Tag: ದಿನಸಿ

  • ದರ್ಶನ್ ಹುಟ್ಟುಹಬ್ಬಕ್ಕೆ ಫ್ಯಾನ್ಸ್ ಕೊಟ್ಟ ದಿನಸಿ ಸಾಮಾಗ್ರಿ ಪೌರಕಾರ್ಮಿಕರಿಗೆ ವಿತರಣೆ

    ದರ್ಶನ್ ಹುಟ್ಟುಹಬ್ಬಕ್ಕೆ ಫ್ಯಾನ್ಸ್ ಕೊಟ್ಟ ದಿನಸಿ ಸಾಮಾಗ್ರಿ ಪೌರಕಾರ್ಮಿಕರಿಗೆ ವಿತರಣೆ

    ಮ್ಮ ಹುಟ್ಟುಹಬ್ಬಕ್ಕೆ (Birthday) ಕೇಕ್, ಹಾರ, ತುರಾಯಿ ತರದೇ ದಿನಸಿ (Grocery) ಸಾಮಾಗ್ರಿಗಳನ್ನು ನೀಡುವಂತೆ ದರ್ಶನ್ (Darshan) ಅಭಿಮಾನಿಗಳಿಗೆ ಕರೆಕೊಟ್ಟಿದ್ದರು. ಅದರಂತೆ ಅಭಿಮಾನಿಗಳು ಸಾಕಷ್ಟು ಪ್ರಮಾಣದಲ್ಲಿ ದಿನಸಿ ನೀಡಿದ್ದರು. ಆ ದಿನಸಿಗಳನ್ನು ಇಂದು ಪೌರಕಾರ್ಮಿಕರಿಗೆ (Civic workers) ವಿತರಣೆ ಮಾಡಲಾಗಿದೆ.

    ಪ್ರತಿ ವರ್ಷವೂ ದಿನಸಿಗಳನ್ನು ತಂದುಕೊಂಡುವಂತೆ ದರ್ಶನ್ ಮನವಿ ಮಾಡುತ್ತಾರೆ. ಅಕ್ಕಿ, ಬೆಳೆ ಸೇರಿದಂತೆ ಅಭಿಮಾನಿಗಳು ಕೊಟ್ಟ ದಿನಸಿಗಳನ್ನು ಕೆಲ ವರ್ಷಗಳ ಕಾಲ ಸಿದ್ಧಗಂಗಾ ಮಠಕ್ಕೆ ನೀಡಿದ್ದರು. ಜೊತೆಗೆ ಅನಾಥಾಶ್ರಮಗಳಿಗೂ ಕಳುಹಿಸಿಕೊಟ್ಟಿದ್ದರು. ಈ ಬಾರಿ ಪೌರಕಾರ್ಮಿಕರ ಹಂಚಿದ್ದಾರೆ.

    ಈ ಬಾರಿ ದರ್ಶನ್ ಹುಟ್ಟು ಹಬ್ಬ ವಿಶೇಷವಾಗಿತ್ತು. ಫೆ.16ರಂದು ಅಭಿಮಾನಿಗಳ ಸಮ್ಮುಖದಲ್ಲಿ ಮನೆ ಮುಂದೆ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದರೆ, 17ನೇ ತಾರೀಖು ಶ್ರೀರಂಗಪಟ್ಟಣದಲ್ಲಿ ಅದ್ಧೂರಿಯಾಗಿ ಬೆಳ್ಳಿ ಪರ್ವ ಕಾರ್ಯಕಮ ನಡೆಯಿತು. ದರ್ಶನ್ ಸಿನಿಮಾ ರಂಗಕ್ಕೆ ಬಂದು 15 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜನೆಯಾಗಿದೆ.

     

    ಈ ನಡುವೆ ಮತ್ತೊಂದು ಸಂಭ್ರಮದ ವಿಚಾರವೆಂದರೆ, ದರ್ಶನ್ ನಟನೆಯ ಕಾಟೇರ ಸಿನಿಮಾ ನಿನ್ನೆಗೆ 50 ದಿವಸಗಳನ್ನು ಪೂರೈಸಿದೆ. ನಿನ್ನೆಯೂ ಆ ಸಂಭ್ರಮವನ್ನು ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ನಡೆದಿದೆ.

  • ಚಿಕ್ಕಮಗಳೂರು, ಬೀದರ್‌ನಲ್ಲಿ ಭಾರೀ ಮಳೆ – ಜನ ಜೀವನ ಅಸ್ತವ್ಯಸ್ತ

    ಚಿಕ್ಕಮಗಳೂರು, ಬೀದರ್‌ನಲ್ಲಿ ಭಾರೀ ಮಳೆ – ಜನ ಜೀವನ ಅಸ್ತವ್ಯಸ್ತ

    – ಮಲೆನಾಡಿನಲ್ಲಿ 10 ದಿನಗಳ ನಂತರ ಮತ್ತೆ ವರುಣನ ಅಬ್ಬರ

    ಚಿಕ್ಕಮಗಳೂರು/ಬೀದರ್: ಶುಕ್ರವಾರ ಚಿಕ್ಕಮಗಳೂರು ಮತ್ತು ಬೀದರ್ ಜಿಲ್ಲೆಯ ಔರಾದ್ ನಲ್ಲಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೀದರ್ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ಜಾಗರಣೆ ಮಾಡುವಂತಾಗಿತ್ತು. ಇತ್ತ ಚಿಕ್ಕಮಗಳೂರು ಜಿಲ್ಲೆಯ ಜನರಲ್ಲಿ ಸಂತಸದ ಜೊತೆ ಆತಂಕ ಸಹ ಹೆಚ್ಚಾಗಿದೆ.

    ಮುಂಗಾರು ಮಳೆ ಆಶಾದಾಯಕವಾಗಿ ಆರಂಭವಾಗಿದ್ದರೂ ಕೂಡ ಕಳೆದ ಹತ್ತು ದಿನಗಳಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಸಂಪೂರ್ಣ ಕ್ಷೀಣಿಸಿತ್ತು. ಆದರೆ, ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಡೀ ದಿನ ಆಗಾಗ್ಗೆ ಭಾರೀ ಮಳೆ ಸುರಿದಿದೆ.

