Tag: ದಾಳಿ

  • ಹಾಸನದ ಮಲೆನಾಡು ಭಾಗದಲ್ಲಿ ನಿಲ್ಲದ ಕಾಡಾನೆಗಳ ಉಪಟಳ – ಇಬ್ಬರಿಗೆ ತೀವ್ರ ಗಾಯ

    ಹಾಸನದ ಮಲೆನಾಡು ಭಾಗದಲ್ಲಿ ನಿಲ್ಲದ ಕಾಡಾನೆಗಳ ಉಪಟಳ – ಇಬ್ಬರಿಗೆ ತೀವ್ರ ಗಾಯ

    ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ (Elephant) ಉಪಟಳ ಮುಂದುವರಿದಿದೆ. ಕಾಡಾನೆ ದಾಳಿಯಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ಗುಳಗಳಲೆ ಹಾಗೂ ಹೆಬ್ಬನಹಳ್ಳಿ ಗ್ರಾಮಗಳಲ್ಲಿ ನಡೆದಿದೆ.

    ಗುಳಗಳಲೆ ಗ್ರಾಮದ ಕುರ್ಚಿ ಕಾಫಿ ಎಸ್ಟೇಟ್ ರೈಟರ್ ಇನಾಯತ್ (45) ಕಾಫಿ ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ. ಸದ್ಯ ಕೂದಲೆಳೆ ಅಂತರದಲ್ಲಿ ಇನಾಯತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳು ಇನಾಯತ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಹೆಬ್ಬನಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಕಾರ್ಮಿಕ ಹಬೀದ್ (26) ಮೇಲೆ ಒಂಟಿಸಲಗ ಏಕಾಏಕಿ ದಾಳಿ ನಡೆಸಿದೆ. ಸಲಗದಿಂದ ತಪ್ಪಿಸಿಕೊಂಡಿರುವ ಹಬೀದ್‌ಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: 42 ಕಡೆ 5 ಸಾವಿರಕ್ಕೂ ಕಡಿಮೆ ಅಂತರದ ಗೆಲುವು – 2023, 2018ರಲ್ಲಿ ಯಾರಿಗೆ ಎಷ್ಟು ಮತ?

    ಬೀಟಮ್ಮ ಹೆಸರಿನ ಗುಂಪಿನಲ್ಲಿದ್ದ ಒಂಟಿಸಲಗ ಬೇರ್ಪಟ್ಟು ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಜನರು ಎಚ್ಚರಿಕೆಯಿಂದ ಓಡಾಡುವಂತೆ ಅರಣ್ಯ ಇಲಾಖೆ ಸಿಬ್ಬಂದಿ ಮನವಿ ಮಾಡಿದ್ದು, ಕಾಡಾನೆ ಹಾವಳಿಗೆ ಪರಿಹಾರ ಕಂಡುಹಿಡಿಯುವಂತೆ ಮಲೆನಾಡು ಭಾಗದ ಜನರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಿ.ಟಿ.ರವಿ ಸೋಲಿಗೆ ನಾಲಿಗೆ ಕಾರಣ: ಭೋಜೇಗೌಡ

  • ಕಲಬೆರಕೆ ಹಾಲು ಸರಬರಾಜು ಶಂಕೆ – ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳಿಂದ ದಾಳಿ

    ಕಲಬೆರಕೆ ಹಾಲು ಸರಬರಾಜು ಶಂಕೆ – ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳಿಂದ ದಾಳಿ

    ಯಾದಗಿರಿ: ಕಲಬೆರಕೆ (Adulteration) ಹಾಲು ಸರಬರಾಜು ಶಂಕೆ ವ್ಯಕ್ತಪಡಿಸಿ ಹಾಲು ಮಾರಾಟ ಮಳಿಗೆ ಹಾಗೂ ಹಾಲು ಸರಬರಾಜು ವಾಹನಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ (Department of Food Safety) ಅಧಿಕಾರಿಗಳು ದಾಳಿ (Ride) ನಡೆಸಿರುವ ಘಟನೆ ಯಾದಗಿರಿಯಲ್ಲಿ (Yadgiri) ನಡೆದಿದೆ.

