Tag: ದಿಗ್ವಿಜಯ ಸಿಂಗ್

  • ಸರ್ಕಾರ ಸುಳ್ಳು ಹರಡುತ್ತಿದೆ, ಸರ್ಜಿಕಲ್ ಸ್ಟ್ರೈಕ್‌ ವರದಿ ಎಲ್ಲಿದೆ – ದಿಗ್ವಿಜಯ್ ಸಿಂಗ್ ಪ್ರಶ್ನೆ

    ಸರ್ಕಾರ ಸುಳ್ಳು ಹರಡುತ್ತಿದೆ, ಸರ್ಜಿಕಲ್ ಸ್ಟ್ರೈಕ್‌ ವರದಿ ಎಲ್ಲಿದೆ – ದಿಗ್ವಿಜಯ್ ಸಿಂಗ್ ಪ್ರಶ್ನೆ

    ಶ್ರೀನಗರ: ಬಿಜೆಪಿ (BJP) ನೇತೃತ್ವದ ಕೇಂದ್ರ ಸರ್ಕಾರ ಕೇವಲ ಸುಳ್ಳನ್ನೇ ಬಿತ್ತರಿಸುತ್ತಿದೆ. 2016ರ ಸರ್ಜಿಕಲ್ ಸ್ಟ್ರೈಕ್‌ (Surgical Strike 2016) ಹಾಗೂ 2019ರಲ್ಲಿ ನಡೆದ ಪುಲ್ವಾಮಾ ಭಯೋತ್ಪಾದಕ ದಾಳಿಗಳ (Pulwama Terror Attack) ಬಗ್ಗೆ ಕೇಂದ್ರ ಸರ್ಕಾರ ಈವರೆಗೆ ಸಂಸತ್ತಿನಲ್ಲಿ ವರದಿ ಮಂಡಿಸಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ (Digvijaya Singh) ವಾಗ್ದಾಳಿ ನಡೆಸಿದ್ದಾರೆ.

    ರಾಹುಲ್‌ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ (BJP Government) ಸುಳ್ಳನ್ನೇ ಹರಡುತ್ತಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಶೀಘ್ರದಲ್ಲಿ ತ್ರಿ ಸದಸ್ಯ ಪೀಠದಲ್ಲಿ ಹಿಜಬ್ ಪ್ರಕರಣದ ವಿಚಾರಣೆ ನಡೆಸಲಾಗುವುದು: ಸಿಜೆಐ

    2019ರಲ್ಲಿ ಪಾಕಿಸ್ತಾನ (Pakistan) ಮೂಲದ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆ ನಡೆಸಿದ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಪುಲ್ವಾಮಾದಲ್ಲಿ ಹುತಾತ್ಮರಾದರು. ಆಗ ಸಿಆರ್‌ಪಿಎಫ್ ಅಧಿಕಾರಿಗಳು ಸಿಬ್ಬಂದಿಯನ್ನ ಏರ್‌ಲಿಫ್ಟ್ ಮಾಡಬೇಕೆಂದು ಪ್ರಧಾನಿ ಮೋದಿಗೆ (Narendra Modi) ಮನವಿ ಮಾಡಿದ್ದರು. ಆದ್ರೆ ಮೋದಿ ಅದಕ್ಕೆ ಒಪ್ಪಲಿಲ್ಲ. ಇಂತಹ ಲೋಪ ಹೇಗೆ ಸಂಭವಿಸಿತು? ಈವರೆಗೆ ಪುಲ್ವಾಮಾ ದಾಳಿಯ ಕುರಿತು ಒಂದೇ ಒಂದು ವರದಿಯನ್ನೂ ಸಂಸತ್ತಿನ ಮುಂದೆ ಇಟ್ಟಿಲ್ಲ ಎಂದು ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದರು.

