Tag: ದಾವೂಡ್ ಇಬ್ರಾಹಿಂ

  • ದಾವೂದ್ ಇಬ್ರಾಹಿಂ ಸ್ಥಿತಿ ಗಂಭೀರ- ವಿಷಪ್ರಾಶನ ಅಲ್ಲಗಳೆದ ಕುಟುಂಬಸ್ಥರು

    ದಾವೂದ್ ಇಬ್ರಾಹಿಂ ಸ್ಥಿತಿ ಗಂಭೀರ- ವಿಷಪ್ರಾಶನ ಅಲ್ಲಗಳೆದ ಕುಟುಂಬಸ್ಥರು

    ಇಸ್ಲಾಮಾಬಾದ್: ಗಂಭೀರ ಆರೋಗ್ಯ ಸಮಸ್ಯೆಗಳಿಂದಾಗಿ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು (Dawood Ibrahim) ಪಾಕಿಸ್ತಾನದ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವರದಿಗಳ ನಡುವೆ, ಆತನ ಕುಟುಂಬದ ಸದಸ್ಯರು ವಿಷಪ್ರಾಶನ ವಿಚಾರವನ್ನು ಅಲ್ಲಗೆಳೆದಿದ್ದಾರೆ.

    ದಾವೂದ್ ಆರೋಗ್ಯದ ಕುರಿತ ವಿಚಾರ ಹೊರಬೀಳುತ್ತಿದ್ದಂತೆಯೇ ಮುಂಬೈ ಪೊಲೀಸರು ನಗರದಲ್ಲಿರುವ ಅವರ ಕುಟುಂಬ ಸದಸ್ಯರಿಂದ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ತಂಡವನ್ನು ಕಳುಹಿಸಿದ್ದಾರೆ. ಆಗ ದಾವೂದ್ ಸೋದರಳಿಯ, ಆರೋಗ್ಯ ಸಮಸ್ಯೆಗಳಿಂದ ಚೆನ್ನಾಗಿಲ್ಲ ಎಂದು ಖಚಿತಪಡಿಸಿದ್ದಾರೆ. ಆದರೆ ವಿಷಪ್ರಾಶನವಾಗಿಲ್ಲ‌ (Poisoning) ಎಂದು ಅವರು ತಿಳಿಸಿದ್ದಾರೆ.

    ಭಾನುವಾರ ರಾತ್ರಿಯಿಂದ ದಾವೂದ್ ಆರೋಗ್ಯದ ಬಗ್ಗೆ ವರದಿಗಳು ಹೊರಬಿದ್ದಿವೆ. ಆದರೆ ಭಾರತೀಯ ಅಧಿಕಾರಿಗಳಿಂದ ಯಾವುದೇ ದೃಢೀಕರಣವಿಲ್ಲ. ಈ ಸಂಬಂಧ ಪಾಕಿಸ್ತಾನ ಸರ್ಕಾರದಿಂದಲೂ ಅಧಿಕೃತ ಮಾಹಿತಿ ಇಲ್ಲ. ವಿಷಪ್ರಾಶನದಿಂದಾಗಿ ದಾವೂದ್ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಹೇಳಲಾಗಿದೆ. ಸದ್ಯ ದಾವೂದ್ ಪಾಕಿಸ್ತಾನದ ಕರಾಚಿ ಆಸ್ಪತ್ರೆಯಲ್ಲಿ (Karachi Hospital) ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಯ ಸುತ್ತಮುತ್ತ ಪಾಕ್‌ ಸೇನೆಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ದಾವೂದ್ ಆಸ್ಪತ್ರೆಗೆ ದಾಖಲಾಗಿರುವುದು ಸುದ್ದಿಯಾಗುತ್ತಿದ್ದಂತೆಯೇ ಕರಾಚಿ, ರಾವಲ್ಪಿಂಡಿ, ಲಾಹೋರ್‌ ಹಾಗೂ ಇಸ್ಲಾಮಾಬಾದ್‍ನಲ್ಲಿ ಇಂಟರ್ ನೆಟ್ ಸ್ಥಗಿತಗೊಳಿಸಲಾಗಿದೆ ಎಂಬುದಾಗಿ ವರದಿಯಾಗಿದೆ. ಇದನ್ನೂ ಓದಿ: ವಿಷ ಸೇವಿಸಿರುವ ಶಂಕೆ – ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಆಸ್ಪತ್ರೆಗೆ ದಾಖಲು

