ಬೆಂಗಳೂರು: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಎಸ್.ಎಂ ಕೃಷ್ಣ (S M Krishna) ಅವರು ಏ.29 ರಂದು ಮಣಿಪಾಲ್ ಆಸ್ಪತ್ರೆಗೆ (Manipal Hospital) ದಾಖಲಾಗಿದ್ದರು. 4 ತಿಂಗಳ ಸುದೀರ್ಘ ಚಿಕಿತ್ಸೆಯ ನಂತರ ಇಂದು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಶ್ವಾಸಕೋಶ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸುಧಾರಿಸಿದ್ದು, ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ ಎಂದು ಶಾಸಕ ದಿನೇಶ್ ಗೂಳಿಗೌಡ (Dinesh Guligowda) ತಿಳಿಸಿದ್ದಾರೆ.ಇದನ್ನೂ ಓದಿ: ಐವನ್ ಡಿಸೋಜಾ ಮನೆಗೆ ಕಲ್ಲು ತೂರಾಟ ಪ್ರಕರಣ – ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರ ಬಂಧನ
ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಶ್ವಾಸಕೋಶದ ಸೋಂಕು ನಿವಾರಣೆ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಭಗವಂತನ ಕೃಪೆ ಮತ್ತು ವೈದ್ಯರ ಪರಿಶ್ರಮದಿಂದ ಎಸ್.ಎಂ.ಕೃಷ್ಣ ಅವರು ಗುಣಮುಖರಾಗಿದ್ದಾರೆ. ಆದರೆ ಎರಡು ವಾರಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಯಾವುದೇ ಸಾರ್ವಜನಿಕ ಭೇಟಿ ಮತ್ತು ಕಾರ್ಯಕ್ರಮಗಳಿಗೆ ಪಾಲ್ಗೊಳ್ಳದಂತೆ ವೈದ್ಯರು ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರ ಹಿತೈಷಿಗಳು, ಅಭಿಮಾನಿಗಳು ಕೆಲವು ದಿನಗಳ ಕಾಲ ಅವರನ್ನು ಭೇಟಿ ಮಾಡದಂತೆ ನೋಡಿಕೊಳ್ಳುವಂತೆ ಕುಟುಂಬದವರಿಗೆ ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಯಾರೂ ಸಹ ಅನ್ಯತ ಭಾವಿಸದೇ ಹಿರಿಯ ಮುತ್ಸುದ್ದಿ ಎಸ್.ಎಂ.ಕೃಷ್ಣ ಅವರು ವಿಶ್ರಾಂತಿ ಪಡೆಯಲು ಸಹಕರಿಸಬೇಕಾಗಿದೆ ಹಾಗೂ ಸಂಪೂರ್ಣವಾಗಿ ಗುಣಮುಖರಾದ ಬಳಿಕ ಎಸ್.ಎಂ.ಕೃಷ್ಣ ಅವರೇ ಎಲ್ಲರನ್ನೂ ಭೇಟಿ ಮಾಡಲಿದ್ದಾರೆ.ಇದನ್ನೂ ಓದಿ: ಗೂಡ್ಸ್ ವಾಹನದಲ್ಲಿ ಜನರ ಪ್ರಯಾಣ ಕಾನೂನು ಬಾಹಿರ: ಎಡಿಜಿಪಿ ಅಲೋಕ್ ಕುಮಾರ್
ಚಿಕಿತ್ಸೆ ನೀಡಿದ ಮಣಿಪಾಲ ವೈದ್ಯರ ತಂಡ ಹಾಗೂ ಸಿಬ್ಬಂದಿಗೆ ಎಸ್.ಎಂ.ಕೃಷ್ಣ ಅವರು ಧನ್ಯವಾದ ತಿಳಿಸುವಂತೆ ಹೇಳಿದ್ದಾರೆ.
– ಕಳೆದ 7 ತಿಂಗಳಿಂದ ಬಾಕಿ ಉಳಿಸಿಕೊಂಡಿದ್ದ ಹಿಂದಿನ ಸರ್ಕಾರ – ತುರ್ತು ಹಣ ಬಿಡುಗಡೆ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಿ
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ (BJP Government) ಅವಧಿಯಲ್ಲಿ ರೈತರಿಗೆ ಸುಮಾರು 669.59 ಕೋಟಿ ರೂಪಾಯಿ ಹಾಲಿನ ಪ್ರೋತ್ಸಾಹಧನವು (Milk Subsidy Price) ಬಾಕಿ ಇದ್ದು ಇದನ್ನು ಕೂಡಲೇ ಬಿಡುಗಡೆ ಮಾಡಬೇಕು. ಈ ಮೂಲಕ ರೈತರ ತುರ್ತು ಅವಶ್ಯಕತೆಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್ ಗೂಳಿಗೌಡ (Dinesh Guligowda) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದರು.
ಇದು ಕೃಷಿ ಚಟುವಟಿಕೆಯ ಕಾಲವಾಗಿದ್ದು, ರೈತರಿಗೆ ಅನೇಕ ಖರ್ಚುಗಳು ಇರುತ್ತವೆ. ಮಕ್ಕಳ ಶೈಕ್ಷಣಿಕ ವರ್ಷವೂ ಆರಂಭವಾಗಿರುವುದರಿಂದ ಅವರ ಶೈಕ್ಷಣಿಕ ಶುಲ್ಕ, ಪುಸ್ತಕ ಇನ್ನಿತರ ಖರ್ಚುಗಳು ಇರುತ್ತವೆ. ಇನ್ನು ಮೇವು, ಪಶು ಆಹಾರ ಕೊಳ್ಳಬೇಕಿರುತ್ತದೆ. ಹೀಗಾಗಿ ತುರ್ತಾಗಿ ಈ ಹಣವನ್ನು ಬಿಡುಗಡೆ ಮಾಡಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಅವರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಯುಪಿ ಕೋರ್ಟ್‍ನಲ್ಲೇ ಗ್ಯಾಂಗ್‍ಸ್ಟರ್ ಹತ್ಯೆ
ಮನವಿ ಪತ್ರದಲ್ಲೇನಿದೆ?
ರಾಜ್ಯ ಸರ್ಕಾರ ಹೈನುಗಾರರಿಗೆ ಅನುಕೂಲವಾಗಲು ರೈತರಿಗೆ ಪ್ರತಿ ಲೀಟರ್ ಹಾಲಿಗೆ 05 ರೂ. ಪ್ರೋತ್ಸಾಹಧನ ನೀಡುತ್ತಾ ಬಂದಿದೆ. ಇದರಿಂದ ಹೈನುಗಾರರು ಉತ್ಪಾದನೆ ಮಾಡಿದ ಹಾಲಿಗೆ ಲಾಭದಾಯಕ ದರ ಸಿಕ್ಕಿದಂತಾಗುತ್ತದೆ. ಅಲ್ಲದೆ, ನೇರವಾಗಿ ರೈತರ ಖಾತೆಗಳಿಗೆ ಹಣ ಜಮಾ ಆಗುವುದರಿಂದ ಮೇವು, ಪಶು ಆಹಾರ ಕೊಳ್ಳಲು ಈ ಪ್ರೋತ್ಸಾಹಧನವು ಅನುಕೂಲವಾಗುತ್ತದೆ. ಆದರೆ, ಹಿಂದಿನ ಸರ್ಕಾರ ಕಳೆದ 07 ತಿಂಗಳುಗಳಿಂದ ಹೈನುಗಾರರಿಗೆ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಿರುವುದಿಲ್ಲ. ಇದರಿಂದಾಗಿ ಹೈನುಗಾರರಿಗೆ ತೊಂದರೆಯಾಗುತ್ತಿದೆ.
ಈಗ ಸುಮಾರು 669.59 ಕೋಟಿ ರೂ. ಪ್ರೋತ್ಸಾಹಧನವನ್ನು ಸರ್ಕಾರ ಹೈನುಗಾರರಿಗೆ ವಿತರಿಸಲು ಬಾಕಿ ಇದೆ. ಪ್ರತಿ ಹೈನುಗಾರರಿಗೆ ಕನಿಷ್ಠ 5 ಸಾವಿರದಿಂದ 30 ಸಾವಿರವರೆಗೂ ಪ್ರೋತ್ಸಾಹಧನ ಬರುವುದು ಬಾಕಿ ಉಳಿದುಕೊಂಡಿದೆ. ಪ್ರತಿ ತಿಂಗಳು ಸರ್ಕಾರ ರಾಜ್ಯದ ಎಲ್ಲ ಹೈನುಗಾರರಿಗೆ ಸುಮಾರು 109 ಕೋಟಿ ರೂ. ಹಾಲಿನ ಪ್ರೋತ್ಸಾಹಧನ ನೀಡಬೇಕಿದೆ.
