ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Delhi CM Arvind Kejriwal) ಅವರ ಪತ್ನಿ ಸುನಿತಾ ಕೇಜ್ರಿವಾಲ್ (Sunitha Kejriwal) ಅವರನ್ನು ಲೋಕಸಭೆ ಚುನಾವಣಾ (Lok Sabha Election) ಪ್ರಚಾರ ಅಖಾಡಕ್ಕೆ ಇಳಿಸಲು ಆಪ್ (AAP) ನಿರ್ಧರಿಸಿದೆ.
ದೆಹಲಿ ಮದ್ಯ ಹಗರಣ (Delhi Liquor Scam) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ನ್ಯಾಯಾಂಗ ಬಂಧನಲ್ಲಿದ್ದಾರೆ. ಈ ಹಿನ್ನಲೆ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಆಪ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾಳೆಯಿಂದ ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಸುನೀತಾ ಕೇಜ್ರಿವಾಲ್ ಪ್ರಚಾರ ಆರಂಭಿಸುವ ಸಾಧ್ಯತೆ ಇದೆ. ಸುನೀತಾ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿರುವುದು ಇದೇ ಮೊದಲು. ಇದಕ್ಕೂ ಮುನ್ನ ಅವರು ರಾಜಕೀಯವಾಗಿ ಗುರುತಿಸಿಕೊಂಡಿರಲಿಲ್ಲ. ಇದನ್ನೂ ಓದಿ: ಕಾರು ಅಪಫಾತ – ಶಾಸಕ ಎ.ಆರ್ ಕೃಷ್ಣಮೂರ್ತಿ ಅಪಾಯದಿಂದ ಪಾರು
ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಸುನೀತಾ ಕೇಜ್ರಿವಾಲ್ ಅವರು ವೀಡಿಯೊ ಸಂದೇಶಗಳು ಮತ್ತು ಪತ್ರಿಕಾಗೋಷ್ಠಿಗಳ ಮೂಲಕ ಮುನ್ನಲೆಗೆ ಬಂದಿದ್ದಾರೆ. ಕೇಜ್ರಿವಾಲ್ ಬಂಧನ ಖಂಡಿಸಿ ದೆಹಲಿಯಲ್ಲಿ ವಿಪಕ್ಷಗಳು ನಡೆಸಿದ ಸಮಾವೇಶದಲ್ಲಿ ಭಾಗಿಯಾಗಿ ಭಾಷಣ ಮಾಡಿದ್ದರು. ಇತ್ತಿಚೇಗೆ ಛತ್ತಿಸ್‌ಘಡದಲ್ಲಿ ನಡೆದ INDIA ಒಕ್ಕೂಟದ ಸಭೆಯಲ್ಲಿ ಅವರು ಪಕ್ಷವನ್ನು ಪ್ರತಿನಿಧಿಸಿದ್ದರು. ಇದನ್ನೂ ಓದಿ: ಡೇಟಾ ಟ್ರಾಫಿಕ್- ಚೀನಾ ಕಂಪನಿ ಹಿಂದಿಕ್ಕಿದ ರಿಲಯನ್ಸ್
ಈ ನಡುವೆ ನ್ಯಾಯಾಂಗ ಬಂಧನದಲ್ಲಿರುವ ಅರವಿಂದ್ ಕೇಜ್ರಿವಾಲ್ ತಮ್ಮ ಬಂಧನವನ್ನ ಪ್ರಶ್ನಿಸಿ ಸುಪ್ರೀಂಕೋರ್ಟ್ (Supreme Court) ಮೆಟ್ಟಿಲೇರಿದ್ದು ಇಡಿ (ED) ಈಗ ಅಫಿಡವಿಟ್ ಸಲ್ಲಿಸಿದೆ. 9 ಬಾರಿ ಸಮನ್ಸ್ ನೀಡಿದ್ದರೂ ಅರವಿಂದ್ ಕೇಜ್ರಿವಾಲ್ ವಿಚಾರಣೆಗೆ ಸಹಕರಿಸಲಿಲ್ಲ, ವಿಚಾರಣೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದರು ಈ ಕಾರಣಕ್ಕೆ ಅವರನ್ನು ಬಂಧಿಸುವ ಅನಿವಾರ್ಯತೆ ಸೃಷ್ಟಿಯಾಯಿತು ಎಂದು ಹೇಳಿದೆ.
