Tag: ದುರ್ಗಾ ಪೂಜೆ

  • Uttar Pradesh | ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ಹಿಂಸಾಚಾರ – ಪ್ರಮುಖ ಆರೋಪಿಗೆ ಗುಂಡೇಟು

    Uttar Pradesh | ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ಹಿಂಸಾಚಾರ – ಪ್ರಮುಖ ಆರೋಪಿಗೆ ಗುಂಡೇಟು

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಬಹ್ರೈಚ್‌ನಲ್ಲಿ (Bahraich) ದುರ್ಗಾ ಪೂಜೆ ವೇಳೆ ನಡೆದಿದ್ದ ಹಿಂಸಾಚಾರದ (Durga Puja Violence) ಪ್ರಮುಖ ರುವಾರಿಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಸರ್ಫರಾಜ್ ಎಂದು ಗುರುತಿಸಲಾಗಿದೆ. ಆತನನ್ನು ನೇಪಾಳ ಗಡಿಯಲ್ಲಿ ಬಂಧಿಸಲಾಗಿದೆ. ಬಂಧನದ ವೇಳೆ ಆತ ಪರಾರಿಯಾಗಲು ಯತ್ನಿಸಿದ್ದು ಪೊಲೀಸರು ಗುಂಡೇಟು ನೀಡಿದ್ದಾರೆ. ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಸರ್ಫರಾಜ್ ಮತ್ತು ಇನ್ನೋರ್ವ ಆರೋಪಿ ತಾಲಿಬ್ ಗಾಯಗೊಂಡಿದ್ದಾರೆ. ಆರೋಪಿಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಸಂಭಂದ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಅ.13ರ ಸಂಜೆ ಉತ್ತರಪ್ರದೇಶದ ಮನ್ಸೂರ್ ಗ್ರಾಮದ ಮಹರಾಜ್‌ಗಂಜ್ ಪ್ರದೇಶದಲ್ಲಿ ದುರ್ಗಾದೇವಿ ವಿಗ್ರಹ ವಿಸರ್ಜನಾ ಮೆರವಣಿಗೆಯಲ್ಲಿ ಧ್ವನಿವರ್ಧಕ ಬಳಕೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಕೋಮು ಸಂಘರ್ಷ (Communal clashes) ನಡೆದಿತ್ತು. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದ. ಬಳಿಕ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಗಲಭೆಗೆ ಸಂಬಂಧಿಸಿದಂತೆ 30 ಜನರನ್ನು ವಶಕ್ಕೆ ಪಡೆಯಲಾಗಿತ್ತು.

    ಘಟನೆಯಲ್ಲಿ ಮೃತಪಟ್ಟವನನ್ನು ರೆಹುವಾ ಮನ್ಸೂರ್ ಗ್ರಾಮದ ನಿವಾಸಿ ರಾಮ್ ಗೋಪಾಲ್ ಮಿಶ್ರಾ ಎಂದು ಗುರುತಿಸಲಾಗಿತ್ತು. ಮೃತರ ಕುಟುಂಬ ಶವ ಸಂಸ್ಕಾರ ಮಾಡದೇ ಆರೋಪಿಗಳ ವಿರುದ್ಧ ಧರಣಿ ನಡೆಸಿತ್ತು. ಬಳಿಕ ಪೊಲೀಸರು ಮತ್ತು ಆಡಳಿತಾಧಿಕಾರಿಗಳು ಕ್ರಮದ ಭರವಸೆ ನೀಡಿದ ನಂತರ ಧರಣಿ ಹಿಂಪಡೆದಿದ್ದರು. ಮರುದಿನ ಮತ್ತೆ ಉದ್ವಿಗ್ನತೆ ಉಲ್ಬಣಗೊಂಡಿತ್ತು.

    ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯನ್ನು ಖಂಡಿಸಿದ್ದರು. ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಚರ್ಚಿಸಲು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಸಿದ್ದರು. ಗಲಭೆಕೋರರನ್ನು ಮತ್ತು ಘಟನೆಗೆ ಕಾರಣವಾದವರ ನಿರ್ಲಕ್ಷ್ಯವನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದರು.

  • ನವರಾತ್ರಿ ವಿಶೇಷ-2 | ವಿವಾಹಿತ ಮಹಿಳೆಯರು ದೇವಿಗೆ ಸಿಂಧೂರ ಹಚ್ಚುವ ಸಂಭ್ರಮ!

    ನವರಾತ್ರಿ ವಿಶೇಷ-2 | ವಿವಾಹಿತ ಮಹಿಳೆಯರು ದೇವಿಗೆ ಸಿಂಧೂರ ಹಚ್ಚುವ ಸಂಭ್ರಮ!

    ಬಾಗ್‌ಬಜಾರ್‌ನ ದುರ್ಗಾಪೂಜೆಗೆ ಒಂದು ಶತಮಾನದ ಇತಿಹಾಸ ಇದೆ. ಬಂಗಾಳದ ಸಂಸ್ಕೃತಿಯಲ್ಲಿ ಮಹತ್ತ್ವದ ಪಾತ್ರ ವಹಿಸಿರುವ ಇಲ್ಲಿನ ದುರ್ಗಾಪೂಜೆ ಸಾಂಪ್ರದಾಯಿಕವಾಗಿ ಭಕ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುತ್ತದೆ.

    ಬಾಗ್‌ಬಜಾರ್‌ನ ಮೊಟ್ಟಮೊದಲ ದುರ್ಗಾಪೂಜೆ 1919ರಲ್ಲಿ ನಡೆದಿತ್ತು. ಆ ಕಾಲದಲ್ಲಿ ಇದಕ್ಕೆ ನೆಬುಬಾಗನ್ ಬಾರೋವಾರಿ ದುರ್ಗಾಪೂಜಾ ಎಂಬ ಹೆಸರಿತ್ತು. ಇದರ ಜಾಗ ಹಲವು ಬಾರಿ ಬದಲಾಗಿತ್ತು. 1930ರಲ್ಲಿ ಇದಕ್ಕೆ ಮೆಟಲ್ ಯಾರ್ಡ್ ಎಂಬಲ್ಲಿ ಶಾಶ್ವತ ನೆಲೆ ಸಿಕ್ಕಿತು. ಆ ಕಾಲದಲ್ಲಿ ಕೊಲ್ಗೊತಾದ ರಸ್ತೆ ರಿಪೇರಿ ಇಲಾಖೆ ಈ ಜಾಗವನ್ನು ಗೋಡೌನ್ ಆಗಿ ಬಳಸುತ್ತಿತ್ತು, ಆಗಿನ ಕೋಲ್ಕತ್ತಾ ಮೇಯ‌ರ್ ಆಗಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಇಲ್ಲಿ ದುರ್ಗಾಪೂಜೆ ನಡೆಸಲು ಆನುಮತಿ ನೀಡಿದ್ದರು. ಇಂದು ಇಲ್ಲೊಂದು ಉದ್ಯಾನವನ ನಿರ್ಮಾಣವಾಗಿದೆ. ಪ್ರತಿವರ್ಷ ಈ ಜಾಗದಲ್ಲಿ ದುರ್ಗಾಪೂಜೆಯ ಪೆಂಡಾಲ್ ತಲೆ ಎತ್ತುತ್ತದೆ.