    ಮಲೆನಾಡಿಗರಿಗೆ ಸಂತಸದ ಜೊತೆ ಆತಂಕ:
    ಕಡುಗಟ್ಟಿದ ಮೋಡ, ಭಾರೀ ಗಾಳಿಯಿಂದ ಜಿಲ್ಲೆಯ ಮಲೆನಾಡು ಭಾಗಗಳಾದ ಮೂಡಿಗೆರೆ, ಕಳಸ, ಎನ್.ಆರ್.ಪುರ, ಶೃಂಗೇರಿ, ಕೊಪ್ಪ ಹಾಗೂ ಬಾಳೆಹೊನ್ನೂರು ಭಾಗದಲ್ಲಿ ಮಳೆಯಾಗಿದೆ. ಆದರೆ, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬೈರಾಪುರ, ಚಾರ್ಮಾಡಿಘಾಟ್, ಬಾಳೂರು, ಬಣಕಲ್ ಭಾಗದಲ್ಲಿ ಭಾರೀ ಮಳೆ ಸುರಿದಿದೆ. ಇದರಿಂದ ಮಲೆನಾಡಿಗರು ಮತ್ತೆ ಆತಂಕಗೊಂಡಿದ್ದಾರೆ. ಜಿಲ್ಲೆಗೆ ಈ ಮಳೆ ಅಗತ್ಯವಿತ್ತು. ಬಯಲುಸೀಮೆ ಹಾಗೂ ಮಲೆನಾಡು ಭಾಗಕ್ಕೂ ಮಳೆ ತೀರಾ ಅವಶ್ಯಕವಿತ್ತು. ಮಲೆನಾಡು ಭಾಗದಲ್ಲಿ ಭತ್ತ ಬೆಳೆದಿದ್ದ ರೈತರು ಮಳೆಗಾಗಿ ಆಕಾಶ ನೋಡುತ್ತಿದ್ದರು. ಭತ್ತದ ಸಿಸಿ ಮಡಿ ಬಿಸಿಲಿಗೆ ಬಾಡುವಂತಾಗಿತ್ತು. ಆದರೆ, ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಡೀ ದಿನ ಆಗಾಗ್ಗೆ ಸಮೃದ್ಧ ಮಳೆಯಾಗಿರೋದು ಕಾಫಿ ಬೆಳೆಗಾರರರು ಹಾಗೂ ರೈತರ ಮೊಗದಲ್ಲಿ ಮಂದಹಾಸ ತರಿಸಿದೆ.

    ಮಳೆ ಮಲೆನಾಡಿಗರಿಗೆ ಸಂತಸ ತಂದರೂ ಅದಕ್ಕಿಂತ ಹೆಚ್ಚು ಆತಂಕ ತರುತ್ತಿದೆ. ಏಕೆಂದರೆ, ಕಳೆದ ಎರಡು ವರ್ಷದಲ್ಲಿ ಅಳಿದುಳಿದ ಬದುಕು ಎಲ್ಲಿ ಈ ಬಾರಿ ಕೊಚ್ಚಿ ಹೋಗುತ್ತೋ ಎಂದು ಮಲೆನಾಡಿಗರು ಮಳೆ ಬಂದರೆ ಖುಷಿಯ ಮಧ್ಯೆಯೂ ಕಂಗಾಲಾಗುತ್ತಿದ್ದಾರೆ. ಕಳೆದ ಎರಡು ವರ್ಷದ ಹಿಂದೆ, ಮಳೆಗಾಲದಲ್ಲಿ ಆದ ಅನಾಹುತಕ್ಕೆ ಪರಿಹಾರ ಸಿಕ್ಕಿಲ್ಲ. ಈ ವರ್ಷ ಮಳೆರಾಯ ಏನೇನು ಅವಾಂತರ ಸೃಷ್ಟಿಸುತ್ತಾನೋ, ಸರ್ಕಾರ ಸೂಕ್ತ ಪರಿಹಾರ ಕೊಡುತ್ತೋ ಅಥವಾ ಆಶ್ವಾಸನೆಯಲ್ಲೇ ಕಾಲ ಕಳೆಯುತ್ತೋ ಎಂದು ಜನ ಮಳೆ-ಸರ್ಕಾರ ಎರಡರ ಬಗ್ಗೆಯೂ ಚಿಂತೆಗೀಡಾಗಿದ್ದಾರೆ. 2019ರಲ್ಲಿ ಮೂಡಿಗೆರೆ ತಾಲೂಕಿನ ಮಲೆಮನೆ ಗ್ರಾಮದ 6 ಕುಟುಂಬಗಳು ಸಂಪೂರ್ಣ ಕೊಚ್ಚಿ ಹೋಗಿದ್ದವು. ಅಲ್ಲಿಯ ಜನರಿಗೆ ಇಂದಿಗೂ ಸೂಕ್ತ ಹಾಗೂ ಸಮರ್ಪಕವಾದ ಪರಿಹಾರ ಸಿಕ್ಕಿಲ್ಲ. ಹಾಗಾಗಿ, ಮಲೆನಾಡಿಗರಿಗೆ ಮಳೆ ಅಂದರೆ ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.

    ಜಮೀನು, ಮನೆಗೆ ನುಗ್ಗಿದ ನೀರು:
    ಬೀದರ್‌ನಲ್ಲಿ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಔರಾದ್ ತಾಲೂಕಿನಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಔರಾದ್ ತಾಲೂಕಿನ ಬೋರ್ಗಿ ಗ್ರಾಮದ ಜಗದೇವಿ ಎಂಬವರ ಮನೆಗೆ ನೀರು ನುಗ್ಗಿ ಮನೆಯಲ್ಲಿದ್ದ ಸಾವಿರಾರು ಮೌಲ್ಯದ ದವಸ ಧಾನ್ಯಗಳು ನೀರು ಪಾಲಾಗಿವೆ.

    ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಡರಾತ್ರಿ ಮನೆಗೆ ನೀರು ನುಗ್ಗಿ ನೀರು ಹೊರ ಹಾಕಲು ಕುಟುಂಬಸ್ಥರು ರಾತ್ರಿಯಿಡಿ ಹರಸಾಹಸ ಪಟ್ಟಿದ್ದಾರೆ. ಜೊತೆಗೆ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಔರಾದ್ ತಾಲೂಕಿನ ಜಮೀನುಗಳು ಜಲಾವೃತವಾಗಿ ಲಕ್ಷಾಂತರ ಮೌಲ್ಯದ ಬೆಳೆ ಹಾನಿಯಾಗಿವೆ. ಅಲ್ಲದೇ ಸುರಿದ ಧಾರಾಕಾರ ಮಳೆಗೆ ಜೋಜನಾ ಬಳಿ ಇರುವ ಹಳ್ಳ ತುಂಬಿ ಜೋಜನಾ ಟು ಲಿಂಗದ ಹಳ್ಳಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಂದು ಕೂಡಾ ದಟ್ಟ ಮೋಡ ಕವಿದ ವಾತಾವರಣವಿದ್ದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಹೀಗಾಗಿ ಜಿಲ್ಲೆಯಲ್ಲಿ 10 ರಿಂದ 13ರ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ಧಾರಕಾರ ಮಳೆಗೆ ಮನೆಗೆ ನೀರು ನುಗ್ಗಿ ಮನೆಯಲ್ಲಿದ್ದ ದವಸ, ಧಾನ್ಯಗಳು ನೀರು ಪಾಲಾಗಿದೆ. ಒಳಚರಂಡಿ ವ್ಯವಸ್ಥೆ ಸೇರಿ ಮೂಲಭೂತ ಸೌಕರ್ಯ ಒದಗಿಸಿ ಎಂದು ಸ್ಥಳೀಯ ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರೂ, ಸ್ಪಂದಿಸಿಲ್ಲ ಎಂದು ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮಳೆಯ ಅವಾಂತರದಿಂದಾಗಿ ನೊಂದವರು ಹಿಡಿಶಾಪ ಹಾಕುತ್ತಿದ್ದಾರೆ. ಇದನ್ನೂ ಓದಿ: ಯುವತಿ ನೇಣಿಗೆ ಶರಣು, ಯುವಕನ ಮನೆಗೆ ಬೆಂಕಿ – ಪತಿಯನ್ನ ಬಿಟ್ಟು ಇನಿಯನ ಜೊತೆ ಮದ್ವೆ

