Tag: ದೀಪಿಕಾ ಪಡುಕೋಣ

  • 2023 ಜನವರಿ 25ಕ್ಕೆ ಶಾರುಖ್ ಖಾನ್ ನಟನೆಯ ‘ಪಠಾಣ್’  ಸಿನಿಮಾ ರಿಲೀಸ್

    2023 ಜನವರಿ 25ಕ್ಕೆ ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ರಿಲೀಸ್

    ಶಾರುಖ್ ಖಾನ್ ನಟನೆಯ ಸಿನಿಮಾಗಾಗಿ ಐದು ವರ್ಷಗಳಿಂದ ಕಾದು ಕುಳಿತಿದ್ದ ಅಭಿಮಾನಿಗಳಿಗೆ ಇಂದು ಗುಡ್ ನ್ಯೂಸ್ ಸಿಕ್ಕಿದೆ. ಹಲವು ವರ್ಷಗಳಿಂದ ‘ಪಠಾಣ್’ ಸಿನಿಮಾದಲ್ಲೇ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಶಾರುಖ್ ಖಾನ್, ಕೊನೆಗೂ ಈ ಸಿನಿಮಾದ ರಿಲೀಸ್ ಡೇಟ್ ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷ ಜನವರಿ 25 ರಂದು ವಿಶ್ವದಾದ್ಯಂತ ಸಿನಿಮಾ ರಿಲೀಸ್ ಮಾಡುವುದಾಗಿ ಅವರು ಟ್ವಿಟ್ ಮಾಡಿದ್ದಾರೆ. ಸಖತ್ತಾಗಿರುವ ಪೋಸ್ಟರ್ ಕೂಡ ಹಾಕಿದ್ದಾರೆ.

    ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ ಸೇರಿದಂತೆ ಹೆಸರಾಂತ ತಾರಾ ಬಳಗವೇ ಇರುವ ಈ ಸಿನಿಮಾ ಈಗಾಗಲೇ ನಿರೀಕ್ಷೆ ಮೂಡಿಸಿದೆ. ಸಿನಿಮಾದ ಫಸ್ಟ್ ಲುಕ್ ಕೂಡ ವೈರಲ್ ಆಗಿದೆ. ಈ ಚಿತ್ರಕ್ಕಾಗಿ ಶಾರುಖ್ ಖಾನ್ ಲುಕ್ ಕೂಡ ಬದಲಾಯಿಸಿಕೊಂಡಿದ್ದಾರೆ. ಶಾರುಖ್ ಲುಕ್ ಬದಲಿಸಿಕೊಂಡಿದ್ದರೆ, ದೀಪಿಕಾ ಪಡುಕೋಣೆ ಬಿಕನಿಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಶೂಟಿಂಗ್ ಸಮಯದಲ್ಲಿ ದೀಪಿಕಾ ಬಿಕನಿಯಲ್ಲಿರುವ ಫೋಟೋ ಲೀಕ್ ಆಗಿ ವೈರಲ್ ಕೂಡ ಆಗಿತ್ತು. ಇದನ್ನೂ ಓದಿ : ಚಾಮುಂಡಿ ದರ್ಶನ ಮುಗಿಸಿ ಮೈಸೂರಿನಲ್ಲಿ ಉಪಾಧ್ಯಕ್ಷನನ್ನು ಭೇಟಿಯಾದ ಶಿವರಾಜ್ ಕುಮಾರ್

    ಶಾರುಖ್ ಖಾನ್ ಪೋಸ್ಟ್ ಮಾಡಿರುವ ಪ್ರಕಾರ ಈ ಸಿನಿಮಾ ಮೂರು ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಮಾಡುವುದಾಗಿ ಅವರು ಘೋಷಣೆ ಮಾಡಿದ್ದಾರೆ. ಶಾರುಖ್ ಖಾನ್ ಸಿನಿಮಾ ರಂಗಕ್ಕೆ ಬಂದು ಮೂರು ದಶಕ ಕಂಡ ಖುಷಿಯಾಗಿ ಇವತ್ತು ಪಠಾಣ್ ಸಿನಿಮಾದ ರಿಲೀಸ್ ದಿನಾಂಕವನ್ನು ಘೋಷಣೆ ಮಾಡಿದ್ದಾರೆ ಶಾರುಖ್. ಅಂದಹಾಗೆ ಯಶ್ ರಾಜ್ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಐವತ್ತನೇ ಸಿನಿಮಾ ಇದಾಗಿದೆ.

