Tag: ದಿಗ್ವಿಜಯ್ ಸಿಂಗ್

  • ಕಮಲ್‌ನಾಥ್‌ ಇಂದು, ಎಂದೆಂದಿಗೂ ಕಾಂಗ್ರೆಸ್‌ನಲ್ಲೇ ಇರುತ್ತಾರೆ: ದಿಗ್ವಿಜಯ್‌ ಸಿಂಗ್‌

    ಕಮಲ್‌ನಾಥ್‌ ಇಂದು, ಎಂದೆಂದಿಗೂ ಕಾಂಗ್ರೆಸ್‌ನಲ್ಲೇ ಇರುತ್ತಾರೆ: ದಿಗ್ವಿಜಯ್‌ ಸಿಂಗ್‌

    ನವದೆಹಲಿ: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ (Kamal Nath) ಅವರು ಬಿಜೆಪಿಗೆ ಜಂಪ್‌ ಮಾಡುತ್ತಾರೆ ಎಂಬ ವದಂತಿಗಳಿಗೆ ಇದೀಗ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ (Digvijay Singh) ಪ್ರತಿಕ್ರಿಯಿಸಿದ್ದಾರೆ.

    ಇಂದು ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಮಲ್ ನಾಥ್ ಅವರ ನಿಷ್ಠೆ ಕಾಂಗ್ರೆಸ್ (Congress) ಜೊತೆಗಿದೆ. ಕಮಲ್ ನಾಥ್ ಅವರು ಕಾಂಗ್ರೆಸ್ ನ ಭಾಗವಾಗಿದ್ದಾರೆ. ಹೀಗಾಗಿ ಅವರು ಯಾವತ್ತೂ ಬೇರೆ ಪಕ್ಷಕ್ಕೆ ಹಾರಲಾರರು. ಅವರು ಇಂದು, ಮುಂದೆ ಹಾಗೂ ಎಂದೆಂದಿಗೂ ಕಾಂಗ್ರೆಸ್‌ನಲ್ಲೇ ಇರುತ್ತಾರೆ ಎಂದು ಒತ್ತಿ ಹೇಳಿದರು.

    ಛಿಂದ್ವಾರ ಸಂಸದ, ಪುತ್ರ ನಕುಲ್‌ನಾಥ್ ಜೊತೆ ಸೇರಿ ಕಮಲ್‌ನಾಥ್ 12 ಕ್ಕೂ ಹೆಚ್ಚು ಶಾಸಕರ ಜೊತೆಗೆ ಬಿಜೆಪಿ (BJP) ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿದ್ದವು. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಫೆ.22ಕ್ಕೆ ಮಧ್ಯಪ್ರದೇಶ ಪ್ರವೇಶವಾಗುವ ಹೊತ್ತಲ್ಲೇ ಈ ವಿಚಾರ ಕೇಳಿಬಂದಿತ್ತು. ಇದನ್ನೂ ಓದಿ: ಕಾಂಗ್ರೆಸ್‌ಗೆ ಇಂದಿರಾ ಗಾಂಧಿ 3ನೇ ಮಗ ಶಾಕ್? – ಪುತ್ರನ ಜೊತೆ ಕಮಲ್‌ನಾಥ್ ಬಿಜೆಪಿ ಸೇರ್ಪಡೆ?

    ಸದ್ಯಕ್ಕೆ ಕಮಲ್ ನಾಥ್ ಕಡೆಯಿಂದ ಯಾವುದೇ ರೀತಿಯ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ ಪಕ್ಷವನ್ನು ಬದಲಾಯಿಸುವ ಕುರಿತು ಕಮಲ್‌ ನಾಥ್‌ ಅವರನ್ನು ಹೇಳಿದಾಗ ನೀವೆಲ್ಲ ಯಾಕೆ ಉತ್ಸುಕರಾಗಿದ್ದೀರಿ. ಹಂಗೆ ಏನಾದರೂ ಇದ್ದರೆ ಮಾಧ್ಯಮಗಳಿಗೆ ತಿಳಿಸಲಾಗುವುದು ಎಂದು ಹೇಳಿದರು.

  • ರಾಮಲಲ್ಲಾ ಮೂರ್ತಿ ಮಗುವಿನಂತೆ ಕಾಣುತ್ತಿಲ್ಲ- ಕೆಂಗಣ್ಣಿಗೆ ಗುರಿಯಾದ ದಿಗ್ವಿಜಯ ಸಿಂಗ್

    ರಾಮಲಲ್ಲಾ ಮೂರ್ತಿ ಮಗುವಿನಂತೆ ಕಾಣುತ್ತಿಲ್ಲ- ಕೆಂಗಣ್ಣಿಗೆ ಗುರಿಯಾದ ದಿಗ್ವಿಜಯ ಸಿಂಗ್

    ಭೋಪಾಲ್:‌ ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಪ್ರತಿಷ್ಠಾಪನೆ ಮಾಡಲಿರುವ ರಾಮಲಲ್ಲಾ ಮೂರ್ತಿ (Pran Prathistha Ceremony) ಮಗುವಿನಂತೆ ಕಾಣುತ್ತಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‌ ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್‌ (Digvijay Singh) ಅವರು ಹೊಸ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

