ಬಾಲಿವುಡ್ ನಟಿ ಕಾಜೋಲ್ (Kajol) ಜೊತೆ ‘ದಿ ಟ್ರಯಲ್’ ವೆಬ್ ಸಿರೀಸ್‌ನಲ್ಲಿ ನಟಿಸಿದ್ದ ನೂರ್ ಮಾಳಬಿಕಾ ದಾಸ್ (Noor Malabika Das) ಅವರು ತಮ್ಮ ಮುಂಬೈ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಮೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮುಂಬೈ ಪೊಲೀಸರು ಖಚಿತಪಡಿಸಿದ್ದಾರೆ. ಇದನ್ನೂ ಓದಿ:ಮಗು ಮಾಡಿಕೊಳ್ಳುವ ವಿಚಾರಕ್ಕೆ ಕಿತ್ತಾಟ ಆಯ್ತಾ? ಸ್ಪಷ್ಟನೆ ನೀಡಿದ ಚಂದನ್ ಶೆಟ್ಟಿ
ಜೂನ್ 6ರಂದೇ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಾರಿಗೂ ಗೊತ್ತಾಗಿಲ್ಲ. ಮನೆಯಲ್ಲಿ ಯಾರೂ ಇರಲಿಲ್ಲ. ಅಕ್ಕಪಕ್ಕದ ಮನೆಯವರಿಗೂ ವಿಷಯ ತಿಳಿದಿಲ್ಲ. ಕೆಲ ದಿನಗಳ ಬಳಿಕ ಅಪಾರ್ಟ್‌ಮೆಂಟ್‌ನಲ್ಲಿ ದುರ್ವಾಸನೆ ಕಂಡು ಬಂದಿದ್ದು, ಕೂಡಲೇ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಮನೆ ಬಾಗಿಲು ತೆರೆದಾಗ ನಟಿಯ ಶವವು ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ. ಆದರೆ ಯಾವ ಕಾರಣಕ್ಕೆ ನಟಿ ಆತ್ಮಹತ್ಯೆ ಮಾಡಿಕೊಂಡರು ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಯಬೇಕಿದೆ.
ಸಾಕಷ್ಟು ವೆಬ್ ಸಿರೀಸ್‌ನಲ್ಲಿ ನೂರ್ ಮಾಳಬಿಕಾ ನಟಿಸಿದ್ದಾರೆ. ಆದರೆ ಕಾಜೋಲ್ ಜೊತೆ ನಟಿಸಿದ ‘ದಿ ಟ್ರಯಲ್’ ಹೆಚ್ಚಿನ ಜನಪ್ರಿಯತೆ ನೀಡಿತ್ತು.
ಬಾಲಿವುಡ್ (Bollywood) ನಟಿ ಕಾಜೋಲ್ (Kajol) ಅವರು ತಮ್ಮ ಕೆರಿಯರ್ ಹೊಸತರಲ್ಲಿ ಸಾಕಷ್ಟು ಚಿತ್ರಗಳಲ್ಲಿ ಸ್ಟಾರ್ ನಟರಿಗೆ ನಾಯಕಿಯಾಗಿ ಮಿಂಚಿದ್ದರು. ಪೀಕ್‌ನಲ್ಲಿರುವಾಗಲೇ ಅಜಯ್ ದೇವಗನ್ ಜೊತೆ ನಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಳಿಕ ಸಿನಿಮಾ ಸೆಲೆಕ್ಷನ್‌ನಲ್ಲಿ ಸಖತ್ ಚ್ಯುಸಿಯಾದ್ರು. ಅಲ್ಲೊಂದು ಇಲ್ಲೊಂದು ಸಿನಿಮಾ ಮಾಡುತ್ತಾ ವೈಯಕ್ತಿಕ ಬದುಕಿನಲ್ಲಿ ಬ್ಯುಸಿಯಾದರು. ಆದರೆ ಇತ್ತೀಚಿನ ನಟಿಯ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿತ್ತು. ದಾಂಪತ್ಯದಲ್ಲಿ ಬಿರುಕು(Divorce) ಉಂಟಾಗಿದ್ಯಾ.? ಎಂಬ ಅನುಮಾನ ಕಾಡಿತ್ತು. ಆದರೆ ಅಸಲಿ ವಿಚಾರವೇ ಬೇರೇ.
