಮರಿ ಶಾಲೆ ಆರಂಭಕ್ಕೆ ಚಿಂತನೆ ಮಾಡಿದೆ.

    1-5 ನೇ ತರಗತಿಗಳ ಪ್ರಾರಂಭಕ್ಕೆ ಸರ್ಕಾರ ತಜ್ಞರ ಅಭಿಪ್ರಾಯ ಕೇಳಿದೆ. ತಜ್ಞರು ದಸರಾ ಬಳಿಕ ನೋಡೋಣ ಎಂದು ಸಲಹೆ ನೀಡಿದ್ದಾರೆ. ತಜ್ಞರ ವರದಿ ಆಧರಿಸಿ ಸರ್ಕಾರ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದೆ. ಇದನ್ನೂ ಓದಿ: ಭಾರತ ಕೋವಿಡ್ 19 ನಿರ್ವಹಣೆ ಮಾಡಿದಂತೆ ಬೇರೆ ಯಾವ ದೇಶ ಮಾಡಿಲ್ಲ – ಸುಪ್ರೀಂ ಮೆಚ್ಚುಗೆ

    ಸರ್ಕಾರದ ಪ್ಲ್ಯಾನ್ ಏನು?
    ವಾರದಲ್ಲಿ 3 ದಿನ ಮಾತ್ರ ತರಗತಿ ನಡೆಯಲಿದೆ. 3 ದಿನ ಆಫ್‍ಲೈನ್ ಮತ್ತು 3 ದಿನ ಆನ್‍ಲೈನ್ ಕ್ಲಾಸ್ ನಡೆಸಲು ಚಿಂತನೆ ನಡೆದಿದೆ. ಕಡ್ಡಾಯವಾಗಿ ಕೇವಲ ಬೆಳಗ್ಗೆ ಅವಧಿ ಮಾತ್ರ ತರಗತಿ ನಡೆಯಲಿದ್ದು, ವಿದ್ಯಾರ್ಥಿಗಳು ಹೆಚ್ಚಿರುವ ಕಡೆ 3+3 ದಿನ ತರಗತಿ ನಡೆಸಲು ಅನುಮತಿ ನೀಡುವ ಸಾಧ್ಯತೆಯಿದೆ.

    ಶಾಲೆಗೆ ಹಾಜರಾತಿ ಕಡ್ಡಾಯ ಅಲ್ಲ. ಶಾಲೆಯಲ್ಲಿ ಕೊರೊನಾ ನಿಯಮ ಜಾರಿ ಸಂಬಂಧ ತಜ್ಞರ ವರದಿ ಆಧರಿಸಿ ವಿಶೇಷ ಮಾರ್ಗಸೂಚಿ ಪ್ರಕಟ ಮಾಡಿ ಆರಂಭಿಸಲು ಚಿಂತನೆ ನಡೆದಿದೆ.

  • ಅ.9ರಿಂದ 11ರವರೆಗೆ ಶ್ರೀರಂಗಪಟ್ಟಣ ದಸರಾ ಮಹೋತ್ಸವ

    ಅ.9ರಿಂದ 11ರವರೆಗೆ ಶ್ರೀರಂಗಪಟ್ಟಣ ದಸರಾ ಮಹೋತ್ಸವ

    ಮಂಡ್ಯ: ದಸರಾ ಮೂಲ ನೆಲೆ ಶ್ರೀರಂಗಪಟ್ಟಣ ದಸರಾಗೆ ಡೇಟ್ ಫಿಕ್ಸ್ ಆಗಿದೆ. ದಸರಾ ಮಹೋತ್ಸವದ ಅಂಗವಾಗಿ ಶ್ರೀರಂಗಪಟ್ಟಣದಲ್ಲಿಂದು ಪೂರ್ವಭಾವಿ ಸಭೆ ನಡೆಸಲಾಯಿತು. ಕ್ರೀಡಾ ಸಚಿವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿರುವುದರಿಂದ ಈ ಬಾರಿಯ ದಸರಾದಲ್ಲಿ ಕ್ರೀಡೆಗೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ.

    ಮೈಸೂರು ದಸರಾದ ಮೂಲ ನೆಲೆ ಶ್ರೀರಂಗಪಟ್ಟಣ. ಈ ಬಾರಿಯ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್ 9ರಿಂದ 11ರವರೆಗೆ 3 ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಮಹೋತ್ಸವ ನಡೆಯಲಿದೆ. ಅಕ್ಟೋಬರ್ 9ರಂದು ಅಭಿಜಿನ್ ಲಗ್ನದಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ನೆರವೇರಿಸಲಾಗುತ್ತೆ. ಬಳಿಕ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಯಲಿದೆ. ಇದನ್ನೂ ಓದಿ: ಗದಗಿಗೆ ಸಿಎಂ ಬಾರ್ತಾರೆಂದು ತರಾತುರಿಯಲ್ಲಿ ರಸ್ತೆ ದುರಸ್ತಿ

    ಶ್ರೀರಂಗಪಟ್ಟಣದಲ್ಲಿ ಇಂದು ದಸರಾ ಪೂರ್ವಭಾವಿ ಸಭೆ ನಡೆಸಲಾಯಿತು. ಸಚಿವ ಕೆ.ಸಿ.ನಾರಾಯಣ ಗೌಡರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯರು ಭಾಗಿಯಾಗಿದ್ದರು. ಸಭೆ ಆರಂಭದಲ್ಲೇ ಸಚಿವ ನಾರಾಯಣ ಗೌಡ ಅಧಿಕಾರಿಗಳ ವಿರುದ್ಧ ಗರಂ ಆದರು. ಸಭೆಯನ್ನು ಶಿಸ್ತುಬದ್ಧವಾಗಿ ಆಯೋಜಿಸದ ಹಾಗೂ ಮೈಕ್ ಸರಿಯಿಲ್ಲದ ಬಗ್ಗೆ ಟೇಬಲ್ ಗೆ ಮೈಕ್ ಕುಟ್ಟಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