    ರಂಜಾನ್ (Ramzan) ಹಬ್ಬ ಹಿನ್ನೆಲೆ ಕಲಬೆರಕೆ ಹಾಲು (Milk) ಸರಬರಾಜು ಮಾಡುತ್ತಿದ್ದಾರೆ ಎಂಬ ಶಂಕೆಯಿಂದ ಶನಿವಾರ ಬೆಳ್ಳಂಬೆಳಗ್ಗೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ನಗರದ ವಿವಿಧೆಡೆ ದಾಳಿ ಮಾಡಿದ್ದಾರೆ. ಯಾದಗಿರಿ ನಗರದ ರೈಲ್ವೆ ನಿಲ್ದಾಣದ ರಸ್ತೆ, ಚಿತ್ತಾಪುರ ರಸ್ತೆ ಸೇರಿದಂತೆ ಅನೇಕ ಕಡೆ ದಾಳಿ ನಡೆಸಿದ್ದಾರೆ. ಆಹಾರ ಸುರಕ್ಷತಾ ಅಧಿಕಾರಿ ಆಂಜನೇಯ ಎಂಬವರ ನೇತೃತ್ವದಲ್ಲಿ ದಾಳಿ ನಡೆಸಿದ್ದು, ವಿವಿಧ ಬ್ರ್ಯಾಂಡ್‌ನ ಹಾಲಿನ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಇದನ್ನೂ ಓದಿ: ಚುನಾವಣೆ ಮುಗಿಯುವವರೆಗೂ ಲಿಂಗಾಯತ ದಾಳ ಬಳಸಿ: ಶಾ ತಾಕೀತು 

    ಸಂಗ್ರಹಿಸಿದ ಹಾಲನ್ನು ಪರಿಶೀಲನೆಗಾಗಿ ಪ್ರಯೋಗಾಲಯಕ್ಕೆ (Laboratory) ಕಳುಹಿಸಲಿದ್ದು, ಕಲಬೆರಕೆ ಎಂದು ವರದಿ ಬಂದ ಬಳಿಕ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯ ನಾಯಕರಿಗೆ ಕ್ಲಾಸ್‌ – ಬಂಡಾಯ ಶಮನಕ್ಕೆ ಶಾ ಮದ್ದು

  • ಉಕ್ರೇನ್ ವಸತಿ ಕಟ್ಟಡದ ಮೇಲೆ ರಷ್ಯಾ ಕ್ಷಿಪಣಿ ದಾಳಿ – 8 ಸಾವು, 21 ಮಂದಿಗೆ ಗಾಯ

    ಉಕ್ರೇನ್ ವಸತಿ ಕಟ್ಟಡದ ಮೇಲೆ ರಷ್ಯಾ ಕ್ಷಿಪಣಿ ದಾಳಿ – 8 ಸಾವು, 21 ಮಂದಿಗೆ ಗಾಯ

    ಕೈವ್: ಪೂರ್ವ ಉಕ್ರೇನ್ (East Ukrain) ನಗರದ ಸ್ಲೋವಿಯನ್ಸ್ಕ್‌ನಲ್ಲಿರುವ ವಸತಿ ಕಟ್ಟಡದ ಮೇಲೆ ರಷ್ಯಾದ ಕ್ಷಿಪಣಿ ದಾಳಿ (Attack) ನಡೆಸಿದ ಹಿನ್ನೆಲೆ 8 ಜನರು ಸಾವನ್ನಪ್ಪಿದ್ದು, 21 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

    ನಗರದ ಮೇಲೆ ಏಳು ಕ್ಷಿಪಣಿಗಳನ್ನು ಹಾರಿಸಲಾಗಿದ್ದು, S-300 ಕ್ಷಿಪಣಿಗಳು, 10 ಅಪಾರ್ಟ್ಮೆಂಟ್ ಕಟ್ಟಡಗಳು ಹಾಗೂ ಇತರೆ ಸೈಟ್‌ಗಳನ್ನು ಧ್ವಂಸ ಮಾಡಿವೆ. ಇದರಿಂದಾಗಿ ಕಟ್ಟಡಗಳ ಮಹಡಿಗಳು ಕುಸಿದಿದ್ದು, 8 ಮಂದಿ ಮೃತಪಟ್ಟಿದ್ದಾರೆ. ಬದುಕುಳಿದವರಿಗಾಗಿ ರಕ್ಷಣಾ ತಂಡವು ಶೋಧ ನಡೆಸುತ್ತಿದೆ. ಇದನ್ನೂ ಓದಿ: ಜಪಾನ್ ಪ್ರಧಾನಿ ಭಾಷಣದ ವೇಳೆ ಸ್ಫೋಟ 

    ಶುಕ್ರವಾರ ಸಂಜೆ ತುರ್ತು ಕಾರ್ಯಾಚರಣೆಗಳು ಆರಂಭಗೊಂಡಿದ್ದು, ಅವಶೇಷಗಳನ್ನು ಹೊರತೆಗೆಯುವ ವೇಳೆ 2 ವರ್ಷದ ಮಗುವೊಂದು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವುದು ಕಂಡುಬಂದಿದೆ. ತಕ್ಷಣವೇ ಮಗುವನ್ನು ಅವಶೇಷಗಳ ಮಧ್ಯದಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆ ಮಗು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: BBC Documentary Controversy: ಗುಜರಾತ್‌ ಗಲಭೆಯ ಬಗ್ಗೆ ಎಲೋನ್‌ ಮಸ್ಕ್‌ ಹೇಳಿದ್ದೇನು? 

    ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ನಾಗರಿಕರನ್ನು ಸೈನ್ಯಕ್ಕೆ ಸಜ್ಜುಗೊಳಿಸುವ ಸಲುವಾಗಿ ಮಸೂದೆಯೊಂದಕ್ಕೆ ಸಹಿ ಹಾಕಿದ್ದಾರೆ. ದೇಶದಿಂದ ಪಲಾಯನ ಮಾಡುವುದನ್ನು ನಿರ್ಬಂಧಿಸಿದ ನಂತರ ಈ ದಾಳಿ ನಡೆದಿದೆ ಎನ್ನಲಾಗಿದೆ. ಇದನ್ನೂ ಓದಿ: ಮ್ಯಾನ್ಮಾರ್: ಪ್ರತಿಭಟನಾಕಾರರ ಮೇಲೆ ವೈಮಾನಿಕ ದಾಳಿ – 100ಕ್ಕೂ ಅಧಿಕ ಜನ ಬಲಿ

  • ಬೀದಿ ನಾಯಿಗಳ ದಾಳಿ – ಅಪ್ರಾಪ್ತ ಬಾಲಕ ಮೃತ್ಯು

    ಬೀದಿ ನಾಯಿಗಳ ದಾಳಿ – ಅಪ್ರಾಪ್ತ ಬಾಲಕ ಮೃತ್ಯು

    ಲಕ್ನೋ: ಬೀದಿ ನಾಯಿಗಳು (Stary Dogs) ಹಿಂಡು ಹಿಂಡಾಗಿ 11 ವರ್ಷದ ಬಾಲಕನ ಮೇಲೆ ದಾಳಿ (Attack) ನಡೆಸಿ ಕೊಂದು ಹಾಕಿರುವ ಘಟನೆ ಉತ್ತರಪ್ರದೇಶದ (Uttar Pradesh) ಮಹಾರಾಜ್‌ಗಂಜ್‌ನ (Maharajganj) ಶಾಸ್ತ್ರಿನಗರದ ಇಂಟರ್‌ಮೀಡಿಯೇಟ್ ಕಾಲೇಜು ಮೈದಾನದಲ್ಲಿ ನಡೆದಿದೆ.

    ಆದರ್ಶ್ (11) ಮೃತ ಬಾಲಕ. ಈತ ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಮನೆಯಿಂದ ಮಾರುಕಟ್ಟೆಗೆ ತೆರಳಿದ್ದ. ಎಷ್ಟು ಹೊತ್ತಾದರೂ ಮನೆಗೆ ಹಿಂತಿರುಗದ ವೇಳೆ ಕುಟುಂಬಸ್ಥರು ಹುಡುಕಲು ಪ್ರಾರಂಭಿಸಿದ್ದಾರೆ. ಈ ವೇಳೆ ತಡರಾತ್ರಿಯಲ್ಲಿ ಕಚ್ಚಿದ ಗುರುತುಗಳೊಂದಿಗೆ ಆತನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮನೆ ಮುಂದೆ ನಾಯಿ ಕರೆದುಕೊಂಡು ಬಂದು ಗಲೀಜು ಮಾಡಿಸ್ತೀಯಾ ಎಂದಿದ್ದಕ್ಕೆ ವ್ಯಕ್ತಿಯ ಕೊಲೆ 

    ಆತನ ಮುಖ ಮತ್ತು ಬಲಗೈ ಕಚ್ಚಿದ ಗುರುತುಗಳನ್ನು ಹೊಂದಿದ್ದು, ಬಾಲಕ ನಾಯಿಗಳ ವಿರುದ್ಧ ಸೆಣಸಾಡಿರುವಂತೆ ಕಂಡುಬಂದಿದೆ. ನಾಯಿಗಳ ಹಿಂಡು ದಾಳಿ ಮಾಡಿ ಬಾಲಕನನ್ನು ಕೊಂದು ಹಾಕಿದೆ. ಮೃತದೇಹವನ್ನು ಸ್ವಾಧೀನಪಡಿಸಿಕೊಂಡ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇನ್ಸ್ಪೆಕ್ಟರ್ ಕೊತ್ವಾಲಿ ರವಿ ರೈ ತಿಳಿಸಿದರು. ಇದನ್ನೂ ಓದಿ: ಮೊಬೈಲ್ ನೋಡಿದ್ದು ಸಾಕು ಎಂದಿದ್ದಕ್ಕೆ 7 ನೇ ಅಂತಸ್ತಿನಿಂದ ಜಿಗಿದು 15ರ ಬಾಲಕಿ ಆತ್ಮಹತ್ಯೆ