    ಪುಲ್ವಾಮಾ ದಾಳಿ ಬಳಿಕ ಸರ್ಜಿಕಲ್ ಸ್ಟ್ರೈಕ್‌ ನಡೆಸಲಾಗಿದೆ ಎಂದು ಹೇಳಿಕೊಂಡರು. ಆದ್ರೆ ಪುರಾವೆಗಳನ್ನ ತೋರಿಸಲಿಲ್ಲ. ಕೇವಲ ಸುಳ್ಳುಗಳನ್ನೇ ಹರಡಿದರು ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: 21 ದ್ವೀಪಗಳಿಗೆ ಪರಮವೀರ ಚಕ್ರ ಪಡೆದ ಸೈನಿಕರ ಹೆಸರು – ಬೋಸ್ ರಾಷ್ಟ್ರೀಯ ಸ್ಮಾರಕದ ಮಾದರಿ ಅನಾವರಣಗೊಳಿಸಿದ ಮೋದಿ

    ಅಷ್ಟೇ ಅಲ್ಲದೇ 2016ರಲ್ಲಿ ಜಮ್ಮು ಮತ್ತು ಕಾಶ್ಮೀರದ ಉರಿ ಪಟ್ಟಣದಲ್ಲಿರುವ ಸೇನೆಯ 12 ಬ್ರಿಗೇಡ್ ಪ್ರಧಾನ ಕಚೇರಿಗಳ ಮೇಲೆ ನಾಲ್ವರು ಭಯೋತ್ಪಾದಕರು ಗ್ರೇನೆಡ್ ದಾಳಿ ನಡೆಸಿದರು. ಈ ದಾಳಿಯಲ್ಲಿ 18 ಯೋಧರು ಹುತಾತ್ಮರಾದರು. ಉರಿ ಭಯೋತ್ಪಾದಕ ದಾಳಿಯ 10 ದಿನಗಳ ಬಳಿಕ ಸರ್ಜಿಕಲ್ ಸ್ಟ್ರೈಕ್‌ ನಡೆಸಲಾಯಿತು. ಅದರ ವರದಿಯನ್ನೂ ಸಂಸತ್ತಿನಲ್ಲಿ ಮಂಡಿಸಿಲ್ಲ ಎಂದು ಹೇಳಿದ್ದಾರೆ.

    ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದ ರಜೌರಿಯ ಧಂಗ್ರಿ ಮತ್ತು ಜಮ್ಮುವಿನ ನರ್ವಾಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದರು. ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ನಂತರವೂ ಕಾಶ್ಮೀರದ ಕಣಿವೆಯಲ್ಲಿ ಭಯೋತ್ಪಾದನೆ ಇನ್ನೂ ಜೀವಂತವಾಗಿದೆ. 370ನೇ ವಿಧಿ ರದ್ದಾದ ನಂತರ ಇಲ್ಲಿನ ಪರಿಸ್ಥಿತಿ ಬೆಳಕಿಗೆ ಬರುತ್ತಿಲ್ಲ. ಉದ್ದೇಶಿತ ಹತ್ಯೆ ಹಾಗೂ ಬಾಂಬ್ ಸ್ಫೋಟಗಳು ಮತ್ತೆ ಶುರುವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    2022ರ ಸೆಪ್ಟೆಂಬರ್ 27ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭಗೊಂಡ ಭಾರತ್ ಜೋಡೋ ಯಾತ್ರೆಯು ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಚರಿಸುತ್ತಿದೆ. ಇದೇ ತಿಂಗಳ ಜನವರಿ 30ರಂದು ಶ್ರೀನಗರದಲ್ಲಿ ಮುಕ್ತಾಯವಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭಾರತ್ ಜೋಡೋ ಪಾದಯಾತ್ರೆಯಲ್ಲಿ ಮುಗ್ಗರಿಸಿ ಬಿದ್ದ ದಿಗ್ವಿಜಯ್‌ ಸಿಂಗ್

    ಭಾರತ್ ಜೋಡೋ ಪಾದಯಾತ್ರೆಯಲ್ಲಿ ಮುಗ್ಗರಿಸಿ ಬಿದ್ದ ದಿಗ್ವಿಜಯ್‌ ಸಿಂಗ್

    ಭೋಪಾಲ್: ಕಾಂಗ್ರೆಸ್ (Congress) ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ಭಾಗವಹಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್‌ ಸಿಂಗ್ (Digvijaya Singh) ಕೆಳಗೆ ಬಿದ್ದಿದ್ದಾರೆ. ಇನ್ನೂ ಈ ಘಟನೆಗೆ ಕಾರಣ ಬಿಜೆಪಿ (BJP) ಎಂದು ಕಾಂಗ್ರೆಸ್ ಆರೋಪಿಸಿದೆ.

