‘ದಿ ಕಾಶ್ಮೀರ್ ಫೈಲ್ಸ್’ ಮತ್ತು ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಮೂಲಕ ಸಂಚಲನ ಮೂಡಿಸಿದ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ (Vivek Ranjan Agnihotri) ಅವರಿಗೆ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಪ್ರತಿಷ್ಠಿತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ವಿವೇಕ್ ಪಡೆದಿದ್ದಾರೆ. ಇದೀಗ ಮಹಾರಾಷ್ಟ್ರದ ಪುಣೆಯಲ್ಲಿರುವ ಅಜಿಂಕ್ಯಾ ಡಿವೈ ಪಾಟಿಲ್ ಯೂನಿವರ್ಸಿಟಿಯವರು ವಿವೇಕ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ.
View this post on Instagram
ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ಮಾಡಿದ ‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಸಿನಿಮಾ ಸೂಪರ್ ಹಿಟ್ ಆಯಿತು. ಕೊವಿಡ್ ಲಸಿಕೆ ಕಂಡು ಹಿಡಿದ ಘಟನೆ ಆಧರಿಸಿ ಸಿದ್ಧಗೊಂಡ ‘ದಿ ವ್ಯಾಕ್ಸಿನ್ ವಾರ್’ ಚಿತ್ರ ವೀಕ್ಷಕರಿಂದ ಮೆಚ್ಚುಗೆ ಪಡೆಯಿತು. ಇದೀಗ ವಿವೇಕ್ ಅಗ್ನಿಹೋತ್ರಿ ಅವರಿಗೆ ಮಹಾರಾಷ್ಟ್ರದ ರಾಜ್ಯಪಾಲರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ. ಇದನ್ನೂ ಓದಿ:ಸಿನಿಮಾ ಆಫರ್‌ಗಾಗಿ ಹೀಗೆಲ್ಲಾ ಮಾಡಿದ್ರಾ ಪೂನಂ ಪಾಂಡೆ?
ಗೌರವ ಡಾಕ್ಟರೇಟ್ ಸಿಕ್ಕಿರೋ ಸಂತಸದಲ್ಲಿ ವಿವೇಕ್ ಅಗ್ನಿಹೋತ್ರಿ ಮಾತನಾಡಿ, ನಾನು ಕಲಿತ 5 ಕಲಿಕೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಅಶಿಸುತ್ತೇನೆ. ನನ್ನ ಜೀವನದಲ್ಲಿ ಏನು ಅಭ್ಯಾಸ ಮಾಡಿರುವೆನೋ, ಅದನ್ನೇ ಮಾತನಾಡುತ್ತೇನೆ. ನನ್ನ ಜೀವನದ ತಿಳುವಳಿಕೆಯನ್ನು ರೂಪಿಸಿದ್ದು 5 ಸಂಸ್ಥೆಗಳು. ನಾನು ಕಲಿತ ಶಾಲೆ, ನನ್ನ ಕಾಲೇಜು, ನಾನು ಕಲಿತ ಯೂನಿವರ್ಸಿಟಿಗಳು ನನ್ನ ಮೊದಲ ಗುರು. ನನ್ನ 2ನೇ ಗುರು ಸಮಯ, 3ನೇ ಗುರು ಸಿನಿಮಾ, 4ನೇ ಗುರು ನನ್ನ ಶಿಕ್ಷಕ, ಐದನೇಯದು ‘ಜೀವನದಲ್ಲಿ ಯಾವುದೇ ಕಟ್ಟುನಿಟ್ಟಾದ ನಿಯಮಗಳಿಲ್ಲ’ ಎಂದು ಮಾತನಾಡಿದ್ದಾರೆ. ವಿವೇಕ್ ಅಗ್ನಿಹೋತ್ರಿಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.


ಜೋಧ್‌ಪುರ್‌ನಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿ, ಭಾಷಣದ ಮಧ್ಯೆಯೇ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾವನ್ನು ಪ್ರಶಂಸಿದರು. ಈ ಸಿನಿಮಾ ಒಂದು ಇತ್ತೀಚೆಗೆ ಬಂದಿದೆ ಎಂದು ನಾನು ಕೇಳ್ಪಟ್ಟೆ. ಭಾರತದಲ್ಲಿ ಕೋವಿಡ್ ವಿರುದ್ಧ ಹೋರಾಟಕ್ಕೆ ನಮ್ಮ ವಿಜ್ಞಾನಿಗಳು ಹಗಲು-ರಾತ್ರಿ ಪಟ್ಟ ಶ್ರಮ. ಅದರಲ್ಲಿ ನಮ್ಮ ಮಹಿಳಾ ವಿಜ್ಞಾನಿಗಳು ಮಾಡಿರುವ ಸಾಧನೆಯನ್ನು ‘ದಿ ವ್ಯಾಕ್ಸಿನ ವಾರ್’ ಸಿನಿಮಾದಲ್ಲಿ ಅದ್ಭುತವಾಗಿ ತೋರಿಸಲಾಗಿದೆ ಎಂದು ಪ್ರಧಾನಿ ಮೋದಿ (Narendra Modi) ಅವರು ಮಾತನಾಡಿದ್ದಾರೆ. ಇದನ್ನೂ ಓದಿ:
ನಮ್ಮ ವಿಜ್ಞಾನಿಗಳು ಇಷ್ಟು ಅದ್ಭುತವಾದ ಕಾರ್ಯ ಮಾಡಿದ್ದಾರೆ ಎಂದು ಆ ಸಿನಿಮಾ ನೋಡಿದ ಬಳಿಕ ಪ್ರತಿ ಭಾರತೀಯನಿಗೂ ಹೆಮ್ಮೆ ಎನಿಸುತ್ತಿದೆ. ಚಂದ್ರಯಾನ ನಡೆಯುತ್ತದೆ, ನಮ್ಮ ವಿಜ್ಞಾನಿಗಳ ಬಗ್ಗೆ ಗೌರವ ಹೆಚ್ಚುತ್ತದೆ. ವ್ಯಾಕ್ಸಿನ್ ನಿರ್ಮಾಣ ಆಗುತ್ತದೆ ನಮ್ಮ ವಿಜ್ಞಾನಿಗಳಿಗೆ ಗೌರವ ಸಂದಾಯವಾಗುತ್ತದೆ. ದೇಶದ ಯುವಕರು ವಿಜ್ಞಾನಿಗಳ ಬಗ್ಗೆ ವಿಜ್ಞಾನದ ಬಗ್ಗೆ ಆಕರ್ಷಿತರಾಗುತ್ತಿದ್ದಾರೆ ಎಂದಿದ್ದಾರೆ.
ಸಿನಿಮಾ ನಿರ್ಮಿಸಿದ ಇಡೀ ತಂಡಕ್ಕೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಈ ಸಿನಿಮಾ ಮೂಲಕ ನೀವು ದೇಶದ ವಿಜ್ಞಾನಿಗಳು- ವಿಜ್ಞಾನಕ್ಕೆ ಮಹತ್ವ ನೀಡಿದ್ದೀರಿ. ಈ ನಿಮ್ಮ ಕಾರ್ಯವು ಮುಂಬರುವ ಪೀಳಿಗೆಗೆ ಉಪಯುಕ್ತವಾಗಲಿದೆ ಎಂದಿದ್ದಾರೆ. ಈ ಹಿಂದೆ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೂ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದರು.