  • ಠಾಣೆಗೆ ನುಗ್ಗಿದ 60 ಮಂದಿ ಗುಂಪು – ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಡಕಾಯಿತನ ರಿಲೀಸ್

    ಠಾಣೆಗೆ ನುಗ್ಗಿದ 60 ಮಂದಿ ಗುಂಪು – ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಡಕಾಯಿತನ ರಿಲೀಸ್

    ಭೋಪಾಲ್: 60ಕ್ಕೂ ಹೆಚ್ಚು ಜನರನ್ನೊಳಗೊಂಡ ಗುಂಪೊಂದು ಪೊಲೀಸ್ ಠಾಣೆಗೆ (Police Station) ನುಗ್ಗಿ ಡಕಾಯಿತ (Dacoit) ಸೇರಿದಂತೆ ಮೂವರು ಬಂಧಿತರನ್ನು ಬಿಡುಗಡೆ (Release) ಮಾಡಿದ್ದಲ್ಲದೇ ಪೊಲೀಸ್ ಅಧಿಕಾರಿಗಳ ಮೇಲೂ ಹಲ್ಲೆ (Attack) ನಡೆಸಿದ ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ.

    ಶುಕ್ರವಾರ ಮುಂಜಾನೆ 3 ಗಂಟೆಯ ಸುಮಾರಿಗೆ ನೇಪಾನಗರದ (Nepanagar) ಪೊಲೀಸ್ ಠಾಣೆಗೆ ನುಗ್ಗಿದ ಗುಂಪು, ಕರ್ತವ್ಯ ನಿರತ ಪೊಲೀಸರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದಲ್ಲದೇ ಹಲವಾರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ನಿಷೇಧಿತ ಪಿಎಫ್‍ಐನ ಇಬ್ಬರು ಮುಖಂಡರ ಬಂಧನ 

    ಹೇಮಾ ಮೇಘವಾಲ್ ಎಂಬ ಡಕಾಯಿತ ಮತ್ತು ಅವನ ಸಹಚರರಾದ ಮಗನ್ ಪಟೇಲ್ ಮತ್ತು ಇನ್ನೋರ್ವ ಯುವಕನನ್ನು ಈ ತಂಡವು ಲಾಕಪ್‌ನಿಂದ (Lock Up) ಬಿಡುಗಡೆಗೊಳಿಸಿದೆ. ಮೇಘವಾಲ್ ಅವರನ್ನು ಕೆಲವು ದಿನಗಳ ಹಿಂದಷ್ಟೇ ಬಂಧಿಸಲಾಗಿತ್ತು ಎಂದು ಬುರ್ಹಾನ್‌ಪುರ (Burhanpur) ಪೊಲೀಸ್ ವರಿಷ್ಠಾಧಿಕಾರಿ (SP) ರಾಹುಲ್ ಕುಮಾರ್ ಲೋಧಾ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಹುಚ್ಚಾಟ – ತುರ್ತು ನಿರ್ಗಮನ ದ್ವಾರ ತೆಗೆಯಲು ವ್ಯಕ್ತಿ ಪ್ರಯತ್ನ

    ದಾಳಿಯ ಮಾಹಿತಿ ಪಡೆದ ಜಿಲ್ಲಾಧಿಕಾರಿ ಭವ್ಯಾ ಮಿತ್ತಲ್ ಹಾಗೂ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ದಾಳಿಕೋರರನ್ನು ಗುರುತಿಸಲು ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರೀಕ್ಷಿಸುವಂತೆ ಪೊಲೀಸರಿಗೆ ತಿಳಿಸಿದರು. ಇದನ್ನೂ ಓದಿ: ಅಪ್ರಾಪ್ತೆಯ ಅತ್ಯಾಚಾರ- ಕೃತ್ಯದ ವೇಳೆ ಬಳಸಿದ್ದ ಶರ್ಟ್ ಬಣ್ಣದಿಂದ ಆರೋಪಿ ಅರೆಸ್ಟ್ 

    CRIME 2

    ಘಟನೆಯಲ್ಲಿ ಗಾಯಗೊಂಡ ನಾಲ್ವರು ಪೊಲೀಸರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 307, 353 ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: 2 ತಿಂಗಳಿಂದ ನನ್ನ ಮಕ್ಕಳು ಕಾಣ್ತಿಲ್ಲ: ಸಿಎಂ, ಗೃಹ ಸಚಿವರಿಗೆ ಪತ್ರ ಬರೆದ ಅವಳಿ ಸಹೋದರಿಯರ ತಂದೆ