    ಹೌದು, ಭಾರತ್ ಜೋಡೋ ಪಾದಯಾತ್ರೆ ನಡುವೆ ಚಹಾ ವಿರಾಮಕ್ಕೆಂದು ರಸ್ತೆಬದಿಯ ರೆಸ್ಟೋರೆಂಟ್‍ಗೆ ಚಲಿಸುತ್ತಿದ್ದಾಗ ದಿಗ್ವಿಜಯ್‌ ಸಿಂಗ್ ಅವರು ಕೆಳಗೆ ಬಿದ್ದು, ಗಾಯಗೊಂಡಿದ್ದಾರೆ. ಈ ವೇಳೆ ತಕ್ಷಣವೇ ಕಾಂಗ್ರೆಸ್ ಕಾರ್ಯಕರ್ತರು ದಿಗ್ವಿಜಯ್‌ ಸಿಂಗ್ ಅವರ ಕೈ ಹಿಡಿದು ಮೇಲಕ್ಕೆತ್ತಿ ಸಹಾಯ ಮಾಡಿದ್ದಾರೆ.

    ಭಾರತ್ ಜೋಡೋ ಯಾತ್ರೆಯಲ್ಲಿ ಇಲ್ಲಿಯವರೆಗೂ ದಿಗ್ವಿಜಯ್‌ ಸಿಂಗ್ ಅವರು ನಾಲ್ಕು ಬಾರಿ ಕೆಳಗೆ ಬಿದ್ದಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಮಧ್ಯಪ್ರದೇಶದಲ್ಲಿ (Madhya Pradesh) ಬಿದ್ದಿದ್ದಾರೆ. ಇದಕ್ಕೆ ಕಾರಣ ರಾಜ್ಯದಲ್ಲಿ ಹದಗೆಟ್ಟಿ ಹೋಗಿರುವ ರಸ್ತೆಗಳು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮಾಧ್ಯಮ ಉಸ್ತುವಾರಿ ಜೈರಾಮ್ ರಮೇಶ್ (Jairam Ramesh) ಆರೋಪಿಸಿದ್ದಾರೆ. ಇದನ್ನೂ ಓದಿ: ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್‌ನಲ್ಲಿ ಡೀಸೆಲ್‌ ಖಾಲಿ – ದಾರಿ ಮಧ್ಯೆ ಅಸುನೀಗಿದ ಬಡ ಜೀವ

    ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರ ಹಳೆಯ ಹೇಳಿಕೆಯನ್ನು ಉಲ್ಲೇಖಿಸಿ, ಅಮೆರಿಕದ ವಾಷಿಂಗ್ಟನ್ ರಸ್ತೆಗಳಿಗಿಂತ ಸಂಸದರು ನಿರ್ಮಾಣ ಮಾಡಿರುವ ರಸ್ತೆಗಳು ಉತ್ತಮವಾಗಿವೆ ಎಂದು ಹೇಳುತ್ತಾರೆ. ಆದರೆ ಮಧ್ಯಪ್ರದೇಶದ ರಸ್ತೆಗಳು ಕೊಲೆಗಡುಕ ರಸ್ತೆಗಳು ಮತ್ತು ವಾಷಿಂಗ್ಟನ್‍ನಲ್ಲಿರುವ ರಸ್ತೆಗಳಷ್ಟು ಉತ್ತಮವಾಗಿಲ್ಲ. ಈ ಕೆಟ್ಟ ರಸ್ತೆಗಳಿಂದ ಬೀಳುತ್ತಿದ್ದ ನನ್ನನ್ನು ಮೂರು ಬಾರಿ ರಕ್ಷಿಸಿಕೊಂಡಿದ್ದೇನೆ ಎಂದು ವ್ಯಂಗ್ಯವಾಡಿದ್ದಾರೆ.

    ಈ ಘಟನೆಯ ವೀಡಿಯೋಗೆ ಪ್ರತಿಯಾಗಿ ಟ್ವೀಟ್ ಮಾಡಿರುವ ಬಿಜೆಪಿ ನಾಯಕ ನರೇಂದ್ರ ಸಲೂಜಾ (Narendra Saluja) ಅವರು, ರಸ್ತೆಯ ಸ್ಥಿತಿಗಿಂತ ಹೆಚ್ಚಾಗಿ ಕಾಂಗ್ರೆಸ್ ಕಾರ್ಯಕರ್ತರ ನೂಕುನುಗ್ಗಲಿನಿಂದ ದಿಗ್ವಿಜಯ್‌ ಸಿಂಗ್ ಕೆಳಗೆ ಬಿದ್ದಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಕಮಲ ಅರಳಿಸಲು ಪ್ಲಾನ್ – ಸುಮಲತಾ ಅಂಬರೀಶ್ ಆಪ್ತ ಸಚ್ಚಿದಾನಂದ ಬಿಜೆಪಿಗೆ