  • ಸರ್ಕಸ್ ಕಲಾವಿದರಿಗೆ ದಿನಸಿ ಸಾಮಗ್ರಿ ವಿತರಿಸಿದ ಶಾಸಕ ಗಣೇಶ ಹುಕ್ಕೇರಿ

    ಸರ್ಕಸ್ ಕಲಾವಿದರಿಗೆ ದಿನಸಿ ಸಾಮಗ್ರಿ ವಿತರಿಸಿದ ಶಾಸಕ ಗಣೇಶ ಹುಕ್ಕೇರಿ

    ಚಿಕ್ಕೋಡಿ: ಲಾಕ್‍ಡೌನ್ ಆಗುವ ಮೊದಲು ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದಲ್ಲಿ ಸರ್ಕಸ್ ಪ್ರದರ್ಶಿಸಲು ಸರ್ಕಸ್ ಕಲಾವಿದರು ಆಗಮಿಸಿದ್ದರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಪ್ರದರ್ಶನ ಇಲ್ಲದೆ ಹಣ, ಊಟವಿಲ್ಲದೆ ಕೊರಗುತ್ತಿದ್ದ ಸರ್ಕಸ್ ಕಲಾವಿದರಿಗೆ ಶಾಸಕ ಗಣೆಶ್ ಹುಕ್ಕೇರಿ ದಿನಸಿ ಸಾಮಾಗ್ರಿ ವಿತರಿಸಿದ್ದಾರೆ.

    ಸರ್ಕಸ್ ಕಂಪನಿಯ ಕಲಾವಿದರು ಸಂಕಷ್ಟದಲ್ಲಿ ಇರುವುದನ್ನು ಮನಗಂಡು, ಚಿಕ್ಕೋಡಿ-ಸದಲಗಾ ಕ್ಷೇತ್ರದ ಶಾಸಕ ಗಣೇಶ ಹುಕ್ಕೇರಿ ಸುಮಾರು ಆರವತ್ತಕ್ಕೂ ಹೆಚ್ಚು ಕಲಾವಿದರಿಗೆ ಒಂದು ತಿಂಗಳಿಗೆ ಸಾಕಾಗುವಷ್ಟು ರೇಶನ್ ಹಾಗೂ ಗೃಹಪಯೋಗಿ ಸಾಮಗ್ರಿಗಳನ್ನು ವಿತರಿಸಿದ್ದಾರೆ. ಇದನ್ನೂ ಓದಿ: ಮಂಗಳಮುಖಿಯರಿಗೆ ಲಸಿಕೆಯೊಂದಿಗೆ ದಿನಸಿ ಕಿಟ್ ವಿತರಣೆ


    ಕೊರೊನಾ ಹಾಗೂ ಲಾಕಡೌನ್ ಹಿನ್ನೆಲೆ ಅನೇಕ ಕಲಾವಿದರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಒಂದು ದಿನದ ಜೀವನ ಸಾಗಿಸುವುದು ಕೂಡ ಕಷ್ಟವಾಗಿದೆ. ಹಿಗಾಗಿ ನಮ್ಮ ಕ್ಷೇತ್ರದಲ್ಲಿ ಸಮಸ್ಯೆ ಗೊಳಗಾದ ಕಲಾವಿದರ ತಂಡಕ್ಕೆ, ಒಂದು ತಿಂಗಳಿಗೆ ಸಾಕಾಗುವಷ್ಟು ಗೃಹಪಯೋಗಿ ಸಾಮಗ್ರಿಗಳನ್ನು ಹಂಚಿದ್ದೇವೆ. ಈ ಮೂಲಕ ಕಲಾವಿದರ ಸಂಕಷ್ಟದಲ್ಲಿ ಭಾಗಿಯಾಗುವ ಕೆಲಸವನ್ನ ನಾವು ಮಾಡುತ್ತೀದ್ದೇವೆ ಎಂದು ಶಾಸಕ ಗಣೇಶ್ ಹುಕ್ಕೇರಿ ಹೇಳಿದ್ದಾರೆ. ಈ ವೇಳೆ ಚಿಕ್ಕೋಡಿ ಪುರಸಭೆ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

     

  • ಕೊಟ್ಟ ಮಾತಿನಂತೆ ನಡೆದ ಸೋನು ಸೂದ್ – ಯಾದಗಿರಿಯ ಕುಟುಂಬಕ್ಕೆ ಬಂತು ದಿನಸಿ

    ಕೊಟ್ಟ ಮಾತಿನಂತೆ ನಡೆದ ಸೋನು ಸೂದ್ – ಯಾದಗಿರಿಯ ಕುಟುಂಬಕ್ಕೆ ಬಂತು ದಿನಸಿ

    ಯಾದಗಿರಿ: ತ್ರಿವಳಿ ಮಕ್ಕಳ ಜನನದಿಂದಾಗಿ ಚಿಂತೆಗೀಡಾಗಿದ್ದ, ಯಾದಗಿರಿ ತಾಲೂಕಿನ ರಾಮಸಮುದ್ರ ಗ್ರಾಮದ ಪದ್ಮಾ ಕುಟುಂಬಕ್ಕೆ ನಟ ಸೋನು ಸೂದ್ ಕೊಟ್ಟ ಮಾತಿನಂತೆ ಸಹಾಯವನ್ನು ಮಾಡಿದ್ದಾರೆ.

    ಈ ತಿಂಗಳ 22ರಂದು ಪದ್ಮಾ ದಂಪತಿಗೆ ಏಕಕಾಲದಲ್ಲಿ ಮೂರು ಗಂಡು ಮಕ್ಕಳು ಜನಿಸಿದ್ದವು. ಕಡು ಬಡತನದಲ್ಲಿದ್ದ ಈ ಕುಟುಂಬ ಪಬ್ಲಿಕ್ ಟಿವಿ ಮೂಲಕ ಸಹಾಯ ಹಸ್ತವನ್ನು ಚಾಚಿದ್ದರು, ಈ ಸುದ್ದಿಯನ್ನು ಯಾದಗಿರಿಯ ಮಲ್ಲಿಕಾರ್ಜುನ ರೆಡ್ಡಿಯವರು ನಟ ಸೋನು ಸೂದ್‍ಗೆ ಕಳುಹಿಸಿದ್ದರು. ಸುದ್ದಿ ನೋಡಿದ ಸೋನು ಸೂದ್ ಪದ್ಮಾ ಕುಟುಂಬಕ್ಕೆ ರೇಷನ್ ನೀಡುವ ಭರವಸೆ ನೀಡಿದ್ದರು. ಭರವಸೆ ನೀಡಿದ ಎರಡೇ ದಿನಕ್ಕೆ ಮುಂಬೈಯಿಂದ ದಿನಸಿ ಕಳುಹಿಸಿದ್ದಾರೆ.

