Tag: ದಾಂತೇವಾಡ

  • ಛತ್ತೀಸ್‌ಗಢ – ಪ್ರತ್ಯೇಕ ಪ್ರಕರಣದಲ್ಲಿ 22 ನಕ್ಸಲರ ಎನ್‌ಕೌಂಟರ್

    ಛತ್ತೀಸ್‌ಗಢ – ಪ್ರತ್ಯೇಕ ಪ್ರಕರಣದಲ್ಲಿ 22 ನಕ್ಸಲರ ಎನ್‌ಕೌಂಟರ್

    ರಾಯ್‌ಪುರ: ಛತ್ತೀಸ್‌ಗಢದ (Chhattisgarh) ಬಿಜಾಪುರ ಮತ್ತು ಕಂಕೇರ್ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ನಕ್ಸಲ್ ನಿಗ್ರಹ ಪಡೆಯ ಕಾರ್ಯಾಚರಣೆಯಲ್ಲಿ 22 ನಕ್ಸಲರು ಹತರಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಬಿಜಾಪುರದಲ್ಲಿ (Bijapur) ದಾಂತೇವಾಡ (Dantewada) ಜಿಲ್ಲೆಯ ಗಡಿಯಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಗಂಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭದ್ರತಾ ಸಿಬ್ಬಂದಿ 2 ತಂಡಗಳಾಗಿ ಕಾರ್ಯಾಚರಣೆ ಮಾಡಿದಾಗ ಗುಂಡಿನ ಚಕಮಕಿ ನಡೆದಿದೆ. ಇದನ್ನೂ ಓದಿ: ನನ್ನ ಮೇಲೆ ಹನಿಟ್ರ್ಯಾಪ್‌ಗೆ ಯತ್ನ ಆಗಿದೆ – ಸದನದಲ್ಲೇ ಸಚಿವ ಕೆ.ಎನ್‌ ರಾಜಣ್ಣ ಬಾಂಬ್‌

    18 ನಕ್ಸಲರ ಶವಗಳು, ಬಂದೂಕುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಂಕೇರ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮಾ.30ರಂದು ರಿಲೀಸ್‌ ಆಗಲಿದೆ ಸಲ್ಮಾನ್‌ ಖಾನ್‌ ನಟನೆಯ ‘ಸಿಕಂದರ್‌’ ಸಿನಿಮಾ

    ರಾಜ್ಯ ಕಾರ್ಯಪಡೆ ಮತ್ತು ಜಿಲ್ಲಾ ಮೀಸಲು ಪಡೆ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ವಿಶೇಷ ಪಡೆಗಳ ಕಾರ್ಯಾಚರಣೆ ಎರಡೂ ಸ್ಥಳಗಳಲ್ಲಿ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ದಾಂತೇವಾಡ ಸ್ಫೋಟ ಪ್ರಕರಣ- ಮಾಸ್ಟರ್‌ಮೈಂಡ್‌ ಫೋಟೋ ರಿಲೀಸ್

    ದಾಂತೇವಾಡ ಸ್ಫೋಟ ಪ್ರಕರಣ- ಮಾಸ್ಟರ್‌ಮೈಂಡ್‌ ಫೋಟೋ ರಿಲೀಸ್

    – ಸಹಚರರ ಮಾಹಿತಿ ಕೊಟ್ಟವ್ರಿಗೆ ನಗದು ಬಹುಮಾನ ಘೋಷಣೆ

    ರೈಪುರ್: ದಾಂತೇವಾಡ (Dantewada) ಸ್ಫೋಟದ ತನಿಖೆ ಕೈಗೊಂಡಿರುವ ಬಸ್ತಾರ್ ಪೊಲೀಸರು ಕೃತ್ಯದ ಮಾಸ್ಟರ್‌ಮೈಂಡ್‌ ( Mastermind) ಫೋಟೋ ಬಿಡುಗಡೆ ಮಾಡಿದ್ದಾರೆ. ಅಲ್ಲದೆ ಆತನ ಹಾಗೂ ಸಹಚರರ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ಪೊಲೀಸ್ ಇಲಾಖೆ ಘೋಷಿಸಿದೆ.