    ಈ ಸಂಬಂಧ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ನಾನು ಮೊದಲಿನಿಂದಲೂ ಹೇಳುತ್ತಿದ್ದೇನೆ, ವಿವಾದಿತ ರಾಮಲಲ್ಲಾನ ವಿಗ್ರಹವನ್ನು ನಾಶಪಡಿಸಿದ ವಿಗ್ರಹ ಎಲ್ಲಿದೆ? ಎರಡನೇ ಪ್ರತಿಮೆಯ ಅಗತ್ಯವೇನು? ನಮ್ಮ ಗುರು ಶಂಕರಾಚಾರ್ಯ ಸ್ವಾಮಿ, ಸ್ವರೂಪಾನಂದ ಜಿ ಮಹಾರಾಜ್ ಕೂಡ ರಾಮನ ವಿಗ್ರಹವನ್ನು ಸ್ಥಾಪಿಸಲು ಸಲಹೆ ನೀಡಿದ್ದರು. ರಾಮಜನ್ಮಭೂಮಿ ದೇವಸ್ಥಾನ ಮಗುವಿನ ರೂಪದಲ್ಲಿರಬೇಕು. ತಾಯಿ ಕೌಶಲ್ಯೆಯ ಮಡಿಲಲ್ಲಿರಬೇಕು. ಆದರೆ ದೇವಾಲಯದಲ್ಲಿ ಕುಳಿತಿರುವ ವಿಗ್ರಹವು ಮಗುವಿನಂತೆ ಕಾಣುತ್ತಿಲ್ಲ ಎಂದು ಬರೆದಿದ್ದಾರೆ.

    ಈ ರೀತಿ ಬರೆದುಕೊಳ್ಳುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ದಿಗ್ವಿಜಯ್‌ ಸಿಂಗ್‌ ವಿರುದ್ಧ ಬಿಜೆಪಿಗರು ಹಾಗೂ ರಾಮನ ಭಕ್ತರು ಸಿಡಿದೆದ್ದಿದ್ದಾರೆ. ಸಿಂಗ್‌ ಹೇಳಿಕೆಗೆ ಪರ-ವಿರೋಧ ಕಾಮೆಂಟ್‌ಗಳು ಬರುತ್ತಿದೆ. ಇದನ್ನೂ ಓದಿ: ಅಯೋಧ್ಯೆಯ ಬಾಲರಾಮನ ವಿಗ್ರಹದ ವಿಶೇಷತೆ ಏನು..?

    ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ಮೊದಲು ಅಂದರೆ ಗುರುವಾರ ಅಯೋಧ್ಯೆಯ ದೇವಾಲಯದ ಗರ್ಭಗುಡಿಯಲ್ಲಿ ಭಗವಾನ್ ರಾಮನ ವಿಗ್ರಹವನ್ನು ಇರಿಸಲಾಯಿತು. ತಡರಾತ್ರಿ ಗರ್ಭಗುಡಿಯಲ್ಲಿ ನಡೆದ ಪ್ರತಿಷ್ಠಾಪನಾ ಸಮಾರಂಭದಲ್ಲಿ ಮುಸುಕಿನಿಂದ ಮುಚ್ಚಲ್ಪಟ್ಟ ವಿಗ್ರಹದ ಮೊದಲ ಫೋಟೋವನ್ನು ಬಹಿರಂಗಪಡಿಸಲಾಯಿತು.

    ರಾಮಲಲ್ಲಾ ವಿಗ್ರಹವನ್ನು ಪ್ರಸಿದ್ಧ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ್ದಾರೆ. ವಿಗ್ರಹವು 51 ಇಂಚು ಎತ್ತರ ಮತ್ತು 1.5 ಟನ್ ತೂಕವಿದೆ. ಕಮಲದ ಮೇಲೆ ನಿಂತಿರುವ ಐದು ವರ್ಷದ ಮಗುವಿನಂತೆ ರಾಮನನ್ನು ವಿಗ್ರಹವು ಚಿತ್ರಿಸುತ್ತದೆ. ಈ ನಡುವೆ ಜನವರಿ 22 ರಂದು ನಿಗದಿಯಾಗಿರುವ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ತಯಾರಿಗಾಗಿ ಗುರುವಾರ ಅಯೋಧ್ಯಾ ನಗರವನ್ನು ರೋಮಾಂಚಕ ಹೂವುಗಳಿಂದ ಅಲಂಕರಿಸಲಾಗಿದೆ.

    ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಲಿದ್ದಾರೆ. ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದ ಅರ್ಚಕರ ತಂಡವು ಪ್ರಮುಖ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಿದೆ. ಸಮಾರಂಭಕ್ಕೆ ಹಲವಾರು ಸೆಲೆಬ್ರಿಟಿಗಳು ಮತ್ತು ಹೆಸರಾಂತ ವ್ಯಕ್ತಿಗಳನ್ನು ಸಹ ಆಹ್ವಾನಿಸಲಾಗಿದೆ.

  • ಪಾಕಿಸ್ತಾನ ಇಸ್ಲಾಂ ರಾಷ್ಟ್ರ ಎಂದು ಘೋಷಿಸಿಕೊಂಡು ಏನಾಗಿದೆ ಎಂದು ಎಲ್ಲರಿಗೂ ಗೊತ್ತು: ದಿಗ್ವಿಜಯ್ ಸಿಂಗ್

    ಪಾಕಿಸ್ತಾನ ಇಸ್ಲಾಂ ರಾಷ್ಟ್ರ ಎಂದು ಘೋಷಿಸಿಕೊಂಡು ಏನಾಗಿದೆ ಎಂದು ಎಲ್ಲರಿಗೂ ಗೊತ್ತು: ದಿಗ್ವಿಜಯ್ ಸಿಂಗ್

    -ಭಾರತದಲ್ಲಿ ಹಿಂದೂ ರಾಷ್ಟ್ರದ ಪ್ರಶ್ನೆಯೇ ಇಲ್ಲ

    ಹುಬ್ಬಳ್ಳಿ: ಪಾಕಿಸ್ತಾನ ಇಸ್ಲಾಂ ರಾಷ್ಟ್ರ ಎಂದು ಘೋಷಿಸಿಕೊಂಡ ನಂತರ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅಲ್ಲಿ ಮುಸಲ್ಮಾನರೆ ಮುಸಲ್ಮಾನರನ್ನು ಹೊಡೆದು ಹಾಕುತ್ತಿದ್ದಾರೆ. ಭಾರತದಲ್ಲಿ (India) ಹಿಂದೂ ರಾಷ್ಟ್ರದ ಪ್ರಶ್ನೆಯೇ ಇಲ್ಲ. ಈ ದೇಶ ಎಲ್ಲರಿಗೂ ಸೇರಿದ್ದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ (Digvijaya Singh) ಹೇಳಿದ್ದಾರೆ.