    1938-39ರಲ್ಲಿ ನೇತಾಜಿ ಸುಭಾಷ್‌ ಚಂದ್ರ ಬೋಸ್ ಈ ಬಾಗ್‌ಬಜಾರ್ ದುರ್ಗಾಪೂಜಾ ಸಮಿತಿಯ ಅಧ್ಯಕ್ಷರಾಗಿದ್ದರು. ಇಲ್ಲಿನ ದುರ್ಗಾಪೂಜೆಯಲ್ಲಿ ನೇತಾಜಿ ಮಾತ್ರವಲ್ಲದೆ, ಆಚಾರ್ಯ ಪ್ರಫುಲ್ಲಚಂದ್ರ ರಾಯ್, ಸರ್ ಹರ್ ಶಂಕರ್ ಪಾಲ್ ಮುಂತಾದ ನೇತಾರರು ಕಾಲಕಾಲಕ್ಕೆ ಭಾಗವಹಿಸಿದ್ದರು. ಸ್ವದೇಶೀ ಚಳವಳಿಯ ವೇಳೆ ಈ ಸಮಿತಿ ಕೋಲ್ಕತ್ತಾದ ಜನರನ್ನು ಸಂಘಟಿಸಿತ್ತು. ಮುಂದೆ ʻಕ್ವಿಟ್ ಇಂಡಿಯಾ’ ಚಳವಳಿಯಲ್ಲಿ ಕೂಡ ಈ ಸಮಿತಿ ಮಹತ್ತ್ವದ ಪಾತ್ರ ವಹಿಸಿತು.

    ಇಲ್ಲಿನ ಅಲಂಕಾರ ಸರಳವಾಗಿದ್ದು, ಪೂಜೆ ಸಂಪ್ರದಾಯಬದ್ಧವಾಗಿರುತ್ತದೆ. ಈ ಪೆಂಡಾಲ್‌ನಲ್ಲಿ ಅಷ್ಟಮಿಯ ದಿನ ನಡೆಯುವ ಬೀರಾಷ್ಟಮಿ ಉತ್ಸವ ಮತ್ತು ವಿಜಯದಶಮಿಯ ಮುಂಜಾನೆ ನಡೆಯುವ ಸಿಂಧೂರ್ ಖೇಲಾ ಉತ್ಸವ ಸುಪ್ರಸಿದ್ಧವಾಗಿದೆ. ವಿಸರ್ಜನೆಯ ಮೆರವಣಿಗೆಗೂ ಮುನ್ನ ವಿವಾಹಿತ ಮಹಿಳೆಯರು ದೇವಿಗೆ ಸಿಂಧೂರ ಹಚ್ಚುವ ಸಂಭ್ರಮ ಇದು.

    ಬಾಗ್‌ಬಜಾ‌ರ್ ಪೆಂಡಾಲ್ ಇರುವುದು ಉತ್ತರ ಕೋಲ್ಕತ್ತಾದ ಬಾಗ್ ಬಜಾರ್ ನದಿಯ ಬಳಿ. ಬಾಗ್‌ಬಜಾರ್ ಲಾಂಚ್ ಘಾಟ್‌ಗೆ ಇದು ಸಮೀಪದಲ್ಲಿದೆ. ಶ್ಯಾಮ್‌ಬಜಾರ್ ಮೆಟ್ರೋ ಇಲ್ಲಿಗೆ ಸಮೀಪದ ರೈಲು ನಿಲ್ದಾಣವಾಗಿದೆ. ಅಲ್ಲದೇ ಟ್ಯಾಕ್ಸಿ, ಅಟೋ, ಬಸ್‌ ಸೌಲಭ್ಯಗಳೂ ಇರಲಿದೆ.

  • ದುರ್ಗಾ ಪೂಜೆಯಂದು ರಜೆ ನೀಡಬಾರದು, ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸಬಾರದು: ಬಾಂಗ್ಲಾ ಹಿಂದೂಗಳಿಗೆ ಎಚ್ಚರಿಕೆ

    ದುರ್ಗಾ ಪೂಜೆಯಂದು ರಜೆ ನೀಡಬಾರದು, ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸಬಾರದು: ಬಾಂಗ್ಲಾ ಹಿಂದೂಗಳಿಗೆ ಎಚ್ಚರಿಕೆ

    ಢಾಕಾ: ದುರ್ಗಾ ಪೂಜೆಯಂದು (Durga Puja) ಸಾರ್ವತ್ರಿಕ ರಜೆ (Holiday) ನೀಡಬಾರದು ಮತ್ತು ದುರ್ಗಾ ಮಾತೆಯ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ (Idol Immersion) ಮಾಡಬಾರದು ಎಂದು ಬಾಂಗ್ಲಾದಲ್ಲಿ ಹಿಂದೂಗಳಿಗೆ (Hindu) ಮುಸ್ಲಿಂ ಸಂಘಟನೆ ಬಹಿರಂಗ ಎಚ್ಚರಿಕೆ ನೀಡಿದೆ.

    ಇನ್ಸಾಫ್ ಕೀಮ್ಕರಿ ಛತ್ರ-ಜನತಾ ಹೆಸರಿನ ಮುಸ್ಲಿಂ ಮೂಲಭೂತವಾಗಿ ಸಂಘಟನೆ ಢಾಕಾದಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದೆ. ರಸ್ತೆಗಳನ್ನು ಮುಚ್ಚುವ ಮೂಲಕ ಎಲ್ಲಿಯೂ ಪೂಜೆ ಮಾಡಬಾರದು. ವಿಗ್ರಹ ವಿಸರ್ಜನೆ ಮಾಡಿದರೆ ನೀರು (Water) ಮಲೀನವಾಗುತ್ತದೆ. ಹೀಗಾಗಿ ಯಾರೂ ದುರ್ಗಾ ಪೂಜೆಯನ್ನ ಆಚರಿಸಬಾರದು ಎಂದು ಎಚ್ಚರಿಕೆ ನೀಡಿದೆ. ಇದನ್ನೂ ಓದಿ: 5 ಲಕ್ಷ ಪಾವತಿಸಿ ಇಲ್ಲವೇ ದುರ್ಗಾ ಪೂಜೆ ಆಚರಿಸಬೇಡಿ: ಬಾಂಗ್ಲಾ ಹಿಂದೂ ದೇವಾಲಯಗಳಿಗೆ ಬೆದರಿಕೆ