    ಸ್ಫೋಟದ ಮಾಸ್ಟರ್ ಮೈಂಡ್‍ನನ್ನು ಜಗದೀಶ್ ಎಂದು ಗುರುತಿಸಲಾಗಿದೆ. ಜಗದೀಶ್‍ನ ಪತ್ನಿ ಸುಕ್ಮಾ ಜಿಲ್ಲೆಯ ಹೇಮ್ಲಾ ಕೂಡ ನಕ್ಸಲ್ ಸಂಘಟನೆಯ ದರ್ಭಾ ವಿಭಾಗದಲ್ಲಿ ಕಮಾಂಡರ್ ಆಗಿದ್ದಾಳೆ. ಅಲ್ಲದೇ ಜಗದೀಶ್‍ನ ಮಾವ ವಿನೋದ್ ಹೇಮ್ಲಾ, ಕಾಂಗೇರ್ ಘಾಟಿ ಪ್ರದೇಶದ ನಕ್ಸಲ್ ಸಮಿತಿಯ ಉಸ್ತುವಾರಿಯಾಗಿ ಸಕ್ರಿಯರಾಗಿದ್ದಾನೆ. ಗುಪ್ತಚರ ಮಾಹಿತಿಯ ಪ್ರಕಾರ ದರ್ಭಾ (Darbha) ವಿಭಾಗದ ಸಿಪಿಐ (CPI Maoist) ಸ್ಫೋಟದಲ್ಲಿ ಭಾಗಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಲ್‍ಖೈದಾ ಜೊತೆ ನಂಟು ಶಂಕೆ – ಶಂಕಿತ ಭಯೋತ್ಪಾದಕನ ಸೆರೆ

    10 ಡಿಎಫ್‍ಜಿ (District Reserve Guard) ಸಿಬ್ಬಂದಿ ಮತ್ತು ಚಾಲಕನ ಜೀವವನ್ನು ಬಲಿ ಪಡೆದ ಸುಧಾರಿತ ಸ್ಫೋಟಕವನ್ನು (IED) ಎರಡು ತಿಂಗಳ ಹಿಂದೆಯೇ ಭೂಮಿಯಲ್ಲಿ ಹುದುಗಿಸಿಟ್ಟಿರುವ ಕುರುಹುಗಳಿವೆ. ಫಾಕ್ಸ್‌ಹೋಲ್‌ ತಂತ್ರಜ್ಞಾನವನ್ನು (Foxhole Mechanism) ಬಳಸಿ ಸುರಂಗ ತೆಗೆದು ಇರಿಸಿದ್ದರು. ಇದರಿಂದ ಅದು ಪತ್ತೆಯಾಗಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಗುಪ್ತಚರ ಮಾಹಿತಿಯ ಆಧಾರದ ಮೇಲೆ ಚೈತು, ದೇವಾ, ಮಂಗ್ಟು, ರಾನ್ಸಾಯಿ, ಜೈಲಾಲ್, ಬಮನ್, ಸೋಮ, ರಾಕೇಶ್, ಭೀಮಾ ಮತ್ತು ಇತರ ಮಾವೋವಾದಿಗಳ ವಿರುದ್ಧ ಸೆಕ್ಷನ್ 147 ಗಲಭೆ, 149 ಕಾನೂನು ಬಾಹಿರ ಚಟುವಟಿಕೆ, 307 ಕೊಲೆ ಯತ್ನ, 302 ಕೊಲೆ ಅಲ್ಲದೆ ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಯುಎಪಿಎ ಕಾಯ್ದೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    ಛತ್ತೀಸ್‍ಗಢದ (Chhattisgarh) ದಾಂತೇವಾಡದಲ್ಲಿ ಜಿಲ್ಲಾ ಮೀಸಲು ಪಡೆ ಸಿಬ್ಬಂದಿಯ ಮೇಲೆ ಮಾವೋವಾದಿಗಳ ದಾಳಿಯ ನಂತರದ ಕ್ಷಣಗಳನ್ನು ತೋರಿಸುವ ವೀಡಿಯೋವೊಂದು ಪತ್ತೆಯಾಗಿದೆ. ಇದರಲ್ಲಿ ಮಾವೋವಾದಿಯೊಬ್ಬ ಪೊಲೀಸರ ಮೇಲೆ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಏ.26 ರಂದು ಛತ್ತೀಸ್‍ಗಢದ ದಾಂತೇವಾಡದಲ್ಲಿ ಮಾವೋವಾದಿಗಳು ನಡೆಸಿದ್ದ ಐಇಡಿ ಸ್ಫೋಟದಲ್ಲಿ 10 ಜಿಲ್ಲಾ ಮೀಸಲು ಪಡೆಯ ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಸಾವನ್ನಪ್ಪಿದ್ದರು. ಇದನ್ನೂ ಓದಿ: ನಕ್ಸಲರ ಅಟ್ಟಹಾಸ- IED ಬ್ಲಾಸ್ಟ್‌ಗೆ 11 ಯೋಧರು ಹುತಾತ್ಮ