    ಎರಡು ತಿಂಗಳಿಗಾಗುವಷ್ಟು ಅಡುಗೆ ಎಣ್ಣೆ, ಅಕ್ಕಿ, ಸಕ್ಕರೆ, ಬೆಳೆಯನ್ನು ಅಮೆಜಾನ್ ಮೂಲಕ ಮೂರು ಬಾಕ್ಸ್‍ಗಳಲ್ಲಿ ಪಾರ್ಸಲ್ ಮಾಡಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿಗೆ ವಿಡಿಯೋ ಕಳುಹಿಸಿರುವ ಸೋನು ಸೂದ್, ಮುಂದಿನ ದಿನಗಳಲ್ಲಿ ವೈದ್ಯಕೀಯ ಸಹಾಯ ನೀಡುವ ಮತ್ತು ಮಕ್ಕಳಿಗೆ ಬಟ್ಟೆ ಕಳುಹಿಸಲು ಭರವಸೆ ನೀಡಿದ್ದಾರೆ. ಮಕ್ಕಳ ತಂದೆ ನಾಗರಾಜ್ ನಟನಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

  • ಕಾಲ್ ಮಾಡಿದ್ರೆ ಮನೆ ಬಾಗಿಲಿಗೆ ತಲುಪುತ್ತೆ ದಿನಸಿ, ತರಕಾರಿ – ತುಮಕೂರು ವರ್ತಕರಿಂದ ಹೊಸ ಆಫರ್

    ಕಾಲ್ ಮಾಡಿದ್ರೆ ಮನೆ ಬಾಗಿಲಿಗೆ ತಲುಪುತ್ತೆ ದಿನಸಿ, ತರಕಾರಿ – ತುಮಕೂರು ವರ್ತಕರಿಂದ ಹೊಸ ಆಫರ್

    ತುಮಕೂರು: ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅತಿವೇಗವಾಗಿ ಹರಡುತ್ತಿದೆ. ಹೀಗಾಗಿ ತುಮಕೂರಿನಲ್ಲಿ ವರ್ತಕರು ಕೊರೊನಾ ವಿರುದ್ಧ ವಿಭಿನ್ನವಾಗಿ ಹೋರಾಟಕ್ಕಿಳಿದ್ದಿದ್ದಾರೆ. ಜನರ ಮನೆ ಬಾಗಿಲಿಗೆ ಅಗತ್ಯ ವಸ್ತುಗಳನ್ನು ತಲುಪಿಸುವ ಮೂಲಕ ಜನಸಂದಣಿ ತಪ್ಪಿಸಲು ವ್ಯಾಪಾರಿಗಳು ಹೊಸ ಮಾರ್ಗ ಕಂಡು ಕೊಂಡಿದ್ದಾರೆ.

    ಬೀದಿ ವ್ಯಾಪಾರಿಗಳು, ಸಣ್ಣಪುಟ್ಟ ವ್ಯಾಪಾರಿಗಳು ಕೊರೊನಾ ವಿರುದ್ಧ ಹೋರಾಟಕ್ಕೆ ಇಳಿದಿದ್ದು, ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಬೀದಿಬದಿ ವ್ಯಾಪಾರಿಗಳು ಸಣ್ಣ ಸೇವೆಯನ್ನ ಆರಂಭಿಸಿದ್ದಾರೆ. ಈಗ ಪಟ್ಟಣದ ನಿವಾಸಿಗಳು ಹೂ, ಹಣ್ಣು, ತರಕಾರಿಗೋಸ್ಕರ ಯಾವ ಮಾರ್ಕೆಟ್‍ಗೂ ಹೋಗುವಾಗಿಲ್ಲ. ಹೀಗಾಗಿ ನಮಗೆ ಒಂದೇ ಒಂದು ಕಾಲ್ ಮಾಡಿದರೆ ಸಾಕು ಅವರಿಗೇನು ಬೇಕೋ ಅದನ್ನೆಲ್ಲಾ ಅವರ ಮನೆಬಾಗಿಲಿಗೆ ತಲುಪಿಸುತ್ತಿದ್ದೇವೆ ಎಂದು ರಸ್ತೆ ಬದಿ ವ್ಯಾಪಾರಿ ರಮೇಶ್ ಹೇಳಿದ್ದಾರೆ.

    ಈ ಸೇವೆಯನ್ನ ತುರುವೇಕೆರೆ ಪಟ್ಟಣದಾದ್ಯಂತ ಮಾಡುತ್ತಿದ್ದು, ಸುಮಾರು 45 ರಿಂದ 50 ವ್ಯಾಪಾರಿಗಳು ತಮ್ಮ ತಮ್ಮ ನಂಬರ್‌ಗಳನ್ನ ಸಾರ್ವಜನಿಕರಿಗೆ ಕೊಟ್ಟಿದ್ದಾರೆ. ನಂತರ ಅವರು ಕರೆದಲ್ಲಿಗೆ, ಕೇಳಿದ್ದನ್ನ ತಲುಪಿಸುತ್ತಿದ್ದಾರೆ. ಇವರು ಶಿಪ್ಪಿಂಗ್ ಚಾರ್ಜ್ ಮಾಡಲ್ಲ. ಕೇವಲ ಆ ವಸ್ತುವಿನ ಬೆಲೆ ಎಷ್ಟಿದ್ಯೋ ಅದನ್ನ ಮಾತ್ರ ಪಡೆಯುತ್ತಾರೆ ಎಂದು ಗೃಹಿಣಿ ಶಾಂತಮ್ಮ ತಿಳಿಸಿದ್ದಾರೆ.

    ಈ ಸೇವೆಯನ್ನ ಪ್ರಾರಂಭ ಮಾಡಿ ಕೇವಲ ಒಂದು ದಿನ ಆಗಿದೆ. ಆಗಲೇ ಬೀದಿಬದಿ ವ್ಯಾಪಾರಿಗಳ ಕಾರ್ಯಕ್ಕೆ ಮಹಿಳೆಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದು ಹೀಗೆ ಮುಂದುವರಿದರೆ ಕೊರೊನಾ ನಿಯಂತ್ರಣ ಮಾಡಬಹುದು. ಅಲ್ಲದೇ ಜನರೂ ಕೂಡ ಇವರಿಗೆ ಸಹಕಾರ ನೀಡಬೇಕು ಎಂದು ಮಹಿಳೆಯರು ಹೇಳಿದ್ದಾರೆ.