ಸಾಮಾನ್ಯ ವರ್ಗದ ಹೈನುಗಾರರಿಗೆ 2022 ರ ನವೆಂಬರ್‌ನಲ್ಲಿ 109.90 ಕೋಟಿ ರೂ, ಡಿಸೆಂಬರ್-109.81 ಕೋಟಿ, 2023ರ ಜನವರಿಯಲ್ಲಿ 107.89 ಕೋಟಿ, ಫೆಬ್ರವರಿ-93.56, ಮಾರ್ಚ್-93.89 ಕೋಟಿ, ಏಪ್ರಿಲ್-93.67 ಕೋಟಿ ರೂಪಾಯಿಗಳನ್ನು ನೀಡುವುದು ಬಾಕಿ ಇದೆ. ಎಸ್‌ಸಿ ವರ್ಗಕ್ಕೆ 2023ರ ಮಾರ್ಚ್‌ರಲ್ಲಿ-3.08 ಕೋಟಿ ರೂ, ಏಪ್ರಿಲ್-3.17 ಕೋಟಿ ರೂ. ಸಹಾಯಧನ ವಿತರಣೆ ಬಾಕಿ ಇದೆ. ಹಾಗೆಯೇ ಕಳೆದ ಹಿಂದಿನ ವರ್ಷಗಳ ಪೈಕಿ ಸಾಮಾನ್ಯ ವರ್ಗದವರಿಗೆ 2019-20 ನೇ ಸಾಲಿನಲ್ಲಿ 12.51 ಕೋಟಿ ರೂ, 2020-21 ನೇ ಸಾಲಿನಲ್ಲಿ 9.64 ಕೋಟಿ ರೂ. 2021-22 ನೇ ಸಾಲಿನಲ್ಲಿ-22.37 ಕೋಟಿ ರೂ. ಸೇರಿದಂತೆ ಒಟ್ಟಾರೆ ಕಳೆದ ಆರ್ಥಿಕ ವರ್ಷದಲ್ಲಿ 624.06 ಕೋಟಿ ರೂ ಹಾಗೂ ಹಿಂದಿನ ವರ್ಷಗಳ ಬಾಕಿ 45.53 ಕೋಟಿ ರೂ. ಸೇರಿ ಒಟ್ಟು 669.59 ಕೋಟಿ ರೂಪಾಯಿಯಷ್ಟು ಸರ್ಕಾರದಿಂದ ಹೈನುಗಾರರಿಗೆ ಸಂದಾಯವಾಗಬೇಕಿದೆ.
ಇದರಲ್ಲಿ ಮಂಡ್ಯ ಜಿಲ್ಲೆಗೆ ಒಟ್ಟು 72.34 ಕೋಟಿ ರೂಗಳು ಹೈನುಗಾರರಿಗೆ ಸಂದಾಯವಾಗುವುದು ಬಾಕಿ ಇದೆ. 2022ರ ನವೆಂಬರ್‌ನಲ್ಲಿ 12.40 ಕೋಟಿ ರೂ, ಡಿಸೆಂಬರ್-12.88 ಕೋಟಿ ರೂ, 2023 ಜನವರಿಯಲ್ಲಿ-12.68 ಕೋಟಿ ರೂ, ಫೆಬ್ರವರಿ-10.90 ಕೋಟಿ ರೂ., ಮಾರ್ಚ್-11.92 ಕೋಟಿ ರೂ., ಏಪ್ರಿಲ್-11.56 ಕೋಟಿ ರೂ. ಪ್ರೋತ್ಸಾಹಧನ ನೀಡುವುದು ಬಾಕಿ ಇದೆ.
ವಿವಿಧ ಕಾರಣಗಳಿಂದ ಪಶು ಆಹಾರ, ಮೇವಿನ ದರ ಏರಿಕೆಯಾಗಿದೆ. ಕೆಲವೆಡೆ ಗಂಟು ರೋಗ ಜಾನುವಾರುಗಳಿಗೆ ಬಾಧಿಸಿ, ಹಾಲಿನ ಇಳುವರಿ ಕೂಡ ಕಡಿಮೆಯಾಗಿದೆ, ಕೆಲವು ಜಾನುವಾರುಗಳು ಮೃತಪಟ್ಟಿವೆ. ಇದರಿಂದ ಹೈನುಗಾರರು ತೀರ ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಬಾಕಿ ಇರುವ ಪ್ರೋತ್ಸಾಹಧನವನ್ನು ಸರ್ಕಾರ ಬಿಡುಗಡೆ ಮಾಡಿದಲ್ಲಿ ಹೈನುಗಾರರಿಗೆ ನೆರವಾಗುವುದು. ಮಳೆಗಾಲದಲ್ಲಿ ಪಶು ಆಹಾರ ಖರೀದಿಸಿ ದಾಸ್ತಾನು ಮಾಡಲು, ಅಲ್ಲದೆ, ಮಕ್ಕಳ ವಿದ್ಯಾಭ್ಯಾಸದ ಶುಲ್ಕ ಪಾವತಿಗೆ, ಅಥವಾ ದೈನಂದಿನ ಇತರ ಖರ್ಚುಗಳಿಗೆ ಅನುಕೂಲವಾಗಲಿದೆ. ರಾಜ್ಯದ ಹೈನುಗಾರರ ಹಿತ ದೃಷ್ಟಿಯಿಂದ ಈ ಪ್ರೋತ್ಸಹಧನವನ್ನು ಅತಿ ಶೀಘ್ರವಾಗಿ ಬಿಡುಗಡೆ ಮಾಡಬೇಕೆಂದು ರೈತ ಸಮೂಹದ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮನವಿ ಮಾಡಿದ್ದಾರೆ.
– ನಿಡಘಟ್ಟದ ಬಳಿ ಹೆದ್ದಾರಿಗೆ ಆಗಮನ-ನಿರ್ಗಮನ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿದ್ದ ಶಾಸಕರು – ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಪ್ರವೇಶಕ್ಕೆ ಅವಕಾಶ ನೀಡಿದ್ದಕ್ಕೆ ಬೇಸರ – ಬಹಿರಂಗ ಚರ್ಚೆಗೆ ಶಾಸಕ ದಿನೇಶ್ ಗೂಳಿಗೌಡ ಆಗ್ರಹ
ಬೆಳಗಾವಿ: ಬೆಂಗಳೂರು-ಮೈಸೂರು ಹೆದ್ದಾರಿ (Bengaluru-Mysuru Highway) ಯೋಜನೆಯಲ್ಲಿ ಮಂಡ್ಯ ಜಿಲ್ಲೆ ಜನರಿಗೆ ಅನ್ಯಾಯವಾಗಿದೆ ಎಂದು ಶಾಸಕ ದಿನೇಶ್ ಗೂಳಿಗೌಡ (Dinesh Guligowda) ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ-275, 6 ಪಥದ ಬೆಂಗಳೂರು-ಮೈಸೂರು ರಸ್ತೆಯ ಅಭಿವೃದ್ಧಿ ಕಾಮಗಾರಿಯಲ್ಲಿ ಮಂಡ್ಯ ಜಿಲ್ಲೆಯ ಗಡಿ ಭಾಗವಾದ ನಿಡಘಟ್ಟದ ಬಳಿ ಹೆದ್ದಾರಿಗೆ ಆಗಮನ-ನಿರ್ಗಮನ ಸಂಪರ್ಕ ವ್ಯವಸ್ಥೆಯಲ್ಲಿ ಸಮರ್ಪಕ ಕ್ರಮವಾಗಿಲ್ಲ. ಮದ್ದೂರು ಪಟ್ಟಣಕ್ಕೆ ಚನ್ನಪಟ್ಟಣ ತಾಲ್ಲೂಕಿನ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಪ್ರವೇಶಕ್ಕೆ ಅವಕಾಶ ಒದಗಿಸಲಾಗಿದೆ. ಇದು ಸರ್ಕಾರದ ಸರಿಯಾದ ಕ್ರಮವಲ್ಲ. ಕೂಡಲೇ ಇದರ ಬಗ್ಗೆ ಬಹಿರಂಗ ಚರ್ಚೆ ಆಗಬೇಕು ಎಂದು ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್ ಗೂಳಿಗೌಡ, ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾನು ಅಕ್ರಮವಾಗಿ ಸಂಪಾದನೆ ಮಾಡಿದ್ರೆ, ಅಷ್ಟೂ ಆಸ್ತಿ ದಾನ ಮಾಡ್ತೀನಿ – ಸಿ.ಟಿ ರವಿ