ತಮ್ಮ ಸಿನಿಮಾದ ಪ್ರಚಾರಕ್ಕಾಗಿ, ಬ್ರೇಕಿಂಗ್ ನ್ಯೂಸ್‌ಗಾಗಿ ನಟಿ ಹೊಸ ತಂತ್ರ ರೂಪಿಸಿದ್ದರು. ಜೀವನದ ದೊಡ್ಡ ವಿಚಾರಣೆ ಎದುರಿಸುತ್ತಿದ್ದೇನೆ. ಹಾಗಾಗಿ ಸೋಶಿಯಲ್ ಮೀಡಿಯಾದಿಂದ ಬ್ರೇಕ್ ತೆಗೆದುಕೊಳ್ಳುತ್ತಿದ್ದೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ಅದು ಪ್ರಚಾರದ ಗಿಮಿಕ್ ಎಂಬುದು ಈಗ ಬಯಲಾಗಿದೆ. ಇದನ್ನೂ ಓದಿ:ಮೆಗಾ ಪ್ರಿನ್ಸ್ ವರುಣ್ ತೇಜ್- ಲಾವಣ್ಯ ತ್ರಿಪಾಠಿ ಗ್ರ್ಯಾಂಡ್ ಎಂಗೇಜ್‌ಮೆಂಟ್
ಅಮೆರಿಕದ ‘ದಿ ಗುಡ್ ವೈಫ್’ ಸರಣಿಯ ಇಂಡಿಯನ್ ವರ್ಷನ್‌ಗೆ ‘ದಿ ಟ್ರಯಲ್’ (The Trail) ಎಂದು ಶೀರ್ಷೀಕೆ ಇಡಲಾಗಿದೆ. ಇದರಲ್ಲಿ ಕಾಜೋಲ್ ಅವರು ಲೀಡ್ ರೋಲ್‌ನಲ್ಲಿ ನಟಿಸಿದ್ದಾರೆ. ಅದರ ಟ್ರೇಲರ್ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ. ಜೂನ್ 12ರಂದು ‘ದಿ ಟ್ರಯಲ್’ ಟ್ರೇಲರ್ ಅನಾವರಣ ಆಗಲಿದೆ. ಈ ಟೈಟಲ್ ಜೊತೆ ‘ಪ್ರೀತಿ, ಕಾನೂನು ಮತ್ತು ಮೋಸ’ ಎಂಬ ಟ್ಯಾಗ್ ಲೈನ್ ಇದೆ. ಹಾಗಾಗಿ ಈ ವೆಬ್ ಸರಣಿ ಬಗ್ಗೆ ಹೆಚ್ಚಿನ ಕುತೂಹಲ ನಿರ್ಮಾಣ ಆಗಿದೆ. ಇದು ಕೋರ್ಟ್ ರೂಮ್ ಡ್ರಾಮಾ ಶೈಲಿಯಲ್ಲಿ ಮೂಡಿಬಂದಿದ್ದು, ಟ್ರೇಲರ್ ನೋಡಲು ಫ್ಯಾನ್ಸ್ ಕಾದಿದ್ದಾರೆ.
ಜೀವನದ ದೊಡ್ಡ ವಿಚಾರಣೆ ಎದುರಿಸುತ್ತಿದ್ದೇನೆ. ಹಾಗಾಗಿ ಸೋಶಿಯಲ್ ಮೀಡಿಯಾದಿಂದ ಬ್ರೇಕ್ ತೆಗೆದುಕೊಳ್ಳುತ್ತಿದ್ದೇನೆ ಎಂದು ಕಾಜೋಲ್ ಅವರು ಪೋಸ್ಟ್ ಮಾಡಿದಾಗ ಅಪ್ಪಟ ಅಭಿಮಾನಿಗಳಿಗೆ ಅಚ್ಚರಿ ಆಗಿದ್ದು ನಿಜ. ಇದು ಡಿವೋರ್ಸ್ ಮುನ್ಸೂಚನೆ ಇರಬಹುದೇ ಕಾಜೋಲ್ ಅವರ ಸಂಸಾರದಲ್ಲಿ ಬಿರುಕು ಮೂಡಿರಬಹುದೇ ಎಂಬಿತ್ಯಾದಿ ಅನುಮಾನಗಳು ಮೂಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಕಾಜೋಲ್ ಡ್ರಾಮಾಗೆ ನೆಟ್ಟಿಗರು ಖಡಕ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಸಿನಿಮಾ ಪ್ರಚಾರಕ್ಕೆ ಹೀಗೆ ಗಿಮಿಕ್ ಮಾಡೋದಾ ಅಂತಾ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.