    ಬಾಂಗ್ಲಾದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ. ಶೇ.2ಕ್ಕಿಂತ ಕಡಿಮೆ ಇರುವ ಕಾರಣ ದುರ್ಗಾ ಪೂಜೆಯಂದು ಸಾರ್ವಜನಿಕ ರಜೆ ನೀಡಬಾರದು. ಇದರಿಂದ ಬಹು ಸಂಖ್ಯಾತರಾಗಿರುವ ಮುಸ್ಲಿಮರ ಜೀವನಕ್ಕೆ ಅಡ್ಡಿಯಾಗುತ್ತದೆ. ಧಾರ್ಮಿಕ ಕಾರಣಗಳನ್ನು ಮುಂದಿಟ್ಟುಕೊಂಡು ಹಿಂದೂ ಹಬ್ಬಗಳಲ್ಲಿ ಯಾವುದೇ ಮುಸಲ್ಮಾನರು ಭಾಗಿಯಾಗಬಾರದು ಎಂದು ಸದಸ್ಯರು ಸೂಚಿಸಿದ್ದಾರೆ.

    ಈ ಗುಂಪು 16 ಅಂಶಗಳ ಬೇಡಿಕೆಯನ್ನು ಸಹ ಮಂಡಿಸಿದೆ. ಹಿಂದೂಗಳು ಧಾರ್ಮಿಕ ಕಾರ್ಯಕ್ರಮಗಳಿಗಾಗಿ ರಸ್ತೆಗಳನ್ನು ಮುಚ್ಚಬಾರದು. ಹಿಂದೂಗಳು ಆಟದ ಮೈದಾನದಲ್ಲಿ ದುರ್ಗಾ ಪೂಜೆ ಮಾಡಬಾರದು. ಬಾಂಗ್ಲಾದ ವಿಶೇಷ ಭೂಮಿಯಲ್ಲಿ ನಿರ್ಮಾಣವಾಗಿರುವ ದೇವಸ್ಥಾನಗಳು ಅಕ್ರಮ. ಇವುಗಳನ್ನು ಕೆಡವಬೇಕು ಎಂದು ಆಗ್ರಹಿಸಿದೆ.

    ಅಷ್ಟೇ ಅಲ್ಲದೇ ಭಾರತವು ಬಾಂಗ್ಲಾದೇಶದ ರಾಷ್ಟ್ರೀಯ ಶತ್ರುವಾಗಿರುವುದರಿಂದ ಬಾಂಗ್ಲಾದೇಶದ ಹಿಂದೂ ನಾಗರಿಕರೂ ಭಾರತ ವಿರೋಧಿಯಾಗಲು ಒಪ್ಪಿಕೊಳ್ಳಬೇಕು. ಹೀಗಾಗಿ ಭಾರತ ವಿರೋಧಿ ಬ್ಯಾನರ್ ಮತ್ತು ಭಾರತ ವಿರೋಧಿ ಘೋಷಣೆಗಳನ್ನು ದೇವಸ್ಥಾನಗಳಲ್ಲಿ ಅಳವಡಿಸಬೇಕು ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ.

  • 5 ಲಕ್ಷ ಪಾವತಿಸಿ ಇಲ್ಲವೇ ದುರ್ಗಾ ಪೂಜೆ ಆಚರಿಸಬೇಡಿ: ಬಾಂಗ್ಲಾ ಹಿಂದೂ ದೇವಾಲಯಗಳಿಗೆ ಬೆದರಿಕೆ

    5 ಲಕ್ಷ ಪಾವತಿಸಿ ಇಲ್ಲವೇ ದುರ್ಗಾ ಪೂಜೆ ಆಚರಿಸಬೇಡಿ: ಬಾಂಗ್ಲಾ ಹಿಂದೂ ದೇವಾಲಯಗಳಿಗೆ ಬೆದರಿಕೆ

    ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ದುರ್ಗಾ ಪೂಜೆಯ (Durga Puja) ಸಂದರ್ಭದಲ್ಲಿ ಕೋಮುಗಲಭೆ ಉಂಟಾಗಬಹುದೆಂಬ ಆತಂಕದ ನಡುವೆ, ಕೆಲವು ದೇವಾಲಯಗಳಿಗೆ (Hindu Temples) ಇಸ್ಲಾಮಿಸ್ಟ್ ಗುಂಪುಗಳಿಂದ ಸುಲಿಗೆ ಬೆದರಿಕೆ ಪತ್ರಗಳು ಬಂದಿವೆ.

    ಖುಲ್ನಾ ನಗರದ ಡಕೋಪ್‍ನಲ್ಲಿರುವ 25ಕ್ಕೂ ಹೆಚ್ಚು ದೇವಾಲಯಗಳಿಗೆ ಐದು ದಿನಗಳ ಹಬ್ಬವನ್ನು ಆಚರಿಸಲು 5 ಲಕ್ಷ ರೂ. ಬೆದರಿಕೆ ಹಾಕಲಾಗಿದೆ. ಸುಲಿಗೆ ಬೆದರಿಕೆಗಳ ವಿರುದ್ಧ ದೇವಾಲಯ ಸಮಿತಿಗಳು ಪೊಲೀಸರಿಗೆ ದೂರು ನೀಡಿದ್ದರೂ ಪೊಲೀಸರ ಮೇಲೆ ಯಾವುದೇ ವಿಶ್ವಾಸವಿಲ್ಲ ಎಂದು ಪೂಜಾ ಸಮಿತಿಗಳು ಹೇಳಿಕೊಂಡಿವೆ. ಬೆದರಿಕೆಯ ಕಾರಣ, ಕೆಲವು ಪೂಜಾ ಸಮಿತಿಗಳು ಆಚರಣೆಯನ್ನು ರದ್ದುಗೊಳಿಸಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ಯಾದಗಿರಿಯಲ್ಲಿ ಗುಡುಗು ಸಹಿತ ಬಾರಿ ಮಳೆ : ಸಿಡಿಲು ಬಡಿದು ನಾಲ್ವರು ಸಾವು

    ಅಕ್ಟೋಬರ್ 9 ರಿಂದ 13 ರವರೆಗೆ ದುರ್ಗಾ ಪೂಜೆಯನ್ನು ಆಚರಿಸಲಾಗುತ್ತದೆ. ಕಳೆದ 2023ಕ್ಕೆ ಹೋಲಿಸಿದರೆ ಬಾಂಗ್ಲಾದೇಶದಲ್ಲಿ ಈ ವರ್ಷ ಹೆಚ್ಚಿನ ಪೂಜಾ ಮಂಟಪಗಳನ್ನು ನಿರ್ಮಿಸಲಾಗುತ್ತಿದೆ ಎಂದು ವರದಿಯಾಗಿತ್ತು.