ರಸ್ತೆಯ ಅಭಿವೃದ್ಧಿ ಹಾಗೂ ಮಂಡ್ಯ ಜಿಲ್ಲೆಯ ಗಡಿ ಭಾಗವಾದ ನಿಡಘಟ್ಟದ ಬಳಿ ಹೆದ್ದಾರಿಗೆ ಆಗಮನ-ನಿರ್ಗಮನ ಸಂಪರ್ಕ ವ್ಯವಸ್ಥೆ ಬಗ್ಗೆ ಶಾಸಕರು ಕೇಳಿದ್ದ ಪ್ರಶ್ನೆಗೆ, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಸದನದಲ್ಲಿ ಉತ್ತರ ನೀಡಿದ್ದಾರೆ. ಆದರೆ ಈಗ ಸರ್ಕಾರ ಕೈಗೊಂಡಿರುವ ನಿರ್ಧಾರ ಜನಸ್ನೇಹಿಯಾಗಿಲ್ಲ, ಜನವಿರೋಧಿ ಕ್ರಮವಾಗಿದೆ. ಈ ಸಂಬಂಧ ಉದ್ಘಾಟನೆಗೆ ಮೊದಲು ಚರ್ಚೆ ಆಗಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಸಂಸತ್ ಸದಸ್ಯರು ಹಾಗೂ ನಾನು ಮಂಡ್ಯ ಜಿಲ್ಲೆಯ ಗಡಿ ಭಾಗವಾದ ನಿಡಘಟ್ಟದ ಬಳಿ ಹೆದ್ದಾರಿಗೆ ಆಗಮನ-ನಿರ್ಗಮನ ಸಂಪರ್ಕವನ್ನು ಕಲ್ಪಿಸುವಂತೆ ಸಂಬಂಧಪಟ್ಟ ಪ್ರಾಜೆಕ್ಟ್ ಡೈರೆಕ್ಟರ್ ಜೊತೆಗೂಡಿ ಸ್ಥಳ ಪರಿಶೀಲನೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಮಂಡ್ಯ ಜಿಲ್ಲೆ ಗಡಿ ವ್ಯಾಪ್ತಿಯಲ್ಲಿ ಆಗಮನ-ನಿರ್ಗಮನವನ್ನು ಕಲ್ಪಿಸಲು ಅವಕಾಶ ಮಾಡಿಕೊಡುತ್ತೇವೆಂದು ಉಸ್ತುವಾರಿ ಸಚಿವರಿಗೆ ಅಧಿಕಾರಿಗಳು ತಿಳಿಸಿದ್ದರು. ಆದರೆ ಇಂದು ಸರ್ಕಾರ ಕೊಟ್ಟಿರುವ ಉತ್ತರದಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣಕ್ಕೆ ಚನ್ನಪಟ್ಟಣ ತಾಲ್ಲೂಕಿನ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಪ್ರವೇಶಕ್ಕೆ ಅವಕಾಶ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ದಿನೇಶ್ ಗೂಳಿಗೌಡ ಹೇಳಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಕುಂದಾ, ಗೋಕಾಕ್ ಕರದಂಟು ಖರೀದಿಸಿದ ಬೊಮ್ಮಾಯಿ
ಮದ್ದೂರು ಮಾರ್ಗವಾಗಿ ಕೆಸ್ತೂರು-ಕುಣಿಗಲ್-ಕೆ.ಎಂ.ದೊಡ್ಡಿ-ಮಳವಳ್ಳಿ-ಬೆಸಗರಹಳ್ಳಿ-ಕೊಪ್ಪಕ್ಕೆ ಹೋಗುವ ಪ್ರಯಾಣಿಕರಿಗೆ ಇದರಿಂದ ಅನಾನುಕೂಲವಾಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಮಂಡ್ಯ ಜಿಲ್ಲೆಯ ಗಡಿ ಭಾಗದ ಒಳಗಡೆ ನಿರ್ಗಮನ-ಆಗಮನವನ್ನು ನೀಡುತ್ತೇವೆಂದು ನೀಡಿದ್ದ ಭರವಸೆಯನ್ನು ಹುಸಿಗೊಳಿಸಿದ್ದಾರೆ. ಮಂಡ್ಯ ಜಿಲ್ಲೆಗೆ ಪ್ರವೇಶವನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಕಲ್ಪಿಸಿರುವುದು ಸರಿಯಾದ ಕ್ರಮವಲ್ಲ. ಈ ಬಗ್ಗೆ ಅನೇಕ ಬಾರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಡನೆ ಸ್ಥಳ ಪರಿಶೀಲನೆ ನಡೆಸಿ ಎಷ್ಟೇ ತಿಳಿ ಹೇಳಿದ್ದರೂ ಸಹ ಸರ್ಕಾರ ತಪ್ಪು ಉತ್ತರವನ್ನೇ ನೀಡುತ್ತಿದೆ ಎಂದು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಈ ಭಾಗದ ಸಾರ್ವಜನಿಕರು, ಜನಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಗಳು, ಹೆದ್ದಾರಿ ಉದ್ಘಾಟನೆಯಾಗುವ ಮುನ್ನ ಆಗಮನ-ನಿರ್ಗಮನ ಸ್ಥಳಗಳು ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲೇ ಇರಬೇಕಾ ಅಥವಾ ಮಂಡ್ಯ ಜಿಲ್ಲೆ ಗಡಿ ಪ್ರಾರಂಭದಿಂದ ಇರಬೇಕಾ ಎಂಬುದರ ಬಗ್ಗೆ ಬಹಿರಂಗ ಚರ್ಚೆಯಾಗಿ ಬೆಳಕು ಚೆಲ್ಲಬೇಕೆಂದು ಶಾಸಕ ದಿನೇಶ್ ಗೂಳಿಗೌಡ ಆಗ್ರಹಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
– ರೈತರಿಗೆ ಕೆಎಂಎಫ್‌ನಿಂದ ಹಾಲಿ ಪ್ರೋತ್ಸಾಹ ಧನ ರೂಪದಲ್ಲಿ ರೂ.339.00 ಕೋಟಿಗಳು ಬಾಕಿ – ಮಂಡ್ಯ ಜಿಲ್ಲೆಯ ಹಾಲು ಉತ್ಪಾದಕರಿಗೆ 36.55 ಕೋಟಿ ರೂ. ಬಾಕಿ – ಶಾಸಕ ದಿನೇಶ್ ಗೂಳಿಗೌಡ ಪ್ರಶ್ನೆಗೆ ಉತ್ತರ ನೀಡಿರುವ ಸಹಕಾರ ಸಚಿವರು
ಬೆಳಗಾವಿ: ಹಾಲು ಉತ್ಪಾದಕ ರೈತರಿಗೆ ಪ್ರಸ್ತುತ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹ ಧನವನ್ನು ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ರಾಜ್ಯ ಸರ್ಕಾರ (Karnataka Government) ಸ್ಪಷ್ಟಪಡಿಸಿದೆ.
ಈ ಸಂಬಂಧ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್ ಗೂಳಿಗೌಡ (Dinesh Guligowda) ಅವರು ಸದನದಲ್ಲಿ ಕೇಳಿರುವ ಪ್ರಶ್ನೆಗೆ ಉತ್ತರಿಸಿರುವ ಸರ್ಕಾರ, ಸದ್ಯಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ. ಹಾಲಿ ಎಲ್ಲ ರೈತರಿಗೆ ಈಗ ನಿಗದಿ ಮಾಡಿರುವ ಐದು ರೂಪಾಯಿಯನ್ನು ನೀಡುತ್ತಾ ಬಂದಿದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ರಾಜ್ಯಗಳ ಪುನರ್ ವಿಂಗಡಣಾ ಕಾಯ್ದೆ: ಭಾಷಾವಾರು ಪ್ರಾಂತ್ಯಗಳ ರಚನೆಯೇ ಅಂತಿಮ – ಸಿಎಂ
ಹಾಲು ಉತ್ಪಾದಕರಿಗೆ ಸರ್ಕಾರ 5 ರೂಪಾಯಿಗಳ ಪ್ರೋತ್ಸಾಹ ಧನವನ್ನು ಪ್ರತಿ ತಿಂಗಳು ನೀಡಲಾಗುತ್ತಿದೆಯೇ? ಪ್ರಸ್ತುತ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹ ಧನವನ್ನು ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ ಸಂಬಂಧ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್ ಗೂಳಿಗೌಡ ಅವರು ಕೇಳಿದ್ದ ಪ್ರಶ್ನೆಗೆ ಸದನದಲ್ಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ (S.T.Somshekar) ಉತ್ತರಿಸಿದ್ದಾರೆ.
