Tag: ದಿನೇಶ್ ಗುಂಡುರಾವ್

  • ಸಿಎಂ ಎಚ್‍ಡಿಕೆ ಕಣ್ಣೀರಿಗೆ ಕಾಂಗ್ರೆಸ್ಸಿಗರೇ ಕಾರಣ: ಮಾಜಿ ಸ್ಪೀಕರ್ ಕೋಳಿವಾಡ

    ಸಿಎಂ ಎಚ್‍ಡಿಕೆ ಕಣ್ಣೀರಿಗೆ ಕಾಂಗ್ರೆಸ್ಸಿಗರೇ ಕಾರಣ: ಮಾಜಿ ಸ್ಪೀಕರ್ ಕೋಳಿವಾಡ

    ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕಣ್ಣೀರಿಗೆ ಕಾಂಗ್ರೆಸ್ ಮುಖಂಡರೇ ಕಾರಣ ಎಂದು ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ ಹೇಳಿದ್ದಾರೆ.

    ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಕೋಳಿವಾಡ ಅವರು, ಕಾಂಗ್ರೆಸ್ಸಿಗೆ ಈ ಪರಿಸ್ಥಿತಿ ಬರಬೇಕಾದರೆ ಮೂಲಕ ಕಾರಣ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರತು, ಬೇರೆ ಯಾರು ಅಲ್ಲ. ಸಿದ್ದರಾಮಯ್ಯ ಅವರ ನಡೆದ ಕಾಂಗ್ರಸ್ಸಿಗೆ ತಟ್ಟಿದೆ. ನಾನು ಅಧಿಕಾರಕ್ಕೆ ಬಂದು 13 ವರ್ಷ ಆದ ಮೇಲೆ ಎಂಎಲ್‍ಎ ಆದೆ. ಆದ್ದರಿಂದ ಅವರು ನನ್ನ ಮುಂದೆ ಚೋಟಾ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

    ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಸೇರಿ ಕೆಲವರಿಗೆ ಮೈತ್ರಿ ಸರ್ಕಾರ ಮುಂದುವರಿಯುವುದು ಬೇಕಿದೆ. ಆದರೆ ಕೆಲ ಕಾಂಗ್ರೆಸ್ ಮುಖಂಡರಿಗೆ ಸಮ್ಮಿಶ್ರ ಸರ್ಕಾರ ಮುಂದುವರೆಯುವುದು ಬೇಕಿಲ್ಲ. ಹೈಕಮಾಂಡ್ ತೀರ್ಮಾನದಂತೆ ಮೈತ್ರಿ ಸರ್ಕಾರ ರಚನೆಯಾಗಿದೆ ಎಂದು ಹೇಳಿದರು.

    ಸಿಎಂ ಕುಮಾರಸ್ವಾಮಿ ಕಣ್ಣೀರಿಗೆ ಕೆಲ ಕಾಂಗ್ರೆಸ್ ನಾಯಕರು ಕಾರಣ ಎಂಬ ಕೋಳಿವಾಡ ಹೇಳಿಕೆ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಇದು ಕುಮಾರಸ್ವಾಮಿಯವರ ಪಕ್ಷದ ವಿಚಾರ. ನಾನು ಈ ಬಗ್ಗೆ ಏನು ಕಮೆಂಟ್ ಮಾಡಲು ಹೋಗುವುದಿಲ್ಲ. ಅವರ ಪಕ್ಷದ ವೇದಿಕೆಯಲ್ಲಿ ಅವರೇ ಮಾತನಾಡಿಕೊಳ್ಳುತ್ತಾರೆ. ಮೈತ್ರಿ ಸರ್ಕಾರ ಅಂದಮೇಲೆ ಸಣ್ಣಪುಟ್ಟ ಸಮಸ್ಯೆ ಇರುತ್ತೆ. ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ. ನಾವು ಮುಕ್ತವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಒಂದು ಸರ್ಕಾರವನ್ನು ನಡೆಸಬೇಕಾದರೆ ಸಮನ್ವಯ ಇರಬೇಕು. ಆದರೆ ಕಾಂಗ್ರೆಸ್ ಪಕ್ಷ ಈ ಸಮ್ಮಿಶ್ರ ಸರ್ಕಾರಕ್ಕೆ ಎಲ್ಲಾ ರೀತಿ ಸಹಕಾರ ಕೊಡುತ್ತಿದೆ ಎಂದು ಹೇಳಿದರು.

