Tag: ದೀಕ್ಷಿತ್ ಶೆಟ್ಟಿ

  • ಐಷಾರಾಮಿ ಕಾರು ಖರೀದಿಸಿದ ದಿಯಾ ಸ್ಟಾರ್ ದೀಕ್ಷಿತ್ ಶೆಟ್ಟಿ

    ಐಷಾರಾಮಿ ಕಾರು ಖರೀದಿಸಿದ ದಿಯಾ ಸ್ಟಾರ್ ದೀಕ್ಷಿತ್ ಶೆಟ್ಟಿ

    ದಿಯಾ (Dia) ಸಿನಿಮಾ ಮೂಲಕ ಖ್ಯಾತಿ ಪಡೆದ ನಟ ದೀಕ್ಷಿತ್ ಶೆಟ್ಟಿ ಐಷಾರಾಮಿ ಕಾರು (Car) ಖರೀದಿ ಮಾಡಿದ್ದಾರೆ. ದೀಕ್ಷಿತ್ ಶೆಟ್ಟಿ (Dheekshith Shetty) ಕನ್ನಡವಷ್ಟೇ ಅಲ್ಲದೇ ಪರಭಾಷಾ ಸಿನಿಮಾದಲ್ಲೂ ನಟಿಸಿದ್ದಾರೆ. ಕನ್ನಡದ ಜೊತೆ ಜೊತೆಗೆ ಪರಭಾಷಾ ಚಿತ್ರಗಳಲ್ಲೂ ಬ್ಯುಸಿಯಾಗಿರುವ ದೀಕ್ಷಿತ್ ಶೆಟ್ಟಿ ತಮ್ಮ ಸಿನಿಮಾ ಪಯಣವನ್ನು ಶುರು ಮಾಡಿರುವ ರೋಚಕ ಕಥೆಯನ್ನ ಹಂಚಿಕೊಂಡಿದ್ದಾರೆ. ಮೊದ ಮೊದಲಿಗೆ ಸಿನಿಮಾ ಜರ್ನಿಯನ್ನ ಬಿಎಂಟಿಸಿಯಿಂದ ಶುರು ಮಾಡಿದ ದೀಕ್ಷಿತ್‌ ಶೆಟ್ಟಿ ಈಗ ರೇಂಜ್ ರೋವರ್‌ವರೆಗೂ ಬಂದಿರುವ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ನಟ ದೀಕ್ಷಿತ್ ಶೆಟ್ಟಿ ಸಾಮಾನ್ಯನಿಂದ ಶುರುಮಾಡಿದ ಜರ್ನಿ ಇವತ್ತು ರೇಂಜ್ ರೋವರ್ ರೇಂಜ್‌ಗೆ ತಂದು ನಿಲ್ಲಿಸಿದೆ. ದೀಕ್ಷಿತ್ ಶೆಟ್ಟಿ ಸದ್ಯ ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ಸಿನಿಮಾದಲ್ಲಿ ನಟಿಸಿದ್ದಾರೆ. ಅಭಿಷೇಕ್ ನಿರ್ದೇಶನದ ಈ ಸಿನಿಮಾದಲ್ಲಿ ದೀಕ್ಷಿತ್ ಜೊತೆಗೆ ಬೃಂದಾ ಆಚಾರ್ ನಾಯಕಿಯಾಗಿ ನಟಿಸಿದ್ದಾರೆ. ತೆಲುಗಿನಲ್ಲಿ ನಾನಿ ನಟನೆಯ ದಸರಾ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ದಿ ಗರ್ಲ್‌ಫ್ರೆಂಡ್‌ ಸಿನಿಮಾದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ ಶೀಘ್ರದಲ್ಲೇ ಡಿಂಪಲ್ ಕ್ವೀನ್‌ ಮದುವೆ – ಸುಳಿವು ಕೊಟ್ಟ ರಚಿತಾ ರಾಮ್‌

    ಸದ್ಯ ದಿಯಾ ಸ್ಟಾರ್ ದೀಕ್ಷಿತ್ ಶೆಟ್ಟಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಈ ವೇಳೆ ಅವರು ನಡೆದು ಬಂದ ಹಾದಿಯನ್ನು ಮೆಲುಕು ಹಾಕಿದ್ದಾರೆ. ಅವರ ಈ ಸಾಲುಗಳಿಗೆ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
  • ರಶ್ಮಿಕಾ ನಟನೆಯ `ದಿ ಗರ್ಲ್‌ಫ್ರೆಂಡ್‌’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

    ರಶ್ಮಿಕಾ ನಟನೆಯ `ದಿ ಗರ್ಲ್‌ಫ್ರೆಂಡ್‌’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

    ಟಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ದೀಕ್ಷಿತ್ ಶೆಟ್ಟಿ (Deekshith Shetty) ಅಭಿಯದ `ದಿ ಗರ್ಲ್‌ಫ್ರೆಂಡ್‌’ (The Girlfriend) ಚಿತ್ರದ ಹೊಸ ಅಪ್‌ಡೇಟ್ ಸಿಕ್ಕಿದೆ. ತನ್ನ ಟೈಟಲ್‌ನಿಂದಲೇ ಹೆಚ್ಚು ಗಮನ ಸೆಳೆದಿರೋ ಈ ಚಿತ್ರ, ಯಾವಾಗ ರಿಲೀಸ್ ಆಗುತ್ತೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಮುಂದಿನ ತಿಂಗಳು ಅಂದ್ರೆ ನವೆಂಬರ್ 7ರಂದು `ದಿ ಗರ್ಲ್‌ಫ್ರೆಂಡ್‌’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದೆ.

