Tag: ದಾರಾ ಸಿಂಗ್ ಚೌಹಾಣ್

  • ಉತ್ತರ ಪ್ರದೇಶದ ಬಿಜೆಪಿ ಮಾಜಿ ಸಚಿವ ದಾರಾ ಸಿಂಗ್ ಚೌಹಾಣ್ ಎಸ್‍ಪಿಗೆ ಸೇರ್ಪಡೆ

    ಉತ್ತರ ಪ್ರದೇಶದ ಬಿಜೆಪಿ ಮಾಜಿ ಸಚಿವ ದಾರಾ ಸಿಂಗ್ ಚೌಹಾಣ್ ಎಸ್‍ಪಿಗೆ ಸೇರ್ಪಡೆ

    ಲಕ್ನೋ: ಬಿಜೆಪಿಗೆ ರಾಜೀನಾಮೆ ನೀಡಿದ್ದ ಉತ್ತರ ಪ್ರದೇಶದ ಮಾಜಿ ಸಚಿವ ದಾರಾ ಸಿಂಗ್ ಚೌಹಾಣ್ ಇಂದು ಸಮಾಜವಾದಿ ಪಕ್ಷಕ್ಕೆ (ಎಸ್‍ಪಿ) ಸೇರ್ಪಡೆಯಾಗಿದ್ದಾರೆ.

    ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ದಾರಾ ಸಿಂಗ್ ಚೌಹಾಣ್ ಅವರನ್ನು ತಮ್ಮ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಕಳೆದ ಒಂದು ವಾರದಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಉತ್ತರ ಪ್ರದೇಶದ ಮೂರನೇ ಮಾಜಿ ಸಚಿವ ದಾರಾ ಸಿಂಗ್ ಚೌಹಾಣ್ ಆಗಿದ್ದು, ಈ ಮುನ್ನ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಂ ಸಿಂಗ್ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಇದನ್ನೂ ಓದಿ:  ಬಿಜೆಪಿಯ ದ್ವೇಷದ ರಾಜಕಾರಣ ಭಾರತಕ್ಕೆ ಹಾನಿಕಾರಕ: ರಾಹುಲ್ ಗಾಂಧಿ

    2017ರಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗ ಸಬ್‍ಕಾ ಸಾಥ್, ಸಬ್‍ಕಾ ವಿಕಾಸ್ ಎಂಬ ಘೋಷಣೆ ನೀಡಲಾಗಿತ್ತು. ಆದರೆ ಅಭಿವೃದ್ಧಿಯಾಗುತ್ತಿರುವುದು ಕೇವಲ ಕೆಲವರು ಮಾತ್ರ. ಉಳಿದವರು ಇದ್ದ ಹಾಗೆಯೇ ಉಳಿದುಕೊಂಡಿದ್ದಾರೆ. ಈಗ ಪಡಿತರ ನೀಡಿ ಗುಲಾಮರನ್ನಾಗಿಸುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ದಾರಾ ಸಿಂಗ್ ಚೌಹಾಣ್ ಕಿಡಿಕಾರಿದರು.

    Dara Singh Chauhan

    ಬಿಜೆಪಿಯನ್ನು ಬೆಂಬಲಿಸಿದ ನಂತರವೂ ಹಿಂದುಳಿದ ವರ್ಗದವರಿಗೆ ಬಿಜೆಪಿಯಲ್ಲಿ ಸರಿಯಾದ ಸ್ಥಾನ ಸಿಕ್ಕಿಲ್ಲ. ಐದು ವರ್ಷಗಳಿಂದ ನೀವು ಏನು ಮಾಡಿದ್ದೀರಾ ಎಂದು ಜನರು ಕೇಳುತ್ತಿದ್ದಾರೆ. ನಾವು ಸಮಯಕ್ಕಾಗಿ ಕಾಯುತ್ತಿದ್ದೇವು, ಹಿಂದುಳಿದ ಸಮುದಾಯದವರು ತಾಳ್ಮೆಯಿಂದ ಇದ್ದರು. ಆದರೆ ಹಿಂದುಳಿದ ಸಮಾಜದವರ ಹಿತಾಸಕ್ತಿಗಳನ್ನು ನಿರ್ಲಕ್ಷಿಸುತ್ತಿರುವುದನ್ನು ಕಂಡು ನಾವು ಇದೀಗ ಸಮಾಜವಾದಿ ಪಕ್ಷಕ್ಕೆ ಸೇರಲು ನಿರ್ಧರಿಸಿದೇವು ಎಂದು ಹೇಳಿದರು. ಇದನ್ನೂ ಓದಿ: ಉನ್ನತ ಶಿಕ್ಷಣ ಸಚಿವರು ನಮಗೆ ಕೊಟ್ಟಿದ್ದು ಸಿಹಿಯಲ್ಲ, ಕಹಿ: ಅತಿಥಿ ಉಪನ್ಯಾಸಕರ ಆಕ್ರೋಶ