    Live Tv
    [brid partner=56869869 player=32851 video=960834 autoplay=true]

  • ನೆಹರೂ-ಗಾಂಧಿ ಕುಟುಂಬವಿಲ್ಲದಿದ್ದರೆ ಕಾಂಗ್ರೆಸ್ ಶೂನ್ಯ: ದಿಗ್ವಿಜಯ್‌ ಸಿಂಗ್

    ನೆಹರೂ-ಗಾಂಧಿ ಕುಟುಂಬವಿಲ್ಲದಿದ್ದರೆ ಕಾಂಗ್ರೆಸ್ ಶೂನ್ಯ: ದಿಗ್ವಿಜಯ್‌ ಸಿಂಗ್

    ನವದೆಹಲಿ: ನೆಹರೂ-ಗಾಂಧಿ (Nehru-Gandhi) ಕುಟುಂಬವಿಲ್ಲದಿದ್ದರೆ ಕಾಂಗ್ರೆಸ್ ಪಕ್ಷ (Congress party) ಏನೂ ಅಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್ (Digvijiaya Singh) ಹೇಳಿದ್ದಾರೆ.

    ಕಾಂಗ್ರೆಸ್ ಅಧ್ಯಕ್ಷೀಯ ಸ್ಥಾನ ಚುನಾವಣೆಗೆ ನಾಮಪತ್ರ ಸಲ್ಲಿಸಲು ಒಂದು ದಿನಕ್ಕೂ ಮುಂಚಿತವಾಗಿಯೇ ಮಾಧ್ಯಮದವರೊಂದಿಗೆ ಮಾತನಾಡಿದ ದಿಗ್ವಿಜಯ್‌ ಸಿಂಗ್ ಅವರು ನೆಹರೂ-ಗಾಂಧಿ ಕುಟುಂಬ ಇಲ್ಲದೇ ಹೋಗಿದ್ದರೆ ಕಾಂಗ್ರೆಸ್ ಶೂನ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಮ್ಮ ಸ್ನಾನದ ವೀಡಿಯೋ ಮಾಡಿದ್ದಾರೆ – ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಠಾಣೆ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ

    ಕಾಂಗ್ರೆಸ್ ರಾಜ್ಯ ಘಟಕಗಳಲ್ಲಿನ ಇತ್ತೀಚಿನ ಬಿಕ್ಕಟ್ಟು ಕುರಿತಂತೆ ದಿಗ್ವಿಜಯ ಸಿಂಗ್ ಅವರು, ಈ ಪಕ್ಷದಲ್ಲಿ ಹಲವಾರು ಬಾರಿ ವಿಭಜನೆಗಳಾಗಿವೆ. ಆದರೂ ಶೇ.99ರಷ್ಟು ಕಾಂಗ್ರೆಸ್ಸಿಗರು ಸ್ವಾತಂತ್ರ್ಯಕ್ಕೂ ಮುನ್ನ ಮತ್ತು ಸ್ವಾತಂತ್ರ್ಯದ ನಂತರ ದೇಶಕ್ಕಾಗಿ ಸೇವೆ ಸಲ್ಲಿಸಿದ ಗಾಂಧಿ ಕುಟುಂಬವನ್ನು ಬೆಂಬಲಿಸಿದ್ದಾರೆ.

    ಕಾಂಗ್ರೆಸ್ ಪಕ್ಷದ ಚಹರೆ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ದಿಗ್ವಿಜಯ ಸಿಂಗ್, ನೆಹರೂ-ಗಾಂಧಿ ಕುಟುಂಬ ಇಲ್ಲದಿದ್ದರೆ ಕಾಂಗ್ರೆಸ್‍ಗೆ ಯಾವುದೇ ಗುರುತಿರುತ್ತಿರಲಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: RSSನ ಕೂದಲನ್ನು ಸಹ ಮುಟ್ಟಲು ಸಾಧ್ಯವಿಲ್ಲ – ಸಿದ್ದರಾಮಯ್ಯಗೆ ಬಿ.ವೈ.ರಾಘವೇಂದ್ರ ತಿರುಗೇಟು

    Live Tv
    [brid partner=56869869 player=32851 video=960834 autoplay=true]