    ದಿ ಗರ್ಲ್‌ಫ್ರೆಂಡ್‌ ಸಿನಿಮಾವನ್ನು `ಗೀತಾ ಆರ್ಟ್ಸ್’ ಹಾಗೂ `ಧೀರಜ್ ಮೊಗಿಲಿನೇನಿ ಎಂಟರ್ಟೈನ್ಮೆಂಟ್’ ಸಂಸ್ಥೆಗಳು ಒಟ್ಟಾಗಿ ನಿರ್ಮಾಣ ಮಾಡುತ್ತಿವೆ. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಅವರು ಈ ಸಿನಿಮಾವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಇದನ್ನೂ ಓದಿ: ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ಪಡೆದ ರಕ್ಷಿತ್‌ ಶೆಟ್ಟಿಗೆ ರಿಷಬ್‌ ವಿಶ್‌ – ಥ್ಯಾಂಕ್ಸ್‌ ಮಗ ಎಂದ ಚಾರ್ಲಿ ಹೀರೋ

    ರಾಹುಲ್ ರವೀಂದ್ರನ್ ಅವರು ನಿರ್ದೇಶನ ಮಾಡಿದ್ದಾರೆ. ಸುಂದರ ಪ್ರೇಮಕಥೆಯನ್ನು `ದಿ ಗರ್ಲ್‌ಫ್ರೆಂಡ್‌’ ಸಿನಿಮಾ ಮೂಲಕ ಅವರು ಹೇಳಲಿದ್ದಾರೆ. ಹೇಶಮ್ ಅಬ್ದುಲ್ ವಹಾಬ್ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಕೃಷ್ಣನ್ ವಸಂತ್ ಛಾಯಾಗ್ರಹಣ, ಚೋಟಾ.ಕೆ ಪ್ರಸಾದ್ ಸಂಕಲನ ಸಿನಿಮಾಗಿದೆ.

  • ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್ ಫ್ರೆಂಡ್ ಚಿತ್ರದ ಫಸ್ಟ್ ಸಾಂಗ್ ರಿಲೀಸ್

    ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್ ಫ್ರೆಂಡ್ ಚಿತ್ರದ ಫಸ್ಟ್ ಸಾಂಗ್ ರಿಲೀಸ್

    ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ಪ್ರತಿಭಾನ್ವಿತ ನಟ ದೀಕ್ಷಿತ್ ಶೆಟ್ಟಿ ನಟನೆಯ ಬಹುನಿರೀಕ್ಷಿತ ಸಿನಿಮಾ ‘ದಿ ಗರ್ಲ್ಫ್ರೆಂಡ್’. ಗೀತಾ ಆರ್ಟ್ಸ್ ಮತ್ತು ಧೀರಜ್ ಮೊಗಿಲಿನೇನಿ ಎಂಟರ್ಟೈನ್ಮೆಂಟ್ ಬ್ಯಾನರ್ಗಳು ಜಂಟಿಯಾಗಿ ನಿರ್ಮಿಸುತ್ತಿದ್ದು, ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ರಾಹುಲ್ ರವೀಂದ್ರನ್ ನಿರ್ದೇಶನದ ಸುಂದರ ಪ್ರೇಮಕಥೆಯ `ದಿ ಗರ್ಲ್ ಫ್ರೆಂಡ್ʼ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ.ಇದನ್ನೂ ಓದಿ:ಏರ್‌ಪೋರ್ಟ್‌ನಲ್ಲಿ ದರ್ಶನ್ ಫೋಟೋ ರಿವೀಲ್

    `ದಿ ಗರ್ಲ್ ಫ್ರೆಂಡ್ʼ ಸ್ವರವೇ ಎಂಬ ಮೊದಲ ಹಾಡು ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಹೇಶಮ್ ಅಬ್ದುಲ್ ವಹಾಬ್ ಹಾಡಿಗೆ ಅದ್ಭುತ ಮ್ಯೂಸಿಕ್ ನೀಡುವುದರ ಜೊತೆ ಧ್ವನಿಯಾಗಿದ್ದಾರೆ. ನಾಗಾರ್ಜುನ್ ಶರ್ಮಾ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ದೀಕ್ಷಿತ್ ಶೆಟ್ಟಿ ನಡುವಿನ ಆನ್ ಸ್ಕ್ರೀನ್ ಕೆಮಿಸ್ಟ್ರಿ ಹಾಡಿನ ಮೋಡಿಗೆ ಮತ್ತಷ್ಟು ಮೆರುಗು ನೀಡಿದೆ. ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ‘ದಿ ಗರ್ಲ್ಫ್ರೆಂಡ್’ ಶೀಘ್ರದಲ್ಲೇ ಅದ್ದೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ.

