Tag: ದಿನಕರ್ ತೂಗುದೀಪ್

  • ದಿನಕರ್ ತೂಗುದೀಪ್ ನಿರ್ದೇಶನದ ‘ರಾಯಲ್’ ಚಿತ್ರದ ಫಸ್ಟ್ ಸಾಂಗ್ ರಿಲೀಸ್

    ದಿನಕರ್ ತೂಗುದೀಪ್ ನಿರ್ದೇಶನದ ‘ರಾಯಲ್’ ಚಿತ್ರದ ಫಸ್ಟ್ ಸಾಂಗ್ ರಿಲೀಸ್

    ‘ರಾಯಲ್’ ಆಗಿ ಕಥೆ ಹೇಳೋಕೆ ನಟ ವಿರಾಟ್ (Viraat) ಮತ್ತು ದಿನಕರ್ ತೂಗುದೀಪ್ (Dinakar Thoogudeepa) ರೆಡಿಯಾಗಿದ್ದಾರೆ. ಸದ್ಯ ಈ ಸಿನಿಮಾದ ಮೊದಲ ಹಾಡು ರಿಲೀಸ್ ಮಾಡುವ ಮೂಲಕ ಪ್ರೇಕ್ಷಕರಿಗೆ ಸರ್ಪ್ರೈಸ್ ನೀಡಿದ್ದಾರೆ. ಲಲನೆಯರ ಜೊತೆ ವಿರಾಟ್ ಬಿಂದಾಸ್ ಆಗಿ ಹೆಜ್ಜೆ ಹಾಕಿದ್ದಾರೆ.

    ‘ನಾನೇ ಕೃಷ್ಣ, ನಾನೇ ಶ್ಯಾಮ’ ಎಂಬ ಹಾಡು ರಿಲೀಸ್ ಆಗಿದೆ. ಈ ಸಾಂಗ್ ಅದ್ಭುತವಾಗಿ ಮೂಡಿ ಬಂದಿದೆ. ವಿ.ನಾಗೇಂದ್ರ ಪ್ರಸಾದ್ ಬರೆದ ಸಾಹಿತ್ಯಕ್ಕೆ, ಸಂಜಿತ್ ಹೆಗ್ಡೆ ಧ್ವನಿಯಾಗಿದ್ದಾರೆ. ಈ ಕಲರ್‌ಫುಲ್ ಹಾಡಿಗೆ ವಿರಾಟ್ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ಇದನ್ನೂ ಓದಿ:ಕಮಲ್ ಹಾಸನ್ ಬದಲು ವಿಜಯ್ ಸೇತುಪತಿ ಎಂಟ್ರಿ

    ಈ ಚಿತ್ರದಲ್ಲಿ ವಿರಾಟ್ ಪಕ್ಕಾ ಮಾಸ್ & ಎನರ್ಜಿಟಿಕ್ ಹೀರೋ ಆಗಿ ಅಬ್ಬರಿಸೋಕೆ ರೆಡಿಯಾಗಿದ್ದಾರೆ. ‘ಕಿಸ್’ ಹೀರೋ ವಿರಾಟ್‌ಗೆ ನವಗ್ರಹ, ಜೊತೆ ಜೊತೆಯಲಿ, ಸಾರಥಿ ಸಿನಿಮಾಗಳ ನಿರ್ದೇಶಕ ದಿನಕರ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಪಕ್ಕಾ ಆ್ಯಕ್ಷನ್ ಕಮ್‌ ರೊಮ್ಯಾಂಟಿಕ್‌ ಸಿನಿಮಾ ಆಗಿದೆ.

    ಇನ್ನೂ ವಿರಾಟ್‌ಗೆ ನಾಯಕಿಯಾಗಿ ಸಲಗ ಸುಂದರಿ ಸಂಜನಾ ಆನಂದ್ (Sanjana Anand) ಜೋಡಿಯಾಗಿದ್ದಾರೆ. ಚಿತ್ರದಲ್ಲಿ ರಘು ಮುಖರ್ಜಿ, ಛಾಯಾ ಸಿಂಗ್, ಅಚ್ಯುತ್ ಕುಮಾರ್, ರಂಗಾಯಣ ರಘು, ಪ್ರಮೋದ್ ಶೆಟ್ಟಿ, ಅಭಿಲಾಷ್ ಸೇರಿದಂತೆ ಅನೇಕರು ನಟಿಸಿದ್ದಾರೆ.

