Tag: ದಾವಣರೆಗೆ

  • ಅಧಿಕಾರ ಕಳೆದುಕೊಂಡ ಕುಮಾರಸ್ವಾಮಿ, ಸಿದ್ದರಾಮಯ್ಯ ಹುಚ್ಚರಾಗಿದ್ದಾರೆ: ಈಶ್ವರಪ್ಪ ವ್ಯಂಗ್ಯ

    ಅಧಿಕಾರ ಕಳೆದುಕೊಂಡ ಕುಮಾರಸ್ವಾಮಿ, ಸಿದ್ದರಾಮಯ್ಯ ಹುಚ್ಚರಾಗಿದ್ದಾರೆ: ಈಶ್ವರಪ್ಪ ವ್ಯಂಗ್ಯ

    ದಾವಣಗೆರೆ: ಅಧಿಕಾರ ಕಳೆದುಕೊಂಡ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಹುಚ್ಚರಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಮಾತನಾಡಿದ ಸಚಿವರು, ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೇಳಲು ಬಯಸುತ್ತೇನೆ. ನೀವು ಸಿಎಂ ಆದಾಗ ನಾವು ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಮಾಡಿದ್ದೇವು. ನಿನ್ನೆವರೆಗೂ ಪರಿಹಾರ ಬಂದಿಲ್ಲ ಎಂದು ಆರೋಪ ಮಾಡುತ್ತಾ ಬಂದಿರಿ. ಈಗ ಕೇಂದ್ರ ಸರ್ಕಾರವು ನರೆ ಪರಿಹಾರ ನೀಡಿದೆ. ಆದರೆ ನೀವು ಇಷ್ಟೇನಾ ಎಂದು ಕೇಳುತ್ತಿರಾ ಎಂದು ಕಿಡಿಕಾರಿದರು.

    ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭಾ ವಿರೋಧ ಪಕ್ಷದ ಸ್ಥಾನಕ್ಕೆ ಪ್ರಯತ್ನ ಪಡುತ್ತಿದ್ದಾರೆ. ಇತ್ತ ಸಿದ್ದರಾಮಯ್ಯ ಅವರು ಕೂಡ ವಿಪಕ್ಷ ಸ್ಥಾನ ಪಡೆಯಲು ಮುಂದಾಗುತ್ತಿದ್ದಾರೆ. ಟೀಕೆ ಮಾಡ ಬೇಕು, ವಿರೋಧ ಸ್ಥಾನ ಸಿಗುತ್ತೋ ಇಲ್ಲವೂ ಎಂದು ವಿಲಿ ವಿಲಿ ಒದ್ದಾಡುತ್ತಿದ್ದಾರೆ. ಈಗ ಆರ್ಥಿಕ ಸ್ಥಿತಿ ಬಗ್ಗೆ ಮಾತನಾಡುತ್ತಿದ್ದಾರೆ. ಹೇಗಾದರೂ ಮಾಡಿ ಬಿಜೆಪಿ ವಿರುದ್ಧ ಟೀಕೆ ಮಾಡ ಬೇಕೆಂದು ಈಗ ಹೀಗೆ ಮಾಡುತ್ತಿದ್ದಾರೆ ಎಂದು ಹೇಳಿದರು.

    ಅಯೋಧ್ಯ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿಕೊಂಡಿದೆ. ಇಡಿ ದೇಶವೇ ಹೆಮ್ಮೆ ಪಡುವಂತಹ ತೀರ್ಪು ಬರಲಿದೆ ಎನ್ನುವ ವಿಶ್ವಾಸವಿದೆ. ಯಾರಿಗೂ ನೋವಾಗದ ರೀತಿ ತೀರ್ಪು ಬರಲಿದೆ ಎಂದರು.

  • ಚಾಲಕ, ನರ್ಸ್ ಸಿಬ್ಬಂದಿಯಿಂದ ಹೆರಿಗೆ – ಅಂಬುಲೆನ್ಸ್ ನಲ್ಲಿಯೇ ಅವಳಿ ಮಕ್ಕಳ ಜನನ

    ಚಾಲಕ, ನರ್ಸ್ ಸಿಬ್ಬಂದಿಯಿಂದ ಹೆರಿಗೆ – ಅಂಬುಲೆನ್ಸ್ ನಲ್ಲಿಯೇ ಅವಳಿ ಮಕ್ಕಳ ಜನನ

    ದಾವಣಗೆರೆ: ಜಿಲ್ಲೆಯ ಜಗಳೂರು ಪಟ್ಟಣದಲ್ಲಿ 108 ವಾಹನದಲ್ಲೇ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

    ಪಟ್ಟಣದ ಧರ್ಮಾಪುರ ಗ್ರಾಮದ ಅಂಜಿನಮ್ಮ ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಕುಟುಂಬದವರು ಅಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಬಳಿಕ 108 ಅಂಬುಲೆನ್ಸ್ ನಲ್ಲಿ ದಾವಣಗೆರೆಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲು ಕರೆದುಕೊಂಡು ಹೋಗುತ್ತಿದ್ದರು.

