ನವದೆಹಲಿ: ಜಮ್ಮುವಿನ ಮೇಲೆ ಪಾಕ್ 100 ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಕೌಂಟರ್ ಅಟ್ಯಾಕ್ ಮಾಡಿರುವ ಭಾರತ ಲಾಹೋರ್ (Lahore) ಮೇಲೆ ಮಿಸೈಲ್‌ಗಳ ಸುರಿಮಳೆ ಗರೆದಿದೆ. ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಪಾಕ್ ಮತ್ತು ಅಲ್ಲಿನ ಜನತೆ ತತ್ತರಿಸಿದೆ. ಇಷ್ಟಾಗಿಯೂ ಕಿತಾಪತಿ ಬಿಡದ ಪಾಕಿಸ್ತಾನ ಮತ್ತೆ ಭಾರತದ ಜಮ್ಮುವಿನ ಮೇಲೆ ದಾಳಿಗೆ ವಿಫಲಯತ್ನ ನಡೆಸಿದೆ.
ಜಮ್ಮುವಿನಲ್ಲಿ ಇದುವರೆಗೆ ಪಾಕಿಸ್ತಾನದ 50ಕ್ಕೂ ಹೆಚ್ಚು ಡ್ರೋನ್ ದಾಳಿಯನ್ನು ಭಾರತೀಯ ವಿಫಲಗೊಳಿಸಿದೆ. ಭಾರತೀಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಹಾಗೂ ವಿವಿಧ ಪ್ರದೇಶಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿತ್ತು. ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಕಪುರ್ತಲ, ಜಲಂಧರ್, ಲುಧಿಯಾನ, ಆದಂಪುರ, ಬಟಿಂಡಾ, ಚಂಡೀಗಢ, ನಾಲ್, ಫಲೋಡಿ, ಉತ್ತರಲೈ, ಭುಜ್ ಸೇರಿ ಒಟ್ಟು 15 ನಗರಗಳ ಮೇಲೂ ದಾಳಿಗೆ ಸಂಚುಮಾಡಿತ್ತು. ಆದ್ರೆ ಭಾರತೀಯ ಸೇನೆ ಎಲ್ಲಾ ದಾಳಿಯನ್ನ ವಿಫಲಗೊಳಿಸಿದೆ. ಇದನ್ನೂ ಓದಿ: ಕರಾಚಿಯ 15 ಕಡೆ ಭಾರೀ ಸ್ಫೋಟ – INS ವಿಕ್ರಾಂತ್ ನೌಕೆಯಿಂದ ಅಟ್ಯಾಕ್
ಮೇ 7 ರಂದು ಭಾರತ ಪಾಕಿಸ್ತಾನ ಹಾಗೂ ಪಿಒಕೆಯಲ್ಲಿದ್ದ 9 ಭಯೋತ್ಪಾದಕರ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿ ಉಗ್ರರನ್ನು ಧ್ವಂಸಮಾಡಿದೆ, ಇದಕ್ಕೆ ಪ್ರತಿಯಾಗಿ ಪಾಕ್ ಭಾರತದ ಅಮಾಯಕ ನಾಗರಿಕರ ಮೇಲೆ ದಾಳಿ ಮಾಡಿ 16 ಜನರನ್ನು ಕೊಂದಿದೆ. ಅಲ್ಲದೆ ಉದ್ಧಟತನ ತೋರಿರುವ ಪಾಕಿಸ್ತಾನ ಸೈನ್ಯ ಗುರುವಾರ ಸಂಜೆಯಿಂದ ಕ್ಷಿಪಣಿ ದಾಳಿ ಮಾಡಿದೆ. ಜಮ್ಮುವಿನ ಮೇಲೆ ದಾಳಿ ಮುಂದುವರಿಸಿದೆ. ಭಾರತ ಪ್ರತಿದಾಳಿ ಮಾಡಿ, ಪಾಕಿಸ್ತಾನದ ಕ್ಷಿಪಣಿಗಳನ್ನು ಹೊಡೆದುರುಳಿಸಿದೆ. ಇದನ್ನೂ ಓದಿ: ಗಡಿ, ಏರ್‌ಪೋರ್ಟ್‌ಗಳ ಭದ್ರತೆ ಪರಿಶೀಲನೆ – ಉನ್ನತ ಅಧಿಕಾರಿಗಳೊಂದಿಗೆ ಅಮಿತ್ ಶಾ ಚರ್ಚೆ
ಪೂಂಚ್ ಹಾಗೂ ರಜೌರಿಯಲ್ಲಿ ಸ್ಫೋಟಗಳ ಸದ್ದು:
ಇನ್ನೂ ಲೈನ್ ಆಫ್ ಕಂಟ್ರೋಲ್ ಬಳಿ ಉದ್ವಿಗ್ನತೆ ಹೆಚ್ಚಾಗಿದೆ, ಜಮ್ಮುವಿನ ಪೂಂಚ್ ಹಾಗೂ ರಜೌರಿ ಜಿಲ್ಲೆಗಳಲ್ಲಿ ಸ್ಫೋಟದ ಸದ್ದು ಕೇಳಿಬಂದಿದೆ. ಆದರೆ ಭಯಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಜನರಿಗೆ ಧೈರ್ಯ ತುಂಬಿದ್ದು, ಜನರು ಮನೆಯಲ್ಲಿಯೇ ಇರಲು ಸೂಚಿಸಲಾಗಿದೆ. ಲೈಟ್ ಆಫ್ ಮಾಡಿ, ಕಿಟಕಿಗಳಿಗೆ ಪರದೆ ಹಾಕಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಾಂಬಾದಲ್ಲಿ ಹಲವು ಪಾಕ್ ಉಗ್ರರ ಹತ್ಯೆ