  • ಎಣ್ಣೆಗಾಗಿ ಮದ್ಯ ಪ್ರಿಯರು ಕ್ಯೂ- ಬಾಸ್ಕೆಟ್, ಬ್ಯಾಗ್‍ಗಳಲ್ಲಿ ತುಂಬಿಕೊಳ್ಳುತ್ತಿರೋ ಜನ

    ಎಣ್ಣೆಗಾಗಿ ಮದ್ಯ ಪ್ರಿಯರು ಕ್ಯೂ- ಬಾಸ್ಕೆಟ್, ಬ್ಯಾಗ್‍ಗಳಲ್ಲಿ ತುಂಬಿಕೊಳ್ಳುತ್ತಿರೋ ಜನ

    – ಕಿಲೋ ಮೀಟರ್‌ಗಟ್ಟಲೇ ದಿನಸಿಗಾಗಿ ಕ್ಯೂ

    ಬೆಂಗಳೂರು: ಕೊರೊನಾ ಭಯದಿಂದ ಈಗಾಗಲೇ ಜನರು ಬೆಂಗಳೂರು ಬಿಟ್ಟು ಹೋಗುತ್ತಿದ್ದಾರೆ. ಇತ್ತ ನಾಳೆ ಸಂಜೆಯಿಂದ ಒಂದು ವಾರ ಲಾಕ್‍ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮದ್ಯದಂಗಡಿ, ದಿನಸಿ, ಬ್ಯಾಂಕ್ ಮತ್ತು ಎಟಿಎಂ ಮುಂದೆ ನೂರಾರು ಜನರು ಕ್ಯೂ ನಿಂತಿದ್ದಾರೆ.

    ಮಂಗಳವಾರ ರಾತ್ರಿಯಿಂದ ಲಾಕ್‍ಡೌನ್ ಜಾರಿಯಾಗಲಿದೆ. ಹೀಗಾಗಿ ಇಂದೇ ಎಣ್ಣೆಗಾಗಿ ಮದ್ಯ ಪ್ರಿಯರು ಮುಗಿಬಿದ್ದಿದ್ದಾರೆ. ಹೋಲ್ ಸೇಲ್ ಅಂಗಡಿಗಳ ಮುಂದೆ ಎಣ್ಣೆಗಾಗಿ ಜನ ಕ್ಯೂ ನಿಂತಿದ್ದಾರೆ. ರಾಜಾಜಿನಗರದ ವಿಕ್ಟೋರಿಯಾ ವೈನ್ಸ್ ಮುಂಭಾಗ ಜನರು ಕ್ಯೂ ನಿಂತಿದ್ದು, ವಾರಕ್ಕಾಗುವಷ್ಟು ಎಣ್ಣೆ ಖರೀದಿ ಮಾಡಿಕೊಂಡು ಹೋಗುತ್ತಿದ್ದಾರೆ. ಬಾಸ್ಕೆಟ್, ಬಾಕ್ಸ್, ಬ್ಯಾಗ್‍ಗಳಲ್ಲಿ ಎಣ್ಣೆ ತುಂಬಿಕೊಂಡು ಹೋಗುತ್ತಿದ್ದಾರೆ.

    ಲಾಕ್‍ಡೌನ್ ವಾರ ಇರುತ್ತೊ, ತಿಂಗಳು ಇರುತ್ತೊ ಗೊತ್ತಿಲ್ಲ. ಹಣ ಇರುವವರು ಮದ್ಯ ಖರೀದಿ ಮಾಡಿ ಇಟ್ಟಿಕೊಳ್ಳುತ್ತಾರೆ. ಆ ಮೇಲೆ ಬ್ಲಾಕ್‍ನಲ್ಲಿ ಎಣ್ಣೆಯನ್ನು ಮಾರಿ ಹಣ ಮಾಡುತ್ತಾರೆ. ಮೊದಲೇ ಮೂರ್ನಾಲ್ಕು ತಿಂಗಳಿಂದ ಕೆಲಸ ಇಲ್ಲ. ಹೀಗಾಗಿ ಬ್ಲಾಕ್‍ನಲ್ಲಿ ಮದ್ಯ ಖರೀದಿ ಮಾಡಲು ಸಾಧ್ಯವಿಲ್ಲ. ಕಳೆದ ಲಾಕ್‍ಡೌನ್‍ನಲ್ಲಿ ಹಿಂಗೆ ಮಾಡಿದ್ದರು. ಹೀಗಾಗಿ ಎಷ್ಟು ಬೇಕೋ ಅಷ್ಟು ಸ್ಟಾಕ್ ಮಾಡಿಕೊಳ್ಳುತ್ತಿದ್ದೀವಿ ಎಂದು ಮದ್ಯ ಖರೀದಿಗೆ ಬಂದ ಗ್ರಾಹಕರು ಹೇಳಿದ್ದಾರೆ.

    ದಿನಸಿಗಾಗಿ ಜನರ ಕ್ಯೂ:
    ಇತ್ತ ಜನರ ಲಾಕ್‍ಡೌನ್ ಭಯದಿಂದ ದಿನಸಿ ಸ್ಟಾಕ್ ಮಾಡಿಕೊಳ್ಳಲು ಮುಂದಾಗಿದ್ದು, ಅತ್ಯಗತ್ಯ ದಿನಸಿ ಖರೀದಿಗಾಗಿ ಜನರು ಕ್ಯೂನಲ್ಲಿ ನಿಂತಿದ್ದಾರೆ. ಟೋಲ್ ಗೇಟ್ ಡಿ ಮಾರ್ಟ್ ಮುಂದೆ ಕಿಲೋ ಮೀಟರ್‌ಗಟ್ಟಲೇ ದಿನಸಿಗಾಗಿ ಜನರು ಕ್ಯೂ ನಿಂತಿದ್ದಾರೆ. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜನರು ದಿನಸಿ ಖರೀದಿ ಮಾಡುತ್ತಿದ್ದಾರೆ.

    ಇನ್ನೂ ಒಂದು ವಾರ ಲಾಕ್‍ಡೌನ್ ಹಿನ್ನೆಲೆಯಲ್ಲಿ ಬ್ಯಾಂಕ್ ಮತ್ತು ಎಟಿಎಂಗಳ ಮುಂಭಾಗ ಫುಲ್ ಕ್ಯೂ ನಿಂತಿದ್ದಾರೆ. ಬನಶಂಕರಿ ಬ್ಯಾಂಕ್‍ನ ಮುಂಭಾಗ ಜನರು ನಿಂತಿದ್ದು, ಲಾಕ್‍ಡೌನ್ ಇರುವುದರಿಂದ ಬ್ಯಾಂಕ್‍ಗಳಲ್ಲಿ ತುರ್ತು ಕಾರ್ಯ ಮುಗಿಸಿಕೊಳ್ಳುತ್ತಿದ್ದಾರೆ. ಇತ್ತ ಎಟಿಎಂಗಳ ಮುಂದೆಯೂ ಸಾಮಾಜಿಕ ಅಂತರ ಕಾಯ್ದುಕೊಂಡು ಜನರು ಸಾಲಾಗಿ ನಿಂತಿದ್ದಾರೆ.