    ರಾಹುಲ್ ರವೀಂದ್ರನ್ ನಿರ್ದೇಶನದ ‘ದಿ ಗರ್ಲ್ಫ್ರೆಂಡ್’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ದೀಕ್ಷಿತ್ ಶೆಟ್ಟಿ ಜೊತೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಮಿಂಚಿದ್ದಾರೆ. ಧೀರಜ್ ಮೊಗಿಲಿನೇನಿ ಮತ್ತು ವಿದ್ಯಾ ಕೊಪ್ಪಿನೀಡಿ ಚಿತ್ರಕ್ಕೆ ಹಣ ಹೂಡಿದ್ದಾರೆ. ಟೈಟಲ್ಲೇ ಹೇಳುವಂತೆ ಇದು ಲವ್ ಸ್ಟೋರಿ ಸಿನಿಮಾ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ದಿ ಗರ್ಲ್ಫ್ರೆಂಡ್’ ಸಿನಿಮಾ ತೆರೆಗೆ ಬರಲಿದೆ. ಕೃಷ್ಣನ್ ವಸಂತ್ ಛಾಯಾಗ್ರಹಣ, ಹೇಶಮ್ ಅಬ್ದುಲ್ ವಹಾಬ್ ಸಂಗೀತ ಚಿತ್ರಕ್ಕಿದೆ.ಇದನ್ನೂ ಓದಿ: ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಹೈಕೋರ್ಟ್‌ನಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

     

  • ದೀಕ್ಷಿತ್ ಶೆಟ್ಟಿ ನಿರ್ಮಾಣದ ‘ವಿಡಿಯೋ’ ಚಿತ್ರದ ಟೀಸರ್ ರಿಲೀಸ್

    ದೀಕ್ಷಿತ್ ಶೆಟ್ಟಿ ನಿರ್ಮಾಣದ ‘ವಿಡಿಯೋ’ ಚಿತ್ರದ ಟೀಸರ್ ರಿಲೀಸ್

    ಹುಭಾಷಾ ನಟನಾಗಿ ಗುರುತಿಸಿಕೊಳ್ಳುತ್ತಿರುವ ಕನ್ನಡದ ನಟ ದೀಕ್ಷಿತ್ ಶೆಟ್ಟಿ (Dheekshith Shetty) ಈಗ ನಿರ್ಮಾಣಕ್ಕಿಳಿದಿದ್ದಾರೆ. ಅವರ ಚೊಚ್ಚಲ ನಿರ್ಮಾಣದ ‘ವಿಡಿಯೋ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಅಭಿಮಾನಿಗಳಿಂದ ಈ ಟೀಸರ್ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಇದನ್ನೂ ಓದಿ:ಧ್ರುವ ಸರ್ಜಾಗೆ ‘ಭೈರತಿ ರಣಗಲ್’ ಡೈರೆಕ್ಟರ್ ಆ್ಯಕ್ಷನ್ ಕಟ್

    ಮೊದಲ ಸಿನಿಮಾದಲ್ಲೇ ಹಾರರ್ ಕಥೆ ಹೇಳಲು ಹೊರಟಿದ್ದಾರೆ. ‘ಧೀ ಸಿನಿಮಾಸ್’ ನಿರ್ಮಾಣ ಸಂಸ್ಥೆ ಮೂಲಕ ದೀಕ್ಷಿತ್ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ. ‘ವಿಡಿಯೋ’ ಚಿತ್ರದ ಟೀಸರ್‌ನಲ್ಲಿ ಹಾರರ್ ಕಥೆಯ ಸಣ್ಣ ಝಲಕ್ ಅನ್ನು ತೋರಿಸಲಾಗಿದೆ. ‘ವಿಡಿಯೋ’ (Video) ಎಂಬ ಭಿನ್ನ ಟೈಟಲ್ ಇಡಲಾಗಿದ್ದು, ಇದರ ಟೀಸರ್ ನೋಡಿ ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ಕುತೂಹಲ ಮೂಡಿದೆ. ಇದನ್ನೂ ಓದಿ:ಹಣ, ಅಧಿಕಾರದ ಸುತ್ತ ‘ಕುಬೇರ’- ಟೀಸರ್‌ನಲ್ಲಿ ಮಿಂಚಿದ ಧನುಷ್, ರಶ್ಮಿಕಾ

    ‘ಬ್ಲಿಂಕ್’ ಚಿತ್ರದ (Blink) ಯಶಸ್ಸಿನ ಬಳಿಕ ನಿರ್ದೇಶಕ ಶ್ರೀನಿಧಿ ಬೆಂಗಳೂರು ಜೊತೆ ದೀಕ್ಷಿತ್ ಕೈಜೋಡಿಸಿದ್ದಾರೆ. ಚಿತ್ರದಲ್ಲಿ ಭರತ್, ಜೀವನ್, ಪ್ರಿಯಾ ಜೆ ಆಚಾರ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಪ್ರಸನ್ನ ಕುಮಾರ್ ಸಂಗೀತ, ಅವಿನಾಶ್ ಶಾಸ್ತ್ರಿ ಕ್ಯಾಮೆರಾ ಕೈಚಳಕ ಚಿತ್ರಕ್ಕಿದೆ.

     

    View this post on Instagram

     

    A post shared by Priya j achar (@priya_j_achar)

    ತೆಲಗಿನಲ್ಲಿ ನಾನಿ, ಕೀರ್ತಿ ಸುರೇಶ್ ಜೊತೆ ‘ದಸರಾ’ ಸಿನಿಮಾದಲ್ಲಿ ನಟಿಸಿದ್ಮೇಲೆ ದೀಕ್ಷಿತ್‌ಗೆ ಬೇಡಿಕೆ ಹೆಚ್ಚಾಗಿದೆ. ಕನ್ನಡದ ಸಿನಿಮಾಗಳ ಜೊತೆ ರಶ್ಮಿಕಾ ಮಂದಣ್ಣ ಜೊತೆ ‘‌ದಿ ಗರ್ಲ್‌ಫ್ರೆಂಡ್’ ಚಿತ್ರ, ಶವರಾ ಚಿತ್ರ, ಮಲಯಾಳಂ ‘ಏಂಜಲ್ ನಂ 16’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

