Tag: ದುದ್ದ ಪೊಲೀಸ್ ಠಾಣೆ

  • 60ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ ಮಹಿಳೆ

    60ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ ಮಹಿಳೆ

    ಹಾಸನ: ಅಡಿಕೆ ಗಿಡಗಳನ್ನು ಯಾರೋ ಕಿಡಿಗೇಡಿಗಳು ಕಡಿದು ಹಾಕಿರುವ ಘಟನೆ ಹನುಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ರೈತ ಮಹಿಳೆ ತಾಯಮ್ಮ ಅವರಿಗೆ ಸೇರಿದ ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ತಾಯಮ್ಮ ಕಳೆದ ಎರಡು ವರ್ಷದಿಂದ ತುಂಬಾ ಶ್ರಮವಹಿಸಿ ಅಡಿಕೆ ಗಿಡ ಬೆಳೆಸಿದ್ದರು. ಎಲ್ಲ ಗಿಡಗಳಿಗೂ ಹನಿ ನೀರಾವರಿ ವ್ಯವಸ್ಥೆ ಮಾಡಿದ್ದರು. ಆದರೆ ಕಳೆದ ರಾತ್ರಿ ಸುಮಾರು 60ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ನಾಶ ಮಾಡಿದ್ದಾರೆ. ಅಡಿಕೆ ಗಿಡಗಳನ್ನು ಕಡಿದು ಹಾಕಿರುವುದನ್ನು ಕಂಡು ತಾಯಮ್ಮ ಕಣ್ಣೀರಿಟ್ಟಿದ್ದಾರೆ.

    ಕಿಡಿಗೇಡಿಗಳ ಕೃತ್ಯದಿಂದ ರೈತ ಮಹಿಳೆಗೆ ಒಂದು ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ. ನನಗೆ ಆದ ಪರಿಸ್ಥಿತಿ ಬೇರೆ ಯಾವ ರೈತರಿಗೂ ಆಗಬಾರದು. ಈ ಕೆಲಸ ಮಾಡಿದವರಿಗೆ ರೈತರ ಕಷ್ಟದ ಅರಿವಿಲ್ಲ. ಕೂಡಲೇ ಅವರನ್ನು ಕಂಡು ಹಿಡಿದು ಶಿಕ್ಷೆ ನೀಡಬೇಕು ಎಂದು ರೈತಮಹಿಳೆ ಮನವಿ ಮಾಡಿದ್ದಾರೆ. ಇದನ್ನೂ ಓದಿ:  ನಾನು ಲಾರ್ಡ್ ಶಿವ ಅಲ್ಲ, ನಾನು ನಿಮ್ಮ ಶಿವಣ್ಣ ಮಾತ್ರ: ಹ್ಯಾಟ್ರಿಕ್ ಹೀರೋ ಹೀಗಂದಿದ್ಯಾಕೆ..?

    ದುದ್ದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರೈತ ಮಹಿಳೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.