  • ಮನೆಮುಂದೆ ನಿಲ್ಲಿಸಿದ್ದ ಕಾರನ್ನು ಹೆದ್ದಾರಿಗೆ ತಳ್ಳಿಕೊಂಡು ಬಂದ ಕಾಡಾನೆ

    ಮನೆಮುಂದೆ ನಿಲ್ಲಿಸಿದ್ದ ಕಾರನ್ನು ಹೆದ್ದಾರಿಗೆ ತಳ್ಳಿಕೊಂಡು ಬಂದ ಕಾಡಾನೆ

    ಮಡಿಕೇರಿ: ಕಾಡಾನೆಯೊಂದು (Wild Elephant) ದಾಳಿ ಮಾಡಿ ಮನೆಮುಂದೆ ನಿಲ್ಲಿಸಿದ್ದ ಕಾರನ್ನು (Car) ಹೆದ್ದಾರಿಗೆ ತಳ್ಳಿಕೊಂಡು ಬಂದಿರುವ ಘಟನೆ ಕುಶಾಲನಗರ (Kushalnagara) ತಾಲೂಕಿನ ಸುಂಟಿಕೊಪ್ಪ (Suntikoppa) ಸಮೀಪದ 7ನೇ ಹೊಸಕೋಟೆಯ ಮೆಟ್ನಳ್ಳದಲ್ಲಿ ನಡೆದಿದೆ.

    ಶನಿವಾರ ಮುಂಜಾನೆ 4:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಮೆಟ್ನಳ್ಳದ ರಾಷ್ಟ್ರೀಯ ಹೆದ್ದಾರಿ (National Highway) ಬದಿಯ ಮನೆಯ ಸಮೀಪದ ಖಾಲಿ ಜಾಗದಲ್ಲಿ ಸ್ವಿಫ್ಟ್ ಮತ್ತು ಸ್ಯಾಂಟ್ರೋ ಕಾರುಗಳು ನಿಲುಗಡೆಗೊಳಿಸಲಾಗಿತ್ತು. ಮೊದಲು ಕಾಡಾನೆ ಸ್ಯಾಂಟ್ರೋ ಕಾರಿನ ಮೇಲೆರಗಿದೆ. ನಂತರ ಸಾನಿಪ್ ಎಂಬವರ ಸ್ವಿಫ್ಟ್ ಕಾರಿನ ಮೇಲೆ ದಾಳಿ (Attack) ಮಾಡಿ ಹೆದ್ದಾರಿವರೆಗೆ ತಳ್ಳಿಕೊಂಡು ಬಂದಿದೆ. ಬಳಿಕ ಕಾರನ್ನು ಅಲ್ಲಿಯೇ ಬಿಟ್ಟು ಕಾಡಾನೆ ಅಲ್ಲಿಂದ ಕಾಲ್ಕಿತ್ತಿದೆ. ಇದರಿಂದಾಗಿ ಕಾರಿಗೆ ಸಣ್ಣಪುಟ್ಟ ಡ್ಯಾಮೇಜ್ ಆಗಿದೆ. ಇದನ್ನೂ ಓದಿ: ಕುಖ್ಯಾತ ಮನೆಗಳ್ಳರ ಅರೆಸ್ಟ್ – 20 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ 

    ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ಕಾರಿನ ಮಾಲಿಕರಿಗೆ ಪರಿಹಾರಕ್ಕೆ ಅರ್ಜಿ ಹಾಕುವಂತೆ ಹೇಳಿ ತೆರಳಿದ್ದಾರೆ. ಇದನ್ನೂ ಓದಿ: ಮತದಾರರಿಗೆ ಗಿಫ್ಟ್ ಆಮಿಷ ಆರೋಪ – ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಡಿ.ಕೆ ಸುರೇಶ್ ವಿರುದ್ಧ ಕೇಸ್

  • ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ – ಎಫ್‌ಐಆರ್ ದಾಖಲು

    ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ – ಎಫ್‌ಐಆರ್ ದಾಖಲು

    – ಅಕ್ರಮವಾಗಿ ಸಂಗ್ರಹಿಸಿಟ್ಟ ಸೀರೆ, ಬಳೆ ಜಪ್ತಿ

    ಬೀದರ್: ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾರರಿಗೆ ಹಂಚಲು ಅಕ್ರಮವಾಗಿ ಸೀರೆ, ಬಳೆ ಮತ್ತು ಇತರ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದಾರೆ ಎಂಬ ಅರೋಪ ಮೇಲೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮನ್ನಾನ್ ಸೇಠ್ (Mannan Sait) ನಿವಾಸದ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳು (Commercial Tax Officers) ಹಾಗೂ ಬೀದರ್ (Bidar) ಎಸಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