  • ತಮಿಳಿನತ್ತ ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ

    ತಮಿಳಿನತ್ತ ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ

    ‘ದಿಯಾ’ (Dia) ಖ್ಯಾತಿಯ ದೀಕ್ಷಿತ್ ಶೆಟ್ಟಿ (Dheekshith Shetty) ಕಾಲಿವುಡ್‌ನತ್ತ (Kollywood) ಮುಖ ಮಾಡಿದ್ದಾರೆ. ಕನ್ನಡ, ತೆಲುಗಿನಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ದೀಕ್ಷಿತ್ ಶೆಟ್ಟಿ ಈಗ ತಮಿಳು ಚಿತ್ರರಂಗಕ್ಕೂ ಪಾದಾರ್ಪಣೆ ಮಾಡಿದ್ದಾರೆ. ಇದನ್ನೂ ಓದಿ:ನಮಗೆ ಪುನೀತ್‌ ಬೇರೆಯಲ್ಲ, ದರ್ಶನ್‌ ಬೇರೆ ಅಲ್ಲ: ‘ಅಪ್ಪು’ ಸಿನಿಮಾ ವೀಕ್ಷಿಸಿದ ಡಿ ಬಾಸ್‌ ಫ್ಯಾನ್‌

    ರಾಮ್ ವೆಂಕಟ್ ನಿರ್ದೇಶನದ ಹೊಸ ಸಿನಿಮಾದಲ್ಲಿ ದೀಕ್ಷಿತ್ ಆಯ್ಕೆಯಾಗಿದ್ದಾರೆ. ಇದೀಗ ಸರಳವಾಗಿ ಮುಹೂರ್ತ ಕಾರ್ಯಕ್ರಮ ಕೂಡ ಜರುಗಿದೆ. ವಿಭಿನ್ನ ಕಥೆಯ ಮೂಲಕ ಕಾಲಿವುಡ್‌ಗೆ ಅವರು ಎಂಟ್ರಿ ಕೊಡುತ್ತಿದ್ದಾರೆ.

    ರಶ್ಮಿಕಾ ಮಂದಣ್ಣಗೆ ಜೋಡಿಯಾಗಿ ‘ದಿ ಗರ್ಲ್‌ಫ್ರೆಂಡ್‌’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶೀಘ್ರಮೇವ ಕಲ್ಯಾಣ ಪ್ರಾಪ್ತಿರಸು, ಸ್ಟ್ರಾಬೆರಿ, ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ, ತೆಲುಗಿನ ಕಿಂಗ್ ಜಾಕಿ ಕ್ವೀನ್ ಮತ್ತು ಒಪ್ಪೀಸ್ ಚಿತ್ರಗಳು ನಟನ ಕೈಯಲ್ಲಿವೆ.

    ದೀಕ್ಷಿತ್ ಶೆಟ್ಟಿ ಅವರು 2020ರಲ್ಲಿ ‘ದಿಯಾ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದರು. ಬಳಿಕ ಅವರು ಕೆಟಿಎಂ ಮತ್ತು ಬ್ಲಿಂಕ್ ಮತ್ತು ತೆಲುಗು ಚಿತ್ರಗಳಾದ ಮುಗ್ಗುರು ಮೊನಗಲ್ಲು, ದಿ ರೋಸ್ ವಿಲ್ಲಾ ನಟಿಸಿದ್ದಾರೆ. ತೆಲುಗಿನಲ್ಲಿ ನಾನಿ ಮತ್ತು ಕೀರ್ತಿ ಸುರೇಶ್ ಜೊತೆ ‘ದಸರಾ’ (Dasara) ಸಿನಿಮಾ ಮಾಡಿ ಗೆದ್ದಿದ್ದಾರೆ.

  • ಗರ್ಲ್‌ಫ್ರೆಂಡ್‌ ರಶ್ಮಿಕಾ ಮಂದಣ್ಣಗೆ ಲಕ್ಕಿ ಚಾರ್ಮ್‌ ಎಂದ ವಿಜಯ್‌ ದೇವರಕೊಂಡ

    ಗರ್ಲ್‌ಫ್ರೆಂಡ್‌ ರಶ್ಮಿಕಾ ಮಂದಣ್ಣಗೆ ಲಕ್ಕಿ ಚಾರ್ಮ್‌ ಎಂದ ವಿಜಯ್‌ ದೇವರಕೊಂಡ

    ಟಾಲಿವುಡ್‌ನ ‘ಲೈಗರ್’ ನಟ ವಿಜಯ್ ದೇವರಕೊಂಡ (Vijay Devarakonda) ಅವರು ಕೊನೆಗೂ ಗರ್ಲ್‌ಫ್ರೆಂಡ್ ರಶ್ಮಿಕಾರನ್ನು ಪರಿಚಯಿಸಿದ್ದಾರೆ. ರಶ್ಮಿಕಾ ಮಂದಣ್ಣ ನಟನೆಯ ‘‌ದಿ ಗರ್ಲ್‌ಫ್ರೆಂಡ್’ ಟೀಸರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ವಿಜಯ್ ಶುಭಕೋರಿದ್ದಾರೆ. ಜೊತೆ ನಟಿಯನ್ನು ಲಕ್ಕಿ ಚಾರ್ಮ್‌ ಎಂದು ಕೊಂಡಾಡಿದ್ದಾರೆ. ಇದನ್ನೂ ಓದಿ:BBK 11: ಮತ್ತೆ ಬಿಗ್‌ ಬಾಸ್‌ಗೆ ತನಿಷಾ, ಪ್ರತಾಪ್‌, ಸಂತು ಪಂತು ಎಂಟ್ರಿ