  • ಡಿಕೆಶಿ ಭೇಟಿಯಾದ ವಿಜಯಲಕ್ಷ್ಮಿ ದರ್ಶನ್

    ಡಿಕೆಶಿ ಭೇಟಿಯಾದ ವಿಜಯಲಕ್ಷ್ಮಿ ದರ್ಶನ್

    ರೇಣುಕಾಸ್ವಾಮಿ ಕೊಲೆ (Renukaswamy Murder Case) ವಿಚಾರವಾಗಿ ದರ್ಶನ್ (Darshan) ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣವಾಗಿ ಮಾತನಾಡಲು ಇದೀಗ ಸದಾಶಿವನಗರದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K. Shivakumar) ನಿವಾಸಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ಭೇಟಿ ನೀಡಿದ್ದಾರೆ.

    ದರ್ಶನ್ ಪ್ರಕರಣದ ಕುರಿತು ವಿಜಯಲಕ್ಷ್ಮಿ, ದಿನಕರ್ ತೂಗುದೀಪ್, ನಿರ್ದೇಶಕ ಪ್ರೇಮ್ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಅನ್ಯಾಯ ಆಗಿದ್ಯಾ? ಹೇಗೆ ಎಂದು ಡಿ.ಕೆ.ಶಿವಕುಮಾರ್ ವಿಚಾರಿಸಿದ್ದಾರೆ. ಇದನ್ನೂ ಓದಿ:ನಟನೆ ಚೆನ್ನಾಗಿದೆ ಅಂತಾರೆ ಆದರೆ ಸಿನಿಮಾ ಆಫರ್ ಕೊಡಲ್ಲ: ನೇಹಾ ಧೂಪಿಯಾ ಬೇಸರ

    ಅಂದಹಾಗೆ, ನಿನ್ನೆ (ಜು.23) ರಾಮನಗರದ ಕಾರ್ಯಕ್ರಮವೊಂದರಲ್ಲಿ ಡಿ.ಕೆ.ಶಿವಕುಮಾರ್ ಅವರು ಭಾಗಿಯಾದ್ದರು. ಅದರ ಬಗ್ಗೆ ನಾಳೆ ಮಾತನಾಡ್ತೀನಿ. ದರ್ಶನ್ ಅವರ ಪತ್ನಿ ಭೇಟಿ ಮಾಡೋಕೆ ಸಮಯ ಕೇಳಿದ್ದಾರೆ. ನಾಳೆ ಬೆಳಗ್ಗೆ ಅವರನ್ನ ಭೇಟಿ ಮಾಡ್ತೇನೆ ಎಂದು ಅಭಿಮಾನಿಗಳಿಗೆ ಭರವಸೆ ನೀಡಿದರು.

    ಏನಾದರೂ ಅನ್ಯಾಯ ಆಗಿದ್ರೆ ಸರಿಪಡಿಸಲು ಪ್ರಯತ್ನ ಮಾಡ್ತೇನೆ. ಆದರೆ ನಾವು ಕಾನೂನಿಗೆ ಗೌರವ ಕೊಡಬೇಕು. ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಯಾರಿಗೇ ಆಗಿದ್ದರೂ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ. ನೊಂದವರೆಲ್ಲರಿಗೂ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದು ಡಿಕೆಶಿ ಮಾತನಾಡಿದ್ದರು.

  • ಶಿವರಾತ್ರಿಗೆ ಶಿವಣ್ಣ ನಟನೆಯ ಹೊಸ ಚಿತ್ರದ ಟೈಟಲ್ ಅನಾವರಣ

    ಶಿವರಾತ್ರಿಗೆ ಶಿವಣ್ಣ ನಟನೆಯ ಹೊಸ ಚಿತ್ರದ ಟೈಟಲ್ ಅನಾವರಣ

    ದಿನಕರ್ ತೂಗುದೀಪ (Dinkar Thoogudeep) ಅವರ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivaraj Kumar) ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿತ್ತು. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಗೆ ಈ ನೂತನ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ತಿಳಿಸಿದೆ‌.

    ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ.  ಮಹಾ ಶಿವರಾತ್ರಿ ಹಬ್ಬದ ವೇಳೆಗೆ ಶೀರ್ಷಿಕೆ ಬಿಡುಗಡೆಯಾಗಲಿದೆ. ಕುತೂಹಲ ಮೂಡಿಸುವಂತಹ ಶೀರ್ಷಿಕೆಯನ್ನು (Title) ಆಯ್ಕೆ ಮಾಡಿಕೊಳ್ಳಲಾಗಿದೆಯಂತೆ.

    ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹಾಗೂ ದಿನಕರ್ ತೂಗುದೀಪ ಅವರ ಕಾಂಬಿನೇಶನ್ ನಲ್ಲಿ ಮೂಡಿಬರಲಿರುವ ಈ ಚಿತ್ರದ ಕುರಿತು ಅಭಿಮಾನಿ ವಲಯದಲ್ಲಿ ಹಾಗೂ ಚಿತ್ರೋದ್ಯಮದಲ್ಲಿ ಸಾಕಷ್ಟು ನಿರೀಕ್ಷೆಯಿದೆ. ಯಾವ ರೀತಿಯ ಕಥೆಯನ್ನು ನಿರ್ದೇಶಕರು ಹೇಳಬಹುದು ಎನ್ನುವ ಕುತೂಹಲವೂ ಇದೆ.

  • ಶಿವಣ್ಣ ಚಿತ್ರಕ್ಕೆ ದಿನಕರ್ ತೂಗುದೀಪ್ ಡೈರೆಕ್ಷನ್

    ಶಿವಣ್ಣ ಚಿತ್ರಕ್ಕೆ ದಿನಕರ್ ತೂಗುದೀಪ್ ಡೈರೆಕ್ಷನ್

    ತ್ಸಾಹದ ಚಿಲುಮೆಯಂತಿರುವ ಖ್ಯಾತ ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivaraj Kumar) ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿದೆ. ಹೆಸರಾಂತ ನಿರ್ದೇಶಕ ದಿನಕರ್ ತೂಗುದೀಪ (Dinkar Thoogudeep) ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

    ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪಕ್ಕಾ ಮಾಸ್ ಹಾಗೂ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ. ಪ್ರೀ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗುತ್ತಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಆಯ್ಕೆ ನಡೆಯುತ್ತಿದೆ. ಮಹಾ ಶಿವರಾತ್ರಿ ಹಬ್ಬದ ವೇಳೆಗೆ ಶೀರ್ಷಿಕೆ ಬಿಡುಗಡೆಯಾಗಲಿದೆ.

     

    ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹಾಗೂ ದಿನಕರ್ ತೂಗುದೀಪ ಅವರ ಕಾಂಬಿನೇಶನ್ ನಲ್ಲಿ ಮೂಡಿಬರಲಿರುವ ಈ ಚಿತ್ರದ ಕುರಿತು ಅಭಿಮಾನಿ ವಲಯದಲ್ಲಿ ಹಾಗೂ ಚಿತ್ರೋದ್ಯಮದಲ್ಲಿ ಸಾಕಷ್ಟು ನಿರೀಕ್ಷೆಯಿದೆ.

  • ದಿನಕರ್ ತೂಗುದೀಪ್ ನಿರ್ದೇಶನದಲ್ಲಿ ʻರಾಯಲ್ʼ ಆಗಿ ಮಿಂಚಲು ವಿರಾಟ್ ರೆಡಿ

    ದಿನಕರ್ ತೂಗುದೀಪ್ ನಿರ್ದೇಶನದಲ್ಲಿ ʻರಾಯಲ್ʼ ಆಗಿ ಮಿಂಚಲು ವಿರಾಟ್ ರೆಡಿ

    `ಕಿಸ್’ ಸಿನಿಮಾ (Kiss Film) ಮೂಲಕ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗಮನ ಸೆಳೆದ ವಿರಾಟ್ (Actor Viraat) ಇದೀಗ ಎರಡನೇ ಸಿನಿಮಾ ಬಗ್ಗೆ ಅಪ್‌ಡೇಟ್ ನೀಡಿದ್ದಾರೆ. ಖ್ಯಾತ ನಿರ್ದೇಶಕ ದಿನಕರ್ ತೂಗುದೀಪ್ (Dinakar Thoogudeepa) ನಿರ್ದೇಶನದಲ್ಲಿ ವಿರಾಟ್ ಹೊಸ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದ ಟೈಟಲ್ ಕೂಡ ರಿವೀಲ್ ಆಗಿದೆ.