  • ರಾಹುಲ್‌ ಗಾಂಧಿಯನ್ನು ಬಲವಂತವಾಗಿ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಮಾಡಲು ಸಾಧ್ಯವಿಲ್ಲ: ದಿಗ್ವಿಜಯ ಸಿಂಗ್‌

    ರಾಹುಲ್‌ ಗಾಂಧಿಯನ್ನು ಬಲವಂತವಾಗಿ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಮಾಡಲು ಸಾಧ್ಯವಿಲ್ಲ: ದಿಗ್ವಿಜಯ ಸಿಂಗ್‌

    ನವದೆಹಲಿ: ರಾಹುಲ್‌ ಗಾಂಧಿ ಅವರನ್ನು ಬಲವಂತವಾಗಿ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಪಕ್ಷದ ನಾಯಕ ದಿಗ್ವಿಜಯ ಸಿಂಗ್‌ ತಿಳಿಸಿದ್ದಾರೆ.

    ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮನಸ್ಸನ್ನು ಬದಲಾಯಿಸುವಂತೆ ರಾಹುಲ್‌ ಗಾಂಧಿ ಅವರಿಗೆ ಮನವಿ ಮಾಡಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ನಾಯಕರು, ರಾಹುಲ್ ಗಾಂಧಿ ಇನ್ನು ಮುಂದೆ ಪಕ್ಷವನ್ನು ಮುನ್ನಡೆಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರವಾದಿ ಅವಹೇಳನ – BJPಯಿಂದ ಶಾಸಕ ರಾಜಾ ಸಿಂಗ್‌ ಅಮಾನತು

    ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನಿಂದಾಗಿ 2019ರಲ್ಲಿ ತ್ಯಜಿಸಿದ ಹುದ್ದೆಗೆ ಮರಳಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. ಸೆಪ್ಟೆಂಬರ್ 20 ರೊಳಗೆ ಕಾಂಗ್ರೆಸ್ ಹೊಸ ಮುಖ್ಯಸ್ಥರನ್ನು ಆಯ್ಕೆ ಮಾಡಬೇಕಾಗಿದೆ. ಈ ವಾರದ ನಂತರ ವೇಳಾಪಟ್ಟಿಯನ್ನು ಪ್ರಕಟಿಸಬಹುದು.

    ಗೆಹ್ಲೋಟ್‌ ಅವರು ಮಾಡಿದ ಮನವಿ ಎಲ್ಲರಿಗೂ ತಿಳಿದಿದೆ. ಅದು ರಾಹುಲ್ ಗಾಂಧಿಯ ಮೇಲೆ ಅವಲಂಬಿತವಾಗಿದೆ. ಅವರನ್ನು ಹೇಗೆ ಬಲವಂತ ಮಾಡುತ್ತೀರಿ? ನಾವು ಎಲ್ಲರನ್ನೂ ಮಂಡಳಿಗೆ ಸೇರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ದಿಗ್ವಿಜಯ್‌ ಸಿಂಗ್‌ ತಿಳಿಸಿದ್ದಾರೆ. ಇದನ್ನೂ ಓದಿ: ಚಿಕ್ಕಪೇಟೆಯಲ್ಲಿ ಆರ್.ವಿ ದೇವರಾಜ್ ಕುಟುಂಬ ಮಾತ್ರ ಸ್ಪರ್ಧಿಸಬೇಕಾ..?- ಕೆಜಿಎಫ್ ಬಾಬು

    ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಕಾರ್ಯಕರ್ತರ ಭಾವನೆಗಳನ್ನು ಗೌರವಿಸಬೇಕು. ಜವಾಬ್ದಾರಿ ವಹಿಸಿಕೊಳ್ಳಲು ಒಪ್ಪಬೇಕು ಎಂದು ಗೆಹ್ಲೋಟ್‌ ಮನವಿ ಮಾಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕಪಾಳಕ್ಕೆ ಹೊಡೆದು ಮಾನಸಿಕ ಅಸ್ವಸ್ಥ ವೃದ್ಧನ ಹತ್ಯೆ – ಬಿಜೆಪಿ ಮುಖಂಡನಿಂದ ಕೃತ್ಯ