  • ದಾಂತೇವಾಡ ನಕ್ಸಲ್ ದಾಳಿ- ಮೃತ ಯೋಧನ ಶವಕ್ಕೆ ಹೆಗಲು ಕೊಟ್ಟ ಭೂಪೇಶ್ ಬಘೇಲ್

    ದಾಂತೇವಾಡ ನಕ್ಸಲ್ ದಾಳಿ- ಮೃತ ಯೋಧನ ಶವಕ್ಕೆ ಹೆಗಲು ಕೊಟ್ಟ ಭೂಪೇಶ್ ಬಘೇಲ್

    ರೈಪುರ್: ದಾಂತೇವಾಡದ (Dantewada) ಐಇಡಿ ದಾಳಿಯಲ್ಲಿ  (IED attack) ಪ್ರಾಣ ಕಳೆದುಕೊಂಡ ಜಿಲ್ಲಾ ಮೀಸಲು ಪಡೆ ಸಿಬ್ಬಂದಿಯ ಪಾರ್ಥೀವ ಶರೀರವನ್ನು ಸಾಗಿಸುವಾಗ ಛತ್ತೀಸ್‍ಗಢ ಸಿಎಂ ಭೂಪೇಶ್ ಬಘೇಲ್ (Bhupesh Baghel) ಹೆಗಲು ನೀಡಿದ್ದಾರೆ.

    ಘಟನೆಯಲ್ಲಿ ಹುತಾತ್ಮರಾದ ಯೋಧನ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಸಿಎಂ ಭೂಪೇಶ್ ಬಘೇಲ್ ತೆರಳಿದ್ದರು. ಈ ವೇಳೆ ಯೋಧನ ಪಾರ್ಥಿವ ಶರಿರವನ್ನು ಸಾಗಿಸಲು ತಮ್ಮ ಹೆಗಲು ನೀಡಿ ಸಹಕರಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾಳಿಯ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಗುಂಡಿನ ದಾಳಿ ನಡೆದಿದ್ದು ಓರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೋರ್ವ ನಕ್ಸಲ್ ಸದಸ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾನೆ ಎಂದು ಅವರು ತಿಳಿಸಿದ್ದಾರೆ.

    ದುಃಖತಪ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ ಅವರು ಸೈನಿಕರ ತ್ಯಾಗ ವ್ಯರ್ಥವಾಗುವುದಿಲ್ಲ. ನಕ್ಸಲ್ ಬೆದರಿಕೆಯನ್ನು ಎದುರಿಸಲು ಸೇನೆ ಸದೃಢವಾಗಿದೆ. ಈ ಘಟನೆಯು ಸರ್ಕಾರ ಮತ್ತು ಸೈನಿಕರ ನೈತಿಕ ಸ್ಥೈರ್ಯವನ್ನು ಕೆಡಿಸುವುದಿಲ್ಲ. ಪ್ರತಿಯಾಗಿ ಹೋರಾಡಲು ಸೇನೆ ಸಜ್ಜಾಗಿದೆ ಎಂದಿದ್ದಾರೆ.

    ಬುಧವಾರ ದಾಂತೇವಾಡದಲ್ಲಿ ನಡೆದ ಐಇಡಿ ದಾಳಿಯಲ್ಲಿ 10 ಡಿಆರ್‍ಜಿ ಸಿಬ್ಬಂದಿ ಮತ್ತು ವಾಹನದ ಚಾಲಕನಾಗಿದ್ದ ಒಬ್ಬ ನಾಗರಿಕ ಮೃತಪಟ್ಟಿದ್ದರು.

    ದಾಳಿಯನ್ನು ಪ್ರಧಾನಿ ಮೋದಿ (Narendra Modi) ಖಂಡಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಅವರ ತ್ಯಾಗವನ್ನು ಸದಾ ಸ್ಮರಿಸಲಾಗುವುದು ಎಂದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಇದನ್ನು ಹೇಡಿಗಳ ಕೃತ್ಯ ಎಂದು ಕರೆದಿದ್ದು, ಛತ್ತೀಸ್‍ಗಢ ಸರ್ಕಾರಕ್ಕೆ ಅಗತ್ಯವಾದ ಬೆಂಬಲವನ್ನು ನೀಡುವುದಾಗಿ ಘೋಷಿಸಿದ್ದರು.