    ಉತ್ತರಪ್ರದೇಶದಲ್ಲಿ 15-18 ವಯಸ್ಸಿನ 51,37,909 ಮಕ್ಕಳಿಗೆ ಕೋವಿಡ್ ಲಸಿಕೆ ಡೋಸ್‍ಗಳನ್ನು ನೀಡಲಾಗಿದೆ. ಆದರೆ, ಹಿಂದುಳಿದ ಸಮುದಾಯಗಳ ಮಕ್ಕಳಿಗೆ ನೀಡಲಾಗಿಲ್ಲ. ಆದರೆ ಸಮಾಜವಾದಿ ಪಕ್ಷ ಆಡಳಿತಕ್ಕೆ ಬಂದರೆ ಪ್ರಾತಿನಿಧ್ಯದ ವಿಷಯದಲ್ಲಿ ರಾಜ್ಯದ ಜನರಿಗೆ ಸಮಾನ ಪಾಲು ನೀಡುತ್ತದೆ ಎಂದರು. ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಕ್ಯಾಬಿನೆಟ್‍ನಲ್ಲಿ ದಾರಾ ಸಿಂಗ್ ಚೌಹಾಣ್ ಅರಣ್ಯ, ಪರಿಸರ ಮತ್ತು ಪ್ರಾಣಿ ಉದ್ಯಾನ ಸಚಿವರಾಗಿದ್ದರು.

  • ಕಳೆದ 24 ಗಂಟೆಯ ಅವಧಿಯಲ್ಲಿ ಯೋಗಿ ಸರ್ಕಾರದ ಎರಡು ಮಂತ್ರಿಗಳು ರಾಜೀನಾಮೆ

    ಕಳೆದ 24 ಗಂಟೆಯ ಅವಧಿಯಲ್ಲಿ ಯೋಗಿ ಸರ್ಕಾರದ ಎರಡು ಮಂತ್ರಿಗಳು ರಾಜೀನಾಮೆ

    ಲಕ್ನೋ: ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಇಬ್ಬರು ಸಚಿವರು ರಾಜೀನಾಮೆ ನೀಡಿ ಪಕ್ಷ ತೊರೆದಿದ್ದಾರೆ. ನಿನ್ನೆ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ ಕೊಟ್ಟರೆ, ಇಂದು ದಾರಾ ಸಿಂಗ್ ಚೌಹಾಣ್ ರಾಜೀನಾಮೆ ನೀಡಿ ಬಿಜೆಪಿಗೆ ಆಘಾತ ನೀಡಿದ್ದಾರೆ.

    ದಾರಾ ಸಿಂಗ್ ಚೌಹಾಣ್ ಯೋಗಿ ಸರ್ಕಾರದಲ್ಲಿ ಅರಣ್ಯ ಮತ್ತು ಪರಿಸರ ಖಾತೆ ಸಚಿವರಾಗಿದ್ದರು. ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷದಿಂದ ಹೊರಬಂದಿದ್ದಾರೆ. ದಲಿತರು, ಒಬಿಸಿಗಳು, ರೈತರು, ನಿರುದ್ಯೋಗಿಗಳು ಮತ್ತು ಸಣ್ಣ ಉದ್ಯಮಿಗಳ ಮೇಲೆ ಆಗುತ್ತಿರುವ ತೀವ್ರ ದಬ್ಬಾಳಿಕೆಯಿಂದಾಗಿ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ದಾರಾ ಸಿಂಗ್ ಚೌಹಾಣ್ ರಾಜೀನಾಮೆಗೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಯೋಗಿ, ಬಿಜೆಪಿಗೆ ಬಿಗ್‌ ಶಾಕ್‌ – ಸಚಿವ ಸೇರಿ 4 ಶಾಸಕರು ರಾಜೀನಾಮೆ, ಇಂದು ಎಸ್‌ಪಿ ಸೇರ್ಪಡೆ

