Tag: ದೂಧ್ ಸಾಗರ್

  • ರೈಲ್ವೇ ಹಳಿ ಮೇಲೆ ಕುಸಿದ ಮಣ್ಣು – ಗೋವಾ, ಕರ್ನಾಟಕ ರೈಲು ಸಂಚಾರದಲ್ಲಿ ಇನ್ನೆರಡು ದಿನ ವ್ಯತ್ಯಯ

    ರೈಲ್ವೇ ಹಳಿ ಮೇಲೆ ಕುಸಿದ ಮಣ್ಣು – ಗೋವಾ, ಕರ್ನಾಟಕ ರೈಲು ಸಂಚಾರದಲ್ಲಿ ಇನ್ನೆರಡು ದಿನ ವ್ಯತ್ಯಯ

    – 150 ಕ್ಕೂ ಹೆಚ್ಚು ಸಿಬ್ಬಂದಿಯಿಂದ 10 ಜೆಸಿಬಿ ಬಳಸಿ ತೆರವು ಕಾರ್ಯ

    ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ದೂಧ್ ಸಾಗರ್ ಫಾಲ್ಸ್  (Dudhsagar) ಬಳಿ ಬೃಹತ್ ಪ್ರಮಾಣದ ಭೂಕುಸಿತವಾಗಿದೆ. ಇದರಿಂದಾಗಿ ಗೋವಾ ಹಾಗೂ ಕರ್ನಾಟಕ ನಡುವಿನ ರೈಲು ಸಂಚಾರದಲ್ಲಿ ಎರಡು ದಿನಗಳ ಕಾಲ ವ್ಯತ್ಯಯ ಆಗಲಿದೆ. ನೈರುತ್ಯ ರೈಲ್ವೆ (Railway) ವಲಯದ 150 ಕ್ಕೂ ಅಧಿಕ ಸಿಬ್ಬಂದಿಯಿಂದ 10ಕ್ಕೂ ಹೆಚ್ಚು ಜೆಸಿಬಿ ಬಳಸಿ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ.

    ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ನಿರಂತರ ಭೂಕುಸಿತವಾಗುತ್ತಿದೆ. ಇದರಿಂದಾಗಿ ಕಳೆದ ಎರಡು ದಿನಗಳಿಂದ ಗೋವಾ-ಕರ್ನಾಟಕ ಮಾರ್ಗ ಮಧ್ಯೆ ರೈಲ್ವೆ ಸಂಚಾರ ಸ್ಥಗಿತವಾಗಿತ್ತು. ಕಳೆದ 36 ಗಂಟೆಗಳಿಂದ ಕಾರ್ಯಾಚರಣೆ ನಡೆಸಿ ರೈಲ್ವೆ ಹಳಿ ಮೇಲೆ ಬಿದ್ದಿರುವ ಕಲ್ಲು ಹಾಗೂ ಮರಗಳನ್ನು ತೆರವುಗೊಳಿಸಲಾಗುತ್ತಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸರ್ವೆ ಕೇಸ್‌ – ಅಲಹಾಬಾದ್ ಹೈಕೋಟ್‌ನಲ್ಲಿ ಇಂದು ವಿಚಾರಣೆ

    ಕಾರ್ಯಾಚರಣೆ ನಡೆಯುತ್ತಿರುವುದರಿಂದ ದೂಧ್ ಸಾಗರ್ ಬಳಿ ರೈಲ್ವೆ ಸಿಬ್ಬಂದಿ ಹೊರತುಪಡಿಸಿ ಅನ್ಯ ವ್ಯಕ್ತಿಗಳಿಗೆ ಪ್ರವೇಶಕ್ಕೆ ನಿಷೇಧಿಸಲಾಗಿದೆ. ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಠಿಕಾಣಿ ಹೂಡಿದ್ದಾರೆ. ಆದರೆ ಈ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ತೆರವು ಕಾರ್ಯಾಚರಣೆಗೆ ತೊಡಕಾಗಿದೆ. ಇದು ಅಧಿಕಾರಿಗಳಿಗೆ ತಲೆ ನೋವಾಗಿ ಪರಿಣಮಿಸಿದೆ.