339.00 ಕೋಟಿ ರೂ. ಪ್ರೋತ್ಸಾಹಧನ ಬಾಕಿ
ಜಿಲ್ಲೆಯ ಹಾಲು ಉತ್ಪಾದಕರಿಗೆ ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧನ ಉಳಿಸಿಕೊಳ್ಳಲಾಗಿದೆಯೇ? ಉಳಿಸಿಕೊಂಡಿದ್ದರೆ ಮೊತ್ತವೆಷ್ಟು ಮತ್ತು ಯಾವಾಗ ಬಾಕಿ ಮೊತ್ತವನ್ನು ನೀಡಲಾಗುವುದು ಎಂದು ಶಾಸಕ ದಿನೇಶ್ ಗೂಳಿಗೌಡ ಅವರು ಪ್ರಶ್ನೆ ಮಾಡಿದ್ದರು. ಇದಕ್ಕೆ ಸಾಮಾನ್ಯ ವರ್ಗದ ಹೈನುಗಾರಿಕೆ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ 2022ರಲ್ಲಿ ಹಾಲಿ ಪ್ರೋತ್ಸಾಹ ಧನ 339.00 ಕೋಟಿ ರೂ. ಬಾಕಿಯಿರುತ್ತದೆ. ನವೆಂಬರ್-2022ರ ತಿಂಗಳಲ್ಲಿ ಪರಿಶಿಷ್ಟ ಜಾತಿ ವರ್ಗದ ಹೈನುಗಾರರಿಗೆ 5.00 ಕೋಟಿ ರೂ. ಮತ್ತು ಪರಿಶಿಷ್ಟ ಪಂಗಡ ವರ್ಗದ ಹೈನುಗಾರರಿಗೆ 3.00 ಕೋಟಿಗಳನ್ನು ಪಾವತಿಸಲು ಬಾಕಿಯಿರುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸವರ್ಷದ ಮೊದಲ ವಾರದಲ್ಲೇ KPTCL ಎಇ, ಜೆಇ ನೇಮಕ ಪರೀಕ್ಷೆ ಫಲಿತಾಂಶ: ಸುನೀಲ್ ಕುಮಾರ್
ಮಂಡ್ಯ ಜಿಲ್ಲೆಯಲ್ಲಿ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ರೈತರಿಗೆ 36.55 ಕೋಟಿ ರೂಪಾಯಿ ಬಾಕಿ ಪ್ರೋತ್ಸಾಹಧನ ನೀಡಬೇಕಿದೆ. ಮಂಡ್ಯ ಹಾಲು ಒಕ್ಕೂಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಟ್ಟು ನೌಕರರ ಸಂಖ್ಯೆ ಎಷ್ಟು ಎಂಬ ಪ್ರಶ್ನೆಗೆ, 267 ಮಂದಿ ಕಾಯಂ ನೌಕರರು ಕಾರ್ಯನಿರ್ವಹಣೆ ಮಾಡುತ್ತಿದ್ದು, ಗುತ್ತಿಗೆ ಆಧಾರದಲ್ಲಿ 1,057 ಮಂದಿ ಕಾರ್ಮಿಕರು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ ಎಂಬ ಮಾಹಿತಿಯನ್ನು ರಾಜ್ಯ ಸರ್ಕಾರ ನೀಡಿದೆ.
ಈ ಸಹಕಾರ ಸಂಘಗಳು ಸ್ವಂತ ಕಟ್ಟಡಗಳನ್ನು ಹೊಂದಿದೆಯೇ ಅಥವಾ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದೆಯೇ? ಹಾಗಿದ್ದಲ್ಲಿ, ಅವುಗಳ ಒಟ್ಟು ಸಂಖ್ಯೆ ಎಷ್ಟು ಎಂದು ಶಾಸಕ ದಿನೇಶ್ ಗೂಳಿಗೌಡ ಅವರು ಕೇಳಿರುವ ಪ್ರಶ್ನೆಗೆ, ಒಕ್ಕೂಟದ ವ್ಯಾಪ್ತಿಯ ಒಟ್ಟು 1,276 ಹಾಲು ಉತ್ಪಾದಕರ ಸಹಕಾರ ಸಂಘಗಳ ಪೈಕಿ 777 ಹಾಲು ಉತ್ಪಾದಕರ ಸಹಕಾರ ಸಂಘಗಳು ಸ್ವಂತ ಕಟ್ಟಡ ಹೊಂದಿದ್ದು, ಉಳಿದ 499 ಸಂಘಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಸರ್ಕಾರ ಮಾಹಿತಿ ನೀಡಿದೆ. ಇದನ್ನೂ ಓದಿ: ಜಿಲ್ಲಾ ಕೇಂದ್ರಗಳಲ್ಲಿ ಉದ್ಯಮಿಯಾಗು-ಉದ್ಯೋಗ ನೀಡು ಕಾರ್ಯಾಗಾರ: ಸಚಿವ ನಿರಾಣಿ
ಮಂಡ್ಯ ಹಾಲು ಒಕ್ಕೂಟದಿಂದ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಎಷ್ಟು ಲೀಟರ್ ಹಾಲನ್ನು ಖರೀದಿ ಮಾಡಲಾಗುತ್ತದೆ ಎಂಬ ಶಾಸಕರ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಮಂಡ್ಯ ಹಾಲು ಒಕ್ಕೂಟವು 2022-23ನೇ ಸಾಲಿನಲ್ಲಿ ನವೆಂಬರ್- 2022ರ ಮಾಹೆಯ ಅಂತ್ಯಕ್ಕೆ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸರಾಸರಿ 8,99,048 ಲೀಟರ್ ಹಾಲನ್ನು ರೈತರಿಂದ ಖರೀದಿಸಲಾಗಿದೆ ಎಂದು ಉತ್ತರ ನೀಡಿದ್ದಾರೆ. ಶೀಘ್ರವಾಗಿ ಪ್ರೋತ್ಸಾಹ ಧನವನ್ನು DBT ಮುಖೇನ ನೇರವಾಗಿ ಹಾಲು ಉತ್ಪಾದಕರ ಆಧಾರ್ ಜೋಡಣೆ ಬ್ಯಾಂಕ್ ಖಾತೆಗೆ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ (Prabhu Chauhan) ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
– ಶಾಸಕ ದಿನೇಶ್ ಗೂಳಿಗೌಡರಿಗೆ ಸಕಾರತ್ಮಕವಾಗಿ ಸ್ಪಂದಿಸಿದ ಸಿಎಂ
– ಬಾಕಿ 46.25 ಕೋಟಿ ರೂ. ಬಿಡುಗಡೆಗೆ ಮನವಿ
ಬೆಂಗಳೂರು: ಮೈಸೂರು ಸಕ್ಕರೆ ಕಂಪನಿ ನಿಗಮದ ಮಂಡ್ಯ ಕಾರ್ಖಾನೆಗೆ 3.75 ಕೋಟಿ ರೂ.ವನ್ನು ಬಿಡುಗಡೆ ಮಾಡಿದ್ದು, ಬಾಕಿ ಇರುವ 46.25 ಕೋಟಿ ರೂ. ಹಣವನ್ನು ಕೂಡಲೇ ಬಿಡುಗಡೆ ಮಾಡಿ, ಕಬ್ಬು ನುರಿಯುವ ಕೆಲಸ ಪ್ರಾರಂಭಕ್ಕೆ ಚಾಲನೆ ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಂಡ್ಯ ಶಾಸಕ ದಿನೇಶ್ ಗೂಳಿಗೌಡ ಅವರು ಮನವಿಪತ್ರ ಸಲ್ಲಿಸಿದರು.
ಬೊಮ್ಮಾಯಿ ಅವರ ಸರ್ಕಾರಿ ನಿವಾಸದಲ್ಲಿ ಭೇಟಿ ಮಾಡಿದ ಮನವಿ ಸಲ್ಲಿಸಿದರು. ಈ ಸಂಬಂಧ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಶೀಘ್ರವೇ ಬಾಕಿ ಅನುದಾನಗಳನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದರು.