    Live Tv

  • ದೀಪಿಕಾ ಪಡುಕೋಣೆ ಬಾಳಲ್ಲಿ ಹೊಸ ವ್ಯಕ್ತಿಯ ಪ್ರವೇಶ!

    ದೀಪಿಕಾ ಪಡುಕೋಣೆ ಬಾಳಲ್ಲಿ ಹೊಸ ವ್ಯಕ್ತಿಯ ಪ್ರವೇಶ!

    ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತ್ ಸಿನಿಮಾ ಬಿಡುಗಡೆಯಾಗಿದ್ದು, ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ಬಂದಿದೆ. ಹೀಗಿರುವಾಗ ದೀಪಿಕಾ ಬಾಳಲ್ಲಿ ಒಬ್ಬ ವ್ಯಕ್ತಿಯ ಪ್ರವೇಶವಾಗಿದೆ. ಅದು ಬೇರೆ ಯಾರೂ ಅಲ್ಲ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ.

    ಪದ್ಮಾವತ್ ಚಿತ್ರ ಬಿಡುಗಡೆಯಾಗುತ್ತಿದ್ದಂತೆ, ದೀಪಿಕಾ ಸಂಜಯ್ ಲೀಲಾ ಜೊತೆವಿರುವ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಾಕಿ ಅದಕ್ಕೆ “ನನ್ನ ಜೀವನದ ಈಗೀನ ಹಾಗೂ ಮುಂದಿನ ಜೀವನದ್ದಕ್ಕೂ ಇವರು ನನ್ನ ಮುಖ್ಯ ವ್ಯಕ್ತಿ ಆಗಿರುತ್ತಾರೆ. ನಮ್ಮಿಬ್ಬರ ಕಡೆಯಿಂದ ನಾವು ನಿಮ್ಮನ್ನು ಪ್ರೀತಿಸುತ್ತೇನೆ ಎಂದು ಹೇಳಲು ಇಷ್ಟಪಡುತ್ತೇನೆ. ನಿಮ್ಮನ್ನು ಚಿತ್ರಮಂದಿರಗಳಲ್ಲಿ ಭೇಟಿ ಮಾಡುತ್ತೇನೆ” ಎಂದು ಪದ್ಮಾವತ್ ಕ್ಯಾಪ್ಷನ್ ಹಾಕಿ ಪೋಸ್ಟ್ ಮಾಡಿದ್ದಾರೆ.

    ಒಂದು ನಟಿಯನ್ನು ತೆರೆಯ ಮೇಲೆ ಅದ್ಭುತವಾಗಿ ಕಾಣಿಸಿಕೊಳ್ಳುವಂತೆ ಮಾಡಿದ ನಿರ್ದೇಶಕನಿಗೆ ನನ್ನ ಕೃತಜ್ಞತೆಗಳು. ಬಾಜಿರಾವ್ ಮಸ್ತಾನಿನಂತಹ ಬ್ಲಾಕ್ ಬಸ್ಟರ್ ಚಿತ್ರದ ನಂತರ ಮತ್ತೆ ನನ್ನನ್ನು ರಾಣಿಯಾಗಿ ಪದ್ಮಾವತ್ ಚಿತ್ರದಲ್ಲಿ ಕಾಣಿಸಿಕೊಳ್ಳುವಂತೆ ಮಾಡಿದ್ದಾರೆ ಎಂದು ದೀಪಿಕಾ ತಿಳಿಸಿದ್ದಾರೆ.

    ಪದ್ಮಾವತಿ ಚಿತ್ರ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿ ಪದ್ಮಾವತ್ ಆಗಿ ಬದಲಾಗಿದ್ದು, ಯು/ಎ ಸರ್ಟಿಫಿಕೆಟ್ ದೊರೆತಿತ್ತು. ಈ ಚಿತ್ರದಲ್ಲಿ ನಟಿ ದೀಪಿಕಾ ಪಡುಕೋಣೆ ರಾಣಿ ಪದ್ಮಾವತ್ ಆಗಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಚಿತ್ರದಲ್ಲಿ ಇಬ್ಬರು ನಾಯಕರಿದ್ದು, ಶಾಹಿದ್ ಕಪೂರ್ ರಾಣಾ ರತನ್ ಸಿಂಗ್ ಆಗಿ ಕಾಣಿಸಿಕೊಂಡಿದ್ದಾರೆ. ಮತ್ತೊಬ್ಬ ನಟ ರಣ್‍ವೀರ್ ಸಿಂಗ್ ಅಲ್ಲಾವುದ್ದೀನ್ ಖಿಲ್ಜಿ ಆಗಿ ಬಣ್ಣ ಹಚ್ಚಿದ್ದಾರೆ.