    ಭಾರತ ಹಿಂದೂ ರಾಷ್ಟ್ರ ಎಂಬ ಕಮಲಾನಾಥ್ ಹೇಳಿಕೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ (Hubballi) ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಭಾರತೀಯ ಸಂವಿಧಾನದಲ್ಲಿ ಎಲ್ಲ ವ್ಯಕ್ತಿಗಳಿಗೂ ತನ್ನ ಧರ್ಮ ಪಾಲನೆಗೆ ಅವಕಾಶವಿದೆ. ಭಾರತದಲ್ಲಿ ಸಂವಿಧಾನವೇ ಸರ್ವಸ್ವ ಆಗಿದೆ. ಆದರೆ ಹಿಂದೂಗಳ ಜನಸಂಖ್ಯೆ ಇಲ್ಲಿ ಹೆಚ್ಚಿದೆ ಎಂದಿದ್ದಾರೆ. ಇದನ್ನೂ ಓದಿ: ಶಸ್ತ್ರಚಿಕಿತ್ಸೆ ಬಳಿಕ ಧ್ವಜಾರೋಹಣ ನೆರವೇರಿಸಿದ ಶತಾಯುಷಿ ಅಜ್ಜಿ!

    ಎಲ್ಲಾ ಧರ್ಮಿಯರು ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ. ಹಿಂದುತ್ವದ ವಿಚಾರದಲ್ಲಿ ಸಾಫ್ಟ್ ಅಥವಾ ಹಾರ್ಡ್ ಎಂಬ ಪ್ರಶ್ನೆಯೇ ಇಲ್ಲ. ನೇಪಾಳದ ಜನಸಂಖ್ಯೆಯಲ್ಲಿ ಅತಿ ಹೆಚ್ಚು ಹಿಂದುಗಳೇ ಇದ್ದಾರೆ. ಆದರೂ ನೇಪಾಳ ಹಿಂದೂ ರಾಷ್ಟ್ರ ಎಂದು ಘೋಷಿಸಿಕೊಂಡಿಲ್ಲ. ಸೆಕ್ಯುಲರ್ ಸಂವಿಧಾನ ಅಳವಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

    ಹಿಂದುತ್ವದ ಪರಿಕಲ್ಪನೆ ತಂದ ಸಾವರ್ಕರ್ ಅವರೇ ಹಿಂದುತ್ವಕ್ಕೂ ಹಾಗೂ ಹಿಂದೂ ಸನಾತನ ಧರ್ಮಕ್ಕೂ ಸಂಬಂಧವಿಲ್ಲ ಎಂದಿದ್ದಾರೆ. ಸಂವಿಧಾನದ ಮೇಲೆ ಪ್ರಮಾಣ ಮಾಡಿ ಅಧಿಕಾರಕ್ಕೆ ಬಂದವರು ಹಿಂದುತ್ವದ ಮಾತುಗಳನ್ನು ಆಡುವುದು ಸರಿಯಲ್ಲ ಎಂದಿದ್ದಾರೆ. ಇದನ್ನೂ ಓದಿ: 1.38 ಕೋಟಿ ತೆರಿಗೆ ಕಟ್ಟುವಂತೆ ಗೋಕರ್ಣದ ದೇಗುಲಕ್ಕೆ ನೋಟಿಸ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತ್ನಿ ಜೊತೆಗೂಡಿ ಗೋಕರ್ಣದಲ್ಲಿ ವಿಶೇಷ ಪೂಜೆ ಸಲ್ಲಿಸಿದ ದಿಗ್ವಿಜಯ್‌ ಸಿಂಗ್‌

    ಪತ್ನಿ ಜೊತೆಗೂಡಿ ಗೋಕರ್ಣದಲ್ಲಿ ವಿಶೇಷ ಪೂಜೆ ಸಲ್ಲಿಸಿದ ದಿಗ್ವಿಜಯ್‌ ಸಿಂಗ್‌

    ಕಾರವಾರ: ಮಾಜಿ ಕೇಂದ್ರ ಸಚಿವ, ಹಾಲಿ ರಾಜ್ಯಸಭಾ ಸದಸ್ಯ ದಿಗ್ವಿಜಯ್ ಸಿಂಗ್ (Digvijaya Singh) ಪತ್ನಿಯೊಂದಿಗೆ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ (Gokarna Mahabaleshwar Temple) ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಶುಕ್ರವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಪತ್ನಿ ಅಮೃತ ರೈ (Amrita Rai) ಜೊತೆ ಆಗಮಿಸಿದ ದಿಗ್ವಿಜಯ್‌ ಸಿಂಗ್‌ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿ ಮಾಧ್ಯಮಗಳ ಜೊತೆ ಮಾತನಾಡಿದರು. ಇದನ್ನೂ ಓದಿ: ಗೂಂಡಾ ಕಾಯ್ದೆ ಅಡಿ ಪುನೀತ್‌ ಕೆರೆಹಳ್ಳಿ ಅರೆಸ್ಟ್‌ – 1 ವರ್ಷ ಸಿಗಲ್ಲ ಜಾಮೀನು

    ಮಣಿಪುರದಲ್ಲಿ (Manipura) ಮೂರು ತಿಂಗಳಿಂದ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಈ ಬಗ್ಗೆ ಪ್ರಧಾನಿ ಮಾತನಾಡದೇ ಸುಮ್ಮನಿದ್ದಾರೆ. ಮಣಿಪುರಕ್ಕೆ ನೀವು ಹೋಗಿಲ್ಲ ಯಾಕೆ ಎಂದು ನಾವು ಪ್ರಶ್ನೆ ಕೇಳಿದ್ದೇವೆ ಎಂದು ತಿಳಿಸಿದರು.