    ಶನಿವಾರ ತಡರಾತ್ರಿ ಅಧಿಕಾರಿಗಳು ದಾಳಿ ಮಾಡಿ ಮತದಾರರಿಗೆ ಹಂಚಲು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸೀರೆ, ಬಳೆ ಮತ್ತು ಇತರ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮನ್ನಾನ್ ಸೇಠ್ ವಿರುದ್ಧ ಬೀದರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಕೂಡಾ ದಾಖಲಾಗಿದೆ. ಇದನ್ನೂ ಓದಿ: ಸಿದ್ದು ಪರ ಬ್ಯಾಟ್‌ ಬೀಸಿದ ಬಿಜೆಪಿ ಶಾಸಕ ರಾಜುಗೌಡ

    ಬೀದರ್ ಉತ್ತರ ಕ್ಷೇತ್ರದ ಮತದಾರರಿಗೆ ಹಂಚಲು ಸೀರೆ, ಅರಿಶಿನ-ಕುಂಕುಮ ಕಿಟ್, ಆಟೋ ಡ್ರೈವರ್‌ಗಳ ಸಮವಸ್ತ್ರಗಳನ್ನು ಸಂಗ್ರಹಿಸಲಾಗಿದ್ದು, ಅವುಗಳ ಮೇಲೆ ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ಹಾಕಲಾಗಿದೆ. ಮತದಾರರಿಗೆ ಹಂಚಲು ಮನೆಯಲ್ಲಿ ಈ ಎಲ್ಲಾ ವಸ್ತುಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದಾರೆ ಎಂದು ಎಫ್‌ಐಆರ್ ದಾಖಲಾಗಿದೆ. ಬೀದರ್ ಸಹಾಯಕ ಆಯುಕ್ತ ಹಾಗೂ ವಿಧಾನಸಭಾ ಚುನಾವಣಾ ಆರ್‌ಒ ಲವೀಶ್ ಒರಡಿಯಾ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಇದನ್ನೂ ಓದಿ: ಕೋಲಾರದಿಂದ ಸಿದ್ದು ಸ್ಪರ್ಧೆಗೆ ರೆಡ್ ಸಿಗ್ನಲ್ – ವರುಣಾದಿಂದಲೇ ಸ್ಪರ್ಧಿಸುವಂತೆ ಹೈಕಮಾಂಡ್ ಹೇಳಿದ್ದು ಯಾಕೆ?

  • ಗಡಿಭಾಗದಲ್ಲಿ ಹೆಚ್ಚಾದ ಆನೆಗಳ ಉಪಟಳ – ಸೆಲ್ಫಿ ತೆಗೆಯಲು ಹೋದ ಯುವಕ ಬಲಿ

    ಗಡಿಭಾಗದಲ್ಲಿ ಹೆಚ್ಚಾದ ಆನೆಗಳ ಉಪಟಳ – ಸೆಲ್ಫಿ ತೆಗೆಯಲು ಹೋದ ಯುವಕ ಬಲಿ

    ಬೆಂಗಳೂರು: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಆನೆಗಳನ್ನು (Elephant) ನೋಡಲು ಜನರು ಜಮಾಯಿಸಿದ್ದು, ಈ ವೇಳೆ ವಿಚಲಿತವಾದ ಆನೆಗಳು ಯುವಕನೊಬ್ಬನನ್ನು (Man) ಅಟ್ಟಾಡಿಸಿ ಸಾಯಿಸಿರುವ ಘಟನೆ ಕೃಷ್ಣಗಿರಿ ಜಿಲ್ಲೆಯ ಸಪ್ಪಾನಿಪಟ್ಟಿಯಲ್ಲಿ ನಡೆದಿದೆ.

    ಕಳೆದೆರಡು ದಿನಗಳಿಂದ ಸುತ್ತಮುತ್ತಲಿನ ಗ್ರಾಮಗಳ ಬಳಿ ಬೀಡುಬಿಟ್ಟ ಕಾಡಾನೆಗಳು ರೈತರು ಬೆಳೆದಿದ್ದ ತರಕಾರಿ ಬೆಳೆಗಳನ್ನು ತಿಂದು, ತುಳಿದು ಹಾಳು ಮಾಡಿದ್ದವು. ಹೊಲ-ಗದ್ದೆಗಳ ಬಳಿ ಆನೆಗಳು ಇರುವ ಮಾಹಿತಿ ತಿಳಿದು ಸೆಲ್ಫಿ ತೆಗೆಯಲು ಮುಂದಾಗಿದ್ದ ಯುವಕ ರಾಮಕುಮಾರ್ ಮೇಲೆ ಕಾಡಾನೆ ದಾಳಿ (Elephant Attack) ಮಾಡಿದೆ. ಇದರಿಂದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಗ್ಯಾಸ್ ಪೈಪ್‍ಲೈನ್ ಕಟ್ಟಾಗಿ ಭೀಕರ ಸ್ಫೋಟ- ಮನೆಗಳು ಧ್ವಂಸ, ಮೂವರಿಗೆ ಗಂಭೀರ ಗಾಯ

