Tag: ದೆಹಲಿ ಪ್ರವಾಸ

  • CM ಬಸವರಾಜ ಬೊಮ್ಮಾಯಿಗೆ ಮತ್ತೆ ಕೊರೊನಾ ಸೋಂಕು

    CM ಬಸವರಾಜ ಬೊಮ್ಮಾಯಿಗೆ ಮತ್ತೆ ಕೊರೊನಾ ಸೋಂಕು

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ದೆಹಲಿ ಪ್ರವಾಸ ರದ್ದಾಗಿದೆ.

    ಈ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕತ್ತು, ಮರ್ಮಾಂಗ ಹಿಸುಕಿ ಕೊಲೆಗೈದು ದತ್ತುಮಗನ ಶವ ಚೀಲದಲ್ಲಿ ತುಂಬಿ ಕಥೆ ಕಟ್ಟಿದ್ಳು!

    ಆಜಾದಿ ಕಾ ಅಮೃತ ಮಹೋತ್ಸವ ಕುರಿತ ಸಭೆ ಮತ್ತು ನೀತಿ ಆಯೋಗದ ಸಭೆಗಳಲ್ಲಿ ಭಾಗವಹಿಸಬೇಕಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿದ್ದರು. ಇಂದು ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ಹೊರಡಬೇಕಿತ್ತು. ಆಗಸ್ಟ್ 7ರಂದು ದೆಹಲಿಯಿಂದ ಹಿಂದಿರುಗಲು ಕಾರ್ಯಸೂಚಿ ನಿಗದಿಯಾಗಿತ್ತು. ಅಷ್ಟರಲ್ಲೇ ಕೊರೊನಾ ಕಾಣಿಸಿಕೊಂಡಿದ್ದು, ದೆಹಲಿ ಪ್ರವಾಸ ರದ್ದಾಗಿದೆ. ಇದನ್ನೂ ಓದಿ: ಕಾಮನ್‌ವೆಲ್ತ್ ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಸುಧೀರ ಸಾಧನೆ – ಭಾರತಕ್ಕೆ ಚಿನ್ನದ ಹೊಳಪು


    ಕಳೆದ ಜನವರಿ ತಿಂಗಳಿನಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದೀಗ 2ನೇ ಬಾರಿಗೆ ಸೋಂಕಿಗೆ ತುತ್ತಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುಂದಿನ ಅವಧಿವರೆಗೂ ಸಿಎಂ ಆಗಿ ಬಿಎಸ್‍ವೈ ಮುಂದುವರಿಕೆ: ಸವದಿ

    ಮುಂದಿನ ಅವಧಿವರೆಗೂ ಸಿಎಂ ಆಗಿ ಬಿಎಸ್‍ವೈ ಮುಂದುವರಿಕೆ: ಸವದಿ

    ಚಿಕ್ಕೋಡಿ/ಬೆಳಗಾವಿ: ಮುಂದಿನ ಅವಧಿ ವರೆಗೆ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪನವರೇ ಮುಂದುವರಿಯುವ ತೀರ್ಮಾನ ಆಗಿದೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

    ಜಿಲ್ಲೆಯ ಅಥಣಿಯಲ್ಲಿ ಸಿಎಂ ದೆಹಲಿ ಪ್ರವಾಸದ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಎಂಬುದು ಊಹಾಪೋಹ, ಬರಿ ಗಾಳಿಮಾತು ಅಷ್ಟೆ. ಮುಂದಿನ ಅವಧಿವರೆಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುವ ಕುರಿತು ಈಗಾಗಲೇ ನಿರ್ಧಾರವಾಗಿದೆ. ಹೀಗಾಗಿ ಉತ್ತರ ಕರ್ನಾಟಕ ಭಾಗದಿಂದ ಮುಖ್ಯಮಂತ್ರಿ ನೇಮಕಾತಿ ವಿಚಾರದ ಕುರಿತು ಪ್ರಸ್ತಾಪವಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    ರಾಜ್ಯದ ಅಭಿವೃದ್ಧಿ ಹಾಗೂ ಕೇಂದ್ರ ಸರ್ಕಾರದ ಹಣಕಾಸಿನ ಬಿಡುಗಡೆ ಬಗ್ಗೆ ಸಮಾಲೋಚನೆ ನಡೆಸಲು ದೆಹಲಿಗೆ ತೆರಳಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ವಿವಿಧ ಸಚಿವರನ್ನು ಭೇಟಿ ಮಾಡಲಿದ್ದಾರೆ. ಇದು ರಾಜ್ಯದ ಅಭಿವೃದ್ಧಿ ಹಾಗೂ ಹೆಚ್ಚಿನ ಹಣಕಾಸು ಬಿಡುಗಡೆಗೆ ನಡೆಯುವ ಸಾಮನ್ಯ ಪ್ರಕ್ರಿಯೆ. ಅಲ್ಲದೆ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ನಡೆಸಿ, ಒಪ್ಪಿಗೆ ಪಡೆದು ರಾಜ್ಯದ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ತೀರ್ಮಾನ ಮಾಡಲಿದ್ದಾರೆ. ಮುಖ್ಯಮಂತ್ರಿಯವರ ಯಾವುದೇ ತೀರ್ಮಾನಕ್ಕೆ ನಮ್ಮೆಲ್ಲರ ಸಹಮತ ಇದೆ ಎಂದು ತಿಳಿಸಿದರು.

    ಸಚಿವ ರಮೇಶ್ ಜಾರಕಿಹೊಳಿ ಮಹರಾಷ್ಟ್ರದ ಬಿಜೆಪಿ ಮುಖಂಡರ ಭೇಟಿ ವಿಚಾರದ ಕುರಿತು ಮಾತನಾಡಿದ ಅವರು, ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಲು ಭೇಟಿ ಮಾಡಿರಬಹುದು. ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲದ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಇದೇ ವೇಳೆ ಹೇಳಿದರು.