    ಕಪಾಳಕ್ಕೆ ಹೊಡೆದು ಮಾನಸಿಕ ಅಸ್ವಸ್ಥ ವೃದ್ಧನ ಹತ್ಯೆ – ಬಿಜೆಪಿ ಮುಖಂಡನಿಂದ ಕೃತ್ಯ

    ಭೂಪಾಲ್: ಮಾನಸಿಕ ಅಸ್ವಸ್ಥರಾಗಿರೋ ಹಿರಿಯ ನಾಗರಿಕರೊಬ್ಬರನ್ನು ತನ್ನ ಗುರುತಿನ ಚೀಟಿ ತೋರಿಸುವಂತೆ ಒತ್ತಾಯಿಸಿ, ಬಿಜೆಪಿ ಮುಖಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಮಾನಸ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ದಿನೇಶ್ ಕುಶ್ವಾಹ (38) ಬಂಧಿತ ಆರೋಪಿ. ಕೊಲೆಯಾದ ಹಿರಿಯ ನಾಗರಿಕ ಭವಾರ್‌ಲಾಲ್ ಜೈನ್ (65) ರಟ್ಲಾಮ್ ಜಿಲ್ಲೆಯ ಸರಸಿ ಗ್ರಾಮದ ನಿವಾಸಿ. ಇವರು ಮೇ 16ರಂದು ಚಿತ್ತೋರ್‌ಗಢದ ಧಾರ್ಮಿಕ ಕಾರ್ಯಕ್ರಮಕ್ಕೆ ಹೋದ ಮೇಲೆ ನಾಪತ್ತೆಯಾಗಿದ್ದರು. ಇವರ ಶವ ಗುರುವಾರ ಸಂಜೆ ನೀಮುಚ್ ಜಿಲ್ಲೆಯ ಮಾನಸ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಪುರ ರಸ್ತೆಯಲ್ಲಿ ಸಿಕ್ಕಿದೆ. ಇದನ್ನೂ ಓದಿ: ಇಂಟರ್‌ವ್ಯೂಗೆಂದು ಹೋದ ಯುವತಿ, ಟ್ಯಾಲಿಕ್ಲಾಸ್‌ಗೆ ಹೋಗ್ತೀನೆಂದಿದ್ದ ಯುವಕ – ಆತ್ಮಹತ್ಯೆಗೂ ಮುನ್ನ ನಡೆದಿದ್ದೇನು?

    CRIME

    ಆರೋಪಿಯು, ಭವಾರ್‌ಲಾಲ್ ಜೈನ್ ಅವರಿಗೆ `ನೀನು ಮೊಹಮ್ಮದ್ ಎಂದು ಹೆಸರಿಸಿ, ಗುರುತಿಗೆ ಆಧಾರ್ ಕಾರ್ಡ್ ತೋರಿಸಲು ಒತ್ತಾಯಿಸಿ ಪದೇ ಪದೇ ಕಪಾಳಮೋಕ್ಷ ಮಾಡಿರುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಹಿಮಾಚಲ ಉಪಸಭಾಧ್ಯಕ್ಷರಿಂದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಆರೋಪ

    ಶವ ಸಂಸ್ಕಾರದ ಬಳಿಕ ಕುಟುಂಬ ಸದಸ್ಯರಿಗೆ ಜೈನ್ ಅವರ ಮೇಲೆ ಉದ್ದೇಶಪೂರ್ವಕ ಹಲ್ಲೆ ನಡೆದಿರುವ ದೃಶ್ಯದ ವೀಡಿಯೋ ಲಭಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಹುಶಃ ಈ ವೀಡಿಯೋ ಮೇ 19ರಂದು ಚಿತ್ರೀಕರಿಸಲಾಗಿದೆ. ತನಿಖೆ ನಡೆಸಿದಾಗ ಆರೋಪಿಯ ಗುರುತು ಸಿಕ್ಕಿ, ಬಂಧಿಸಲಾಗಿದೆ ಎಂದು ಮಾನಸ ಪೊಲೀಸ್ ಠಾಣೆಯ ಅಧಿಕಾರಿ ಕೆ.ಎಲ್.ಡಾಂಗಿ ತಿಳಿಸಿದ್ದಾರೆ.

    KILLING CRIME

    ಆರೋಪಿ ಬಿಜೆಪಿಯ ಕಾರ್ಯಕರ್ತ ಎಂದು ಕಾಂಗ್ರೆಸ್ ಸಂಸದ ದಿಗ್ವಿಜಯ ಸಿಂಗ್ ಟ್ವಿಟ್ಟರ್‌ನಲ್ಲಿ ಆರೋಪಿಸಿದ್ದಾರೆ. ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ ಎಂದು ಕಿಡಿಕಾರಿದ್ದಾರೆ.

