Tag: ದೀಪಕ್ ಅರಸ್

  • ಸುಮ್ಮನಹಳ್ಳಿ ಹಿಂದೂ ರುದ್ರಭೂಮಿಯಲ್ಲಿ ನೆರವೇರಿದ ಅಮೂಲ್ಯ ಅಣ್ಣ ದೀಪಕ್ ಅಂತ್ಯಕ್ರಿಯೆ

    ಸುಮ್ಮನಹಳ್ಳಿ ಹಿಂದೂ ರುದ್ರಭೂಮಿಯಲ್ಲಿ ನೆರವೇರಿದ ಅಮೂಲ್ಯ ಅಣ್ಣ ದೀಪಕ್ ಅಂತ್ಯಕ್ರಿಯೆ

    ಸ್ಯಾಂಡಲ್‌ವುಡ್ ನಟಿ ಅಮೂಲ್ಯ (Amulya) ಸಹೋದರ ದೀಪಕ್ ಅರಸ್ (Deepak Aras) ಅವರ ಅಂತ್ಯಕ್ರಿಯೆ ಇಂದು (ಅ.18) ಸಂಜೆ ಬೆಂಗಳೂರಿನ ಸುಮ್ಮನಹಳ್ಳಿಯ ಹಿಂದೂ ರುದ್ರಭೂಮಿಯಲ್ಲಿ ನಡೆದಿದೆ. ಇದನ್ನೂ ಓದಿ:‘ಶೇರ್ಷಾ’ ಬಳಿಕ ಮತ್ತೊಂದು ಲವ್ ಸ್ಟೋರಿ ಸಿನಿಮಾದಲ್ಲಿ ಸಿದ್ಧಾರ್ಥ್, ಕಿಯಾರಾ?

    ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ಅವರು ಇಂದು (ಅ.18) ಬೆಳಗ್ಗೆ 6:04ಕ್ಕೆ ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಮದುವೆಯಾಗಿ 2 ಮಕ್ಕಳಿದ್ದರು.

    ಅಂದಹಾಗೆ, ರಾಕೇಶ್ ಅಡಿಗ ಮತ್ತು ಅಮೂಲ್ಯ ನಟಿಸಿದ್ದ ‘ಮನಸಾಲಜಿ’ ಮತ್ತು ಡಾರ್ಲಿಂಗ್ ಕೃಷ್ಣ ನಟಿಸಿದ್ದ ‘ಶುಗರ್ ಫ್ಯಾಕ್ಟರಿ’ ಚಿತ್ರಕ್ಕೆ ದೀಪಕ್ ಅರಸ್ ಆ್ಯಕ್ಷನ್ ಕಟ್ ಹೇಳಿದ್ದರು.

  • ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ ಸಹೋದರ ದೀಪಕ್‌ ಅರಸ್‌ ನಿಧನ

    ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ ಸಹೋದರ ದೀಪಕ್‌ ಅರಸ್‌ ನಿಧನ

    ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ ಅವರ ಸಹೋದರ ದೀಪಕ್‌ ಅರಸ್‌ (46) ನಿಧನರಾಗಿದ್ದಾರೆ.

    ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ದೀಪಕ್ ಕೊನೆಯುಸಿರೆಳೆದಿದ್ದಾರೆ. ಇವರು ಮನಸಾಲಜಿ, ಶುಗರ್ ಫ್ಯಾಕ್ಟರಿ ಸಿನಿಮಾಗಳನ್ನು ನಿರ್ದೇಶಿಸಿದ್ದರು.

    ಕಿಡ್ನಿ ವೈಫಲ್ಯದಿಂದ ನಿಧನರಾಗಿದ್ದಾರೆಂದು ತಿಳಿದುಬಂದಿದೆ. ದೀಪಕ್‌ ಅರಸ್‌ ಅವರಿಗೆ ಮದುವೆ ಆಗಿ ಇಬ್ಬರು ಮಕ್ಕಳಿದ್ದರು.