    ಈ ಬಾರಿ ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳನ್ನು ಕರೆಸಿ ಅಂಬಾರಿಯಲ್ಲಿ ನಾಡದೇವತೆ ಮೆರವಣಿಗೆ ನಡೆಸಲಾಗುವುದು. ದಸರಾ ಮಹೋತ್ಸವಕ್ಕೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಕ್ರೀಡಾ ಸಚಿವರೇ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿರುವುದರಿಂದ ಈ ಬಾರಿಯ ಶ್ರೀರಂಗಪಟ್ಟಣ ದಸರಾದಲ್ಲಿ ಗ್ರಾಮೀಣ ಕ್ರೀಡೆಗೆ ಹೆಚ್ಚಿನ ಒತ್ತು ನೀಡುವುದಾಗಿ ಸಚಿವರು ಹೇಳಿದರು. ಇದನ್ನೂ ಓದಿ: ದೇಶಕ್ಕೆ 600 ವೈದ್ಯಕೀಯ ಕಾಲೇಜು, ಏಮ್ಸ್‌ನಂಥ 50 ಸಂಸ್ಥೆ ಬೇಕು: ನಿತಿನ್ ಗಡ್ಕರಿ

    ಕಳೆದ ವರ್ಷ ಕೊರೊನಾ ಹಿನ್ನೆಲೆಯಲ್ಲಿ ಒಂದು ದಿನಕ್ಕಷ್ಟೇ ಸೀಮಿತವಾಗಿದ್ದ ಶ್ರೀರಂಗಪಟ್ಟಣ ದಸರಾ, ಈ ಬಾರಿ ಮೂರು ದಿನಕ್ಕೆ ವಿಸ್ತರಣೆಯಾಗಿದೆ. ಈ ಮೂಲಕ ದಸರಾ ಮೂಲ ನೆಲೆ ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ.

  • ಮೈಸೂರು ಅರಮನೆಗೆ ಸೇರಿದ 4 ಆನೆಗಳು ಗುಜರಾತಿಗೆ ಶಿಫ್ಟ್

    ಮೈಸೂರು ಅರಮನೆಗೆ ಸೇರಿದ 4 ಆನೆಗಳು ಗುಜರಾತಿಗೆ ಶಿಫ್ಟ್

    ಮೈಸೂರು: ದಸರಾ ಹೊಸ್ತಿಲಲ್ಲೇ ಮೈಸೂರು ರಾಜವಂಶಸ್ಥರಿಗೆ ಅರಮನೆಯ ಆನೆಗಳು ಬೇಡವಾಯ್ತಾ ಎಂಬ ಪ್ರಶ್ನೆ ಎದ್ದಿದೆ. ಕೊರೊನಾ ಮಹಾಮಾರಿ ಎಫೆಕ್ಟ್ ನಿಂದ ಮೈಸೂರು ರಾಜಮನೆತನದ 4 ಆನೆಗಳನ್ನು ಗುಜರಾತ್‍ಗೆ ಕಳಿಸಲಾಗುತ್ತಿದೆ.

    ಸದ್ಯ ಅರಮನೆಯಲ್ಲಿ 6 ಆನೆಗಳು ಇದ್ದು ಪ್ರತಿನಿತ್ಯ ಆನೆಗಳ ನಿರ್ವಹಣೆಗೆ ತಲಾ 10 ಸಾವಿರ ವೆಚ್ಚವಾಗುತ್ತಿದ್ದು ತಿಂಗಳಿಗೆ ಎಲ್ಲಾ ಆನೆಗಳ ನಿರ್ವಹಣೆಗೆ ಸುಮಾರು 18 ಲಕ್ಷ ವೆಚ್ಚವಾಗುತ್ತದೆ.

    ದಸರಾ ಪರಂಪರೆಯ ಪೂಜೆ ವೇಳೆ ಈ ಆನೆಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ. ಇದೀಗ ಎರಡು ಆನೆಗಳನ್ನು ಉಳಿಸಿಕೊಂಡು ಉಳಿದ ಆನೆಗಳನ್ನು ಗುಜರಾತಿಗೆ ಕಳುಹಿಸಲು ನಿರ್ಧಾರ ಮಾಡಲಾಗಿದೆ. ಇದನ್ನೂ ಓದಿ: ರೋಡಿಗೆ ಬಂದ ನಾಗರಹಾವು- ಅರ್ಧ ಗಂಟೆ ಸಂಚಾರ ಬಂದ್ 

    ಈ ಬಗ್ಗೆ ರಾಜಮನೆತನದವರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದಾರೆ. ಸೀತಾ, ರೂಬಿ, ರಾಜೇಶ್ವರಿ ಜೆಮಿನಿ ಆನೆಗಳನ್ನು ಗುಜರಾತಿಗೆ ಕಳಿಸಲಾಗುತ್ತಿದೆ. ಗುಜರಾತಿನ ಇಸ್ಕಾನ್‍ಗೆ ಈ ಆನೆಗಳನ್ನು ಕಳುಹಿಸಲಾಗುತ್ತಿದೆ. ಅಲ್ಲಿ ಈಗಾಗಲೇ 50 ಆನೆಗಳಿರುವ ಬಗ್ಗೆ ಮಾಹಿತಿ ಇದೆ. ಸುಮಾರು 30 ವರ್ಷಗಳಿಂದ ಅರಮನೆಯಲ್ಲಿ ಈ ಆನೆಗಳಿವೆ.