    ನಮ್ಮ ಪ್ರಶ್ನೆಗೆ ಮೋದಿ ಉತ್ತರ ನೀಡಿಲ್ಲ. ಮೋದಿಯವರು ಮಣಿಪುರಕ್ಕೆ ಸೈನ್ಯ ಕಳುಹಿಸಿ ಶಾಂತಿ ಕಾಪಾಡಲಿ ಎಂದು ಹೇಳಿದರು.


    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಕಾರು, ಬೈಕ್‌ಗೆ ಡಿಕ್ಕಿ – ಸವಾರ ಆಸ್ಪತ್ರೆ ದಾಖಲು

    ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಕಾರು, ಬೈಕ್‌ಗೆ ಡಿಕ್ಕಿ – ಸವಾರ ಆಸ್ಪತ್ರೆ ದಾಖಲು

    ಭೋಪಾಲ್: ಹಿರಿಯ ಕಾಂಗ್ರೆಸ್ (Congress) ನಾಯಕ ದಿಗ್ವಿಜಯ್ ಸಿಂಗ್ (Digvijaya Singh) ಪ್ರಯಾಣಿಸುತ್ತಿದ್ದ ಕಾರು (Car) ವೇಗವಾಗಿ ಬಂದು ಬೈಕ್‌ಗೆ (Bike) ಡಿಕ್ಕಿ ಹೊಡೆದಿರುವ ಘಟನೆ ಗುರುವಾರ ಮಧ್ಯಪ್ರದೇಶದ (Madhya Pradesh) ರಾಜ್‌ಗಢದಲ್ಲಿ ನಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ದೂರಕ್ಕೆ ಚಿಮ್ಮಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ದಿಗ್ವಿಜಯ್ ಸಿಂಗ್ ಪ್ರಯಾಣಿಸುತ್ತಿದ್ದಾಗ ಬೈಕ್ ಸವಾರ ರಸ್ತೆ ದಾಡಲು ಯೂ ಟರ್ನ್ ತೆಗೆದುಕೊಂಡಿರುವುದು ಕಂಡುಬಂದಿದೆ. ಈ ವೇಳೆ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರನನ್ನು ರಾಂಬಾಬು ಬಗ್ರಿ (20) ಎಂದು ಗುರುತಿಸಲಾಗಿದೆ.

    ಘಟನೆ ಜಿರಾಪುರದಲ್ಲಿ ನಡೆದಿದೆ. ಅಪಘಾತ ಸಂಭವಿಸುತ್ತಲೇ ಮಾಜಿ ಸಂಸದ ಗಾಯಾಳುವಿನ ಸಹಾಯಕ್ಕೆ ಧಾವಿಸಿದ್ದಾರೆ. ಬಳಿಕ ಪ್ರಾಥಮಿಕ ಚಿಕಿತ್ಸೆಗೆ ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ನಂತರ ಆತನನ್ನು ಭೋಪಾಲ್‌ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ- CBIವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ

    ಸದ್ಯ ಅಪಘಾತದ ಬಳಿಕ ಸಿಂಗ್ ಗಾಯಾಳುವಿಗೆ ಸಕಾಲದಲ್ಲಿ ಚಿಕಿತ್ಸೆ ಸಿಗುವಂತೆ ಮಾಡಿದ್ದಾರೆ. ರಾತ್ರಿಯೂ ಕೂಡಾ ಸಿಂಗ್ ಭೋಪಾಲ್‌ನ ಚಿರಾಯು ಆಸ್ಪತ್ರೆಗೆ ಭೇಟಿ ನೀಡಿ ಬೈಕ್ ಸವಾರನನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ ವಾಹನ ನಿಧಾನವಾಗಿ ಚಲಿಸುತ್ತಿದ್ದರಿಂದ ಸದ್ಯ ಬೈಕ್ ಸವಾರನಿಗೆ ಗಂಭೀರವಾದ ಗಾಯಗಳಾಗಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿಂತಿದ್ದ BMTC ಬಸ್ಸಿನಲ್ಲಿ ಬೆಂಕಿ- ಮಲಗಿದ್ದಲ್ಲೇ ಕಂಡಕ್ಟರ್ ಸಜೀವ ದಹನ

    ಘಟನೆ ಜಿರಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಬಡತನ, ನಿರುದ್ಯೋಗ, ಸಂಪತ್ತಿನ ಅಸಮಾನತೆ ಅಪಾಯಕಾರಿಯಾಗುತ್ತಿದೆ – RSS ಬೇಸರ

    ಬಡತನ, ನಿರುದ್ಯೋಗ, ಸಂಪತ್ತಿನ ಅಸಮಾನತೆ ಅಪಾಯಕಾರಿಯಾಗುತ್ತಿದೆ – RSS ಬೇಸರ

    ನವದೆಹಲಿ/ಬೆಂಗಳೂರು: ದೇಶದ ಆರ್ಥಿಕ ಸ್ಥಿತಿಗೆ ಸ್ವತಃ ಆರ್‌ಎಸ್‌ಎಸ್ (RSS) ಕಳವಳ ವ್ಯಕ್ತಪಡಿಸಿದೆ.