ಅಮೃತಸರ DPRO ಮಾತನಾಡಿ, ಯಾವುದೇ ಕಾರಣಕ್ಕೂ ಭಯಪಡಬೇಡಿ. ಸೈರನ್ ಮೊಳಗುತ್ತದೆ. ಪರಿಸ್ಥಿತಿ ತಿಳಿಯಾದ ನಂತರ ಮತ್ತೆ ಸಂದೇಶ ರವಾನಿಸುತ್ತೇವೆ. ನಮ್ಮ ಸೈನಿಕರು ಕಾರ್ಯಪ್ರವೃತ್ತರಾಗಿದ್ದಾರೆ. ನಾವೆಲ್ಲರೂ ಮನೆಯಲ್ಲಿಯೇ ಇದ್ದು ಅವರಿಗೆ ಬೆಂಬಲ ನೀಡಬೇಕು. ಭಯಪಡುವ ಅಗತ್ಯವಿಲ್ಲ,” ಎಂದು ಅವರು ಹೇಳಿದ್ದಾರೆ. ಈ ಮಾತನ್ನು ಅವರು ನೇರವಾಗಿ ಹೇಳಿದ್ದಾರೆ. ಇದನ್ನೂ ಓದಿ: ಪಾಕ್‌ನ ಪ್ರಮುಖ ಎಫ್-16 ಹೊಡೆದುರುಳಿಸಿದ ಭಾರತೀಯ ವಾಯು ಸೇನೆ
– ಪರಸ್ಪರ ದಾಳಿಯಲ್ಲಿ ಲೆಬನಾನ್ ಕ್ಯಾಪ್ಟನ್, ಇಸ್ರೇಲ್‌ನ ಗಾರ್ಡ್ ಕಮಾಂಡರ್ ಹತ್ಯೆ
ಜೆರುಸಲೇಂ/ಬೈರೂತ್: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಹಿಜ್ಬುಲ್ಲಾ (Hezbollah) ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ ಬಳಿಕ ಇಸ್ರೇಲ್ (Israel) ಮೇಲೆ ಇರಾನ್ ನೂರಾರು ಕ್ಷಿಪಣಿಗಳ ಮಳೆ ಸುರಿಸಿದೆ. ಇದೇ ಮೊದಲ ಭಾರಿಗೆ ಹೈಪರ್‌ಸಾನಿಕ್ ಕ್ಷಿಪಣಿ ಬಳಸಿ ದಾಳಿ ನಡೆಸಿದೆ. ಈ ಬೆನ್ನಲ್ಲೇ ಇಸ್ರೇಲಿ ಪಡೆಗಳು ಲೆಬನಾನ್ ಮೇಲೆ ಸೇಡಿನ ದಾಳಿ ನಡೆಸಿದೆ. ಲೆಬನಾನ್‌ನ (Lebanon) ಅಲ್-ಬೆಕಾ ಕಣಿವೆಯಲ್ಲಿರುವ ಹಲ್ಬಟಾ ಮತ್ತು ಜಬುದ್ ಪಟ್ಟಣಗಳ ಮೇಲೆ ವೈಮಾನಿಕ ದಾಳಿ ನಡೆಸಿವೆ. ಎರಡೂ ಕಡೆ ಸಾವುನೋವು ಸಂಭವಿಸಿದೆ.
ಹಿಜ್ಬುಲ್ಲಾ ವಿರುದ್ಧ ಯುದ್ಧದಲ್ಲಿ ಇಸ್ರೇಲ್‌ನ ಗಾರ್ಡ್ ಕಮಾಂಡರ್ (Guards commander) ಮತ್ತು ಇತರ ನಾಯಕರು ಜೀವ ಕಳೆದುಕೊಂಡಿದ್ದಾರೆ. ಮತ್ತೊಂದೆಡೆ ಇಸ್ರೇಲ್ ದಾಳಿಗೆ ಲೆಬನಾನ್ ಸೇನೆಯ 22 ವರ್ಷದ ಕ್ಯಾಪ್ಟನ್ ಕ್ಯಾಪ್ಟನ್ ಈಟಾನ್ ಇಟ್ಜಾಕ್ ಓಸ್ಟರ್ ಪ್ರಾಣ ತೆತ್ತಿದ್ದಾರೆ. ಇರಾನ್, ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದ್ದಂತೆ, ಇಸ್ರೇಲ್ ಕೂಡ, ಇರಾನ್‌ಗೆ ಎಚ್ಚರಿಕೆ ನೀಡಿತ್ತು. ಇದಾದ ಬಳಿಕ ಲೆಬನಾನ್‌ನ ಬೈರೂತ್‌ನಲ್ಲಿರುವ ಹಿಜ್ಬುಲ್ಲಾ ಶಿಬಿರಗಳ ಮೇಲೆ ಇಸ್ರೇಲ್ ಸೇನೆ ಬಾಂಬ್ ಮಳೆ ಸುರಿಸಿದೆ. ಈ ಮೂಲಕ ಹಿಜ್ಬುಲ್ಲಾ ಭದ್ರಕೋಟೆ ಎಂದೇ ಕರೆಸಿಕೊಂಡಿದ್ದ ಸೇನಾ ನೆಲೆಗಳನ್ನು ಇಸ್ರೇಲ್ ಛಿದ್ರಗೊಳಿಸಿದೆ.
ತುರ್ತು ಸಭೆಗೆ ವಿಶ್ವಸಂಸ್ಥೆ ತಯಾರಿ:
ಮಧ್ಯ ಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿ ಆವರಿಸಿದೆ. ಪರಿಸ್ಥಿತಿ ದಿನೇ ದಿನೇ ವಿಕೋಪಕ್ಕೆ ತಿರುಗುತ್ತಿದೆ. ಇದರಿಂದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯನ್ನು ಪರಿಹರಿಸಲು ತುರ್ತು ಸಭೆ ಕರೆಯಲಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ವಿಶ್ವಸಂಸ್ಥೆಯ ಆಂಟೋನಿಯೊ ಗುಟೆರೆಸ್, ಒಂದು ವಾರದ ಹಿಂದೆ ಭದ್ರತಾ ಮಂಡಳಿಗೆ ಲೆಬನಾನ್‌ನ ಪರಿಸ್ಥಿತಿ ಬಗ್ಗೆ ವರದಿ ಮಾಡಿದ್ದಾರೆ. ಸದ್ಯ ಅಲ್ಲಿನ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಲೆಬನಾನಿನ ಸರ್ಕಾರವು ದೇಶದೊಳಗಿನ ಎಲ್ಲಾ ಶಸ್ತ್ರಾಸ್ತ್ರಗಳ ಮೇಲೆ ನಿಯಂತ್ರಣವನ್ನು ಮರಳಿ ಪಡೆಯಬೇಕು ಎಂದು ಪ್ರತಿಪಾದಿಸಿದ್ದಾರೆ.