ಅಕ್ರಮ ಹಣ ವರ್ಗಾವಣೆಯ ಅಪರಾಧದಲ್ಲಿ ತಪ್ಪಿತಸ್ಥನೆಂದು ಸಾಬೀತು ಪಡಿಸಲು ಇಡಿ ಬಳಿ ಸಾಕ್ಷ್ಯಗಳಿದೆ. ಕೇಜ್ರಿವಾಲ್ ಅವರನ್ನು ಪ್ರಾಮಾಣಿಕವಾಗಿ ಬಂಧಿಸಲಾಗಿದೆಯೇ ಹೊರತು ಯಾವುದೇ ದುರುದ್ದೇಶ ಅಥವಾ ಬಾಹ್ಯ ಕಾರಣಗಳಿಗಾಗಿ ಅಲ್ಲ ಎಂದ ಇಡಿ ದುರುದ್ದೇಶಪೂರ್ವಕವಾಗಿ ಬಂಧಿಸಿದೆ ಎನ್ನುವ ಆರೋಪ ನಿರಾಕರಿಸಿದೆ. ಈ ಅಂಶಗಳ ಮೇಲೆ ಕೋರ್ಟ್ ಶೀಘ್ರದಲ್ಲಿ ವಿಚಾರಣೆ ನಡೆಸಲಿದೆ.
ನವದೆಹಲಿ: ದೆಹಲಿ ಮದ್ಯ ಹಗರಣಕ್ಕೆ (Delhi Liquor Scam) ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಬಂಧಿಸಿದ್ದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ (Delhi CM) ಅರವಿಂದ್ ಕೇಜ್ರಿವಾಲ್ (Aravind Kejriwal) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ (High Court) ಮಂಗಳವಾರ ವಜಾಗೊಳಿಸಿದೆ.
ಅರವಿಂದ್ ಕೇಜ್ರಿವಾಲ್ ಅವರು “ಇತರರೊಂದಿಗೆ ಪಿತೂರಿ ನಡೆಸಿದ್ದಾರೆ” ಮತ್ತು”ಅಪರಾಧದ ಆದಾಯವನ್ನು ಬಳಸಿಕೊಳ್ಳುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ” ಎಂದು ಜಾರಿ ನಿರ್ದೇಶನಾಲಯ ಹಂಚಿಕೊಂಡ ವಿವರವನ್ನು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.
#WATCH | On Delhi CM Arvind Kejriwal's plea challenging his arrest by ED dismissed by Delhi High Court, ASG SV Raju, representing the Enforcement Directorate in the Delhi liquor policy case says, "Today the judge gave the judgement after seeing all the evidence and the court also… pic.twitter.com/vA608tfEpb
ರದ್ದುಗೊಂಡಿರುವ ಮದ್ಯ ನೀತಿಯನ್ನು ರೂಪಿಸುವಲ್ಲಿ ಮತ್ತು ಕಿಕ್‌ಬ್ಯಾಕ್‌ಗೆ ಬೇಡಿಕೆಯಿಡುವಲ್ಲಿ ಕೇಜ್ರಿವಾಲ್ ಭಾಗಿಯಾಗಿದ್ದಾರೆ ಎಂದು ಹೈಕೋರ್ಟ್ ಹೇಳಿದೆ. ಪೂರಕ ಸಾಕ್ಷ್ಮಧಾರಗಳಿರುವ ಹಿನ್ನಲೆಯಲ್ಲಿ ಕೇಜ್ರಿವಾಲ್ ಬಂಧನ ಕಾನೂನು ಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟ ಕೋರ್ಟ್ ಕೇಜ್ರಿವಾಲ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ನವದೆಹಲಿ: ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಪುತ್ರಿ ಕೆ. ಕವಿತಾ (K Kavitha) ಮನವಿಯನ್ನು ತಿರಸ್ಕರಿಸಿದ್ದು, ನ್ಯಾಯಾಂಗ ಬಂಧನದ ಅವಧಿಯನ್ನು ಏಪ್ರಿಲ್ 23 ರವರೆಗೆ ವಿಸ್ತರಿಸಲಾಗಿದೆ.
ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಸೋಮವಾರ ರೋಸ್ ಅವೆನ್ಯೂ ಕೋರ್ಟ್‌ನಲ್ಲಿ (Rose Avenue Court) ನಡೆದ ವಿಚಾರಣೆಯಲ್ಲಿ, ನ್ಯಾಯಾಲಯವು ಈಗಾಗಲೇ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅರ್ಜಿಯನ್ನು ತಿರಸ್ಕರಿಸಿದ ವಿಶೇಷ ನ್ಯಾ. ಕಾವೇರಿ ಬವೇಜಾ, ಅವರಿಗೆ ಮಧ್ಯಂತರ ಜಾಮೀನು ನೀಡಲು ಇದು ಸೂಕ್ತ ಸಮಯವಲ್ಲ ಎಂದು ಹೇಳಿದ್ದರು.
ಪತ್ರದ ಮೂಲಕ ಮನವಿ: ಕವಿತಾ ಅವರು ನಾಲ್ಕು ಪುಟಗಳ ಪತ್ರವನ್ನು ನೀಡಿದ್ದರು. ಪತ್ರದಲ್ಲಿ ಮದ್ಯ ಹಗರಣದಲ್ಲಿ ಭಾಗಿಯಾಗಿಲ್ಲ. ಅಲ್ಲದೇ ಹಗರಣದಿಂದ ನಾನು ಯಾವುದೇ ಪ್ರಯೋಜನಗಳನ್ನು ಪಡೆದಿಲ್ಲ. ಇಡಿ ಮತ್ತು ಸಿಬಿಐ ತನಿಖೆ ಮಾಧ್ಯಮ ವಿಚಾರಣೆಯಾಗಿದೆ ಎಂದು ದೂರಿದ್ದಾರೆ.
ದೆಹಲಿ ಮದ್ಯ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 15 ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಿಂದ ಇಡಿ ಕೆ ಕವಿತಾ ಅವರನ್ನು ಬಂಧಿಸಿದೆ. ಮಾರ್ಚ್ 23ರವರೆಗೆ ಇಡಿ ಕಸ್ಟಡಿಯಲ್ಲಿದ್ದರು. ಮಾರ್ಚ್ 26 ರಂದು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಅವರನ್ನು ಏಪ್ರಿಲ್ 9 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಅಂದಿನಿಂದ ಕವಿತಾ ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.
ಅಬಕಾರಿ ನೀತಿ ಹರಣದಲ್ಲಿ (Delhi Excise Policy Case) ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ( Delhi CM Arvind Kejriwal) ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದೆ. ಇಡಿ ವಿಚಾರಣೆಗೆ ಹಾಜರಾಗುವಂತೆ ಜಾರಿಗೊಳಿಸಿದ್ದ 9 ಸಮನ್ಸ್‌ಗೆ ಕೇಜ್ರಿವಾಲ್ ಗೈರಾಗಿದ್ದರು. ಹೈಕೋರ್ಟ್‌ನಲ್ಲೂ (High Court) ಇಡಿ ವಿಚಾರಣೆಯನ್ನು ಮುಂದೂಡವಂತೆ ಕೇಜ್ರಿವಾಲ್ ಪರ ವಕೀಲರು ಮನವಿ ಮಾಡಿದ್ದರು. ಆದರೆ ಹೈಕೋರ್ಟ್ ವಾದವನ್ನು ಪುರಸ್ಕರಿಸದೇ ಕೇಜ್ರಿವಾಲ್‌ಗೆ ರಕ್ಷಣೆ ನೀಡಲು ನಿರಾಕರಿಸಿತು. ಈ ಬೆನ್ನಲ್ಲೇ ರಾತ್ರಿ ಇಡಿ ಕೇಜ್ರಿವಾಲ್ ನಿವಾಸಕ್ಕೆ ತೆರಳಿ ಬಂಧಿಸಿದೆ.