    ದೆಹಲಿಯಲ್ಲಿ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಆರ್‌ಎಸ್‌ಎಸ್ (RSS) ಪ್ರಧಾನ ಕಾರ್ಯದರ್ಶಿ ದತ್ತಾತ್ರೆಯ ಹೊಸಬಾಳೆ, ದೇಶದಲ್ಲಿ ಇಂದಿಗೂ 20 ಕೋಟಿಗೂ ಹೆಚ್ಚು ಜನ ಬಡತನದ ರೇಖೆಗಿಂತ ಕೆಳಗಿದ್ದಾರೆ. 4 ಕೋಟಿ ನಿರುದ್ಯೋಗ (Unemployment) ಸಮಸ್ಯೆಯಿಂದ ಒದ್ದಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಸ್ಕ್ಯಾನ್‌ಮಾಡಿ `ಸಿದ್ರಾಮುಲ್ಲನ ಉಗ್ರಭಾಗ್ಯ’ ಲೀಲೆ ನೋಡಿ – PayCM ಅಭಿಯಾನಕ್ಕೆ ಬಿಜೆಪಿ ಟಕ್ಕರ್

    ದೇಶದ ಶೇ.20ರಷ್ಟು ಸಂಪತ್ತು ಕೇವಲ ಶೇ.1ರಷ್ಟು ಜನರ ಕೈಯಲ್ಲಿದೆ. ದೇಶದ ಶೇ.50ರಷ್ಟು ಮಂದಿ ಕೈಯಲ್ಲಿರೋದು ಶೇ.13ರಷ್ಟು ಸಂಪತ್ತು ಅಷ್ಟೇ. ದೇಶದ ಪಾಲಿಗೆ ಈ ಬಡತನ, ನಿರುದ್ಯೋಗ, ಸಂಪತ್ತಿನ ಅಸಮಾನತೆ ಅಪಾಯಕಾರಿಯಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದಸರಾ ಸಂಭ್ರಮ – 85 ದೇಶಗಳ 1.50 ಲಕ್ಷ ಭಕ್ತರಿಂದ ಪ್ರಾರ್ಥನೆ

    ಹೊಸಬಾಳೆಯವರ ಈ ಮಾತು ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ್ರೆ, ವಿಪಕ್ಷಗಳಿಗೆ ಅಸ್ತ್ರ ಒದಗಿಸಿಕೊಟ್ಟಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ದಿಗ್ವಿಜಯ್ ಸಿಂಗ್ (Digvijaya Singh), ಇದು ಭಾರತ್ ಜೋಡೋ ಯಾತ್ರೆಯ ಪರಿಣಾಮ ಎಂದು ಕುಟುಕಿದ್ದಾರೆ.

    ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯಿಸಿ, ಇದೇ ಭಾರತದ ಸದ್ಯದ ಸ್ಥಿತಿ ಗರಿ. ಈಗ ಅಚ್ಚೇದಿನದ ಅಸಲಿಯತ್ತಿನ ಬಗ್ಗೆ ದೊಡ್ಡ ಪ್ರಶ್ನೆ ಎದ್ದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಬಿಜೆಪಿ ಸರ್ಕಾರ ಎಚ್ಚೆತ್ತುಕೊಳ್ಳಲು ಇದು ಸಕಾಲ ಎಂದಿದ್ದಾರೆ. ಆದರೆ ಬಿಜೆಪಿ ಮಾತ್ರ ಹೊಸಬಾಳೆಯವರ ಮಾತನ್ನು ಸಮರ್ಥಿಸಿದೆ. ಬಿಜೆಪಿಯ ಮೂಲ ಉದ್ದೇಶವೇ ಅಂತ್ಯೋದಯ. ಹಿಂದಿನ ಸರ್ಕಾರಗಳಿಂದ ಅಭಿವೃದ್ಧಿ ಕುಂಠಿತವಾಗಿತ್ತು. ನಮ್ಮ ಸರ್ಕಾರ ಅದನ್ನು ಹೋಗಲಾಡಿಸಿದೆ. ಮಧ್ಯವರ್ತಿಗಳ ಕಾಟ ತಪ್ಪಿಸಿದೆ ಎಂದು ಶಾಸಕ ಪಿ.ರಾಜೀವ್ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • AICC ಅಧ್ಯಕ್ಷ ಸ್ಥಾನಕ್ಕೆ ದಿಗ್ವಿಜಯ್‌ ಸಿಂಗ್ ಸ್ಪರ್ಧೆ

    AICC ಅಧ್ಯಕ್ಷ ಸ್ಥಾನಕ್ಕೆ ದಿಗ್ವಿಜಯ್‌ ಸಿಂಗ್ ಸ್ಪರ್ಧೆ

    ನವದೆಹಲಿ: ಎಐಸಿಸಿ (AICC) ಅಧ್ಯಕ್ಷ ಸ್ಥಾನಕ್ಕೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ (Congress) ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್ (Digvijaya Singh) ಸ್ಪರ್ಧೆ ಮಾಡಲಿದ್ದಾರೆ. ಇಂದು ಎಐಸಿಸಿ ಕಚೇರಿಗೆ ಭೇಟಿ ನೀಡಿದ ಅವರು ನಾಮಪತ್ರ ಪಡೆದಿದ್ದು, ನಾಳೆ ಅವರು ಅದನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಕೆ ಮಾಡಲಿದ್ದಾರೆ.

    ಕೇರಳದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿದ್ದ ದಿಗ್ವಿಜಯ್‌ ಸಿಂಗ್‌ಗೆ ಸೋನಿಯಾ ಗಾಂಧಿ (Sonia Gandhi) ಬುಲಾವ್ ನೀಡಿದ್ದರು. ರಾಜಸ್ಥಾನ ಸಂಘರ್ಷದ ಬಳಿಕ ಸೋನಿಯಾ ಗಾಂಧಿ ಅವರು ದಿಗ್ವಿಜಯ್‌ ಸಿಂಗ್ ಕರೆಸಿಕೊಂಡು ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಸೂಚನೆ ನೀಡಿದ್ದರು.