  • 40 ವರ್ಷ ಮೇಲ್ಪಟ್ಟ ಮಹಿಳೆಯರು ಮೋದಿಯಿಂದ ಪ್ರಭಾವಿತರಾಗಿದ್ದಾರೆಯೇ ಹೊರತು ಜೀನ್ಸ್ ತೊಟ್ಟ ಹುಡುಗಿಯರಲ್ಲ: ದಿಗ್ವಿಜಯ್ ಸಿಂಗ್

    40 ವರ್ಷ ಮೇಲ್ಪಟ್ಟ ಮಹಿಳೆಯರು ಮೋದಿಯಿಂದ ಪ್ರಭಾವಿತರಾಗಿದ್ದಾರೆಯೇ ಹೊರತು ಜೀನ್ಸ್ ತೊಟ್ಟ ಹುಡುಗಿಯರಲ್ಲ: ದಿಗ್ವಿಜಯ್ ಸಿಂಗ್

    ಭೋಪಾಲ್: 40 ರಿಂದ 50 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಪ್ರಧಾನಿ ನರೇಂದ್ರ ಮೋದಿ ಅವರಿಂದ ಹೆಚ್ಚು ಪ್ರಭಾವಿತರಾಗಿದ್ದಾರೆಯೇ ಹೊರತು, ಜೀನ್ಸ್ ತೊಟ್ಟ ಹುಡುಗಿಯರಲ್ಲ ಎಂದು ಹೇಳುವ ಮೂಲಕ ಮಧ್ಯಪ್ರದೇಶದ ಮಾಜಿ ಸಿಎಂ ಮತ್ತು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದಾರೆ.

    ದಿಗ್ವಿಜಯ ಸಿಂಗ್ ಅವರು ಭೋಪಾಲ್‍ನ ತುಳಸಿ ನಗರದ ನರ್ಮದಾ ಮಂದಿರ ಭವನದಲ್ಲಿ ಒಂದು ದಿನದ ಜನ ಜಾಗರಣ ತರಬೇತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಇದನ್ನೂ ಓದಿ: 348 ಪಾಸಿಟಿವ್, 198 ಮಂದಿ ಡಿಸ್ಚಾರ್ಜ್

    ಮೋದಿಯಿಂದ ಯಾರು ಪ್ರಭಾವಿತರಾಗಿದ್ದಾರೆ ಮತ್ತು ಯಾರು ಅಲ್ಲ ಎಂದು ಪ್ರಶ್ನಿಸಿದರು. ಆಗ ಅವರೇ 40 ರಿಂದ 50 ವರ್ಷ ವಯಸ್ಸಿನ ಮಹಿಳೆಯರು ಪ್ರಧಾನಿ ಮೋದಿಯಿಂದ ಸ್ವಲ್ಪ ಹೆಚ್ಚು ಪ್ರಭಾವಿತರಾಗಿದ್ದಾರೆ. ಆದರೆ ಜೀನ್ಸ್ ಧರಿಸುವ ಮತ್ತು ಮೊಬೈಲ್ ಇಟ್ಟುಕೊಳ್ಳುವ ಹುಡುಗಿಯರ ಮೇಲೆ ಅವರ ಪ್ರಭಾವ ಏನೂ ಬೀರಿಲ್ಲ ಎಂದು ಹೇಳಿದರು.

    https://twitter.com/Rakesh5_/status/1475129047797485568

    ಇದೇ ಸಂದರ್ಭದಲ್ಲಿ ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ಮಾತನಾಡಿದ ಅವರು, ಸಾವರ್ಕರ್ ಗೋಪೂಜೆಯನ್ನು ಬೆಂಬಲಿಸಲಿಲ್ಲ. ಗೋಮಾಂಸ ತಿನ್ನುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಾವರ್ಕರ್ ತಮ್ಮ ಪುಸ್ತಕವೊಂದರಲ್ಲಿ ಬರೆದಿದ್ದಾರೆ. ಅದಕ್ಕೆ ಹಿಂದೂ ಧರ್ಮಕ್ಕೂ ಹಿಂದುತ್ವಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.