    ಇದೇ ವೇಳೆ ಜನರು ಗುಂಪು ಗುಂಪಾಗಿ ಸೇರಿದ್ದರಿಂದ ಭಯಗೊಂಡು ಓಡಲು ಪ್ರಾರಂಭಿಸಿದ 2 ಕಾಡಾನೆಗಳು ಹೆದ್ದಾರಿ ದಾಟುತ್ತಿದ್ದಾಗ ಕಾರೊಂದಕ್ಕೆ ಡಿಕ್ಕಿ ಹೊಡೆದಿವೆ. ಇದರಿಂದ ಕಾರು ಜಖಂಗೊಂಡಿದ್ದು ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

    ಪದೇ ಪದೇ ಕಾಡಾನೆಗಳು ಗ್ರಾಮದತ್ತ ಆಗಮಿಸಿ ಜನರಿಗೆ ಪ್ರಾಣ ಭಯದ ವಾತಾವರಣ ಸೃಷ್ಟಿಸಿದೆ. ಇದೀಗ ಅವಾಂತರಗಳಿಂದ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಸ್ತೆ ಮಧ್ಯೆಯೇ ಯಡಿಯೂರಪ್ಪರನ್ನ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು

  • ನಟ ಅಮನ್ ಧಾಲಿವಾಲ್ ಗೆ ಮಚ್ಚಿನಿಂದ ಹಲ್ಲೆ

    ನಟ ಅಮನ್ ಧಾಲಿವಾಲ್ ಗೆ ಮಚ್ಚಿನಿಂದ ಹಲ್ಲೆ

    ಬಾಲಿವುಡ್ (Bollywood) ಹಾಗೂ ಪಂಜಾಬಿ (Punjab) ನಟ ಅಮನ್ ಧಾಲಿವಾಲ್ (Aman Dhaliwal) ಮೇಲೆ ಮಾರಣಾಂತಿಕ ಹಲ್ಲೆ (Attack) ನಡೆದಿದೆ. ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಮನ್ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವಾಗ ಕಿಡಿಗೇಡಿಯೊಬ್ಬ ಜಿಮ್ ಗೆ ನುಗ್ಗಿ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ.

    ತಮ್ಮ ಪಾಡಿಗೆ ತಾವು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವಾಗ ಅಪರಿಚಿತ ವ್ಯಕ್ತಿಯೋರ್ವ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಜಿಮ್ ಗೆ ನುಗ್ಗುತ್ತಾನೆ. ಅತ್ತಿತ್ತ ನೋಡಿ, ಅಲ್ಲಿಯೇ ಇದ್ದ ಅಮನ್ ಗೆ ನೀರು ಕೊಡುವಂತೆ ದಬಾಯಿಸುತ್ತಾನೆ. ಅಮನ್ ಕೇರ್ ಮಾಡದೇ ಇದ್ದಾಗ ಮಚ್ಚು ತೋರಿಸಿ ಬೆದರಿಸಲು ಪ್ರಯತ್ನಿಸುತ್ತಾನೆ. ಆ ವ್ಯಕ್ತಿಯನ್ನು ಅಮನ್ ಮಣಿಸಲು ಯತ್ನಿಸುತ್ತಾರೆ. ಈ ವೇಳೆ ಮನಸ್ಸಿಗೆ ಬಂದಂತೆ ವ್ಯಕ್ತಿ ಮಚ್ಚು ಬೀಸುತ್ತಾನೆ. ಈ ಸಮಯದಲ್ಲಿ ಅಮನ್ ಮೈತುಂಬಾ ಗಾಯಗಳಾಗುತ್ತವೆ. ಇದನ್ನೂ ಓದಿ:  ‘ಟ್ವಿಂಕಲ್’ ಹಾಡು ಹೇಳುತ್ತಾ ಬಂದ ಶಿವಾಜಿ ಸುರತ್ಕಲ್ 2

    ಜೋದಾ ಅಕ್ಬರ್, ಬಿಗ್ ಬದ್ರರ್, ಅಜ್ ದೇ ರಾಂಜಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಅಮನ್ ಧಾಲಿವಾಲ್ ಎಂದಿನಂತೆ ಜಿಮ್ ಗೆ ಬಂದ ವೇಳೆ ಈ ಘಟನೆ ನಡೆದಿದೆ. ಕೂಡಲೇ ಪೊಲೀಸ್ ಸಿಬ್ಬಂದಿಗೆ ಸುದ್ದಿ ಮುಟ್ಟಿಸಲಾಗುತ್ತದೆ. ಸ್ಥಳಕ್ಕೆ ಬಂದ ಪೊಲೀಸರು ಆ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