– ವಿಲ್ಸನ್‌ಗಾರ್ಡನ್ ನಾಗನದ್ದು ಸೇರಿದಂತೆ 18 ಮೊಬೈಲ್ ಸೀಜ್ – ಡಿಸಿಪಿ ಸ.ರಾ ಫಾತಿಮಾ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಪೊಲೀಸರಿಂದ ದಾಳಿ
ಬೆಂಗಳೂರು: ದರ್ಶನ್ (Actor Darshan) ರಾಜಾತಿಥ್ಯ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿಗೆ (Parappana Agrahara Jail) ಪೊಲೀಸರು ಏಕಾಏಕಿ ದಾಳಿ ನಡೆಸಿದ್ದು, ಮೊಬೈಲ್ ಸೇರಿದಂತೆ ಮಾದಕ ವಸ್ತು ಹಾಗೂ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದಿದ್ದ ದರ್ಶನ್ ಹಾಗೂ ವಿಲ್ಸನ್‌ಗಾರ್ಡನ್ ನಾಗನ ಫೋಟೋ ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರು ಹದ್ದಿನ ಕಣ್ಣಿದ್ದರು. ಜೊತೆಗೆ ಜೈಲಾಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿದ್ದವು. ಆದರೆ ಇದೀಗ ಏಕಾಏಕಿ ದಾಳಿ ನಡೆಸಿದ್ದಾರೆ.ಇದನ್ನೂ ಓದಿ: Breaking – ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್!
ಪರಪ್ಪನ ಅಗ್ರಹಾರ ಜೈಲಿನ ಮೇಲೆ ಆಗ್ನೇಯ ಪೊಲೀಸರಿಂದ ದಾಳಿ ನಡೆದಿದ್ದು, ರಾತ್ರಿ ಏಕಾಏಕಿ ಡಿಸಿಪಿ ಸರಾ ಫಾತಿಮಾ (DCP Sarah Fathima) ನೇತೃತ್ವದಲ್ಲಿ 50ಕ್ಕೂ ಹೆಚ್ಚು ಪೊಲೀಸರಿಂದ ದಾಳಿ ನಡೆಸಲಾಗಿದೆ. ಜೈಲಿನಲ್ಲಿ ಮೊಬೈಲ್ ಬಳಕೆಗೆ ಬಲವಾದ ಪುರಾವೆಗಳು ಲಭ್ಯವಾಗಿದ್ದು, ಜೈಲಾಧಿಕಾರಿಗಳ ಕಳ್ಳಾಟ ಮುಂದುವರೆದಿರುವುದು ದಾಳಿ ವೇಳೆ ಸಾಬೀತಾಗಿದೆ.
ಕುಖ್ಯಾತ ರೌಡಿ ವಿಲ್ಸನ್‌ಗಾರ್ಡನ್ ನಾಗನ (Wilson Garden Naga) ಬ್ಯಾರಕ್ ಅಕ್ಕಪಕ್ಕದಲ್ಲಿ ಮೊಬೈಲ್‌ಗಳು ಪತ್ತೆಯಾಗಿದ್ದು, ಸುಮಾರು 17 ಆಂಡ್ರಾಯ್ಡ್ ಫೋನ್‌ಗಳು ಸಿಕ್ಕಿವೆ. ವಿಲ್ಸನ್ ಗಾರ್ಡನ್ ನಾಗನ ಮೊಬೈಲ್ ಸೇರಿದಂತೆ ಸಹಚರರ ಸುಮಾರು 18 ಮೊಬೈಲ್ ಸೀಜ್ ಮಾಡಿದ್ದಾರೆ. ಜೊತೆಗೆ ಮಾದಕ ವಸ್ತು ಹಾಗೂ ಹಣವನ್ನು ವಶಕ್ಕೆ ಪಡೆದಿದ್ದಾರೆ. ಇದನ್ನು ಕಂಡು ಖುದ್ದು ಪೊಲೀಸರೇ ಶಾಕ್ ಆಗಿದ್ದಾರೆ. ಇಷ್ಟೆಲ್ಲಾ ಇದ್ದರೂ ವಿಲ್ಸನ್‌ಗಾರ್ಡನ್ ನಾಗನನ್ನು ಬೇರೆ ಕಡೆ ಏಕೆ ವರ್ಗಾವಣೆ ಮಾಡಲಿಲ್ಲ. ಅವನ ಹಿಂದೆ ಯಾರಿದ್ದಾರೆ? ಅವನಿಗೆ ಇಲಾಖೆಯಲ್ಲಿ ಇಷ್ಟೊಂದು ಪ್ರಭಾವವಿದೇಯಾ? ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.ಇದನ್ನೂ ಓದಿ: ಶಾಸಕ ಮುನಿರತ್ನ ಬಂಧನ ಪ್ರಕರಣ – ತಪ್ಪು ಮಾಡಿರೋದು ಸಾಮಾನ್ಯ ವ್ಯಕ್ತಿಯಲ್ಲ ಒಬ್ಬ ಮಾಜಿ ಮಂತ್ರಿ: ಡಿಕೆ ಸುರೇಶ್
ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ನಟನೆಯ ದೇವರ ಸಿನಿಮಾದ ಶೂಟಿಂಗ್ ವೈಜಾಗ್ ನ ಕಾಡೊಂದರಲ್ಲಿ ನಡೆಯುತ್ತಿತ್ತು. ಈ ಸಮಯದಲ್ಲಿ ಹೆಜ್ಜೇನು ದಾಳಿ ನಡೆದಿದ್ದು, 20ಕ್ಕೂ ಹೆಚ್ಚು ಚಿತ್ರತಂಡದ ಸದಸ್ಯರು ಹೆಜ್ಜೇನು ದಾಳಿಗೆ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಅಕ್ಟೋಬರ್ 10 ರಂದು ದೇವರ ಸಿನಿಮಾ ವಿಶ್ವದಾದ್ಯಂತ ರಿಲೀಸ್ ಆಗುವ ಕಾರಣದಿಂದಾಗಿ ಬಿಡುವಿಲ್ಲದೇ ಚಿತ್ರತಂಡ ಶೂಟಿಂಗ್ ನಲ್ಲಿ ತೊಡಗಿದೆ. ಈ ಸಮಯದಲ್ಲಿ ಹೆಜ್ಜೇನು ದಾಳಿ ನಡೆದಿದೆ. ಈ ನಡುವೆ ದೇವರ (Devara) ಸಿನಿಮಾ ಟೀಮ್ ನಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದ್ದು, ಈ ಸಿನಿಮಾವನ್ನು ಕನ್ನಡಕ್ಕೂ ಡಬ್ ಮಾಡಿ ರಿಲೀಸ್ ಮಾಡಲಾಗುತ್ತಿದೆ. ತಮ್ಮ ಪಾತ್ರಕ್ಕೆ ಕನ್ನಡದಲ್ಲಿ ಜ್ಯೂನಿಯರ್ ಅವರೇ ಡಬ್ ಮಾಡುವ ಸಾಧ್ಯತೆ ಇದೆ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ.