ಏನಿದು ಹಗರಣ?
ಕೋವಿಡ್ 2ನೇ ಅಲೆ ಉತ್ತುಂಗದಲ್ಲಿದ್ದಾಗ ಮನೀಶ್ ಸಿಸೋಡಿಯಾ 2021ರ ಏಪ್ರಿಲ್‌ನಲ್ಲಿ ಕ್ಯಾಬಿನೆಟ್ ಅನುಮೋದನೆ ಇಲ್ಲದೇ ಮದ್ಯದಂಗಡಿ ಟೆಂಡರ್‌ಗೆ ಅರ್ಜಿ ಸಲ್ಲಿಸಿದವರ 144.36 ಕೋಟಿ ಪರವಾನಗಿ ಶುಲ್ಕವನ್ನು ಮನ್ನಾ ಮಾಡಲು ಆದೇಶ ಹೊರಡಿಸುತ್ತಾರೆ. ಈ ಮಹತ್ವದ ನಿರ್ಧಾರದ ಬಳಿಕ ಮೇ ತಿಂಗಳಿನಲ್ಲಿ ಕೇಜ್ರಿವಾಲ್ ನೇತೃತ್ವದ ಕ್ಯಾಬಿನೆಟ್ ಸಭೆ ಕರೆದು ಅಬಕಾರಿ ನೀತಿಯಲ್ಲಿ ಬದಲಾವಣೆ ಮಾಡುತ್ತದೆ. ಮದ್ಯವನ್ನು ಮನೆಗ ಹೋಮ್ ಡೆಲಿವರಿ ಮಾಡಬಹುದು ಅಷ್ಟೇ ಅಲ್ಲದೇ ಮದ್ಯದ ಅಂಗಡಿಗಳನ್ನು ಬೆಳಗಿನ ಜಾವ 3 ಗಂಟೆಯವರೆಗೆ ತೆರೆಯಬಹುದು. ಪರವಾನಗಿದಾರರು ಅನಿಯಮಿತ ರಿಯಾಯಿತಿಗಳನ್ನು ನೀಡಲು ನೀತಿ ಅನುಮತಿ ಕಲ್ಪಿಸಿತ್ತು.
ಲೆಫ್ಟಿನೆಂಟ್ ಗವರ್ನರ್ ಅವರು ಕ್ಯಾಬಿನೆಟ್ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಳಿಕ ದೆಹಲಿ ಸರ್ಕಾರ ತನ್ನ ನಿರ್ಧಾರವನ್ನು ಹಿಂದಕ್ಕೆ ಪಡೆಯುತ್ತದೆ. ಆದರೆ ಸಿಸೋಡಿಯಾ ಕೈಗೊಂಡ ನಿರ್ಧಾರ ಮುಂದುವರಿಯುತ್ತದೆ. ಸರ್ಕಾರದ ನಿರ್ಧಾರ ಬಗ್ಗೆ ದೆಹಲಿ ಮುಖ್ಯ ಕಾರ್ಯದರ್ಶಿ ಅವರು ಲೆಫ್ಟಿನೆಂಟ್ ಗವರ್ನರ್ ಬಳಿ ದೂರು ನೀಡುತ್ತಾರೆ. ಸಿಸೋಡಿಯಾ ನಿರ್ಧಾರದಿಂದ ಸರ್ಕಾರಕ್ಕೆ ಭಾರೀ ನಷ್ಟವಾಗಿದೆ. ವಿಸ್ಕಿ ಮತ್ತು ವೈನ್ ಮಾರಾಟ ಅನುಕ್ರಮವಾಗಿ 60% ಮತ್ತು 87%ರಷ್ಟು ಭಾರೀ ಏರಿಕೆಯಾಗಿದ್ದರೂ ಆದಾಯ 80% ರಷ್ಟು ಇಳಿಕೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸುತ್ತಾರೆ.