    ವಯಾಲಿ ಕಾವಲ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

  • ‘ಶುಗರ್ ಫ್ಯಾಕ್ಟರಿ’ಗಾಗಿ ಹಾಡು ಬರೆದ ಜಯಂತ್ ಕಾಯ್ಕಿಣಿ

    ‘ಶುಗರ್ ಫ್ಯಾಕ್ಟರಿ’ಗಾಗಿ ಹಾಡು ಬರೆದ ಜಯಂತ್ ಕಾಯ್ಕಿಣಿ

    ದೀಪಕ್ ಅರಸ್ (Deepak Urs) ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ (Darling Krishna) ನಾಯಕರಾಗಿ ನಟಿಸಿರುವ ‘ಶುಗರ್ ಫ್ಯಾಕ್ಟರಿ’ (Sugar Factory) ಚಿತ್ರಕ್ಕಾಗಿ ಖ್ಯಾತ ಗೀತರಚನೆಕಾರ ಜಯಂತ ಕಾಯ್ಕಿಣಿ (Jayant Kaykini) ಅವರು ‘ಜಹಾಪನಾ’ ಎಂಬ ಸುಮಧುರ ಪ್ರೇಮಗೀತೆ ಬರೆದಿದ್ದಾರೆ. ಇತ್ತೀಚೆಗೆ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

    ನಿಹಾಲ್ ತಾವ್ರೊ ಹಾಗೂ ಅಮೃತಾ ನಾಯಕ್ ಅವರ ಕಂಠಸಿರಿಯಲ್ಲಿ ಈ ಹಾಡು ಮಧುರವಾಗಿ ಮೂಡಿಬಂದಿದೆ. ಧನಂಜಯ್ ಅವರ ನೃತ್ಯ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ಹಾಗೂ ಸೋನಾಲ್ ಮೊಂತೆರೊ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಕಬೀರ್ ರಫಿ  ಸಂಗೀತ ನೀಡಿದ್ದಾರೆ.

    ಈಗಾಗಲೇ ಶುಗರ್ ಫ್ಯಾಕ್ಟರಿ ಟ್ರೈಲರ್ ಎಲ್ಲರ ಮನಗೆದ್ದು, ಆಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ನವೆಂಬರ್ 24 ರಂದು ಬಹು ನಿರೀಕ್ಷಿತ ಈ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಡಾರ್ಲಿಂಗ್ ಕೃಷ್ಣ ಅವರ ಸಿನಿಜರ್ನಿಯಲ್ಲೇ ಶುಗರ್ ಫ್ಯಾಕ್ಟರಿ ಬಿಗ್ ಬಜೆಟ್ ಚಿತ್ರವೆಂದು ಹೇಳಲಾಗುತ್ತಿದೆ. ಅಭಿಮಾನಿಗಳು ಸಹ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು, ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.

    ಆರ್ ಗಿರೀಶ್ ನಿರ್ಮಿಸಿರುವ ಈ ಚಿತ್ರದಲ್ಲಿ  ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮಾಂತೆರೊ, ಅದ್ವಿತಿ ಶೆಟ್ಟಿ, ರುಹಾನಿ ಶೆಟ್ಟಿ ಕೃಷ್ಣ ಅವರಿಗೆ ನಾಯಕಿಯರಾಗಿ ನಟಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಮನ ಸೆಳೆದ ಡಾರ್ಲಿಂಗ್ ಕೃಷ್ಣ ನಟನೆ ‘ಶುಗರ್ ಫ್ಯಾಕ್ಟರಿ’ ಟ್ರೈಲರ್