    ‘ದಿ ಗರ್ಲ್‌ಫ್ರೆಂಡ್‌’ ಸಿನಿಮಾದ ಟೀಸರ್‌ನ ಪ್ರತಿಯೊಂದು ದೃಶ್ಯವು ನನಗೆ ಇಷ್ಟವಾಗಿದೆ. ಈ ಸಿನಿಮಾ ನೋಡಲು ಕಾತರದಿಂದ ಕಾಯುತ್ತಿದ್ದೇನೆ. ಅನೇಕ ನಟರಿಗೆ ರಶ್ಮಿಕಾ (Rashmika Mandanna) ಲಕ್ಕಿ ಚಾರ್ಮ್‌ ಆಗಿದ್ದಾರೆ. ದೊಡ್ಡ ಯಶಸ್ಸಿಗೆ ಅವರು ಭಾಗವಾಗಿದ್ದಾರೆ. ಇಂದು ಅವರು ಸ್ಟಾರ್‌ ಆಗಿ ಬೆಳೆದಿದ್ದರು. 8 ವರ್ಷಗಳ ಹಿಂದೆ ಹೇಗೆ ಇದ್ದರೋ ಹಾಗಯೇ ಇದ್ದಾರೆ. 8 ವರ್ಷಗಳ ಹಿಂದೆ ನಾನು ಸೆಟ್‌ನಲ್ಲಿ ಭೇಟಿಯಾದ ಅದೇ ಹುಡುಗಿ ಇವರು ಎಂದು ರಶ್ಮಿಕಾ ಸಿನಿ ಜರ್ನಿಯನ್ನು ಹೊಗಳಿದ್ದಾರೆ. ನಿಮಗೆ ಶುಭವಾಗಲಿ ಎಂದು ವಿಜಯ್‌ ಹಾರೈಸಿದ್ದಾರೆ.

    ‘ದಿ ಗರ್ಲ್‌ಫ್ರೆಂಡ್’ ಟೀಸರ್‌ನಲ್ಲಿ ರಶ್ಮಿಕಾ ಹೆಚ್ಚು ಎಲ್ಲೂ ಮಾತನಾಡಿಲ್ಲ. ಬದಲಾಗಿ ಒಳ್ಳೆಯ ಎಕ್ಸ್‌ಪ್ರೆಷನ್ ಕೊಡುವ ಮೂಲಕ ಅವರು ಹೈಲೆಟ್ ಆಗಿದ್ದಾರೆ. ಭಾವನೆಗಳಲ್ಲಿಯೇ ನಟಿ ಸಾಕಷ್ಟು ವಿಷಯಗಳನ್ನು ಹೇಳಿದ್ದಾರೆ. ಕೊಡಗಿನ ಕುವರಿಗೆ ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ (Dheekshith Shetty) ಸಾಥ್ ನೀಡಿದ್ದಾರೆ. ಅವರ ಝಲಕ್ ಕೂಡ ಇಲ್ಲಿ ಹೈಲೆಟ್ ಆಗಿದೆ. ‘ಪುಷ್ಪ 2’ ಯಶಸ್ಸಿನಲ್ಲಿ ತೇಲುತ್ತಿರುವ ನಟಿಯ ‘ದಿ ಗರ್ಲ್‌ಫ್ರೆಂಡ್’  (The Girlfriend) ಚಿತ್ರದ ಟೀಸರ್ ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

    ದೀಕ್ಷಿತ್‌ಗೆ ಗರ್ಲ್‌ಫ್ರೆಂಡ್ ಆಗಿ ರಶ್ಮಿಕಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಡೈರೆಕ್ಟರ್ ರಾಹುಲ್ ರವಿಚಂದ್ರನ್ ನಿರ್ದೇಶನ ಮಾಡಿದ್ದಾರೆ. ಗೀತಾ ಆರ್ಟ್ಸ್ ಮೂಲಕ ಅಲ್ಲು ಅರವಿಂದ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕನ್ನಡ, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬಂದಿದೆ. ಸದ್ಯದಲ್ಲೇ ರಿಲೀಸ್ ಡೇಟ್ ಕುರಿತು ಚಿತ್ರತಂಡ ಮಾಹಿತಿ ನೀಡಲಿದೆ.

    https://youtu.be/2Haq3NSydBU?si=ROnapI8nsWyEvDh4

  • ರಶ್ಮಿಕಾರನ್ನು ಗರ್ಲ್‌ಫ್ರೆಂಡ್ ಆಗಿ ಪರಿಚಯಿಸಲಿದ್ದಾರೆ ವಿಜಯ್ ದೇವರಕೊಂಡ

    ರಶ್ಮಿಕಾರನ್ನು ಗರ್ಲ್‌ಫ್ರೆಂಡ್ ಆಗಿ ಪರಿಚಯಿಸಲಿದ್ದಾರೆ ವಿಜಯ್ ದೇವರಕೊಂಡ

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ‘ಪುಷ್ಪ 2’ (Pushpa 2) ಸಿನಿಮಾದ ಸಕ್ಸಸ್ ಬೆನ್ನಲ್ಲೇ ಗುಡ್ ನ್ಯೂಸ್ ಕೊಟ್ಟಿದ್ದಾರೆ. ರಶ್ಮಿಕಾರನ್ನು ಗರ್ಲ್‌ಫ್ರೆಂಡ್ ಆಗಿ ಪರಿಚಯಿಸಲು ಮುಹೂರ್ತ ಫಿಕ್ಸ್ ಆಗಿದೆ. ಇದನ್ನೂ ಓದಿ:ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದಲ್ಲಿ ಅನಿಲ್ ಕಪೂರ್?