ಕೇಜ್ರಿವಾಲ್- ಸಿಸೋಡಿಯಾ ಅವರು ಲೆಫ್ಟಿನೆಂಟ್ ಗವರ್ನರ್ ಗಮನಕ್ಕೆ ತಾರದೇ ತುರ್ತು ಕ್ಯಾಬಿನೆಟ್ ಸಭೆಯನ್ನು ಕರೆಯುತ್ತಾರೆ. ಸಿಸೋಡಿಯಾ ಅಕ್ರಮವಾಗಿ ಹೊರಡಿಸಿದ ಆದೇಶವನ್ನು ಸಕ್ರಮ ಮಾಡಲು ಕ್ಯಾಬಿನೆಟ್‌ನಲ್ಲಿ ಪ್ರಯತ್ನ ಮಾಡಲಾಗುತ್ತದೆ. ಈ ನಿರ್ಧಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಭಾರೀ ವಿರೋಧ ವ್ಯಕ್ತಪಡಿಸಿ ಪ್ರತಿಭಟಿಸುತ್ತದೆ. ವಿರೋಧ ವ್ಯಕ್ತವಾಗುತ್ತಿದ್ದಂತೆ 2022ರ ಜುಲೈನಲ್ಲಿ ಮದ್ಯ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಲೆಫ್ಟಿನೆಂಟ್ ಗವರ್ನರ್ ಅವರು ಆದೇಶ ಹೊರಡಿಸುತ್ತಾರೆ. 2022ರ ಜುಲೈನಲ್ಲಿ ಕೇಜ್ರಿವಾಲ್ ಸರ್ಕಾರ ಈ ಹಿಂದೆ ಹೊರಡಿಸಿದ್ದ ಅಬಕಾರಿ ನೀತಿಯನ್ನು ಹಿಂದಕ್ಕೆ ಪಡೆಯುತ್ತದೆ. ಇದನ್ನೂ ಓದಿ: ದೆಹಲಿ ಮದ್ಯ ಹಗರಣ – ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಪುತ್ರಿ ಕವಿತಾ ಅರೆಸ್ಟ್ ಆಗಿದ್ದು ಯಾಕೆ?
ಆರೋಪ ಏನು?
ಕೊರೊನಾ ಸಮಯದಲ್ಲಿ ಕಿಕ್ ಬ್ಯಾಕ್ ಪಡೆಯಲೆಂದೇ ಮದ್ಯದಂಗಡಿ ಟೆಂಡರ್‌ಗೆ ಅರ್ಜಿ ಸಲ್ಲಿಸಿದವರ 144.36 ಕೋಟಿ ರೂ. ಪರವಾನಗಿ ಶುಲ್ಕವನ್ನು ಮನ್ನಾ ಮಾಡಲಾಗಿದೆ ಎಂಬ ಗಂಭೀರ ಭ್ರಷ್ಟಾಚಾರ ಆರೋಪ ಬಂದಿದೆ. ಕಾನೂನುಬಾಹಿರ ನಿರ್ಧಾರವನ್ನು ತೆಗೆದುಕೊಂಡ ಬಳಿಕ ಅದನ್ನು ಕಾನೂನುಬದ್ಧಗೊಳಿಸಲು ಸರ್ಕಾರ ಪ್ರಯತ್ನಿಸಿದ್ದು ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.