    ಗಮನ ಸೆಳೆದ ಡಾರ್ಲಿಂಗ್ ಕೃಷ್ಣ ನಟನೆ ‘ಶುಗರ್ ಫ್ಯಾಕ್ಟರಿ’ ಟ್ರೈಲರ್

    ಬಿಡುಗಡೆಗೂ ಮುನ್ನವೇ ಡಾರ್ಲಿಂಗ್ ಕೃಷ್ಣ (Darling Krishna) ನಾಯಕರಾಗಿ ನಟಿಸಿರುವ ‘ಶುಗರ್ ಫ್ಯಾಕ್ಟರಿ’ (Sugar Factory) ಚಿತ್ರ ಭಾರಿ ಸುದ್ದಿಯಲ್ಲಿದೆ. ಇತ್ತೀಚೆಗೆ ಬಿಡುಗಡೆಯಾಗಿರುವ ಈ ಚಿತ್ರದ ಟ್ರೈಲರ್ (Trailer) ಕುತೂಹಲ ಮೂಡಿಸಿದೆ. ಚಿತ್ರ ನೋಡುವ ಕಾತುರವನ್ನು ಮತ್ತಷ್ಟು ಹೆಚ್ಚಿಸಿದೆ.

    ಟ್ರೇಲರ್ ನಲ್ಲಿ ಮನೋರಂಜನೆಯ ಮಹಾಪೂರವೇ ಹರಿದು ಬಂದಿದೆ. ಎರಡು ನಿಮಿಷಗಳ ಟ್ರೇಲರ್ ನಲ್ಲೇ ಇಷ್ಟು ಮನರಂಜನೆ ಹಾಗೂ ಹಾಸ್ಯಭರಿತ ಸಂಭಾಷಣೆಗಳಿದೆ. ಇನ್ನು ಇಡೀ ಚಿತ್ರದುದ್ದಕ್ಕೂ ನಾನ್ ಸ್ಟಾಪ್ ಮನರಂಜನೆ ಖಚಿತ ಎಂಬುದಕ್ಕೆ ಟ್ರೇಲರ್ ಮುನ್ನುಡಿಯಾಗಿದೆ. ಇದನ್ನೂ ಓದಿ:ತಲಕಾವೇರಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಷೇಕ್, ಅವಿವಾ ದಂಪತಿ

    ಅಪಾರ ವೆಚ್ಚದಲ್ಲಿ ಹಾಗೂ ಅದ್ದೂರಿಯಾಗಿ ಮೂಡಿಬಂದಿರುವ ಶುಗರ್ ಫ್ಯಾಕ್ಟರಿ ನವೆಂಬರ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಗಿರೀಶ್ ನಿರ್ಮಿಸಿರುವ,  ದೀಪಕ್ ಅರಸ್ (Deepak Aras) ನಿರ್ದೇಶಿಸಿರುವ ಶುಗರ್ ಫ್ಯಾಕ್ಟರಿ ಚಿತ್ರದ ಹಾಡಗಳು ಹಾಗೂ ಟ್ರೇಲರ್ ಈಗಾಗಲೇ ಜನಪ್ರಿಯವಾಗಿದೆ.

     

    ಡಾರ್ಲಿಂಗ್ ಕೃಷ್ಣ ಅವರ ಸಿನಿ ಜರ್ನಿಯಲ್ಲೇ ಶುಗರ್ ಫ್ಯಾಕ್ಟರಿ ಬಿಗ್ ಬಜೆಟ್ ನ ಚಿತ್ರವಾಗಿದೆ. ಸೋನಾಲ್ ಮಾಂತೆರೊ, ಅದ್ವಿತಿ ಶೆಟ್ಟಿ, ರುಹಾನಿ ಶೆಟ್ಟಿ ಕೃಷ್ಣ ಅವರಿಗೆ ನಾಯಕಿಯರಾಗಿ ನಟಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆಪ್ಟೆಂಬರ್ 28ಕ್ಕೆ ಡಾರ್ಲಿಂಗ್ ಕೃಷ್ಣ ನಟನೆಯ ‘ಶುಗರ್ ಫ್ಯಾಕ್ಟರಿ’ ಟ್ರೈಲರ್ ರಿಲೀಸ್