    ಈ ವೇಳೆ ಅಂಜಿನಮ್ಮ ಅವರಿಗೆ ಮಾರ್ಗ ಮಧ್ಯೆಯೇ ಹೆರಿಗೆ ನೋವು ಜಾಸ್ತಿಯಾಗಿ ಕಾಣಿಸಿಕೊಂಡಿದೆ. ಕೊನೆಗೆ ಅಂಬುಲೆನ್ಸ್ ನಲ್ಲೇ ಗಂಡು ಹಾಗೂ ಹೆಣ್ಣು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಹಿಳೆ ಅಂಜಿನಮ್ಮ ಅವರಿಗೆ ಹೆರಿಗೆ ನೋವು ಜಾಸ್ತಿಯಾಗುತ್ತಿದ್ದಂತೆಯೇ 108 ಚಾಲಕ ರುದ್ರಪ್ಪ ಹಾಗೂ ಸಿಬ್ಬಂದಿ ಸುರೇಶ್ ಮಹಿಳೆಗೆ ಹೆರಿಗೆ ಮಾಡಿಸಿದ್ದು ವಿಶೇಷವಾಗಿತ್ತು.

    ಸದ್ಯ ತಾಯಿ ಮಕ್ಕಳು ಆರೋಗ್ಯವಾಗಿದ್ದು, ದಾವಣಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  • ನಾಲ್ವರು ದುಷ್ಕರ್ಮಿಗಳಿಂದ ಬಾಲಕಿಗೆ ಚಾಕು ಇರಿತ!

    ನಾಲ್ವರು ದುಷ್ಕರ್ಮಿಗಳಿಂದ ಬಾಲಕಿಗೆ ಚಾಕು ಇರಿತ!

    ದಾವಣಗೆರೆ: ಮನೆಯಲ್ಲಿ ಯಾರು ಇಲ್ಲದ ವೇಳೆ ನೀರು ಕೇಳಲು ಹೋಗಿ ನಾಲ್ವರು ದುಷ್ಕರ್ಮಿಗಳು ಬಾಲಕಿಗೆ ಚಾಕುವಿನಿಂದ ಇರಿದ ಘಟನೆ ಜಿಲ್ಲೆಯ ಹೆಚ್.ಕೆ.ಆರ್ ನಗರದಲ್ಲಿ ನಡೆದಿದೆ.

    ಗುರುವಾರ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು. ತಂದೆ-ತಾಯಿ ಕೆಲಸಕ್ಕೆ ಹೋಗಿದ್ದ ಸಂದರ್ಭವನ್ನು ಬಳಸಿಕೊಂಡ ನಾಲ್ಕು ಮಂದಿ ದುಷ್ಕರ್ಮಿಗಳು ಮೊದಲು ಬಾಗಿಲು ಬಡಿದಿದ್ದಾರೆ. ಬಾಗಿಲು ತೆಗೆಯುತ್ತಿದ್ದಂತೆ ಬಾಲಕಿಯ ಕುತ್ತಿಗೆಗೆ ಚಾಕು ಹಾಕಲು ಮುಂದಾಗಿದ್ದಾರೆ.

    ಈ ವೇಳೆ ಬಾಲಕಿ ಕೈ ಅಡ್ಡ ತಂದಿದ್ದಕ್ಕೆ ಚಾಕು ಕೈಗೆ ಬಿದ್ದಿದೆ. ತಕ್ಷಣಕ್ಕೆ ಬಾಲಕಿ ಕಿರುಚಿಕೊಂಡಿದ್ದರಿಂದ ನಾಲ್ವರು ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಅಲ್ಲದೆ ಬಾಲಕಿಯನ್ನ ತಕ್ಷಣಕ್ಕೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

    ದುಷ್ಕರ್ಮಿಗಳು ಬುರ್ಕಾ ಹಾಕಿಕೊಂಡು ಬಂದಿದ್ದರಿಂದ ಮುಖದ ಚಹರೆ ಕಂಡು ಹಿಡಿಯಲು ಸಾಧ್ಯವಾಗಿಲ್ಲ. ಅಲ್ಲದೆ ಜಿಲ್ಲೆಯಲ್ಲಿ ಮಕ್ಕಳು ಕಳ್ಳರ ಹಾವಳಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವುದರಿಂದ, ಮಕ್ಕಳ ಕಳ್ಳರೇ ಇರಬಹುದು ಎಂದು ಪೋಷಕರು ಹಾಗೂ ಸಾರ್ವಜನಿಕರು ಸಂಶಯ ವ್ಯಕ್ತಪಡಿಸಿದ್ದಾರೆ.

    ಘಟನೆ ನಡೆದ ಸ್ಥಳಕ್ಕೆ ಆರ್ ಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.