ವಿಮಾನ ನಿಲ್ದಾಣದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಇದ್ದರೂ ವಿಮಾನ ನಿಲ್ದಾಣದ ಅಧಿಕಾರಿಗಳಿಂದ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕಾಗುತ್ತದೆ. ಎನ್‌ಒಸಿ ಇಲ್ಲದೇ ಮಾರಾಟ ಮಾಡಿದರೆ ದಂಡವನ್ನು ಹಾಕಲಾಗುತ್ತದೆ. ಎನ್‌ಒಸಿ ಇಲ್ಲದೇ ಮದ್ಯ ಮಾರಾಟ ಮಾಡಿದವರಿಗೆ 30 ಕೋಟಿ ರೂ. ದಂಡವನ್ನು ಹಾಕಬೇಕಿತ್ತು. ಆದರೆ ಸಿಸೋಡಿಯಾ ನಿರ್ದೇಶನದ ಹಿನ್ನೆಲೆಯಲ್ಲಿ 30 ಕೋಟಿ ರೂ ದಂಡವನ್ನು ಮನ್ನಾ ಮಾಡಲಾಗಿದೆ. ಪರವಾನಗಿ ಶುಲ್ಕ ಬಾಕಿ ಉಳಿಸಿಕೊಂಡ ಪರವಾನಗಿದಾರರ ವಿರುದ್ಧದ ಕಠಿಣ ಕ್ರಮಕ್ಕೆ ತಡೆ ನೀಡಲಾಗಿದೆ. ಅಬಕಾರಿ ನೀತಿ ಉಲ್ಲಂಘಿಸಿದ ಪರವಾನಗಿದಾರರ ವಿರುದ್ಧ ಯಾವುದೇ ದಂಡ ಕ್ರಮ ಕೈಗೊಂಡಿಲ್ಲ. ಆಮದು ಮಾಡಿದ ಪ್ರತಿ ಕೇಸ್ ಬಿಯರ್ ಮೇಲಿದ್ದ ದರವನ್ನು 50 ರೂ.ಇಳಿಕೆ ಮಾಡಲಾಗಿದೆ. ಹೊಸ ಮದ್ಯ ನೀತಿಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ 2631 ಕೋಟಿ ರೂ. ನಷ್ಟವಾಗಿದೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಸಿಎಂ ಹುದ್ದೆಗೆ ಕೇಜ್ರಿವಾಲ್ ರಾಜೀನಾಮೆ ಇಲ್ಲ – ಜೈಲಿನಿಂದಲೇ ಆಡಳಿತ ನಡೆಸಲು ಸಾಧ್ಯವೇ?
ಕೇಜ್ರಿವಾಲ್ ಮೇಲಿರುವ ಆರೋಪ ಏನು?
ಕೆಲ ಆಯ್ದ ವ್ಯಕ್ತಿಗಳಿಗೆ ಲಾಭ ತರಲು ದೆಹಲಿಯಲ್ಲಿ ಮದ್ಯ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಲೈಸನ್ಸ್ ಪಡೆಯಲು ನೂರಾರು ಕೋಟಿ ರೂ. ಲಂಚ ಪಡೆಯಲಾಗಿದೆ. ಕಂಪನಿಗಳ ಜೊತೆ ನಡೆದ ಸಭೆಯಲ್ಲಿ ಕೇಜ್ರಿವಾಲ್ ಸಹ ಭಾಗಿಯಾಗಿದ್ದರು. ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆಪ್ ನಾಯಕ, ಪಕ್ಷದ ಚುನಾವಣಾ ವೆಚ್ಚಗಳನ್ನು ನೋಡುತ್ತಿದ್ದ ವಿಜಯ್ ನಾಯರ್‌ಗೆ ಕಂಪನಿಗಳು ಲೈಸೆನ್ಸ್ ಪಡೆಯಲು ಕಿಕ್‌ಬ್ಯಾಕ್ ನೀಡಲಾಗಿದೆ. ಈ ನೀತಿಯಿಂದ ಲಾಭ ಪಡೆದ ಮದ್ಯ ವ್ಯಾಪಾರಿಗಳು ಕೇಜ್ರಿವಾಲ್ ಆಪ್ತ ಮಂತ್ರಿಗಳಿಗೆ, ಆಪ್ತರಿಗೆ, ಸಹಚರರಿಗೆ ಕೋಟ್ಯಂತರ ರೂ. ಪಾವತಿ ಮಾಡಿದ್ದಾರೆ. ಆಪ್ ನಾಯಕ ವಿಜಯ್ ನಾಯರ್ ಅವರು ಕೆಲವು ಉದ್ಯಮಿಗಳು ಮತ್ತು ರಾಜಕಾರಣಿಗಳ ನಿಯಂತ್ರಣದಲ್ಲಿರುವ ‘ದಕ್ಷಿಣ ಗುಂಪಿನಿಂದ’ 100 ಕೋಟಿ ರೂಪಾಯಿಗಳನ್ನು ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪವಿದೆ.