    ಈ ಹಿಂದೆ ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ದುರ್ಗಾ ಪೂಜೆ-ಸಂಬಂಧಿತ ಚಟುವಟಿಕೆಗಳನ್ನು ಆಜಾನ್‍ಗೆ ಐದು ನಿಮಿಷಗಳ ಮೊದಲು ಮತ್ತು ನಮಾಜ್ ಸಮಯದಲ್ಲಿ ಸ್ಥಗಿತಗೊಳಿಸುವಂತೆ ಸೂಚಿಸಿತ್ತು. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ – ತುಪ್ಪ ಪೂರೈಸುತ್ತಿದ್ದ ಎಆರ್ ಡೈರಿಗೆ ನೋಟಿಸ್

  • ದುರ್ಗಾ ಪೂಜೆ ವೇಳೆ ಪೆಂಡಾಲ್‍ಗೆ ಬೆಂಕಿ – ಮಕ್ಕಳು ಸೇರಿದಂತೆ ಐವರು ಸಾವು, 66 ಮಂದಿಗೆ ಗಾಯ

    ದುರ್ಗಾ ಪೂಜೆ ವೇಳೆ ಪೆಂಡಾಲ್‍ಗೆ ಬೆಂಕಿ – ಮಕ್ಕಳು ಸೇರಿದಂತೆ ಐವರು ಸಾವು, 66 ಮಂದಿಗೆ ಗಾಯ

    ಲಕ್ನೋ: ದುರ್ಗಾ ಪೂಜೆಗೆ ಹಾಕಿದ್ದ ಪೆಂಡಾಲ್‍ಗೆ (Durga Puja Pandal) ಬೆಂಕಿ ಹೊತ್ತುಕೊಂಡು ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದು, 66 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಭದೋಹಿಯಲ್ಲಿ (Bhadohi) ನಡೆದಿದೆ.

    ಈ ಕುರಿತಂತೆ ಪ್ರತಿಕ್ರಿಯಿಸಿದ ಮ್ಯಾಜಿಸ್ಟ್ರೇಟ್ ಗೌರಂಗ್ ರಾಠಿ ಅವರು, ಔರೈ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗಾಪೂಜಾ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಒಟ್ಟು 66 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಐಸಿಯುನಲ್ಲಿ ಮುಲಾಯಂ ಸಿಂಗ್ – ಅಖಿಲೇಶ್‍ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

    ಇದೀಗ ಘಟನಾ ಸ್ಥಳಕ್ಕೆ ಡಿಎಂ ಮತ್ತು ಜಿಲ್ಲೆಯ ಇತರ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕೆಲವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ 33 ಜನರನ್ನು ಸಮೀಪದ ವಾರಣಾಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಇದು ನಾಗರಿಕ ಸಮಾಜವೇ ತಲೆ ತಗ್ಗಿಸುವ ಸುದ್ದಿ – ಅಪ್ಪನ ಸಾಲ ತೀರಿಸಲು ಮಗನಿಂದ ಬೆತ್ತಲೆ ಪೂಜೆ

    ರಾತ್ರಿ 9.30ರ ಸುಮಾರಿಗೆ ಆರತಿ ಮಾಡುವಾಗ ಈ ಘಟನೆ ನಡೆದಿದೆ. ಘಟನೆ ವೇಳೆ ಸುಮಾರು 300 ಮಂದಿ ಪೆಂಡಾಲ್ ಕೆಳಗಿದ್ದರು. ಮೇಲ್ನೋಟಕ್ಕೆ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ಬೆಂಕಿ ಅವಘಡಕ್ಕೆ ಕಾರಣ ಎಂದು ಕಾಣಿಸುತ್ತದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಿಂದೂ ಕುಟುಂಬಕ್ಕೋಸ್ಕರ ಏರಿಯಾದಲ್ಲಿ ಮುಸ್ಲಿಮರಿಂದ ದುರ್ಗಾ ಪೂಜೆ ಆಯೋಜನೆ

    ಹಿಂದೂ ಕುಟುಂಬಕ್ಕೋಸ್ಕರ ಏರಿಯಾದಲ್ಲಿ ಮುಸ್ಲಿಮರಿಂದ ದುರ್ಗಾ ಪೂಜೆ ಆಯೋಜನೆ

    ಕೋಲ್ಕತ್ತಾ: ಮುಸ್ಲಿಂ ಸಮುದಾಯದ ಜನರನ್ನೇ ಹೊಂದಿರುವ ಕೋಲ್ಕತ್ತಾದ (Kolkata) ಕ್ಲಬ್ ಅಲಿಮುದ್ದೀನ್ ಸ್ಟ್ರೀಟ್‍ನ 13/A ಷರೀಫ್ ಲೇನ್‍ನಲ್ಲಿ ವಾಸಿಸುವ ಒಂದೇ ಒಂದು ಹಿಂದೂ ಕುಟುಂಬದ (Hindu family) ಸಂತೋಷಕ್ಕಾಗಿ ಅಲ್ಲಿದ್ದ ಮುಸ್ಲಿಂ ಸಮುದಾಯದ (Muslim community) ಎಲ್ಲಾ ಸದಸ್ಯರು ದುರ್ಗಾ ಪೂಜೆಯನ್ನು (Durga Puja) ಆಯೋಜಿಸಿದೆ.