    1993ರಲ್ಲಿ 250ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಮುಂಬೈ ಸ್ಫೋಟದ ಪ್ರಮುಖ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ದಶಕಗಳಿಂದ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ. ಜನವರಿಯಲ್ಲಿ ದಾವೂದ್ ಇಬ್ರಾಹಿಂನ ಸಹೋದರಿ ಹಸೀನಾ ಪಾರ್ಕರ್ ಅವರ ಮಗ ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಭೂಗತ ಪಾತಕಿ ಎರಡನೇ ಬಾರಿಗೆ ಮದುವೆಯಾದ ನಂತರ ಕರಾಚಿಯಲ್ಲೇ ಇರುತ್ತಾನೆ ಎಂದು ತಿಳಿಸಿದ್ದರು.

  • ದಾವೂದ್‍ಗೆ ಹೃದಯಾಘಾತ: ವದಂತಿ ಅಲ್ಲಗೆಳೆದ ಚೋಟಾ ಶಕೀಲ್

    ದಾವೂದ್‍ಗೆ ಹೃದಯಾಘಾತ: ವದಂತಿ ಅಲ್ಲಗೆಳೆದ ಚೋಟಾ ಶಕೀಲ್

    ನವದೆಹಲಿ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ರುವಾರಿ, ಭೂಗತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾನೆ ಎನ್ನುವ ಸುದ್ದಿಯನ್ನು ಸಹಚರ ಚೋಟಾ ಶಕೀಲ್ ಅಲ್ಲಗೆಳೆದಿದ್ದಾನೆ.

    61 ವರ್ಷದ ದಾವೂದ್ ಇಬ್ರಾಹಿಂಗೆ ಪಾಕಿಸ್ತಾನದ ಕರಾಚಿಯಲ್ಲಿ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಹೃದಯಾಘಾತವಾಗಿ ಗಂಭೀರ ಸ್ಥಿತಿಯಲ್ಲಿದ್ದು, ಆಗಾ ಖಾನ್ ಆಸ್ಪತ್ರೆಯಲ್ಲಿ ದಾಖಲಾಗಿ ಮೃತಪಟ್ಟಿದ್ದಾನೆ ಅಂತಾ ಶುಕ್ರವಾರ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದ್ದವು.

    ಈ ಬಗ್ಗೆ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ದಾವೂದ್ ಸಹಚರ ಚೋಟಾ ಶಕೀಲ್, ದಾವೂದ್ ಇಬ್ರಾಹಿಂ ಮೃತಪಟ್ಟಿಲ್ಲ. ಆರೋಗ್ಯ ಚೆನ್ನಾಗಿದೆ. ಹೃದಯಘಾತವಾಗಿದೆ ಅನ್ನೋದು ವದಂತಿ ಅಂತಾ ಸ್ಪಷ್ಟಪಡಿಸಿದ್ದಾನೆ.

    ಏಪ್ರಿಲ್ 19ರಂದು ಕರಾಚಿಯಲ್ಲಿರುವ ತನ್ನ ಅಳಿಯನ ಮನೆಯಲ್ಲಿ ಪಾತಕಿ ದಾವೂದ್ ಇಬ್ರಾಹಿಂ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ಎಂದು ಗುಪ್ತಚರ ಇಲಾಖೆ ತಿಳಿಸಿತ್ತು.