Tag: ದುದ್ದ

  • ಮದುವೆ ಆಮಂತ್ರಣ ಪತ್ರ ಹಂಚಿ ಮನೆಗೆ ವಾಪಸ್ ಆಗುತ್ತಿದ್ದ ಕಾನ್ಸ್‌ಟೇಬಲ್‌ನ ಬರ್ಬರ ಹತ್ಯೆ

    ಮದುವೆ ಆಮಂತ್ರಣ ಪತ್ರ ಹಂಚಿ ಮನೆಗೆ ವಾಪಸ್ ಆಗುತ್ತಿದ್ದ ಕಾನ್ಸ್‌ಟೇಬಲ್‌ನ ಬರ್ಬರ ಹತ್ಯೆ

    ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್‌ನನ್ನು (Police Constable) ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ (Hassan) ತಾಲೂಕಿನ ದುದ್ದ ಗ್ರಾಮದಲ್ಲಿ ನಡೆದಿದೆ.

    ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದವರಾದ ಹರೀಶ್.ವಿ (32) ಕೊಲೆಯಾದ ಪೊಲೀಸ್ ಕಾನ್ಸ್‌ಟೇಬಲ್. ಹರೀಶ್ ಬೆಂಗಳೂರಿನ KSISFನಲ್ಲಿ ಕಾನ್ಸ್‌ಟೇಬಲ್ ಆಗಿದ್ದರು. ಇದೇ ತಿಂಗಳು 11 ರಂದು ಹರೀಶ್ ವಿವಾಹ ನಿಶ್ಚಯವಾಗಿತ್ತು. ಸೋಮವಾರ ರಾತ್ರಿ ಮದುವೆ ಆಮಂತ್ರಣ ಪತ್ರ ಹಂಚಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್‌ನಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇದನ್ನೂ ಓದಿ: ನಾ ಡ್ರೈವರ್ ಖ್ಯಾತಿಯ ಗಾಯಕ ಮಾಳು ನಿಪನಾಳ ಗ್ಯಾಂಗ್‌ನಿಂದ ಹಲ್ಲೆ

    ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.‌ ಇದನ್ನೂ ಓದಿ: ನಾಲ್ವರಿದ್ದ ಬೈಕ್‌ಗೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲಿಯೇ ಸಾವು, ಇಬ್ಬರು ಗಂಭೀರ

  • ಕಾರಿಗೆ ರೈಲ್ವೆ ಎಂಜಿನ್ ಡಿಕ್ಕಿ; ಇಬ್ಬರ ಸಾವು

    ಹಾಸನ: ಕಾರೊಂದು ರೈಲ್ವೆ ಗೇಟ್ ದಾಟುವ ವೇಳೆ ರೈಲ್ವೇ ಎಂಜಿನ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದ ಬಳಿ ನಡೆದಿದೆ.

    ದುದ್ದ ಗ್ರಾಮದ ನಿವಾಸಿಗಳಾದ ಆನಂದ್ (22) ಮತ್ತು ರಾಘವೇಂದ್ರ (28) ಮೃತ ದುರ್ದೈವಿಗಳು. ಮಂಗಳವಾರ ರಾತ್ರಿ ಸುಮಾರು 11 ಗಂಟೆಗೆ ಇಬ್ಬರೂ ಅರಸೀಕೆರೆದಿಂದ ಕೋರವಂಗಲ್ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಕಾವಲುಗಾರನಿಲ್ಲದ ರೈಲ್ವೇ ಗೇಟ್ ದಾಟುವಾಗ ಅಪಘಾತ ನಡೆದಿದೆ.

    ವೇಗವಾಗಿ ಬಂದ ರೈಲ್ವೇ ಎಂಜಿನ್ ಕಾರಿಗೆ ಡಿಕ್ಕಿ ಹೊಡೆದು ಸುಮಾರು 500 ಮೀಟರ್ ದೂರದವರೆಗೆ ಎಳೆದುಕೊಂಡು ಹೋಗಿದೆ. ಕೊನೆಗೆ ರೈಲ್ವೇ ಪೊಲೀಸರು ಸಾರ್ವಜನಿಕರ ಸಹಾಯದೊಂದಿಗೆ ಕಾರನ್ನು ಎಂಜಿನ್‍ನಿಂದ ಬೇರ್ಪಡಿಸಿದ್ದಾರೆ. ಈ ಕುರಿತು ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.