    https://www.youtube.com/watch?v=VOBLDO5wpEA

  • ಎಚ್‍ಡಿಕೆಯ ವಿಷಕಂಠ ಹೇಳಿಕೆಗೂ ಕಾಂಗ್ರೆಸ್‍ಗೂ ಸಂಬಂಧವಿಲ್ಲ: ದಿನೇಶ್ ಗುಂಡೂರಾವ್

    ಎಚ್‍ಡಿಕೆಯ ವಿಷಕಂಠ ಹೇಳಿಕೆಗೂ ಕಾಂಗ್ರೆಸ್‍ಗೂ ಸಂಬಂಧವಿಲ್ಲ: ದಿನೇಶ್ ಗುಂಡೂರಾವ್

    ಮಂಡ್ಯ: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೂ ಕಾಂಗ್ರೆಸ್‍ಗೂ ಯಾವುದೇ ಸಂಬಂಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

    ಜೆಡಿಎಸ್ ಅಭಿನಂದನಾ ವೇದಿಕೆಯಲ್ಲಿ ಸಿಎಂ ಕಣ್ಣೀರಿಟ್ಟು, ವಿಷಕಂಠನಾಗಿದ್ದೇನೆ ಎಂದ ಹೇಳಿಕೆ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ದಿನೇಶ್ ಗುಂಡೂರಾವ್, ಸಿಎಂ ಹೇಳಿಕೆಗೂ ನಮಗೂ ಸಂಬಂಧವಿಲ್ಲ. ಮುಖ್ಯಮಂತ್ರಿಗಳು ಅವರ ಪಕ್ಷದ ವೇದಿಕೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಏನೇ ಪಕ್ಷದ ವೇದಿಕೆಯಲ್ಲಿ ಹೇಳಿದ್ದ ಮಾತುಗಳು ಕಾಂಗ್ರೆಸ್‍ಗೆ ಅನ್ವಯಿಸಲ್ಲ. ನಾವು ಜೆಡಿಎಸ್‍ಗೆ ನಮ್ಮ ಪೂರ್ಣ ಸಹಕಾರ ನೀಡುತ್ತಿದ್ದೇವೆ. ಸಿಎಂ ಯಾವ ಕಾರಣಕ್ಕೆ ಕಣ್ಣೀರಿಟ್ಟಿದಾರೋ ಗೊತ್ತಿಲ್ಲ. ಈ ಬಗ್ಗೆ ಸಿಎಂ ಅವರನ್ನೇ ಕೇಳಬೇಕು ಅಂತ ಹೇಳಿದ್ರು.

    ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಹಿಡಿತ ಸಾಧಿಸುತ್ತಿದೆ ಎಂಬುದೆಲ್ಲಾ ಊಹಾಪೋಹ. ಸಮನ್ವಯ ಸಮಿತಿ ಅಧ್ಯಕ್ಷರಿಗೆ ಸಂಪುಟದಲ್ಲಿ ಸ್ಥಾನ ನೀಡುವುದರ ಬಗ್ಗೆ ಯಾವುದೇ ರೀತಿಯ ಚರ್ಚೆಯನ್ನು ಸರ್ಕಾರ ಇದೂವರೆಗೂ ನಡೆಸಿಲ್ಲ. ಹೀಗಾಗಿ ಈ ವಿಚಾರ ನನಗೇ ಗೊತ್ತಿಲ್ಲ ಅಂದ್ರು.