    ಕಾರ್ಯಾಚರಣೆ ಇನ್ನೂ ಒಂದು ದಿನ ನಡೆಯಲಿದ್ದು, ಎರಡು ದಿನಗಳು ರೈಲು ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ಇದನ್ನೂ ಓದಿ: ನನ್ನ 3ನೇ ಅವಧಿಯಲ್ಲಿ ಭಾರತ ವಿಶ್ವದ ಟಾಪ್ 3 ಆರ್ಥಿಕತೆಯಲ್ಲಿ ಒಂದಾಗಲಿದೆ: ಮೋದಿ ಭರವಸೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೂಧ್ ಸಾಗರ್ ನೋಡಲು ಬಂದ ಯುವಕರನ್ನು ಬಸ್ಕಿ ಹೊಡೆಸಿ ಕಳುಹಿಸಿದ್ರು!

    ದೂಧ್ ಸಾಗರ್ ನೋಡಲು ಬಂದ ಯುವಕರನ್ನು ಬಸ್ಕಿ ಹೊಡೆಸಿ ಕಳುಹಿಸಿದ್ರು!

    ಕಾರವಾರ: ಕರ್ನಾಟಕದ ವಿವಿಧ ಭಾಗದಿಂದ ಗೋವಾ ಗಡಿಯಲ್ಲಿರುವ ದೂಧ್ ಸಾಗರ್ ಜಲಪಾತಕ್ಕೆ (Dudhsagar Falls) ಪ್ರವಾಸಕ್ಕೆ ತೆರಳಿದ್ದ ನೂರಾರು ಯುವಕರಿಗೆ ಗೋವಾ ಪೊಲೀಸರು ಹಾಗೂ ರೈಲ್ವೆ  ಪೊಲೀಸರು ತಡೆದು ನಿಲ್ಲಿಸಿ ಬಸ್ಕಿ ಹೊಡೆಸಿದ ಘಟನೆ ಇಂದು ನಡೆದಿದೆ.

    ಹೆಚ್ಚಿನ ಮಳೆಯಾಗುತ್ತಿದ್ದರಿಂದ ದೂಧ್ ಸಾಗರ್ ಜಲಪಾತ ವೀಕ್ಷಣೆ ಹಾಗೂ ಟ್ರೆಕ್ಕಿಂಗ್ (Trekking) ಮಾಡಲು ಬೆಳಗಾವಿ, ಬಾಗಲಕೋಟೆ ಹಾಗೂ ರಾಜ್ಯದ ವಿವಿಧೆಡೆಯಿಂದ ನೂರಾರು ಯುವಕರು ತೆರಳಿದ್ದರು. ಗೋವಾ ಬಾರ್ಡರ್ ಮೂಲಕ ರೈಲ್ವೇ ಟ್ರ್ಯಾಕ್ ಮೇಲೆ ನಡೆದುಕೊಂಡು ಸಾಗಿದ್ದ ನೂರಾರು ಯುವಕರ ತಂಡವನ್ನು ಗೋವಾ ಪೊಲೀಸರು ಹಾಗೂ ರೈಲ್ವೆ ಪೊಲೀಸರು ತಡೆದು ನಿಲ್ಲಿಸಿದ್ದಾರೆ.

    ಟ್ರಾಕ್ ಮೇಲೆ ಗುಂಪು ಗುಂಪಾಗಿ ಬಂದಿದ್ದರಿಂದ ಲಾಠಿ ಹಿಡಿದು ತಡೆದು ನಿಲ್ಲಿಸಿದ್ದಲ್ಲದೇ, ಬಸ್ಕಿ ಹೊಡೆಸಿ ಮರಳಿ ಕುಳುಹಿಸಿದ್ದಾರೆ. ಹೆಚ್ಚಿನ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೂಧ್ ಸಾಗರ್‍ಗೆ ತೆರಳದಂತೆ ಇಂದಿನಿಂದ ಗೋವಾ ಸರ್ಕಾರ ಬ್ಯಾನ್ ಮಾಡಿದ್ದು, 50ಕ್ಕೂ ಹೆಚ್ಚು ಪೊಲೀಸರು, ಅರಣ್ಯ ಸಿಬ್ಬಂದಿ ಹಾಗೂ ರೈಲ್ವೇ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜನೆ ಮಾಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]