    16 ವರ್ಷಗಳ ಹಿಂದೆ ಕಾರಣಾಂತರಗಳಿಂದ ಹಲವಾರು ಹಿಂದೂ ಕುಟುಂಬಗಳು ಏರಿಯಾ ಬಿಟ್ಟು ಹೋದ ಬಳಿಕ ಈ ಪ್ರದೇಶದಲ್ಲಿ ದುರ್ಗಾ ಪೂಜೆ ಆಚರಣೆಗಳು ನಿಂತುಹೋಗಿದ್ದವು. ಆದರೆ ಕಳೆದ ವರ್ಷ ಮುಸ್ಲಿಂ ಸಮುದಾಯದ ಯುವಕರು ಇಲ್ಲಿ ವಾಸಿಸುವ ಹಿಂದೂ ಕುಟುಂಬಕ್ಕೆ ಈ ವರ್ಷ ದಶಕಗಳ ಹಿಂದೆ ನಡೆಸುತ್ತಿದ್ದ ದುರ್ಗಾಪೂಜೆ ಆಚರಣೆಯನ್ನು ಪುನಃ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

    ಸಯಂತ ಸೇನ್ ಅವರ ಕುಟುಂಬವು ಈ ಪ್ರದೇಶದಲ್ಲಿ ವಾಸಿಸುವ ಏಕೈಕ ಹಿಂದೂ ಬಂಗಾಳಿ ಕುಟುಂಬವಾಗಿದೆ ಮತ್ತು ಅವರ ತಂದೆಯು ದುರ್ಗಾ ಪೂಜೆಯ ಮೊದಲ ಕೆಲವು ಸಂಘಟಕರಲ್ಲಿ ಒಬ್ಬರು. ಇದನ್ನೂ ಓದಿ: ಖ್ಯಾತ ನಟಿ ಆಶಾ ಪರೇಖ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಯುವಕನೊಬ್ಬ, ತಮ್ಮ ಕಾಲೋನಿಯಲ್ಲಿ ದುರ್ಗಾಪೂಜೆ ಆಚರಣೆಯನ್ನು ಪುನಃ ಮಾಡುತ್ತಿರುವುದು ಸಂತೋಷವಾಗುತ್ತಿದೆ. ದುರ್ಗಾ ಪೂಜೆ ಸ್ಥಗಿತಗೊಂಡಾಗ ನನಗೆ ಮೂರರಿಂದ ನಾಲ್ಕು ವರ್ಷ. ಇಲ್ಲಿ ದುರ್ಗಾ ಪೂಜೆಯ ಆಚರಣೆಗಳು ನಡೆಯುತ್ತಿದ್ದವು ಎಂದು ನನ್ನ ತಂದೆ ಹೇಳುತ್ತಿದ್ದನ್ನು ಕೇಳಿದ್ದೆ. ಆದರೆ ಹಿಂದೂಗಳು ಏರಿಯಾ ಬಿಟ್ಟು ಹೋದ ಬಳಿಕ ದುರ್ಗಾ ಪೂಜೆ ನಿಂತುಹೋಗಿತ್ತು. ಇದೀಗ ಮುಸ್ಲಿಮರು ಈ ಏರಿಯಾದಲ್ಲಿ ಮತ್ತೆ ದುರ್ಗಾ ಪೂಜೆಯನ್ನು ಆಯೋಜಿಸಿದ್ದಾರೆ ಎಂದು ತಿಳಿಸಿದ್ದಾನೆ. ಇದನ್ನೂ ಓದಿ: ಹಾಸ್ಟೆಲ್ ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ರೆಕಾರ್ಡ್ ಮಾಡಿದ್ದವ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

  • ಕುಣಿದು ಕುಪ್ಪಳಿಸಿ ದುರ್ಗಾ ಪೂಜೆ ನೆರವೇರಿಸಿದ ಸಂಸದೆ ನುಸ್ರತ್ ಜಹಾನ್

    ಕುಣಿದು ಕುಪ್ಪಳಿಸಿ ದುರ್ಗಾ ಪೂಜೆ ನೆರವೇರಿಸಿದ ಸಂಸದೆ ನುಸ್ರತ್ ಜಹಾನ್

    ಕೋಲ್ಕತ್ತಾ: ನಟಿ, ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ನುಸ್ರತ್ ಜಹಾನ್ ಅವರು ಸಾಂಸ್ಕೃತಿಕ ಉಡುಗೆ, ಸೀರೆ ತೊಟ್ಟು ಡ್ಯಾನ್ಸ್ ಮಾಡಿ ದುರ್ಗಾ ಪೂಜೆಯಲ್ಲಿ ಪಾಲ್ಗೊಳ್ಳುವ ಮೂಲಕ ಗಮನಸೆಳೆದಿದ್ದಾರೆ.

    ಟಿಎಂಸಿ ನಾಯಕಿ ಕೆಂಪು, ಬಿಳಿ ಬಣ್ಣದ ಸೀರೆ, ಕುಂಕುಮ ಹಾಗೂ ಸಾಂಸ್ಕೃತಿಕ ಉಡುಗೆ ಧರಿಸಿ ಪೂಜೆಗೆ ಆಗಮಿಸಿದ ನುಸ್ರತ್ ಡ್ರಮ್ ಬಾರಿಸಿ, ಇತರ ಮಹಿಳೆಯರೊಂದಿಗೆ ಕುಣಿದು ಕುಪ್ಪಳಿಸಿ ದುರ್ಗಾ ಪೂಜೆ ನೆರವೇರಿಸಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ. ಅಲ್ಲದೆ ಕುಣಿಯುವ ಭರದಲ್ಲಿ ಕೊರೊನಾ ನಿಯಮಗಳನ್ನು ಸಹ ಬ್ರೇಕ್ ಮಾಡಿಲ್ಲ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಇತರ ಮಹಿಳೆಯರೊಂದಿಗೆ ಡ್ಯಾನ್ಸ್ ಮಾಡಿದ್ದಾರೆ.

    ಈ ಹಿಂದೆ ನುಸ್ರತ್ ಅವರು ದುರ್ಗೆಯ ರೀತಿ ವಸ್ತ್ರಾಭರಣ ಧರಿಸಿ ವಿಡಿಯೋ ಹಾಗೂ ಫೋಟೋ ಶೂಟ್ ಮಾಡಿಸಿದ್ದರು. ಇವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ಸಾಕಷ್ಟು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದರೆ ಹಲವರು ಅಸಭ್ಯವಾಗಿ ಕಮೆಂಟ್ ಮಾಡಿ, ಕೊಲೆ ಬೆದರಿಕೆಯನ್ನು ಸಹ ಹಾಕಿದ್ದರು.

    ಇದೇ ಮೊದಲಲ್ಲ, ಈ ಹಿಂದೆ ಸಹ ಹಲವು ಬಾರಿ ನುಸ್ರತ್ ಅವರಿಗೆ ಬೆದರಿಕೆ ಕರೆಗಳು ಬಂದಿವೆ. ಕಳೆದ ವರ್ಷ ಹಿಂದೂ ಯುವಕನನ್ನು ವಿವಾಹವಾಗಿದ್ದಕ್ಕೆ ಹಾಗೂ ಸಿಂಧೂರ ಧರಿಸಿದ್ದಕ್ಕೆ ಅಲ್ಲದೆ ರಥಯಾತ್ರೆಯಲ್ಲಿ ಭಾಗವಹಿಸಿದ್ದಕ್ಕೆ ಹಲವು ಜನ ಕೊಲೆ ಬೆದರಿಕೆ ಹಾಕಿದ್ದರು. ಇದಾವುದಕ್ಕೂ ನುಸ್ರತ್ ತಲೆ ಕೆಡಿಸಿಕೊಂಡಿಲ್ಲ. ತಮಗಿಷ್ಟವಾದ ದೇವರನ್ನು ಪೂಜಿಸುತ್ತಾರೆ. ಅಲ್ಲದೆ ಎಲ್ಲ ಹಬ್ಬಗಳನ್ನು ಆಚರಿಸುತ್ತಾರೆ.