    ‘ಪುಷ್ಪ 2’ ಬಳಿಕ ರಶ್ಮಿಕಾ ಮಂದಣ್ಣ ನಟನೆಯ ಮುಂದಿನ ಸಿನಿಮಾ ಅಪ್‌ಡೇಟ್‌ವೊಂದು ಸಿಕ್ಕಿದೆ. ರಶ್ಮಿಕಾ ನಟನೆಯ ‘ದಿ ಗರ್ಲ್‌ಫ್ರೆಂಡ್‌’ (The Girlfriend) ಸಿನಿಮಾದ ಟೀಸರ್ ರಿಲೀಸ್ ಅನ್ನು ವಿಜಯ್ ದೇವರಕೊಂಡ (Vijay Devarakonda) ಬಿಡುಗಡೆ ಮಾಡಲಿದ್ದಾರೆ. ಡಿ.9ರಂದು ಬೆಳಗ್ಗೆ 11:07ಕ್ಕೆ ಟೀಸರ್ ಅನ್ನು ವಿಜಯ್ ರಿವೀಲ್ ಮಾಡಲಿದ್ದಾರೆ.

     

    View this post on Instagram

     

    A post shared by Geetha Arts (@geethaarts)

    ನಿರ್ಮಾಪಕ ಅಲ್ಲು ಅರವಿಂದ್ ಅವರು ‘ದಿ ಗರ್ಲ್‌ಫ್ರೆಂಡ್‌’ ಚಿತ್ರವನ್ನು ಬಹುಭಾಷೆಗಳಲ್ಲಿ ನಿರ್ಮಾಣ ಮಾಡಲಿದ್ದಾರೆ. ವಿಶೇಷ ಅಂದರೆ ಈ ಚಿತ್ರದಲ್ಲಿ ಕನ್ನಡದ ನಟ ದೀಕ್ಷಿತ್ ಶೆಟ್ಟಿ ಪವರ್‌ಫುಲ್ ರೋಲ್‌ನಲ್ಲಿ ನಟಿಸಿದ್ದಾರೆ. ಈ ಸಿನಿಮಾ ಮೇಲೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ.

  • ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ: ಅನಿಮೇಷನ್ ಟೀಸರ್ ಗೆ ಮೆಚ್ಚುಗೆ

    ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ: ಅನಿಮೇಷನ್ ಟೀಸರ್ ಗೆ ಮೆಚ್ಚುಗೆ

    ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್  ನಿರ್ಮಾಣದ, “ದಿಯಾ” ಸೇರಿದಂತೆ ಅನೇಕ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ (Dixit Shetty) ನಾಯಕರಾಗಿ ನಟಿಸಿರುವ ಹಾಗೂ ಅಭಿಷೇಕ್ ಎಂ ನಿರ್ದೇಶನದ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” (Bank of Bhagyalakshmi) ಚಿತ್ರದ ಅನಿಮೇಷನ್‌ ಟೀಸರ್ (Animation Teaser) ಇತ್ತೀಚಿಗೆ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದಲ್ಲೇ ಹೊಸ ಪ್ರಯೋಗ ಎನ್ನಬಹುದಾದ ಈ ಟೀಸರ್ ಮೂಲಕ ಚಿತ್ರದ ಕಥೆ ಹೇಳುವ ಪ್ರಯತ್ನ ಮಾಡಲಾಗಿದೆ. ಈ ಅನಿಮೇಷನ್‌ ಟೀಸರ್ ಗಾಗಿ ಏಳೆಂಟು ಜನ ನುರಿತ ತಂತ್ರಜ್ಞರು ಸುಮಾರು ತಿಂಗಳ ಕಾಲ ಶ್ರಮ ಪಟ್ಟಿದ್ದಾರೆ‌. ಅನಿಮೇಷನ್‌ ಟೀಸರ್ ಗೆ ಬರುತ್ತಿರುವ ರೆಸ್ಪಾನ್ಸ್ ಗೆ ಬಹಳ ಖುಷಿಯಾಗಿದೆ ಎನ್ನುತ್ತಾರೆ ನಿರ್ದೇಶಕರು.

    ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಬೆಂಗಳೂರು, ತುಮಕೂರು ಹಾಗೂ ಚಿತ್ರದುರ್ಗದಲ್ಲಿ ಚಿತ್ರೀಕರಣ ನಡೆದಿದೆ.ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ದೀಕ್ಷಿತ್ ಶೆಟ್ಟಿ ಅವರಿಗೆ ನಾಯಕಿಯಾಗಿ “ಪ್ರೇಮಂ ಪೂಜ್ಯಂ” ಹಾಗೂ “ಕೌಸಲ್ಯ ಸುಪ್ರಜಾ ರಾಮ” ಚಿತ್ರಗಳ ಮೂಲಕ ಜನಪ್ರಿಯರಾಗಿರುವ  ಬೃಂದಾ ಆಚಾರ್ಯ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ,ಉಷಾ ಭಂಡಾರಿ, ಭರತ್,ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀ ವತ್ಸ, ವಿನುತ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

    ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಅವರ ಜೊತೆ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಅಭಿಷೇಕ್ ಎಂ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅಭಿಷೇಕ್ ಅವರೆ ಬರೆದಿದ್ದಾರೆ. ಹೆಸರಾಂತ ನಟ ರಕ್ಷಿತ್ ಶೆಟ್ಟಿ, ನಿರ್ದೇಶಕ ಸಚಿನ್ ಹಾಗೂ ಅಭಿಷೇಕ್ ಅವರ ಸಾರಥ್ಯದ “ಪಿನಾಕ” ವಿ ಎಫ್ ಎಕ್ಸ್ ಸ್ಟುಡಿಯೋದಲ್ಲೇ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” ಚಿತ್ರದ ಟೀಸರ್ ನ ಅನಿಮೇಷನ್‌ ವರ್ಕ್ ನಡೆದಿದೆ.

    ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಛಾಯಾಗ್ರಹಣ, ರಘು ಮೈಸೂರ್ ಕಲಾ ನಿರ್ದೇಶನ ಹಾಗೂ ಭೂಷಣ್ ಮಾಸ್ಟರ್ ನೃತ್ಯ ಈ ಚಿತ್ರಕ್ಕಿದೆ.

  • ‘ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮಿ’ ಪೋಸ್ಟರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಸಿಂಪಲ್ ಸುನಿ ವಿಶ್

    ‘ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮಿ’ ಪೋಸ್ಟರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಸಿಂಪಲ್ ಸುನಿ ವಿಶ್

    ಪ್ರತಿಭಾನ್ವಿತ ನಟ ದೀಕ್ಷಿತ್ ಶೆಟ್ಟಿ (Dheekshith Shetty) ಮತ್ತು ಬೃಂದಾ ನಟಿಸಿರುವ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ (Bank Of Bhagyalakshmi) ಚಿತ್ರದ ಪೋಸ್ಟರ್ ಅನ್ನು ಡೈರೆಕ್ಟರ್ ಸಿಂಪಲ್ ಸುನಿ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಈ ಮೂಲಕ ‘ಚಮಕ್’ (Chamak) ನಿರ್ದೇಶಕ ಸಿಂಪಲ್‌ ಸುನಿ (Simple Suni) ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ.

    ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಚಿತ್ರದ ಶೀರ್ಷಿಕೆಯೇ ಸೂಚಿಸುತ್ತಿರುವಂತೆ ಬ್ಯಾಂಕ್‌ವೊಂದರಲ್ಲಿ ದರೋಡೆ ಮಾಡಲು ಹೊರಟವರ ಕಹಾನಿ ಈ ಸಿನಿಮಾದಲ್ಲಿ ಇರಲಿದೆ. ಈ ಕಥೆಯನ್ನು ಹಾಸ್ಯ ಪ್ರಧಾನವಾಗಿ ತೆರೆಗೆ ತರಲಾಗುತ್ತಿದೆ. ಕನ್ನಡ ಮತ್ತು ತೆಲುಗಿನಲ್ಲಿ ಗುರುತಿಸಿಕೊಂಡಿರುವ ದೀಕ್ಷಿತ್ ಶೆಟ್ಟಿ ವಿಭಿನ್ನ ಪಾತ್ರದ ಮೂಲಕ ಬರುತ್ತಿದ್ದಾರೆ.

     

    View this post on Instagram

     

    A post shared by Brinda Acharya (@brinda_acharya)

    ಸದ್ಯ ರಿಲೀಸ್ ಆಗಿರುವ ಪೋಸ್ಟರ್‌ನಲ್ಲಿ ಗನ್ ಹಿಡಿದು ದೀಕ್ಷಿತ್ ಶೆಟ್ಟಿ ರೆಟ್ರೋ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ಬೃಂದಾ ಕೂಡ ಕನ್ನಡಕ ಧರಿಸಿ ಸೀರೆಯುಟ್ಟು ರೆಟ್ರೋ ಲುಕ್‌ನಲ್ಲಿ ಮಿಂಚಿದ್ದಾರೆ. ದೀಕ್ಷಿತ್ ಶೆಟ್ಟಿಗೆ ನಾಯಕಿಯಾಗಿ ‘ಪ್ರೇಮಂ ಪೂಜ್ಯಂ’ ನಟಿ ಬೃಂದಾ (Brinda Acharya) ಜೊತೆಯಾಗುತ್ತಿದ್ದಾರೆ.

    ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಸಿನಿಮಾಗೆ ಬೆಂಗಳೂರು, ತುಮಕೂರು ಮತ್ತು ಚಿತ್ರದುರ್ಗ ಸುತ್ತಮುತ್ತ ಶೇಕಡ 80ರಷ್ಟು ಚಿತ್ರೀಕರಣ ಮುಗಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಶೂಟಿಂಗ್ ಪೂರ್ಣಗೊಳ್ಳಲಿದೆ. ಕನ್ನಡ ಮಾತ್ರವಲ್ಲದೇ ತೆಲುಗಿನಲ್ಲಿ ಈ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಈ ಚಿತ್ರವನ್ನು ಅಭಿಷೇಕ್ ಎಂ. ನಿರ್ದೇಶನ ಮಾಡಿದ್ದಾರೆ.