ಆರ್ ಆರ್ ಆರ್ ಚಿತ್ರದ ನಂತರ ಎನ್ಟಿಆರ್ (Jr NTR) ಅವರು ಕೊರಟಾಲ ಶಿವ (Koratala Shiva) ನಿರ್ದೇಶನದ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಜ್ಯೂನಿಯರ್ ಹುಟ್ಟುಹಬ್ಬಕ್ಕೆ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ಆ ಪೋಸ್ಟರ್ನಲ್ಲಿ ಜ್ಯೂನಿಯರ್ ಎನ್.ಟಿ.ಆರ್ ಕಪ್ಪು ಬಣ್ಣದ ಲುಂಗಿ ಮತ್ತು ಶರ್ಟ್ ತೊಟ್ಟು, ಸಮುದ್ರದ ಬಂಡೆಗಳ ಮೇಲೆ ಕೊಡಲಿ ಹಿಡಿದು ನಿಂತು ತೀಕ್ಷ್ಣವಾಗಿ ನೋಡುತ್ತಿದ್ದಾರೆ. ಕಳೆಗೆ ಹೆಣಗಳ ರಾಶಿ ಇದೆ. ಪಕ್ಕದಲ್ಲಿ ಮುರಿದು ಬಿದ್ದ ದೋಣಿಯೊಂದನ್ನೂ ಕಾಣಬಹುದು. ಈ ಪೋಸ್ಟರ್ ಈಗಾಗಲೇ ಜ್ಯೂನಿಯರ್ ಎನ್.ಟಿ.ಆರ್ ಅವರ ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ತೀವ್ರ ಕುತೂಹಲ ಮೂಡಿಸಿದ್ದು, ಅವರ ಮಾಸ್ ಲುಕ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು.
‘ದೇವರ ಚಿತ್ರದ ಮೂಲಕ ಶ್ರೀದೇವಿ ಮಗಳು ಜಾಹ್ನವಿ ಕಪೂರ್ (Jahnavi Kapoor) ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಜೊತೆಗೆ ಬಾಲಿವುಡ್‌ನ ಖ್ಯಾತ ನಟ ಸೈಫ್ ಅಲಿ ಖಾನ್ ಸಹ ಖಳನಟನಾಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಪ್ರಕಾಶ್ ರೈ, ಶ್ರೀಕಾಂತ್ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಯುವಸುಧಾ ಆರ್ಟ್ಸ್ ಮತ್ತು ಎನ್ಟಿಆರ್ ಆರ್ಟ್ಸ್ನಡಿ ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ನಿರ್ಮಿಸುತ್ತಿರುವ ಈ ಚಿತ್ರವನ್ನು ಖ್ಯಾತ ನಟ ನಂದಮೂರಿ ಕಲ್ಯಾಣರಾಮ್ ನಿರ್ಮಿಸುತ್ತಿದ್ದಾರೆ.
ಹೈದರಾಬಾದ್: ತಂದೆ ಜೊತೆ ಗುಡಿಸಲಿನಲ್ಲಿ (Hut) ಮಲಗಿದ್ದ ಒಂದು ವರ್ಷ ಮಗು ಮೇಲೆ ಬೀದಿ ನಾಯಿಗಳು (Street Dogs) ದಾಳಿ ಮಾಡಿ ತಿಂದಿರುವ ಘಟನೆ ತೆಲಂಗಾಣದ (Telangana) ಶಂಶಾಬಾದ್‌ನಲ್ಲಿ ನಡೆದಿದೆ.
ಕೆ. ನಾಗರಾಜು (1) ಮೃತಪಟ್ಟ ಮಗು. ಮಗುವಿನ ತಂದೆ ಸೂರ್ಯಕುಮಾರ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ. ಶಂಶಾಬಾದ್‌ನ ರಾಜೀವ್ ಗೃಹಕಲ್ಪ ಸಂಕೀರ್ಣದ ಬಳಿ ಗುಡಿಸಲಿನಲ್ಲಿ ಹಿರಿಯ ಮಗನಾದ ನಾಗರಾಜು ಮತ್ತು 20 ದಿನದ ಮಗುವಿನ ಜೊತೆ ಮಲಗಿದ್ದ. ಈ ವೇಳೆ ಬೀದಿ ನಾಯಿಗಳ ಗುಂಪು ಗುಡಿಸಲಿಗೆ ನುಗ್ಗಿ ಮಕ್ಕಳ ಮೇಲೆ ದಾಳಿ ನಡೆಸಿವೆ. ಇದನ್ನೂ ಓದಿ: ಮೋದಿ ಜೊತೆ ಹೋದರೂ ನಾನು ಕೇಸರಿ ಶಾಲು ಹಾಕಲ್ಲ, ಕುಮಾರಸ್ವಾಮಿಯೂ ಹಾಕಬಾರದಿತ್ತು – ಹೆಚ್‌ಡಿಡಿ
ತಡರಾತ್ರಿ 1:30 ರ ಹೊತ್ತಿಗೆ ಸೂರ್ಯಕುಮಾರ್‌ನನ್ನು ಸ್ಥಳೀಯರು ಎಬ್ಬಿಸಿ ಬೀದಿ ನಾಯಿಗಳ ಗುಂಪು ಮಗುವಿನ ಮೇಲೆ ದಾಳಿ ನಡೆಸಿ ತಿನ್ನುತ್ತಿದ್ದವು ಎಂದು ತಿಳಿಸಿದ್ದಾರೆ. ವಿಷಯ ತಿಳಿದ ಸೂರ್ಯ ಹೋಗಿ ನೋಡಿದಾಗ ಮಗು ನಾಯಿಗಳ ಪಾಲಾಗಿತ್ತು. ಇದನ್ನೂ ಓದಿ: ಎರಡನೇ ಐಫೋನ್ ಘಟಕ ತೆರೆಯಲು ಮಾತುಕತೆ ಆರಂಭಿಸಿದ ಟಾಟಾ
ಈವರೆಗೂ ಮಕ್ಕಳ ಮೇಲೆ ನಡೆದ ದಾಳಿಯಲ್ಲಿ ಇದು ಒಂಬತ್ತನೇ ಗಂಭೀರ ಪ್ರಕರಣವಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 5 ದಿನ ಇಡಿ ಕಸ್ಟಡಿಗೆ ಹೇಮಂತ್ ಸೋರೆನ್
ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ (Lokayukta Raid) ನಡೆಸಿದೆ. ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಲಾಗಿದೆ.