    ವಿವಾದಗಳ ಕುರಿತು ಈ ಹಿಂದೆ ಪ್ರತಿಕ್ರಿಯಿಸಿದ್ದ ನುಸ್ರತ್, ನಾನು ದೇವರ ವಿಶೇಷ ಮಗಳು, ಎಲ್ಲ ಹಬ್ಬಗಳನ್ನೂ ಆಚರಿಸುತ್ತೇನೆ. ಎಲ್ಲದಕ್ಕಿಂತಲೂ ಮಿಗಿಲಾಗಿ ಮಾನವೀಯತೆ ಹಾಗೂ ಪ್ರೀತಿಯನ್ನು ಗೌರವಿಸುತ್ತೇನೆ ಎಂದು ತಿಳಿಸಿದ್ದರು.

  • ದುರ್ಗಾ ಪೂಜೆ ಮಾಡಿದಕ್ಕೆ ಕಿಡಿಕಾರಿದ ಮೌಲ್ವಿಗಳಿಗೆ ನುಸ್ರತ್ ತಿರುಗೇಟು

    ದುರ್ಗಾ ಪೂಜೆ ಮಾಡಿದಕ್ಕೆ ಕಿಡಿಕಾರಿದ ಮೌಲ್ವಿಗಳಿಗೆ ನುಸ್ರತ್ ತಿರುಗೇಟು

    ಕೋಲ್ಕತ್ತಾ: ದುರ್ಗಾ ಪೂಜೆ ಮಾಡಿದ್ದಕ್ಕೆ ತೃಣಮೂಲ ಕಾಂಗ್ರೆಸ್ ಸಂಸದೆ, ನಟಿ ನುಸ್ರತ್ ಜಹಾನ್ ವಿರುದ್ಧ ಮತ್ತೊಮ್ಮೆ ಇಸ್ಲಾಂ ಧಾರ್ಮಿಕ ಗುರುಗಳು ಕಿಡಿಕಾರಿದ್ದಾರೆ. ಆದರೆ ನುಸ್ರತ್ ಅವರು ತಮ್ಮ ನಡೆಯನ್ನು ಸಮರ್ಥಿಸಿಕೊಂಡು ಮೌಲ್ವಿಗಳಿಗೆ ಸಖತ್ ತಿರುಗೇಟು ಕೊಟ್ಟಿದ್ದಾರೆ.

    ಕೋಲ್ಕತ್ತಾದಲ್ಲಿ ನಡೆದ ದುರ್ಗಾ ಪೂಜೆ ಪತಿ ಜೊತೆಗೂಡಿ ಪೂಜೆ ಸಲ್ಲಿಸಿದ್ದರು. ಈ ರೀತಿ ಕಾಣಿಸಿಕೊಂಡು ಇಸ್ಲಾಂ ಧರ್ಮವನ್ನು ಅವಮಾನಿಸುವ ಬದಲು ಹೆಸರನ್ನು ಬದಲಾಯಿಸಿಕೊಳ್ಳಿ ಎಂದು ಮೌಲ್ವಿ ಮುಫ್ತಿ ಅಸಾದ್ ಕಾಸ್ಮಿ ಟೀಕಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನುಸ್ರತ್ ಅವರು, ಎಲ್ಲ ಧರ್ಮದ ಸೌಹಾರ್ದತೆ ಸಾರಲು ನನ್ನದೇ ಆದ ದಾರಿಯಲ್ಲಿ ನಾನು ಹೋಗುತ್ತಿದ್ದೇನೆ. ನಾನು ಮಾಡುತ್ತಿರುವ ಸರಿಯೆಂದು ನನಗೆ ಅನಿಸುತ್ತಿದೆ. ನಾವು ಎಲ್ಲಾ ಧರ್ಮದ ಹಬ್ಬಗಳನ್ನು ಆಚರಿಸಬೇಕು ಎಂದು ತಿರುಗೇಟು ನೀಡಿದ್ದಾರೆ.

    ಅವರು ನನಗೆ ಹೆಸರು ಇಟ್ಟಿಲ್ಲ, ನಿನ್ನ ಹೆಸರನ್ನು ಬದಲಿಸಿಕೊ ಎಂದು ಹೇಳುವ ಹಕ್ಕು ಅವರಿಗಿಲ್ಲ ಎಂದು ಮಾತಿನ ಚಾಟಿ ಬೀಸಿದ್ದಾರೆ. ಹಿಂದೂ, ಮುಸ್ಲಿಂ ಎಂಬ ಧರ್ಮದ ಬೇಧ ಬೇಡ. ಪೂಜೆಯನ್ನು ಖುಷಿಯಿಂದ ಆಚರಿಸಿ. ಇದಕ್ಕೆ ರಾಜಕೀಯ ಬಣ್ಣ ಹಚ್ಚಬೇಡಿ, ಇದು ಹಬ್ಬವನ್ನು ಸಂಭ್ರಮಿಸುವ ಸಮಯ ಎಂದು ಹೇಳಿದ್ದಾರೆ.

    ಅಲ್ಲಾಹು ಹೊರತುಪಡಿಸಿ ಇತರೆ ದೇವರುಗಳನ್ನು ಪೂಜಿಸಲು ಇಸ್ಲಾಂ ಧರ್ಮದಲ್ಲಿ ಅನುಮತಿ ನೀಡಿಲ್ಲ. ಆದರೆ, ನುಸ್ರತ್ ದುರ್ಗಾ ಪೂಜೆಯನ್ನು ನೆರವೇರಿಸಿದ್ದಾರೆ. ಇದು ಸಂಪೂರ್ಣವಾಗಿ ಇಸ್ಲಾಂ ವಿರೋಧಿಯಾಗಿದೆ. ಅವರು ಇಸ್ಲಾಂ ಅನ್ನು ಅನುಸರಿಸುತ್ತಿಲ್ಲ. ಇದಲ್ಲದೆ ಮುಸ್ಲಿಮೇತರ ವ್ಯಕ್ತಿಯನ್ನು ಮದುವೆಯಾಗಿದ್ದಾರೆ. ಹೀಗಾಗಿ ಅವರು ತಮ್ಮ ಹೆಸರನ್ನು ಬದಲಾಯಿಸಿಕೊಳ್ಳಲಿ, ಅದನ್ನು ಬಿಟ್ಟಿ ಇಸ್ಲಾಂಗೆ ಅಪಮಾನ ಮಾಡುವುದು ಸರಿಯೇ ಎಂದು ಮುಫ್ತಿ ಅಸಾದ್ ಕಾಸ್ಮಿ ಪ್ರಶ್ನಿಸಿದ್ದರು.