    ನಿನ್ನೆ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಹಾಗೂ ನಾಲ್ವರು ಶಾಸಕರು ಪಕ್ಷವನ್ನು ತೊರೆದು ಸಮಾಜವಾದಿ ಪಕ್ಷ (ಎಸ್‍ಪಿ) ಸೇರಿದ್ದರು. ಸ್ವಾಮಿ ಪ್ರಸಾದ್ ಮೌರ್ಯ ಅವರು ರಾಜೀನಾಮೆ ನೀಡಿ ಸ್ವತಃ ಅವರೇ ಟ್ವಿಟ್ಟರ್‍ನಲ್ಲಿ ಬರೆದುಕೊಂಡಿದ್ದರು. ಜೊತೆಗೆ ಇವರ ಆಪ್ತರೆಂದೇ ಗುರುತಿಸಿಕೊಂಡಿರುವ ರೋಷನ್ ಲಾ ವರ್ಮಾ, ಬ್ರಿಜೇಶ್ ಪ್ರಜಾಪತಿ, ಭಾಗ್ವತಿ ಸಾಗರ್, ವಿನಯ್ ಶಂಕ್ಯಾ ಅವರು ಸಹ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದರು. ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ತಿಂಗಳಿಗೆ 1 ಸಾವಿರ: ಕೇಜ್ರಿವಾಲ್

    ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯದ ಪ್ರಭಾವಿ ನಾಯಕನಾಗಿರುವ ಸ್ವಾಮಿ ಪ್ರಸಾದ್ ಮೌರ್ಯ ಅವರು ಮಾಯಾವತಿ ನಾಯಕತ್ವದ ಬಿಎಸ್‍ಪಿ ತೊರೆದು 2016ರಲ್ಲಿ ಬಿಜೆಪಿ ಸೇರಿದ್ದರು. ಒಬಿಸಿ ಮತದಾರರನ್ನು ಸೆಳೆಯಲು ಹಾಗೂ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ವಿರುದ್ಧ ಪ್ರಬಲ ಪೈಪೋಟಿ ನೀಡುವ ಬಿಜೆಪಿ ಯೋಜನೆಗಳಿಗೆ ಮೌರ್ಯ ಪ್ರಮುಖ ವ್ಯಕ್ತಿಯಾಗಿದ್ದರು.

    ಭಿನ್ನ ಸಿದ್ಧಾಂತರದ ಹೊರತಾಗಿಯೂ ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ನಾನು ಸಮರ್ಪಣಾ ಮನೋಭಾವದಿಂದ ಕೆಲಸ ಮಾಡಿದ್ದೇನೆ. ಆದರೆ ದಲಿತರು, ಒಬಿಸಿಗಳು, ರೈತರು, ನಿರುದ್ಯೋಗಿಗಳು ಮತ್ತು ಸಣ್ಣ ಉದ್ಯಮಿಗಳ ಮೇಲೆ ಆಗುತ್ತಿರುವ ತೀವ್ರ ದಬ್ಬಾಳಿಕೆಯಿಂದಾಗಿ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಚಿವ ಮೌರ್ಯ ಸ್ಪಷ್ಟಪಡಿಸಿದ್ದರು. ಇಂದು ರಾಜೀನಾಮೆ ನೀಡಿದ ದಾರಾ ಸಿಂಗ್ ಚೌಹಾಣ್ ಕೂಡ ಸ್ವಾಮಿ ಪ್ರಸಾದ್ ಮೌರ್ಯರ ಹಾದಿ ಹಿಡಿದಿದ್ದಾರೆ. ಇದನ್ನೂ ಓದಿ: ಹಿಟ್ಟಿನ ಮೇಲೆ ಉಗುಳಿ ರೊಟ್ಟಿ ಮಾಡಿದವನು ಸೇರಿ 5 ಜನ ಅರೆಸ್ಟ್ 

    ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿ ಉಳಿದಿರುವಂತೆ ಸಚಿವರೇ ರಾಜೀನಾಮೆ ನೀಡಿ ಪಕ್ಷ ತೊರೆಯುತ್ತಿರುವುದು ಬಿಜೆಪಿಗೆ ಹಿನ್ನಡೆ ತಂದಿದ್ದು, ಮತ್ತೊಮ್ಮೆ ಯೋಗಿ ಅಧಿಕಾರಕ್ಕೇರುವ ಪ್ಲಾನ್‍ಗೆ ಕಂಟಕ ಎದುರಾಗಿದೆ.