13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರಿನಲ್ಲಿ 3 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಇದನ್ನೂ ಓದಿ: Cyclone Michaung ರೌದ್ರಾವತಾರಕ್ಕೆ ಚೆನ್ನೈನಲ್ಲಿ ಐವರು ಬಲಿ; ಶಾಲಾ-ಕಾಲೇಜುಗಳಿಗೆ ರಜೆ
ಬೆಂಗಳೂರು: ತೆರಿಗೆ ವಂಚನೆ (Tax Evasion) ಹಿನ್ನೆಲೆ ಬೆಂಗಳೂರಿನ (Bengaluru) ಫುಡ್ ಇಂಡಸ್ಟ್ರಿ (Food Industry) ಮೇಲೆ ಆದಾಯ ತೆರಿಗೆ ಇಲಾಖೆ (IT) ದಾಳಿ (Raid) ನಡೆಸಿದೆ. ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಡ್ರೈ ಫ್ರೂಟ್ಸ್ ವ್ಯಾಪಾರಿಗಳ ಅಂಗಡಿ ಹಾಗೂ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ಇತ್ತೀಚಿಗೆ ಗುತ್ತಿಗೆದಾರರು, ಜ್ಯುವೆಲ್ಲರಿ ಮಾಲೀಕರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿತ್ತು. ಇದೀಗ ಫುಡ್ ಇಂಡಸ್ಟ್ರಿ ಮೇಲೆ ಐಟಿ ಕಣ್ಣಿಟ್ಟಿದೆ. ಡ್ರೈಫ್ರೂಟ್ಸ್ ಕಾರ್ಖಾನೆ ಹಾಗೂ ಸ್ಟೋರ್‌ಗಳ ಮೇಲೆ ಐಟಿ ದಾಳಿ ನಡೆಸಿದ್ದು, ಒಟ್ಟು ನಗರದ ಎರಡು ಕಡೆ ದಾಳಿ ಮಾಡಿದೆ. ಇದನ್ನೂ ಓದಿ: ಸಿಎಂ ಪುತ್ರನ ಎಡವಟ್ಟು – ಯತೀಂದ್ರ ಹೇಳಿದ ಮಹದೇವ್ ಯಾರು?
ಹತ್ತಕ್ಕೂ ಹೆಚ್ಚು ವಾಹನಗಳಲ್ಲಿ ಬಂದ ಐಟಿ ಅಧಿಕಾರಿಗಳು ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್ ಹಾಗೂ ಬಿವಿಕೆ ಅಯ್ಯಂಗಾರ್ ರಸ್ತೆ ಬಳಿ ದಾಳಿ ನಡೆಸಿದ್ದಾರೆ. ಪಿಎಸ್ ಆಗ್ರೋ ಫುಡ್ ಎಲ್‌ಎಲ್‌ಪಿ ಕಾರ್ಖಾನೆ ಹಾಗೂ ಮಾಣಕ್ ಮೇವಾ ಡ್ರೈಫ್ರೂಟ್ಸ್ ಸ್ಟೋರ್ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹಳಿಯಲ್ಲಿ ಕಬ್ಬಿಣದ ರಾಡ್, ದೊಡ್ಡ ಮರದ ದಿಮ್ಮಿ – ಮೈಸೂರಿನಲ್ಲಿ ತಪ್ಪಿತು ಭಾರೀ ರೈಲು ದುರಂತ
ಬೆಂಗಳೂರು: ಭ್ರಷ್ಟರನ್ನು ಬೇಟೆಯಾಡುವ ಸಲುವಾಗಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ (Lokayukta) ಅಧಿಕಾರಿಗಳು ರಾಜ್ಯದ 90 ಕಡೆ ದಾಳಿ ನಡೆಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿಗಳಿಂದ ಏಕಕಾಲದಲ್ಲಿ ದಾಳಿ ನಡೆದಿದೆ.
17 ಸರ್ಕಾರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ಒಟ್ಟು 17 ಅಧಿಕಾರಿಗಳಿಗೆ ಸಂಬಂಧಿಸಿದಂತೆ ಒಟ್ಟು 75 ಕಡೆ ದಾಳಿ ಮಾಡಲಾಗಿದೆ. ಒಟ್ಟು 250 ಅಧಿಕಾರಿಗಳು ತಂಡದಿಂದ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ನೆರೆಮನೆಯಾತ ಸೀರೆ ಎಳೆದಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ
ಬೆಂಗಳೂರಿನ ಕೆಆರ್‌ಪುರದಲ್ಲಿ ಆರ್‌ಟಿಓ ಅಧಿಕಾರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು (Officers) ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಯ ಮನೆ, ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಮೂರು ಕಡೆಗಳಲ್ಲೂ ಪರಿಶೀಲನೆ ಮುಂದುವರಿಯುತ್ತಿದೆ. ಇದನ್ನೂ ಓದಿ: ಆಂಧ್ರದಲ್ಲಿ ರೈಲು ದುರಂತ – 12 ರೈಲುಗಳ ಸಂಚಾರ ರದ್ದು
ಚಂದ್ರಪ್ಪ ಪಾಲಿಕೆ ಎಆರ್‌ಓ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಚಂದ್ರಪ್ಪಗೆ ಸೇರಿದ ಮೂರು ಸ್ಥಳಗಳ ದಾಳಿ ನಡೆಸಲಾಗಿದೆ. ಇಬ್ಬರು ಎಸ್‌ಪಿಗಳ ನೇತೃತ್ವದಲ್ಲಿ ದಾಳಿ ನಡೆಸಿದ್ದು, ವಂಶಿ ಕೃಷ್ಣ, ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಇದನ್ನೂ ಓದಿ: ನಾಗರ ಹಾವು ಓಡಿಸಲು ಹೊಗೆ ಹಾಕಿದ ಕುಟುಂಬ- ಇಡೀ ಮನೆ ಭಸ್ಮ
ಆರ್‌ಆರ್ ನಗರ ವಲಯ ಹೆಗ್ಗನಹಳ್ಳಿ ವಾರ್ಡ್ ಎಆರ್‌ಓ ಚಂದ್ರಪ್ಪ 30ನೇ ತಾರೀಕಿನಂದು ಲಂಚ (Bribe) ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು. ಈ ಹಿನ್ನೆಲೆ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ಕೇರಳದಲ್ಲಿ ಸ್ಫೋಟ ಪ್ರಕರಣ- ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ
ಇನ್ನು ಕಾರ್ಮಿಕ ಇಲಾಖೆ ಡೆಪ್ಯೂಟಿ ಡೈರೆಕ್ಟರ್ ಶ್ರೀನಿವಾಸ್ ಮನೆ ಮೇಲೆ ಲೋಕಾ ದಾಳಿ ನಡೆಸಿದೆ. ಬೆಂಗಳೂರು ಹಾಗೂ ಕೊಳ್ಳೆಗಾಲ ಮನೆ ಮೇಲೆ ದಾಳಿ ನಡೆಸಿದ್ದು,ಲೋಕಾಯುಕ್ತ ಅಧಿಕಾರಿಗಳಿಂದ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸಲಾಗಿದೆ. ಶ್ರೀನಿವಾಸ್‌ಗೆ ಸಂಬಂಧಿಸಿದ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಇದನ್ನೂ ಓದಿ: ಬದಲಾಗುತ್ತಾ ನಮ್ಮ ಮೆಟ್ರೋ ಹೆಸರು?