    ಸೆಪ್ಟೆಂಬರ್ 28ಕ್ಕೆ ಡಾರ್ಲಿಂಗ್ ಕೃಷ್ಣ ನಟನೆಯ ‘ಶುಗರ್ ಫ್ಯಾಕ್ಟರಿ’ ಟ್ರೈಲರ್ ರಿಲೀಸ್

    ದೀಪಿಕ್ ಅರಸ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಶುಗರ್ ಫ್ಯಾಕ್ಟರಿ’ ಚಿತ್ರದ ಟ್ರೈಲರ್ (Trailer) ಸಿದ್ಧವಾಗಿದ್ದು, ಸೆಪ್ಟೆಂಬರ್ 28ರಂದು ರಿಲೀಸ್ ಮಾಡುವುದಾಗಿ ನಿರ್ದೇಶಕರು ಹೇಳಿದ್ದಾರೆ. ಸಿನಿಮಾದ ಒಂದಷ್ಟು ಅಂಶಗಳನ್ನು ಅವರು ಈ ಟ್ರೈಲರ್ ಮೂಲಕ ಹೇಳಲು ಹೊರಟಿದ್ದಾರಂತೆ.

    ಈ ಹಿಂದೆ ಚಿತ್ರದ ನಾಯಕ ಡಾರ್ಲಿಂಗ್ ಕೃಷ್ಣ (Darling Krishna)  ಅವರ ಹುಟ್ಟು ಹಬ್ಬಕ್ಕಾಗಿ ‘ಶುಗರ್ ಫ್ಯಾಕ್ಟರಿ’ (Sugar Factory) ಚಿತ್ರತಂಡ ವಿಶೇಷ ಪೋಸ್ಟರ್ ಒಂದನ್ನು ರಿಲೀಸ್ ಮಾಡಿತ್ತು. ಈ ಮೂಲಕ ತನ್ನ ಚಿತ್ರದ ನಾಯಕನಿಗೆ ಚಿತ್ರತಂಡ ಶುಭಾಶಯ ತಿಳಿಸಿತ್ತು. ಆ ಫೋಸ್ಟರ್ ಕೃಷ್ಣ ಅಭಿಮಾನಿಗಳಿಗೆ ಸಂಭ್ರಮ ತಂದಿತ್ತು.

    ನಿರ್ದೇಶಕ ದೀಪಕ್ ಅರಸ್ (Deepak) ನಟಿ ಅಮೂಲ್ಯ ಅವರ ಸಹೋದರ. ಈ ಹಿಂದೆ ಅಮೂಲ್ಯ, ರಾಕೇಶ್ ಅಡಿಗ ಜೋಡಿಯ ಮನಸಾಲಜಿ ಚಿತ್ರ ನಿರ್ದೇಶಿಸಿದ್ದರು, ಇದೀಗ ಎರಡನೇ ಸಿನಿಮಾವಾಗಿ ಶುಗರ್ ಫ್ಯಾಕ್ಟರಿ ಚಿತ್ರ  ಮೂಡಿ ಬಂದಿದೆ. ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನ ದೀಪಕ್ ಅರಸ್ ಅವರೇ ಬರೆದಿದ್ದಾರೆ. ಇದನ್ನೂ ಓದಿ:ನ.24ಕ್ಕೆ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಸ್ಟಾರ್ ಕಲಾವಿದರ ಸಾಥ್