    ಎಲ್ಲರನ್ನೂ ಒಳಗೊಂಡ ಭಾರತದ ಪ್ರತಿನಿಧಿ ಎಂದು ಈ ಹಿಂದೆ ಸಂಸದೆ ನುಸ್ರತ್ ಜಹಾನ್ ಹೇಳಿದ್ದರು. ಉದ್ಯಮಿ ನಿಖಿಲ್ ಜೈನ್ ಅವರನ್ನು ನುಸ್ರತ್ ಅವರು ಮದುವೆಯಾದ ಬಳಿಕ ಹಿಂದೂ ಧಾರ್ಮಿಕ ಆಚರಣೆ, ಪೂಜೆ ಪುನಸ್ಕಾರಗಳಲ್ಲಿ ಅವರು ತೊಡಗಿಕೊಂಡಿದ್ದರು. ಆದ್ದರಿಂದ ಅವರ ವಿರುದ್ಧ ಭಾರಿ ಟೀಕೆಗಳು ಕೇಳಿಬಂದಿತ್ತು.

    ಸಂಸದರಾದ ಬಳಿಕ ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಹಣೆಗೆ ಸಿಂಧೂರ ಇಟ್ಟುಕೊಂಡು ಬಂದಿದ್ದಕ್ಕೆ ಕೂಡ ನುಸ್ರತ್ ವಿರುದ್ಧ ಮೌಲ್ವಿಗಳು ಕಿಡಿಕಾರಿದ್ದರು. ಈಗ ಸಾಂಪ್ರದಾಯಿಕ ಸೀರೆಯನ್ನುಟ್ಟು, ಹಣೆಗೆ ಸಿಂಧೂರ ಹಾಗೂ ಮಂಗಳಸೂತ್ರವನ್ನು ಹಾಕಿಕೊಂಡು ನುಸ್ರತ್ ಅವರು ದುರ್ಗಾ ಪೂಜೆ ಮಾಡಿದ್ದೂ ಕೂಡ ಮೌಲ್ವಿಗಳ ಕೆಂಗಣ್ಣಿಗೆ ಕಾರಣವಾಗಿದೆ.

  • ದುರ್ಗಾ ಪೂಜೆ ಪೆಂಡಾಲ್‍ನಲ್ಲಿ ಅಜಾನ್ – ಆಕ್ರೋಶಕ್ಕೆ ಕಾರಣವಾದ ಪೂಜಾ ಸಮಿತಿ ನಡೆ

    ದುರ್ಗಾ ಪೂಜೆ ಪೆಂಡಾಲ್‍ನಲ್ಲಿ ಅಜಾನ್ – ಆಕ್ರೋಶಕ್ಕೆ ಕಾರಣವಾದ ಪೂಜಾ ಸಮಿತಿ ನಡೆ

    ಕೋಲ್ಕತ್ತಾ: ದುರ್ಗಾ ಪೂಜೆಯ ಪೆಂಡಾಲ್‍ನಲ್ಲಿ ಅಜಾನ್ ನುಡಿಸಿರುವುದು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.

    ನವರಾತ್ರಿಯ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅಜಾನ್(ಇಸ್ಲಾಮಿಕ್ ಕರೆ) ನುಡಿಸಿದ್ದಕ್ಕಾಗಿ ಕೋಲ್ಕತ್ತಾದ ಬೆಲಿಯಾಘಾಟಾ 33 ಪಲ್ಲಿ ದುರ್ಗಾ ಪೂಜಾ ಪೆಂಡಾಲ್ ಸಮಿತಿಯ ವಿರುದ್ಧ ದೂರು ದಾಖಲಿಸಲಾಗಿದೆ.

    ಸ್ಥಳೀಯ ವಕೀಲ ಸಾಂತನು ಸಿಂಘಾ ಅವರು ದೂರು ಸಲ್ಲಿಸಿದ್ದು, ಪಶ್ಚಿಮ ಬಂಗಾಳದಲ್ಲಿ ಶಾಂತಿಗೆ ಭಂಗ ತರುವ ಕೆಲಸವನ್ನು ಮಾಡುತ್ತಿದ್ದಾರೆ. ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿ 10 ಜನರ ವಿರುದ್ಧ ದೂರು ದಾಖಲಿಸಿದ್ದಾರೆ.

    ಬೆಲಿಯಾಘಟ ದುರ್ಗಾ ಪೂಜಾ ಪೆಂಡಲ್‍ನಲ್ಲಿ ಅಜಾನ್ ನುಡಿಸುವ ವಿಡಿಯೋವನ್ನು ವಿಶ್ವ ಹಿಂದೂ ಪರಿಷತ್(ವಿಎಚ್‍ಪಿ) ಸದಸ್ಯರು ನನಗೆ ರವಾನಿಸಿದ್ದಾರೆ ಎಂದು ಸಿಂಘಾ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಆದರೆ ಪೂಜಾ ಸಮಿತಿಯು ಈ ಕುರಿತು ಸ್ಪಷ್ಟಪಡಿಸಿದ್ದು, ಜಾತ್ಯಾತೀತತೆಯನ್ನು ಉತ್ತೇಜಿಸುವುದು ನಮ್ಮ ಉದ್ದೇಶವಾಗಿತ್ತು ಎಂದು ಹೇಳಿಕೊಂಡಿದೆ.

