Tag: ದುಲ್ಖರ್ ಸಲ್ಮಾನ್

  • ಮಲಯಾಳಂ ನಟ ದುಲ್ಖರ್ ಸಲ್ಮಾನ್‍ಗೆ ಕೊರೊನಾ ಪಾಸಿಟಿವ್

    ಮಲಯಾಳಂ ನಟ ದುಲ್ಖರ್ ಸಲ್ಮಾನ್‍ಗೆ ಕೊರೊನಾ ಪಾಸಿಟಿವ್

    ತಿರುವನಂತಪುರಂ: ಮಾಲಿವುಡ್ ನಟ ದುಲ್ಖರ್ ಸಲ್ಮಾನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

    Dulquer Salmaan

    ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟಿ ಅವರಿಗೆ ಕೊರೊನಾ ಪಾಸಿಟಿವ್ ಬಂದ ಕೆಲವು ದಿನಗಳಲ್ಲಿ ಅವರ ಮಗ ದುಲ್ಖರ್ ಸಲ್ಮಾನ್ ಅವರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಸದ್ಯ ದುಲ್ಖರ್ ಸಲ್ಮಾನ್ ಅವರು ತಮಗೆ ಕೊರೊನಾ ಸೋಂಕು ದೃಢಪಟ್ಟಿರುವ ಬಗ್ಗೆ ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ ಮತ್ತು ಮನೆಯಲ್ಲಿಯೇ ಐಸೋಲೇಶನ್‍ನಲ್ಲಿ ಇರುವುದಾಗಿ ತಿಳಿಸಿದ್ದಾರೆ.

    mammutty

    ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಾನು ಮನೆಯಲ್ಲಿಯೇ ಕ್ವಾರಂಟೈನ್‍ನಲ್ಲಿದ್ದೇನೆ ಮತ್ತು ಜ್ವರ, ಸೌಮ್ಯ ರೋಗ ಗುಣಲಕ್ಷಣಗಳನ್ನು ಹೊಂದಿದ್ದೇನೆ. ಆದರೆ ಚೆನ್ನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಚಿತ್ರೀಕರಣದ ಸಮಯದಲ್ಲಿ ನನ್ನೊಂದಿಗೆ ಸಂಪರ್ಕ ಹೊಂದಿದ್ದ ಎಲ್ಲರೂ ದಯವಿಟ್ಟು ಕ್ವರಂಟೈನ್‍ನಲ್ಲಿರಿ ಮತ್ತು ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಶಾಲೆಯ ಮೇಲ್ಚಾವಣಿ ಕುಸಿತ – 10 ಮಂದಿ ಕಾರ್ಮಿಕರಿಗೆ ಗಾಯ

    70 ವರ್ಷ ವಯಸ್ಸಿನ ಮಮ್ಮುಟಿ ಅವರಿಗೆ ತಮ್ಮ ಮುಂದಿನ ಸಿನಿಮಾ ಸಿಬಿಐ 5 ಶೂಟಿಂಗ್ ವೇಳೆ ಕೊರೊನಾ ಪಾಸಿಟಿವ್ ಬಂದಿದೆ. ಈ ಕುರಿತಂತೆ ಅವರು ಸಹ ತಮ್ಮ ಟ್ವಿಟ್ಟರ್‌ನಲ್ಲಿ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ನನಗೆ ಕೊರೊನಾ ದೃಢಪಟ್ಟಿದೆ. ಸ್ವಲ್ಪ ಜ್ವರದ ಇದೆ. ಆದರೂ ಚೆನ್ನಾಗಿದ್ದೇನೆ. ವೈದ್ಯರ ಸಲಹೆ ಮೇರೆಗೆ ನಾನು ಮನೆಯಲ್ಲಿಯೇ ಕ್ವಾರಂಟೈನ್‍ಗೊಂಡಿದ್ದೇನೆ. ನೀವೆಲ್ಲರೂ ಸುರಕ್ಷಿತವಾಗಿರಬೇಕೆಂದು ನಾನು ಬಯಸುತ್ತೇನೆ. ಎಲ್ಲಾ ಸಮಯದಲ್ಲೂ ಮಾಸ್ಕ್ ಧರಿಸಿ ಮತ್ತು ನಿಮ್ಮ ಮೇಲೆ ಕಾಳಜಿ ವಹಿಸಿ ಎಂದು ಬರೆದುಕೊಂಡಿದ್ದಾರೆ.

    ಗುರುವಾರ ಭಾರತದಲ್ಲಿ 3,17,532 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದೆ. ಒಟ್ಟು ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 3,82,18,773 ಆಗಿದ್ದು, ಇದರಲ್ಲಿ 9,287 ಓಮಿಕ್ರಾನ್ ರೂಪಾಂತರದ ಪ್ರಕರಣಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದೆ. ಇದನ್ನೂ ಓದಿ: ರೆಮೋ ಡಿಸೋಜಾ ಸೋದರ ಮಾವ ಸಾವು – ಆತ್ಮಹತ್ಯೆ ಶಂಕೆ