    ಫನ್ ರೋಮ್ಯಾಂಟಿಕ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಚಿತ್ರದಲ್ಲಿ ಮೂವರು ನಾಯಕಿಯರಿದ್ದು, ಅದ್ವಿತಿ ಶೆಟ್ಟಿ, ಸೊನಾಲ್ ಮೊಂಥೆರೋ, ಶಿಲ್ಪಾ ಶೆಟ್ಟಿ ಶುಗರ್ ಫ್ಯಾಕ್ಟರಿ ನಟಿಮಣಿಯರಾಗಿ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಚೇತನ್ ಕುಮಾರ್, ಅರಸು ಅಂತಾರೆ, ಚಂದನ್ ಶೆಟ್ಟಿ ಸಾಹಿತ್ಯ ಬರೆಯುತ್ತಿದ್ದಾರೆ. ಕಬೀರ್ ರಫಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣದಲ್ಲಿ ಶುಗರ್ ಫ್ಯಾಕ್ಟರಿ ಚಿತ್ರ ಸೆರೆಯಾಗಿದೆ.

     

    ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್.ಗಿರೀಶ್ ಶುಗರ್ ಫ್ಯಾಕ್ಟರಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮೈಸೂರು, ಗೋವಾ ಹಾಗೂ ವಿದೇಶಗಳಲ್ಲೂ ಸಿನಿಮಾ ಸೆರೆ ಹಿಡಿಯಲಾಗಿದೆ. ರಂಗಾಯಣ ರಘು, ಗೋವಿಂದೇ ಗೌಡ, ಸೂರಜ್ ಕುಮಾರ್, ಮಹಂತೇಶ್, ಪವನ್ ಎಸ್ ನಾರಾಯಣ್, ರಾಯಲ್ ರವಿ, ಅವೀಕ್ಷ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾರ್ಟಿ ಪ್ರಿಯರಿಗಾಗಿ ‘ಶುಗರ್ ಫ್ಯಾಕ್ಟರಿ’ಯಲ್ಲಿ ಒಂದು ಸಾಂಗ್

    ಪಾರ್ಟಿ ಪ್ರಿಯರಿಗಾಗಿ ‘ಶುಗರ್ ಫ್ಯಾಕ್ಟರಿ’ಯಲ್ಲಿ ಒಂದು ಸಾಂಗ್

    ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರ  ಆರಂಭದ ದಿನದಿಂದಲೂ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇತ್ತೀಚಿಗೆ ಈ ಚಿತ್ರದ ಟೈಟಲ್ ಟ್ರ್ಯಾಕ್  ಮಂತ್ರಿಮಾಲ್ ನಲ್ಲಿ ಬಿಡುಗಡೆಯಾಯಿತು. ಅಲ್ಲಿ ನೆರದಿದ್ದ ಅಪಾರ ಜನಸ್ತೋಮ ಶೀರ್ಷಿಕೆ ಹಾಡು ಬಿಡುಗಡೆಗೆ ಸಾಕ್ಷಿಯಾದರು. ಅಲ್ಲಿದ್ದ ಆರು ಜನ ಸಿನಿಪ್ರೇಕ್ಷಕರೆ, ಈ ಹಾಡನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು.  ಚಿತ್ರದಲ್ಲಿ ನಾಯಕ ಹಾಗೂ ನಾಯಕಿ ಪಾರ್ಟಿಯಲ್ಲಿ ಹಾಡಿ, ಕುಣಿಯುವ ಈ ಹಾಡು,‌ ಪಾರ್ಟಿ ಪ್ರಿಯರಿಗೆ ಸರ್ವಕಾಲಕ್ಕೂ ಮೆಚ್ಚುಗೆಯ ಗೀತೆಯಾಗಲಿದೆ. ತಮ್ಮ ವಿಶಿಷ್ಟ ಕಂಠದ ಮೂಲಕ ಜನಪ್ರಿಯರಾಗಿರುವ ಚಂದನ್ ಶೆಟ್ಟಿ, ಈ ಹಾಡನ್ನು ಬರೆದು ಹಾಡಿದ್ದಾರೆ. ರುಚಿರ ವೈದ್ಯ English rap ಗೆ ದ್ವನಿಯಾಗಿದ್ದಾರೆ.  ಕಬೀರ್ ರಫಿ ಸಂಗೀತ ನೀಡಿದ್ದಾರೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ನಟಿ ಅಮೂಲ್ಯ, ಜಗದೀಶ್ (ಅಮೂಲ್ಯ ಪತಿ) ಹಾಗೂ ರಾಜಕೀಯ ಮುಖಂಡರಾದ ರಾಮಚಂದ್ರಪ್ಪ ಅವರು ಸಮಾರಂಭಕ್ಕೆ ಆಗಮಿಸಿ, ಚಿತ್ರತಂಡಕ್ಕೆ ಶುಭ ಕೋರಿದರು.