ಪತ್ರದ ಸಾರಾಂಶ ಹೀಗಿದೆ: ಮಂಡ್ಯ ಜಿಲ್ಲೆ ಜನತೆಯ ಜೀವನಾಧಾರವಾಗಿರುವ ಮೈಸೂರು ಸಕ್ಕರೆ ಕಾರ್ಖಾನೆ ಪುನಾರಂಭ ಹಾಗೂ ಪುನಶ್ಚೇತನಕ್ಕಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 50 ಕೋಟಿ ರೂ.ವನ್ನು ಮೀಸಲಿಟ್ಟಿದ್ದು, ಅದರಲ್ಲಿ ಪ್ರಥಮ ಹಂತವಾಗಿ 15 ಕೋಟಿ ರೂ.ವನ್ನು ಬಿಡುಗಡೆಗೊಳಿಸಲಾಗುತ್ತದೆ ಎಂಬ ಆಶ್ವಾಸನೆಯನ್ನು ಸಾರ್ವಜನಿಕವಾಗಿ ನೀಡಲಾಗಿತ್ತು. ಆದರೆ, ಇದೀಗ ಕೇವಲ 3.75 ಕೋಟಿ ರೂ.ವನ್ನು ಮಾತ್ರವೇ ಬಿಡುಗಡೆ ಮಾಡಲಾಗಿದ್ದು, ಸದರಿ ಹಣ ಜನರ ನಿರೀಕ್ಷೆ ಮತ್ತು ಕಾರ್ಖಾನೆ ಪುನಾರ್ ಆರಂಭಿಸುವ ಕಾರ್ಯಕ್ಕೆ ತೊಡಕನ್ನುಂಟು ಮಾಡಿದೆ.
ಕಾರ್ಖನೆಯಲ್ಲಿ ಸಾಕಷ್ಟು ತಾಂತ್ರಿಕ ಹಾಗೂ ಆಡಳಿತಾತ್ಮಕ ತೊಂದರೆಗಳು ಇದ್ದು, ಈಗಾಗಲೇ ಕಾರ್ಖಾನೆ ಆರಂಭವಾಗದೆ ಸುಮಾರು 2 ವರ್ಷಗಳು ಕಳೆದಿವೆ. ಜೊತೆಗೆ ಸಾಕಷ್ಟು ಯಂತ್ರಗಳ ದುರಸ್ತಿಯಾಗಬೇಕಿದ್ದು, ಇನ್ನು ಹೊಸ ಯಂತ್ರೊಪಕರಣಗಳು ಅಥವಾ ಬಿಡಿಭಾಗಗಳು ಬೇಕಿರುತ್ತವೆ. ಜೊತೆಗೆ ಇನ್ನಿತರ ಮೂಲಭೂತ ಸೌಲಭ್ಯವನ್ನು ಒದಗಿಸಿ ಸುಸ್ಥಿತಿಗೆ ತರಬೇಕಿದ್ದು, ಈ ಎಲ್ಲಾ ಪ್ರಕ್ರಿಯೆಗೆ ಈಗ ಬಿಡುಗಡೆ ಮಾಡಿರುವ 3.75 ಕೋಟಿ ರೂ. ಯಾವುದಕ್ಕೂ ಸಾಕಾಗುವುದಿಲ್ಲ.
ಈಗ ಜೂನ್ ತಿಂಗಳ ಆರಂಭಿಕ ಹಂತದಲ್ಲಿದ್ದೇವೆ. ಜುಲೈ ಮಾಸಾಂತ್ಯದಲ್ಲಿ ಕಾರ್ಖಾನೆಯನ್ನು ಆರಂಭಗೊಳಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಕ್ಕರೆ ಸಚಿವರು ಭರವಸೆಯನ್ನು ನೀಡಿದ್ದಾರೆ. ಹೀಗಾಗಿ ಕಬ್ಬು ನುರಿಯಲು ಗರಿಷ್ಠ ಎಂದರೆ ಇನ್ನು ಎರಡರಿಂದ ಎರಡೂವರೆ ತಿಂಗಳ ಅವಕಾಶ ಮಾತ್ರ ಇದೆ. ಇಂತಹ ಸಂದರ್ಭದಲ್ಲಿ ಯಂತ್ರೋಪಕರಣಗಳನ್ನು ಸರಿಪಡಿಸಿ, ಸಿಬ್ಬಂದಿಯನ್ನು ನಿಯೋಜಿಸಿಕೊಂಡು ಕಾರ್ಯನಿರ್ವಹಣೆ ಮಾಡಬೇಕೆಂದರೆ ಕೆಲಸ ಕಾರ್ಯಗಳು ಚುರುಕಾಗಿ ನಡೆಯಬೇಕು. ಇದಕ್ಕೆ ಸಾಕಷ್ಟು ಹಣದ ಅವಶ್ಯಕತೆ ಇರುತ್ತದೆ. ಹಣ ಬಿಡುಗಡೆ ನಿಧಾನವಾಗುತ್ತಾ ಹೋದಂತೆ ಕಾರ್ಖಾನೆ ಆರಂಭವೂ ವಿಳಂಬವಾಗುತ್ತಾ ಹೋಗುತ್ತದೆ. ತೀರಾ ವಿಳಂಬವಾದರೆ ಕಾರ್ಖಾನೆ ಪ್ರಾರಂಭಿಸಿಯೂ ಯಾರಿಗೂ ಪ್ರಯೋಜನ ಇರುವುದಿಲ್ಲ. ಇದನ್ನೂ ಓದಿ: ಗೋ ಪೂಜೆ ಮಾಡುವವರು ಗೋಮಾಂಸ ತಿಂತೀನಿ ಅಂದ್ರೆ ಅವರಿಗಿಂತ ಕಟುಕ ಈ ಪ್ರಪಂಚದಲ್ಲಿ ಯಾರು ಇಲ್ಲ: ಆರ್.ಅಶೋಕ್
ಇನ್ನು ಬಂದಿರುವ ಪ್ರಾಥಮಿಕ ಮಾಹಿತಿ ಪ್ರಕಾರ 15 ಕೋಟಿ ರೂ. ಹಣಕಾಸು ಇಲಾಖೆಯಲ್ಲಿ ಮಂಜೂರಾಗಿದ್ದು, ಆದರೆ ಕೇವಲ 3.75 ಕೋಟಿ ರೂ. ಬಿಡುಗಡೆಯಾಗಿರುತ್ತದೆ. ಆದರೆ, ಉಳಿದ ಮೊತ್ತವನ್ನು ಸಹ ಶೀಘ್ರದಲ್ಲಿ ಬಿಡುಗಡೆ ಮಾಡಿದರೆ ಮುಂದಿನ ಚಟುವಟಿಕೆಗೆ ಅನುಕೂಲವಾಗಿ ಈ ಭಾಗದ ರೈತರಿಗೆ ಸೂಕ್ತ ಸಮಯದಲ್ಲಿ ಕಬ್ಬು ನುರಿಸಲು ಅನುಕೂಲವಾದಂತೆ ಆಗುತ್ತದೆ.
ವಕಿರ್ಂಗ್ ಕ್ಯಾಪಿಟಲ್‍ಗೆ ವ್ಯವಸ್ಥೆ ಮಾಡಿ: ಯಾವುದೇ ಒಂದು ಕಾರ್ಖಾನೆ ಆರಂಭಕ್ಕೆ ಮೊದಲು ವರ್ಕಿಂಗ್ ಕ್ಯಾಪಿಟಲ್ ಇರುವುದು ಅತ್ಯವಶ್ಯಕ. ಈ ನಿಟ್ಟಿನಲ್ಲಿ ಬಜೆಟ್‍ನಲ್ಲಿಯೂ ಪ್ರಸ್ತಾಪವಾಗಿದೆ. ಬ್ಯಾಂಕ್ ಮೂಲಕ ವರ್ಕಿಂಗ್ ಕ್ಯಾಪಿಟಲ್‍ಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತಾದರೂ ಇನ್ನೂ ಆ ಬಗ್ಗೆ ಅಧಿಕೃತ ಕ್ರಮವಾಗಲಿ, ಆದೇಶವಾಗಲಿ ಹೊರಬಿದ್ದಿಲ್ಲ. ಇದನ್ನೂ ಓದಿ: ಕನ್ನಡಿಗರ ತಂಟೆಗೆ ಬಂದ್ರೆ ಹುಷಾರ್! – MES ಪುಂಡರಿಗೆ ಸಿಎಂ ಎಚ್ಚರಿಕೆ
ಕಾರ್ಖಾನೆ ಒಮ್ಮೆ ಪ್ರಾರಂಭವಾದ ಮೇಲೆ ಬರುವಂತಹ ಖರ್ಚು ವೆಚ್ಚಗಳು ಸೇರಿದಂತೆ ಕಾರ್ಖಾನೆಗೆ ಕಬ್ಬು ಹಾಕಿದ ರೈತರಿಗೆ ಹಣ ಪಾವತಿ ಮಾಡಲು ಅನುದಾನವು ಇರಬೇಕಾಗುತ್ತದೆ. ಈ ಮೂಲಕ ಸುಗಮವಾಗಿ ಚಾಲನೆಯನ್ನು ಮಾಡಬೇಕಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಕ್ರಮವಾಗಿಲ್ಲ. ಹೀಗಾಗಿ ಈ ಎಲ್ಲಾ ವಿಷಯಗಳ ನಿಟ್ಟಿನಲ್ಲಿ ಗಮನಹರಿಸಿ, ಕಾರ್ಖಾನೆಗೆ ಬಾಕಿ ಇರುವ ಅನುದಾನವನ್ನು ಬಿಡುಗಡೆ ಮಾಡುವುದಲ್ಲದೆ, ಸಂಪೂರ್ಣ 50 ಕೋಟಿ ರೂ.ವನ್ನು (ಅಂದರೆ ಬಾಕಿ 46.25 ಕೋಟಿ ರೂ.) ಆದಷ್ಟು ಶೀಘ್ರವಾಗಿ ಬಿಡುಗಡೆಗೊಳಿಸಿ ರೈತರ ನೆರವಿಗೆ ದಾವಿಸಬೇಕು ಎಂದು ಮಂಡ್ಯ ಜಿಲ್ಲೆಯ ರೈತರ ಪರವಾಗಿ ಮನವಿ ಮಾಡಿದರು.