  • ಸಾರ್ವಜನಿಕರ ಬಸ್‌ಗೆ ಬೆಂಕಿ ಇಟ್ಟ ನಕ್ಸಲರು – 15 ಮಂದಿ ಸಾವು

    ಸಾರ್ವಜನಿಕರ ಬಸ್‌ಗೆ ಬೆಂಕಿ ಇಟ್ಟ ನಕ್ಸಲರು – 15 ಮಂದಿ ಸಾವು

    ರಾಯಪುರ: ನಕ್ಸಲರ ಗುಂಪೊಂದು (Naxals) ಪ್ರಯಾಣಿಕರ ಬಸ್‌ಗೆ (Bus) ಬೆಂಕಿ ಹಚ್ಚಿ 15 ಜನ ಸಾವನ್ನಪ್ಪಿದ ಘಟನೆ ಛತ್ತೀಸ್‌ಗಢದ (Chattisgarh) ದಾಂತೇವಾಡ (Dantewada) ಜಿಲ್ಲೆಯ ಮಾಲೆವಾಹಿ (Malewahi) ಪ್ರದೇಶದಲ್ಲಿ ನಡೆದಿದೆ.

    ಮಾರ್ಚ್ 31ರಂದು ಮಧ್ಯಾಹ್ನ ಬಸ್ ದಾಂತೇವಾಡದಿಂದ ಸುಕ್ಮಾಗೆ (Sukma) ತೆರಳುತ್ತಿದ್ದ ಸಂದರ್ಭ, ಮಾಲೆವಾಹಿ ಬಳಿ ನಕ್ಸಲರು ಬಸ್ ತಡೆದು ಬೆಂಕಿ ಹಚ್ಚಿದ್ದಾರೆ. ಈ ಘಟನೆಯಿಂದ 15 ಜನ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ನಕಲಿ ಅಂಕಪಟ್ಟಿ ನೀಡಿ ಪ್ರಾಚಾರ್ಯ ಹುದ್ದೆಗೇರಿದ್ದ ಪ್ರಾಂಶುಪಾಲ- ಪ್ರಕರಣ ದಾಖಲು 

    ಈ ಘಟನೆಯನ್ನು ರಾಜಕೀಯ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಸಂತ್ರಸ್ತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ (Bhupesh Baghel) ನಕ್ಸಲರ ದಾಳಿಯನ್ನು ಖಂಡಿಸಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಸಂತ್ರಸ್ತರ ಕುಟುಂಬಕ್ಕೆ ಪರಿಹಾರವನ್ನೂ ಘೋಷಿಸಿದ್ದಾರೆ. ಇದನ್ನೂ ಓದಿ: ಇಂಡಿಗೋ ವಿಮಾನ ಸಿಬ್ಬಂದಿಯ ಜೊತೆ ಅನುಚಿತ ವರ್ತನೆ- ಸ್ವೀಡಿಷ್ ಪ್ರಜೆಯ ಬಂಧನ

    ನಾಗರಿಕರ ಮೇಲೆ ದಾಳಿ ನಡೆಯುತ್ತಿರುವುದು ಛತ್ತೀಸ್‌ಗಢದಲ್ಲಿ ಇದೇ ಮೊದಲಲ್ಲ. ಈ ಪ್ರದೇಶವು ಹಲವು ವರ್ಷಗಳಿಂದ ನಕ್ಸಲ್ ಹಿಂಸಾಚಾರವನ್ನು ಎದುರಿಸುತ್ತಿದೆ. ಅಮಾಯಕ ನಾಗರಿಕರು ಆಗಾಗ ಅವರ ದಾಳಿಗೆ ಒಳಗಾಗುತ್ತಾರೆ. ಈ ಪ್ರದೇಶದಲ್ಲಿ ನಕ್ಸಲ್ ಬಂಡಾಯವನ್ನು ಎದುರಿಸಲು ಸರ್ಕಾರ ಹಲವು ವರ್ಷಗಳಿಂದ ಪ್ರಯತ್ನಿಸುತ್ತಿದೆ. ಆದರೆ ಅನಿಶ್ಚಿತ ಪರಿಸ್ಥಿತಿಗಳಿಂದಾಗಿ ನಕ್ಸಲರು ಸರಾಗವಾಗಿ ದಾಳಿ ನಡೆಸುತ್ತಿದ್ದು, ಇದನ್ನು ನಿಭಾಯಿಸಲು ಭದ್ರತಾ ಪಡೆಯವರು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆಗೈದ ಪತ್ನಿಗೆ ಜೀವಾವಧಿ ಶಿಕ್ಷೆ