    ಎ.ಪಿ ಅರ್ಜುನ್‌ ನಿರ್ದೇಶನದ `ಕಿಸ್’ ಚಿತ್ರದಲ್ಲಿ ವಿರಾಟ್- ಶ್ರೀಲೀಲಾ (Sreeleela) ಜೋಡಿಯಾಗಿ ಸಿನಿಪ್ರೇಕ್ಷಕರ ಮನಗೆದ್ದಿದ್ದರು. ಈಗ `ಸಲಗ’ ಬ್ಯೂಟಿ ಸಂಜನಾ ಆನಂದ್ (Sanjana Anand) ಜೊತೆ ವಿರಾಟ್ `ರಾಯಲ್’ (Royal) ಆಗಿ ಮಿಂಚಲು ಬರುತ್ತಿದ್ದಾರೆ. ಚಿತ್ರದ ಟೈಟಲ್ ಮತ್ತು ಪೋಸ್ಟರ್ ಲುಕ್ ಮೂಲಕ ನಟ ಹೈಪ್ ಕ್ರಿಯೆಟ್ ಮಾಡಿದ್ದಾರೆ. ಇದನ್ನೂ ಓದಿ: ಸಿದ್-ಕಿಯಾರಾ ಮದುವೆ ಜೀವನದ ಬಗ್ಗೆ ಭವಿಷ್ಯ ನುಡಿದ ಜ್ಯೋತಿಷಿ

    ದಿನಕರ್ ತೂಗುದೀಪ್ ನಿರ್ದೇಶನದ, ಜಯಣ್ಣ ಫಿಲ್ಮ್ಸ್‌ ನಿರ್ಮಾಣದ ಹೊಸ ಸಿನಿಮಾಗೆ `ರಾಯಲ್’ ಎಂದು ಹೆಸರಿಡಲಾಗಿದೆ. ಈ ಚಿತ್ರದ ಟೈಟಲ್ ಅನ್ನ ಅಶ್ವಿನಿ ಪುನೀತ್ ರಾಜ್‌ಕುಮಾರ್ (Puneeth Rajkumar) ಮತ್ತು ಹೊಂಬಾಳೆ ಸಂಸ್ಥೆಯ (Hombale Films) ರೂವಾರಿ ವಿಜಯ್ ಕಿರಗಂದೂರು ಅವರು ಟೈಟಲ್ ಪೋಸ್ಟರ್ ಲಾಂಚ್ ಮಾಡಿದ್ದಾರೆ. ಈ ಮೂಲಕ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.

    `ರಾಯಲ್’ ಆಗಿ ಜೀವನ ಮಾಡಬೇಕು ಎಂಬುದು ಪ್ರತಿಯೊಬ್ಬರ ಕನಸು. ಅದರಂತೆಯೇ ಈ ಚಿತ್ರದ ನಾಯಕ ವಿರಾಟ್ ಕೂಡ ಅಂದುಕೊಂಡಿರುತ್ತಾರೆ. ಮುಂದೆ ಹೇಗೆಲ್ಲಾ ತಿರುವು ಬರಲಿದೆ ಎಂಬುದನ್ನ ಬೆಳ್ಳಿಪರದೆಯಲ್ಲಿ ತೋರಿಸಲು ನಿರ್ದೇಶಕರು ಹೊರಟಿದ್ದಾರೆ.

    ಇನ್ನೂ `ರಾಯಲ್’ ಚಿತ್ರ ಪಕ್ಕಾ ಕರ್ಮರ್ಷಿಯಲ್ ಸಿನಿಮಾವಾಗಿದ್ದು, ಲವ್, ಆ್ಯಕ್ಷನ್, ಸೆಂಟಿಮೆಂಟ್, ಎಮೋಷನ್ಸ್ ಎಲ್ಲವನ್ನೂ ಒಳಗೊಂಡಿದೆ. ಮೊದಲ ಬಾರಿಗೆ ವಿರಾಟ್- ಸಂಜನಾ ಜೋಡಿ ತೆರೆಯ ಒಟ್ಟಿಗೆ ಕಾಣಿಸಿಕೊಳ್ತಿದ್ದು, ಚಿತ್ರದ 80% ರಷ್ಟು ಚಿತ್ರೀಕರಣವಾಗಿದೆ. ಈ ವರ್ಷದ ಅಂತ್ಯದಲ್ಲಿ ತೆರೆಗೆ ಅಬ್ಬರಿಸಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶ್ರೀನಿವಾಸ್‍ಗೂ ದರ್ಶನ್‍ಗೂ ಯಾವುದೇ ಸಂಬಂಧವಿಲ್ಲ, ವ್ಯವಹಾರ ಮಾಡದಿರಿ – ಡಿ ಕಂಪನಿ