ಮಂಡ್ಯ: ಇದೊಂದು ನಿರಾಶಾದಾಯಕ ಬಜೆಟ್ ಆಗಿದೆ. ಮಂಡ್ಯ ಜಿಲ್ಲೆಯ ಜನತೆಯ ನಿರೀಕ್ಷೆಯನ್ನು ಈ ಸರ್ಕಾರ ಹುಸಿಗೊಳಿಸಿದೆ ಎಂದು ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್ ಗೂಳಿಗೌಡ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಬಹುಪಾಲು ವರ್ಗದ ಜೀವನೋಪಾಯಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅನುಕೂಲ ಮಾಡಿಕೊಡುತ್ತಿದ್ದ ಬಹು ಆಕಾಂಕ್ಷಿತ ಮೈಸೂರು ಸಕ್ಕರೆ ಕಾರ್ಖಾನೆಗೆ ಘೋಷಿಸಿರುವ 50 ಕೋಟಿ ರೂಪಾಯಿ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ. ಯಂತ್ರೋಪಕರಣ ದುರಸ್ತಿಗೆ ಈ ಹಣವನ್ನು ಒದಗಿಸುವುದಾಗಿ ಹೇಳಲಾಗಿದೆ. ಆದರೆ ಕಾರ್ಖಾನೆ ಅಭಿವೃದ್ಧಿಗೆ ಈ ಹಣ ಯಾವುದಕ್ಕೂ ಸಾಲದು ಎಂಬುದು ತಿಳಿಯುತ್ತದೆ. ಹಾಲಿ ಕಾರ್ಖಾನೆ ಅಭಿವೃದ್ಧಿಗೆ 200 ಕೋಟಿ ರೂಪಾಯಿಯ ಅನುದಾನವನ್ನು ಕೇಳಿದ್ದೇವು. ಅಲ್ಲದೇ ಎಥೆನಾಲ್ ಘಟಕವನ್ನು ಸ್ಥಾಪಿಸಿ ಕಾರ್ಖಾನೆಯನ್ನು ಲಾಭದಾಯಕವನ್ನಾಗಿ ಮಾಡಲೂ ಕೇಳಿಕೊಂಡಿದ್ದೇವು. ಆದರೆ, ಸರ್ಕಾರಕ್ಕೆ ಇದಾವುದರ ಮೇಲೂ ಆಸಕ್ತಿ ಇಲ್ಲ ಎಂಬುದು ಈ ಬಜೆಟ್ ಮೂಲಕ ಸಾಬೀತಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಬಿಸಿಯೂಟ ತಯಾರಕರಿಗೆ 1,000 ರೂ. ಗೌರವಧನ ಹೆಚ್ಚಳ
ನಾನು ಮಾನ್ಯ ಮುಖ್ಯಮಂತ್ರಿಯವರಲ್ಲಿ ಮನವಿ ಈಗಲೂ ಕಾಲಾವಕಾಶ ಮಿಂಚಿಲ್ಲ. ತಾವು ಬಜೆಟ್ ಮೇಲಿನ ಚರ್ಚೆ ಸಂದರ್ಭದಲ್ಲಿ ಇದನ್ನು ಮರುಪರಿಶೀಲನೆ ಮಾಡಿ 200 ಕೋಟಿ ರೂ. ಅನುದಾನ ಮೀಸಲಿಡಬೇಕು. ಜೊತೆಗೆ ಎಥೆನಾಲ್ ಘಟಕ ಸ್ಥಾಪನೆಗೆ ಕ್ರಮ ವಹಿಸಬೇಕು ಎಂದು ಮನವಿ ಮಾಡುತ್ತೇನೆ. ವಿಶ್ವೇಶ್ವರಯ್ಯ ನಾಲೆ ಆಧುನೀಕರಣಕ್ಕೆ 500 ಕೋಟಿ ರೂಪಾಯಿಯನ್ನು ಕೇಳಲಾಗಿತ್ತು. ಅದನ್ನೂ ನೀಡದಿರುವುದು ತೀವ್ರ ಬೇಸರ ತಂದಿದೆ. ಇದನ್ನೂ ಸಹ ಮುಖ್ಯಮಂತ್ರಿಯವರು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ಅಂತಾರಾಷ್ಟ್ರೀಯ ಗುಣಮಟ್ಟದ ರೈತ ತರಬೇತಿ ಕೇಂದ್ರಕ್ಕೋಸ್ಕರ ಅಂತಾರಾಷ್ಟ್ರೀಯ ಮಟ್ಟದ ರೈತ ಭವನವನ್ನು ಸ್ಥಾಪಿಸುವಂತೆ ಮನವಿ ಮಾಡಲಾಗಿತ್ತು. ಆದರೆ ಸರ್ಕಾರ ಇದನ್ನು ಹುಸಿಗೊಳಿಸಿದೆ. ಕೋವಿಡ್ ಸಮಯದಲ್ಲಿ ಮೃತಪಟ್ಟ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಮಾಡಿರುವ ಸಾಲವನ್ನು ಮನ್ನಾ ಮಾಡಬೇಕಿತ್ತು. ಆದರೆ ಅದರ ಬಗ್ಗೆ ಸರ್ಕಾರ ಯಾವುದೇ ಪ್ರಸ್ತಾಪ ಮಾಡಿಲ್ಲ. ಇದನ್ನು ಸಹ ಬಜೆಟ್ ಮೇಲಿನ ಚರ್ಚೆ ಸಮಯದಲ್ಲಿ ಮಾನ್ಯ ಮುಖ್ಯಮಂತ್ರಿಯವರು ಮರುಪರಿಶೀಲಿಸಿ ಕೋವಿಡ್ ಸಮಯದಲ್ಲಿ ಮೃತಪಟ್ಟ ರೈತರ ಸಾಲ ಮನ್ನಾ ಮಾಡುವ ಮೂಲಕ ರೈತ ಕುಟುಂಬಗಳಿಗೆ ನೆರವಾಗಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Karnataka Budget: ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಇಲ್ಲ
ಮಂಡ್ಯ ಜಿಲ್ಲೆ ಸೇರಿದಂತೆ ಹಳೇ ಮೈಸೂರು ಭಾಗಕ್ಕೆ ವಿಶೇಷವಾದಂತಹ ಯಾವುದೇ ರೀತಿಯ ಕೊಡುಗೆಯನ್ನು ನೀಡಿಲ್ಲ. ಯಾವುದೇ ರೀತಿಯ ಕಾರ್ಯಕ್ರಮವನ್ನು ಘೋಷಣೆ ಮಾಡದೇ ಮುಖ್ಯಮಂತ್ರಿಯವರು ನಿರ್ಲಕ್ಷ್ಯ ವಹಿಸಿದ್ದಾರೆ. ಇನ್ನೂ ರೈತರ ಆದಾಯವನ್ನು ದ್ವಿಗುಣ ಮಾಡುತ್ತೇವೆ ಎಂದು ಹೇಳುತ್ತಾ ಬರಲಾಗುತ್ತಿದೆಯೇ ಹೊರತು ಅಂತಹ ಯಾವುದೇ ಘೋಷಣೆಗಳು, ನಿರ್ಧಾರಗಳು ಈ ಬಜೆಟ್‍ನಲ್ಲಿ ಕಾಣಿಸಲಿಲ್ಲ. ಹೀಗಾಗಿ ಇದು ನಿರಾಶಾದಾಯಕ ಬಜೆಟ್ ಎಂದು ಹೇಳಲು ಇಚ್ಛಿಸುತ್ತೇನೆ ಎಂದು ಹೇಳಿದ್ದಾರೆ.