    ಬೆಲಿಯಾಘಾಟಾ 33 ಪ್ಯಾಲಿ ಕ್ಲಬ್‍ನ ಕಾರ್ಯದರ್ಶಿ ಈ ಕುರಿತು ತಮ್ಮ ಅಭಿಪ್ರಾಯ ತಿಳಿಸಿದ್ದು, ನಾವು ಒಟ್ಟಿಗೆ ಇದ್ದೇವೆ, ಒಬ್ಬಂಟಿಯಾಗಿಯಲ್ಲ ಹೀಗಾಗಿ ಆಚರಣೆಯ ಸಮಯದಲ್ಲಿ ಅಜಾನ್ ನುಡಿಸಿದ್ದೇವೆ. ಅಜಾನ್ ಮಾತ್ರವಲ್ಲ ನಾವು ಚರ್ಚ್, ದೇವಾಲಯ ಮತ್ತು ಮಸೀದಿಯ ಮಾದರಿಗಳನ್ನೂ ಬಳಸಿದ್ದೇವೆ ಹಾಗೂ ಅವುಗಳ ಚಿಹ್ನೆಯನ್ನೂ ಬಳಸಿದ್ದೇವೆ. ಮಾನವೀಯತೆಯು ಎಲ್ಲ ಧರ್ಮಗಳಿಗಿಂತ ಉನ್ನತವಾದದ್ದು ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ. ಅಲ್ಲದೆ ಈ ವಿಷಯವನ್ನು ಅನಗತ್ಯವಾಗಿ ರಾಜಕೀಯಗೊಳಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಪೂಜಾ ಸಮಿತಿಯ ಅಧ್ಯಕ್ಷರು ಈ ಕುರಿತು ವಿವರಿಸಿ, ನಾವೆಲ್ಲರೂ ಒಂದೇ ಎಂದು ನಾವು ನಂಬಿದ್ದೇವೆ. ಹುಟ್ಟಿದಾಗ ಯಾವುದೇ ಪ್ರತ್ಯೇಕತೆ ಇಲ್ಲ, ರಕ್ತದ ಬಣ್ಣದಲ್ಲಿ ವ್ಯತ್ಯಾಸವಿಲ್ಲ, ಹೀಗಿರುವಾಗ ಏಕೆ ಭೇದ ಭಾವ, ಎಲ್ಲ ಧರ್ಮಗಳು ನಮ್ಮ ಪ್ರಬಲ ದೇಶದ ಭಾಗವಾಗಿವೆ. ಇದು ಕೋಮು ಸೌಹಾರ್ದತೆಯ ಪ್ರತಿಬಿಂಬವಾಗಿದೆ, ನಾವು ಒಗ್ಗಟ್ಟಿನ ಪರವಾಗಿ ನಿಲ್ಲುತ್ತೇವೆ ಎಂದು ತಿಳಿಸಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳು ನಡೆಯುತ್ತಿದ್ದು, ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಕೆಲವರು ‘ಮಂದಿರ್ ಕಟ್ಟುತ್ತೇವೆ’ ಎಂದು ಕೂಗುತ್ತಿದ್ದಾರೆ. ಆದರೆ ಈ ಪೆಂಡಾಲ್‍ಗೆ ಭೇಟಿ ನೀಡಿದ ಕೆಲವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    ಇದೀಗ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಬಿಜೆಪಿ ನಾಯಕ ಮುಕುಲ್ ರಾಯ್ ಈ ಕುರಿತು ಪ್ರತಿಕ್ರಿಯಿಸಿ, ಇದು ಒಂದು ಆಚರಣೆ, ನಾವು ನಮ್ಮ ಧರ್ಮವನ್ನು ನಂಬುತ್ತೇವೆ. ನಮ್ಮ ಧರ್ಮಕ್ಕೆ ಹಾನಿ ಮಾಡುವುದನ್ನು ನಾವು ಬಯಸುವುದಿಲ್ಲ ಎಂದು ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

    ಹಿಂದೂ ಜಾಗರಣ್ ಮಂಚ್ ದಕ್ಷಿಣ ಬಂಗಾಳದ ಪ್ರಚಾರಕ್ ಪ್ರಮುಖ್ ವಿವೇಕ್ ಸಿಂಗ್ ಈ ಕುರಿತು ಪ್ರತಿಕ್ರಿಯಿಸಿ, ಮಸೀದಿಗಳಲ್ಲಿ ಅಥವಾ ಈದ್ ಸಮಯದಲ್ಲಿ ದುರ್ಗಾ ಸಪ್ತಸ್ತ್ರುತಿ ಪಾಥ್ ಅಥವಾ ಚಂಡಿ ಪಾಥ್ ಹಾಡುವುದನ್ನು ಕೇಳಿದ್ದೀರಾ, ಕ್ರಿಸ್‍ಮಸ್ ಸಮಯದಲ್ಲಿ ಚರ್ಚ್ ನಲ್ಲಿ ಹನುಮಾನ್ ಚಾಲೀಸಾ ಹಾಡುವುದನ್ನು ನೀವು ಎಂದಾದರೂ ಕೇಳಿದ್ದೀರಾ, ಜಾತ್ಯಾತೀತತೆಯ ಜವಾಬ್ದಾರಿ ಕೇವಲ ಹಿಂದೂಗಳ ಮೇಲೆ ಮಾತ್ರವಿದೆಯೇ ಎಂದು ಪ್ರಶ್ನಿಸಿದ್ದಾರೆ.

    ಸಂಘಟನೆಯ ವಿರುದ್ಧ ಈಗಾಗಲೇ ಫುಲ್ಬಗನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ಕುರಿತು ಕ್ರಮ ಕೈಗೊಳ್ಳದಿದ್ದಲ್ಲಿ ನಾವು ಕಾನೂನು ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದ್ದಾರೆ.

    ಮುಸ್ಲಿಂ ಧರ್ಮ ಗುರು ಸಾಜಿದ್ ರಶೀದಿ ಈ ಕುರಿತು ಪ್ರತಿಕ್ರಿಯಿಸಿ, ಧಾರ್ಮಿಕ ಕಠಿಣವಾದಿಗಳು ಅಥವಾ ಪ್ರಚಾರ ಪಡೆಯಲು ಕೆಲವರು ಈ ರೀತಿ ಮಾಡುತ್ತಿದ್ದಾರೆ. ಇವರಿಗೆ ಭಾರತದ ಸಂಸ್ಕೃತಿ, ಮತ್ತು ಮೌಲ್ಯ ತಿಳಿದಿಲ್ಲ. ನಾವು ಬೆಳಗ್ಗೆ ಎದ್ದಾಗ ಅಜಾನ್ ಹೇಳುತ್ತೇವೆ. ಸಂಜೆ ಪ್ರಾರ್ಥನೆ ಕೇಳುತ್ತೇವೆ. ಧರ್ಮವು ಒಂದು ಕಡೆಯಾದರೆ ಸಂಸ್ಕೃತಿ ಇನ್ನೊಂದು ಕಡೆ ಇದೆ. ಈ ಸಂಸ್ಕೃತಿಯಿಂದಾಗಿ ಭಾರತ ಎಲ್ಲರಿಗೂ ತಿಳಿದಿದೆ. ಇವರು ದ್ವೇಷವನ್ನು ಹರಡಲು ಹಾಗೂ ದೇಶವನ್ನು ವಿಭಜಿಸಲು ಕೆಲವರು ಬಯಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.