  • ಕೊರೊನಾ ಹೆಸರಲ್ಲಿ ದುಬಾರಿಯಾಯ್ತು ದಿನಸಿ ಬೆಲೆ

    ಕೊರೊನಾ ಹೆಸರಲ್ಲಿ ದುಬಾರಿಯಾಯ್ತು ದಿನಸಿ ಬೆಲೆ

    ಬೆಂಗಳೂರು: ಕೊರೊನಾ ಹೆಮ್ಮಾರಿ ಜನರ ಬದುಕನ್ನ ಅಲ್ಲಾಡಿಸುತ್ತಿದೆ. ಕೊರೊನಾ ಕೇಕೆಗೆ ದಿನಸಿ ಸಾಮಾಗ್ರಿಗಳ ಬೆಲೆ ಗಗನಕ್ಕೇರಿ ಕೆಳಗಿಳಿಯುತ್ತಿದ್ರೂ ಇವರು ಮಾತ್ರ ಆ ಬೆಲೆಯನ್ನ ಕಡಿಮೆ ಮಾಡಿಲ್ಲ. ಕೆಲಸಯಿಲ್ಲ, ದುಡ್ಡಿಲ್ಲದ ಜನರನ್ನ ಈ ಬೆಲೆ ಏರಿಕೆ ಮತ್ತಷ್ಟು ಹಿಂಸಿಸುತ್ತಿರುವುದು ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ವೇಳೆ ಬೆಳಕಿಗೆ ಬಂದಿದೆ.

    ಕೊರೋನಾ ಲಾಕ್ ಡೌನ್ ಶುರುವಾಗಿದ್ದೇ ತಡ ಜನರ ದಿನನಿತ್ಯದ ವಸ್ತುಗಳ ಬೆಲೆ ಗಗನಕ್ಕೇರಿತ್ತು. ಯಾಕಂದರೆ ಕಡೆಮೆ ದಾಸ್ತಾನು, ಸರಬರಾಜು ಆಗ್ತಿಲ್ಲ ಅಂತ ಎಪಿಎಂಸಿ ಹೇಳಿತ್ತು. ದಿನಸಿ ಅಂಗಡಿಯವರಂತೂ ನಾವು ಮಾರ್ಕೆಟಿಂದ ಹೆಚ್ಚಿನ ಬೆಲೆಗೆ ತರ್ತೀವಿ ಅಂತ ಮನಸ್ಸೋ ಇಚ್ಛೆ ರೇಟ್ ಜಾಸ್ತಿ ಮಾಡಿದರು.

    ದಿನಸಿ ಅಂಗಡಿಗಳಲ್ಲಿ ಕೂಡ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ಮಾಡಿದೆ.
    ದಿನಸಿ ಅಂಗಡಿ- 1
    ಪ್ರತಿನಿಧಿ – ಬೇಳೆ ಇದ್ಯಾ..?
    ಅಂಗಡಿ ಮಾಲೀಕ – ಯಾವ ಬೇಳೆ ಬೇಕು..?
    ಪ್ರತಿನಿಧಿ – ತೊಗರಿ ಬೇಳೆ
    ಮಾಲೀಕ – ಇದೆ ನೋಡಿ
    ಪ್ರತಿನಿಧಿ -ಕಡಿಮೆ ಆಗಿದ್ಯಾ ಸರ್ ರೇಟ್.. ಜಾಸ್ತಿ ಆಗಿತ್ತಲ್ಲಾ ಕೊರೋನಾ ಶುರುವಾದಾಗ..?
    ಪ್ರತಿನಿಧಿ – 98 ರೂಪಾಯಿ ಆಗಿದ್ಯಾ..?
    ಪ್ರತಿನಿಧಿ – 75 ರೂಪಾಯಿ ಇತ್ತಲ್ಲಾ ಸರ್..?

    ಮಾಲೀಕ – 126 ರೂಪಾಯಿ ಆಗಿತ್ತು, ಈಗ ಸ್ವಲ್ಪ ಕಡಿಮೆಯಾಗಿದೆ.
    ಪ್ರತಿನಿಧಿ – ಕೊರೊನಾಗೆ ಮೊದಲು ಎಷ್ಟಿತ್ತು..?
    ಅಂಗಡಿಯಾತ– ಅದೇನೋ ಗೊತ್ತಿಲ್ಲ..
    ಪ್ರತಿನಿಧಿ – ಕೊರೊನಾ ಲಾಕ್ ಡೌನಿನಿಂದ ಸಪ್ಲೇ ಆಗಿಲ್ಲ ಅಂತ ಜಾಸ್ತಿ ಆಗಿತ್ತಲ್ಲ.
    ಅಂಗಡಿಯಾತ – ಅಯ್ಯೋ ಮಿಲ್ ಓನರ್ ಏನೂ ತಿಂದಿಲ್ಲ. ಈ ಆರ್ ಎಂ ಸಿ ಯಾರ್ಡ್ ಅವ್ರೇ ತಿಂದಿರೋದು.

    ದಿನಸಿ ಅಂಗಡಿ -2
    ಪ್ರತಿನಿಧಿ– ಕಡಿಮೆನೇ ಆಗಿಲ್ವಾ?
    ಅಂಗಡಿಯಾತ– ಇಲ್ಲ..
    ಪ್ರತಿನಿಧಿ– ಯಾಕ್ ಸರ್ ಹಿಂಗೆ.. ಎಲ್ಲಾ ಐಟಂ ಹಿಂಗಾ..ನಮ್ಮ ಮನೆ ಹತ್ರ ಫಂಕ್ಚನ್ ಇತ್ತು..
    ಪ್ರತಿನಿಧಿ– ಸಕ್ಕರೆ ಕಡಿಮೆಯಾಗಿದ್ಯಾ ಸರ್..?
    ಅಂಗಡಿಯಾತ– 43 ಇತ್ತು, ಈಗ ಸ್ವಲ್ಪ ಕಡಿಯಾಗಿದೆ.

    ಪ್ರತಿನಿಧಿ– ಸಪ್ಲೇ ಇಲ್ವಾ..?
    ಅಂಗಡಿಯಾತ– ಸಪ್ಲೇ ಇದೆ, ಮಾರ್ಕೆಟ್ ಅವರು ಬಿಟ್ಟುಕೊಡಲ್ಲ
    ಪ್ರತಿನಿಧಿ – ಓ ಆರ್ ಎಂಸಿಯಿಂದ ರೇಟ್ ಜಾಸ್ತಿಯಾಗಿರೋದಾ..?
    ಅಂಗಡಿಯಾತ– ಹಾ ಹೌದು..

    ಅಂಗಡಿಯವರು ಎಪಿಎಂಸಿ, ಆರ್‍ಎಂಸಿ ಯಾರ್ಡಿನಲ್ಲಿ ಬೆಲೆ ಕಡಿಮೆ ಮಾಡುತ್ತಿಲ್ಲ ಅಂದ್ರೇ ಎಪಿಎಂಸಿ ಮಾರುಕಟ್ಟೆಯ ವ್ಯಾಪಾರಿ ಬೇರೆಯೇ ಹೇಳುತ್ತಿದ್ದಾರೆ. ಇವರು ಅವರ ಮೇಲೆ ಅವರು ಇವರ ಮೇಲೆ ಆರೋಪ ಮಾಡ್ತಾರೆ. ಆದರೆ ಜನ ಮಾತ್ರ ಇದರಿಂದ ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಬಗ್ಗೆ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕಿದೆ.