ಮಂಡ್ಯ: ಕಾಂಗ್ರೆಸ್ ಉಸಿರು ನಿಲ್ಲಿಸುತ್ತೇನೆ ಎಂದಿದ್ದ ಬಿಎಸ್‍ವೈಗೆ ಈ ಚುನಾವಣೆ ಉತ್ತರ ನೀಡಿದೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷ ಮಂಡ್ಯ ಕಾಂಗ್ರೆಸ್‍ಗೆ ಕರಾಳವಾಗಿತ್ತು. ಪಂಚಾಯಿತಿಯಲ್ಲೂ ಸಹ ಜೆಡಿಎಸ್‍ಗಿಂತಲೂ ನಾವು ಕಡಿಮೆ ಇದ್ದೆವು. ಎಂಎಲ್‍ಸಿ ಚುನಾವಣೆಯಲ್ಲಿ ಪಕ್ಷಾತೀತವಾಗಿ ಕಾಂಗ್ರೆಸ್ ಬೆಂಬಲಿಸಿದ್ದಾರೆ. ದಿನೇಶ್ ಗೂಳಿಗೌಡರ ಗೆಲುವು ನಮ್ಮ ಒಗ್ಗಟ್ಟಿನ ಫಲಿತಾಂಶ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಪತ್ನಿಯ ಸಾವಿನ ಸುದ್ದಿ ತಿಳಿದು ನೇಣಿಗೆ ಶರಣಾದ ಪತಿ
ನಮಗೆ ಯಾವುದೇ ಅಧಿಕಾರ ಇಲ್ಲದ ಸಮಯದಲ್ಲಿ ಮತದಾರರು ನಮ್ಮ ಕೈಹಿಡಿದಿದ್ದಾರೆ. ಇದು ಮಂಡ್ಯ ಜಿಲ್ಲೆಯ ಸ್ವಾಭಿಮಾನದ ಗೆಲುವಾಗಿದೆ. ಈ ಗೆಲುವು ಪ್ರಥಮ ಹೆಜ್ಜೆ, ಇದನ್ನು ಜವಬ್ದಾರಿಯನ್ನಾಗಿ ತೆಗೆದುಕೊಂಡಿದ್ದೇವೆ. ಬಿಜೆಪಿ, ಜೆಡಿಎಸ್ ರೈತ ಸಂಘದ ಸದಸ್ಯರು ನಮ್ಮನ್ನ ಬೆಂಬಲಿಸಿದ್ದಾರೆ ಅವರಿಗೆಲ್ಲ ಕೃತಜ್ಞತೆ ಎಂದು ನುಡಿದರು. ಇದನ್ನೂ ಓದಿ: ಅಭ್ಯರ್ಥಿ ರವಿ ಮದ್ದು ಗುಂಡೇಟು ತಿಂದವ್ರೆ: ಡಿಕೆಶಿ
ಎಲ್ಲರೂ ಒಟ್ಟಾಗಿ ಜೆಡಿಎಸ್ ಸೋಲಿಸಿದ್ದು ತಪ್ಪಾ? ರಾಜ್ಯದಲ್ಲಿ ಬಿಜೆಪಿಗೆ ಸಹಕರಿಸುತ್ತೇವೆ ಎಂದು ಜೆಡಿಎಸ್ ನಾಯಕರು ಹೇಳಿದ್ದರು. ನಾವು ಎಲ್ಲೂ ಯಾರನ್ನು ಬೆಂಬಲ ಕೇಳಿರಲಿಲ್ಲ. ಬಿಜೆಪಿಯಲ್ಲೂ ಕೆಲವರು ನಮ್ಮ ಅಣ್ಣ ತಮ್ಮಂದಿರು ನಮಗೆ ಸಹಕರಿಸಿದ್ದಾರೆ ಅವರಿಗೆ ಧನ್ಯವಾದ ಎಂದರು.
ಮಂಡ್ಯ: ಈ ಬಾರಿಯ ಪರಿಷತ್ತಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ದಿನೇಶ್ ಗೂಳಿಗೌಡ ಅವರು ಗೆದ್ದೆ ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳವಾರ ಮಂಡ್ಯದ ಸುಮರವಿ ಮಂಟಪದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಷತ್ತಿನ ಚುನಾವಣೆಗೆ ನಿಂತಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ದಿನೇಶ್ ಗೂಳಿಗೌಡ ಅವರಿಗೆ ಎಲ್ಲಾ ಚುನಾಯಿತ ಪ್ರತಿನಿಧಿಗಳು ಇವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಈ ಬಾರಿ ಪಕ್ಷದಿಂದ 20 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದು, ಬಿಜೆಪಿಯವರು ಸಹ 20 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿದ್ದು, ಜೆಡಿಎಸ್ ಅವರು 6 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದಾರೆ. ನನಗೆ ಇಂದಿಗೂ ವಿಶ್ವಾಸವಿದ್ದು, 20 ಸ್ಥಾನಗಳಲ್ಲಿ 15 ಸ್ಥಾನಗಳನ್ನಾದರೂ ಗೆಲ್ಲುತ್ತೇವೆ. ನಾವು ಯಾರ ಮೇಲೂ ಅವಲಂಬನೆಯಾಗಿಲ್ಲ. ಸ್ವತಂತ್ರವಾಗಿ ಸ್ಪರ್ಧಿಸಿದ್ದೇವೆ. ಆದರೆ ಬಿಜೆಪಿ ಹಾಗೂ ಜೆಡಿಎಸ್‍ನವರು ಪರೋಕ್ಷವಾಗಿ ಒಬ್ಬರಿಗೊಬ್ಬರು ಬೆಂಬಲ ಕೊಡುವುದಾಗಿ ಹೇಳಿದ್ದಾರೆ. ಇದರಿಂದ ಅವರು ಒಟ್ಟಿಗೆ ಚುನಾವಣೆ ನಡೆಸುತ್ತಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಯಾವಾಗಲೂ ಸೆಕ್ಯೂರಲಿಸಂ ತತ್ವದ ಮೇಲೆ, ಸಂವಿಧಾನದ ಮೇಲೆ ನಂಬಿಕೆ ಇಟ್ಟಿದೆ. ಕೋಮುವಾದಿಗಳ ಜೊತೆ ಯಾವುದೇ ಕಾರಣಕ್ಕೂ ಕೂಡ ಕೈ ಜೋಡಿಸುವುದಿಲ್ಲ. ಆದರೆ ಜೆಡಿಎಸ್ ಅವರು ತಮ್ಮ ಪಕ್ಷದ ಹೆಸರಿನ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಜೆಡಿಎಸ್ ಅವರು 2005ರಿಂದಲೂ ಬಿಜೆಪಿ ಜೊತೆಯಲ್ಲಿ ಹೊಂದಾಣಿಕೆ ಮಾಡಿಕೊಂಡು ಬಂದಿದ್ದಾರೆ. ಈಗ ಮತ್ತೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಜಾತ್ಯಾತೀತ ತತ್ವದ ಮೇಲೆ ನಂಬಿಕೆ ಇಟ್ಟುಕೊಂಡಿರುವ ಎಲ್ಲಾ ಮತದಾರರು ಕೂಡ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ತೀರ್ಮಾನ ಮಾಡಿದ್ದಾರೆ ಎಂದರು.
ಈ ಬಾರಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಇಲ್ಲದೇ ಚುನಾವಣೆ ನಡೆಯುತ್ತಿದೆ. ಕಾರಣ ಸೋಲುವ ಭಯದಿಂದ ಬಿಜೆಪಿ ಅವರು ಮುಂದೂಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ ವಿರುದ್ಧವಾಗಿ ಗಾಳಿ ಬೀಸಲು ಪ್ರಾರಂಭವಾಗಿದೆ. ಇದಕ್ಕೆ ಕಾರಣ ಬಿಜೆಪಿ ಆಡಳಿತದಿಂದ ಚುನಾಯಿತ ಪ್ರತಿನಿಧಿಗಳು ಹಾಗೂ ಸಾಮಾನ್ಯ ಮತದಾರರು ಬೇಸತ್ತಿದ್ದಾರೆ. ಬಿಜೆಪಿ ಅವರ ಭ್ರಷ್ಟಾಚಾರದಿಂದ, ದುರಾಡಳಿತದಿಂದ, ಜನವಿರೋಧಿ, ರೈತ ವಿರೋಧಿ ನೀತಿ, ಅಭಿವೃದ್ಧಿ ಶೂನ್ಯ ದಿಂದ ಜನರು ಬೇಸತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಎರಡು ವರ್ಷ ಮೀರಿದೆ, ನರೇಂದ್ರ ಮೋದಿ ಬಂದು 8 ವರ್ಷ ಆಗಿದೆ. ಪಂಚಾಯತ್ ರಾಜ್ ವ್ಯವಸ್ಥೆ ಹಾಗೂ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಬಿಜೆಪಿ ಹಾಗೂ ಜೆಡಿಎಸ್ ಕೊಡುಗೆ ಶೂನ್ಯ ಎಂದು ಹೇಳಿದರು.