ದಾಳಿ ವೇಳೆ ಶ್ರೀನಿವಾಸ್ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನಾಭರಣ ಪತ್ತೆಯಾಗಿದೆ. ಶ್ರೀನಿವಾಸ್‌ಗೆ ಸೇರಿ ಉಪ್ಕಾರ್ ರೆಸಿಡೆನ್ಸಿ ಉಲ್ಲಾಳ್ ಮನೆಯಲ್ಲಿ ಹಣ ಹಾಗೂ ಚಿನ್ನಾಭರಣ ಪತ್ತೆಯಾಗಿದ್ದು, ಶ್ರಿನಿವಾಸ್ ಮನೆ ಸೇರಿದಂತೆ ನಗರದ 9 ಕಡೆ ದಾಳಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಅದೇ ರೀತಿ ರಾಜ್ಯದ ಅನೇಕ ಜಿಲ್ಲೆಗಳಲ್ಲೂ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಭೀಕರ ರೈಲು ದುರಂತ ಪ್ರಕರಣ- ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ
ಧಾರವಾಡ: ಐಟಿ, ಇಡಿ, ಸಿಬಿಐ ಎಲ್ಲಾ ಕೇಂದ್ರದ ವ್ಯಾಪ್ತಿಯಲ್ಲಿವೆ. ಅವರು ಆಡಿದ್ದೇ ಆಟ ಎಂದು ಧಾರವಾಡ (Dharwad) ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santosh Lad) ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ (IT Raid) ಸಿಕ್ಕ 40 ಕೋಟಿ ರೂ. ಹಣ ಕಾಂಗ್ರೆಸ್‌ಗೆ ಸೇರಿದ್ದು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದವರು ಸಾಮಾನ್ಯವಾಗಿ ಈ ರೀತಿಯ ಆರೋಪ ಮಾಡಿಯೇ ಮಾಡುತ್ತಾರೆ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ನಂಜುಂಡೇಶ್ವರನ ಸನ್ನಿಧಾನದಲ್ಲಿ ಹೆಚ್‍ಡಿಕೆ ಕುಟುಂಬದಿಂದ ಬೆಲ್ಲದ ತುಲಾಭಾರ
ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಐಟಿ, ಇಡಿ, ಸಿಬಿಐ ಎಲ್ಲವೂ ಅವರ ಕೈಯಲ್ಲಿದೆ. ಅವರು ಆಡಿದ್ದೇ ಆಟ. ಈಗ ಎಲ್ಲವೂ ತನಿಖೆ ನಡೆಯುತ್ತಿದೆ. ತನಿಖೆ ಮುಗಿಯವವರೆಗೂ ಕಾಯೋಣ ಎಂದರು.
ಅಬಕಾರಿ ಇಲಾಖೆ ಮದ್ಯ ವ್ಯಾಪಾರಿಗಳಿಂದ ಲಂಚ ಪಡೆಯುತ್ತಿದೆ ಎಂದು ಮದ್ಯ ವ್ಯಾಪಾರಿಗಳು ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಲಾಡ್, ಈ ವಿಚಾರ ಸಿಎಂ ಗಮನಕ್ಕೆ ಹೋಗಿದೆ. ಅವರು ಅದಕ್ಕೆ ಪರಿಹಾರ ಕಂಡು ಹಿಡಿಯುತ್ತಾರೆ ಎಂದರು. ಇದನ್ನೂ ಓದಿ: ಹೈಕಮಾಂಡ್ ನಯಾ ಪೈಸೆ ಕೇಳಿಲ್ಲ- ಬಿಜೆಪಿ ಆರೋಪಕ್ಕೆ ಸಿಎಂ ಕಿಡಿ
ಟೆಲ್ ಅವಿವ್: ಗಾಜಾದ (Gaza) ಮೇಲೆ ಸಂಪೂರ್ಣ ಮುತ್ತಿಗೆ ಹಾಕಿರುವ ಇಸ್ರೇಲ್ (Israel), ಪ್ರತೀಕಾರದ ಬಾಂಬ್ ದಾಳಿಯಾಗಿ ರಾತ್ರೋರಾತ್ರಿ ಗಾಜಾದಾದ್ಯಂತ ವೈಮಾನಿಕ ದಾಳಿ (Air Strike) ನಡೆಸಿತು. ಗಾಜಾದ ಆರೋಗ್ಯ ಸಚಿವಾಲಯದ ಪ್ರಕಾರ, ದಾಳಿಯಲ್ಲಿ ಕನಿಷ್ಠ 900 ಜನರು ಸಾವನ್ನಪ್ಪಿದ್ದಾರೆ ಮತ್ತು 4,600 ಜನರು ಗಾಯಗೊಂಡಿದ್ದಾರೆ. ವಾರಾಂತ್ಯದ ಹಮಾಸ್ ದಾಳಿಯಲ್ಲಿ (Hamas Attack) ಸಾವನ್ನಪ್ಪಿದವರ ಸಂಖ್ಯೆ 1,200 ಮೀರಿದೆ ಎಂದು ವಾಷಿಂಗ್ಟನ್‌ನಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ತಿಳಿಸಿದೆ.
ಗಾಜಾದಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 15 ಪ್ಯಾಲೇಸ್ತೀನಿಯರು ಸಾವನ್ನಪ್ಪಿದ್ದರೆ, ಇನ್ನೂ ಹಲವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿದೆ. ಬುಧವಾರ ರಾತ್ರಿ, ಇಸ್ರೇಲ್ ಗಾಜಾದಾದ್ಯಂತ ವೈಮಾನಿಕ ದಾಳಿ ನಡೆಸಿದ ಪರಿಣಾಮ 900ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಬಹುತೇಕ ಯುದ್ಧ ವಾಯು ಮಾರ್ಗದ ಮೂಲಕವೇ ನಡೆಯುತ್ತಿದೆ. ಒಂದು ಕಡೆ ಹಮಾಸ್ ನಿರಂತರ ರಾಕೆಟ್ ದಾಳಿ ನಡೆಸುತ್ತಿದ್ದರೆ ಮತ್ತೊಂದು ಕಡೆ ಇಸ್ರೇಲ್ ಯುದ್ಧ ವಿಮಾನಗಳ ಏರ್ ಸ್ಟ್ರೈಕ್ ಮಾಡುತ್ತಿದೆ. ಬುಧವಾರ ರಾಕೆಟ್ ದಾಳಿಗೆ ಪ್ರಯತ್ನಿಸಿ ಹಮಾಸ್ ಪ್ರಯತ್ನಗಳನ್ನು ಐರನ್ ಡೋಮ್ ರಕ್ಷಣಾ ಕ್ಷಿಪಣಿ ತಡೆದಿದೆ. ಇಸ್ರೇಲ್‌ನ ಅಶ್ಕೆಲೋನ್ ಮೇಲೆ ನಿನ್ನೆ ಹಮಾಸ್ ರಾಕೆಟ್ ದಾಳಿ ಮಾಡಿತ್ತು. ಆದರೆ ಇಸ್ರೇಲ್‌ನ ಐರನ್ ಡೋಮ್ ರಕ್ಷಣಾ ಕ್ಷಿಪಣಿ ವ್ಯವಸ್ಥೆಯಿಂದ ರಾಕೆಟ್‌ಗಳನ್ನು ತಡೆದು ಗಾಳಿಯಲ್ಲಿ ಅವುಗಳನ್ನು ನಾಶ ಮಾಡಿತು. ಇದನ್ನೂ ಓದಿ: ಮಕ್ಕಳನ್ನೂ ಬಿಡದೇ ಗಲ್ಲಿಗೇರಿಸುತ್ತಿದ್ದಾರೆ – ಝೊಂಬಿ ವೈರಸ್‌ನಂತೆ ನರಕಯಾತನೆ ಅನುಭವಿಸ್ತಿದ್ದಾರೆ; ಇಸ್ರೇಲ್ ರಕ್ಷಣಾ ಪಡೆ ವಿಷಾದ
ಗಾಜಾದಲ್ಲಿರುವ ಏಕೈಕ ವಿದ್ಯುತ್ ಕೇಂದ್ರವು ಕೆಲಸ ಮಾಡುವುದನ್ನು ನಿಲ್ಲಿಸಿದ ನಂತರ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಇಸ್ರೇಲ್ ಗಾಜಾದ ಮೇಲೆ ಸಂಪೂರ್ಣ ದಿಗ್ಬಂಧನ ವಿಧಿಸುವುದಾಗಿ ಹೇಳಿದ ಎರಡು ದಿನಗಳ ನಂತರ ವಿದ್ಯುತ್ ಪೂರೈಕೆ ನಿಂತಿದೆ. ಇದಲ್ಲದೇ ಈ ಪ್ರದೇಶಕ್ಕೆ ಆಹಾರ ಮತ್ತು ಇಂಧನವನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.
ಪ್ಯಾಲೇಸ್ತೀನಿಯನ್ ಇಸ್ಲಾಮಿಸ್ಟ್ ಗುಂಪು ಹಮಾಸ್ ಅನ್ನು ಕಿತ್ತುಹಾಕಲು ಇಸ್ರೇಲ್ ಈ ಯುದ್ಧ ಮಾಡುತ್ತಿದೆ. ನಮ್ಮ ಪ್ರತಿ ದಾಳಿಯಿಂದ ವಿಶ್ವದಾದ್ಯಂತ ದಾಳಿಗಳನ್ನು ಇಂತಹ ಸಂಘಟನೆಗಳು ದಾಳಿ ನಡೆಸುವುದನ್ನು ತಡೆಯಬಹುದು ಎಂದು ದೇಶದ ಗುಪ್ತಚರ ಸಚಿವ ಗಿಲಾ ಗ್ಯಾಮ್ಲಿಯೆಲ್ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ. ನಾವು ಅದನ್ನು ಬೇರು ಸಹಿತ ಕಿತ್ತುಹಾಕಬೇಕು ಇದರಂದ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಸಂಭವಿಸುವುದಿಲ್ಲ. ಭವಿಷ್ಯದ ದಾಳಿಗಳಿಗೆ ಇಸ್ರೇಲ್‌ನಲ್ಲಿ ಏನಾಯಿತು ಎಂಬುದನ್ನು ಉದಾಹರಣೆಯಾಗಿರಲಿದೆ ಎಂದು ಗ್ಯಾಮ್ಲಿಯೆಲ್ ಹೇಳಿದರು.
ಗಾಜಾದ ನಬ್ಲಸ್‌ನ ದಕ್ಷಿಣದಲ್ಲಿರುವ ಕುಸ್ರಾ ಗ್ರಾಮದಲ್ಲಿ ಇಸ್ರೇಲ್ ಸೈನಿಕರು ಪ್ಯಾಲೆಸ್ತೀನಿಯನ್ನರ ಮೇಲೆ ನೇರ ಗುಂಡು ಹಾರಿಸುತ್ತಿದ್ದಾರೆ. ಗಾಯಾಳುಗಳನ್ನು ತಲುಪಲು ಸೇನೆಯು ಅಂಬುಲೆನ್ಸ್ಗಳನ್ನು ಅನುಮತಿಸುತ್ತಿಲ್ಲ ಎಂದು ಗ್ರಾಮದ ಕಾರ್ಯಕರ್ತ ಫುವಾದ್ ಹಸನ್ ಹೇಳಿದ್ದಾರೆ. ಇಲ್ಲಿಯವರೆಗೆ ಗ್ರಾಮದಲ್ಲಿ ಮೂರು ಪ್ಯಾಲೆಸ್ತೀನಿಯರನ್ನು ಕೊಲ್ಲಲಾಗಿದೆ ಮತ್ತು ಆರು ಜನರು ಗಾಯಗೊಂಡಿದ್ದಾರೆ. 24 ವರ್ಷದ ಯುವಕನ ಹೊಟ್ಟೆಗೆ ಜೀವಂತ ಗುಂಡುಗಳಿಂದ ಹೊಡೆದಿದ್ದಾರೆ. ಆರು ವರ್ಷದ ಬಾಲಕಿಯ ಭುಜಕ್ಕೆ ಜೀವಂತ ಗುಂಡುಗಳು ತಾಗಿದೆ. ಎಲ್ಲರನ್ನು ಸಾಲ್ಫಿಟ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಇಸ್ರೇಲ್‍ನಲ್ಲಿ ಕಿರುತೆರೆ ನಟಿ ಮಧುರಾ ನಾಯ್ಕ್ ಕುಟುಂಬಸ್ಥರ ಹತ್ಯೆ
ಇಸ್ರೇಲ್‌ನಲ್ಲಿ ಮೂವರು ಕೆನಡಿಯನ್ನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ ಮೂವರು ನಾಪತ್ತೆಯಾಗಿದ್ದಾರೆ ಎಂದು ಕೆನಡಾದ ವಿದೇಶಾಂಗ ಸಚಿವ ಮೆಲಾನಿ ಜೋಲಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೋಲಿ, ಇಸ್ರೇಲ್, ಗಾಜಾ ಮತ್ತು ವೆಸ್ಟ್ ಬ್ಯಾಂಕ್‌ನಲ್ಲಿ 4,700 ಕ್ಕೂ ಹೆಚ್ಚು ಕೆನಡಾದ ನಾಗರಿಕರು ಮತ್ತು ಖಾಯಂ ನಿವಾಸಿಗಳು ಸರ್ಕಾರದಲ್ಲಿ ನೋಂದಾಯಿಸಿಕೊಂಡಿದ್ದಾರೆ. ಅದರಲ್ಲಿ ಆರು ಜನರ ಸಂಪರ್ಕ ಇಲ್ಲ ಎಂದಿದ್ದಾರೆ.