    ಸಿಎಂ ಕಣ್ಣೀರು:
    ಪಕ್ಷದ ಕಾರ್ಯಕರ್ತರು ಹಾಗೂ ನಾಡಿನ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಇಂದು ಸಮ್ಮಿಶ್ರ ಸರ್ಕಾರದ ಜವಾಬ್ದಾರಿ ಹೊತ್ತಿದ್ದೇನೆ. ಇದರಿಂದಾಗಿ ನಿಮ್ಮೆಲ್ಲರನ್ನ ಕೂತು ಮಾತಾಡಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ನಿಮ್ಮಲ್ಲಿ ಕ್ಷಮೆ ಕೋರುತ್ತೇನೆ. ನಾನು ಸಿಎಂ ಆಗಿರೋದಕ್ಕೆ ನೀವೆಲ್ಲಾ ಸಂಭ್ರಮಿಸುತ್ತಿದ್ದೀರಾ. ನಮ್ಮ ಅಣ್ಣನೋ, ತಮ್ಮನೋ ಸಿಎಂ ಆಗಿದ್ದಾರೆ ಎಂದು ಸಂತೋಷ ಪಟ್ಟಿದ್ದೀರಾ. ಆದರೆ ನನಗೆ ಸಂತೋಷವಿಲ್ಲ. ನಾನೇ ಎಲ್ಲಾ ನೋವನ್ನು ವಿಷಕಂಠನಾಗಿ ನುಂಗಿ ಈ ಸ್ಥಾನದಲ್ಲಿದ್ದೇನೆ ಎಂದು ಹೇಳಿ ಕುಮಾರಸ್ವಾಮಿ ಶನಿವಾರ ಕಣ್ಣಿರು ಹಾಕಿದ್ದರು.

    https://www.youtube.com/watch?v=3i0iSh9JK3g

  • ಸಿದ್ಧಾಂತ ಇಲ್ಲದ ಶಾ ನಮಗೆ ನೀತಿ ಪಾಠ ಹೇಳೋ ಅಗತ್ಯವಿಲ್ಲ: ದಿನೇಶ್ ಗುಂಡೂರಾವ್

    ಸಿದ್ಧಾಂತ ಇಲ್ಲದ ಶಾ ನಮಗೆ ನೀತಿ ಪಾಠ ಹೇಳೋ ಅಗತ್ಯವಿಲ್ಲ: ದಿನೇಶ್ ಗುಂಡೂರಾವ್

    ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಸಿದ್ಧಾಂತವಿಲ್ಲ. ಅವರು ಬಂದು ನೀತಿ ಪಾಠ ಮಾಡುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

    ಸಿಎಂ ಗೃಹ ಕಛೇರಿ ಕೃಷ್ಣದಲ್ಲಿ ಮಾತನಾಡಿದ ಅವರು, ಚಾಣಾಕ್ಷ ಅಂತ ಆಗಬೇಕಾದ್ರೆ ಸಿದ್ಧಾಂತಗಳನ್ನು ಬಿಡಬೇಕು. ಈ ಸಮಯದಲ್ಲಿ ಬಂದು ಮಠ ಮಾನ್ಯಗಳನ್ನು ಭೇಟಿ ಮಾಡುತ್ತಿದ್ದಾರೆ ಎಂದು ದೂರಿದರು.

    ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರಗತಿಪರರು ಮೈತ್ರಿ ಬಗ್ಗೆ ಹೇಳಲಿಲ್ಲ. ಕೋಮುವಾದಿ ಪಕ್ಷವನ್ನು ಸೋಲಿಸಲು ಪ್ರಗತಿಪರರು ಜಾತ್ಯಾತೀತ ಪಕ್ಷಗಳು ಒಂದಾಗಬೇಕು ಎಂದು ಹೇಳಿದ್ದಾರೆ. ಆದರೆ ಜೆಡಿಎಸ್ ನವರು ಜಾತ್ಯಾತೀತರಲ್ಲ ಅವರು ಸಿದ್ಧಾಂತ ಬಿಟ್ಟವರು ಎಂದರು.