ಪಂಚಾಯತ್ ವ್ಯವಸ್ಥೆಗೆ ಕಾಂಗ್ರೆಸ್ ಪಕ್ಷ ಎರಡು ಬಾರಿ ಶಕ್ತಿ ಕೊಡುವ ಕೆಲಸ ಮಾಡಿದೆ. ರಾಜೀವ್ ಗಾಂಧಿ ಅವರು ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿಗಳನ್ನು ತಂದು ಹಿಂದುಳಿದ ವರ್ಗಗಳಿಗೆ, ಅಲ್ಪಸಂಖ್ಯಾಕರಿಗೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡಿದರು ಎಂದು ತಿಳಿಸಿದರು.
ಅಧಿಕಾರ ವಿಕೇಂದ್ರೀಕರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ನಂಬಿಕೆ ಹಾಗೂ ಬದ್ಧತೆ ಇದೆ. ಅಧಿಕಾರ 04 ವರ್ಗಗಳಲ್ಲಿ ಹಂಚಿಕೆಯಾಗಬೇಕು. ಇದರಿಂದ ಎಲ್ಲರೂ ಪಾಲ್ಗೊಳ್ಳಲು ಅವಕಾಶ ಸಿಗುತ್ತದೆ. ಇದನ್ನು ಪ್ರಜಾತಂತ್ರದ ವಿಕೇಂದ್ರೀಕರಣ ಎಂದು ಕರೆಯಲಾಗುತ್ತದೆ. ಈ ಅಧಿಕಾರ ವಿಕೇಂದ್ರೀಕರಣಕ್ಕೆ ಬೇರೆ ಪಕ್ಷದವರ ಕೊಡುಗೆ ಏನು ಇಲ್ಲ. ಕಾಂಗ್ರೆಸ್ ಸರ್ಕಾರ ನರೇಗಾದಂತಹ ಯೋಜನೆ ರೂಪಿಸದಿದ್ದರೆ ಹಾಹಾಕಾರ ಉಂಟಾಗುತ್ತಿತ್ತು. ಮೊದಲ ಲಾಕ್‍ಡೌನ್ ಸಂದರ್ಭದಲ್ಲಿ ಜನರಿಗೆ ಅನುಕೂಲವಾಗಿದ್ದೆ ಈ ನರೇಗದಿಂದ. ಈ ನರೇಗದಿಂದ ಸುಮಾರು 4 ರಿಂದ 5 ಕೋಟಿ ಹಣ ಬಿಡುಯಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಆಂಧ್ರ ಪ್ರದೇಶ ಪ್ರವಾಹ – 1 ಕೋಟಿ ರೂ. ದೇಣಿಗೆ ಕೊಟ್ಟ ಪ್ರಭಾಸ್
ಈ ಬಾರಿ ಹೆಚ್ಚು ಮಳೆಯಿಂದ ಬೆಳೆ ನಾಶವಾಗಿದೆ. ಮನೆಗಳು ನೆಲಸಮವಾಗಿದೆ. ಕೋವಿಡ್ ಕಾಲದಲ್ಲಿ ದೇಶದಲ್ಲಿ 50 ಲಕ್ಷಕ್ಕೂ ಹೆಚ್ಚು ಜನ ನಿಧನರಾದರು. ಕರ್ನಾಟಕದ ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ 36 ಜನರು ಸತ್ತರು. ಇದಕ್ಕೆ ಆರೋಗ್ಯ ಸಚಿವರಾದ ಡಾ.ಸುಧಾಕರ್ ಅವರು ಇಬ್ಬರು ಮಾತ್ರ ಸತ್ತಿದ್ದಾರೆಂದು ಸುಳ್ಳು ಹೇಳಿದರು ಎಂದು ತಿಳಿಸಿದರು.
ಇಷ್ಟೇಲ್ಲಾ ಅನಾಹುತಗಳಾಗಿದ್ದರೂ ಪರಿಹಾರ ನೀಡಿಯೇ ಇಲ್ಲ. ಅಸೆಂಬ್ಲಿಯಲ್ಲಿ ಸಚಿವರನ್ನು ಕೇಳಿದರೆ ಹಣ ಇಲ್ಲ ಎಂದು ಸಬೂಬು ಹೇಳುತ್ತಾರೆ. ಕಂಟ್ರಾಕ್ಟರ್ ಕೆಂಪಣ್ಣ ಅವರು ಮೋದಿಗೆ ಪತ್ರ ಬರೆದು ಶೆ.40% ಕಮಿಷನ್ ಅನ್ನು ಸರ್ಕಾಕ್ಕೆ ಕೊಡಬೇಕು ಎಂದು ತಿಳಿಸಿದ್ದಾರೆ. ಇದರಿಂದ ಗುತ್ತಿಗೆದಾರರಿಗೆ ಎಷ್ಟೆಲ್ಲಾ ತೊಂದರೆಯಾಗಿದೆ ಎಂಬುದು ಮೋದಿಗೆ ಮನವರಿಕೆಯಾಗಿಲ್ಲ. ಅದಕ್ಕಾಗಿ ಅವರು ಯಾವ ಪ್ರತಿಕ್ರಿಯೆ ನೀಡಿಲ್ಲ. ಹಾಗೂ ತನಿಖೆಗೂ ಆದೇಶಿಸಿಲ್ಲ ಎಂದರು.
ಕಾಂಗ್ರೆಸ್ ಪಕ್ಷ ತಂದಿರುವ ಅನೇಕ ಯೋಜನೆಗಳನ್ನು ಬಿಜೆಪಿ ನಿಲ್ಲಿಸುತ್ತಾ ಬಂದಿದೆ. ಅನ್ನಭಾಗ್ಯ ಯೋಜನೆಯಡಿ ಕೊಡುತ್ತಿದ್ದ 7 ಕೆ.ಜಿ ಅಕ್ಕಿಯನ್ನು 5 ಕೆ.ಜಿಗೆ ಇಳಿಸಿದ್ದಾರೆ ಎಂದರು. ಪೆಟ್ರೋಲ್, ಡಿಸೆಲ್ ಬೆಲೆ ಏರಿಸಿ ಕಾಂಗ್ರೆಸ್ ಪಕ್ಷದ ಮೇಲೆ ಅಪವಾದ ಹೊರಿಸುತ್ತಿದ್ದಾರೆ. ಸರ್ಕಾರದಲ್ಲಿ ಹಣ ಇದ್ದರೂ, ಉಳಿದಿದ್ದರೂ ಕಾಂಗ್ರೆಸ್ ಪೆಟ್ರೋಲ್, ಡಿಸೆಲ್ ಮೇಲೆ ಸಾಲ ಮಾಡಿರುವ ಕಾರಣ ಬೆಲೆ ಹೆಚ್ಚಳ ಮಾಡಿದ್ದೆವೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ನೀವು ಬದಲಾಗದಿದ್ದರೆ ಮುಂದೆ ಎಲ್ಲವೂ ಬದಲಾಗುತ್ತೆ: ಸಂಸದರಿಗೆ ಮೋದಿ ಎಚ್ಚರಿಕೆ
ಇಷ್ಟೆಲ್ಲಾ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಈ ಗೆಲುವಿನ ಮೂಲಕ 2023ರ ವಿಧಾನ ಸಭೆ ಚುನಾವಣೆ ಗೆದ್ದೆ ಗೆಲ್ಲುತ್ತೇವೆ ಎಂದು ಹೇಳಿದರು. ವೇದಿಕೆಯಲ್ಲಿ ಮಾಜಿ ಸಚಿವರಾದ ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ ಎಂ.ಎಸ್.ಆತ್ಮಾನಂದ ಮಾಜಿ ಶಾಸಕಿ ಮಲ್ಲಾಜಮ್ಮ ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ರಮೇಶ್ ಬಾಬು ಬಂಡಿಸಿದ್ದೆಗೌಡ, ರಾಮಕೃಷ್ಣ ಪಕ್ಷದ ಅಭ್ಯರ್ಥಿ ದಿನೇಶ್ ಗೂಳಿಗೌಡ, ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಯೂತ್ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್, ಪರಿಶಿಷ್ಟ ಜಾತಿ ಸಂಘದ ಅಧ್ಯಕ್ಷ ಸುರೇಶ್ ಕಂಠಿ ಸೇರಿದಂತೆ ಇತರರು ಹಾಜರಿದ್ದರು.