ಹಮಾಸ್ ರಾಕೆಟ್ ದಾಳಿಯಲ್ಲಿ ಇಸ್ರೇಲ್‌ನ ಅಶ್ಕೆಲಾನ್ ಆಸ್ಪತ್ರೆಗೆ ಹಾನಿಯಾಗಿದ್ದು, ಯಾವುದೇ ಸಾವು-ನೋವುಗಳು ವರದಿಯಾಗಿಲ್ಲ. ಗಾಜಾದಿಂದ ದಕ್ಷಿಣ ಇಸ್ರೇಲ್ ಕಡೆಗೆ ರಾಕೆಟ್ ದಾಳಿಯಾಗಿದೆ. ಆಸ್ಪತ್ರೆಯೊಂದಕ್ಕೆ ಹಾನಿಯಾಗಿದೆ ಆದರೆ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಅಶ್ಕೆಲೋನ್ ನಗರದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಅಶ್ಕೆಲೋನ್‌ನ ಬಾರ್ಜಿಲೈ ಆಸ್ಪತ್ರೆಯಲ್ಲಿರುವ ಮಕ್ಕಳ ಅಭಿವೃದ್ಧಿ ಕೇಂದ್ರವು ಗಾಜಾದಿಂದ ಬಂದ ಉತ್ಕ್ಷೇಪಕದಿಂದ ನೇರ ಹೊಡೆತವನ್ನು ಅನುಭವಿಸಿದೆ ಎಂದು ಆರೋಗ್ಯ ಸೌಲಭ್ಯದ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬೆನ್ ಗುರಿಯನ್ ವಿಮಾನ ನಿಲ್ದಾಣದಲ್ಲಿ ರಾಕೆಟ್ ಹಾರಿಸಿರುವುದಾಗಿ ಹಮಾಸ್ ಹೇಳಿದೆ. ಆದರೆ ಈವರೆಗೂ ಯಾವುದೇ ದಾಳಿಯಾಗಿಲ್ಲ. ಇದನ್ನೂ ಓದಿ: ನನ್ನ ಮಗಳು ಬದುಕಿದ್ದಾಳೆ, ಆಕೆಯನ್ನು ರಕ್ಷಿಸಿ – ಅರೆಬೆತ್ತಲೆ ಮೆರವಣಿಗೆಯಾಗಿದ್ದ ಶಾನಿ ಲೌಕ್ ತಾಯಿ ಮನವಿ
ಪ್ಯಾಲೇಸ್ತೀನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧ ಇತರೆ ದೇಶಗಳಿಗೆ ವ್ಯಾಪಿಸುತ್ತಿದೆ. ಹಮಾಸ್‌ಗೆ ಇರಾನ್, ಲೆಬನಾನ್‌ಗೆ ಬೆಂಬಲ ನೀಡಿದ್ದು ಇಸ್ರೇಲ್ ಗಡಿಯಲ್ಲಿ ದಾಳಿ ಮಾಡುತ್ತಿವೆ. ಇದಕ್ಕೆ ತಿರುಗೇಟು ನೀಡುತ್ತಿರುವ ಇಸ್ರೇಲ್ ದಕ್ಷಿಣ ಲೆಬನಾನ್‌ನಲ್ಲಿರುವ ಧೈರಾ ಗ್ರಾಮದಲ್ಲಿ ಶೆಲ್ ದಾಳಿ ನಡೆಸಿತು. ಬಳಿಕ ಲೆಬನಾನಿನ ಸೇನೆಯ ಸದಸ್ಯರು ಹಾನಿಗೊಳಗಾದ ಕಟ್ಟಡದ ಬಳಿ ಪರಿಶೀಲನೆ ನಡೆಸಿದ್ದಾರೆ. ಉಗ್ರಗಾಮಿ ಗುಂಪು ಹೆಜ್ಬೊಲ್ಲಾ ಇಸ್ರೇಲ್ ಮೇಲಿನ ದಾಳಿಯ ಜವಬ್ದಾರಿ ವಹಿಸಿಕೊಂಡಿದೆ.
ಪ್ಯಾಲೇಸ್ತೀನ್ ಉಗ್ರಗಾಮಿ ಗುಂಪು ಹಮಾಸ್‌ನ ದಾಳಿಯ ನಂತರ ಇಸ್ರೇಲಿ ಜನರೊಂದಿಗೆ ಒಗ್ಗಟ್ಟು ಪ್ರದರ್ಶಿಸಲು ಬ್ರಿಟಿಷ್ ವಿದೇಶಾಂಗ ಸಚಿವ ಜೇಮ್ಸ್ ಇಸ್ರೇಲ್‌ಗೆ ತಲುಪಿದ್ದಾರೆ. ಹಮಾಸ್‌ನ ಭಯೋತ್ಪಾದಕ ದಾಳಿಯ ನಂತರ ಇಸ್ರೇಲಿ ಜನರೊಂದಿಗೆ ಬ್ರಿಟನ್ ಅಚಲವಾದ ಒಗ್ಗಟ್ಟನ್ನು ಪ್ರದರ್ಶಿಸಲು ಈ ಭೇಟಿ ನೀಡಲಾಗುತ್ತಿದೆ ಎಂದು ಎಂದು ವಿದೇಶಾಂಗ ಕಚೇರಿಯ ವಕ್ತಾರರು ತಿಳಿಸಿದ್ದಾರೆ. ಭೇಟಿ ವೇಳೆ ಅವರು ದಾಳಿಯಿಂದ ಬದುಕುಳಿದವರನ್ನು ಮತ್ತು ಹಿರಿಯ ಇಸ್ರೇಲಿ ನಾಯಕರನ್ನು ಭೇಟಿ ಮಾಡಿದ್ದಾರೆ. ಇದನ್ನೂ ಓದಿ: ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್ ಪಾಕಿಸ್ತಾನದಲ್ಲಿ ಹತ್ಯೆ