  • ಮಲಯಾಳಂ ಚಿತ್ರದ ಶೂಟಿಂಗ್ ಬಗ್ಗೆ ಅಪ್‌ಡೇಟ್ ಹಂಚಿಕೊಂಡ ‘ದಿಯಾ’ ಹೀರೋ

    ಮಲಯಾಳಂ ಚಿತ್ರದ ಶೂಟಿಂಗ್ ಬಗ್ಗೆ ಅಪ್‌ಡೇಟ್ ಹಂಚಿಕೊಂಡ ‘ದಿಯಾ’ ಹೀರೋ

    ನ್ನಡದ ನಟ ದೀಕ್ಷಿತ್ ಶೆಟ್ಟಿ (Dheekshith Shetty) ತೆಲುಗು ಚಿತ್ರದ ಬಳಿಕ ಇದೀಗ ಮಾಲಿವುಡ್‌ನಲ್ಲಿ (Mollywood) ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿ ಜೊತೆ ತೆರೆಹಂಚಿಕೊಂಡ ಬಳಿಕ ಮಾಲಿವುಡ್‌ನಲ್ಲೂ ದೀಕ್ಷಿತ್‌ಗೆ ಬಿಗ್ ಚಾನ್ಸ್ ಸಿಕ್ಕಿದೆ. ಶೂಟಿಂಗ್‌ಗೆ ಭಾಗಿಯಾಗಿರೋ ನಟ, ಇದೀಗ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ಸಿಕ್ಕಿರುವ ಅವಕಾಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

    ಪ್ರೇಮಂ, ಚಾರ್ಲಿ, ಬೆಂಗಳೂರು ಡೇಸ್ ಸೇರಿದಂತೆ ಹಲವು ಸಿನಿಮಾಗಳನ್ನು ನೋಡಿದ್ದೇನೆ. ಸರಳ ಕಥೆಯನ್ನು ಎಷ್ಟು ಅದ್ಭುತವಾಗಿ ತೋರಿಸುತ್ತಾರೆ ಎಂದು ಅಚ್ಚರಿಪಟ್ಟಿದ್ದೆ. ಇಂದು ನಾನೇ ಮಲಯಾಳಂ ಸಿನಿಮಾಗೆ ಸಾಕ್ಷಿಯಾಗುತ್ತಿದ್ದೇನೆ. ಖಂಡಿತಾ ನಿಮ್ಮೆಲ್ಲರ ಪ್ರೀತಿ ಇಲ್ಲದೇ ಇದ್ದಿದ್ದರೆ ಅದು ಸಾಧ್ಯವಾಗುತ್ತಿರಲಿಲ್ಲ ಎಂದು ಬರೆದುಕೊಂಡಿದ್ದಾರೆ. ಬಳಿಕ ಅಧಿಕೃತವಾಗಿ ಮಾಲಿವುಡ್‌ನ ಭಾಗವಾಗಿದ್ದೇನೆ ಎಂದು ಹೇಳಬಹುದು ಎಂದು ದೀಕ್ಷಿತ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಬಗ್ಗೆ ಹೇಳಿದ್ದಾರೆ. ಚಾನ್ಸ್ ನೀಡಿದ ಮಲಯಾಳಂ ‘ಒಪ್ಪೀಸ್’ ಚಿತ್ರದ ನಿರ್ದೇಶಕನಿಗೆ ದಿಯಾ ನಟ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ:Pushpa 2: ಅಲ್ಲು ಅರ್ಜುನ್‌ ಜೊತೆ ಕಾಣಿಸಿಕೊಳ್ತಾರೆ ಸಮಂತಾ

    ಪ್ಯಾರಾ ಸೈಕಲಾಜಿಕಲ್ ಕಥಾಹಂದರ ಹೊಂದಿರುವ ‘ಒಪ್ಪೀಸ್’ ಸಿನಿಮಾದ ಮುಹೂರ್ತ ಸಮಾರಂಭ ಕಳೆದ ಡಿಸೆಂಬರ್‌ನಲ್ಲಿ ಕೇರಳದಲ್ಲಿ ಸರಳವಾಗಿ ಜರುಗಿತ್ತು. 10 ವರ್ಷಗಳ ಕಾಲ ವಿದೇಶದಲ್ಲಿದ್ದ ವ್ಯಕ್ತಿ ತಾನು ಹುಟ್ಟಿ ಬೆಳೆದ ಕೇರಳಗೆ ವಾಪಸ್ ಆದಾಗ ಏನಾಗುತ್ತದೆ ಅನ್ನೋದೆ ಕಥೆಯ ತಿರುಳು. ಇದೀಗ ಒಪ್ಪೀಸ್ ಸಿನಿಮಾದ ಶೂಟಿಂಗ್ ಶುರುವಾಗಿದೆ. ಸೌಜನ್ ಜೋಸೆಫ್ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಪ್ರದ್ಯುಮನ್ಹಾ ಕೊಳ್ಳೇಕಾಲ ಬಂಡವಾಳ ಹೂಡಿದ್ದಾರೆ. ಎಂ ಜಯಚಂದ್ರನ್ ಮ್ಯೂಸಿಕ್ ಚಿತ್ರಕ್ಕಿದೆ.

    ಮಲಯಾಳಂ ಚಿತ್ರದ ಜೊತೆಗೆ ತೆಲುಗಿನ ‌’ಗರ್ಲ್‌ಫ್ರೆಂಡ್’ ಸಿನಿಮಾದಲ್ಲಿ ದೀಕ್ಷಿತ್ ಶೆಟ್ಟಿ ನಟಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ದೀಕ್ಷಿತ್ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಕನ್ನಡದ ಸಿನಿಮಾಗಳು ನಟನ ಕೈಯಲ್ಲಿವೆ.