    ಸೋನಿಯಾ ಗಾಂಧಿ ಸೂಚನೆ ಮೇರೆಗೆ ಇಂದು ನಾಮಪತ್ರ ಪಡೆದಿರುವ ಅವರು ನಾಳೆ ಸಲ್ಲಿಕೆ ಮಾಡಲಿದ್ದಾರೆ. ಶುಕ್ರವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಮಧ್ಯಪ್ರದೇಶದ 10ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ದಿಗ್ವಿಜಯ್‌ ಸಿಂಗ್ ನಾಮಪತ್ರ ಸಲ್ಲಿಸುವ ವೇಳೆ ಸಾಥ್ ನೀಡಲಿದ್ದಾರೆ.

    Congress

    ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಸ್ಥಾನ (Rajasthan) ಸಿಎಂ ಅಶೋಕ್ ಗೆಹ್ಲೋಟ್ (Ashok Gehlot) ಸ್ಪರ್ಧಿಸಬೇಕಿತ್ತು. ಆದರೆ ರಾಜಸ್ಥಾನದಲ್ಲಿ ಸಿಎಂ ಸ್ಥಾನಕ್ಕಾಗಿ ಶುರುವಾದ ಭಿನ್ನಮತದ ಹಿನ್ನಲೆ ಅವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಚುನಾವಣೆ ಸ್ಪರ್ಧಿಸುವುದಾಗಿ ಹೇಳಿದ್ದ ಮತ್ತೋರ್ವ ನಾಯಕ ಶಶಿ ತರೂರ್ ಈವರೆಗೂ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಪೊಲೀಸ್ ಕಾಲರ್ ಹಿಡಿದು ದಿಗ್ವಿಜಯ್ ಸಿಂಗ್ ರಂಪಾಟ

    ಪೊಲೀಸ್ ಕಾಲರ್ ಹಿಡಿದು ದಿಗ್ವಿಜಯ್ ಸಿಂಗ್ ರಂಪಾಟ

    ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರು ಪೊಲೀಸ್ ಕಾಲರ್ ಹಿಡಿದು ರಂಪಾಟ ಮಾಡಿರುವ ವೀಡಿಯೋ ಸೊಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ದಿಗ್ವಿಜಯ್ ಸಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ನಡುವೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಸಂಬಂಧಿಸಿದಂತೆ ತೀವ್ರ ಪೈಪೋಟಿ ನಡೆಯುತ್ತಿದೆ. ಈ ನಡುವೆ ದಿಗ್ವಿಜಯ ಸಿಂಗ್ ಮತ್ತು ಶಾಸಕರಾದ ಆರಿಫ್ ಮಸೂದ್ ಮತ್ತು ಪಿಸಿ ಶರ್ಮಾ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭೋಪಾಲ್‍ನ ಜಿಲ್ಲಾ ಪಂಚಾಯತ್ ಕಚೇರಿಯ ಹೊರಗೆ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ.  ಇದನ್ನೂ ಓದಿ: ಬಿಡದಿಯ ನಿತ್ಯಾನಂದನ ಸ್ವರೂಪ ಎಂದು ಜನರನ್ನು ವಂಚಿಸುತ್ತಿದ್ದ ಸತ್ಯಾನಂದನಿಗೆ ಗೂಸಾ

    ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸರು ಮತ್ತು ಆಡಳಿತ ವ್ಯವಸ್ಥೆ ಕೆಲಸ ಮಾಡುತ್ತಿದೆ ಎಂದು ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಆರೋಪಿಸಿದ್ದಾರೆ. ಇದರಿಂದ ಕೋಪಗೊಂಡ ಸಚಿವ ವಿಶ್ವಾಸ್ ಸಾರಂಗ್ ಅವರು ಕಾರಿನಿಂದ ಕೆಳಗಿಳಿದಾಗ ಕಾಂಗ್ರೆಸ್ ಬೆಂಬಲಿಗರು ಅವರನ್ನು ಸುತ್ತುವರಿದಿದ್ದಾರೆ. ಈ ವೇಳೆ ಸಾರಂಗ್ ಕಾಂಗ್ರೆಸ್ ಬೆಂಬಲಿಗರಿಗೆ ಈ ದಾದಾಗಿರಿ ಕೆಲಸ ನಡೆಯುವುದಿಲ್ಲ ಎಂದು ಹೇಳಿದರು. ಸಚಿವ ಸಾರಂಗ್ ಅವರ ಹೇಳಿಕೆಗೆ ಪರಿಸ್ಥಿತಿ ಉದ್ವಿಗ್ನಗೊಂಡು ಮಾತಿನ ಚಕಮಕಿ ನಡೆಯಿತು. ಆದರೆ, ಸಾಕಷ್ಟು ಪ್ರಯತ್ನಗಳ ನಂತರ ಪೊಲೀಸರು ಪರಿಸ್ಥಿಯನ್ನು ಹತೋಟಿಗೆ ತಂದರು.