ಇಡಿ ಎಂಟ್ರಿಯಾಗಿದ್ದು ಹೇಗೆ?
ದೆಹಲಿ ಲೆಫ್ಟಿನೆಂಟ್ ಗವರ್ನರ್ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದರು. ತನಿಖೆಗೆ ಇಳಿದು ವ್ಯಕ್ತಿಗಳನ್ನು ಬಂಧನ ಮಾಡುತ್ತಿದ್ದಂತೆ ಅಕ್ರಮ ಹಣ ವರ್ಗಾವಣೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಈ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದೆ.
ಬಂಧನಗೊಂಡವರು ಯಾರು?
ಈ ಪ್ರಕಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ಮನೀಶ್ ಸಿಸೋಡಿಯಾ (ಆಪ್ ಡಿಸಿಎಂ), ಸತ್ಯೇಂದ್ರ ಜೈನ್(ಆಪ್ ಸಚಿವ), ಸಂಜಯ್ ಸಿಂಗ್(ಆಪ್ ಸಂಸದ), ಕೆ.ಕವಿತಾ(ಬಿಆರ್‌ಎಸ್ ಶಾಸಕಿ)
9 ಸಮನ್ಸ್‌ಗೆ ಗೈರು:
2023ರ ನವೆಂಬರ್ 23ಕ್ಕೆ ಮೊದಲ ಬಾರಿ ಕೇಜ್ರಿವಾಲ್‌ಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಡಿ.23 ರಂದು ಮತ್ತೆ ಸಮನ್ಸ್ ಜಾರಿ ಮಾಡಲಾಗಿತ್ತು. ಈ ಸಮನ್ಸ್‌ಗೆ ಗೈರಾದ ನಂತರ 2024ರಲ್ಲಿ ಜ.3, ಜ.18, ಫೆ.2, ಫೆ.19, ಫೆ.26, ಮಾರ್ಚ್ 4 ರಂದು ಸಮನ್ಸ್ ಜಾರಿ ಮಾಡಲಾಗಿತ್ತು. ಈ ಎಲ್ಲಾ ಸಮನ್ಸ್‌ಗಳಿಗೆ ಗೈರಾದ ಹಿನ್ನೆಲೆಯಲ್ಲಿ ಮಾರ್ಚ್ 21 ರಂದು ಸಮನ್ಸ್ ಜಾರಿ ಮಾಡಿ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿದೆ.
ನವದೆಹಲಿ: ಮದ್ಯ ಹಗರಣದಲ್ಲಿ (Delhi Excise Policy Case) ಜಾರಿ ನಿರ್ದೇಶನಾಲಯ(ED) ಬಂಧಿತರಾಗಿರುವ ಅರವಿಂದ ಕೇಜ್ರಿವಾಲ್ (Arvind Kejriwal) ಇನ್ನೂ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡದೇ ಇದ್ದರೂ ಜೈಲಿನಿಂದಲೇ (Jail) ಆಡಳಿತ ನಡೆಸಲಿದ್ದಾರೆ ಎಂದು ಆಪ್ (AAP) ಹೇಳಿದೆ.