  • ಮುಸ್ಲಿಮರಲ್ಲಿ ಸಂತಾನೋತ್ಪತ್ತಿ ದರ ಕಡಿಮೆಯಾಗಿದೆ: ದಿಗ್ವಿಜಯ ಸಿಂಗ್

    ಮುಸ್ಲಿಮರಲ್ಲಿ ಸಂತಾನೋತ್ಪತ್ತಿ ದರ ಕಡಿಮೆಯಾಗಿದೆ: ದಿಗ್ವಿಜಯ ಸಿಂಗ್

    ನವದೆಹಲಿ: ಮುಸ್ಲಿಮರಲ್ಲಿ ಸಂತಾನೋತ್ಪತ್ತಿ ದರ ಕಡಿಮೆಯಾಗಿದೆ. ಮುಸ್ಲಿಮರಲ್ಲಿ ಫಲವತ್ತತೆ ದರವು ಹಿಂದೂಗಳಿಗಿಂತ ಕಡಿಮೆಯಾಗಿದೆ. ಹೀಗಾಗಿ 2028ರ ವೇಳೆಗೆ ಮುಸ್ಲಿಮರಷ್ಟೇ ಹಿಂದೂಗಳ ಜನಸಂಖ್ಯೆ ಇರಲಿದೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

    ಸೆಹೋರೆಯಲ್ಲಿ ನಡೆದ ಕಿಸಾನ್ ಕ್ರಾಂತಿ ಪಾದಯಾತ್ರೆಯಲ್ಲಿ ಮಾತನಾಡಿದ ದಿಗ್ವಿಜಯ ಸಿಂಗ್, ಅಧ್ಯಯನದ ಪ್ರಕಾರ 1951ರಿಂದ ಮುಸ್ಲಿಮರ ಸಂತಾನೋತ್ಪತ್ತಿ ದರವು ಕಡಿಮೆಯಾಗುತ್ತಾ ಬಂದಿದೆ. ಇದೆ ಸಮಯದಲ್ಲಿ ಹಿಂದೂಗಳ ಸಂತಾನೋತ್ಪತ್ತಿ ದರ ಕಡಿಮೆಯಾಗಿಲ್ಲ, ಏರಿಕೆ ಕಂಡಿದೆ. ಸದ್ಯ ಮುಸ್ಲಿಮರಲ್ಲಿ ಸಂತಾನೋತ್ಪತ್ತಿ ದರವು 2.7% ಇದ್ದರೇ ಹಿಂದೂಗಳಲ್ಲಿ 2.3% ಇದೆ ಎಂದರು. ಇದನ್ನೂ ಓದಿ: ದೆಹಲಿ ಜನ್ರಿಗೆ ಗುಡ್ ನ್ಯೂಸ್ – ಅ.1ರಿಂದ ಕಾರ್ಯನಿರ್ವಹಿಸಲಿರುವ ಹೊಂಜು ಗೋಪುರ

    ಈ ಆಧಾರದ ಪ್ರಕಾರ 2028ರ ವೇಳೆಗೆ ಹಿಂದೂಗಳು, ಮುಸ್ಲಿಮರ ಜನಸಂಖ್ಯೆಗೆ ಸಮಾನವಾಗಿರುತ್ತದೆ. ಮೋದಿ ಹಿಂದೂಗಳಿಗೆ ಬೆಂಬಲ ನೀಡಿ ರಾಜಕೀಯ ಮಾಡಿದರೆ, ಒವೈಸಿ ಮುಸ್ಲಿಮರಿಗೆ ಆಪತ್ತು ಇದೆ ಎಂದು ರಾಜಕೀಯ ಮಾಡುತ್ತಿದ್ದಾರೆ. ಆದರೆ 2028ರಲ್ಲಿ ಜನಸಂಖ್ಯೆ ಹಿಂದೂಗಳದ್ದು ಮತ್ತು ಮುಸ್ಲಿಮರದ್ದು ಸ್ಥಿರವಾಗಲಿದೆ. ಬಿಜೆಪಿ ಸುಳ್ಳುಗಳನ್ನೇ ಹೇಳಿಕೊಂಡು ಸರ್ಕಾರ ನಡೆಸುತ್ತಿದೆ. ಬಿಜೆಪಿ ಮತ ಪಡೆಯಲು ಧರ್ಮಗಳನ್ನು ಒಡೆಯುವ ಕೆಲಸಕ್ಕೆ ಮುಂದಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 50,000 ಪರಿಹಾರ ನೀಡಲು NDMA ಶಿಫಾರಸು