    ಈ ಕುರಿತ ವೀಡಿಯೋದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಪಂಚಾಯತ್ ಕಚೇರಿಗೆ ಪ್ರವೇಶಿಸದಂತೆ ತಡೆಯಲು ಪೊಲೀಸರು ಪ್ರಯತ್ನಿಸುತ್ತಿರುವುದನ್ನು ಕಾಣಬಹುದಾಗಿದೆ. ಜೊತೆಗೆ ಒಬ್ಬ ಪೊಲೀಸ್ ಅಧಿಕಾರಿಯ ಕೊರಳಪಟ್ಟಿ ಹಿಡಿದು ದಿಗ್ವಿಜಯ್ ಸಿಂಗ್ ಹಿಂಸಾತ್ಮಕವಾಗಿ ತಳ್ಳಿರುವುದನ್ನು ಕಾಣಬಹುದು. ಇದನ್ನೂ ಓದಿ: ಪ್ರವೀಣ್ ಹತ್ಯೆ ಖಂಡಿಸಿ ರಾಜೀನಾಮೆ ಪರ್ವ – ಇದು ಹೇಡಿಗಳ ಲಕ್ಷಣ ಎಂದ ಈಶ್ವರಪ್ಪ

    ಬಿಜೆಪಿ ಮುಖಂಡ ಹಾಗೂ ರಾಜ್ಯ ಸಚಿವ ಭೂಪೇಂದ್ರ ಸಿಂಗ್ ಜಿಲ್ಲಾ ಪಂಚಾಯಿತಿ ಕಚೇರಿಗೆ ಆಗಮಿಸುತ್ತಿದ್ದಂತೆ ಪ್ರತಿಭಟನಾ ನಿರತ ಕಾಂಗ್ರೆಸ್ ಕಾರ್ಯಕರ್ತರು ಅವರ ವಾಹನವನ್ನು ಹಾದುಹೋಗಲು ಬಿಡಲಿಲ್ಲ. ದಿಗ್ವಿಜಯ್ ಸಿಂಗ್ ಮತ್ತು ಆರಿಫ್ ಮಸೂದ್ ಸಿಂಗ್ ಅವರ ಕಾರಿನ ಮುಂದೆ ನಿಂತು, ಪಂಚಾಯತ್ ಕಚೇರಿಗೆ ಸಚಿವರ ಪ್ರವೇಶವನ್ನು ತಡೆದರು. ಕೂಡಲೇ ಪರಿಸ್ಥಿತಿ ನಿಯಂತ್ರಿಸಲು ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಯಿತು. ಈ ವೇಳೆ ನೂಕುನುಗ್ಗಲು ಹೆಚ್ಚಾಗುತ್ತಿದ್ದಂತೆ ದಿಗ್ವಿಜಯ್ ಸಿಂಗ್ ಪೊಲೀಸ್ ಅಧಿಕಾರಿಯ ಕೊರಳಪಟ್ಟಿ ಹಿಡಿದು ತಳ್ಳಿರುವುದು ಕಂಡುಬಂದಿದೆ.

    ಭೋಪಾಲ್ ಸೇರಿದಂತೆ ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಸಮೀಕ್ಷೆಗಳು ಬಿಜೆಪಿ ಮತ್ತು ಕಾಂಗ್ರೆಸ್ ಎರಡಕ್ಕೂ ವಿಶ್ವಾಸಾರ್ಹತೆಯ ಪ್ರಶ್ನೆಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ದಿಗ್ವಿಜಯ್ ಸಿಂಗ್ ಸಹಿತ 6 ಮಂದಿಗೆ 1 ವರ್ಷ ಜೈಲು ಶಿಕ್ಷೆ

    ದಿಗ್ವಿಜಯ್ ಸಿಂಗ್ ಸಹಿತ 6 ಮಂದಿಗೆ 1 ವರ್ಷ ಜೈಲು ಶಿಕ್ಷೆ

    ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಸೇರಿದಂತೆ ಆರು ಮಂದಿ ಆರೋಪಿಗಳಿಗೆ ಇಂದೋರ್ ವಿಶೇಷ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ನಂತರ ಜಾಮೀನನ್ನು ಸಹ ನೀಡಿದೆ.

    ಹೌದು, 2011ರಲ್ಲಿ ಭಾರತೀಯ ಜನತಾ ಯುವ ಮೋರ್ಚಾದ (ಬಿಜೆವೈಎಂ) ಪ್ರತಿಭಟನಾ ನಿರತ ಕಾರ್ಯಕರ್ತರೊಂದಿಗೆ ನಡೆದ ಸಂಘರ್ಷಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ದಿಗ್ವಿಜಯ್ ಸಿಂಗ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ನಂತರ ನ್ಯಾಯಾಲಯವು ಉಜ್ಜಯಿನಿ ಸಂಸದ ಪ್ರೇಮಚಂದ್ ಗುಡ್ಡು ಸೇರಿದಂತೆ ಎಲ್ಲಾ ಅಪರಾಧಿಗಳಿಗೆ ತಲಾ 25,000 ರೂ.ಗಳ ಶ್ಯೂರಿಟಿ ಮೇಲೆ ಜಾಮೀನು ನೀಡಿದೆ.  ಇದನ್ನೂ ಓದಿ: ನಿಶ್ಚಿತಾರ್ಥ ಮಾಡಿಕೊಂಡ ಸಂಜನಾ ಸಹೋದರಿ ನಿಕ್ಕಿ ಗಲ್ರಾನಿ

    ಈ ಕುರಿತಂತೆ ಮಾತನಾಡಿದ ಸರ್ಕಾರಿ ವಕೀಲ ವಿಮಲ್ ಕುಮಾರ್ ಮಿಶ್ರಾ, ಎಲ್ಲಾ ಆರೋಪಿಗಳಿಗೂ ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆ ವಿಧಿಸಲಾಗಿರುವುದರಿಂದ ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ಹೇಳಿದ್ದಾರೆ.