ಈ ಬಗ್ಗೆ ಆಪ್ ಪಕ್ಷದ ನಾಯಕಿ ಅತಿಶಿ (Atishi) ಪ್ರತಿಕ್ರಿಯಿಸಿ, ಕೇಜ್ರಿವಾಲ್ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ. ಅವರು ತಮ್ಮ ಖಾತೆಗಳನ್ನು ತ್ಯಜಿಸಲಿದ್ದಾರೆ. ಒಂದು ವೇಳೆ ಅಗತ್ಯಬಿದ್ದರೆ ಜೈಲಿನಿಂದಲೇ ಸರ್ಕಾರ ಚಲಾಯಿಸಲಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸುರಪುರ ಉಪ ಚುನಾವಣೆ; ದಿವಂಗತ ರಾಜಾ ವೆಂಕಟಪ್ಪ ನಾಯಕ ಪುತ್ರನಿಗೆ ಕಾಂಗ್ರೆಸ್ ಟಿಕೆಟ್
#WATCH | AAP leader Atishi says, "We have received news that ED has arrested Arvind Kejriwal… We have always said that Arvind Kejriwal will run the govt from jail. He will remain the CM of Delhi. We have filed a case in the Supreme Court. Our lawyers are reaching SC. We will… pic.twitter.com/XWQJ1D6ziR
ರಾಜೀನಾಮೆ ನೀಡಿದ್ದ ಮುಖ್ಯಮಂತ್ರಿಗಳು:
ಅಧಿಕಾರದಲ್ಲಿ ಇರುವಾಗಲೇ ಮುಖ್ಯಮಂತ್ರಿಗಳನ್ನು ಇಡಿ, ಸಿಬಿಐ ಬಂಧಿಸುವುದು ಹೊಸದೆನಲ್ಲ. ಈ ಹಿಂದೆ ಹಲವು ಪಕ್ಷದ ಮುಖ್ಯಮಂತ್ರಿಗಳನ್ನು ಬಂಧನ ಮಾಡಲಾಗಿತ್ತು. ಆದರೆ ಅವರು ಬಂಧನಕ್ಕೂ ಮೊದಲು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆದರೆ ಸಿಎಂ ಹುದ್ದೆಯಲ್ಲಿದ್ದಾಗಲೇ ಬಂಧನಕ್ಕೆ ಒಳಗಾದ ಮೊದಲ ನಾಯಕ ಕೇಜ್ರಿವಾಲ್ ಆಗಿದ್ದಾರೆ.
#WATCH | Delhi minister and AAP leader Atishi says, "We have put an application in the Supreme Court against the illegal arrest of Delhi CM Arvind Kejriwal. It will be mentioned in the Supreme Court tomorrow morning. We hope that the Supreme Court will protect democracy…" pic.twitter.com/hjhbEe9geF
ಯಡಿಯೂರಪ್ಪ(ಕರ್ನಾಟಕ), ಮಧು ಕೋಡಾ(ಜಾರ್ಖಂಡ್), ಶಿಬು ಸೊರೇನ್(ಜಾರ್ಖಂಡ್), ಜಯಲಲಿತಾ(ತಮಿಳಿನಾಡು), ಲಾಲು ಪ್ರಸಾದ್ ಯಾದವ್(ಬಿಹಾರ), ಹೇಮಂತ್ ಸೊರೇನ್(ಜಾರ್ಖಂಡ್), ಓಂ ಪ್ರಕಾಶ್ ಚೌತಾಲಾ(ಹರ್ಯಾಣ), ಚಂದ್ರಬಾಬು ನಾಯ್ಡು(ಆಂಧ್ರಪ್ರದೇಶ), ಕರುಣಾನಿಧಿ(ತಮಿಳುನಾಡು), ಚರಣ್ ಸಿಂಗ್(ಉತ್ತರ ಪ್ರದೇಶ) ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಬಂಧನಕ್ಕೆ ಒಳಗಾಗಿದ್ದರು.