    ಇದು ನನ್ನ ಸಿನಿ ಜರ್ನಿಯ ಬಿಗ್ ಬಜೆಟ್ ಚಿತ್ರ ಎನ್ನಬಹುದು. ನಿಜಜೀವನದಲ್ಲಿ ಪಾರ್ಟಿ ಮಾಡದ ನನ್ನ ಹತ್ತಿರ, ಈ ಚಿತ್ರದಲ್ಲಿ ಭರ್ಜರಿ ಪಾರ್ಟಿ ಮಾಡಿಸಿ, ಸಖತಾಗಿ ಕುಣಿಸಿದ್ದಾರೆ. ಚಂದನ್ ಶೆಟ್ಟಿ ಅವರ ಗಾಯನ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು ನಾಯಕ ಡಾರ್ಲಿಂಗ್ ಕೃಷ್ಣ. ಇದನ್ನೂ ಓದಿ:  ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

    “ಶುಗರ್ ಫ್ಯಾಕ್ಟರಿ” ಈಗಿನ‌ ಜನರೇಶನ್ ಗೆ ಹೇಳಿಮಾಡಿಸಿದ ಕಥೆ. ಕಾಲೇಜು ವಿದ್ಯಾರ್ಥಿಗಳಿಗೆ ಈ ಚಿತ್ರ ಮತ್ತಷ್ಟು ಹತ್ತಿರವಾಗಲಿದೆ. ನಾವು ಆರಂಭದಲ್ಲಿ ಅಂದು ಕೊಂಡಿದ್ದೆ ಬೇರೆ. ಈಗ ಆಗಿರುವ ಬಜೆಟ್ ಬೇರೆ. ನನ್ನ ಈ ಕನಸನ್ನು ನನಸು ಮಾಡಿದ ನಿರ್ಮಾಪಕ ಗಿರೀಶ್ ಅವರಿಗೆ ಹಾಗೂ ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ನನ್ನ ಇಡೀ ತಂಡಕ್ಕೆ ತುಂಬು ಹೃದಯದ ಧನ್ಯವಾದ ಎಂದರು ನಿರ್ದೇಶಕ ದೀಪಕ್ ಅರಸ್.

    ನಿರ್ಮಾಪಕ ಗಿರೀಶ್ ಅವರು ಹಾಡು ಹಾಗೂ ಚಿತ್ರ ಚೆನ್ನಾಗಿ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಸಂಗೀತ ನಿರ್ದೇಶಕ ಕಬೀರ್ ರಫಿ ಹಾಡುಗಳ ಬಗ್ಗೆ ಮಾಹಿತಿ ನೀಡಿದರು. ನಾಯಕಿಯರಾದ ಸೋನಾಲ್ ಮೊಂತೆರೊ, ಅದ್ವಿತಿ ಶೆಟ್ಟಿ , ಶಿಲ್ಪ ಶೆಟ್ಟಿ ಮತ್ತು ಚಿತ್ರದಲ್ಲಿ ನಟಿಸಿರುವ ಶಶಿ ಹಾಗೂ ಮಹಂತೇಶ್ “ಶುಗರ್ ಫ್ಯಾಕ್ಟರಿ” ಬಗ್ಗೆ ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]