  • ಸಫಾರಿ ತೆರಳುತ್ತಿದ್ದ ವೇಳೆ ಘೇಂಡಾಮೃಗಗಳ ದಾಳಿ – 7 ಮಂದಿ ಪ್ರವಾಸಿಗರಿಗೆ ಗಾಯ

    ಸಫಾರಿ ತೆರಳುತ್ತಿದ್ದ ವೇಳೆ ಘೇಂಡಾಮೃಗಗಳ ದಾಳಿ – 7 ಮಂದಿ ಪ್ರವಾಸಿಗರಿಗೆ ಗಾಯ

    ಕೋಲ್ಕತ್ತಾ: ಸಫಾರಿ (Safari) ತೆರಳುತ್ತಿದ್ದ ವೇಳೆ ಪ್ರವಾಸಿಗರ (Tourists) ಮೇಲೆ ಘೇಂಡಾಮೃಗಗಳು (Rhino) ದಾಳಿ ನಡೆಸಿರುವ ಘಟನೆ ಪಶ್ಚಿಮ ಬಂಗಾಳದ (West Bengal) ಜಲ್ದಪರಾ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ. ಘಟನೆಯಲ್ಲಿ 7 ಪ್ರವಾಸಿಗರು ಗಾಯಗೊಂಡಿದ್ದಾರೆ.

    ಸ್ಥಳೀಯರ ಪ್ರಕಾರ ಸಫಾರಿ ಜೀಪ್ ಅನ್ನು ನಿಲ್ಲಿಸಿದ್ದ ವೇಳೆ 2 ಘೇಂಡಾಮೃಗಗಳು ರಸ್ತೆಯ ಬಳಿ ಪೊದೆಯಲ್ಲಿ ಕಾಳಗದಲ್ಲಿ ತೊಡಗಿದ್ದವು. ಈ ಸಂದರ್ಭ ಪ್ರವಾಸಿಗರು ಪ್ರಾಣಿಗಳ ಕಾದಾಟದ ವೀಡಿಯೋವನ್ನು ಚಿತ್ರೀಕರಣ ಮಾಡಿದ್ದಾರೆ. ಇದರಿಂದ ವಿಚಲಿತವಾಗಿದ್ದ ಘೇಂಡಾಮೃಗಗಳು ಜೀಪಿನತ್ತ ಬಂದಿವೆ. ಇದನ್ನೂ ಓದಿ: ಪರೀಕ್ಷೆಯಲ್ಲಿ ಹೆಚ್ಚುವರಿ ಸಮಯ ನಿರಾಕರಿಸಿದ್ದಕ್ಕೆ ಶಾಲಾ ಕಟ್ಟಡವನ್ನೇ ಧ್ವಂಸಗೊಳಿಸಿದ ವಿದ್ಯಾರ್ಥಿಗಳು

    ಘಟನೆಗೆ ಸಂಬಂಧಿಸಿದಂತೆ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಪ್ರವಾಸಿಗರು ಸಫಾರಿ ವಾಹನವನ್ನು ನಿಲ್ಲಿಸಿ, ಘೇಂಡಾಮೃಗಗಳ ಕಾಳಗ ವೀಕ್ಷಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಅವು ಜೀಪಿನತ್ತ ನುಗ್ಗಿವೆ. ಈ ವೇಳೆ ಜೀಪಿನ ಚಾಲಕ ವಾಹನವನ್ನು ರಿವರ್ಸ್ ಕೊಂಡೊಯ್ದಿದ್ದಾನೆ. ಆದರೆ ಜೀಪ್ ಹಿಂದೆ ಹೋಗುತ್ತಲೇ ಮಾರ್ಗದಿಂದ ಬದಿಗೆ ಜಾರಿ, ಕಂದಕಕ್ಕೆ ಉರುಳಿದೆ. ಇದರಿಂದ ಜೀಪಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ. ಇದನ್ನೂ ಓದಿ: PublicTV Explainer: ಕರಗುತ್ತಿವೆ ಹಿಮಸರೋವರಗಳು – ಭಾರತ, ಪಾಕಿಸ್ತಾನದ ಜನರಿಗೆ ಕಾದಿದೆ ಪ್ರವಾಹದ ಅಪಾಯ!

    ಗಾಯಗೊಂಡ ಎಲ್ಲಾ ಪ್ರವಾಸಿಗರನ್ನು ತಕ್ಷಣ ಸ್ಥಳೀಯ ಮದರಿಹತ್ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಘಟನೆಯಿಂದ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಅಲಿಪುರ್ದೂರ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಇಲ್ಲಿಯವರೆಗೆ ಘೇಂಡಾಮೃಗಗಳು ಪ್ರವಾಸಿಗರ ವಾಹನಗಳ ಮೇಲೆ ದಾಳಿ ಮಾಡಿರುವುದು ಈ ಹಿಂದೆ ವರದಿಯಾಗಿರಲಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.