  • ತಮ್ಮ ವೇತನದಿಂದ ಕಂಟೈನ್ಮೆಂಟ್ ಝೋನ್‍ನಲ್ಲಿರೋ ಬಡವರಿಗೆ ಉಚಿತ ದಿನಸಿ ವಿತರಿಸ್ತಿರೋ ಪೇದೆ

    ತಮ್ಮ ವೇತನದಿಂದ ಕಂಟೈನ್ಮೆಂಟ್ ಝೋನ್‍ನಲ್ಲಿರೋ ಬಡವರಿಗೆ ಉಚಿತ ದಿನಸಿ ವಿತರಿಸ್ತಿರೋ ಪೇದೆ

    ಬೆಳಗಾವಿ/ಚಿಕ್ಕೋಡಿ: ಕಂಟೈನ್ಮೆಂಟ್ ಝೋನ್‍ನಲ್ಲಿರುವ ಬಡ ಜನರು ಹೊರಗೆ ಬರಲಾಗದೆ ಅವರ ಜೀವನ ತುಂಬಾ ಕಷ್ಟವಾಗಿದೆ. ಇದೀಗ ಇವರ ಸ್ಥಿತಿಯನ್ನ ನೋಡಿ ಪೊಲೀಸ್ ಕಾನ್ಸ್‌ಟೇಬಲ್ ಸಹಾಯ ಮಾಡುತ್ತಿದ್ದಾರೆ.

    ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಬಿ.ಕೆ.ನಾಗನೂರೆ ದಿನನಿತ್ಯ ಬಡವರಿಗೆ ತರಕಾರಿ ಹಂಚುತ್ತಿದ್ದಾರೆ. ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಸಂಕೇಶ್ವರ ಪಟ್ಟಣವನ್ನ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.

    ಸಂಕೇಶ್ವರ ಪಟ್ಟಣದಲ್ಲಿ ಬಡವರು ದಿನಗೂಲಿ ಇಲ್ಲದೇ ಆಹಾರಕ್ಕಾಗಿ ಪರಿತಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಅವರು ದಿನನಿತ್ಯ ಎಪಿಎಂಸಿ ಯಾರ್ಡ್‌ನಿಂದ ತರಕಾರಿ ಖರೀದಿಸಿ ಬಡವರಿಗೆ ತರಕಾರಿ ಸೇರಿದಂತೆ ದಿನಸಿ ಸಾಮಗ್ರಿಗಳನ್ನ ಹಂಚುತ್ತಿದ್ದಾರೆ.

    ಸಂಕೇಶ್ವರ ಪಟ್ಟಣದ ವಿವಿಧ ಬಡಾವಣೆಗಳಿಗೆ ತೆರಳಿ ತಮ್ಮಿಂದ ಆದ ಸಹಾಯವನ್ನ ಪೊಲೀಸ್ ಪೇದೆ ಮಾಡುತ್ತಿದ್ದಾರೆ. ಬಡವರ ಸ್ಥಿತಿ ನೋಡಿ ತಮ್ಮ ವೇತನದ ಹಣದಿಂದ ಸಹಾಯ ಮಾಡುತ್ತಿರುವ ಪೊಲೀಸ್ ಕಾನ್ಸ್‌ಟೇಬಲ್ ಅವರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

  • ದಿನಸಿ ತರಲು ಕಳುಹಿಸಿದ್ರೆ ಪತ್ನಿ ಜೊತೆ ಬಂದ ಮಗ – ತಾಯಿ ಶಾಕ್

    ದಿನಸಿ ತರಲು ಕಳುಹಿಸಿದ್ರೆ ಪತ್ನಿ ಜೊತೆ ಬಂದ ಮಗ – ತಾಯಿ ಶಾಕ್

    – 2 ತಿಂಗಳ ಹಿಂದೆಯೇ ಮದ್ವೆಯಾಗಿದ್ದ ಪುತ್ರ
    – ಮನೆಗೆ ಸೇರಿಸದೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಅಮ್ಮ

    ಲಕ್ನೋ: ಕೊರೊನಾದಿಂದ ದೇಶಾದ್ಯಂತ ಲಾಕ್‍ಡೌನ್ ಜಾರಿಯಲ್ಲಿದೆ. ಜನರು ಅಗತ್ಯ ವಸ್ತುಗಳ ಖರೀದಿಗಾಗಿ ಮಾತ್ರ ಮನೆಯಿಂದ ಹೊರ ಬರುತ್ತಿದ್ದಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ದಿನಸಿ ಸಾಮಗ್ರಿಗಳನ್ನು ಖರೀದಿಸಲು ಮನೆಯಿಂದ ಹೊರ ಬಂದಿದ್ದು, ಪತ್ನಿಯೊಂದಿಗೆ ವಾಪಸ್ ಮನೆಗೆ ಹೋಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‍ನಲ್ಲಿ ನಡೆದಿದೆ.

    ಈ ಘಟನೆ ನಗರದ ಸಾಹಿಬಾಬಾದ್ ಪ್ರದೇಶದಲ್ಲಿ ನಡೆದಿದೆ. 26 ವರ್ಷದ ಗುಡ್ಡು ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದಾನೆ. ದಿಢೀರನೇ ಮದುವೆಯಾದ ಮಗನನ್ನು ನೋಡಿ ತಾಯಿ ಆಘಾತಗೊಂಡಿದ್ದು, ಈ ಮದುವೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಇಬ್ಬರನ್ನು ಮನೆಗೆ ಸೇರಿಸಲಿಲ್ಲ. ಅಲ್ಲದೇ ತಾಯಿ ತನ್ನ ಮಗನ ಬಗ್ಗೆ ದೂರು ನೀಡಲು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

    ನಾನು ಮನೆಗೆ ದಿನಸಿ ಸಾಮಗ್ರಿಗಳನ್ನು ತರಲು ಮಗನನ್ನು ಹೊರಗೆ ಕಳುಹಿಸಿದ್ದೆ. ಆದರೆ ಸ್ವಲ್ಪ ಸಮಯದ ನಂತರ ಆತ ಪತ್ನಿಯ ಜೊತೆ ಮನೆಗೆ ವಾಪಸ್ ಬಂದಿದ್ದಾನೆ. ಹೀಗಾಗಿ ನಾನು ಈ ಮದುವೆಯನ್ನು ಒಪ್ಪಿಕೊಳ್ಳಲು ಸಿದ್ಧಳಿಲ್ಲ ಎಂದು ತಾಯಿ ಕಣ್ಣೀರು ಹಾಕಿದ್ದಾರೆ.