    ನಮ್ಮ ಕುಟುಂಬದ ಬಗ್ಗೆ ಮಾತನಾಡಬೇಡಿ ಎಂಬ ಹೆಚ್‍ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಜಮೀರ್ ಅಹಮದ್, ನಾನು ಅವರ ಕುಟುಂಬದ ಬಗ್ಗೆ ಮಾತನಾಡಿಲ್ಲ. ಪ್ರಜ್ವಲ್ ರೇವಣ್ಣ ಬೆಳೆಯೋದು ಅವರು ಸಹಿಸಲ್ಲ ಇನ್ನು ನಾವು ಬೆಳೆಯೋದು ಸಹಿಸುತ್ತಾರ ಎಂದು ಹೇಳಿದ್ದೇನೆ ಅಷ್ಟೇ. ಪ್ರಜ್ವಲ್ ರೇವಣ್ಣ ಬೆಳೆಯೋದು ಅವರಿಗೆ ಇಷ್ಟ ಇಲ್ಲ. ಎಲ್ಲರಿಗೂ ಗೊತ್ತಿರುವ ವಿಚಾರ. ಅದನ್ನೇ ನಾನು ಹೇಳಿದ್ದೇನೆ ಅಷ್ಟೆ ಎಂದರು.

  • ಮೊದಲು ಬಿಜೆಪಿ, ಆರ್‍ಎಸ್‍ಎಸ್ ಬ್ಯಾನ್ ಮಾಡಬೇಕು, ಜಿಹಾದಿಗಳು ನೀವು: ದಿನೇಶ್ ಗುಂಡೂರಾವ್

    ಮೊದಲು ಬಿಜೆಪಿ, ಆರ್‍ಎಸ್‍ಎಸ್ ಬ್ಯಾನ್ ಮಾಡಬೇಕು, ಜಿಹಾದಿಗಳು ನೀವು: ದಿನೇಶ್ ಗುಂಡೂರಾವ್

    ಬೆಂಗಳೂರು: ಮೂಡಿಗೆರೆ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ಎನ್‍ಎಸ್‍ಯುಐ ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ಮಾಡಿದ್ದಾರೆ.

    ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಧನ್ಯಶ್ರೀ ಆತ್ಮಹತ್ಯೆ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಧನ್ಯಶ್ರೀ ಹಿಂದೂ ಅಲ್ಲವೇ. ದೀಪಕ್ ರಾವ್ ಹತ್ಯೆ ಬಗ್ಗೆ ಮಾತನಾಡುತ್ತೀರಾ. ಪ್ರವೀಣ್ ಪೂಜಾರಿ ಹತ್ಯೆ ಬಗ್ಗೆ ಮಾತನಾಡುತ್ತೀರಾ. ಆದರೆ ಧನ್ಯಶ್ರೀ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

    ಆತ್ಮಹತ್ಯೆಯ ಹಿಂದೆ ಬಜರಂಗದಳದ ಮುಖಂಡ ಇರುವುದರಿಂದ ಮಾತನಾಡುತ್ತಿಲ್ವಾ. ದೀಪಕ್ ರಾವ್ ಬಗ್ಗೆ ಒಂದು ಧನ್ಯಶ್ರೀ ಬಗ್ಗೆ ಒಂದು ಸಿದ್ಧಾಂತ ನಿಮ್ಮದು. ಮೊದಲು ಬಿಜೆಪಿ ಮತ್ತು ಆರ್‍ಎಸ್‍ಎಸ್ ಬ್ಯಾನ್ ಮಾಡಬೇಕು ಜಿಹಾದಿಗಳು ನೀವು ಎಂದು ದಿನೇಶ್ ಗುಂಡೂರಾವ್ ಕಿಡಿಕಾರಿದರು.

    ಧನ್ಯಶ್ರೀ ಆತ್ಮಹತ್ಯೆ ಪ್ರಕರಣ ಕುರಿತಂತೆ ಎನ್‍ಎಸ್‍ಯುಐ ಕಾರ್ಯಕರ್ತರು ಇಂದು ನಗರದ ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು. ಎನ್‍ಎಸ್‍ಯುಐ ರಾಜ್ಯಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಧನ್ಯಶ್ರೀ ಆತ್ಮಹತ್ಯೆಯ ಹಿಂದೆ ಬಜರಂಗದಳದ ಮುಖಂಡ ಅನಿಲ್ ಕೈವಾಡ ಇದೆ. ಆದ್ದರಿಂದ ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರು ಈ ವಿಚಾರದ ಬಗ್ಗೆ ಮಾತನಾಡುತ್ತಿಲ್ಲ ಎಂದು ಕಾರ್ಯಕರ್ತರು ಬಿಜೆಪಿ ನಾಯಕರನ್ನು ದೂಷಿಸಿದರು.