    ಮತ್ತೊಂದೆಡೆ ದಿಗ್ವಿಜಯ್ ಸಿಂಗ್ ಮತ್ತು ಮಾಜಿ ಸಂಸದ ಪ್ರೇಮಚಂದ್ ಗುಡ್ಡು ಅವರು ನ್ಯಾಯಾಲಯದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ. ಆದರೆ ಹೈಕೋರ್ಟ್‍ನಲ್ಲಿ ವಿಧಿಸಿರುವ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ತಿಳಿದರು. ಇದನ್ನೂ ಓದಿ: ಬೆಂಗಳೂರು ರಸ್ತೆಗೆ ಹೆವಿ ವೆಹಿಕಲ್‍ಗಳೇ ಕಂಟಕ- ಭಾರೀ ಗಾತ್ರದ ವಾಹನಗಳಿಂದ ರೂಲ್ಸ್ ಬ್ರೇಕ್

    ಇದು 10 ವರ್ಷಗಳ ಹಳೆಯ ಪ್ರಕರಣವಾಗಿದ್ದು, ಎಫ್‍ಐಆರ್‌ನಲ್ಲಿ ನನ್ನ ಹೆಸರಿಲ್ಲ. ಆದರೆ ರಾಜಕೀಯ ಒತ್ತಡದಿಂದ ನಂತರದಲ್ಲಿ ಹೆಸರನ್ನು ಸೇರಿಸಲಾಗಿದೆ. ನಾನು ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸುತ್ತೇನೆ ದಿಗ್ವಿಜಯ್ ಸಿಂಗ್ ಅವರು ಕಿಡಿಕಾರಿದ್ದಾರೆ.

    ಪೊಲೀಸರ ಪ್ರಕಾರ, 2011ರ ಜುಲೈ 17ರಂದು ಸಿಂಗ್ ಅವರ ಬೆಂಗಾವಲು ಪಡೆ ಉಜ್ಜಯಿನಿಯ ಜಿವಾಜಿಗಂಜ್ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ ಬಿಜೆವೈಎಂ ಕಾರ್ಯಕರ್ತರು ಕಪ್ಪು ಬಾವುಟವನ್ನು ತೋರಿಸಲು ಪ್ರಯತ್ನಿಸಿದರು. ಇದು ಘರ್ಷಣೆಗೆ ಕಾರಣವಾಯಿತು.

  • ಉಕ್ರೇನ್‍ನಿಂದ ಮರಳಿದ ವಿದ್ಯಾರ್ಥಿಗಳಿಗೆ ಸೀಟ್ ನೀಡಿ ಶುಲ್ಕವನ್ನು ಸರ್ಕಾರವೇ ಭರಿಸಲಿ: ದಿಗ್ವಿಜಯ್ ಸಿಂಗ್

    ಉಕ್ರೇನ್‍ನಿಂದ ಮರಳಿದ ವಿದ್ಯಾರ್ಥಿಗಳಿಗೆ ಸೀಟ್ ನೀಡಿ ಶುಲ್ಕವನ್ನು ಸರ್ಕಾರವೇ ಭರಿಸಲಿ: ದಿಗ್ವಿಜಯ್ ಸಿಂಗ್

    ಭೋಪಾಲ್: ಯುದ್ಧ ಪೀಡಿತ ಉಕ್ರೇನ್‍ನಿಂದ ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳಿಗೆ ಭಾರತದ ವಿವಿಧ ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡಲು ಪ್ರವೇಶ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಸಂಸದ ದಿಗ್ವಿಜಯ್ ಸಿಂಗ್ ಪತ್ರ ಬರೆದಿದ್ದಾರೆ.

    ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ದಿಗ್ವಿಜಯ್ ಸಿಂಗ್ ಅವರು, ಉಕ್ರೇನ್ ಮೂಲದ ವೈದ್ಯಕೀಯ ಕಾಲೇಜುಗಳಲ್ಲಿ ಓದಲು ಈಗಾಗಲೇ ಈ ವಿದ್ಯಾರ್ಥಿಗಳ ಪೋಷಕರು ಸಾಕಷ್ಟು ಹಣವನ್ನು ಖರ್ಚು ಮಾಡಿದ್ದಾರೆ ಮತ್ತು ಅಂತಹ ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರ ಭರಿಸಬೇಕೆಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‌ ದೇಶವಾಗಿ ಉಳಿಯುವುದೇ ಅನುಮಾನ: ಪುಟಿನ್‌ ನೇರ ಎಚ್ಚರಿಕೆ

    ದೇಶ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಯುಕ್ರೇನ್‍ನಿಂದ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳಿಗೆ ದೇಶದ ವಿವಿಧ ಖಾಸಗಿ ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಎಂಬಿಬಿಎಸ್ ಕೋರ್ಸ್‍ಗಳನ್ನು ಮಾಡಲು ಪ್ರವೇಶ ನೀಡಲು ಕೇಂದ್ರವು ವಿಶೇಷ ಯೋಜನೆಯನ್ನು ರೂಪಿಸಬೇಕು ಎಂದು ತಿಳಿಸಿದ್ದಾರೆ.

    ರಷ್ಯಾದ ದಾಳಿಯಿಂದಾಗಿ ಉಕ್ರೇನ್‍ನ ವಿವಿಧ ವೈದ್ಯಕೀಯ ಕಾಲೇಜುಗಳು ಮತ್ತು ಸಂಸ್ಥೆಗಳು ಈಗಾಗಲೇ ನಾಶವಾಗಿವೆ. ಈ ನಿಟ್ಟಿನಲ್ಲಿ ಕೇಂದ್ರವು ನಿರ್ಧಾರ ತೆಗೆದುಕೊಂಡು ಈ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಅನಿಶ್ಚಿತತೆಯನ್ನು ಹೋಗಲಾಡಿಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಗಟ್ಸ್ ಇಲ್ಲ ಅನ್ನೋರು ಮೊದಲು ಉಕ್ರೇನ್ ಗಡಿವರೆಗೆ ತಲುಪಿ ಧಮ್ ತೋರಿಸಬೇಕಿತ್ತು: ಸುಜಯ್