    ಎರಡು ತಿಂಗಳ ಹಿಂದೆ ಹರಿದ್ವಾರ್ ನ ಆರ್ಯ ಸಮಾಜ ಮಂದಿರದಲ್ಲಿ ಈ ಮದುವೆ ನಡೆದಿದೆ. ಆದರೆ ಲಾಕ್‍ಡೌನ್ ಮುಗಿದ ನಂತರ ನವದಂಪತಿ ಮ್ಯಾರೇಜ್ ಸರ್ಟಿಫಿಕೆಟ್ ತೆಗೆದುಕೊಳ್ಳಲು ನಿರ್ಧರಿಸಿದ್ದರು. ಬಳಿಕ ಪತ್ನಿ ಸವಿತಾ ದೆಹಲಿಯಲ್ಲಿ ಬಾಡಿಗೆ ಮನೆಯಲ್ಲಿದ್ದಳು. ಗುಡ್ಡು ಲಾಕ್‍ಡೌನ್ ಇದ್ದರೂ ಪತ್ನಿಯನ್ನು ಮನೆಗೆ ಕರೆದುಕೊಂಡು ಬರಲು ನಿರ್ಧರಿಸಿದ್ದ.

    ಸಾಕ್ಷಿಗಳ ಕೊರತೆಯಿಂದಾಗಿ ನಾವು ಆ ಸಮಯದಲ್ಲಿ ಮ್ಯಾರೇಜ್ ಸರ್ಟಿಫಿಕೇಟ್ ಪಡೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ನಾನು ಮತ್ತೆ ಹರಿದ್ವಾರ್ ಗೆ ಹೋಗಲು ನಿರ್ಧರಿಸಿದ್ದೆ. ಆದರೆ ಲಾಕ್‍ಡೌನ್‍ನಿಂದ ಸಾಧ್ಯವಾಗಲಿಲ್ಲ. ದೆಹಲಿಯಲ್ಲಿ ಬಾಡಿಗೆ ಮನೆ ಖಾಲಿ ಮಾಡುವಂತೆ ಪತ್ನಿಗೆ ತಿಳಿಸಿದ್ದೆ. ಹೀಗಾಗಿ ಪತ್ನಿಯನ್ನು ಮನೆಗೆ ಕರೆತರಲು ನಿರ್ಧರಿಸಿದ್ದೆ ಎಂದು ಗುಡ್ಡು ಹೇಳಿದ್ದಾರೆ.

    ಸದ್ಯಕ್ಕೆ ಸಾಹಿಬಾಬಾದ್ ಪೊಲೀಸರು ಸವಿತಾ ವಾಸಿಸುತ್ತಿದ್ದ ದೆಹಲಿಯ ಬಾಡಿಗೆ ಮನೆ ಮಾಲೀಕರಿಗೆ ಮನವಿ ಮಾಡಿಕೊಂಡಿದ್ದು, ದಂಪತಿ ವಾಸಮಾಡಲು ಅವಕಾಶ ಮಾಡಿಕೊಡುವಂತೆ ತಿಳಿಸಿದ್ದಾರೆ.

  • ಸ್ವಂತ ಖರ್ಚಿನಲ್ಲಿ 2.50 ಲಕ್ಷ ಮೌಲ್ಯದ ದಿನಸಿ ವಿತರಿಸಿದ ಪಿಎಸ್‍ಐ

    ಸ್ವಂತ ಖರ್ಚಿನಲ್ಲಿ 2.50 ಲಕ್ಷ ಮೌಲ್ಯದ ದಿನಸಿ ವಿತರಿಸಿದ ಪಿಎಸ್‍ಐ

    ಧಾರವಾಡ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಜೊತೆಗೆ ಪೊಲೀಸ್ ಇಲಾಖೆಯ ಸಿಬ್ಬಂದಿ ಕರ್ತವ್ಯದೊಂದಿಗೆ ಮಾನವೀಯತೆ ಮೆರೆದಿದ್ದಾರೆ.

    ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‍ಐ ಮಹೇಂದ್ರ ನಾಯಕ್ 2.50 ಲಕ್ಷ ಮೌಲ್ಯದ ದಿನಸಿಯನ್ನು ತಮ್ಮ ಸ್ವಂತ ಹಣದಲ್ಲಿ ಠಾಣಾ ವ್ಯಾಪ್ತಿಯ ಅಸಹಾಯಕರಿಗೆ ಹಂಚಿದ್ದಾರೆ. ಮೂಲತಃ ವಿಜಯಪುರ ತಾಲೂಕಿನ ಐನಾಪುರ ತಾಂಡಾದ ನಿವಾಸಿಯಾದ ಪಿಎಸ್‍ಐ, ಬಡತನದ ಹಿನ್ನೆಲೆಯಿಂದ ಬಂದಿದ್ದರು. ಹೀಗಾಗಿ ಲಾಕ್‍ಡೌನ್ ಸಮಯದಲ್ಲಿ ಹಸಿದವರಿಗೆ, ಅಸಹಾಯಕರಿಗೆ ನಿತ್ಯ ನೆರವಾಗುತ್ತಿದ್ದಾರೆ.

    ತಮ್ಮ ಠಾಣೆಯ ಸುಮಾರು 35ಕ್ಕೂ ಹೆಚ್ಚು ಸಿಬ್ಬಂದಿ, ಬೀಟ್ ಪೊಲೀಸರ ಸಹಾಯದಿಂದ ಆಯಾ ಗ್ರಾಮಗಳಲ್ಲಿ ವಾಸಿಸುತ್ತಿರುವ ನಿರ್ಗತಿಕರು, ಬಡವರು, ಕೂಲಿಕಾರ್ಮಿಕರು ದಿನಸಿ ವಿತರಣೆ ಮಾಡುತ್ತಿದ್ದಾರೆ. ಅಲ್ಲದೇ ಮಕ್ಕಳಿಲ್ಲದ ವಯೋವೃದ್ಧರು, ಪಡಿತರ ಚೀಟಿ ಇಲ್ಲದೆ ಯಾವುದೇ ಸೌಲಭ್ಯ ಪಡೆಯದಿರುವ ಕುಟುಂಬಗಳನ್ನು ಗುರುತಿಸಿ, ತಮ್ಮ ಸಿಬ್ಬಂದಿ ಸಹಾಯದಿಂದ ತಮ್ಮದೆ ವಾಹನದಲ್ಲಿ ನೇರವಾಗಿ ದಿನಸಿಯನ್ನು ಮನೆಗೆ ತಲುಪಿಸಿದ್ದಾರೆ.

    ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಅವರು ಪಿಎಸ್‍ಐ ಮಹೇಂದ್ರ ನಾಯಕ್ ಅವರ ಕಾರ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಳ್ಳಿಯ 300 ಕುಟುಂಬಗಳಿಗೆ ಒಟ್ಟು 3 ಕ್ವಿಂಟಲ್ ರವೆ, 3 ಕ್ವಿಂಟಲ್ ಬೆಲ್ಲ, 5 ಕ್ವಿಂಟಲ್ ಅಕ್ಕಿ, 250 ಲೀಟರ್ ಅಡುಗೆ ಎಣ್ಣೆ ಮತ್ತು ಸುಮಾರು 20 ಸಾವಿರ ಸಂತೂರ್ ಸಾಬೂನುಗಳನ್ನು ಹಂಚಿದ್ದಾರೆ.