    ಶ್ರೀನಿವಾಸ್‍ಗೂ ದರ್ಶನ್‍ಗೂ ಯಾವುದೇ ಸಂಬಂಧವಿಲ್ಲ, ವ್ಯವಹಾರ ಮಾಡದಿರಿ – ಡಿ ಕಂಪನಿ

    ಬೆಂಗಳೂರು: ದರ್ಶನ್ ತೂಗುದೀಪ್ ಬಳಗದಿಂದ ಮತ್ತೊಬ್ಬ ವ್ಯಕ್ತಿ ಹೊರ ಬಿದ್ದಿದ್ದು, ಈ ಕುರಿತು ಡಿ ಕಂಪನಿ ಫೇಸ್‍ಬುಕ್ ಮತ್ತು ಟ್ವಿಟ್ಟರ್‍ನಲ್ಲಿ ತಿಳಿಸಿದೆ.

    ನಮ್ಮ ಡಿ ಬಾಸ್ ಬಳಿ ಕೆಲಸ ನಿರ್ವಹಿಸುತ್ತಿದ್ದ ಶ್ರೀನಿವಾಸ್ (ಸೀನ) ರವರನ್ನು ತೂಗುದೀಪ ಪರಿವಾರ ಹಾಗೂ ಅಭಿಮಾನಿ ಸಂಘದ ವ್ಯಾವಹಾರಿಕ ಚಟುವಟಿಕೆಗಳಿಂದ ದೂರ ಸರಿಸಲಾಗಿದೆ. ಅವರ ಜೊತೆ ಡಿ ಬಾಸ್ ರವರ ಹೆಸರಲ್ಲಿ ಯಾವುದೇ ವ್ಯವಹಾರ ಮಾಡದಿರಿ ಎಂದು ಡಿ ಕಂಪನಿ ಹೇಳಿದೆ.

    ಇನ್ನು ಮುಂದೆ ದರ್ಶನ್ ಮತ್ತು ತೂಗುದೀಪ ಕಂಪನಿ ವ್ಯವಹಾರಗಳಿಗೂ ಶ್ರೀನಿವಾಸ್‍ಗೂ ಯಾವುದೇ ಸಂಬಂಧ ಇಲ್ಲ. ಯಾವುದೇ ಕಾರಣಕ್ಕೂ ದರ್ಶನ್ ವ್ಯವಹಾರಗಳಿಗೆ ಸಂಬಂಧಿಸಿದಂತೆ ಶ್ರೀನಿವಾಸ್ ಅವರನ್ನು ಸಂಪರ್ಕಿಸಬಾರದು ಎಂದು ಪೇಜ್‍ನಲ್ಲಿ ತಿಳಿಸಲಾಗಿದೆ.

    ಅಭಿಮಾನಿಗಳು ಯಾವ ಕಾರಣಕ್ಕೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದ ಕಮೆಂಟ್ ಮಾಡಿ ಪ್ರಶ್ನಿಸುತ್ತಿದ್ದಾರೆ. ಇತ್ತೀಚೆಗೆ ಶ್ರೀನಿವಾಸ್ ಒಂದು ಹೋಟೆಲ್ ಆರಂಭಿಸಿದ್ದರು. ಅಷ್ಟು ಬಿಟ್ಟರೆ ಯಾವ ಕಾರಣಕ್ಕೆ ಶ್ರೀನಿವಾಸ್ ವಿರುದ್ಧ ಈ ನಿರ್ಧಾರ ಕೈಗೊಳ್ಳಲಾಗಿದೆ ತಿಳಿದು ಬಂದಿಲ್ಲ. ಕಳೆದ ವರ್ಷ ಮಲ್ಲಿಕಾರ್ಜುನ್ ಅಲಿಯಾಸ್ ಮಲ್ಲಿ ಕೂಡ ಹಣಕಾಸು ವ್ಯವಹಾರದ ವಿಚಾರವಾಗಿ ದಚ್ಚು ಕ್ಯಾಂಪ್‍ನಿಂದ ಹೊರ ಬಿದ್ದಿದ್ದರು.

    ಈ ಕುರಿತು ಕೇವಲ ಡಿ ಕಂಪನಿಯೂ ತನ್ನ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ತಿಳಿಸಿದ್ದು, ನಟ ದರ್ಶನ್ ತೂಗುದೀಪ್ ಆಗಲಿ ಅಥವಾ ಅವರ ಸಹೋದರ ದಿನಕರ್ ತೂಗುದೀಪ್ ಆಗಲಿ ಈ ಕುರಿತು ಅಧಿಕೃತವಾಗಿ ಸ್ಪಷ್ಟಪಡಿಸಿಲ್ಲ.